ಅಕ್ಟೋಬರ್ 20ರಂದು ಪುತ್ತೂರಿನ ಉಪ್ಪಳಿಗೆಯಲ್ಲಿ ರಾತ್ರಿ 7:30ಕ್ಕೆ ನಡೆದ ದೀಪೋತ್ಸವ ಕಾರ್ಯಕ್ರಮದಲ್ಲಿ ಕಲ್ಲಡ್ಕ […]" /> ಅಕ್ಟೋಬರ್ 20ರಂದು ಪುತ್ತೂರಿನ ಉಪ್ಪಳಿಗೆಯಲ್ಲಿ ರಾತ್ರಿ 7:30ಕ್ಕೆ ನಡೆದ ದೀಪೋತ್ಸವ ಕಾರ್ಯಕ್ರಮದಲ್ಲಿ ಕಲ್ಲಡ್ಕ […]"> Puttur-ಪುತ್ತೂರು: ದೀಪೋತ್ಸವದಲ್ಲಿ ಕೋಮು ದ್ವೇಷ ಭಾಷಣ; ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ದೂರು - Nikhara News | Kannada News Website
Connect with us

ಅಪರಾಧ

Puttur-ಪುತ್ತೂರು: ದೀಪೋತ್ಸವದಲ್ಲಿ ಕೋಮು ದ್ವೇಷ ಭಾಷಣ; ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ದೂರು

Published

on

Ad Widget

Ad Widget

Ad Widget

Ad Widget

ಸಾರ್ವಜನಿಕ ಸಭೆಯಲ್ಲಿ ಪ್ರಚೋದನಕಾರಿ ಭಾಷಣ ನೀಡಿದ್ದಾರೆಂದು ಆರೋಪಿಸಿ ಕಲ್ಲಡ್ಕ ಪ್ರಭಾಕರ ಭಟ್ ಅವರ ವಿರುದ್ಧ ಮಹಿಳಾ ಹೋರಾಟಗಾರ್ತಿ ಈಶ್ವರಿ ಪದ್ಮುಂಜ ಅವರು ಸಂಪ್ಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

Ad Widget

Ad Widget

Ad Widget

Ad Widget

ಪುತ್ತೂರು: ಸಾರ್ವಜನಿಕ ಸಭೆಯಲ್ಲಿ ಪ್ರಚೋದನಕಾರಿ ಭಾಷಣ ನೀಡಿದ್ದಾರೆಂದು ಆರೋಪಿಸಿ ಕಲ್ಲಡ್ಕ ಪ್ರಭಾಕರ ಭಟ್ ಅವರ ವಿರುದ್ಧ ಮಹಿಳಾ ಹೋರಾಟಗಾರ್ತಿ ಈಶ್ವರಿ ಪದ್ಮುಂಜ ಅವರು ಸಂಪ್ಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

Ad Widget

Ad Widget alt="Ad Widget"/>

Ad Widget

ಅಕ್ಟೋಬರ್ 20ರಂದು ಪುತ್ತೂರಿನ ಉಪ್ಪಳಿಗೆಯಲ್ಲಿ ರಾತ್ರಿ 7:30ಕ್ಕೆ ನಡೆದ ದೀಪೋತ್ಸವ ಕಾರ್ಯಕ್ರಮದಲ್ಲಿ ಕಲ್ಲಡ್ಕ ಪ್ರಭಾಕರ ಭಟ್ ಅವರು ಮಹಿಳೆಯರನ್ನು ಅವಮಾನಿಸುವಂತೆ, ಅವರ ಘನತೆಗೆ ಧಕ್ಕೆ ತರುವಂತೆ, ಗರ್ಭಿಣಿ ಮಹಿಳೆಯರ ವಿರುದ್ಧ ಹಿಂಸೆಗೆ ಪ್ರೇರೇಪಿಸುವಂತೆ, ಧರ್ಮಗಳ ನಡುವೆ ದ್ವೇಷ ಬಿತ್ತುವಂತೆ ಮತ್ತು ಕೋಮುಗಲಭೆ ಸೃಷ್ಟಿಸುವಂತೆ ಪಿತೂರಿ ಮಾಡಿದ್ದಾರೆಂದು ಆರೋಪಿಸಿ, ಕಲ್ಲಡ್ಕ ಪ್ರಭಾಕರ ಭಟ್ ಹಾಗೂ ಕಾರ್ಯಕ್ರಮದ ಆಯೋಜಕರ ವಿರುದ್ಧ ದೂರು ನೀಡಿದ್ದಾರೆ.

Ad Widget

Ad Widget <> Ad Widget

BNS ಸೆಕ್ಷನ್ 190, 196, 79, 74, 296, 298, 299, 302, 351ರ ಅಡಿ ಪ್ರಕರಣ ದಾಖಲಿಸುವಂತೆ ದೂರಿನಲ್ಲಿ ಕೋರಲಾಗಿದೆ.

ದೂರಿನ ವಿವರಗಳು:
ಪುತ್ತೂರು ತಾಲೂಕಿನ ಉಪ್ಪಳಿಗೆಯಲ್ಲಿ ಆಯೋಜಿಸಲಾಗಿದ್ದ ದೀಪೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿದ ಸಂದರ್ಭದಲ್ಲಿ ಕಲ್ಲಡ್ಕ ಪ್ರಭಾಕರ ಭಟ್ ಅವರು ಸಾರ್ವಜನಿಕವಾಗಿ ಧಾರ್ಮಿಕ ಭಾವನೆಗಳನ್ನು ಕೆರಳಿಸುವ, ಮಹಿಳೆಯರನ್ನು ನಿಂದಿಸುವ ಮತ್ತು ವಿವಿಧ ಧಾರ್ಮಿಕ ಸಮುದಾಯಗಳ ನಡುವೆ ದ್ವೇಷ ಹರಡುವ ರೀತಿಯಲ್ಲಿ ಭಾಷಣ ಮಾಡಿದ್ದಾರೆ.

Ad Widget

Ad Widget

ಭಾಷಣದ ಕೆಲವು ನೇರ ಉಲ್ಲೇಖಗಳು:
*”ಆಚೆ ಮನೆಯಲ್ಲಿ ಒಬ್ಬಳು ಬ್ಯಾರ್ದಿ ಇದ್ದು ಅವಳು 6ನೆಯದ್ದು ಆಗಿ 7 ನೇ ಗರ್ಭಿಣಿಯಾಗಿದ್ದಳು. ಅವಳಿಗೆ ಯಾರಾದ್ರು ಕೇಳಿದ್ರಾ? ನೀನು ನಾಯಿ ಮರಿ ಹಾಕಿದ ಹಾಗೆ ಹಾಕ್ತಾ ಇದ್ದೀಯಾ ಅಂತ ಕೇಳಿದ್ರಾ? ಕೇಳುವ ಧೈರ್ಯವೂ ಇಲ್ಲ. ಎರಡನೆಯದಾಗಿ ಅವರು ಹೇಳ್ತಾರೆ. ಅದು ಅಲ್ಲಾಹನಿಗೋಸ್ಕರ ನಮ್ಮ ಮಕ್ಕಳು. ಅಲ್ಲಾಹನಿಗೋಸ್ಕರ ಅನ್ನುತ್ತಾರೆ. ನೀವೇನಾದರೂ ಮಹಾಲಿಂಗೇಶ್ವರನಿಗಾಗಿ ಮಕ್ಕಳು ಮಾಡ್ತೀರಾ? ನಮ್ಮ ಜನಸಂಖ್ಯೆ ಜಾಸ್ತಿಯಾಗಬೇಕು.”

*”ಮಂಗಳೂರು ವಿಧಾನಸಭಾ ಕ್ಷೇತ್ರ ಉಳ್ಳಾಲ ಅಂತ ಏನು ಹೇಳ್ತಿವಿ ಅಲ್ಲಿ ಹಿಂದೂ ಗೆಲ್ಲಲು ಸಾದ್ಯವೇ ಇಲ್ಲ. ಅಲ್ಲಿ ಖಾದರೇ ಗೆಲ್ಲೋದು ಯಾಕೆಂದರೆ ಒಂದು ಲಕ್ಷದ ಹತ್ತು ಸಾವಿರ ಬ್ಯಾರಿಗಳದ್ದೇ ಓಟು ಇದೆ. ಹಿಂದೂಗಳು 90 ಸಾವಿರ ಇರೋದು. ಗೆಲ್ಲೊದು ಯಾವಾಗ? ಅದು ಎಲ್ಲಾ ಕಡೆಗೂ ಹತ್ತಿರ ಹತ್ತಿರ ಬರ್ತಾ ಉಂಟು. ನಾವು ಗೆಲ್ಲೇವಾ? ಗೆಲ್ಲಲು ಸಾಧ್ಯವೇ ಇಲ್ಲ. ನಮ್ಮನ್ನು ಸರ್ವನಾಶ ಮಾಡ್ತಾರೆ. ಹಾಗಾಗಿ ನಮ್ಮ ಮನೆಯಲ್ಲಿ 3 ಕ್ಕಿಂತ ಕಡಿಮೆ ಮಕ್ಕಳು.”

ಇಂತಹ ಹೇಳಿಕೆಗಳು ಹಿಂದೂ ಮತ್ತು ಮುಸ್ಲಿಂ ಸಮುದಾಯದ ಮಹಿಳೆಯರ ಘನತೆಗೆ ಧಕ್ಕೆ ತರುತ್ತವೆ, ಧಾರ್ಮಿಕ ದ್ವೇಷವನ್ನು ಪ್ರಚೋದಿಸುತ್ತವೆ ಮತ್ತು ಸಾರ್ವಜನಿಕ ಶಾಂತಿಗೆ ಭಂಗ ಉಂಟುಮಾಡುತ್ತವೆ.

ಪ್ರಭಾಕರ ಭಟ್ ಅವರು ಈ ಹಿಂದೆಯೂ ಹಲವು ಸಲ ಧರ್ಮಗಳ ನಡುವೆ ದ್ವೇಷ ಬಿತ್ತಿ ಕೋಮುಗಲಭೆ ಸೃಷ್ಟಿಸುವ ಕೃತ್ಯಗಳಲ್ಲಿ ಭಾಗಿಯಾಗಿದ್ದಾರೆ. ಇದು ತಿಳಿದಿದ್ದರೂ ಪುತ್ತೂರು ತಾಲೂಕಿನ ಉಪ್ಪಳಿಗೆಯಲ್ಲಿ ಆಯೋಜಿಸಿದ್ದ ದೀಪೋತ್ಸವ ಕಾರ್ಯಕ್ರಮಕ್ಕೆ ಅವರನ್ನು ಆಹ್ವಾನಿಸಿ ಭಾಷಣ ಮಾಡಲು ಅವಕಾಶ ನೀಡಿ ಧಾರ್ಮಿಕ ಸ್ಥಳವನ್ನು ಅಪವಿತ್ರಗೊಳಿಸಿದ್ದಾರೆ.

ಆದ್ದರಿಂದ, ಕಲ್ಲಡ್ಕ ಪ್ರಭಾಕರ ಭಟ್ ಅವರ ಉಪ್ಪಳಿಗೆಯ ಭಾಷಣದ ಕುರಿತು, ಆಯೋಜಕರು ಹಾಗೂ ಸಂಬಂಧಿತರ ವಿರುದ್ಧ ಅಪರಾಧ ಪ್ರಕರಣ ದಾಖಲಿಸಿ ತಕ್ಷಣ ತನಿಖೆ ಆರಂಭಿಸಬೇಕು. ಇಂತಹ ದ್ವೇಷಭಾಷಣಗಳು ಮರುಕಳಿಸದಂತೆ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಮಹಿಳಾ ಹೋರಾಟಗಾರರಾದ ಈಶ್ವರಿ ಪದ್ಮುಂಜ ಅವರು ದೂರಿನಲ್ಲಿ ಕೋರಿದ್ದಾರೆ.

Ad Widget
Click to comment

Leave a Reply

ಅಪರಾಧ

FIR-‘ಬಸವ ಮಂಟಪ’ ಕೃತಿ ವಿವಾದ: ಲೇಖಕ ರವಿ ಹಂಜ್, ಪ್ರಕಾಶಕ ವಿಶ್ವೇಶ್ವರ ಭಟ್ ವಿರುದ್ಧ ಎಫ್‌ಐಆರ್

Published

on

Ad Widget

Ad Widget

Ad Widget

Ad Widget

ಬಸವಣ್ಣನವರ ವಿಚಾರಧಾರೆ ಹಾಗೂ ತತ್ವಗಳಿಗೆ ಅಪಚಾರ ಎಸಗುವ ಮೂಲಕ ಲಿಂಗಾಯತ ಸಮುದಾಯದ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ ಎಂಬ ಆರೋಪದಡಿ ‘ಬಸವ ಮಂಟಪ’ ಎಂಬ ವಿವಾದಿತ ಕೃತಿಯ ಲೇಖಕ ರವಿ ಹಂಜ್ ಹಾಗೂ ಪ್ರಕಾಶಕ, ಪತ್ರಕರ್ತ ವಿಶ್ವೇಶ್ವರ ಭಟ್ ವಿರುದ್ಧ ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

Ad Widget

Ad Widget

Ad Widget

Ad Widget

ಬೆಂಗಳೂರು: ಬಸವಣ್ಣನವರ ವಿಚಾರಧಾರೆ ಹಾಗೂ ತತ್ವಗಳಿಗೆ ಅಪಚಾರ ಎಸಗುವ ಮೂಲಕ ಲಿಂಗಾಯತ ಸಮುದಾಯದ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ ಎಂಬ ಆರೋಪದಡಿ ‘ಬಸವ ಮಂಟಪ’ ಎಂಬ ವಿವಾದಿತ ಕೃತಿಯ ಲೇಖಕ ರವಿ ಹಂಜ್ ಹಾಗೂ ಪ್ರಕಾಶಕ, ಪತ್ರಕರ್ತ ವಿಶ್ವೇಶ್ವರ ಭಟ್ ವಿರುದ್ಧ ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

Ad Widget

Ad Widget alt="Ad Widget"/>

Ad Widget

ಕಲ್ಯಾಣದ ಭಂಡಾರಿಯಾಗಿದ್ದ ಬಸವಣ್ಣನವರ ಮೇಲೆ ಜಾತಿವಾದಿಗಳು ಮಾಡಿದ್ದ ಸುಳ್ಳು ಆರೋಪಗಳನ್ನು ‘ಕಳ್ಳತನ’ ಎಂದು ವ್ಯಾಖ್ಯಾನಿಸಿರುವುದು ಹಾಗೂ ಕಲ್ಯಾಣ ಕ್ರಾಂತಿಯ ಐತಿಹಾಸಿಕ ಸಂಘರ್ಷಗಳನ್ನು ತಿರುಚಿ ಬಸವಣ್ಣನವರ ಮೇಲೆ ಆರೋಪ ಹೊರಿಸಿರುವುದು ಇತಿಹಾಸಕ್ಕೆ ಮಾಡಿದ ಅಪಚಾರ ಎಂದು ಬಸವ ಸಮಿತಿ ದೂರಿನಲ್ಲಿ ಆಕ್ಷೇಪಿಸಿದೆ.

Ad Widget

Ad Widget <> Ad Widget

ರವಿ ಹಂಜ್ ಅವರು ಇಂತಹ ಪೂರ್ವಾಗ್ರಹಪೀಡಿತ ಬರಹಗಳಿಗೆ ಸಂಶೋಧನೆಯ ಮುಖವಾಡ ತೊಡಿಸಿ ಸಮಾಜದಲ್ಲಿ ವಿಷಬೀಜ ಬಿತ್ತುವ ಪ್ರಯತ್ನ ಮಾಡುತ್ತಿದ್ದರೆ, ಪ್ರಕಾಶಕ ವಿಶ್ವೇಶ್ವರ ಭಟ್ ಅವರು ಕೃತಿಗೆ ಪ್ರಚಾರ ನೀಡುತ್ತಿದ್ದಾರೆ ಎಂದು ಸಮಿತಿ ಆರೋಪಿಸಿದೆ.

ಇಂತಹ ವಿವಾದಾತ್ಮಕ ಕೃತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳಬೇಕು. ಸಮಾಜದಲ್ಲಿ ಶಾಂತಿ ಮತ್ತು ಸೌಹಾರ್ದತೆಗೆ ಧಕ್ಕೆ ಉಂಟುಮಾಡುವವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಬೇಕು ಎಂದು ಬಸವ ಸಮಿತಿ ಪೊಲೀಸರಿಗೆ ಸಲ್ಲಿಸಿರುವ ದೂರಿನಲ್ಲಿ ಒತ್ತಾಯಿಸಿತ್ತು.

Ad Widget

Ad Widget

ಈ ದೂರಿನ ಆಧಾರದ ಮೇಲೆ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಲೇಖಕ ರವಿ ಹಂಜ್ ಹಾಗೂ ಪ್ರಕಾಶಕ ವಿಶ್ವೇಶ್ವರ ಭಟ್ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

Ad Widget
Continue Reading

ಅಪರಾಧ

Manipal police-ಪಟಾಕಿ ಪ್ರಕರಣ: ಮಣಿಪಾಲ ಪೊಲೀಸರ ವಿರುದ್ಧ ದೌರ್ಜನ್ಯ ಆರೋಪ: ಸಿಎಂಗೆ ಇ-ಮೇಲ್ ಮಾಡಿದ ವಿದ್ಯಾರ್ಥಿಗಳು

Published

on

Ad Widget

Ad Widget

Ad Widget

Ad Widget

ದೀಪಾವಳಿ ಸಂದರ್ಭದಲ್ಲಿ ರಸ್ತೆಯಲ್ಲಿ ಪಟಾಕಿ ಸಿಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಣಿಪಾಲ ಪೊಲೀಸರ ವಿರುದ್ಧ ವಿದ್ಯಾರ್ಥಿಗಳು ಗಂಭೀರ ದೌರ್ಜನ್ಯದ ಆರೋಪ ಮಾಡಿದ್ದಾರೆ. ಸಾರ್ವಜನಿಕ ರಸ್ತೆಯಲ್ಲಿ ನಡೆದ ಕೃತ್ಯಕ್ಕೆ ಸಂಬಂಧವಿಲ್ಲದ ವಿದ್ಯಾರ್ಥಿಗಳ ಫ್ಲ್ಯಾಟ್‌ಗಳಿಗೆ ಪೊಲೀಸರು ನುಗ್ಗಿ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ, ಖಾಸಗಿ ವಿದ್ಯಾಸಂಸ್ಥೆಯ ಎಂಜಿನಿಯರಿಂಗ್ ವಿದ್ಯಾರ್ಥಿಗಳು ಮುಖ್ಯಮಂತ್ರಿ ಅವರಿಗೆ ಇ-ಮೇಲ್ ಮೂಲಕ ದೂರು ಸಲ್ಲಿಸಿ ನ್ಯಾಯಕ್ಕಾಗಿ ಮನವಿ ಮಾಡಿದ್ದಾರೆ.

Ad Widget

Ad Widget

Ad Widget

Ad Widget

ಉಡುಪಿ, ನ.19: ದೀಪಾವಳಿ ಸಂದರ್ಭದಲ್ಲಿ ರಸ್ತೆಯಲ್ಲಿ ಪಟಾಕಿ ಸಿಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಣಿಪಾಲ ಪೊಲೀಸರ ವಿರುದ್ಧ ವಿದ್ಯಾರ್ಥಿಗಳು ಗಂಭೀರ ದೌರ್ಜನ್ಯದ ಆರೋಪ ಮಾಡಿದ್ದಾರೆ. ಸಾರ್ವಜನಿಕ ರಸ್ತೆಯಲ್ಲಿ ನಡೆದ ಕೃತ್ಯಕ್ಕೆ ಸಂಬಂಧವಿಲ್ಲದ ವಿದ್ಯಾರ್ಥಿಗಳ ಫ್ಲ್ಯಾಟ್‌ಗಳಿಗೆ ಪೊಲೀಸರು ನುಗ್ಗಿ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ, ಖಾಸಗಿ ವಿದ್ಯಾಸಂಸ್ಥೆಯ ಎಂಜಿನಿಯರಿಂಗ್ ವಿದ್ಯಾರ್ಥಿಗಳು ಮುಖ್ಯಮಂತ್ರಿ ಅವರಿಗೆ ಇ-ಮೇಲ್ ಮೂಲಕ ದೂರು ಸಲ್ಲಿಸಿ ನ್ಯಾಯಕ್ಕಾಗಿ ಮನವಿ ಮಾಡಿದ್ದಾರೆ.

Ad Widget

Ad Widget alt="Ad Widget"/>

Ad Widget

ವಿದ್ಯಾರ್ಥಿಗಳ ದೂರಿನ ಪ್ರಕಾರ, ನವೆಂಬರ್ 10ರಂದು ಮಣಿಪಾಲದ ವಸತಿ ಸಮುಚ್ಚಯದಲ್ಲಿರುವ ಕೊಠಡಿಗಳಿಗೆ ಪೊಲೀಸ್ ಸಿಬ್ಬಂದಿ ನುಗ್ಗಿ ಪರೀಕ್ಷೆಗೆ ಸಿದ್ಧತೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿದ್ದಾರೆ. ಈ ಘಟನೆ ವಸತಿ ಸಮುಚ್ಚಯದ ಸಿಸಿಟಿವಿ ಕ್ಯಾಮೆರಾಗಳಲ್ಲಿ ಸೆರೆಯಾಗಿದೆ ಎಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ.

Ad Widget

Ad Widget <> Ad Widget

ಯಾವುದೇ ಸೂಕ್ತ ಕಾರಣ ನೀಡದೆ ವಿದ್ಯಾರ್ಥಿಗಳನ್ನು ಪೊಲೀಸ್ ಠಾಣೆಗೆ ಕರೆದೊಯ್ದು ಬೆಳಗ್ಗೆ 11ರಿಂದ ರಾತ್ರಿ 8ರವರೆಗೆ ಠಾಣೆಯಲ್ಲಿ ಕೂರಿಸಿ ಮಾನಸಿಕ ಹಾಗೂ ದೈಹಿಕ ಹಿಂಸೆ ನೀಡಲಾಗಿದೆ. ಅಲ್ಲದೆ, ಮಣಿಪಾಲ ಠಾಣೆಯ ಪಿಎಸ್‌ಐ ಸುಳ್ಳು ವಿವರಗಳೊಂದಿಗೆ ಎಫ್‌ಐಆರ್ ದಾಖಲಿಸಿದ್ದಾರೆ ಎಂಬ ಆರೋಪವೂ ಕೇಳಿಬಂದಿದೆ.

ನವೆಂಬರ್ 8ರಂದು ವಸತಿ ಸಮುಚ್ಚಯದ ಆವರಣದಲ್ಲಿ ಯಾರಿಗೂ ತೊಂದರೆಯಾಗದಂತೆ ಶಾಂತಿಯುತವಾಗಿ ದೀಪಾವಳಿ ಆಚರಿಸಿದ್ದೇವೆ. ಆದರೆ, ಬೇರೆಯವರು ಸಾರ್ವಜನಿಕ ರಸ್ತೆಯಲ್ಲಿ ಮಾಡಿದ ಕೃತ್ಯಕ್ಕೆ ನಮ್ಮನ್ನು ಹೊಣೆಗಾರರನ್ನಾಗಿ ಮಾಡಿ ಪ್ರಕರಣ ದಾಖಲಿಸಿರುವುದು ಪರೀಕ್ಷಾ ಸಮಯದಲ್ಲಿ ನಮ್ಮ ಭವಿಷ್ಯದ ಬಗ್ಗೆ ಆತಂಕ ಮೂಡಿಸಿದೆ ಎಂದು ವಿದ್ಯಾರ್ಥಿಗಳು ಮುಖ್ಯಮಂತ್ರಿ ಅವರಿಗೆ ಸಲ್ಲಿಸಿರುವ ದೂರಿನಲ್ಲಿ ತಿಳಿಸಿದ್ದಾರೆ.

Ad Widget

Ad Widget

ಪೊಲೀಸ್ ಇಲಾಖೆ ಸ್ಪಷ್ಟನೆ
ವಿದ್ಯಾರ್ಥಿಗಳ ಆರೋಪಗಳಿಗೆ ಪ್ರತಿಕ್ರಿಯಿಸಿರುವ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಂ ಶಂಕರ್, ಪ್ರಕರಣಕ್ಕೆ ಅನ್ವಯವಾಗುವ ಕಾನೂನು ಸೆಕ್ಷನ್‌ಗಳ ಅಡಿಯಲ್ಲಿ ಪೊಲೀಸರು ನೇರವಾಗಿ ಎಫ್‌ಐಆರ್ ದಾಖಲಿಸಲು ಅವಕಾಶವಿಲ್ಲದ ಕಾರಣ ನ್ಯಾಯಾಲಯದ ಅನುಮತಿ ಪಡೆದು ಪ್ರಕರಣ ದಾಖಲಿಸಲಾಗಿದೆ ಎಂದು ತಿಳಿಸಿದ್ದಾರೆ.

ಘಟನಾ ಸ್ಥಳದ ಸಿಸಿಟಿವಿ ದೃಶ್ಯಾವಳಿ, ಮೊಬೈಲ್ ವಿಡಿಯೋ ದಾಖಲೆಗಳು ಹಾಗೂ ಸ್ಥಳೀಯರ ಹೇಳಿಕೆಗಳ ಆಧಾರದ ಮೇಲೆ ನಿಯಮ ಉಲ್ಲಂಘಿಸಿದ ಆರೋಪಿಗಳಿಗೆ ನೋಟಿಸ್ ಜಾರಿಗೊಳಿಸಲಾಗಿದೆ. ಪ್ರಕರಣದಲ್ಲಿ ಈವರೆಗೆ ಯಾರ ವಿರುದ್ಧವೂ ದೋಷಾರೋಪ ಪಟ್ಟಿ ಸಲ್ಲಿಸಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ದೌರ್ಜನ್ಯ ಆರೋಪದ ತನಿಖೆ ಡಿವೈಎಸ್ಪಿಗೆ
ಪೊಲೀಸರ ಅತಿರೇಕದ ವರ್ತನೆ ಕುರಿತು ವಿದ್ಯಾರ್ಥಿಗಳು ಮೂರು ದಿನಗಳ ಹಿಂದೆಯೇ ದೂರು ಸಲ್ಲಿಸಿದ್ದು, ಈ ಆರೋಪಗಳ ತನಿಖೆಯನ್ನು ಉಡುಪಿ ಡಿವೈಎಸ್ಪಿಗೆ ವಹಿಸಲಾಗಿದೆ. ತನಿಖೆ ಪ್ರಗತಿಯಲ್ಲಿದೆ ಎಂದು ಎಸ್ಪಿ ತಿಳಿಸಿದ್ದಾರೆ.

ಮಣಿಪಾಲ ಠಾಣೆಯ ಪಿಎಸ್‌ಐ ತನಿಖಾಧಿಕಾರಿಯಾಗಿ ಮುಂದುವರಿಯುವುದಕ್ಕೆ ವಿದ್ಯಾರ್ಥಿಗಳು ಆಕ್ಷೇಪ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ, ಅವರ ಮನವಿ ಸ್ವೀಕರಿಸಿದ ದಿನವೇ ಪ್ರಕರಣದ ತನಿಖೆಯನ್ನು ಮಣಿಪಾಲ ಪೊಲೀಸ್ ಇನ್‌ಸ್ಪೆಕ್ಟರ್‌ಗೆ ಹಸ್ತಾಂತರಿಸಲಾಗಿದೆ ಎಂದು ಎಸ್ಪಿ ಮಾಹಿತಿ ನೀಡಿದ್ದಾರೆ.

Ad Widget
Continue Reading

ಸ್ಥಳೀಯ

Baindoor-ರೈಲಿನಲ್ಲಿ ಮೊಬೈಲ್ ಕಳವು, UPI ಮೂಲಕ ಹಣ ವರ್ಗಾವಣೆ: ಬೈಂದೂರು ಪೊಲೀಸರಿಂದ ಕುಖ್ಯಾತ ಆರೋಪಿ ಬಂಧನ

Published

on

Ad Widget

Ad Widget

Ad Widget

Ad Widget

ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರ ಮೊಬೈಲ್ ಫೋನ್ ಕಳವು ಮಾಡಿ, ಅದರಲ್ಲಿದ್ದ UPI ಆ್ಯಪ್ ಬಳಸಿ ಹಣವನ್ನು ಅಕ್ರಮವಾಗಿ ವರ್ಗಾಯಿಸುತ್ತಿದ್ದ ಆರೋಪಿಯನ್ನು ಬೈಂದೂರು ಪೊಲೀಸರು ಬಂಧಿಸಿದ್ದಾರೆ. ಬಂಧಿತನಿಂದ ಕಳವು ಮಾಡಲಾಗಿದ್ದ ಮೂರು ಮೊಬೈಲ್ ಫೋನ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ಸಾಸ್ತಾನ ಐರೋಡಿ ಗ್ರಾಮದ ಗೋಳಿಬೆಟ್ಟು ನಿವಾಸಿ ಪ್ರಹ್ಲಾದ್ (32) ಬಂಧಿತ ಆರೋಪಿ.

Ad Widget

Ad Widget

Ad Widget

Ad Widget

ಬೈಂದೂರು, ನ.19: ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರ ಮೊಬೈಲ್ ಫೋನ್ ಕಳವು ಮಾಡಿ, ಅದರಲ್ಲಿದ್ದ UPI ಆ್ಯಪ್ ಬಳಸಿ ಹಣವನ್ನು ಅಕ್ರಮವಾಗಿ ವರ್ಗಾಯಿಸುತ್ತಿದ್ದ ಆರೋಪಿಯನ್ನು ಬೈಂದೂರು ಪೊಲೀಸರು ಬಂಧಿಸಿದ್ದಾರೆ. ಬಂಧಿತನಿಂದ ಕಳವು ಮಾಡಲಾಗಿದ್ದ ಮೂರು ಮೊಬೈಲ್ ಫೋನ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ.

Ad Widget

Ad Widget alt="Ad Widget"/>

Ad Widget

ಸಾಸ್ತಾನ ಐರೋಡಿ ಗ್ರಾಮದ ಗೋಳಿಬೆಟ್ಟು ನಿವಾಸಿ ಪ್ರಹ್ಲಾದ್ (32) ಬಂಧಿತ ಆರೋಪಿ.

Ad Widget

Ad Widget <> Ad Widget

ಕಳೆದ ಆಗಸ್ಟ್ 2ರಂದು ರೊಬಿನ್ ಫೆರ್ನಾಂಡಿಸ್ ಅವರು ಮಂಗಳೂರಿನಿಂದ ಮಡಗಾಂವ್‌ಗೆ ರೈಲಿನಲ್ಲಿ ಪ್ರಯಾಣಿಸುತ್ತಿದ್ದರು. ಬೆಳಗಿನ ಜಾವ ಸುಮಾರು 2 ಗಂಟೆಗೆ ರೈಲು ಬೈಂದೂರು ನಿಲ್ದಾಣದ ಬಳಿ ತಲುಪಿದ ಸಂದರ್ಭದಲ್ಲಿ ಅವರ 17 ಸಾವಿರ ರೂ. ಮೌಲ್ಯದ ಮೊಬೈಲ್ ಫೋನ್ ಕಳವಾಗಿತ್ತು. ಬಳಿಕ ಕಳವು ಮಾಡಿದ ಮೊಬೈಲ್‌ನಲ್ಲಿದ್ದ UPI ಆ್ಯಪ್ ಮೂಲಕ ಆರೋಪಿಯು 19,847 ರೂ. ಹಣವನ್ನು ತನ್ನ ಖಾತೆಗೆ ವರ್ಗಾಯಿಸಿಕೊಂಡಿದ್ದ. ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಪ್ರಕರಣದ ತನಿಖೆ ಕೈಗೆತ್ತಿಕೊಂಡ ಬೈಂದೂರು ವೃತ್ತ ನಿರೀಕ್ಷಕ ಶಿವಕುಮಾರ್ ಬಿ. ನೇತೃತ್ವದ ಪೊಲೀಸ್ ತಂಡ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ. ವಿಚಾರಣೆ ವೇಳೆ ಪ್ರಹ್ಲಾದ್, ತನ್ನ ಸಹಚರ ಜೋಶಿ ನಾರಾಯಣ ನಾಯಕ್ ಜೊತೆ ಸೇರಿ ಬೈಂದೂರು ಸಮೀಪ ಆಗಸ್ಟ್ 2, ಅಕ್ಟೋಬರ್ 13 ಹಾಗೂ ಮಾರ್ಚ್ 6ರಂದು ರೈಲು ಪ್ರಯಾಣಿಕರ ಮೊಬೈಲ್ ಫೋನ್‌ಗಳನ್ನು ಕಳವು ಮಾಡಿರುವುದಾಗಿ ಒಪ್ಪಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

Ad Widget

Ad Widget

ಬಂಧಿತ ಪ್ರಹ್ಲಾದ್ ವಿರುದ್ಧ ಕಾರವಾರ ಗ್ರಾಮೀಣ, ಬಂಟ್ವಾಳ ನಗರ, ಉಡುಪಿ ನಗರ, ಬ್ರಹ್ಮಾವರ, ಕೋಟ ಹಾಗೂ ಕುಂದಾಪುರ ನಗರ ಪೊಲೀಸ್ ಠಾಣೆಗಳಲ್ಲಿ ಈಗಾಗಲೇ ವಿವಿಧ ಅಪರಾಧ ಪ್ರಕರಣಗಳು ದಾಖಲಾಗಿವೆ ಎನ್ನಲಾಗಿದೆ.

ಬಂಧಿತ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!