ನ್ಯಾಯಮೂರ್ತಿಗಳಾದ ರಾಜ ವಿಜಯರಾಘವನ್ ಮತ್ತು ಕೆ.ವಿ. ಜಯಕುಮಾರ್ ಅವರನ್ನೊಳಗೊಂಡ ಪೀಠದ ಮುಂದೆ ಈ […]" /> ನ್ಯಾಯಮೂರ್ತಿಗಳಾದ ರಾಜ ವಿಜಯರಾಘವನ್ ಮತ್ತು ಕೆ.ವಿ. ಜಯಕುಮಾರ್ ಅವರನ್ನೊಳಗೊಂಡ ಪೀಠದ ಮುಂದೆ ಈ […]"> Sabarimala-ಶಬರಿಮಲೆ ದೇವಸ್ಥಾನ ಚಿನ್ನ ಕಳವು ಪ್ರಕರಣ; ಎಸ್‌ಐಟಿ ವರದಿ ಕೇರಳ ಹೈಕೋರ್ಟ್‌ಗೆ - Nikhara News | Kannada News Website
Connect with us

ಅಂತರ ರಾಜ್ಯ

Sabarimala-ಶಬರಿಮಲೆ ದೇವಸ್ಥಾನ ಚಿನ್ನ ಕಳವು ಪ್ರಕರಣ; ಎಸ್‌ಐಟಿ ವರದಿ ಕೇರಳ ಹೈಕೋರ್ಟ್‌ಗೆ

Published

on

Ad Widget

Ad Widget

Ad Widget

Ad Widget

ಶಬರಿಮಲೆ ದೇವಸ್ಥಾನದ ಚಿನ್ನ ಕಳವು ಪ್ರಕರಣದ ತನಿಖೆಯನ್ನು ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ತನ್ನ ಮೊದಲ ಪ್ರಗತಿ ವರದಿಯನ್ನು ಮುಚ್ಚಿದ ಲಕೋಟೆಯಲ್ಲಿ ಕೇರಳ ಹೈಕೋರ್ಟ್‌ಗೆ ಮಂಗಳವಾರ ಸಲ್ಲಿಸಿದೆ.

Ad Widget

Ad Widget

Ad Widget

Ad Widget

ಕೊಚ್ಚಿ: ಶಬರಿಮಲೆ ದೇವಸ್ಥಾನದ ಚಿನ್ನ ಕಳವು ಪ್ರಕರಣದ ತನಿಖೆಯನ್ನು ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ತನ್ನ ಮೊದಲ ಪ್ರಗತಿ ವರದಿಯನ್ನು ಮುಚ್ಚಿದ ಲಕೋಟೆಯಲ್ಲಿ ಕೇರಳ ಹೈಕೋರ್ಟ್‌ಗೆ ಮಂಗಳವಾರ ಸಲ್ಲಿಸಿದೆ.

Ad Widget

Ad Widget alt="Ad Widget"/>

Ad Widget

ನ್ಯಾಯಮೂರ್ತಿಗಳಾದ ರಾಜ ವಿಜಯರಾಘವನ್ ಮತ್ತು ಕೆ.ವಿ. ಜಯಕುಮಾರ್ ಅವರನ್ನೊಳಗೊಂಡ ಪೀಠದ ಮುಂದೆ ಈ ವರದಿಯನ್ನು ಸಲ್ಲಿಸಲಾಯಿತು. “ತನಿಖೆಯ ಪ್ರಸ್ತುತ ಸ್ಥಿತಿಯನ್ನು ವರದಿಯಲ್ಲಿ ವಿವರಿಸಲಾಗಿದೆ” ಎಂದು ಪೊಲೀಸರು ತಿಳಿಸಿದ್ದಾರೆ.

Ad Widget

Ad Widget <> Ad Widget

ಕೇರಳ ಹೈಕೋರ್ಟ್ ಈ ಪ್ರಕರಣವನ್ನು ಎಸ್‌ಐಟಿಗೆ ವಹಿಸಿ, ಎರಡು ವಾರಗಳೊಳಗೆ ಪ್ರಗತಿ ವರದಿ ಸಲ್ಲಿಸಬೇಕು ಮತ್ತು ಆರು ವಾರಗಳೊಳಗೆ ತನಿಖೆಯನ್ನು ಪೂರ್ಣಗೊಳಿಸಬೇಕೆಂದು ಆದೇಶಿಸಿತ್ತು. ಶಬರಿಮಲೆ ದೇವಸ್ಥಾನದ ದ್ವಾರಪಾಲಕ ಮೂರ್ತಿಗಳ ಚಿನ್ನ ಲೇಪಿತ ತಾಮ್ರದ ಕವಚದಲ್ಲಿನ ಚಿನ್ನದ ತೂಕ ಕಡಿಮೆಯಾಗಿರುವ ಬಗ್ಗೆ ತಿರುವಾಂಕೂರು ದೇವಸ್ವಂ ಮಂಡಳಿಯ (ಟಿಡಿಬಿ) ಜಾಗೃತ ದಳಕ್ಕೆ ತನಿಖೆ ನಡೆಸಲು ಹೈಕೋರ್ಟ್ ನಿರ್ದೇಶನ ನೀಡಿತ್ತು. ಜಾಗೃತ ದಳದ ವರದಿಯಲ್ಲಿ ದೇವಸ್ವಂ ಮಂಡಳಿಯ ಅಧಿಕಾರಿಗಳ ಲೋಪದ ಬಗ್ಗೆ ತಿಳಿಸಲಾಗಿತ್ತು. ಈ ಹಿನ್ನೆಲೆಯಲ್ಲಿ, ಕ್ರಿಮಿನಲ್ ಪ್ರಕರಣ ದಾಖಲಿಸಿ ಎಸ್‌ಐಟಿ ತನಿಖೆ ನಡೆಸುವಂತೆ ಕೋರ್ಟ್ ಸೂಚಿಸಿತ್ತು.

ಎಸ್‌ಐಟಿಯು ಎರಡು ಪ್ರತ್ಯೇಕ ಪ್ರಕರಣಗಳನ್ನು ದಾಖಲಿಸಿಕೊಂಡು ತನಿಖೆಯನ್ನು ಮುಂದುವರೆಸಿದೆ. ಬೆಂಗಳೂರಿನ ಉದ್ಯಮಿ ಉನ್ನಿಕೃಷ್ಣನ್ ಪೋಟಿ ಸೇರಿದಂತೆ ದೇವಸ್ವಂ ಮಂಡಳಿಯ ಕೆಲವು ಅಧಿಕಾರಿಗಳು ಸೇರಿ ಒಟ್ಟು 10 ಮಂದಿಯನ್ನು ಆರೋಪಿಗಳೆಂದು ಹೆಸರಿಸಲಾಗಿದೆ.

Ad Widget

Ad Widget

ಬೆಂಗಳೂರಿನ ಮೂವರು ಭಾಗಿಯಾಗಿರುವ ಶಂಕೆ
ಚಿನ್ನ ಕಳವು ಪ್ರಕರಣದಲ್ಲಿ ಉನ್ನಿಕೃಷ್ಣನ್ ಪೋಟಿ ಜೊತೆಗೆ ಬೆಂಗಳೂರಿನ ಇನ್ನೂ ಮೂವರು ಭಾಗಿಯಾಗಿರುವುದನ್ನು ಎಸ್‌ಐಟಿ ಕಂಡುಹಿಡಿದಿದೆ. ಪೋಟಿ ಪರವಾಗಿ ಬೆಂಗಳೂರಿನ ಅನಂತಸುಬ್ರಹ್ಮಣ್ಯಂ ಮತ್ತು ರಮೇಶ್ ಶಬರಿಮಲೆ ದೇವಸ್ಥಾನದ ದ್ವಾರಪಾಲಕ ಮೂರ್ತಿಗಳನ್ನು ಸಂಗ್ರಹಿಸಿದ್ದಾರೆ. ಚೆನ್ನೈನ ಸ್ಮಾರ್ಟ್ ಕ್ರಿಯೇಷನ್ಸ್‌ನ ಕಲ್ಲೇಶ್ ಎಂಬಾತ ಈ ಮೂರ್ತಿಗಳಿಂದ ತೆಗೆದ ಚಿನ್ನವನ್ನು ಸಂಗ್ರಹಿಸಿದ್ದಾನೆ ಎಂದು ಎಸ್‌ಐಟಿ ಪತ್ತೆ ಮಾಡಿದೆ. ಈ ಮೂವರು ಪೋಟಿ ಅವರ ಸಹಚರರಾಗಿದ್ದಾರೆ.

ಎಸ್‌ಐಟಿಯು ಉನ್ನಿಕೃಷ್ಣನ್ ಪೋಟಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದೆ. ತನಿಖೆಯಿಂದ ಪೋಟಿಯ ಪಾತ್ರ ಕಡಿಮೆಯಿದ್ದು, ಅವರು ಪ್ರಮುಖ ಸಂಚುಕೋರರ ಸೂಚನೆಯಂತೆ ಕಾರ್ಯನಿರ್ವಹಿಸಿದ್ದಾರೆ ಎಂದು ತಿಳಿದುಬಂದಿದೆ. ತಾಮ್ರದ ಮೂರ್ತಿಗಳಿಂದ ಕಳವಾದ ಸುಮಾರು 2 ಕೆ.ಜಿ. ಚಿನ್ನವನ್ನು ಮಾರುಕಟ್ಟೆ ಬೆಲೆಗಿಂತ ಹೆಚ್ಚಿನ ಮೌಲ್ಯಕ್ಕೆ ಶ್ರೀಮಂತ ಭಕ್ತರಿಗೆ ಮಾರಾಟ ಮಾಡಲಾಗಿದೆ ಎಂದು ಎಸ್‌ಐಟಿ ಶಂಕಿಸಿದೆ. ಈ ಚಿನ್ನವನ್ನು ವಶಪಡಿಸಿಕೊಳ್ಳುವುದು ಎಸ್‌ಐಟಿಗೆ ಸವಾಲಾಗಿದೆ. ತಿರುವಾಂಕೂರು ದೇವಸ್ವಂ ಮಂಡಳಿಯ ಆರೋಪಿತ ಅಧಿಕಾರಿಗಳನ್ನು ಶೀಘ್ರದಲ್ಲೇ ವಿಚಾರಣೆಗೆ ಒಳಪಡಿಸಲಾಗುವುದು ಎಂದು ಎಸ್‌ಐಟಿ ತಿಳಿಸಿದೆ.

Ad Widget
Click to comment

Leave a Reply

ಅಂತರ ರಾಜ್ಯ

Sabarimala-ಶಬರಿಮಲೆ: ದೇವಸ್ಥಾನ ಹಾಗೂ ಅಂಗಡಿಗಳ ಮೇಲೆ ಅಧಿಕಾರಿಗಳ ದಿಢೀರ್ ದಾಳಿ; ಅಂಗಡಿಗಳಿಗೆ ₹1 ಲಕ್ಷ ದಂಡ

Published

on

Ad Widget

Ad Widget

Ad Widget

Ad Widget

ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಪ್ರಸಕ್ತ ವರ್ಷದ ಮಂಡಲ ತೀರ್ಥಯಾತ್ರೆ ಆರಂಭವಾಗುತ್ತಿದ್ದಂತೆ ಅಧಿಕಾರಿಗಳು ಕಟ್ಟುನಿಟ್ಟಿನ ತಪಾಸಣೆ ಕೈಗೊಂಡಿದ್ದಾರೆ. ಯಾತ್ರೆಯ ಮೊದಲ ವಾರದಲ್ಲೇ ದೇವಸ್ಥಾನ ಹಾಗೂ ಸುತ್ತಮುತ್ತಲಿನ ಅಂಗಡಿಗಳ ಮೇಲೆ ಜಂಟಿ ತಪಾಸಣಾ ತಂಡ ದಾಳಿ ನಡೆಸಿದ್ದು, ವಿವಿಧ ನಿಯಮ ಉಲ್ಲಂಘನೆಗಳಿಗೆ ಸಂಬಂಧಿಸಿದಂತೆ 29 ಪ್ರಕರಣ ದಾಖಲಿಸಿ ಒಟ್ಟು 1 ಲಕ್ಷ ರೂಪಾಯಿ ದಂಡ ವಿಧಿಸಿದೆ.

Ad Widget

Ad Widget

Ad Widget

Ad Widget

ಪತ್ತನಂತಿಟ್ಟ (ಕೇರಳ): ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಪ್ರಸಕ್ತ ವರ್ಷದ ಮಂಡಲ ತೀರ್ಥಯಾತ್ರೆ ಆರಂಭವಾಗುತ್ತಿದ್ದಂತೆ ಅಧಿಕಾರಿಗಳು ಕಟ್ಟುನಿಟ್ಟಿನ ತಪಾಸಣೆ ಕೈಗೊಂಡಿದ್ದಾರೆ. ಯಾತ್ರೆಯ ಮೊದಲ ವಾರದಲ್ಲೇ ದೇವಸ್ಥಾನ ಹಾಗೂ ಸುತ್ತಮುತ್ತಲಿನ ಅಂಗಡಿಗಳ ಮೇಲೆ ಜಂಟಿ ತಪಾಸಣಾ ತಂಡ ದಾಳಿ ನಡೆಸಿದ್ದು, ವಿವಿಧ ನಿಯಮ ಉಲ್ಲಂಘನೆಗಳಿಗೆ ಸಂಬಂಧಿಸಿದಂತೆ 29 ಪ್ರಕರಣ ದಾಖಲಿಸಿ ಒಟ್ಟು 1 ಲಕ್ಷ ರೂಪಾಯಿ ದಂಡ ವಿಧಿಸಿದೆ.

Ad Widget

Ad Widget alt="Ad Widget"/>

Ad Widget

ಸ್ಥಳೀಯ ಸ್ವಯಂ ಆಡಳಿತ, ಕಂದಾಯ, ಆರೋಗ್ಯ, ಆಹಾರ ಸುರಕ್ಷತೆ, ಕಾನೂನು ಮಾಪನಶಾಸ್ತ್ರ ಹಾಗೂ ನಾಗರಿಕ ಸರಬರಾಜು ಇಲಾಖೆಗಳ ಅಧಿಕಾರಿಗಳನ್ನು ಒಳಗೊಂಡ ಜಂಟಿ ತಂಡ ನಿರಂತರ ತಪಾಸಣೆ ನಡೆಸುತ್ತಿದೆ. ರಾತ್ರಿ ವೇಳೆಯೂ ಕಾರ್ಯಾಚರಣೆ ಮುಂದುವರಿಸಲಾಗುತ್ತಿದೆ.

Ad Widget

Ad Widget <> Ad Widget

ಹೋಟೆಲ್‌ಗಳು ಹಾಗೂ ಆಹಾರ ಮಳಿಗೆಗಳಲ್ಲಿ ಕಂಡುಬಂದ ಅಶುಚಿತ್ವ, ಸಿಬ್ಬಂದಿ ಕೈಗವಸು ಮತ್ತು ತಲೆಯ ಕವಚ ಧರಿಸದಿರುವುದು, ಅಡುಗೆಮನೆಗಳ ಸ್ವಚ್ಛತೆ ಕಾಪಾಡದಿರುವುದು ಸೇರಿದಂತೆ ಹಲವು ಉಲ್ಲಂಘನೆಗಳು ಪತ್ತೆಯಾಗಿವೆ. ಅಲ್ಲದೆ, ನಿಗದಿತ ದರಕ್ಕಿಂತ ಹೆಚ್ಚಿನ ಬೆಲೆಗೆ ವಸ್ತುಗಳನ್ನು ಮಾರಾಟ ಮಾಡುವುದು ಹಾಗೂ ತೂಕ ಮತ್ತು ಅಳತೆಯಲ್ಲಿ ವಂಚನೆ ಮಾಡುವ ಅಂಗಡಿಗಳ ವಿರುದ್ಧವೂ ಕ್ರಮ ಕೈಗೊಳ್ಳಲಾಗಿದೆ.

ಭಾನುವಾರ ಸನ್ನಿಧಾನದಲ್ಲಿರುವ ಹೋಟೆಲ್‌ವೊಂದರಲ್ಲಿ ಸಂಗ್ರಹಿಸಿಟ್ಟಿದ್ದ ಹಳಸಿದ ಆಹಾರವನ್ನು ಅಧಿಕಾರಿಗಳು ಪತ್ತೆಹಚ್ಚಿ ವಶಪಡಿಸಿಕೊಂಡು ನಾಶಪಡಿಸಿದ್ದಾರೆ. ಈ ಸಂಬಂಧ ಹೋಟೆಲ್‌ಗೆ ದಂಡವನ್ನೂ ವಿಧಿಸಲಾಗಿದೆ.

Ad Widget

Ad Widget

ಇದಲ್ಲದೆ, ಕೊಳೆತ ಹಣ್ಣುಗಳ ಕೆಟ್ಟ ಭಾಗವನ್ನು ಮಾತ್ರ ತೆಗೆದು ಉಳಿದ ಭಾಗದಿಂದ ಜ್ಯೂಸ್ ತಯಾರಿಸುವಂತಿಲ್ಲ. ಹಣ್ಣು ಕೊಳೆತಿದ್ದರೆ ಸಂಪೂರ್ಣ ಹಣ್ಣನ್ನೇ ವಿಲೇವಾರಿ ಮಾಡಬೇಕು ಎಂದು ಅಧಿಕಾರಿಗಳು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ಒಟ್ಟು ಮೂರು ತಂಡಗಳು ಕಾರ್ಯಾಚರಣೆಯಲ್ಲಿ ತೊಡಗಿದ್ದು, ಆಹಾರ ಮಳಿಗೆಗಳ ತಪಾಸಣೆಯ ಜತೆಗೆ ಅಯ್ಯಪ್ಪ ಭಕ್ತರನ್ನು ನೇರವಾಗಿ ಭೇಟಿಯಾಗಿ ಅವರ ಅಭಿಪ್ರಾಯ ಹಾಗೂ ದೂರುಗಳನ್ನು ಆಲಿಸುತ್ತಿವೆ. ದೂರುಗಳಿಗೆ ತಕ್ಷಣ ಸ್ಪಂದಿಸಿ ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮಂಡಲ ಮತ್ತು ಮಕರವಿಳಕ್ಕು ಯಾತ್ರೆಯ ವೇಳಾಪಟ್ಟಿ
ವಾರ್ಷಿಕ ಮಂಡಲ ತೀರ್ಥಯಾತ್ರೆ ಹಿನ್ನೆಲೆಯಲ್ಲಿ ನವೆಂಬರ್ 17ರಂದು ಶಬರಿಮಲೆ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಬಾಗಿಲು ತೆರೆಯಲಾಗಿದೆ. ಡಿಸೆಂಬರ್ 27ರಂದು ಮಂಡಲ ಪೂಜೆ ನಡೆಯಲಿದ್ದು, ಬಳಿಕ ಒಂದು ದಿನದ ಮಟ್ಟಿಗೆ ದೇವಸ್ಥಾನ ಮುಚ್ಚಲಿದೆ.

ನಂತರ ಮಕರವಿಳಕ್ಕು ತೀರ್ಥಯಾತ್ರೆಗಾಗಿ ಡಿಸೆಂಬರ್ 30ರಂದು ಸಂಜೆ 5 ಗಂಟೆಗೆ ಮತ್ತೆ ದೇವಸ್ಥಾನದ ಬಾಗಿಲು ತೆರೆಯಲಾಗುತ್ತದೆ. ಜನವರಿ 14ರಂದು ಮಕರವಿಳಕ್ಕು ಉತ್ಸವ ನಡೆಯಲಿದ್ದು, ಜನವರಿ 19ರವರೆಗೆ ಭಕ್ತರಿಗೆ ದರ್ಶನಕ್ಕೆ ಅವಕಾಶವಿರುತ್ತದೆ. ಜನವರಿ 20ರಂದು ದೇವಸ್ಥಾನದ ಬಾಗಿಲು ಮುಚ್ಚಲಿದೆ.

Ad Widget
Continue Reading

ಅಂತರ ರಾಜ್ಯ

RBI-ಡಿಜಿಟಲ್ ವಂಚನೆಗೆ ಆರ್‌ಬಿಐ ಬ್ರೇಕ್: ಖಾತೆಯ ಹಣ ವರ್ಗಾವಣೆ ತಕ್ಷಣವೇ ಸ್ಥಗಿತಗೊಳಿಸುವ ‘ಸ್ಟಾಪ್ ಸ್ವಿಚ್’ ಪ್ರಸ್ತಾಪ..!

Published

on

Ad Widget

Ad Widget

Ad Widget

Ad Widget

ದೇಶದಲ್ಲಿ ಹೆಚ್ಚುತ್ತಿರುವ ಡಿಜಿಟಲ್ ಬ್ಯಾಂಕಿಂಗ್ ವಂಚನೆಗಳಿಗೆ ಕಡಿವಾಣ ಹಾಕಲು ಹಾಗೂ ಗ್ರಾಹಕರಿಗೆ ತಮ್ಮ ಬ್ಯಾಂಕ್ ಖಾತೆಗಳ ಮೇಲೆ ಹೆಚ್ಚಿನ ನಿಯಂತ್ರಣ ಒದಗಿಸಲು ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ಹೊಸ ಸುರಕ್ಷತಾ ಕ್ರಮಗಳನ್ನು ಜಾರಿಗೆ ತರುವ ನಿಟ್ಟಿನಲ್ಲಿ ಕರಡು ನಿಯಮಾವಳಿಗಳನ್ನು ಪ್ರಸ್ತಾಪಿಸಿದೆ.

Ad Widget

Ad Widget

Ad Widget

Ad Widget

ಮುಂಬೈ: ದೇಶದಲ್ಲಿ ಹೆಚ್ಚುತ್ತಿರುವ ಡಿಜಿಟಲ್ ಬ್ಯಾಂಕಿಂಗ್ ವಂಚನೆಗಳಿಗೆ ಕಡಿವಾಣ ಹಾಕಲು ಹಾಗೂ ಗ್ರಾಹಕರಿಗೆ ತಮ್ಮ ಬ್ಯಾಂಕ್ ಖಾತೆಗಳ ಮೇಲೆ ಹೆಚ್ಚಿನ ನಿಯಂತ್ರಣ ಒದಗಿಸಲು ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ಹೊಸ ಸುರಕ್ಷತಾ ಕ್ರಮಗಳನ್ನು ಜಾರಿಗೆ ತರುವ ನಿಟ್ಟಿನಲ್ಲಿ ಕರಡು ನಿಯಮಾವಳಿಗಳನ್ನು ಪ್ರಸ್ತಾಪಿಸಿದೆ.

Ad Widget

Ad Widget alt="Ad Widget"/>

Ad Widget

ಈ ಪ್ರಸ್ತಾವನೆಯ ಪ್ರಮುಖ ಅಂಶವೆಂದರೆ, ಗ್ರಾಹಕರು ತಮ್ಮ ಬ್ಯಾಂಕ್ ಖಾತೆಯಿಂದ ನಡೆಯುವ ಎಲ್ಲಾ ಡೆಬಿಟ್ ವಹಿವಾಟುಗಳು ಹಾಗೂ ಹೊಸ ಪಾವತಿ ಆದೇಶಗಳನ್ನು ತಕ್ಷಣವೇ ಸ್ಥಗಿತಗೊಳಿಸಲು ಅನುಕೂಲವಾಗುವ ‘ಸ್ಟಾಪ್ ಸ್ವಿಚ್’ ವ್ಯವಸ್ಥೆ. ಇದರಿಂದ ಅನುಮಾನಾಸ್ಪದ ವಹಿವಾಟುಗಳು ಅಥವಾ ವಂಚನೆಯ ಪ್ರಯತ್ನಗಳು ಕಂಡುಬಂದಾಗ ಗ್ರಾಹಕರು ತಕ್ಷಣವೇ ಹಣ ವರ್ಗಾವಣೆಯನ್ನು ತಡೆಯಲು ಸಾಧ್ಯವಾಗಲಿದೆ.

Ad Widget

Ad Widget <> Ad Widget

ಇದಲ್ಲದೆ, ಹೊಸದಾಗಿ ತೆರೆಯುವ ಬ್ಯಾಂಕ್ ಖಾತೆಗಳಲ್ಲಿ ಡಿಜಿಟಲ್ ಪಾವತಿ ಸೌಲಭ್ಯಗಳು ಆರಂಭದಲ್ಲಿ ನಿಷ್ಕ್ರಿಯವಾಗಿರಲಿವೆ. ಗ್ರಾಹಕರ ಸ್ಪಷ್ಟ ಒಪ್ಪಿಗೆ ಪಡೆದ ಬಳಿಕವಷ್ಟೇ ಈ ಸೌಲಭ್ಯಗಳನ್ನು ಸಕ್ರಿಯಗೊಳಿಸುವ ವ್ಯವಸ್ಥೆಯನ್ನು ಆರ್‌ಬಿಐ ಪ್ರಸ್ತಾಪಿಸಿದೆ.

ಗ್ರಾಹಕರು ತಮ್ಮ ವೈಯಕ್ತಿಕ ವಹಿವಾಟುಗಳಿಗೆ ಮಿತಿಯನ್ನು ತಾವೇ ನಿಗದಿಪಡಿಸಿಕೊಳ್ಳುವ ಅವಕಾಶವನ್ನೂ ಕಲ್ಪಿಸಲು ಉದ್ದೇಶಿಸಲಾಗಿದೆ. ಜತೆಗೆ, ಹೆಚ್ಚಿನ ಮೊತ್ತದ ಹಣ ವರ್ಗಾವಣೆಗಳಿಗೆ 18 ವರ್ಷ ಮೇಲ್ಪಟ್ಟ ವಿಶ್ವಾಸಾರ್ಹ ವ್ಯಕ್ತಿಯೊಬ್ಬರನ್ನು ಅನುಮೋದಕರನ್ನಾಗಿ ನೋಂದಾಯಿಸಿಕೊಳ್ಳುವ ವ್ಯವಸ್ಥೆಯನ್ನೂ ಪ್ರಸ್ತಾಪಿಸಲಾಗಿದೆ.

Ad Widget

Ad Widget

ಈ ವ್ಯವಸ್ಥೆಯಡಿ, ಗ್ರಾಹಕರು ನಿಗದಿಪಡಿಸಿದ ಹೆಚ್ಚಿನ ಮೊತ್ತದ ವಹಿವಾಟಿಗೆ ವಿಶ್ವಾಸಾರ್ಹ ವ್ಯಕ್ತಿ ಒಂದು ಗಂಟೆಯೊಳಗೆ ಅನುಮೋದನೆ ನೀಡಿದರೆ ಮಾತ್ರ ಹಣ ವರ್ಗಾವಣೆ ಪೂರ್ಣಗೊಳ್ಳಲಿದೆ.

ಈ ಕರಡು ನಿಯಮಾವಳಿಗಳ ಕುರಿತು ಸಾರ್ವಜನಿಕರು ಹಾಗೂ ಸಂಬಂಧಪಟ್ಟ ವಲಯಗಳಿಂದ ಡಿಸೆಂಬರ್ 14ರವರೆಗೆ ಆರ್‌ಬಿಐ ಅಭಿಪ್ರಾಯಗಳನ್ನು ಆಹ್ವಾನಿಸಿದೆ. ಪ್ರಸ್ತಾವಿತ ಸುರಕ್ಷತಾ ಕ್ರಮಗಳು ಅಂತಿಮವಾಗಿ ಅನುಮೋದನೆ ಪಡೆದು ಜಾರಿಗೆ ಬಂದಲ್ಲಿ, 2027ರ ಜುಲೈ 1ರಿಂದ ಅನುಷ್ಠಾನಗೊಳ್ಳುವ ಸಾಧ್ಯತೆಯಿದೆ.

Ad Widget
Continue Reading

ಅಂತರ ರಾಜ್ಯ

Dalai Lama-ದೆಹಲಿಯಲ್ಲಿ ದಲೈಲಾಮಗೆ ಪ್ರತಿಷ್ಠಿತ ಪ್ರದೇಶದಲ್ಲಿ ಸರ್ಕಾರಿ ಬಂಗಲೆ ಮಂಜೂರು ಮಾಡಿದ ಕೇಂದ್ರ

Published

on

Ad Widget

Ad Widget

Ad Widget

Ad Widget

ಟಿಬೆಟ್‌ನ ಆಧ್ಯಾತ್ಮಿಕ ಗುರು ದಲೈ ಲಾಮಾ ಅವರಿಗೆ ಕೇಂದ್ರ ಸರ್ಕಾರವು ರಾಷ್ಟ್ರ ರಾಜಧಾನಿ ದೆಹಲಿಯ ಪ್ರತಿಷ್ಠಿತ ಲುಟಿಯನ್ಸ್ ಪ್ರದೇಶದಲ್ಲಿ ಬಂಗಲೆಯೊಂದನ್ನು ಮಂಜೂರು ಮಾಡಿದೆ ಎಂದು ಮೂಲಗಳು ತಿಳಿಸಿವೆ.

Ad Widget

Ad Widget

Ad Widget

Ad Widget

ನವದೆಹಲಿ: ಟಿಬೆಟ್‌ನ ಆಧ್ಯಾತ್ಮಿಕ ಗುರು ದಲೈ ಲಾಮಾ ಅವರಿಗೆ ಕೇಂದ್ರ ಸರ್ಕಾರವು ರಾಷ್ಟ್ರ ರಾಜಧಾನಿ ದೆಹಲಿಯ ಪ್ರತಿಷ್ಠಿತ ಲುಟಿಯನ್ಸ್ ಪ್ರದೇಶದಲ್ಲಿ ಬಂಗಲೆಯೊಂದನ್ನು ಮಂಜೂರು ಮಾಡಿದೆ ಎಂದು ಮೂಲಗಳು ತಿಳಿಸಿವೆ.

Ad Widget

Ad Widget alt="Ad Widget"/>

Ad Widget

ದೆಹಲಿಯ ಪಂಡಿತ್ ರವಿಶಂಕರ್ ಶುಕ್ಲಾ ಲೇನ್‌ನಲ್ಲಿರುವ ಬಂಗಲೆಯನ್ನು ದಲೈ ಲಾಮಾ ಅವರ ವಾಸ್ತವ್ಯಕ್ಕಾಗಿ ಮಂಜೂರು ಮಾಡಲಾಗಿದೆ ಎನ್ನಲಾಗಿದೆ. ಆದರೆ, ಈ ಕುರಿತು ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯದಿಂದ ಈವರೆಗೆ ಯಾವುದೇ ಅಧಿಕೃತ ಪ್ರಕಟಣೆ ಹೊರಬಿದ್ದಿಲ್ಲ.

Ad Widget

Ad Widget <> Ad Widget

ಸಾಮಾನ್ಯವಾಗಿ ಇಂತಹ ಸರ್ಕಾರಿ ವಸತಿ ಸೌಲಭ್ಯಗಳನ್ನು ಮೂರು ವರ್ಷಗಳ ಅವಧಿಗೆ ಮಂಜೂರು ಮಾಡಲಾಗುತ್ತದೆ. ಅಗತ್ಯತೆ ಮತ್ತು ಸಂದರ್ಭಗಳನ್ನು ಆಧರಿಸಿ ಈ ಅವಧಿಯನ್ನು ವಿಸ್ತರಿಸುವ ಅವಕಾಶವೂ ಇದೆ ಎಂದು ತಿಳಿದುಬಂದಿದೆ.

ಇನ್ನೊಂದೆಡೆ, ದಲೈ ಲಾಮಾ ಅವರ ಗಡೆನ್ ಫೋಡ್ರಂಗ್ ಟ್ರಸ್ಟ್ ಅವರ ಪ್ರಮುಖ ಬದ್ಧತೆಗಳ ಕುರಿತು ಮಾಹಿತಿ ಹಂಚಿಕೊಂಡಿದೆ.

Ad Widget

Ad Widget

ಮಾನವೀಯ ಮೌಲ್ಯಗಳ ಪ್ರಚಾರ, ವಿವಿಧ ಧರ್ಮಗಳ ನಡುವೆ ಸಾಮರಸ್ಯ ಬೆಳೆಸುವುದು, ಟಿಬೆಟಿಯನ್ ಸಂಸ್ಕೃತಿ ಮತ್ತು ಅಸ್ಮಿತೆಯ ಸಂರಕ್ಷಣೆ, ಪರಿಸರ ರಕ್ಷಣೆ ಹಾಗೂ ಪ್ರಾಚೀನ ಜ್ಞಾನ ಪರಂಪರೆಯ ಬಗ್ಗೆ ಆಳವಾದ ಅರಿವು ಮೂಡಿಸುವುದು ದಲೈ ಲಾಮಾ ಅವರ ಪ್ರಮುಖ ಉದ್ದೇಶಗಳಾಗಿವೆ ಎಂದು ಟ್ರಸ್ಟ್ ತಿಳಿಸಿದೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!