Connect with us

ಅಂತರ ರಾಜ್ಯ

Diwali bonus-ದೀಪಾವಳಿ ಬೋನಾಸ್ ನಿಂದ ಅತೃಪ್ತರಾಗಿ ಟೋಲ್ ಓಪನ್ ಇಟ್ಟ ಸಿಬ್ಬಂದಿ..!

Published

on



Ad Widget

Ad Widget

Ad Widget

Ad Widget

ದೀಪಾವಳಿ ಬೋನಸ್‌ನಿಂದ ಅತೃಪ್ತರಾದ ಟೋಲ್ ಸಂಗ್ರಹ ಕಾರ್ಮಿಕರು, ಸಿಟ್ಟಿನಿಂದ ವಾಹನಗಳಿಗೆ ಟೋಲ್ ಶುಲ್ಕ ವಿಧಿಸದೆ ಬಿಟ್ಟ ಘಟನೆ ಉತ್ತರ ಪ್ರದೇಶದ ಫತೇಹಾಬಾದ್‌ನ ಆಗ್ರಾ-ಲಕ್ಷ್ಮೀ ಎಕ್ಸ್‌ಪ್ರೆಸ್‌ವೇ ಟೋಲ್ ಪ್ಲಾಜಾದಲ್ಲಿ ಸೋಮವಾರ (ಅ.21) ನಡೆಯಿತು.

Ad Widget

Ad Widget

Ad Widget

Ad Widget

ಆಗ್ರಾ: ದೀಪಾವಳಿ ಬೋನಸ್‌ನಿಂದ ಅತೃಪ್ತರಾದ ಟೋಲ್ ಸಂಗ್ರಹ ಕಾರ್ಮಿಕರು, ಸಿಟ್ಟಿನಿಂದ ವಾಹನಗಳಿಗೆ ಟೋಲ್ ಶುಲ್ಕ ವಿಧಿಸದೆ ಬಿಟ್ಟ ಘಟನೆ ಉತ್ತರ ಪ್ರದೇಶದ ಫತೇಹಾಬಾದ್‌ನ ಆಗ್ರಾ-ಲಕ್ಷ್ಮೀ ಎಕ್ಸ್‌ಪ್ರೆಸ್‌ವೇ ಟೋಲ್ ಪ್ಲಾಜಾದಲ್ಲಿ ಸೋಮವಾರ (ಅ.21) ನಡೆಯಿತು.

Ad Widget

Ad Widget

Ad Widget alt="Ad Widget"/>

Ad Widget

ಕಾರ್ಮಿಕರ ಪ್ರತಿಭಟನೆಯಿಂದ ಸಾವಿರಾರು ವಾಹನಗಳು ಶುಲ್ಕ ಪಾವತಿಸದೆ ದಾಟಿದವು, ಇದರಿಂದ ಟೋಲ್ ಕಾರ್ಯಾಚರಣೆ ಮತ್ತು ಸಂಚಾರಕ್ಕೆ ಗಂಭೀರ ಅಡಚಣೆ ಉಂಟಾಯಿತು. ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಸ್ಥಿತಿಯನ್ನು ನಿಯಂತ್ರಿಸಲು ಪ್ರಯತ್ನಿಸಿದರು.

Ad Widget

Ad Widget <> Ad Widget

ಶ್ರೀ ಸೈನ್ ಆಂಡ್ ದಾತಾರ್ ಕಂಪನಿಯಿಂದ ನಿರ್ವಹಿತವಾಗಿರುವ ಈ ಟೋಲ್ ಪ್ಲಾಜಾದ 21 ಕಾರ್ಮಿಕರಿಗೆ ದೀಪಾವಳಿ ಬೋನಸ್‌ಗೆ ಕೇವಲ 1100 ರೂ.ಗಳನ್ನು ನೀಡಲಾಗಿತ್ತು, ಇದರಿಂದ ಅವರು ಅಸಮಾಧಾನಗೊಂಡಿದ್ದರು. ಈ ವರ್ಷದ ಮಾರ್ಚ್‌ನಿಂದ ಕಂಪನಿಯು ಟೋಲ್ ನಿರ್ವಹಣೆಯನ್ನು ವಹಿಸಿಕೊಂಡಿದ್ದರಿಂದ, ಬೋನಸ್ ಲೆಕ್ಕಾಚಾರ ಮತ್ತು ವಿತರಣೆಗೆ ಸಂಬಂಧಿಸಿದಂತೆ ವಿವಾದಗಳು ಉದ್ಭವಿಸಿದವು.



Ad Widget

ಹೆಚ್ಚಿನ ಬೋನಸ್‌ಗೆ ಒತ್ತಾಯಿಸಿದ ಕಾರ್ಮಿಕರು ಕೆಲಸ ಬಂದ್ ಮಾಡಿ, ಎಲ್ಲಾ ಟೋಲ್ ಗೇಟ್‌ಗಳನ್ನು ತೆರೆದಿಟ್ಟರು. ಇದರಿಂದ ಸಾವಿರಾರು ವಾಹನಗಳು ಶುಲ್ಕವಿಲ್ಲದೆ ದಾಟಿಹೋದವು. ಟೋಲ್ ಆಡಳಿತವು ಇತರ ಪ್ಲಾಜಾಗಳಿಂದ ಸಿಬ್ಬಂದಿಯನ್ನು ಕರೆತಂದು ಕಾರ್ಯಾಚರಣೆ ಮುಂದುವರಿಸಲು ಯತ್ನಿಸಿತು, ಆದರೆ ಪ್ರತಿಭಟನಾಕಾರ ಕಾರ್ಮಿಕರು ಈ ಸಿಬ್ಬಂದಿಯನ್ನು ಕೆಲಸಕ್ಕೆ ಅಡ್ಡಿಪಡಿಸಿದರು, ಇದರಿಂದ ಪರಿಸ್ಥಿತಿ ಉಲ್ಬಣಗೊಂಡಿತು.

Ad Widget

Ad Widget

ಪೊಲೀಸರು ಸ್ಥಳಕ್ಕೆ ಆಗಮಿಸಿ, ಕಂಪನಿ ಅಧಿಕಾರಿಗಳು ಮತ್ತು ಕಾರ್ಮಿಕರ ನಡುವೆ ಮಾತುಕತೆಗೆ ಮುಂದಾದರು. ಟೋಲ್ ಅಧಿಕಾರಿಗಳು ಕಾರ್ಮಿಕರ ಬೇಡಿಕೆಗಳನ್ನು ಪರಿಗಣಿಸಿ, ಶೇ.10ರಷ್ಟು ವೇತನ ಹೆಚ್ಚಳದ ಭರವಸೆ ನೀಡಿದರು. ಈ ಭರವಸೆಯ ನಂತರ ಕಾರ್ಮಿಕರು ಕೆಲಸಕ್ಕೆ ಮರಳಿದರು, ಮತ್ತು ಎರಡು ಗಂಟೆಗಳ ಕಾಲಾದ ವ್ಯತ್ಯಯವು ಸುಗಮವಾಯಿತು.

Ad Widget

ಅಂತರ ರಾಜ್ಯ

Dhruv Rati-BIG BREAKING: ದೆಹಲಿಯ ಜಂತರ್ ಮಂತರ್ ನಲ್ಲಿ ಸಿಜೆಪಿ ಪ್ರತಿಭಟನೆ ಹಿನ್ನಲೆ – ಯೂಟ್ಯೂಬರ್ ಧ್ರುವ್ ರಾಠಿ ಪೊಲೀಸ್ ವಶಕ್ಕೆ?

Published

on



Ad Widget

Ad Widget

Ad Widget

Ad Widget

ಖ್ಯಾತ ಯೂಟ್ಯೂಬರ್ ಧ್ರುವ್ ರಾಠಿ ಅವರನ್ನು ದೆಹಲಿ ಪೊಲೀಸರು ಶನಿವಾರ ಬೆಳಗ್ಗೆ ಗುರುಗ್ರಾಮದ ಸೆಕ್ಟರ್ 56ರಲ್ಲಿರುವ ಅವರ ನಿವಾಸದಿಂದ ವಶಕ್ಕೆ ಪಡೆದಿದ್ದಾರೆ ಎಂದು ಮೂಲಗಳನ್ನು ಉಲ್ಲೇಖಿಸಿ ನ್ಯೂಸ್ 18 ಹಿಂದಿ ವರದಿ ಮಾಡಿದೆ.

Ad Widget

Ad Widget

Ad Widget

Ad Widget

ಗುರುಗ್ರಾಮ, ಅ. 10: ಖ್ಯಾತ ಯೂಟ್ಯೂಬರ್ ಧ್ರುವ್ ರಾಠಿ ಅವರನ್ನು ದೆಹಲಿ ಪೊಲೀಸರು ಶನಿವಾರ ಬೆಳಗ್ಗೆ ಗುರುಗ್ರಾಮದ ಸೆಕ್ಟರ್ 56ರಲ್ಲಿರುವ ಅವರ ನಿವಾಸದಿಂದ ವಶಕ್ಕೆ ಪಡೆದಿದ್ದಾರೆ ಎಂದು ಮೂಲಗಳನ್ನು ಉಲ್ಲೇಖಿಸಿ ನ್ಯೂಸ್ 18 ಹಿಂದಿ ವರದಿ ಮಾಡಿದೆ.

Ad Widget

Ad Widget

Ad Widget alt="Ad Widget"/>

Ad Widget

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಕಾಕ್‌ರೋಚ್ ಜನತಾ ಪಾರ್ಟಿ (CJP) ಆಯೋಜಿಸಲು ಉದ್ದೇಶಿಸಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಧ್ರುವ್ ರಾಠಿ ದೆಹಲಿಗೆ ತೆರಳಿದ್ದರು ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಪೊಲೀಸರು ಅವರನ್ನು ವಶಕ್ಕೆ ಪಡೆದಿದ್ದಾರೆ ಎಂದು ವರದಿ ತಿಳಿಸಿದೆ.

Ad Widget

Ad Widget <> Ad Widget

ವರದಿಯ ಪ್ರಕಾರ, ಗುರುಗ್ರಾಮದ ಸೆಕ್ಟರ್ 56ರ ಸೆಂಟ್ರಲ್ ಪಾರ್ಕ್ ವಿಹಾರ್‌ನಲ್ಲಿರುವ ರಾಠಿ ಅವರ ಕುಟುಂಬದ ನಿವಾಸಕ್ಕೆ ಶುಕ್ರವಾರ ತಡರಾತ್ರಿಯಿಂದಲೇ ಸುಮಾರು 50 ಪೊಲೀಸ್ ಸಿಬ್ಬಂದಿ ಜಮಾಯಿಸಿದ್ದರು. ಶನಿವಾರ ಬೆಳಗ್ಗೆ 7.48ರ ಸುಮಾರಿಗೆ ಅವರ ತಾಯಿ ಬಾಗಿಲು ತೆರೆದ ಬಳಿಕ ಪೊಲೀಸರು ಮನೆಯೊಳಗೆ ಪ್ರವೇಶಿಸಿ ರಾಠಿ ಅವರನ್ನು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ.



Ad Widget

ಆದರೆ, ಈ ಬೆಳವಣಿಗೆಗೆ ಸಂಬಂಧಿಸಿದಂತೆ ಪೊಲೀಸರು ಅಧಿಕೃತವಾಗಿ ನೀಡಿರುವ ಹೇಳಿಕೆ ಅಥವಾ ವಶಕ್ಕೆ ಪಡೆಯಲು ಕಾರಣವೇನು ಎಂಬ ಕುರಿತು ಹೆಚ್ಚಿನ ಮಾಹಿತಿ ವರದಿಯಲ್ಲಿ ಲಭ್ಯವಾಗಿಲ್ಲ

Continue Reading

ಅಂತರ ರಾಜ್ಯ

DK Shivakumar-‘ಸ್ಟಿಂಗ್ ಆಪರೇಷನ್’ ಬಗ್ಗೆ ಎಲ್ಲಾ ಮಾಹಿತಿ ಇದೆ..! ಚರ್ಚೆಗೆಂದು ಬಂದು ಏನೇನು ಮಾಡಿದ್ದಾರೆ ಎಂದು ಗೊತ್ತಿದೆ : ಇದರ ಪಿತಾಮಹ ಯಾರೆಂದೂ ತಿಳಿದಿದೆ : ಡಿಕೆಶಿ ಸ್ಫೋಟಕ ಹೇಳಿಕೆ

Published

on



Ad Widget

Ad Widget

Ad Widget

Ad Widget

ಮುಖ್ಯಮಂತ್ರಿ ಆದ ಬಳಿಕ ನನ್ನನ್ನೇ ಟ್ರ್ಯಾಪ್ ಮಾಡಲು ಕೆಲವರು ಪ್ರಯತ್ನಿಸಿದ್ದರು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಗುರುವಾರ(ಅ8) ಹೇಳಿಕೆ ನೀಡಿ “ಸ್ಟಿಂಗ್ ಆಪರೇಷನ್” ವಿಚಾರದ ಚರ್ಚೆ ವಿಚಾರದಲ್ಲಿ ಇನ್ನಷ್ಟು ಕುತೂಹಲ ಮೂಡಿಸುವಂತೆ ಮಾಡಿದ್ದಾರೆ.

Ad Widget

Ad Widget

Ad Widget

Ad Widget

ನವದೆಹಲಿ: ಮುಖ್ಯಮಂತ್ರಿ ಆದ ಬಳಿಕ ನನ್ನನ್ನೇ ಟ್ರ್ಯಾಪ್ ಮಾಡಲು ಕೆಲವರು ಪ್ರಯತ್ನಿಸಿದ್ದರು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಗುರುವಾರ(ಅ8) ಹೇಳಿಕೆ ನೀಡಿ “ಸ್ಟಿಂಗ್ ಆಪರೇಷನ್” ವಿಚಾರದ ಚರ್ಚೆ ವಿಚಾರದಲ್ಲಿ ಇನ್ನಷ್ಟು ಕುತೂಹಲ ಮೂಡಿಸುವಂತೆ ಮಾಡಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ”ನನ್ನ ಬಳಿ “ಸ್ಟಿಂಗ್ ಆಪರೇಷನ್” ಬಗ್ಗೆ ಎಲ್ಲ ಮಾಹಿತಿ ಇದೆ. ನಾನು ಸಿಎಂ ಆದ ಬಳಿಕ ಕೆಲವರು ಬಂದಿದ್ದರು. ಫೋಟೋ ಬೇಕಿದ್ದರೆ ನೀಡುತ್ತೇನೆ, ಚರ್ಚೆಗೆಂದು ಬಂದು ಏನೇನು ಮಾಡಿದ್ದಾರೆ ಎಂಬುದು ಗೊತ್ತಿದೆ. ಈ ವಿಚಾರದ ಹಿಂದಿನ ಪಿತಾಮಹ ಯಾರು ಎಂಬುದೂ ಗೊತ್ತಿದೆ. ಯಾರು ಹಣಕಾಸಿನ ನೆರವು ನೀಡುತ್ತಿದ್ದಾರೆ ಎಂಬ ಮಾಹಿತಿಯೂ ಇದೆ.ನಾನು ಜವಾಬ್ದಾರಿಯುತ ಸ್ಥಾನದಲ್ಲಿರುವುದರಿಂದ ಸುಮ್ಮನೆ ಮಾತನಾಡುವುದಿಲ್ಲ. ಎಲ್ಲ ಸಾಕ್ಷ್ಯಾಧಾರಗಳು ಇವೆ” ಎಂದು ಸ್ಪೋಟಕ ಹೇಳಿಕೆ ನೀಡಿದ್ದಾರೆ.

Ad Widget

Ad Widget <> Ad Widget

ಬಿಜೆಪಿ ಕಚೇರಿಯಲ್ಲಿ ಫಾರ್ಮ್-7 ಮುದ್ರಣ
ಬಿಜೆಪಿ ಕಾರ್ಯಕರ್ತರು ಅಲ್ಪಸಂಖ್ಯಾಕರ ಮತಗಳನ್ನು ದೊಡ್ಡ ಪ್ರಮಾಣದಲ್ಲಿ ಅಳಿಸಲು, ಮತದಾರರ ವಿವರಗಳನ್ನು ಮೊದಲೇ ಭರ್ತಿ ಮಾಡಲಾಗಿರುವ ಫಾರ್ಮ್-7ಗಳನ್ನು ಮುದ್ರಿಸಿ ಬಳಸಿದ್ದಾರೆ ಎಂದು ಡಿ.ಕೆ. ಶಿವಕುಮಾರ್ ಆರೋಪಿಸಿದರು.



Ad Widget

ಮತದಾರರ ವಿವರಗಳನ್ನು ಮೊದಲೇ ನಮೂದಿಸಿರುವ ಫಾರ್ಮ್-7ಗಳನ್ನು ಪ್ರದರ್ಶಿಸಿದ ಅವರು, ಈ ಫಾರ್ಮ್‌ಗಳನ್ನು ಬಿಜೆಪಿಯವರು ಮತದಾರರ ಹೆಸರುಗಳನ್ನು ಅಳಿಸಲು ಬಳಸಿದ್ದಾರೆ ಎಂದು ಆರೋಪಿಸಿದರು.

Ad Widget

Ad Widget

‘ಫಾರ್ಮ್-7 ದುರ್ಬಳಕೆಯನ್ನು ತಡೆಯಲು ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಯಾವುದೇ ಕ್ರಮ ಕೈಗೊಂಡಿಲ್ಲ. ಇಡೀ ಜಗತ್ತು ಈ ಬೆಳವಣಿಗೆಯನ್ನು ಗಮನಿಸುತ್ತಿದೆ’ ಎಂದು ಶಿವಕುಮಾ‌ರ್ ಹೇಳಿದರು.

ಜಿಎಸ್‌ಟಿ ಮಂಡಳಿ ಸಭೆಗೆ ದೆಹಲಿಗೆ
ಜಿಎಸ್‌ಟಿ ಮಂಡಳಿ ಸಭೆಯಲ್ಲಿ ಪಾಲ್ಗೊಳ್ಳಲು ದೆಹಲಿಗೆ ಬಂದಿರುವುದಾಗಿ ತಿಳಿಸಿದ ಶಿವಕುಮಾರ್, ‘ಇಂದು ಕೆಲವು ಮಹತ್ವದ ವಿಚಾರಗಳ ಕುರಿತು ಚರ್ಚೆ ನಡೆಯಲಿದೆ’ ಎಂದರು.

ರಾಹುಲ್ ಗಾಂಧಿ ಉತ್ತಮ ಕೆಲಸ ಮಾಡುತ್ತಿದ್ದಾರೆ
ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಉತ್ತಮ ಕೆಲಸ ಮಾಡುತ್ತಿದ್ದಾರೆ. ದೇಶಾದ್ಯಂತ ನಡೆದಿರುವ ಬೆಳವಣಿಗೆಗಳು ಈಗಾಗಲೇ ಬಹಿರಂಗಗೊಂಡಿವೆ. ಚುನಾವಣಾ ಆಯೋಗದ ಸದಸ್ಯರೂ ಈ ವಿಚಾರವನ್ನು ಬಹಿರಂಗಪಡಿಸಿದ್ದಾರೆ. ನ್ಯಾಯಾಲಯಗಳೂ ಇದನ್ನು ಗಮನಕ್ಕೆ ತೆಗೆದುಕೊಂಡಿವೆ. ಸೂಕ್ತ ನಿರ್ದೇಶನ ನೀಡಿದ ನ್ಯಾಯಾಲಯಗಳಿಗೆ ನಾನು ಕೃತಜ್ಞನಾಗಿದ್ದೇನೆ’ ಎಂದರು.

‘ನನ್ನ ರಾಜ್ಯದಲ್ಲಿ ಲಕ್ಷಾಂತರ ಮತದಾರರ ಹೆಸರುಗಳನ್ನು ಅಳಿಸಲು ಪ್ರಯತ್ನಿಸಲಾಗುತ್ತಿದೆ. ಫಾರ್ಮ್-7 ಅರ್ಜಿಗಳನ್ನು ಬಿಜೆಪಿ ಕೇಂದ್ರ ಕಚೇರಿಯಲ್ಲೇ ಮುದ್ರಿಸಲಾಗಿದೆ ಎಂಬ ಆರೋಪವಿದೆ. ನಾವು ದೂರು ಸಲ್ಲಿಸಿದ ಬಳಿಕ ಅವರು ಕೂಡಲೇ ಹಲವು ಬಿಎಲ್‌ಒಗಳನ್ನು ಸಂಪರ್ಕಿಸಿ, ಆ ಫಾರ್ಮ್‌ಗಳನ್ನು ವಾಪಸ್ ಪಡೆದಿದ್ದಾರೆ. ಇದು ಅಪರಾಧವಲ್ಲವೇ? ತಡೆಯುವ ಮುನ್ನವೇ ಮತದಾರರ ಹೆಸರುಗಳನ್ನು ಅಳಿಸುವ ಪ್ರಯತ್ನ ನಡೆದಿತ್ತು’ ಎಂದು ಸಿಎಂ ಪ್ರಶ್ನಿಸಿದರು.

ಸ್ಟಿಂಗ್ ಆಪರೇಷನ್
ಡಿ.ಕೆ.ಶಿವಕುಮಾ‌ರ್ ಅವರೇ ಸಚಿವ ಸಂಪುಟ ಸಭೆಯಲ್ಲಿ ತಮ್ಮ ಸಂಪುಟ ಸಹೋದ್ಯೋಗಿಗಳಿಗೆ ಈ ಎಚ್ಚರಿಕೆ ನೀಡಿರುವುದು ಈಗ ತೀವ್ರ ಚರ್ಚೆಗೆ ಕಾರಣವಾಗಿದ್ದು, ವಿಪಕ್ಷಗಳಿಂದ ಕೆಲ ಸಚಿವರು ‘ಟಾರ್ಗೆಟ್’ ಆಗಿದ್ದು, ರಹಸ್ಯ ಕಾರ್ಯಾಚರಣೆ ನಡೆಸಲು ತಂಡಗಳನ್ನೇ ರಚನೆ ಮಾಡಲಾಗಿದೆ ಎಂಬುದಾಗಿ ಹೇಳಿದ್ದಾರೆನ್ನಲಾಗಿದೆ. ಈ ಬೆಳವಣಿಗೆ ಬಗ್ಗೆ ವಿಪಕ್ಷಗಳು ಖಾರವಾದ ಪ್ರತಿಕ್ರಿಯೆಯನ್ನೂ ನೀಡಿವೆ.

Ad Widget
Continue Reading

ಅಂತರ ರಾಜ್ಯ

Nana Patekar-ಕಾರ್ಗಿಲ್ ಯುದ್ಧದ ವೇಳೆ ಸೈನಿಕನಾಗಿಯೂ ದೇಶ ಸೇವೆ ಮಾಡಿದ್ದ ನಾನಾ ಪಾಟೇಕರ್

Published

on



Ad Widget

Ad Widget

Ad Widget

Ad Widget

ರಂಗಭೂಮಿ, ಮರಾಠಿ ಹಾಗೂ ಹಿಂದಿ ಚಿತ್ರರಂಗದಲ್ಲಿ ತಮ್ಮ ವಿಶಿಷ್ಟ ಅಭಿನಯದ ಮೂಲಕ ಅಪಾರ ಅಭಿಮಾನಿಗಳನ್ನು ಸಂಪಾದಿಸಿದ್ದ ಹಿರಿಯ ನಟ ನಾನಾ ಪಾಟೇಕರ್ (75) ಗುರುವಾರ ಮುಂಜಾನೆ ಗೋವಾದಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಗೋವಾದ ತಮ್ಮ ನಿವಾಸದಲ್ಲಿ ಅಸ್ವಸ್ಥರಾಗಿ ಪತ್ತೆಯಾದ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ವೈದ್ಯರ ಪ್ರಯತ್ನ ಫಲಿಸದೆ ಬೆಳಗ್ಗೆ 5.20ರ ಸುಮಾರಿಗೆ ನಿಧನರಾದರು.

Ad Widget

Ad Widget

Ad Widget

Ad Widget

ನವದೆಹಲಿ: ರಂಗಭೂಮಿ, ಮರಾಠಿ ಹಾಗೂ ಹಿಂದಿ ಚಿತ್ರರಂಗದಲ್ಲಿ ತಮ್ಮ ವಿಶಿಷ್ಟ ಅಭಿನಯದ ಮೂಲಕ ಅಪಾರ ಅಭಿಮಾನಿಗಳನ್ನು ಸಂಪಾದಿಸಿದ್ದ ಹಿರಿಯ ನಟ ನಾನಾ ಪಾಟೇಕರ್ (75) ಗುರುವಾರ ಮುಂಜಾನೆ ಗೋವಾದಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಗೋವಾದ ತಮ್ಮ ನಿವಾಸದಲ್ಲಿ ಅಸ್ವಸ್ಥರಾಗಿ ಪತ್ತೆಯಾದ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ವೈದ್ಯರ ಪ್ರಯತ್ನ ಫಲಿಸದೆ ಬೆಳಗ್ಗೆ 5.20ರ ಸುಮಾರಿಗೆ ನಿಧನರಾದರು.

Ad Widget

Ad Widget

Ad Widget alt="Ad Widget"/>

Ad Widget

ನಾನಾ ಪಾಟೇಕರ್ ಕೇವಲ ಬೆಳ್ಳಿತೆರೆಯ ನಟನಾಗಿ ಮಾತ್ರ ಗುರುತಿಸಿಕೊಂಡವರಲ್ಲ. ಸರಳತೆ, ಸಾಮಾಜಿಕ ಕಳಕಳಿ ಹಾಗೂ ದೇಶಪ್ರೇಮಕ್ಕೂ ಅವರು ಹೆಸರಾಗಿದ್ದರು. ಭಾರತೀಯ ಸೇನೆಯೊಂದಿಗೆ ಅವರಿಗಿದ್ದ ನಂಟು ಕೂಡ ಅವರ ಬದುಕಿನ ಪ್ರಮುಖ ಅಧ್ಯಾಯವಾಗಿತ್ತು.

Ad Widget

Ad Widget <> Ad Widget

ಸೇನಾ ತರಬೇತಿ ಪಡೆದು ಟೆರಿಟೋರಿಯಲ್ ಆರ್ಮಿಗೆ ಸೇರ್ಪಡೆ
1991ರಲ್ಲಿ ತೆರೆಕಂಡ ತಮ್ಮ ಪ್ರಸಿದ್ದ ‘ಪ್ರಹಾರ್: ದಿ ಫೈನಲ್ ಅಟ್ಯಾಕ್’ ಸಿನಿಮಾದ ಕಮಾಂಡೋ ಪಾತ್ರಕ್ಕಾಗಿ ನಾನಾ ಪಾಟೇಕರ್ ಅವರು ಯಾವುದೇ ಶಾರ್ಟ್‌ಕಟ್ ಬಳಸದೆ, ಮರಾಠಾ ಲೈಟ್ ಇನ್ವೆಂಟ್ರಿ ಜೊತೆ ಮೂರು ವರ್ಷಗಳ ಕಾಲ ಕಠಿಣ ಮಿಲಿಟರಿ ತರಬೇತಿ ಪಡೆದಿದ್ದರು. ಈ ತರಬೇತಿಯ ನಂತರ ಅವರು 1980ರ ದಶಕದ ಉತ್ತರಾರ್ಧದಲ್ಲಿ ಟೆರಿಟೋರಿಯಲ್ ಆರ್ಮಿಗೆ (ಪ್ರಾದೇಶಿಕ ಸೇನೆ) ಅಧಿಕೃತವಾಗಿ ಸೇರ್ಪಡೆಗೊಂಡಿದ್ದರು.



Ad Widget

1999ರಲ್ಲಿ ಕಾರ್ಗಿಲ್ ಯುದ್ಧ ಆರಂಭವಾದಾಗ ಗಡಿಯಲ್ಲಿ ಸೈನಿಕರೊಂದಿಗೆ ಸೇವೆ ಸಲ್ಲಿಸುವ ಇಚ್ಛೆಯನ್ನು ಅವರು ವ್ಯಕ್ತಪಡಿಸಿದ್ದರು. ಅನುಮತಿ ಪಡೆದ ಬಳಿಕ ತಮ್ಮ ನಟನಾ ವೃತ್ತಿಜೀವನವನ್ನು ಕೆಲಕಾಲ ಬದಿಗೊತ್ತಿ ಸೇನೆಯ ಕ್ವಿಕ್ ರಿಯಾಕ್ಷನ್ ಟೀಮ್‌ನೊಂದಿಗೆ ಗಡಿ ಪ್ರದೇಶದಲ್ಲಿ ಸೇವೆ ಸಲ್ಲಿಸಿದ್ದರು.

Ad Widget

Ad Widget

ಶ್ರೀನಗರ, ಡ್ರಾಸ್ ಹಾಗೂ ಲೇಹ್ ಸೇರಿದಂತೆ ಕಠಿಣ ಹವಾಮಾನವಿರುವ ಪ್ರದೇಶಗಳಲ್ಲಿ ಸೈನಿಕರೊಂದಿಗೆ ಸುಮಾರು ಎರಡು ತಿಂಗಳು ಕಳೆದಿದ್ದರು. ಈ ಅವಧಿಯಲ್ಲಿ ಸುಮಾರು 20 ಕೆ.ಜಿ. ತೂಕ ಕಳೆದುಕೊಂಡಿದ್ದಾಗಿ ಅವರು ಹಿಂದಿನ ಸಂದರ್ಶನಗಳಲ್ಲಿ ಹೇಳಿಕೊಂಡಿದ್ದರು.

ಗಣ್ಯರಿಂದ ಸಂತಾಪ
ನಾನಾ ಪಾಟೇಕ‌ರ್ ಅವರ ಅಗಲಿಕೆಗೆ ಪ್ರಧಾನಿ ನರೇಂದ್ರ ಮೋದಿ, ಬಾಲಿವುಡ್ ನಟರಾದ ಅಕ್ಷಯ್ ಕುಮಾರ್, ರಿತೇಶ್ ದೇಶ್‌ಮುಖ್ ಸೇರಿದಂತೆ ದೇಶದ ಪ್ರಮುಖ ರಾಜಕಾರಣಿಗಳು, ಚಲನಚಿತ್ರ ರಂಗದ ಗಣ್ಯರು ಹಾಗೂ ಕ್ರೀಡಾಪಟುಗಳು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ”ಎಕ್ಸ್”ನಲ್ಲಿ ಪೋಸ್ಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿ, ‘ನಾನಾ ಪಾಟೇಕರ್‌ಜಿ ಅವರ ಅಭಿನಯದಲ್ಲಿನ ವಿಶಿಷ್ಟತೆ, ತೀವ್ರತೆ ಹಾಗೂ ಪ್ರಭಾವಶಾಲಿ ವ್ಯಕ್ತಿತ್ವ ಕೆಲವೇ ಕೆಲವು ಕಲಾವಿದರಲ್ಲಿ ಮಾತ್ರ ಕಾಣಸಿಗುತ್ತದೆ. ತಮ್ಮ ಪಾತ್ರಗಳ ಮೂಲಕ ಜ್ವಾಲಾಮುಖಿಯಂತೆ ಸ್ಫೋಟಿಸುವ ಪ್ರತಿಭೆ ಹಾಗೂ ಸೃಜನಶೀಲತೆಯನ್ನು ಅವರು ಪ್ರದರ್ಶಿಸುತ್ತಿದ್ದರು. ಬೆಳ್ಳಿತೆರೆಯ ಮೇಲೆ ಅವರು ಜೀವ ತುಂಬಿದ ಪಾತ್ರಗಳು ಹಲವು ತಲೆಮಾರುಗಳ ನೆನಪಿನಲ್ಲಿ ಶಾಶ್ವತವಾಗಿ ಉಳಿಯಲಿವೆ. ನೇರ ಹಾಗೂ ಸ್ಪಷ್ಟ ಅಭಿಪ್ರಾಯಗಳಿಗೆ ಹೆಸರಾಗಿದ್ದ ನಾನಾ ಪಾಟೇಕರ್ ಅವರದು ಅದೇ ವಿಶಿಷ್ಟ ಛಾಪು. ತಾವು ಕಂಡ ಸಂಗತಿಗಳ ಕುರಿತು ಯಾವುದೇ ಮುಚ್ಚುಮರೆಯಿಲ್ಲದೆ ಅತ್ಯಂತ ಸ್ಪಷ್ಟವಾಗಿ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸುತ್ತಿದ್ದರು’ ಎಂದು ಹೇಳಿದ್ದಾರೆ.

ಅವರ ಅಗಲಿಕೆಗೆ ಸಂತಾಪ ಸೂಚಿಸಿರುವ ನಟ ಅಕ್ಷಯ್ ಕುಮಾರ್, “ಅವರ ಗಂಭೀರ ಧ್ವನಿ, ನಟನೆಯಲ್ಲಿನ ತೀವ್ರತೆ ಹಾಗೂ ಪ್ರಾಮಾಣಿಕತೆ ಅವರನ್ನು ಅನನ್ಯ ವ್ಯಕ್ತಿಯನ್ನಾಗಿ ಮಾಡಿತ್ತು. ವೆಲ್ಕಮ್ ಹಾಗೂ ಇತ್ತೀಚಿನ ಹೌಸ್‌ಫುಲ್ 5 ಚಿತ್ರಗಳಲ್ಲಿ ಅವರೊಂದಿಗೆ ಕೆಲಸ ಮಾಡಿದ ನೆನಪುಗಳು ಎಂದಿಗೂ ನನ್ನೊಂದಿಗಿರುತ್ತವೆ” ಎಂದಿದ್ದಾರೆ.

ನಟ ರಿತೇಶ್ ದೇಶ್‌ಮುಖ್ ಪ್ರತಿಕ್ರಿಯಿಸಿ, “ನಾನಾ ಪಾಟೇಕರ್ ಅವರು ಬೆಳ್ಳಿಪರದೆಯ ಮೇಲಷ್ಟೇ ಅಲ್ಲದೆ, ನಿಜ ಜೀವನದಲ್ಲೂ ಒಬ್ಬ ರಿಯಲ್ ಹೀರೋ ಆಗಿದ್ದರು. ಅವರು ಕೈಗೊಂಡ ಸಾಮಾಜಿಕ ಕಾರ್ಯಗಳು ಅಪಾರವಾದವು. ನಾಯಕನಾಗಿ, ಖಳನಾಯಕನಾಗಿ ಹಾಗೂ ಹಾಸ್ಯನಟನಾಗಿ ಎಲ್ಲಾ ರೀತಿಯ ಪಾತ್ರಗಳಿಗೂ ಜೀವ ತುಂಬುತ್ತಿದ್ದ ಅವರ ಅಗಲಿಕೆ ಚಿತ್ರರಂಗಕ್ಕೆ ಬಹುದೊಡ್ಡ ನಷ್ಟ” ಎಂದು ಸ್ಮರಿಸಿದ್ದಾರೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading