ಸ್ಥಳೀಯ
Nesara Yuvaka Mandala-ಸಿಡಿಲು ಬಡಿದು ಹಾನಿಯಾದ ಮನೆಗೆ ನೇಸರ ಯುವಕ ಮಂಡಲದಿಂದ ಸಹಾಯ ಹಸ್ತ; ಮನೆ ಛಾವಣಿ ದುರಸ್ತಿ, ವಿದ್ಯುತ್ ಸಂಪರ್ಕ ಮರು ಜೋಡಣೆ : ದೀಪಾವಳಿ ದಿನವೇ ಕತ್ತಲ್ಲಲ್ಲಿದ್ದ ಮನೆಗೆ ಬೆಳಕು
ಸದಾ ಸಮಾಜಮುಖಿ ಚಿಂತನೆಯ ಬೆಳಕು ಹರಿಸಬೇಕು ಎನ್ನುವ ಪ್ರಯತ್ನದಲ್ಲಿ ನಿರತರಾಗಿರುವ, ದಶ ಪ್ರಣತಿಯ ಹೊಸ್ತಿಲಿನಲ್ಲಿರುವ ಮುಕ್ಕೂರು ನೇಸರ ಯುವಕ ಮಂಡಲವೂ ಕುಂಡಡ್ಕದಲ್ಲಿ ಸಿಡಿಲು ಬಡಿದು ತೀವ್ರ ಹಾನಿ ಉಂಟಾಗಿದ್ದ ಮನೆಗೆ ನೆರವು ನೀಡಿದೆ. ಕತ್ತಲ್ಲಲ್ಲಿದ್ದ ಮನೆಗೆ ದೀಪಾವಳಿಯ ದಿನದಂದೇ ಬೆಳಕು ಹರಿಸುವ ಪ್ರಯತ್ನ ಮಾಡಿತ್ತು.
ಕುಂಡಡ್ಕ: ಸದಾ ಸಮಾಜಮುಖಿ ಚಿಂತನೆಯ ಬೆಳಕು ಹರಿಸಬೇಕು ಎನ್ನುವ ಪ್ರಯತ್ನದಲ್ಲಿ ನಿರತರಾಗಿರುವ, ದಶ ಪ್ರಣತಿಯ ಹೊಸ್ತಿಲಿನಲ್ಲಿರುವ ಮುಕ್ಕೂರು ನೇಸರ ಯುವಕ ಮಂಡಲವೂ ಕುಂಡಡ್ಕದಲ್ಲಿ ಸಿಡಿಲು ಬಡಿದು ತೀವ್ರ ಹಾನಿ ಉಂಟಾಗಿದ್ದ ಮನೆಗೆ ನೆರವು ನೀಡಿದೆ. ಕತ್ತಲ್ಲಲ್ಲಿದ್ದ ಮನೆಗೆ ದೀಪಾವಳಿಯ ದಿನದಂದೇ ಬೆಳಕು ಹರಿಸುವ ಪ್ರಯತ್ನ ಮಾಡಿತ್ತು.

ಅ.17 ರಂದು ಕುಂಡಡ್ಕ ಭಾರತಿ ಅವರ ಮನೆಗೆ ಸಿಡಿಲು ಬಡಿದು ಹಾನಿ ಉಂಟಾಗಿತ್ತು. ಮೂವರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿ ಮಂಗಳವಾರ ರಾತ್ರಿ ಮನೆಗೆ ಮರಳಿದ್ದರು. ದೀಪಾವಳಿ ಸಂಭ್ರಮದಲ್ಲಿರಬೇಕಾದ ಬಡ ಕುಟುಂಬದ ಮನೆಗೆ ಸಿಡಿಲಿನ ಆಘಾತದಿಂದ ಕತ್ತಲು ಆವರಿಸಿತ್ತು. ಮನೆ ಛಾವಣಿಗೆ ಹಾನಿ ಮಳೆಯ ನಡುವೆ ಇರಬೇಕಾದ ಸ್ಥಿತಿ ಒಂದೆಡೆಯಾದರೆ, ಇನ್ನೊಂದೆಡೆ ವಿದ್ಯುತ್ ಸಂಪರ್ಕ, ಪರಿಕರ ಸಂಪೂರ್ಣ ಹಾನಿಗೀಡಾಗಿ ಬೆಳಕು ಇಲ್ಲದ ಸ್ಥಿತಿ ಉಂಟಾಗಿತ್ತು.

ಮನೆಯ ಪರಿಸ್ಥಿತಿ ಅರಿತ ಮುಕ್ಕೂರು ನೇಸರ ಯುವಕ ಮಂಡಲ ತನ್ನ ಸೇವಾ ನಿಧಿಯ ಮೂಲಕ ಬಡ ಕುಟುಂಬಕ್ಕೆ ಅ.22 ರಂದು ನೆರವು ನೀಡಿದೆ. ಬುಧವಾರ ಬೆಳಗ್ಗೆ ಸಂಘದ ವತಿಯಿಂದ ಸಿಮೆಂಟ್ ಶೀಟು, ವಿದ್ಯುತ್ ಮರು ಜೋಡಣೆಗೆ ಬೇಕಾದ ಎಲ್ಲ ಸಾಮಗ್ರಿಗಳನ್ನು ಒದಗಿಸಲಾಯಿತು. ಸದಸ್ಯರು ಶ್ರಮದಾನದ ಮೂಲಕ ಜೋಡಣೆಯ ಕೆಲಸ ನಿರ್ವಹಿಸಿದರು.
ಇಡೀ ಮೀಟರ್ ಬೋರ್ಡ್ ಸುಟ್ಟು ಕರಲಾಗಿತ್ತು. ಸಂಘದ ಕರೆಗೆ ತತ್ ಕ್ಷಣ ಸ್ಪಂದಿಸಿದ ಪವರ್ ಮೆನ್ ಮಹಾಂತೇಶ್ ಹೊಸ ಮೀಟರ್ ಜೋಡಿಸಲು ನೆರವಾದರು. ಜತೆಗೆ ಛಾವಣಿ ದುರಸ್ತಿಯ ಸಂದರ್ಭದಲ್ಲಿಯು ಸಹಕರಿಸಿದರು.
ಅಪರಾಧ
Bantwal-ಬಂಟ್ವಾಳ: 17 ವರ್ಷಗಳಿಂದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿದ್ದ ಆರೋಪಿ ಅರೆಸ್ಟ್..!
ಸುಮಾರು 17 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ, ವಾರೆಂಟ್ ಜಾರಿಯಾಗಿದ್ದ ಆರೋಪಿ ಬಂಟ್ವಾಳದ ತಲಪಾಡಿ ನಿವಾಸಿ ಹನೀಫ್ ಅಲಿಯಾಸ್ ಕೊಕ್ಕಡ ಹನೀಫ್ (57)ನನ್ನು ಬಂಟ್ವಾಳ ನಗರ ಪೊಲೀಸರು ಬಂಧಿಸಿದ್ದಾರೆ.
ಬಂಟ್ವಾಳ: ಸುಮಾರು 17 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ, ವಾರೆಂಟ್ ಜಾರಿಯಾಗಿದ್ದ ಆರೋಪಿ ಬಂಟ್ವಾಳದ ತಲಪಾಡಿ ನಿವಾಸಿ ಹನೀಫ್ ಅಲಿಯಾಸ್ ಕೊಕ್ಕಡ ಹನೀಫ್ (57)ನನ್ನು ಬಂಟ್ವಾಳ ನಗರ ಪೊಲೀಸರು ಬಂಧಿಸಿದ್ದಾರೆ.
2009ರಲ್ಲಿ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಕರ್ನಾಟಕ ಅಬಕಾರಿ ಕಾಯ್ದೆಯ ವಿವಿಧ ಕಲಂಗಳಡಿ ದಾಖಲಾಗಿದ್ದ ಪ್ರಕರಣದಲ್ಲಿ ಹನೀಫ್ ಆರೋಪಿಯಾಗಿದ್ದ. ಈ ಪ್ರಕರಣಕ್ಕೆ ಸಂಬಂಧಿಸಿ ಸುಮಾರು 17 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಎನ್ನಲಾಗಿದೆ.
ಇದಲ್ಲದೆ, 2023ರಲ್ಲಿ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಅ.ಕ್ರ 143/2023 ಕಲಂ 143,147, 448, 427, 436, 307, 149 IPC ಪ್ರಕರಣದಲ್ಲಿ ಆರೋಪಿಯಾಗಿದ್ದ ಆತನ ವಿರುದ್ಧ ವಾರೆಂಟ್ ಜಾರಿಯಾಗಿತ್ತು.
ಅಕ್ಟೋಬರ್ 9ರಂದು ಮೂಡುಬಿದಿರೆಯ ಶಿರ್ತಾಡಿ ಎಂಬಲ್ಲಿ ಬಂಟ್ವಾಳ ನಗರ ಠಾಣೆಯ ಎಎಸ್‌ಐ ಬಶೀರ್, ಹೆಡ್ ಕಾನ್‌ಸ್ಟೆಬಲ್‌ಗಳಾದ ಜಗದೀಶ್ ಮತ್ತು ಸಂತೋಷ್ ಹಾಗೂ ಪೊಲೀಸ್ ಕಾನ್‌ಸ್ಟೆಬಲ್ ಗವಿಸಿದ್ದಪ್ಪ ಅವರ ತಂಡ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದೆ.
ಮಂಗಳೂರು
Mulki-ಮೂಲ್ಕಿ: ಚಲಿಸುತ್ತಿದ್ದ ಮಂಗಳೂರು – ಕಾರ್ಕಳ ಎಕ್ಸ್ ಪ್ರೆಸ್ ಬಸ್‌ಗೆ ಬಡಿದ ಗಿಡುಗ: ಗಾಜು ಪುಡಿಪುಡಿ, ಪುತ್ತೂರು ಮೂಲದ ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ಭಾರಿ ಅವಘಡ
ಮೂಲ್ಕಿ ಸಮೀಪದ ಹಳೆಯಂಗಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಮಂಗಳೂರು- ಕಾರ್ಕಳ ಎಕ್ಸ್‌ಪ್ರೆಸ್ ಬಸ್‌ನ ಮುಂಭಾಗದ ಗಾಜಿಗೆ ಗಿಡುಗವೊಂದು ಬಡಿದ ಪರಿಣಾಮ ಗಾಜು ಪುಡಿಪುಡಿಯಾದ ಘಟನೆ ನಡೆದಿದೆ. ಘಟನೆಯಲ್ಲಿ ಒಬ್ಬರಿಗೆ ಗಾಯವಾಗಿದೆ ಎಂದು ತಿಳಿದುಬಂದಿದೆ.
ಮಂಗಳೂರು: ಮೂಲ್ಕಿ ಸಮೀಪದ ಹಳೆಯಂಗಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಮಂಗಳೂರು- ಕಾರ್ಕಳ ಎಕ್ಸ್‌ಪ್ರೆಸ್ ಬಸ್‌ನ ಮುಂಭಾಗದ ಗಾಜಿಗೆ ಗಿಡುಗವೊಂದು ಬಡಿದ ಪರಿಣಾಮ ಗಾಜು ಪುಡಿಪುಡಿಯಾದ ಘಟನೆ ನಡೆದಿದೆ. ಘಟನೆಯಲ್ಲಿ ಒಬ್ಬರಿಗೆ ಗಾಯವಾಗಿದೆ ಎಂದು ತಿಳಿದುಬಂದಿದೆ.
ಲಕ್ಷ್ಮಿ ಗಣೇಶ್ ಹೆಸರಿನ ಎಕ್ಸ್‌ಪ್ರೆಸ್ ಬಸ್ ಸಂಚರಿಸುತ್ತಿದ್ದ ವೇಳೆ ಏಕಾಏಕಿ ಗಿಡುಗ ಬಸ್‌ನ ಮುಂಭಾಗದ ಗಾಜಿಗೆ ಬಡಿದಿದೆ. ಇದರಿಂದ ಗಾಜು ಒಡೆದು ಚೂರುಚೂರಾಗಿದೆ.
ಘಟನೆಯಿಂದ ಪ್ರಯಾಣಿಕರಲ್ಲಿ ಆತಂಕದ ವಾತಾವರಣ ನಿರ್ಮಾಣವಾದರೂ, ಚಾಲಕ ಹರೀಶ್ ಪೂಜಾರಿ ಅವರು ವಿಚಲಿತರಾಗದೆ ಸಮಯಪ್ರಜ್ಞೆಯಿಂದ ಬಸ್ ನಿಲ್ಲಿಸಿದ್ದಾರೆ. ಅವರ ಈ ನಡೆಗೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ.
ಬಸ್ ಚಾಲಕ ಪುತ್ತೂರಿನ ಸಂಟ್ಯಾರು ಕೂರೇಲು ನಿವಾಸಿ ಹರೀಶ್ ಪೂಜಾರಿ ಮೇಲೆ ಗಾಜಿನ ಚೂರುಗಳು ಬಿದ್ದು ಗಾಯಗೊಂಡಿದ್ದರು ಅವರು ವೇಗವಾಗಿ ಹೋಗುತ್ತಿದ್ದ ಬಸ್ ನ್ನು ತಕ್ಷಣ ನಿಯಂತ್ರಿಸಿದ್ದಾರೆ. ಅವಘಡ ಸಂದರ್ಭ ಡ್ರೈವರ್ ಸ್ಟೇರೀಂಗ್ ಕೈಬಿಟ್ಟದ್ದರೂ ಬಸ್ ಡಿವೈಡರ್ ಹಾರಿ ಭಾರೀ ಅವಘಡ ಸಂಭವಿಸುತ್ತಿತ್ತು ಎನ್ನಲಾಗಿದೆ.
ಮಂಗಳೂರು
Ujire-ಭಾರೀ ಜನಸ್ತೋಮದೊಂದಿಗೆ ಸೌಜನ್ಯ ನ್ಯಾಯದ ನಡಿಗೆ
ಧರ್ಮಸ್ಥಳದ ಸೌಜನ್ಯ ಪ್ರಕರಣದ ಮರುತನಿಖೆಗೆ ಆಗ್ರಹಿಸಿ ಸೌಜನ್ಯ ಪರ ಹೋರಾಟಗಾರರು ಉಜಿರೆಯಿಂದ ಬೆಳ್ತಂಗಡಿವರೆಗೆ ನ್ಯಾಯದ ನಡಿಗೆ ಹಮ್ಮಿಕೊಂಡಿದ್ದಾರೆ.

ಮಂಗಳೂರು: ಧರ್ಮಸ್ಥಳದ ಸೌಜನ್ಯ ಪ್ರಕರಣದ ಮರುತನಿಖೆಗೆ ಆಗ್ರಹಿಸಿ ಸೌಜನ್ಯ ಪರ ಹೋರಾಟಗಾರರು ಉಜಿರೆಯಿಂದ ಬೆಳ್ತಂಗಡಿವರೆಗೆ ನ್ಯಾಯದ ನಡಿಗೆ ಹಮ್ಮಿಕೊಂಡಿದ್ದಾರೆ.
ಉಜಿರೆಯಿಂದ ಆರಂಭವಾದ ಬೃಹತ್ ಜಾಥಾದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಜನರು ಭಾಗವಹಿಸಿದ್ದು, ಮೌನ ಮೆರವಣಿಗೆಯ ಮೂಲಕ ಸೌಜನ್ಯಳಿಗೆ ನ್ಯಾಯ ದೊರಕಿಸಿಕೊಡಬೇಕೆಂದು ಆಗ್ರಹಿಸಲಾಯಿತು. ಸುಮಾರು ಐದು ಕಿಲೋಮೀಟರ್ ದೂರದವರೆಗೆ ಹೋರಾಟಗಾರರು ನಡಿಗೆಯಲ್ಲಿ ಸಾಗಲಿದ್ದಾರೆ.
ನ್ಯಾಯದ ನಡಿಗೆಯ ಬಳಿಕ ಬೆಳ್ತಂಗಡಿಯ ಮೈದಾನದಲ್ಲಿ ಬೃಹತ್ ಅಭಿನಂದನಾ ಸಮಾವೇಶ ನಡೆಯಲಿದೆ. ಸೌಜನ್ಯ ಪರವಾಗಿ ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್‌ನಲ್ಲಿ ವಾದ ಮಂಡಿಸಿದ ವಕೀಲರ ತಂಡಕ್ಕೆ ಈ ಸಂದರ್ಭದಲ್ಲಿ ಅಭಿನಂದನೆ ಸಲ್ಲಿಸಲಾಗುತ್ತದೆ. ಕಾರ್ಯಕ್ರಮದಲ್ಲಿ ವಕೀಲರು ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ ಎಂದು ತಿಳಿದುಬಂದಿದೆ.
-
Uncategorized5 hours ago
ಬೋನಿಗೆ ಬಿದ್ದ ಅಪರೂಪದ ಕರಿ ಚಿರತೆ!
-
Uncategorized6 hours ago
ಪುತ್ತೂರು–ಉಪ್ಪಿನಂಗಡಿ ರಸ್ತೆ ದುರಸ್ತಿಗೆ ಶಾಸಕ ಅಶೋಕ್ ರೈ ಸೂಚನೆ
-
Uncategorized4 hours ago
ರಬ್ಬರ್ ಗೆ ಭರ್ಜರಿ ಬೆಲೆ; ರಬ್ಬರ್ ಶೀಟ್ ದರದಲ್ಲೂ ಏರಿಕೆ
-
Uncategorized5 hours ago
ಪುತ್ತೂರು : ನಸುಕಿನ ಜಾವ ಹಳೇ ಕಟ್ಟಡದಲ್ಲಿ ಕಾಣಿಸಿದ ಬೆಂಕಿ – ಅನಾಹುತ ತಪ್ಪಿಸಲು ನೆರವಾದ ರವಿಕುಮಾರ್ ರೈ
-
Uncategorized2 hours ago
ಸಮುದ್ರಕ್ಕೆ ಇಳಿದಿದ್ದ ಉಜಿರೆ ಕಾಲೇಜಿನ ವಿದ್ಯಾರ್ಥಿ ಅಲೆಗಳ ಸೆಳೆತಕ್ಕೆ ಬಲಿ; ಮೃತದೇಹ ಪತ್ತೆ
-
Uncategorized4 hours ago
ಮುಂಬೈನಲ್ಲಿ ‘ಬನ’ ತುಳು ಚಿತ್ರಕ್ಕೆ ಪ್ರೇಕ್ಷಕರ ಮೆಚ್ಚುಗೆ; ಎರಡೂ ಪ್ರೀಮಿಯರ್ ಶೋ ಹೌಸ್ಫುಲ್ |





















