Connect with us

Uncategorized

ಅಕ್ರಮ ಗೋ ಸಾಗಾಟ ಶೂಟೌಟ್ : ಲಾರಿಯಿಂದ ಜಾನುವಾರು ಇಳಿಸಿದ ಪುತ್ತಿಲ – ಇನ್ಸ್ ಪೆಕ್ಟರ್‌ʼಗೆ ಚಾರ್ಜ್‌ ಮೆಮೊ

Published

on



Ad Widget

Ad Widget

Ad Widget

Ad Widget

ಪುತ್ತೂರು: ಈಶ್ವರಮಂಗಲ ಸಮೀಪದ ಬೆಳ್ಳಿಚಡವು ಅಕ್ರಮ ಗೋ ಸಾಗಾಟ ಪ್ರಕರಣದ ಕುರಿತು ಕಳೆದರೆಡು ದಿನಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದ ತಪ್ಪು ಮಾಹಿತಿಗಳಿಗೆ ಕೊನೆಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಸ್ಪಷ್ಟನೆ ನೀಡಿದ್ದಾರೆ. ಪುತ್ತಿಲ ಪರಿವಾರದ ಸಂಸ್ಥಾಪಕ ಅರುಣ್ ಪುತ್ತಿಲ ಅವರ ಪಾತ್ರದ ಕುರಿತು ಹುಟ್ಟಿಕೊಂಡಿದ್ದ ಗೊಂದಲಗಳಿಗೆ ತೆರೆ ಎಳೆದಿದ್ದು, ಘಟನೆ ನಡೆದ ಅಪರಾಧ ಸ್ಥಳವನ್ನು ರಾಜಕೀಯ ವೇದಿಕೆಯಾಗಲು ಅವಕಾಶ ನೀಡಿದ ಇನ್ಸ್ಪೆಕ್ಟರ್ ಗೆ ಚಾರ್ಜ್‌ ಮೆಮೊ ನೀಡಲಾಗುವುದು ಎಂದು ಖಡಕ್ ಎಚ್ಚರಿಕೆ ನೀಡಲಾಗಿದೆ.

Ad Widget

Ad Widget

Ad Widget

Ad Widget

ಅಕ್ಟೋಬರ್ 22ರಂದು ನಡೆದ ಈ ಘಟನೆ ರಾಜ್ಯಾದ್ಯಂತ ಗಮನ ಸೆಳೆದಿತ್ತು. ಬೆಳ್ಳಿಚಡವು ಬಳಿ ಅಕ್ರಮ ಗೋ ಸಾಗಾಟದ ಲಾರಿಯನ್ನು ತಡೆದು, ಪೊಲೀಸರು ಆರೋಪಿ ಲಾರಿ ಚಾಲಕಮ ಕಾಲಿಗೆ ಗುಂಡು ಹಾರಿಸಿ 12 ಜಾನುವಾರುಗಳನ್ನು ರಕ್ಷಿಸಿದ್ದರು. ಆದರೆ, ಈ ಕಾರ್ಯಾಚರಣೆಯಲ್ಲಿ ಸಂಘಟನೆಗಳ ಪಾತ್ರವೇನು, ಅರುಣ್ ಪುತ್ತಿಲ ಅವರ ಪಾತ್ರವೇನು ಎಂಬ ಬಗ್ಗೆ ವ್ಯಾಪಕ ಚರ್ಚೆಗಳು ನಡೆಯುತ್ತಿದ್ದವು. ಇದೀಗ ಎಸ್ಪಿ ಕಚೇರಿಯಿಂದ ಬಂದಿರುವ ಅಧಿಕೃತ ಪ್ರಕಟಣೆಯು ಎಲ್ಲ ಗೊಂದಲಗಳಿಗೆ ತೆರೆ ಎಳೆದಿದೆ.

Ad Widget

Ad Widget

Ad Widget alt="Ad Widget"/>

Ad Widget

ತನಿಖೆ ವರ್ಗಾವಣೆ

Ad Widget

Ad Widget <> Ad Widget

ಪೊಲೀಸ್ ಇಲಾಖೆಯು ನೀಡಿರುವ ಸ್ಪಷ್ಟನೆಗಳ ಪ್ರಕಾರ, ಪೊಲೀಸರು ಅನಧಿಕೃತ ಗೋ ಸಾಗಾಟದ ವಾಹನವನ್ನು ಹಿಂಬಾಲಿಸಿ ನಿಲ್ಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ವಾಹನ ನಿಲ್ಲಿಸುವಲ್ಲಿ ಯಾವುದೇ ಸಂಘ ಸಂಸ್ಥೆಯ ಪಾತ್ರವಿರಲಿಲ್ಲ ಅಥವಾ ಪೊಲೀಸರು ಅಂತಹ ಯಾವುದೇ ಸಂಸ್ಥೆಯ ನೆರವನ್ನು ಪಡೆದಿಲ್ಲ ಎಂದು ಖಡಾಖಂಡಿತವಾಗಿ ತಿಳಿಸಿದೆ. ಪ್ರಕರಣದ ನ್ಯಾಯಸಮ್ಮತ ತನಿಖೆಯನ್ನು ಖಚಿತಪಡಿಸಿಕೊಳ್ಳಲು, ಘಟನೆ ನಡೆದ ಮರುದಿನವೇ ಪ್ರಕರಣವನ್ನು ಪುತ್ತೂರು ಉಪವಿಭಾಗದ ವ್ಯಾಪ್ತಿಯಿಂದ ಹೊರಗೆ ವರ್ಗಾಯಿಸಲಾಗಿದೆ.



Ad Widget

ಪ್ರಕರಣದಲ್ಲಿ ಅರುಣ್ ಪುತ್ತಿಲ ಪಾತ್ರ

Ad Widget

Ad Widget

ಘಟನೆಯ ನಂತರ ಪಿಎಸ್ಐ ಬೆಳ್ಳಾರೆ ಮತ್ತು ಇತರೆ ಸಿಬ್ಬಂದಿ ಘಟನಾ ಸ್ಥಳದಲ್ಲಿದ್ದರು. ಉಳಿದ ಅಧಿಕಾರಿಗಳು ತನಿಖಾ ಕ್ರಮದಲ್ಲಿ ತೊಡಗಿಸಿಕೊಂಡಿದ್ದರು ಹಾಗೂ ಗಾಯಗೊಂಡ ಆರೋಪಿಯನ್ನು ಆಸ್ಪತ್ರೆಗೆ ಸಾಗಿಸುವಲ್ಲಿ ಸಹಕರಿಸುತ್ತಿದ್ದರು. ಈ ಸಂದರ್ಭದಲ್ಲಿ, ಅರುಣ್ ಕುಮಾರ್ ಪುತ್ತಿಲ ಅವರು ಘಟನಾ ಸ್ಥಳಕ್ಕೆ ಆಗಮಿಸಿ, ವಾಹನದಲ್ಲಿದ್ದ ಜಾನುವಾರುಗಳಲ್ಲಿ ಒಂದು ಸತ್ತಿರುವುದನ್ನು ಗಮನಿಸಿದ್ದಾರೆ. ಉಳಿದ ಜಾನುವಾರುಗಳಿಗೆ ಇನ್ನಷ್ಟು ತೊಂದರೆಯಾಗದಂತೆ ಅವುಗಳನ್ನು ಇಳಿಸಲು ಅನುಮತಿ ಕೇಳಿದ್ದಾರೆ. ಈ ಸಂದರ್ಭದಲ್ಲಿ, ಕಾನ್ಸ್ಟೇಬಲ್ ಮೂಲಕ ಇನ್ಸ್ಪೆಕ್ಟರ್ಗೆ ವಿಷಯ ತಿಳಿಸುವಾಗ, ಅರುಣ್ ಕುಮಾರ್ ಪುತ್ತಿಲ ಅವರು ಕಾನ್ಸ್ಟೇಬಲ್ ಅವರಿಂದ ಮೊಬೈಲ್ ಪಡೆದು ಇನ್ಸ್ಪೆಕ್ಟರ್ ಜೊತೆ ಮಾತನಾಡಿದ್ದಾರೆ.

ಜಾನುವಾರುಗಳ ಇನ್ನಷ್ಟು ಸಾವನ್ನು ತಪ್ಪಿಸುವ ಉದ್ದೇಶದಿಂದ ಇನ್ಸ್ಪೆಕ್ಟರ್ ಅನುಮತಿ ನೀಡಿದ್ದಾರೆ ಎಂದು ತನಿಖೆಯಿಂದ ತಿಳಿದುಬಂದಿದೆ. ನಂತರ ಪೊಲೀಸರು, ಸ್ಥಳೀಯರು ಹಾಗೂ ಅರುಣ್ ಕುಮಾರ್ ಪುತ್ತಿಲ ಅವರು ಜಾನುವಾರುಗಳನ್ನು ವಾಹನದಿಂದ ಇಳಿಸುವ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ ಎಂದು ಪ್ರಕಟಣೆ ವಿವರಿಸಿದೆ.

ಇನ್ಸ್ಪೆಕ್ಟರ್ ಅವರ ನಿರ್ಧಾರದ ಕುರಿತು ಪ್ರಸ್ತಾಪಿಸಿರುವ ಇಲಾಖೆಯು, ಜಾನುವಾರುಗಳ ಸಂರಕ್ಷಣೆಯ ದೃಷ್ಟಿಯಿಂದ ಪೊಲೀಸ್ ಇನ್ಸ್ಪೆಕ್ಟರ್ ಅನುಮತಿ ನೀಡಿದ್ದು ಕಂಡುಬಂದಿದೆಯಾದರೂ, ಈ ಪ್ರಕರಣದಲ್ಲಿ ಯಾವುದೇ ಧಾರ್ಮಿಕ ಸಂಘಟನೆ ಅಥವಾ ವ್ಯಕ್ತಿಯೊಂದಿಗೆ ಪೊಲೀಸರ ಯಾವುದೇ ಸಹಭಾಗಿತ್ವ ಅಥವಾ ದುರುದ್ದೇಶ ಕಂಡುಬಂದಿಲ್ಲ ಎಂದು ಸ್ಪಷ್ಟಪಡಿಸಿದೆ.

ಆದರೆ, ದೂರವಾಣಿಯಲ್ಲಿ ಮಾತನಾಡುವಾಗ ಸೂಕ್ತ ಮುನ್ನೆಚ್ಚರಿಕೆ ವಹಿಸದೆ, ಅಪರಾಧ ಸ್ಥಳವನ್ನು ರಾಜಕೀಯ ವೇದಿಕೆಯಾಗಿ ಪರಿವರ್ತಿಸಲು ಅವಕಾಶ ನೀಡಿದ ಇನ್ಸ್ಪೆಕ್ಟರ್ ಅವರ ನಿರ್ಧಾರ ತಪ್ಪಾಗಿದೆ ಎಂದು ಇಲಾಖೆ ಅಭಿಪ್ರಾಯಪಟ್ಟಿದೆ. ಈ ಹಿನ್ನೆಲೆಯಲ್ಲಿ, ಸಂಬಂಧಪಟ್ಟ ಇನ್ಸ್ಪೆಕ್ಟರ್ಗೆ ಚಾರ್ಜ್‌ಮೆಮೊ ನೀಡಲಾಗುವುದು ಎಂದು ಎಸ್ಪಿ ಕಚೇರಿ ತಿಳಿಸಿದೆ. ಮುಂದಿನ ದಿನಗಳಲ್ಲಿ ಅಪರಾಧ ಸ್ಥಳವನ್ನು ರಾಜಕೀಯ ಉದ್ದೇಶಗಳಿಗೆ ಬಳಸಿಕೊಳ್ಳದಂತೆ ತಡೆಯಲು ಸೂಕ್ತ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದೂ ಇಲಾಖೆ ಭರವಸೆ ನೀಡಿದೆ.

ಅಂತಿಮವಾಗಿ, ಈ ಘಟನೆಯನ್ನು ಯಾರಾದರೂ ವಿಮರ್ಶೆ ಮಾಡಬಹುದಾದರೂ, ಸತ್ಯವನ್ನು ತಿರುಚಿ, ಸುಳ್ಳು ನಿರೂಪಣೆಗಳನ್ನು ಸೃಷ್ಟಿಸಿ ಪ್ರಚಾರಕ್ಕೆ ಬಳಸಿಕೊಳ್ಳುವುದು ಕಂಡುಬಂದಲ್ಲಿ ಅಂತಹವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಪೊಲೀಸ್ ಇಲಾಖೆ ಖಡಕ್ ಎಚ್ಚರಿಕೆ ನೀಡಿದೆ. ಈ ಪ್ರಕಟಣೆ, ಪ್ರಕರಣದ ಪಾರದರ್ಶಕತೆ ಮತ್ತು ನೈಜತೆಯನ್ನು ಸಾರುವುದರ ಮೂಲಕ ಹರಿದಾಡುತ್ತಿದ್ದ ಊಹಾಪೋಹಗಳಿಗೆ ತೆರೆ ಎಳೆದಿದೆ.

Ad Widget
Click to comment

Leave a Reply

Uncategorized

Puttur Piligobbu Season-4 : ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರೀತಮ್ ಜೆ. ಗೌಡ ಪುತ್ತೂರುದ ಪಿಲಿಗೊಬ್ಬು ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಆಗಮನ

Published

on



Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget

ಪುತ್ತೂರು: ವಿಜಯಸಾಮ್ರಾಟ್ ಚಾರಿಟೇಬಲ್ ಟ್ರಸ್ಟ್ (ರಿ.), ಪುತ್ತೂರು ಇದರ ಆಶ್ರಯದಲ್ಲಿ ಅಕ್ಟೋಬರ್ 17ರಂದು ಪುತ್ತೂರು ಮಹಾತೋಭಾರ ಶ್ರೀ ಮಹಾಲಿಂಗೇಶ್ವರ ದೇವಾಲಯದ ವಠಾರದಲ್ಲಿ ನಡೆಯಲಿರುವ ‘ಪುತ್ತೂರುದ ಪಿಲಿಗೊಬ್ಬು-2026 ಸೀಸನ್-4’ ಕಾರ್ಯಕ್ರಮಕ್ಕೆ ಹಾಸನ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರು ಹಾಗೂ ಬಿಜೆಪಿ ಕರ್ನಾಟಕದ ರಾಜ್ಯ ಪ್ರಧಾನ ಕಾರ್ಯದರ್ಶಿ ಶ್ರೀ ಪ್ರೀತಮ್ ಜೆ. ಗೌಡ ಅವರು ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಕರಾವಳಿಯ ವಿಶಿಷ್ಟ ಸಾಂಸ್ಕೃತಿಕ ಪರಂಪರೆಯಾದ ಹುಲಿವೇಷ ಕಲೆಯನ್ನು ಉಳಿಸಿ ಬೆಳೆಸುವ ಹಾಗೂ ಯುವ ಸಮುದಾಯದಲ್ಲಿ ನಮ್ಮ ಸಂಸ್ಕೃತಿ, ಪರಂಪರೆ ಮತ್ತು ಕಲೆಯ ಬಗ್ಗೆ ಅಭಿಮಾನ ಮೂಡಿಸುವ ಉದ್ದೇಶದಿಂದ ಪುತ್ತೂರುದ ಪಿಲಿಗೊಬ್ಬು ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಸೀಸನ್-4 ಕಾರ್ಯಕ್ರಮದಲ್ಲಿ ಜಿಲ್ಲೆಯ ವಿವಿಧ ಭಾಗಗಳಿಂದ ಹುಲಿವೇಷ ತಂಡಗಳು ಭಾಗವಹಿಸಲಿದ್ದು, ವಿಶೇಷ ಆಕರ್ಷಣೆಯಾಗಿ ಫುಡ್ ಫೆಸ್ಟ್ ಕೂಡ ನಡೆಯಲಿದೆ.

Ad Widget

Ad Widget <> Ad Widget

ಪುತ್ತೂರು ಮಹಾಲಿಂಗೇಶ್ವರ ದೇವಾಲಯದ ವಠಾರದಲ್ಲಿ ನಡೆಯಲಿರುವ ಈ ಕಾರ್ಯಕ್ರಮವು ಧಾರ್ಮಿಕ, ಸಾಂಸ್ಕೃತಿಕ ಹಾಗೂ ಮನರಂಜನಾ ವೈಶಿಷ್ಟ್ಯಗಳನ್ನು ಒಳಗೊಂಡಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸುವ ನಿರೀಕ್ಷೆಯಿದೆ.



Ad Widget

ವಿಜಯಸಾಮ್ರಾಟ್ ಚಾರಿಟೇಬಲ್ ಟ್ರಸ್ಟ್‌ನ ಸ್ಥಾಪಕಾಧ್ಯಕ್ಷ ಶ್ರೀ ಸಹಜ್ ರೈ ಬಳಜ್ಜ ಅವರ ನೇತೃತ್ವದಲ್ಲಿ ಕಾರ್ಯಕ್ರಮದ ಸಿದ್ಧತೆಗಳು ಭರದಿಂದ ಸಾಗುತ್ತಿದ್ದು, ಪಿಲಿಗೊಬ್ಬು ಸಮಿತಿಯ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಕಾರ್ಯಕ್ರಮದ ಯಶಸ್ಸಿಗಾಗಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ.

Continue Reading

Uncategorized

ಶಿಕ್ಷೆಯ ವಿರುದ್ಧ ಹೈಕೋರ್ಟಿಗೆ ಅಪೀಲು; ನ್ಯಾಯಾಲಯಕ್ಕೆ ಗೈರು: ನೆಕ್ಕಿಲಾಡಿಯಲ್ಲಿ ಆರೋಪಿಯ ಬಂಧನ

Published

on



Ad Widget

Ad Widget

Ad Widget

Ad Widget

ಮಂಗಳೂರು, ಅ. 6: ನ್ಯಾಯಾಲಯದ ದಸ್ತಗಿರಿ ವಾರೆಂಟ್‌ ಜಾರಿಯಾಗಿದ್ದ ಶಿಕ್ಷೆಗೆ ಗುರಿಯಾಗಿದ್ದ ಆರೋಪಿಯನ್ನು ಮಂಗಳೂರು ಗ್ರಾಮಾಂತರ ಠಾಣೆ ಪೊಲೀಸರು ಮಂಗಳವಾರ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

Ad Widget

Ad Widget

Ad Widget

Ad Widget

ಪುತ್ತೂರು ತಾಲ್ಲೂಕಿನ ನೆಕ್ಕಿಲಾಡಿ ಗ್ರಾಮದ ಮೊಹಮ್ಮದ್ ಮುಸ್ತಫಾ ಅಲಿಯಾಸ್ ಮುಸ್ತಫಾ (36) ಬಂಧಿತ ಆರೋಪಿ.

Ad Widget

Ad Widget

Ad Widget alt="Ad Widget"/>

Ad Widget

ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಕಲಂ 394 ಜೊತೆಗೆ 34ರ ಅಡಿಯಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಮಂಗಳೂರು ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಲಯದಲ್ಲಿ ಆರೋಪಿಗೆ ಶಿಕ್ಷೆಯಾಗಿತ್ತು. ಈ ತೀರ್ಪಿನ ವಿರುದ್ಧ ಅರೋಪಿಯು ಕರ್ನಾಟಕ ಹೈಕೋರ್ಟ್‌ನಲ್ಲಿ ಕ್ರಿಮಿನಲ್ ಅಪೀಲು ಹಾಕಿದ್ದರು .

Ad Widget

Ad Widget <> Ad Widget

ಈ ಅಪೀಲು ದಾಖಲಿಸಿದ ಬಳಿಕ ಆರೋಪಿಯು ನ್ಯಾಯಾಲಯಕ್ಕೆ ನಿರಂತರವಾಗಿ ಗೈರು ಹಾಜರಾಗಿದ್ದರು. ಈ ಹಿನ್ನೆಲೆಯಲ್ಲಿ ಹೈಕೋರ್ಟ್‌ ದಸ್ತಗಿರಿ ವಾರೆಂಟ್‌ ಜಾರಿಗೊಳಿಸಿತ್ತು.ವಾರೆಂಟ್‌ ಆಧರಿಸಿ ಮಂಗಳವಾರ ಬೆಳಿಗ್ಗೆ ಪುತ್ತೂರು ತಾಲ್ಲೂಕಿನ 34ನೇ ನೆಕ್ಕಿಲಾಡಿ ಗ್ರಾಮದ ಸುಭಾಷ್‌ನಗರದಲ್ಲಿರುವ ಆರೋಪಿಯ ಮನೆಗೆ ತೆರಳಿದ ಪೊಲೀಸರು ಅವರನ್ನು ಬಂಧಿಸಿದರು.



Ad Widget

ಮಂಗಳೂರು ದಕ್ಷಿಣ ವಿಭಾಗದ ಎಸಿಪಿ ವಿಜಯ ಕ್ರಾಂತಿ ಅವರ ನಿರ್ದೇಶನದಂತೆ, ಮಂಗಳೂರು ಗ್ರಾಮಾಂತರ ಠಾಣೆ ಇನ್‌ಸ್ಪೆಕ್ಟರ್‌ ಡಿ.ಆರ್. ಮಂಜಪ್ಪ ಅವರ ನೇತೃತ್ವದಲ್ಲಿ ಪಿಎಸ್‌ಐ ಅರುಣ್ ಕುಮಾರ್ ಡಿ. ಹಾಗೂ ಸಿಬ್ಬಂದಿ ಕಾರ್ಯಾಚರಣೆ ನಡೆಸಿದರು. ಉಪ್ಪಿನಂಗಡಿ ಠಾಣೆಯ ಸಿಬ್ಬಂದಿಯೂ ಸಹಕರಿಸಿದರು.

Continue Reading

Uncategorized

Ashok Rai-ವಿದ್ಯಾರ್ಥಿಗಳ ಜೊತೆ ಸಂವಾದ ಕಾರ್ಯಕ್ರಮದಲ್ಲಿ ಸಮಸ್ಯೆಗಳ ಬಗ್ಗೆ ಮನವಿ ಸಲ್ಲಿಸಿದ್ದ ವಿದ್ಯಾರ್ಥಿಗಳು; ಕೆಎಸ್‌ಆರ್‌ಟಿಸಿ ಅಧಿಕಾರಿಗಳನ್ನು ಕರೆಸಿ ಚರ್ಚೆ ನಡೆಸಿದ ಶಾಸಕ ಅಶೋಕ್ ರೈ

Published

on



Ad Widget

Ad Widget

Ad Widget

Ad Widget

ಪುತ್ತೂರು ಶಾಸಕರಾದ ಅಶೋಕ್ ರೈ ಅವರು ಬೊಳುವಾರಿನಲ್ಲಿರುವ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳ ಜೊತೆ ಸಂವಾದ ಕಾರ್ಯಕ್ರಮ ಏರ್ಪಡಿಸಿದ್ದು ಈ ಕಾರ್ಯಕ್ರಮದಲ್ಲಿ ಕೆಲವೊಂದು ವಿದ್ಯಾರ್ಥಿಗಳು ಬಸ್ ಸಮಸ್ಯೆಯ ಬಗ್ಗೆ ಶಾಸಕರ ಗಮನಸೆಳೆದಿದ್ದರು. ವಿದ್ಯಾರ್ಥಿಗಳ ಸಮಸ್ಯೆಯ ಬಗ್ಗೆ ಅಧಿಕಾರಿಗಳ ಗಮನಕ್ಕೆ ತಂದು ಅದನ್ನು ಇತ್ಯರ್ಥಪಡಿಸುವುದಾಗಿ ಶಾಸಕರು ಭರವಸೆಯನ್ನು ನೀಡಿದ್ದರು.

Ad Widget

Ad Widget

Ad Widget

Ad Widget

ಪುತ್ತೂರು: ಅ.3ರಂದು ಪುತ್ತೂರು ಶಾಸಕರಾದ ಅಶೋಕ್ ರೈ ಅವರು ಬೊಳುವಾರಿನಲ್ಲಿರುವ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳ ಜೊತೆ ಸಂವಾದ ಕಾರ್ಯಕ್ರಮ ಏರ್ಪಡಿಸಿದ್ದು ಈ ಕಾರ್ಯಕ್ರಮದಲ್ಲಿ ಕೆಲವೊಂದು ವಿದ್ಯಾರ್ಥಿಗಳು ಬಸ್ ಸಮಸ್ಯೆಯ ಬಗ್ಗೆ ಶಾಸಕರ ಗಮನಸೆಳೆದಿದ್ದರು. ವಿದ್ಯಾರ್ಥಿಗಳ ಸಮಸ್ಯೆಯ ಬಗ್ಗೆ ಅಧಿಕಾರಿಗಳ ಗಮನಕ್ಕೆ ತಂದು ಅದನ್ನು ಇತ್ಯರ್ಥಪಡಿಸುವುದಾಗಿ ಶಾಸಕರು ಭರವಸೆಯನ್ನು ನೀಡಿದ್ದರು.

Ad Widget

Ad Widget

Ad Widget alt="Ad Widget"/>

Ad Widget

ಅ. 5ರಂದು ಸೋಮವಾರ ಕೆಎಸ್‌ಆರ್‌ಟಿಸಿ ಅಧಿಕಾರಿಗಳನ್ನು ಕಚೇರಿಗೆ ಕರೆಸಿದ ಶಾಸಕರು ಅವರ ಜೊತೆ ಸಮಸ್ಯೆಯ ಬಗ್ಗೆ ಚರ್ಚೆ ನಡೆಸಿ ಪರಿಹಾರ ಒದಗಿಸಿದ್ದಾರೆ.

Ad Widget

Ad Widget <> Ad Widget

ಮಹಿಳಾ ಕಾಲೇಜಿನ ವಿದ್ಯಾರ್ಥಿಗಳು ಹೆಚ್ಚಾಗಿ ಬಸ್ ಸಮಸ್ಯೆಯ ಬಗ್ಗೆ ಶಾಸಕರ ಗಮನಸೆಳೆದಿದ್ದರು. ಪುತ್ತೂರು ಬಸ್ ನಿಲ್ದಾಣದ ಬಳಿಯಿಂದ ನಾವು ಬೊಳುವಾರು ಕಾಲೇಜಿಗೆ ಬರುವಲ್ಲಿ ಮಂಗಳೂರಿಗೆ ತೆರಳುವ ಸ್ಟೇಟ್ ಬ್ಯಾಂಕ್ ಬಸ್ಸಿನವರು ನಮ್ಮನ್ನು ಹತ್ತಲು ಬಿಡುವುದಿಲ್ಲ, ಬೇರೆ ಬಸ್ಸಲ್ಲಿ ಹೋಗಿ ಎಂದು ಹೇಳುತ್ತಾರೆ. ವಿಟ್ಲ, ಉಪ್ಪಿನಂಗಡಿ ಬಸ್ಸಿಗೆ ಹತ್ತಿದರೆ ಅವರು ಕೂಡಾ ಅದೇ ರೀತಿ ಹೇಳುವುದರಿಂದ ನಮಗೆ ಸಮಸ್ಯೆಯಾಗುತ್ತಿದೆ ಈ ಬಗ್ಗೆ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿದ್ದರು.



Ad Widget

ಈ ವಿಚಾರವನ್ನು ಅಧಿಕಾರಿಗಳ ಗಮನಕ್ಕೆ ತಂದ ಶಾಸಕರು ನಗರದಲ್ಲಿ ಸಿಟಿ ಬಸ್ ಓಡಿಸುವ ಕೆಲಸ ಮಾಡಬೇಕು. ಬಸ್ಸಿನ ಕೊರತೆ ಇದ್ದಲ್ಲಿ ತಿಳಿಸಿ ಹೆಚ್ಚುವರಿ ಬಸ್ ತರಿಸುತ್ತೇನೆ. ಬೆಳಿಗ್ಗೆ ಕಾಲೇಜು ವಿದ್ಯಾರ್ಥಿಗಳು ಹೊರಡುವ ವೇಳೆ ಪುತ್ತೂರಿನಿಂದ ಬೊಳುವಾರು, ನೆಹರೂನಗರ, ದರ್ಬೆ, ಮುಕ್ರಂಪಾಡಿ ರೌಂಡ್ಸ್ ಆಗಿ ಬರುವ ವ್ಯವಸ್ಥೆಯನ್ನು ಮಾಡಬೇಕು ಇದರಿಂದ ನಗರದ ಕಾಲೇಜುಗಳಿಗೆ ತೆರಳುವ ವಿದ್ಯಾರ್ಥಿಗಳಿಗೆ ಪ್ರಯೋಜನವಾಗಲಿದೆ ಎಂದು ತಿಳಿಸಿದರು. ಇದಕ್ಕೆ ಪ್ರತಿಕ್ರಿಯೆ ನೀಡಿದ ಅಧಿಕಾರಿಗಳು ವಿದ್ಯಾರ್ಥಿಗಳ ಬೇಡಿಕೆಯನ್ನು ಈಡೇರಿಸುವುದಾಗಿ ಖಚಿತ ಭರವಸೆ ನೀಡಿದರು.ಉಳಿದಂತೆ ಪುಣಚಾ, ಪಾಣಾಜೆ, ಈಶ್ವರಮಂಗಲದ ವಿದ್ಯಾರ್ಥಿಗಳ ಸಮಸ್ಯೆ ಬಗ್ಗೆ ಚರ್ಚೆ ನಡೆಯಿತು.

Ad Widget

Ad Widget

ಸಂಪ್ಯದಲ್ಲಿ ಬಸ್ ನಿಲ್ಲಿಸುತ್ತೇವೆ
ಸುಳ್ಯ ಕಡೆಯಿಂದ ಬರುವ ಬಸ್ಸುಗಳು ಸಂಪ್ಯದಲ್ಲಿ ಬಸ್ ನಿಲ್ಲಿಸುವುದೇ ಇಲ್ಲ. ಬಸ್ ಖಾಲಿ ಇದ್ದರೂ ನಿಲ್ಲಿಸುವುದಿಲ್ಲ . ಆ ಕಡೆಯಿಂದ ಇತರೆ ಬಸ್ಸುಗಳು ಫುಲ್ ಆಗಿರುತ್ತದೆ ಬಸ್ ನಿಲ್ಲಿಸುವ ವ್ಯವಸ್ಥೆ ಮಾಡಿ ಎಂದು ಶಾಸಕರಲ್ಲಿ ವಿದ್ಯಾರ್ಥಿಗಳು ಮನವಿ ಮಾದ್ದರು. ಈ ವಿಚಾರವನ್ನು ಅಧಿಕಾರಿಗಳ ಬಳಿ ಶಾಸಕರು ತಿಳಿಸಿದಾಗ ಸಂಪ್ಯದಲ್ಲಿ ನಾಳೆಯಿಂದಲೇ ಬಸ್ಸು ನಿಲ್ಲಿಸುವ ವ್ಯವಸ್ಥೆ ಮಾಡುವುದಾಗಿ ತಿಳಿಸಿದರು.

ಈ ವೇಳೆ ವಿಭಾಗೀಯ ನಿಯಂತ್ರಣಾಧಿಕಾರಿ ಹರಿಬಾಬು, ವಿಭಾಗೀಯ ಸಂಚಲನಾಧಿಕಾರಿ ಜೈಶಂತ್, ಡಿಪೋ ಮೆನೆಜರ್ ಸುಬ್ರಹ್ಮಣ್ಯ ಉಪಸ್ಥಿತರಿದ್ದರು.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading