ಮಂಗಳೂರು
Rain alert-ದಕ್ಷಿಣ ಕನ್ನಡದಲ್ಲಿ ವರುಣಾರ್ಭಟ : ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ
ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಶುಕ್ರವಾರದಿಂದ ಪ್ರಾರಂಭವಾದ ಸಾಮಾನ್ಯ ಮಳೆಯು ಸತತವಾಗಿ ಮುಂದುವರಿದಿದ್ದು, ಜನರ ದೈನಂದಿನ ಜೀವನದ ಮೇಲೆ ಪರಿಣಾಮ ಬೀರಿದೆ. ಭಾರತೀಯ ಹವಾಮಾನ ಇಲಾಖೆಯ ಪೂರ್ವಸೂಚನೆಯಂತೆ, ಮುಂದಿನ ನಾಲ್ಕೈದು ದಿನಗಳವರೆಗೆ ಮಳೆಯು ತಗ್ಗದೆ ಮುಂದುವರಿಯಲಿದ್ದು, ನವೆಂಬರ್ನ ಮೊದಲ ವಾರದವರೆಗೆ ಇದರ ಪ್ರಭಾವ ಕಾಣಿಸಲಿದೆ.
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಶುಕ್ರವಾರದಿಂದ ಪ್ರಾರಂಭವಾದ ಸಾಮಾನ್ಯ ಮಳೆಯು ಸತತವಾಗಿ ಮುಂದುವರಿದಿದ್ದು, ಜನರ ದೈನಂದಿನ ಜೀವನದ ಮೇಲೆ ಪರಿಣಾಮ ಬೀರಿದೆ. ಭಾರತೀಯ ಹವಾಮಾನ ಇಲಾಖೆಯ ಪೂರ್ವಸೂಚನೆಯಂತೆ, ಮುಂದಿನ ನಾಲ್ಕೈದು ದಿನಗಳವರೆಗೆ ಮಳೆಯು ತಗ್ಗದೆ ಮುಂದುವರಿಯಲಿದ್ದು, ನವೆಂಬರ್ನ ಮೊದಲ ವಾರದವರೆಗೆ ಇದರ ಪ್ರಭಾವ ಕಾಣಿಸಲಿದೆ.
ಸುಳ್ಯ, ಪುತ್ತೂರು, ಬೆಳ್ತಂಗಡಿ, ಬಂಟ್ವಾಳ, ಮೂಡುಬಿದಿರೆ ಮತ್ತು ಸುರತ್ಕಲ್ನಂತಹ ಗ್ರಾಮೀಣ ಪ್ರದೇಶಗಳಲ್ಲಿ ಮಧ್ಯಾಹ್ನದ ಬಳಿಕ ಮಳೆಯ ತೀವ್ರತೆ ಜಾಸ್ತಿಯಾಗಿದೆ. ಇದರಿಂದಾಗಿ ಕೆಲವು ಕಡೆ ಕೃಷಿ ಮತ್ತು ತೋಟಗಾರಿಕೆಗೆ ಹಾನಿಯಾಗಿದ್ದು, ಹಲವೆಡೆ ವಿದ್ಯುತ್ ಸರಬರಾಜಿನಲ್ಲಿ ಅಡಚಣೆ ಉಂಟಾಗಿದೆ.
ಪ್ರವಾಸಿಗರು, ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ
ಸಮುದ್ರದಲ್ಲಿ ಉಕ್ಕೇರಿಯಿರುವ ಹಿನ್ನೆಲೆಯಲ್ಲಿ ಮೀನುಗಾರಿಕೆ ಇಲಾಖೆಯು ಹಲವಾರು ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದೆ. ಅಕ್ಟೋಬರ್ 26ರವರೆಗೆ ಪ್ರವಾಸಿಗರು ಯಾವುದೇ ಕಾರಣಕ್ಕೂ ಸಮುದ್ರಕ್ಕೆ ಇಳಿಯಬಾರದೆಂದು ಸ್ಪಷ್ಟ ಸೂಚನೆ ನೀಡಲಾಗಿದೆ. ಅಕ್ಟೋಬರ್ 23ರಂದೇ ಪ್ರತಿಕೂಲ ಹವಾಮಾನದಿಂದಾಗಿ ಮೀನುಗಾರರಿಗೂ ಸಮುದ್ರಕ್ಕೆ ಇಳಿಯದಂತೆ ಸುತ್ತೋಲೆ ಹೊರಡಿಸಲಾಗಿದೆ. ಸುರತ್ಕಲ್ನಲ್ಲಿ ಮೀನುಗಾರರು ಈಗಾಗಲೇ ಕೆಲ ದಿನಗಳಿಂದ ಮೀನುಗಾರಿಕೆಯನ್ನು ನಿಲ್ಲಿಸಿದ್ದಾರೆ.
ಮುಂಜಾಗ್ರತೆಯಾಗಿ, ಸುರತ್ಕಲ್ ಲೈಟ್ಹೌಸ್ ಬೀಚ್ ಸುತ್ತಮುತ್ತ ಕರಾವಳಿ ರಕ್ಷಣಾ ಪಡೆ, ಪೊಲೀಸರು ಮತ್ತು ಗೃಹರಕ್ಷಕ ದಳದ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.
“ಮಳೆಗಾಲದ ನಿಯಮಗಳಂತೆ, ಸೆಪ್ಟೆಂಬರ್ 30ರವರೆಗಿನ ಆದೇಶದಂತೆಯೇ, ಪ್ರವಾಸಿಗರು ಎಲ್ಲೆಂದರಲ್ಲಿ ಸಮುದ್ರಕ್ಕೆ ಇಳಿಯುವಂತಿಲ್ಲ. ಮೀನುಗಾರಿಕಾ ದೋಣಿಗಳನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲು ಸೂಚನೆ ನೀಡಲಾಗಿದೆ,” ಎಂದು ಸಿಬ್ಬಂದಿ ತಿಳಿಸಿದ್ದಾರೆ. ಸಮುದ್ರದ ಉಕ್ಕೇರಿಯಿಂದ ಸ್ಥಳೀಯರು ಆತಂಕಗೊಂಡಿದ್ದಾರೆ.
ಕರಾವಳಿಯಲ್ಲಿ ಮಳೆ-ಗಾಳಿಯ ಆರ್ಭಟ: ಆಳ ಸಮುದ್ರ ಮೀನುಗಾರಿಕೆ ಸ್ಥಗಿತ
ಉತ್ತರ ಕನ್ನಡ ಜಿಲ್ಲೆಯ ಕರಾವಳಿಯಲ್ಲಿ ವಾಯುಭಾರ ಕುಸಿತದಿಂದಾಗಿ ಮಳೆ ಮತ್ತು ಗಾಳಿಯ ತೀವ್ರತೆ ಜಾಸ್ತಿಯಾಗಿದ್ದು, ಆಳ ಸಮುದ್ರ ಮೀನುಗಾರಿಕೆ ಸಂಪೂರ್ಣವಾಗಿ ಸ್ಥಗಿತಗೊಂಡಿದೆ. ಗುರುವಾರ ರಾತ್ರಿಯಿಂದಲೇ ಪ್ರತಿಕೂಲ ಹವಾಮಾನದಿಂದಾಗಿ ಪಶ್ಚಿಮ ಕರಾವಳಿಯ ನೂರಾರು ಮೀನುಗಾರಿಕಾ ದೋಣಿಗಳು ಸುರಕ್ಷತೆಗಾಗಿ ಕಾರವಾರಕ್ಕೆ ಮರಳಿವೆ. ಕರಾವಳಿಯಲ್ಲಿ ಗಂಟೆಗೆ 40-55 ಕಿ.ಮೀ. ವೇಗದಲ್ಲಿ ಬಿರುಗಾಳಿ ಬೀಸುತ್ತಿದ್ದು, ದಿನವಿಡೀ ಜಿಟಿಜಿಟಿ ಮಳೆ ಸುರಿಯುತ್ತಿದೆ. ಇದರಿಂದ ಸಮುದ್ರದಲ್ಲಿ ಅಲೆಗಳ ರಭಸ ಹೆಚ್ಚಾಗಿದ್ದು, ಮೀನುಗಾರಿಕೆಗೆ ತೆರಳಲು ಸಾಧ್ಯವಾಗದೆ ದೋಣಿಗಳು ತೀರಕ್ಕೆ ವಾಪಸಾಗಿವೆ.
ಕಾರವಾರ ಬಂದರಿನಲ್ಲಿ ದೋಣಿಗಳ ದಂಡು
ಕಾರವಾರದ ಬೈತಖೋಲ ಮೀನುಗಾರಿಕೆ ಬಂದರು ಮತ್ತು ವಾಣಿಜ್ಯ ಬಂದರು ಸುರಕ್ಷಿತ ತಾಣಗಳೆಂದು ಪರಿಗಣಿಸಲಾಗಿದೆ. ಆದ್ದರಿಂದ, ಉತ್ತರ ಕನ್ನಡ, ಉಡುಪಿಯ ಮಲ್ಪೆಯಿಂದ 45, ಮಂಗಳೂರಿನಿಂದ 8 ದೋಣಿಗಳು ಮತ್ತು ಕೇರಳದ ದೋಣಿಗಳು ಕಾರವಾರದಲ್ಲಿ ಆಶ್ರಯ ಪಡೆದಿವೆ. ಇದರಿಂದ ಬಂದರು ದೋಣಿಗಳಿಂದ ತುಂಬಿಹೋಗಿದೆ.
ದೀಪಾವಳಿಯ ಸಮಯದಲ್ಲಿ ಸಾಮಾನ್ಯವಾಗಿ ಉತ್ತಮ ಮೀನುಗಾರಿಕೆಯ ನಿರೀಕ್ಷೆಯಿರುತ್ತದೆ. ಆದರೆ, ಈ ವೇಳೆಗೆ ತೂಫಾನ್ನಿಂದಾಗಿ ಮೀನುಗಾರರಲ್ಲಿ ನಿರಾಸೆ ಮೂಡಿದೆ. ಹಬ್ಬಕ್ಕಾಗಿ ಊರಿಗೆ ಬಂದಿದ್ದ ಮೀನುಗಾರರು, ಹವಾಮಾನದ ವೈಪರೀತ್ಯದಿಂದ ಕೆಲಸಕ್ಕೆ ಮರಳಲಾಗದೆ ಮನೆಯಲ್ಲೇ ಉಳಿದಿದ್ದಾರೆ.
ಮೀನಿನ ಕೊರತೆ, ಅ. 28ರವರೆಗೆ ಎಚ್ಚರಿಕೆ
ಅಕ್ಟೋಬರ್ 25ರವರೆಗೆ ಘೋಷಿತವಾಗಿದ್ದ ಮಳೆ ಮತ್ತು ಗಾಳಿಯ ಎಚ್ಚರಿಕೆಯು ಈಗ ಅಕ್ಟೋಬರ್ 28ರವರೆಗೆ ಮುಂದುವರಿಯುವ ಸಾಧ್ಯತೆಯಿದೆ. ಆಳ ಸಮುದ್ರ ಮೀನುಗಾರಿಕೆಯ ಜೊತೆಗೆ ಸಾಂಪ್ರದಾಯಿಕ ಮೀನುಗಾರಿಕೆಗೂ ಅಡ್ಡಿಯಾಗಿರುವುದರಿಂದ, ಮಾರುಕಟ್ಟೆಯಲ್ಲಿ ಮೀನಿನ ಲಭ್ಯತೆ ಗಣನೀಯವಾಗಿ ಕಡಿಮೆಯಾಗಿದೆ.
ರೈತರಲ್ಲಿ ಆತಂಕ
ದಿನವಿಡೀ ಸುರಿಯುತ್ತಿರುವ ಜಿಟಿಜಿಟಿ ಮಳೆ ಮತ್ತು ಜೋರಾದ ಗಾಳಿಯಿಂದ ರೈತರಲ್ಲಿ ಆತಂಕ ಹೆಚ್ಚಾಗಿದೆ. ಕಟಾವಿಗೆ ಸಿದ್ಧವಾಗಿರುವ ಭತ್ತದ ಬೆಳೆ ಮಳೆಗೆ ಸಿಲುಕಿ ಹಾನಿಯಾಗುವ ಭೀತಿಯಿದೆ. ಗಾಳಿಯ ರಭಸಕ್ಕೆ ಭತ್ತದ ತೆನೆಗಳು ನೆಲಕ್ಕೆ ಬಾಗುತ್ತಿದ್ದು, “ಮೂರು-ನಾಲ್ಕು ತಿಂಗಳ ಶ್ರಮವು ಕೆಲವೇ ದಿನಗಳ ಮಳೆಯಿಂದ ನಾಶವಾಗುವ ಚಿಂತೆಯಿದೆ,” ಎಂದು ರೈತರು ತಮ್ಮ ಆತಂಕವನ್ನು ಹಂಚಿಕೊಂಡಿದ್ದಾರೆ.
ಮಂಗಳೂರು
Pugasarum-ಅಡಕೆ, ವೀಳ್ಯದೆಲೆಯ ‘ಪೂಗಸಾರಂ’ನಿಂದ ಕ್ಯಾನ್ಸರ್ ಬೆಳವಣಿಗೆಗೆ ಕಡಿವಾಣ? ಮಂಗಳೂರಿನ ವಿಜ್ಞಾನಿಗಳ ಸಂಶೋಧನೆಯಲ್ಲಿ ಮಹತ್ವದ ಅಂಶ ಪತ್ತೆ..!
ಅಡಕೆ ಮತ್ತು ವೀಳ್ಯದೆಲೆಯನ್ನು ಪ್ರಧಾನವಾಗಿ ಬಳಸಿ ತಯಾರಿಸಿದ ಸಂಯುಕ್ತ ಗಿಡಮೂಲಿಕೆ ಮಿಶ್ರಣವು ಕ್ಯಾನ್ಸರ್ ಬೆಳವಣಿಗೆಯನ್ನು ನಿಯಂತ್ರಿಸುವ ಸಾಮರ್ಥ್ಯ ಹೊಂದಿದೆ ಎಂಬ ಮಹತ್ವದ ಅಂಶವನ್ನು ದಕ್ಷಿಣ ಕನ್ನಡದ ವಿಜ್ಞಾನಿಗಳ ತಂಡ ನಡೆಸಿದ ಸಂಶೋಧನೆ ಬಹಿರಂಗಪಡಿಸಿದೆ.
ಮಂಗಳೂರು: ಅಡಕೆ ಮತ್ತು ವೀಳ್ಯದೆಲೆಯನ್ನು ಪ್ರಧಾನವಾಗಿ ಬಳಸಿ ತಯಾರಿಸಿದ ಸಂಯುಕ್ತ ಗಿಡಮೂಲಿಕೆ ಮಿಶ್ರಣವು ಕ್ಯಾನ್ಸರ್ ಬೆಳವಣಿಗೆಯನ್ನು ನಿಯಂತ್ರಿಸುವ ಸಾಮರ್ಥ್ಯ ಹೊಂದಿದೆ ಎಂಬ ಮಹತ್ವದ ಅಂಶವನ್ನು ದಕ್ಷಿಣ ಕನ್ನಡದ ವಿಜ್ಞಾನಿಗಳ ತಂಡ ನಡೆಸಿದ ಸಂಶೋಧನೆ ಬಹಿರಂಗಪಡಿಸಿದೆ.
ಅಳಿಕೆಯ ಜೆಡ್ಡು ಆಯುರ್ವೇದ ಸಂಶೋಧನಾ ಕೇಂದ್ರ ಹಾಗೂ ಮಂಗಳೂರಿನ ಅಡಕೆ ಸಂಶೋಧನೆ ಮತ್ತು ಅಭಿವೃದ್ಧಿ ಪ್ರತಿಷ್ಠಾನದ ವಿಜ್ಞಾನಿಗಳು ನಡೆಸಿದ ಈ ಅಧ್ಯಯನದಲ್ಲಿ ‘ಪೂಗಸಾರಂ’ ಎಂಬ ಪಾಲಿಹರ್ಬಲ್ ಜೆಲ್ನ ಕ್ಯಾನ್ಸರ್ ವಿರೋಧಿ ಗುಣಗಳನ್ನು ಪರೀಕ್ಷಿಸಲಾಗಿದೆ. ಈ ಸಂಶೋಧನೆಯ ಫಲಿತಾಂಶಗಳನ್ನು ‘ಇಂಟರ್ನ್ಯಾಷನಲ್ ಜರ್ನಲ್ ಆಫ್ ಫಾರ್ಮಸಿ ರಿಸರ್ಚ್ ಆ್ಯಂಡ್ ಟೆಕ್ನಾಲಜಿ’ (IJPRFT) ವೈಜ್ಞಾನಿಕ ನಿಯತಕಾಲಿಕೆಯ 2026ರ ಜನವರಿ-ಜೂನ್ ಸಂಚಿಕೆಯಲ್ಲಿ ಪ್ರಕಟಿಸಲಾಗಿದೆ.
ಇಲಿಗಳ ಮೇಲಿನ ಪ್ರಯೋಗದಲ್ಲಿ ಸಕಾರಾತ್ಮಕ ಫಲಿತಾಂಶ
ಅಡಕೆ ಮತ್ತು ವೀಳ್ಯದೆಲೆಯೊಂದಿಗೆ ಇತರ ಏಳೆಂಟು ಔಷಧೀಯ ಸಸ್ಯಗಳ ಅಂಶಗಳನ್ನು ಸೇರಿಸಿ ಪೂಗಸಾರಂ ಎಂಬ ಜೆಲ್ ಸಿದ್ಧಪಡಿಸಲಾಗಿದೆ. ಇದರ ಪರಿಣಾಮಕಾರಿತ್ವವನ್ನು ಆರಂಭದಲ್ಲಿ ಯೆನಪೋಯ ವಿಶ್ವವಿದ್ಯಾಲಯದ ಪ್ರಯೋಗಾಲಯದಲ್ಲಿ ಕ್ಯಾನ್ಸರ್ ಕೋಶಗಳ ಮೇಲೆ ಪರೀಕ್ಷಿಸಲಾಗಿತ್ತು. ಬಳಿಕ ಇಲಿಗಳ ಮೇಲೆ ಪ್ರಯೋಗ ನಡೆಸಲಾಯಿತು.
ಪ್ರಯೋಗದ ಭಾಗವಾಗಿ ಇಲಿಗಳ ಕೆಳತುಟಿಗಳಲ್ಲಿ ಡಿಎಂಬಿಎ (DMBA) ಎಂಬ ಕ್ಯಾನ್ಸರ್ಕಾರಕ ರಾಸಾಯನಿಕ ಬಳಸಿ ಕ್ಯಾನ್ಸರ್ ಉಂಟುಮಾಡಲಾಯಿತು. ನಂತರ ಎಂಟು ವಾರಗಳ ಕಾಲ ಪ್ರತಿದಿನವೂ ಪೂಗಸಾರಂ ಜೆಲ್ ಹಚ್ಚಿ ಅದರ ಪರಿಣಾಮವನ್ನು ಗಮನಿಸಲಾಯಿತು.
ಈ ವೇಳೆ ಇಲಿಗಳಲ್ಲಿ ಕಾಣಿಸಿಕೊಂಡ ಕ್ಯಾನ್ಸರ್ ಗಡ್ಡೆಗಳ ಗಾತ್ರ ಹಾಗೂ ಅವುಗಳ ಹರಡುವಿಕೆ ಗಣನೀಯವಾಗಿ ಕಡಿಮೆಯಾಗಿರುವುದು ಸಂಶೋಧನೆಯಲ್ಲಿ ಕಂಡುಬಂದಿದೆ. ಕೆಲವು ಇಲಿಗಳಲ್ಲಿ ಕ್ಯಾನ್ಸರ್ ಚಿಕಿತ್ಸೆಗೆ ಬಳಸುವ ಸಿಸ್ಪ್ಲಾಟಿನ್ (Cisplatin) ಔಷಧಕ್ಕಿಂತಲೂ ಪೂಗಸಾರಂ ಹೆಚ್ಚು ಪರಿಣಾಮಕಾರಿ ಫಲಿತಾಂಶ ನೀಡಿದೆ ಎಂದು ಸಂಶೋಧನಾ ತಂಡ ತಿಳಿಸಿದೆ.
ಅಡಕೆಯ ಮೌಲ್ಯವರ್ಧನೆಗೆ ಸಂಶೋಧನೆ ಬಲ
ಅಡಕೆಯಲ್ಲಿ ಆರೋಗ್ಯಕ್ಕೆ ಪೂರಕವಾದ ಅಂಶಗಳಿವೆ ಎಂಬುದನ್ನು ಹಲವು ಸಂಶೋಧನೆಗಳು ಈಗಾಗಲೇ ಪ್ರಸ್ತಾಪಿಸಿವೆ. ಆದರೆ ವಿದೇಶಗಳಲ್ಲಿ ನಡೆದ ಕೆಲವು ಅಧ್ಯಯನಗಳು ಅಡಕೆಯನ್ನು ಕ್ಯಾನ್ಸರ್ಕಾರಕ ಎಂದು ಗುರುತಿಸಿವೆ. ಈ ಹಿನ್ನೆಲೆಯಲ್ಲಿ ಪೂಗಸಾರಂ ಕುರಿತ ಸಂಶೋಧನೆಯು ಅಡಕೆಯ ಔಷಧೀಯ ಗುಣಗಳ ಕುರಿತು ಮತ್ತಷ್ಟು ಅಧ್ಯಯನಕ್ಕೆ ಹೊಸ ಅವಕಾಶ ಕಲ್ಪಿಸಿದೆ ಎಂಬ ಅಭಿಪ್ರಾಯ ವ್ಯಕ್ತವಾಗಿದೆ.
ಈ ಸಂಶೋಧನೆಯನ್ನು ರಾಜ್ಯ ಹಾಗೂ ಕೇಂದ್ರ ಸರಕಾರಗಳು ಗಂಭೀರವಾಗಿ ಪರಿಗಣಿಸಿ ಹೆಚ್ಚಿನ ಪ್ರೋತ್ಸಾಹ ನೀಡಬೇಕು. ಆ ಮೂಲಕ ಅಡಕೆಯ ಕುರಿತಿರುವ ನಕಾರಾತ್ಮಕ ಅಭಿಪ್ರಾಯಗಳನ್ನು ವೈಜ್ಞಾನಿಕವಾಗಿ ಪರಿಶೀಲಿಸಿ, ಅದರ ಮೌಲ್ಯವರ್ಧನೆಗೆ ಆದ್ಯತೆ ನೀಡಬೇಕು ಎಂದು ಮಲೆನಾಡು ಅಡಕೆ ಮಾರಾಟದ ಸಹಕಾರ ಸಂಘದ ಉಪಾಧ್ಯಕ್ಷ ಮಹೇಶ್ ಹುಲ್ಕುಳಿ ಮನವಿ ಮಾಡಿದ್ದಾರೆ.
ಸಂಶೋಧನೆಯಲ್ಲಿ ಅಚ್ಚರಿಯ ಫಲಿತಾಂಶ
ಯೆನಪೋಯ ವಿಶ್ವವಿದ್ಯಾಲಯದ ಪ್ರಯೋಗಾಲಯದಲ್ಲಿ ಕ್ಯಾನ್ಸರ್ ಸೆಲ್ ಲೈನ್ಗಳ ಮೇಲೆ ನಡೆಸಿದ ಪ್ರಯೋಗದಲ್ಲಿ ಯಶಸ್ಸು ಕಂಡ ಬಳಿಕ ಇಲಿಗಳ ಮೇಲೆ ಪೂಗಸಾರಂ ಬಳಸಿ ಪರೀಕ್ಷೆ ನಡೆಸಲಾಯಿತು. ಈ ಪ್ರಯೋಗದಲ್ಲಿ ಅಚ್ಚರಿಯ ಫಲಿತಾಂಶ ಲಭಿಸಿದೆ. ಸಂಶೋಧನೆಯ ವರದಿಯನ್ನು ರಾಜ್ಯ ಹಾಗೂ ಕೇಂದ್ರ ಸರಕಾರಕ್ಕೆ ಸಲ್ಲಿಸಲಾಗಿದೆ ಎಂದು ಅಡಕೆ ಸಂಶೋಧನೆ ಮತ್ತು ಅಭಿವೃದ್ಧಿ ಪ್ರತಿಷ್ಠಾನದ ವಿಜ್ಞಾನಿ ಡಾ. ಎಸ್. ಕೇಶವ ಭಟ್ ತಿಳಿಸಿದ್ದಾರೆ.
ಭಾರತೀಯ ಕೃಷಿ ಸಂಶೋಧನಾ ಮಂಡಳಿ (ICAR) ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಕೇಂದ್ರೀಯ ತೋಟಗಾರಿಕಾ ಬೆಳೆಗಳ ಸಂಶೋಧನಾ ಸಂಸ್ಥೆ (CPCRI) ನಡೆಸುತ್ತಿರುವ ಅಡಕೆ ಸಂಶೋಧನೆಗಳಿಗೂ ಈ ಅಧ್ಯಯನವು ಪೂರಕವಾಗಲಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.
ಮಂಗಳೂರು
Mangalore-ಮಂಗಳೂರು: ರಾತ್ರಿ 11:45ರಿಂದ ಬೆಳಗ್ಗೆ 5:30ರವರೆಗೆ ವ್ಯಾಪಾರ ನಿರ್ಬಂಧ; ಪೊಲೀಸ್ ಆಯುಕ್ತರಿಂದ ಹೊಸ ಆದೇಶ
ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಅಂಗಡಿಗಳು, ಹೋಟೆಲ್ಗಳು, ರೆಸ್ಟೋರೆಂಟ್ಗಳು, ಟೀ ಸ್ಟಾಲ್ಗಳು, ಪಾನ್ ಅಂಗಡಿಗಳು ಸೇರಿದಂತೆ ವಿವಿಧ ವಾಣಿಜ್ಯ ಸಂಸ್ಥೆಗಳ ವ್ಯಾಪಾರ ವಹಿವಾಟಿಗೆ ರಾತ್ರಿ ನಿರ್ಬಂಧ ವಿಧಿಸಿ ನಗರ ಪೊಲೀಸ್ ಆಯುಕ್ತರು ಹಾಗೂ ಹೆಚ್ಚುವರಿ ಜಿಲ್ಲಾ ದಂಡಾಧಿಕಾರಿ ಸುಧೀರ್ ಕುಮಾರ್ ರೆಡ್ಡಿ ಆದೇಶ ಹೊರಡಿಸಿದ್ದಾರೆ.
ಮಂಗಳೂರು, ನ.23: ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಅಂಗಡಿಗಳು, ಹೋಟೆಲ್ಗಳು, ರೆಸ್ಟೋರೆಂಟ್ಗಳು, ಟೀ ಸ್ಟಾಲ್ಗಳು, ಪಾನ್ ಅಂಗಡಿಗಳು ಸೇರಿದಂತೆ ವಿವಿಧ ವಾಣಿಜ್ಯ ಸಂಸ್ಥೆಗಳ ವ್ಯಾಪಾರ ವಹಿವಾಟಿಗೆ ರಾತ್ರಿ ನಿರ್ಬಂಧ ವಿಧಿಸಿ ನಗರ ಪೊಲೀಸ್ ಆಯುಕ್ತರು ಹಾಗೂ ಹೆಚ್ಚುವರಿ ಜಿಲ್ಲಾ ದಂಡಾಧಿಕಾರಿ ಸುಧೀರ್ ಕುಮಾರ್ ರೆಡ್ಡಿ ಆದೇಶ ಹೊರಡಿಸಿದ್ದಾರೆ.
ಆದೇಶದ ಪ್ರಕಾರ, ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಎಲ್ಲಾ ವ್ಯಾಪಾರಿಕ ಸಂಸ್ಥೆಗಳು ಪ್ರತಿದಿನ ರಾತ್ರಿ 11:45ರಿಂದ ಮಾರನೇ ದಿನ ಬೆಳಗ್ಗೆ 5:30ರವರೆಗೆ ವ್ಯಾಪಾರ ವಹಿವಾಟು ನಡೆಸುವಂತಿಲ್ಲ. ಈ ನಿರ್ಬಂಧವು ಸಿಎಲ್-4, ಸಿಎಲ್-6(ಎ) ಹಾಗೂ ಸಿಎಲ್-7 ಪರವಾನಗಿ ಹೊಂದಿರುವ ಸಂಸ್ಥೆಗಳಿಗೆ ಅನ್ವಯಿಸುವುದಿಲ್ಲ. ಅಂತಹ ಸಂಸ್ಥೆಗಳು ತಮ್ಮ ಪರವಾನಗಿಯಲ್ಲಿ ನಿಗದಿಪಡಿಸಿರುವ ನಿಯಮಗಳನ್ನು ಪಾಲಿಸಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಆಸ್ಪತ್ರೆಗಳು, ಔಷಧ ಅಂಗಡಿಗಳು, ತುರ್ತು ಸೇವೆಗಳು, ಅಗತ್ಯ ಸಾರ್ವಜನಿಕ ಉಪಯೋಗಿತಾ ಸೇವೆಗಳು ಹಾಗೂ ಸರಕಾರ ಅಥವಾ ಸಂಬಂಧಪಟ್ಟ ಪ್ರಾಧಿಕಾರಗಳಿಂದ ವಿಶೇಷ ಅನುಮತಿ ಪಡೆದ ಸಂಸ್ಥೆಗಳಿಗೆ ಈ ನಿರ್ಬಂಧದಿಂದ ವಿನಾಯಿತಿ ನೀಡಲಾಗಿದೆ.
ನಿರ್ಬಂಧಕ್ಕೆ ಕಾರಣವೇನು?
ಮಂಗಳೂರು ನಗರವು ಕರಾವಳಿ ಕರ್ನಾಟಕದ ಪ್ರಮುಖ ವಾಣಿಜ್ಯ, ಶೈಕ್ಷಣಿಕ ಹಾಗೂ ಬಂದರು ನಗರವಾಗಿದ್ದು, ವಿವಿಧ ಧರ್ಮ, ಜಾತಿ ಮತ್ತು ಸಮುದಾಯಗಳ ಜನರು ಸಹಬಾಳ್ವೆಯಿಂದ ನೆಲೆಸಿರುವ ಕೋಮು ಸೂಕ್ಷ್ಮ ಪ್ರದೇಶವಾಗಿದೆ. ನಗರದ ಹಲವು ಭಾಗಗಳಲ್ಲಿ ತಡರಾತ್ರಿಯವರೆಗೂ, ಕೆಲವೆಡೆ ಬೆಳಗಿನ ಜಾವದವರೆಗೂ ವ್ಯಾಪಾರ ವಹಿವಾಟು ನಡೆಯುತ್ತಿರುವ ಹಿನ್ನೆಲೆಯಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವುದು, ಮಾದಕ ವ್ಯಸನ ಹಾಗೂ ಅಪರಾಧ ಚಟುವಟಿಕೆಗಳನ್ನು ನಿಯಂತ್ರಿಸುವುದು ಮತ್ತು ಸಾರ್ವಜನಿಕರಿಗೆ ಎದುರಾಗುತ್ತಿರುವ ಸಮಸ್ಯೆಗಳನ್ನು ನಿವಾರಿಸುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.
ರಾತ್ರಿ ವೇಳೆ ಅನಗತ್ಯವಾಗಿ ಜನರು ಗುಂಪುಗೂಡುವುದು, ಓಡಾಟ ನಡೆಸುವುದು ಹಾಗೂ ಸಾಮಾಜಿಕ ಜಾಲತಾಣಗಳ ಮೂಲಕ ಹರಡುವ ವದಂತಿಗಳಿಂದ ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆಯಾಗುವ ಸಾಧ್ಯತೆಗಳಿವೆ. ವ್ಯಾಪಾರ ಕೇಂದ್ರಗಳು ರಾತ್ರಿ ಪೂರ್ತಿ ತೆರೆದಿರುವುದರಿಂದ ಜನಸಂದಣಿ ಹೆಚ್ಚಾಗಿ ಅಹಿತಕರ ಘಟನೆಗಳಿಗೆ ಕಾರಣವಾಗುವ ಅಪಾಯವೂ ಇದೆ ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.
ಇದಲ್ಲದೆ, ರಾತ್ರಿ ವೇಳೆ ಅಂಗಡಿಗಳು, ಹೋಟೆಲ್ಗಳು ಹಾಗೂ ಇತರ ವ್ಯಾಪಾರ ಕೇಂದ್ರಗಳ ಸುತ್ತಮುತ್ತ ಮಾದಕ ವ್ಯಸನಿಗಳು, ಸಮಾಜಘಾತಕ ವ್ಯಕ್ತಿಗಳು ಮತ್ತು ಅನುಮಾನಾಸ್ಪದ ವ್ಯಕ್ತಿಗಳು ಅನಗತ್ಯವಾಗಿ ಓಡಾಡುವುದು, ಕಾಲಹರಣ ಮಾಡುವುದು ಕಂಡುಬರುತ್ತಿದ್ದು, ಇಂತಹ ಪರಿಸ್ಥಿತಿಗಳು ಅಪರಾಧ ಚಟುವಟಿಕೆಗಳಿಗೆ ಅವಕಾಶ ಮಾಡಿಕೊಡುವ ಸಾಧ್ಯತೆಯಿದೆ ಎಂದು ತಿಳಿಸಲಾಗಿದೆ.
ವ್ಯಾಪಾರ ಕೇಂದ್ರಗಳ ಸುತ್ತ ವಾಹನಗಳ ನಿಲುಗಡೆ, ಜೋರಾದ ಶಬ್ದ, ರಸ್ತೆಗಳಲ್ಲಿ ಅನಗತ್ಯ ಗುಂಪುಗೂಡುವಿಕೆಗಳಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ. ವಿಶೇಷವಾಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವ ರೋಗಿಗಳು ಹಾಗೂ ವಸತಿ ಪ್ರದೇಶಗಳ ನಿವಾಸಿಗಳ ನೆಮ್ಮದಿ ಮತ್ತು ಶಾಂತಿಗೆ ಭಂಗ ಉಂಟಾಗುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕ ಶಾಂತಿ ಹಾಗೂ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ರಾತ್ರಿ 11:45ರಿಂದ ಬೆಳಗ್ಗೆ 5:30ರವರೆಗೆ ವ್ಯಾಪಾರ ವಹಿವಾಟಿಗೆ ನಿರ್ಬಂಧ ವಿಧಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತರು ಹಾಗೂ ಹೆಚ್ಚುವರಿ ಜಿಲ್ಲಾ ದಂಡಾಧಿಕಾರಿ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ.
ಅಪರಾಧ
Mangalore-Big Breaking:ಮಂಗಳೂರು: ಕದ್ರಿ ಯುದ್ಧ ಸ್ಮಾರಕದಲ್ಲಿರುವ ಟಿ-55 ಟ್ಯಾಂಕ್ ಮೇಲೆ ಹತ್ತಿ ಯುವಕರ ಹುಚ್ಚಾಟ; ವಿಡಿಯೋ ವೈರಲ್, ಸಾರ್ವಜನಿಕರ ಆಕ್ರೋಶ
ಮಂಗಳೂರು ನಗರದ ಕದ್ರಿ ಯುದ್ಧ ಸ್ಮಾರಕದ ಬಳಿ ಸಾರ್ವಜನಿಕರ ವೀಕ್ಷಣೆಗೆ ಇರಿಸಲಾಗಿರುವ ಯುದ್ಧ ಟ್ಯಾಂಕ್ ಮೇಲೆ ಹತ್ತಿ ಇಬ್ಬರು ಯುವಕರು ಅಸಭ್ಯವಾಗಿ ವರ್ತಿಸಿರುವ ಘಟನೆ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.
ಮಂಗಳೂರು: ನಗರದ ಕದ್ರಿ ಯುದ್ಧ ಸ್ಮಾರಕದ ಬಳಿ ಸಾರ್ವಜನಿಕರ ವೀಕ್ಷಣೆಗೆ ಇರಿಸಲಾಗಿರುವ ಯುದ್ಧ ಟ್ಯಾಂಕ್ ಮೇಲೆ ಹತ್ತಿ ಇಬ್ಬರು ಯುವಕರು ಅಸಭ್ಯವಾಗಿ ವರ್ತಿಸಿರುವ ಘಟನೆ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.
ಮಂಗಳೂರು ಸರ್ಕೀಟ್ ಹೌಸ್ ಮುಂಭಾಗದ ಕದ್ರಿ ಯುದ್ಧ ಸ್ಮಾರಕದ ಬಳಿ 1971ರಲ್ಲಿ ಪಾಕಿಸ್ತಾನದ ವಿರುದ್ಧದ ಯುದ್ಧದಲ್ಲಿ ಭಾಗವಹಿಸಿದ್ದ ಟಿ-55 ಯುದ್ಧ ಟ್ಯಾಂಕ್ನ್ನು ಸಾರ್ವಜನಿಕರ ವೀಕ್ಷಣೆಗಾಗಿ ಎತ್ತರದ ವೇದಿಕೆಯಲ್ಲಿ ಇರಿಸಲಾಗಿದೆ.
ರಾತ್ರಿ ವೇಳೆ ಇಬ್ಬರು ಯುವಕರು ಟ್ಯಾಂಕ್ ಮೇಲೆ ಹತ್ತಿ, ಅದರ ಹ್ಯಾಚ್ ತೆರೆದು ಒಳಗೆ ಪ್ರವೇಶಿಸಿ ಅಸಭ್ಯವಾಗಿ ವರ್ತಿಸಿದ್ದಾರೆ ಎನ್ನಲಾಗಿದೆ. ತಮ್ಮ ಕಿಡಿಗೇಡಿತನದ ವರ್ತನೆಯನ್ನು ವಿಡಿಯೋ ಮಾಡಿಕೊಂಡಿರುವ ಯುವಕರು, ಅದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದು, ವಿಡಿಯೋ ಇದೀಗ ವೈರಲ್ ಆಗಿದೆ.
ದೇಶದ ಯುದ್ಧ ಇತಿಹಾಸ ಹಾಗೂ ಸೈನಿಕರ ಶೌರ್ಯ, ತ್ಯಾಗದ ಸಂಕೇತವಾಗಿ ಇರಿಸಲಾಗಿರುವ ಟ್ಯಾಂಕ್ ಬಳಿ ಯುವಕರು ಇಂತಹ ವರ್ತನೆ ತೋರಿರುವುದಕ್ಕೆ ಸಾರ್ವಜನಿಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
-
ಶಿಕ್ಷಣ20 hours agoVidyamata Academy-ಕರ್ನಾಟಕ ರಾಜ್ಯ ಅರ್ಹತಾ ಪರೀಕ್ಷೆಯಲ್ಲೂ ಅಮೋಘ ಸಾಧನೆ ಮುಂದುವರಿಸಿದ ವಿದ್ಯಾಮಾತಾ ಅಕಾಡೆಮಿ
-
ಮಂಗಳೂರು20 hours agoGirish Mattannavar-ಸೌಜನ್ಯ ಪ್ರಕರಣ: ಎಸ್ಐಟಿಗೆ ದಾಖಲೆಗಳ ʼಬ್ಯಾಗ್ʼ ಸಲ್ಲಿಸಿದ ಗಿರೀಶ್ ಮಟ್ಟಣ್ಣನವರ್; ಸೌಜನ್ಯ ಪ್ರಕರಣದಲ್ಲಿ ಆರ್. ಅಶೋಕ್ ಪಾತ್ರದ ಕುರಿತು ಸ್ಪೋಟಕ ಹೇಳಿಕೆ..!
-
ಬಿಗ್ ನ್ಯೂಸ್22 hours agoRakesh Shetty-ಸ್ಟಿಂಗ್ ಹೆಸರಿನಲ್ಲಿ ಜನಪ್ರತಿನಿಧಿಗಳ ಬ್ಲ್ಯಾಕ್ಮೇಲ್ ಆರೋಪ: ರಾಕೇಶ್ ಶೆಟ್ಟಿ ವಿರುದ್ಧ ಕ್ರಮಕ್ಕೆ ಒಳಾಡಳಿತ ಇಲಾಖೆಯಿಂದ ಡಿಜಿಪಿಗೆ ಪತ್ರ
-
ಕಾರ್ಯಕ್ರಮಗಳು21 hours agoVitla-ವಿಟ್ಲ: ನ.25ರಂದು ಮೈತ್ರೇಯಿ ಆಯುರ್ವೇದ ಗುರುಕುಲಂ ಮತ್ತು ಮೈತ್ರೇಯಿ ಆಯುರ್ವೇದ ಆಸ್ಪತ್ರೆಯ ನೂತನ ಕಟ್ಟಡ ಶಿಲಾನ್ಯಾಸ ಸಮಾರಂಭ; 20 ಹಾಸಿಗೆಗಳ ಮೈತ್ರೇಯಿ ಆಯುರ್ವೇದ ಆಸ್ಪತ್ರೆಯ ಉದ್ಘಾಟನಾ ಸಮಾರಂಭ; ಆಯುರ್ವೇದದ ಅಮೂಲ್ಯವಾದ ಸನಾತನ ಜ್ಞಾನವನ್ನು ಸಂರಕ್ಷಿಸಿ, ಬೆಳೆಸಿ, ಮುಂದಿನ ಪೀಳಿಗೆಗೆ ತಲುಪಿಸುವುದು ಅಜೇಯ ಟ್ರಸ್ಟ್ನ ಪ್ರಮುಖ ಉದ್ದೇಶವಾಗಿದೆ- ಡಾ. ಸುಧಾರಾವ್
-
ಅಪರಾಧ4 hours agoMangalore-Big Breaking:ಮಂಗಳೂರು: ಕದ್ರಿ ಯುದ್ಧ ಸ್ಮಾರಕದಲ್ಲಿರುವ ಟಿ-55 ಟ್ಯಾಂಕ್ ಮೇಲೆ ಹತ್ತಿ ಯುವಕರ ಹುಚ್ಚಾಟ; ವಿಡಿಯೋ ವೈರಲ್, ಸಾರ್ವಜನಿಕರ ಆಕ್ರೋಶ
-
ಅಪರಾಧ20 hours agoArrest-ಸಾಲದ ಇಎಂಐ ಕಟ್ಟಲು ಸ್ನೇಹಿತನನ್ನೇ ಕೊಂದು ₹63 ಸಾವಿರ ದೋಚಿದ ಆರೋಪ: ಉತ್ತರ ಪ್ರದೇಶದಲ್ಲಿ ಆರೋಪಿ ಬಂಧನ
-
ಶಿಕ್ಷಣ19 hours agoVivekananda-ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ
-
ಮಂಗಳೂರು3 hours agoMangalore-ಮಂಗಳೂರು: ರಾತ್ರಿ 11:45ರಿಂದ ಬೆಳಗ್ಗೆ 5:30ರವರೆಗೆ ವ್ಯಾಪಾರ ನಿರ್ಬಂಧ; ಪೊಲೀಸ್ ಆಯುಕ್ತರಿಂದ ಹೊಸ ಆದೇಶ















