ರಾಜಕೀಯ
R. Ashok-RSS ನೋಂದಣಿ ಮಾಡಬೇಕೆಂಬ ಕಾನೂನು ಎಲ್ಲಿದೆ..? – ಆರ್. ಅಶೋಕ್
ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಅನ್ನು ನೋಂದಣಿ ಮಾಡಿಕೊಳ್ಳಬೇಕು ಎಂಬ ಆರೋಪದ ಬಗ್ಗೆ ಕಾನೂನು ಎಲ್ಲಿದೆ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಪ್ರಶ್ನಿಸಿದ್ದಾರೆ. ಕಾಂಗ್ರೆಸ್ ಸರ್ಕಾರ ತನ್ನ ಆಡಳಿತದ ವೈಫಲ್ಯಗಳನ್ನು ಮುಚ್ಚಿಹಾಕಲು ಈ ವಿವಾದವನ್ನು ಉದ್ದೇಶಪೂರ್ವಕವಾಗಿ ತಂದಿದೆ ಎಂದು ಆರೋಪಿಸಿದ್ದಾರೆ.
ಹುಬ್ಬಳ್ಳಿ, ಅ.24: ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಅನ್ನು ನೋಂದಣಿ ಮಾಡಿಕೊಳ್ಳಬೇಕು ಎಂಬ ಆರೋಪದ ಬಗ್ಗೆ ಕಾನೂನು ಎಲ್ಲಿದೆ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಪ್ರಶ್ನಿಸಿದ್ದಾರೆ. ಕಾಂಗ್ರೆಸ್ ಸರ್ಕಾರ ತನ್ನ ಆಡಳಿತದ ವೈಫಲ್ಯಗಳನ್ನು ಮುಚ್ಚಿಹಾಕಲು ಈ ವಿವಾದವನ್ನು ಉದ್ದೇಶಪೂರ್ವಕವಾಗಿ ತಂದಿದೆ ಎಂದು ಆರೋಪಿಸಿದ್ದಾರೆ.
ಗುರುವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅಶೋಕ್ ಅವರು, “ಯಾವುದೇ ಸಂಘಟನೆಯನ್ನು ನೋಂದಣಿ ಮಾಡಿಸಬೇಕು ಎಂಬ ಕಾನೂನು ಎಲ್ಲಿದೆ? ಆರ್‌ಎಸ್‌ಎಸ್‌ಗೆ ಬರುವ ಹಣದ ಮೂಲಗಳ ಬಗ್ಗೆ ಪ್ರಶ್ನಿಸಿರುವ ಐಟಿ/ಬಿಟಿ ಸಚಿವ ಪ್ರಿಯಾಂಕ್ ಖರ್ಗೆ, ಮೊದಲು ಕಾಂಗ್ರೆಸ್ ಪಕ್ಷಕ್ಕೆ ಎಲ್ಲಿಂದ ದುಡ್ಡು ಬರುತ್ತಿದೆ ಎಂಬುದನ್ನು ಘೋಷಿಸಲಿ” ಎಂದು ಆಗ್ರಹಿಸಿದರು. ಆರ್‌ಎಸ್‌ಎಸ್ ದೇಶಪ್ರೇಮ ಬೆಳೆಸುವ ಸಂಸ್ಥೆಯಾಗಿದ್ದು, ಆ ಹೆಸರಿನಲ್ಲಿ ಯಾವುದೇ ಕಟ್ಟಡಗಳು ನೋಂದಾವಣೆಯಾಗಿಲ್ಲ ಎಂದು ಸ್ಪಷ್ಟಪಡಿಸಿದರು. ಆರ್‌ಎಸ್‌ಎಸ್ ಬಗ್ಗೆ ಪ್ರಶ್ನೆಗಳಿಗೆ ಉತ್ತರಿಸುವ ಸಂಸ್ಥೆಗಳಿವೆ, ಅವುಗಳೇ ಸೂಕ್ತ ಸಮಯದಲ್ಲಿ ಕೇಳುತ್ತವೆ ಎಂದು ಹೇಳಿದರು.
ಅತಿವೃಷ್ಟಿಯಿಂದಾಗಿ ಕಂಗಾಲಾಗಿರುವ ರೈತರಿಗೆ ಪರಿಹಾರ ನೀಡುವಲ್ಲಿ ಸರ್ಕಾರದ ಯೋಗ್ಯತೆ ಕಡಿಮೆಯಾಗಿದೆ ಎಂದು ಅಶೋಕ್ ಅವರು ಕಿಡಿಗಾರಿಸಿದರು. “ಈ ಸರ್ಕಾರ ಪಾಪರ್ ಆಗಿದ್ದು, ಆಡಳಿತದಲ್ಲಿ ಸೂಕ್ಷ್ಮತೆ ಇಲ್ಲ. ಇಂತಹ ವಿಷಯಗಳಿಂದ ಜನರ ಗಮನವನ್ನು ತಿರುಗಿಸಲು ಆರ್‌ಎಸ್‌ಎಸ್ ವಿವಾದವನ್ನು ಮುನ್ನೆಲೆಗೆ ತಂದಿದ್ದಾರೆ” ಎಂದು ಟೀಕಿಸಿದರು.
ಚಿತ್ತಾಪುರದಲ್ಲಿ ಒಂದೇ ದಿನ ಎರಡು ಸಂಘಟನೆಗಳು ಪಥಸಂಚಲನಕ್ಕೆ ಅನುಮತಿ ಕೋರಿರುವ ವಿಷಯಕ್ಕೆ ಪ್ರತಿಕ್ರಿಯಿಸಿ, “ಯಾರಿಗೆ ಬೇಕಾದರೂ ಕಾರ್ಯಕ್ರಮ ಅಥವಾ ಮೆರವಣಿಗೆಗೆ ಅನುಮತಿ ನೀಡಬಹುದು. ದಲಿತರು, ಲಿಂಗಾಯತರು, ಒಕ್ಕಲಿಗರು ಅಥವಾ ಭೀಮ್ ಆರ್ಮಿ ಯಾರು ಮೆರವಣಿಗೆ ಮಾಡಿದರೂ ಕಾನೂನಿನಲ್ಲಿ ಅವಕಾಶವಿದೆ. ನಾವು ಅಭ್ಯಂತರವನ್ನು ತೋರದಿರುತ್ತೇವೆ” ಎಂದು ಹೇಳಿದರು.
ಸರ್ಕಾರ ಬಂದ ನಂತರ ರಾಜ್ಯದಲ್ಲಿ ಕಾನೂನು-ವ್ಯವಸ್ಥೆ ಕುಸಿಯಿತು ಎಂದು ಅಶೋಕ್ ಅವರು ಆಕ್ರೋಶ ವ್ಯಕ್ತಪಡಿಸಿದರು. “ಮುಖ್ಯಮಂತ್ರಿ ಸಿದ್ದರಾಮಯ್ಯ ಮಜಾವಾದಿ ಆಗಿದ್ದಾರೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅಧಿಕಾರ ದುರ್ಬಳಕೆ ಮಾಡುತ್ತಿದ್ದಾರೆ. ಗೃಹಸಚಿವ ಡಾ. ಜಿ. ಪರಮೇಶ್ವರ ಅವರೇ ಗತಿ! ಏನು ಕೇಳಿದರೂ ‘ಗೊತ್ತಿಲ್ಲ, ಕೇಳುತ್ತೇನೆ’ ಎಂದು ಹೇಳುತ್ತಾರೆ” ಎಂದು ವ್ಯಂಗ್ಯಾಸ್ತ್ರ ಬೀರಿದರು.
ಕಾನೂನು ಮತ್ತು ಸುವ್ಯವಸ್ಥೆ ಇಲ್ಲದ ರಾಜ್ಯವೇ ಕರ್ನಾಟಕವಾಗಿದ್ದು, ನಿತ್ಯ ಕೊಲೆ, ಸುಲಿಗೆ, ಅತ್ಯಾಚಾರ ಸೇರಿದಂತೆ ಅಪರಾಧಗಳು ನಡೆಯುತ್ತಲೇ ಇವೆ. ಸರ್ಕಾರ ಸೂಕ್ಷ್ಮತೆಯಿಲ್ಲದೆ ಅಧಿಕಾರ ನಡೆಸುತ್ತಿದೆ ಎಂದು ಅವರು ಆಕ್ಷೇಪಿಸಿದರು.
ಸ್ಥಳೀಯ
Mysuru-ಮೈಸೂರು ಕಂಬಳಕ್ಕೆ ಆಗಮಿಸಲಿರುವ ಕೋಣಗಳಿಗೆ ಕುಶಾಲನಗರದಲ್ಲಿ ವಿಶ್ರಾಂತಿಗೆ ವ್ಯವಸ್ಥೆ – ಶಾಸಕರಾದ ಅಶೋಕ್ ರೈ ಮಂಥರ್ ಗೌಡ ನೇತೃತ್ವದಲ್ಲಿ ಸಭೆ
ಮೈಸೂರಿನಲ್ಲಿ ನಡೆಯಲಿರುವ ಕಂಬಳಕ್ಕೆ ಆಗಮಿಸುವ ಕೋಣಗಳಿಗೆ ಕುಶಾಲನಗರದಲ್ಲಿ ಸೂಕ್ತ ವಿಶ್ರಾಂತಿ ಹಾಗೂ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲು ನಿಟ್ಟಿನಲ್ಲಿ ಪೂರ್ವಸಿದ್ಧತಾ ಸಭೆ ನಡೆಯಿತು.
ಕುಶಾಲನಗರ: ಮೈಸೂರಿನಲ್ಲಿ ನಡೆಯಲಿರುವ ಕಂಬಳಕ್ಕೆ ಆಗಮಿಸುವ ಕೋಣಗಳಿಗೆ ಕುಶಾಲನಗರದಲ್ಲಿ ಸೂಕ್ತ ವಿಶ್ರಾಂತಿ ಹಾಗೂ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲು ನಿಟ್ಟಿನಲ್ಲಿ ಪೂರ್ವಸಿದ್ಧತಾ ಸಭೆ ನಡೆಯಿತು.
ಕುಶಾಲನಗರ ಪುರಸಭೆ ಸಭಾಂಗಣದಲ್ಲಿ ನಡೆದ ಸಭೆಯು ಮೈಸೂರು ಕಂಬಳದ ಅಧ್ಯಕ್ಷ ಹಾಗೂ ಶಾಸಕ ಅಶೋಕ್ ಕುಮಾರ್ ರೈ ಮತ್ತು ಮಡಿಕೇರಿ ಶಾಸಕ ಮಂಥರ್ ಗೌಡ ಅವರ ನೇತೃತ್ವದಲ್ಲಿ ನಡೆಯಿತು.
ಕಂಬಳ ಕೋಣಗಳಿಗೆ ಪ್ರಯಾಣದ ಬಳಿಕ ವಿಶ್ರಾಂತಿ, ಆರೈಕೆ ಸೇರಿದಂತೆ ಅಗತ್ಯ ಸೌಲಭ್ಯಗಳನ್ನು ಒದಗಿಸುವ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು.
ಸಭೆಯಲ್ಲಿ ರಾಜ್ಯ ಕಂಬಳ ಅಧ್ಯಕ್ಷ ಬೆಳಪು ದೇವಿಪ್ರಸಾದ್ ಶೆಟ್ಟಿ ಹಾಗೂ ಮುರಳೀಧರ ರೈ ಮಠಂತಬೆಟ್ಟು ಉಪಸ್ಥಿತರಿದ್ದರು.
ರಾಜಕೀಯ
U.T. Khader-₹86ರ ಔಷಧಕ್ಕೆ ₹4,528; ಆಸ್ಪತ್ರೆಗಳಲ್ಲಿ ದುಬಾರಿ ದರಕ್ಕೆ ಔಷಧಗಳ ಮಾರಾಟ – ಆಸ್ಪತ್ರೆಗಳಲ್ಲಿ ಲ್ಯಾಂಡಿಂಗ್ ಮತ್ತು ಮಾರಾಟ ದರ ಪಟ್ಟಿ ಪ್ರಕಟಿಸಲು ಕೇಂದ್ರ ಸರ್ಕಾರ ಕ್ರಮ ಕೈಗೊಳ್ಳಬೇಕು : ಯು.ಟಿ ಖಾದರ್
ಆಸ್ಪತ್ರೆಗಳಲ್ಲಿ ಮಾರಾಟವಾಗುತ್ತಿರುವ ಕ್ಯಾನ್ಸರ್ ಸೇರಿದಂತೆ ವಿವಿಧ ಕ್ರಿಟಿಕಲ್ ಔಷಧಗಳ ಲ್ಯಾಂಡಿಂಗ್ ದರ ಮತ್ತು ಮಾರಾಟ ದರದ ನಡುವೆ ಭಾರೀ ವ್ಯತ್ಯಾಸ ಕಂಡುಬಂದಿದೆ ಎಂದು ಆರೋಗ್ಯ ಸಚಿವ ಯು.ಟಿ. ಖಾದರ್ ತಿಳಿಸಿದ್ದಾರೆ.
ಬೆಂಗಳೂರು: ಆಸ್ಪತ್ರೆಗಳಲ್ಲಿ ಮಾರಾಟವಾಗುತ್ತಿರುವ ಕ್ಯಾನ್ಸರ್ ಸೇರಿದಂತೆ ವಿವಿಧ ಕ್ರಿಟಿಕಲ್ ಔಷಧಗಳ ಲ್ಯಾಂಡಿಂಗ್ ದರ ಮತ್ತು ಮಾರಾಟ ದರದ ನಡುವೆ ಭಾರೀ ವ್ಯತ್ಯಾಸ ಕಂಡುಬಂದಿದೆ ಎಂದು ಆರೋಗ್ಯ ಸಚಿವ ಯು.ಟಿ. ಖಾದರ್ ತಿಳಿಸಿದ್ದಾರೆ.
ಬರೊಬ್ಬರಿ ಶೇ.5000 ರಷ್ಟು ದುಬಾರಿ ದರಕ್ಕೆ ಮಾರಾಟ ಮಾಡಲಾಗುತ್ತಿದೆ ಎಂಬ ಆಘಾತಕಾರಿ ಅಂಕಿ-ಅಂಶಗಳನ್ನು ಆರೋಗ್ಯ ಸಚಿವ ಯು.ಟಿ. ಖಾದರ್ ಬಿಚ್ಚಿಟ್ಟಿದ್ದಾರೆ
ಆಹಾರ ಸುರಕ್ಷತೆ ಹಾಗೂ ಔಷಧ ನಿಯಂತ್ರಣ ಅಧಿಕಾರಿಗಳು ವಿವಿಧ ಆಸ್ಪತ್ರೆಗಳಲ್ಲಿ ನಡೆಸಿದ ಪರಿಶೀಲನೆ ವೇಳೆ ಔಷಧಗಳನ್ನು ಲ್ಯಾಂಡಿಂಗ್ ದರಕ್ಕಿಂತ ಹಲವು ಪಟ್ಟು ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿರುವುದು ಬೆಳಕಿಗೆ ಬಂದಿದೆ ಎಂದು ಸಚಿವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಪ್ರತಿ ಆಸ್ಪತ್ರೆ, ಫಾರ್ಮಾಸಿಗಳು ಔಷಧಗಳ ಲ್ಯಾಂಡಿಂಗ್ ದರ ಹಾಗೂ ಮಾರಾಟ ದರವನ್ನು ಪ್ರತ್ಯೇಕವಾಗಿ ಪಟ್ಟಿ ಮಾಡಿ ಬಹಿರಂಗ ಮಾಡಬೇಕು. ಈ ಬಗ್ಗೆ ಕೇಂದ್ರ ಸರ್ಕಾರ ಕಾನೂನು ರೂಪಿಸಬೇಕು. ದರ ನಿಯಂತ್ರಿಸಲು ರಾಜ್ಯಕ್ಕೆ ಅಧಿಕಾರ ಇಲ್ಲ. ಹೀಗಾಗಿ ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯಲಾಗಿದೆ ಎಂದರು.
ಅಜಗಜಾಂತರ ವ್ಯತ್ಯಾಸ (ರೂಗಳಲ್ಲಿ)
ಔಷಧ- ಲ್ಯಾಂಡಿಂಗ್ ದರ – ಎಂಆರ್‌ಪಿ
ಗುಫೋಲ್-86- 4,528
ಗುಫಿಸೈಕ್ಲೈನ್-50 ಇಂಜೆಕ್ಷನ್ – 160-7,110
ಟೆರ್ಲಿಟಿಸ್-118-4,416
ಟ್ಯಾಕ್ಸೋಕೇರ್-120 ಎಂಜಿ-1,000-21,617
ಕ್ಯಾನ್‌ಮ್ಯಾಬ್ 440 ಎಂಜಿ-6,600-57,457
ಬೆವಾಟಸ್ 400 ಎಂಜಿ-5,850-62,690
ಸೈಟ್ಯಾಕ್ಸ್ 100 (ಕ್ಯಾನ್ಸರ್ ಔಷಧ)-342-3,836
ನೆಬ್ಯುಲೈಸರ್ ಮಾಸ್ಕ್-44.50-950
ಐವಿಸೆಟ್-14.75-295
ಪಾಲಿಸೇಫಿಟಿ ಪಿಆರ್‌ಒ ಕ್ಯಾನುಲಾ-33.21-548
ಅಂತರ ರಾಜ್ಯ
Shivraj Singh Chauhan-ಕರ್ನಾಟಕ ಸೇರಿ 5 ರಾಜ್ಯಗಳು ಬರಪೀಡಿತವೆಂದು ಘೋಷಣೆ : ಅ.3ಕ್ಕೆ ರಾಜ್ಯಕ್ಕೆ ಕೇಂದ್ರ ತಂಡ ಭೇಟಿ – ಶಿವರಾಜ್ ಸಿಂಗ್ ಚೌಹಾಣ್
ಕೇಂದ್ರ ಸರಕಾರವು ಈವರೆಗೆ ಕರ್ನಾಟಕ ಸೇರಿದಂತೆ ಐದು ರಾಜ್ಯಗಳು ಬರಪೀಡಿತವೆಂದು ಘೋಷಣೆ ಮಾಡಿದೆ ಹಾಗೂ ದೇಶದ ವಿವಿಧೆಡೆ ಅತಿಯಾದ ಮಳೆ ಹಾಗೂ ಪ್ರವಾಹದಿಂದಾಗಿ 6.11 ಲಕ್ಷ ಹೆಕ್ಟೇರ್ ಪ್ರದೇಶದ ಕೃಷಿಭೂಮಿ ಹಾನಿಯಾಗಿದೆ ಎಂದು ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರು ತಿಳಿಸಿದ್ದಾರೆ.
ಹೊಸದಿಲ್ಲಿ: ಕೇಂದ್ರ ಸರಕಾರವು ಈವರೆಗೆ ಕರ್ನಾಟಕ ಸೇರಿದಂತೆ ಐದು ರಾಜ್ಯಗಳು ಬರಪೀಡಿತವೆಂದು ಘೋಷಣೆ ಮಾಡಿದೆ ಹಾಗೂ ದೇಶದ ವಿವಿಧೆಡೆ ಅತಿಯಾದ ಮಳೆ ಹಾಗೂ ಪ್ರವಾಹದಿಂದಾಗಿ 6.11 ಲಕ್ಷ ಹೆಕ್ಟೇರ್ ಪ್ರದೇಶದ ಕೃಷಿಭೂಮಿ ಹಾನಿಯಾಗಿದೆ ಎಂದು ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರು ತಿಳಿಸಿದ್ದಾರೆ.
ಹೊಸದಿಲ್ಲಿಯಲ್ಲಿ ನಡೆದ ‘ರಬಿ (ಹಿಂಗಾರು ಬೆಳೆ) 2026-27’ ರಾಷ್ಟ್ರೀಯ ಕೃಷಿ ಸಮ್ಮೇಳನದ ವೇಳೆ ಮಾತನಾಡಿದ ಅವರು, ಕರ್ನಾಟಕ, ಮಹಾರಾಷ್ಟ್ರ, ತೆಲಂಗಾಣ, ಆಂಧ್ರಪ್ರದೇಶದ ಕೆಲವು ಭಾಗಗಳು ಹಾಗೂ ರಾಜಸ್ಥಾನದ ಪ್ರದೇಶಗಳಲ್ಲಿ ಬರ ಪರಿಸ್ಥಿತಿ ಕುರಿತು ಕಳವಳ ವ್ಯಕ್ತಪಡಿಸಿದರು.
ಕರ್ನಾಟಕ ಸರ್ಕಾರದ ಮನವಿ ಹಿನ್ನೆಲೆಯಲ್ಲಿ ರಾಜ್ಯದಲ್ಲಿನ ಬರ ಪರಿಸ್ಥಿತಿ ಹಾಗೂ ಬೆಳೆ ಹಾನಿಯ ವಾಸ್ತವ ಸ್ಥಿತಿಯನ್ನು ಪರಿಶೀಲಿಸಲು ಕೇಂದ್ರ ತಂಡವು ಅಕ್ಟೋಬರ್ 3ರಂದು ಕರ್ನಾಟಕಕ್ಕೆ ಭೇಟಿ ನೀಡಲಿದೆ ಎಂದು ಚೌಹಾಣ್ ತಿಳಿಸಿದರು.
ದೇಶದ ಇತರ ಭಾಗಗಳಲ್ಲಿನ ಬರ ಪರಿಸ್ಥಿತಿಯನ್ನೂ ಶೀಘ್ರದಲ್ಲೇ ಪರಿಶೀಲಿಸಲಾಗುವುದು. ಬರಪೀಡಿತ ಪ್ರದೇಶಗಳಿಗೆ ತಾವು ವೈಯಕ್ತಿಕವಾಗಿ ಭೇಟಿ ನೀಡುವುದರ ಜೊತೆಗೆ, ಆಯಾ ರಾಜ್ಯ ಸರ್ಕಾರಗಳೊಂದಿಗೆ ನಿರಂತರ ಸಂಪರ್ಕದಲ್ಲಿರುವುದಾಗಿ ಸಚಿವರು ಹೇಳಿದರು.
ರೈತರಿಗೆ ನೆರವಿನ ಭರವಸೆ
ಬರ ಪರಿಸ್ಥಿತಿಯ ನಡುವೆಯೂ ಕೃಷಿ ಚಟುವಟಿಕೆ ಮುಂದುವರಿಸುತ್ತಿರುವ ರೈತರಿಗೆ ಕೇಂದ್ರ ಸರ್ಕಾರ ನೆರವು ನೀಡಲಿದೆ ಎಂದು ಚೌಹಾಣ್ ಭರವಸೆ ನೀಡಿದರು. ಕೃಷಿಭೂಮಿ ಪಾಳು ಬೀಳದಂತೆ ನೋಡಿಕೊಳ್ಳುವುದು ಸರ್ಕಾರದ ತಕ್ಷಣದ ಉದ್ದೇಶವಾಗಿದೆ ಎಂದರು.
ನೀರಿನ ಲಭ್ಯತೆ ಹಾಗೂ ಮಣ್ಣಿನ ತೇವಾಂಶಕ್ಕೆ ಅನುಗುಣವಾಗಿ ಬೆಳೆ ಆಯ್ಕೆ ಮಾಡುವಂತೆ ರಾಜ್ಯಗಳಿಗೆ ಸೂಚಿಸಲಾಗಿದ್ದು, ಕಡಿಮೆ ನೀರು ಅಗತ್ಯವಿರುವ ಬೆಳೆಗಳು ಹಾಗೂ ಕಡಿಮೆ ಅವಧಿಯಲ್ಲಿ ಕಟಾವಿಗೆ ಬರುವ ತಳಿಗಳಿಗೆ ಆದ್ಯತೆ ನೀಡುವಂತೆ ಸಲಹೆ ನೀಡಲಾಗಿದೆ.
ಶೇ.12.3ರಷ್ಟು ಮಳೆ ಕೊರತೆ
ಎಲ್‌ನೀನೊ ಪರಿಣಾಮ ಸೇರಿದಂತೆ ಹವಾಮಾನ ವೈಪರೀತ್ಯಗಳಿಂದಾಗಿ ದೇಶದಲ್ಲಿ ಮುಂಗಾರು ಮಳೆಯ ಕೊರತೆ ಉಂಟಾಗಿದೆ. ಮುಂಗಾರು ಋತುವಿನ ಅಂತ್ಯದ ವೇಳೆಗೆ ದೇಶದಲ್ಲಿ ಸಾಮಾನ್ಯಕ್ಕಿಂತ ಸುಮಾರು ಶೇ.12.3ರಷ್ಟು ಮಳೆ ಕಡಿಮೆಯಾಗಿದೆ ಎಂದು ಸಚಿವರು ತಿಳಿಸಿದರು.
ಮಳೆ ಕೊರತೆಯ ಪರಿಣಾಮ 2026-27ರ ಖಾರಿಫ್ ಬೆಳೆಗಳ ಒಟ್ಟು ಬಿತ್ತನೆ ಪ್ರದೇಶದಲ್ಲಿ ಸುಮಾರು ಶೇ.1ರಷ್ಟು ಇಳಿಕೆ ಕಂಡುಬಂದಿದೆ. ಭತ್ತದ ಬಿತ್ತನೆ ಪ್ರದೇಶದಲ್ಲಿ 16.32 ಲಕ್ಷ ಹೆಕ್ಟೇರ್‌ಗಳಷ್ಟು ಇಳಿಕೆಯಾಗಿದ್ದು, ಜೋಳ, ಸೋಯಾಬೀನ್ ಮತ್ತು ಹತ್ತಿ ಬೆಳೆಗಳ ವಿಸ್ತೀರ್ಣದಲ್ಲೂ ಕುಸಿತವಾಗಿದೆ.
ಇದಕ್ಕೆ ವಿರುದ್ಧವಾಗಿ ಉದ್ದು, ಬಾಜ್ರಾ, ಜೋಳ, ಎಳ್ಳು, ಸೂರ್ಯಕಾಂತಿ, ಹೆಸರು ಮತ್ತು ತೊಗರಿ ಸೇರಿದಂತೆ ಕೆಲವು ದ್ವಿದಳ ಧಾನ್ಯಗಳು ಹಾಗೂ ಸಿರಿಧಾನ್ಯಗಳ ಬಿತ್ತನೆ ಪ್ರದೇಶದಲ್ಲಿ ಏರಿಕೆ ಕಂಡುಬಂದಿದೆ.
ಕೇಂದ್ರ ಸರ್ಕಾರವು ರಬಿ ಹಂಗಾಮಿಗೆ ಅಗತ್ಯವಿರುವ ರಸಗೊಬ್ಬರ ಮತ್ತು ಬೀಜಗಳ ಲಭ್ಯತೆ ಖಚಿತಪಡಿಸಿಕೊಳ್ಳಲು ಕ್ರಮ ಕೈಗೊಂಡಿದ್ದು, ಬರಪೀಡಿತ ಪ್ರದೇಶಗಳಲ್ಲಿ ಪರಿಸ್ಥಿತಿಗೆ ಅನುಗುಣವಾಗಿ ಬೆಳೆ ಯೋಜನೆ ರೂಪಿಸುವಂತೆ ರಾಜ್ಯಗಳಿಗೆ ಸೂಚಿಸಿದೆ.


















