ದಕ್ಷಿಣ ಕನ್ನಡ
ಮಹಿಳೆಯರ ಘನತೆಗೆ ಧಕ್ಕೆ : RSS ಪ್ರತಿನಿಧಿ ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ FIR – ಆಯೋಜಕರ ವಿರುದ್ಧವು ಕೇಸ್

ಪುತ್ತೂರು: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್.ಎಸ್.ಎಸ್.) ಪ್ರತಿನಿಧಿ ಕಲ್ಲಡ್ಕ ಪ್ರಭಾಕರ ಭಟ್ ಅವರು ಇತ್ತೀಚೆಗೆ ಪುತ್ತೂರು ತಾಲೂಕಿನ ಉಪ್ಪಳಿಗೆಯಲ್ಲಿ ನಡೆದ ದೀಪೋತ್ಸವ ಕಾರ್ಯಕ್ರಮದಲ್ಲಿ ಮಾಡಿದ ಭಾಷಣ ವಿವಾದದ ಕೇಂದ್ರಬಿಂದುವಾಗಿದ್ದು, ಧಾರ್ಮಿಕ ದ್ವೇಷ ಮತ್ತು ಮಹಿಳಾ ಘನತೆಗೆ ಧಕ್ಕೆ ಉಂಟುಮಾಡಿದ ಆರೋಪದ ಅಡಿಯಲ್ಲಿ ಅವರ ವಿರುದ್ಧ ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಅ. 25 ಪ್ರಕರಣ ದಾಖಲಾಗಿದೆ.
ಪುತ್ತೂರು ತಾಲೂಕಿನ ಈಶ್ವರಿ ಪದ್ಮುಂಜ ಎಂಬವರು ಈ ಬಗ್ಗೆ ದೂರು ನೀಡಿದ್ದು , ಇದರ ಅನ್ವಯ, ಅಕ್ಟೋಬರ್ 20 ರಂದು ಉಪ್ಪಳಿಗೆಯಲ್ಲಿ ನಡೆದ ದೀಪೋತ್ಸವ ಕಾರ್ಯಕ್ರಮದಲ್ಲಿ ಭಟ್ ಅವರು ಮಾಡಿದ ಭಾಷಣ ಸಾರ್ವಜನಿಕ ಶಾಂತಿಗೆ ಅಪಾಯಕಾರಿಯಾಗಿದ್ದು, ಹಿಂದೂ-ಮುಸ್ಲಿಂ ಸಮುದಾಯಗಳ ಬಗ್ಗೆ ಅವಮಾನಕಾರಿ ಹೇಳಿಕೆಗಳನ್ನು ನೀಡಿ, ಮತದಾರರ ಸಂಖ್ಯೆಯ ಉಲ್ಲೇಖದ ಮೂಲಕ ಧಾರ್ಮಿಕ ವೈಮನಸ್ಸು ಪ್ರಚೋದಿಸಿದ್ದಾರೆ ಎಂದು ದೂರಲಾಗಿದೆ.
ಅವರ ಭಾಷಣವು ಯೂಟ್ಯೂಬ್ ಚಾನೆಲ್ ವೊಂದರಲ್ಲಿ ಪ್ರಸಾರಗೊಂಡಿರುವುದನ್ನು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಪ್ರಭಾಕರ ಭಟ್ ಹಾಗೂ ಆ ಕಾರ್ಯಕ್ರಮವನ್ನು ಆಯೋಜಿಸಿದ ಸಂಘಟಕರ ವಿರುದ್ಧವು ಭಾರತೀಯ ನ್ಯಾಯ ಸಂಹಿತೆ (BNS) ಯ ಕಲಂ 79, 196, 299, 302, ಹಾಗೂ 3(5) ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಪ್ರಕರಣದ ತನಿಖೆಯನ್ನು ಪುತ್ತೂರು ಗ್ರಾಮಾಂತರ ಪೊಲೀಸರು ಈಗಾಗಲೇ ಪ್ರಾರಂಭಿಸಲಾಗಿದೆಯೆಂದು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಬಿಗ್ ನ್ಯೂಸ್
Muraleedhar Rai-ಮೆಸ್ಕಾಂ ನಿರ್ದೇಶಕರಾಗಿ ಮುರಳೀಧರ ರೈ ಮಠಂತಬೆಟ್ಟು ಸರ್ಕಾರದಿಂದ ನೇಮಕ
ರಾಜ್ಯ ಸರಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ವಿವಿಧ ನಿಗಮಗಳು, ಮಂಡಳಿಗಳು ಹಾಗೂ ಪ್ರಾಧಿಕಾರಗಳಿಗೆ 81 ಮಂದಿಯನ್ನು ನಿರ್ದೇಶಕರು ಹಾಗೂ ಸದಸ್ಯರನ್ನಾಗಿ ನೇಮಕ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.ಈ ಪೈಕಿ ಮೆಸ್ಕಾಂ ನಿರ್ದೇಶಕರಾಗಿ ಕಾಂಗ್ರೆಸ್ ಮುಖಂಡ ಮುರಳೀಧರ ರೈ ಮಠಂತಬೆಟ್ಟು ಅವರು ನೇಮಕಗೊಂಡಿದ್ದಾರೆ.
ಉಪ್ಪಿನಂಗಡಿ: ರಾಜ್ಯ ಸರಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ವಿವಿಧ ನಿಗಮಗಳು, ಮಂಡಳಿಗಳು ಹಾಗೂ ಪ್ರಾಧಿಕಾರಗಳಿಗೆ 81 ಮಂದಿಯನ್ನು ನಿರ್ದೇಶಕರು ಹಾಗೂ ಸದಸ್ಯರನ್ನಾಗಿ ನೇಮಕ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.ಈ ಪೈಕಿ ಮೆಸ್ಕಾಂ ನಿರ್ದೇಶಕರಾಗಿ ಕಾಂಗ್ರೆಸ್ ಮುಖಂಡ ಮುರಳೀಧರ ರೈ ಮಠಂತಬೆಟ್ಟು ಅವರು ನೇಮಕಗೊಂಡಿದ್ದಾರೆ.
ಕೋಡಿಂಬಾಡಿ ಮಠಂತಬೆಟ್ಟುವಿನ ಪ್ರತಿಷ್ಠಿತ ಬಂಟ ಕುಟುಂಬದ ಹಿರಿಯ ಕಾಂಗ್ರೆಸ್ ಮುಖಂಡ ಅನಂತ ರೈಯವರ ಪುತ್ರ ಮುರಳೀಧರ ರೈ ಮಠಂತಬೆಟ್ಟು ಅವರು ಹಿರಿಯರ ಕಾಲದಿಂದಲೇ ಕಾಂಗ್ರೆಸ್ ಕುಟುಂಬದಲ್ಲಿ ಬೆಳೆದು ಬಂದವರು.ಬೂತ್ ಮಟ್ಟದಿಂದ ಕಾಂಗ್ರೆಸ್ ಪಕ್ಷದ ಕಾರ್ಯಕರ್ತನಾಗಿ ಸುಮಾರು ವರ್ಷಗಳ ಕಾಲ ವಲಯ ಕಾಂಗ್ರೆಸ್ ಅಧ್ಯಕ್ಷನಾಗಿ ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಂಡವರು. ಕೋಡಿಂಬಾಡಿ ಗ್ರಾಮ ಪಂಚಾಯತ್ ಅಧ್ಯಕ್ಷನಾಗಿ ಜನ ಸೇವೆ ಆರಂಭಿದ ಇವರು ಉಪ್ಪಿನಂಗಡಿ-ವಿಟ್ಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷನಾಗಿ ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಂಡವರು. ಪ್ರಸ್ತುತ ದ.ಕ.ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷರಾಗಿಯೂ ಜವಾಬ್ದಾರಿ ನಿರ್ವಹಿಸುತ್ತಿರುವ ಮುರಳೀಧರ ರೈಯವರನ್ನು ಇದೀಗ ಕರ್ನಾಟಕ ಸರಕಾರ ಮೆಸ್ಕಾಂ ನಿರ್ದೇಶಕರಾಗಿ ನೇಮಕ ಮಾಡಿದೆ.
ಶಿಕ್ಷಣ
Philomena-ಮಂಗಳೂರು ವಿಶ್ವವಿದ್ಯಾನಿಲಯ ಅಥ್ಲೆಟಿಕ್ಸ್ ಕೂಟದಲ್ಲಿ ಫಿಲೋಮಿನಾ ಕಾಲೇಜಿನ ಕ್ರೀಡಾಪಟುಗಳ ಸಾಧನೆ
ಮಂಗಳೂರಿನ ಅಜ್ಜರಕಾಡಿನ ಮಹಾತ್ಮ ಗಾಂಧಿ ಕ್ರೀಡಾಂಗಣದಲ್ಲಿ ನ. 11ರಂದು ನಡೆದ ಮಂಗಳೂರು ವಿಶ್ವವಿದ್ಯಾನಿಲಯ ಅಂತರ್ ಕಾಲೇಜು ಅಥ್ಲೆಟಿಕ್ಸ್ ಕೂಟದಲ್ಲಿ ಪುತ್ತೂರಿನ ಸಂತ ಫಿಲೋಮಿನಾ ಸ್ವಾಯತ್ತ ಕಾಲೇಜಿನ ಕ್ರೀಡಾಪಟುಗಳು ಗಮನಾರ್ಹ ಸಾಧನೆ ಮಾಡಿದ್ದು, ಮಹಿಳಾ ತಂಡವು ಸಮಗ್ರವಾಗಿ ಐದನೇ ಹಾಗೂ ಪುರುಷರ ತಂಡವು ಏಳನೇ ಸ್ಥಾನ ಪಡೆದಿದೆ.
ಪುತ್ತೂರು, ನ. 20: ಮಂಗಳೂರಿನ ಅಜ್ಜರಕಾಡಿನ ಮಹಾತ್ಮ ಗಾಂಧಿ ಕ್ರೀಡಾಂಗಣದಲ್ಲಿ ನ. 11ರಂದು ನಡೆದ ಮಂಗಳೂರು ವಿಶ್ವವಿದ್ಯಾನಿಲಯ ಅಂತರ್ ಕಾಲೇಜು ಅಥ್ಲೆಟಿಕ್ಸ್ ಕೂಟದಲ್ಲಿ ಪುತ್ತೂರಿನ ಸಂತ ಫಿಲೋಮಿನಾ ಸ್ವಾಯತ್ತ ಕಾಲೇಜಿನ ಕ್ರೀಡಾಪಟುಗಳು ಗಮನಾರ್ಹ ಸಾಧನೆ ಮಾಡಿದ್ದು, ಮಹಿಳಾ ತಂಡವು ಸಮಗ್ರವಾಗಿ ಐದನೇ ಹಾಗೂ ಪುರುಷರ ತಂಡವು ಏಳನೇ ಸ್ಥಾನ ಪಡೆದಿದೆ.
ಕಾಲೇಜಿನ ಪ್ರಥಮ ಬಿಕಾಂ ವಿದ್ಯಾರ್ಥಿ ನಿಹಾಲ್ ಪೋಲ್ ವಾಲ್ಟ್ನಲ್ಲಿ ಬೆಳ್ಳಿ ಪದಕ ಗಳಿಸಿದರೆ, ತೃತೀಯ ಬಿಎಸ್ಸಿಯ ರಿತೀಶ್ ಡಿಸ್ಕಸ್ ಥ್ರೋ ಹಾಗೂ ಶಾಟ್ಪುಟ್ನಲ್ಲಿ ತಲಾ ಕಂಚಿನ ಪದಕ ಪಡೆದರು. ದ್ವಿತೀಯ ಬಿಸಿಎಯ ಆಶ್ರಯ್ ಹಾಗೂ ಪ್ರಥಮ ಬಿಕಾಂನ ನಿಶ್ಚಿತ್ 4×400 ಮೀಟರ್ ಮಿಶ್ರ ರಿಲೇಯಲ್ಲಿ ಕಂಚಿನ ಪದಕ ಪಡೆದ ತಂಡದ ಸದಸ್ಯರಾಗಿದ್ದರು.
ಮಹಿಳಾ ವಿಭಾಗದಲ್ಲಿ ತೃತೀಯ ಬಿಕಾಂನ ಅಮೃತಾ ಹೈಜಂಪ್ನಲ್ಲಿ ಕಂಚಿನ ಪದಕ ಗಳಿಸಿದರೆ, ತೃತೀಯ ಬಿಕಾಂನ ಪೃಥ್ವಿ ಹ್ಯಾಮರ್ ಥ್ರೋದಲ್ಲಿ ಕಂಚಿನ ಪದಕ ಪಡೆದರು. ದ್ವಿತೀಯ ಬಿಎಯ ಕೃತಿ 4×400 ಮೀಟರ್ ಮಿಶ್ರ ರಿಲೇಯಲ್ಲಿ ಕಂಚಿನ ಪದಕ ಪಡೆದ ತಂಡದ ಸದಸ್ಯೆಯಾಗಿದ್ದರು. ಪ್ರಥಮ ಬಿಎಯ ಜೀವಿತಾ ಲಾಂಗ್ ಜಂಪ್ ಹಾಗೂ 4×400 ಮೀಟರ್ ಮಿಶ್ರ ರಿಲೇಯಲ್ಲಿ ತಲಾ ಕಂಚಿನ ಪದಕ ಗಳಿಸಿದರು.
ಕ್ರೀಡಾಪಟುಗಳ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ ಹಾಗೂ ದೈಹಿಕ ಶಿಕ್ಷಣ ವಿಭಾಗ ಅಭಿನಂದನೆ ಸಲ್ಲಿಸಿದ್ದು, ಪದಕ ವಿಜೇತರು ಮತ್ತು ಸ್ಪರ್ಧೆಯಲ್ಲಿ ಪಾಲ್ಗೊಂಡ ಎಲ್ಲ ಕ್ರೀಡಾಪಟುಗಳು ಕಾಲೇಜಿಗೆ ಕೀರ್ತಿ ತಂದಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದೆ.
ಶಿಕ್ಷಣ
Narendra-ಪುತ್ತೂರಿನ ನರೇಂದ್ರ ಪದವಿ ಪೂರ್ವ ಕಾಲೇಜಿನ ನೂತನ ಆಡಳಿತ ಮಂಡಳಿಯ ಅಧ್ಯಕ್ಷರಾಗಿ ರವೀಶ ನಾಯಕ್ ಬಿ.ಸಿ., ಸಂಚಾಲಕರಾಗಿ ಚೇತನ್ ನಾಯಕ್ ಜವಾಬ್ದಾರಿ ಸ್ವೀಕಾರ
ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು(ರಿ.) ಇದರ ಪ್ರತಿಷ್ಠಿತ ಘಟಕ ಸಂಸ್ಥೆಗಳಲ್ಲಿ ಒಂದಾಗಿರುವ ತೆಂಕಿಲದ ನರೇಂದ್ರ ಪದವಿ ಪೂರ್ವ ಕಾಲೇಜಿನ ನೂತನ ಆಡಳಿತ ಮಂಡಳಿಯ ಪದಾಧಿಕಾರಿಗಳ ಆಯ್ಕೆ ಮತ್ತು ಜವಾಬ್ದಾರಿ ಸ್ವೀಕಾರ ಸಮಾರಂಭವು ನ.19 ರಂದು ಕಾಲೇಜಿನ ಆಡಳಿತ ಮಂಡಳಿಯ ಕಚೇರಿಯಲ್ಲಿ ಜರುಗಿತು.
ಪುತ್ತೂರು: ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು(ರಿ.) ಇದರ ಪ್ರತಿಷ್ಠಿತ ಘಟಕ ಸಂಸ್ಥೆಗಳಲ್ಲಿ ಒಂದಾಗಿರುವ ತೆಂಕಿಲದ ನರೇಂದ್ರ ಪದವಿ ಪೂರ್ವ ಕಾಲೇಜಿನ ನೂತನ ಆಡಳಿತ ಮಂಡಳಿಯ ಪದಾಧಿಕಾರಿಗಳ ಆಯ್ಕೆ ಮತ್ತು ಜವಾಬ್ದಾರಿ ಸ್ವೀಕಾರ ಸಮಾರಂಭವು ನ.19 ರಂದು ಕಾಲೇಜಿನ ಆಡಳಿತ ಮಂಡಳಿಯ ಕಚೇರಿಯಲ್ಲಿ ಜರುಗಿತು.
ಪುತ್ತೂರಿನ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಇಲ್ಲಿ ಕರ್ತವ್ಯ ನಿರ್ವಹಿಸಿ ಉಪ ಪ್ರಧಾನ ವ್ಯವಸ್ಥಾಪಕರಾಗಿ ನಿವೃತ್ತ ರಾದ ರವೀಶ ನಾಯಕ್ ಬಿ.ಸಿ. ಇವರು ಕಾಲೇಜಿನ ನೂತನ ಆಡಳಿತ ಮಂಡಳಿಯ ಅಧ್ಯಕ್ಷರಾಗಿ, ವಕೀಲರಾದ ಚೇತನ್ ನಾಯಕ್ ಸಂಚಾಲಕರಾಗಿ, ವಕೀಲರಾದ ಅರುಣ್ ಬಿ.ಕೆ. ಕೋಶಾಧಿಕಾರಿಗಳಾಗಿ, ಹಾಗೂ ಸದಸ್ಯರುಗಳಾಗಿ ಚಾರ್ಟರ್ಡ್ ಅಕೌಂಟೆಂಟ್ ಆದ ಶಿವಕುಮಾರ್
ಹಿಳ್ಳೆಮನೆ, ಅಶ್ವಿನಿ ಕೃಷ್ಣ ಮುಳಿಯ, ಸತ್ಯನಾರಾಯಣ ಬಿ., ಶುಭಾ ಅಡಿಗ, ರಮೇಶ್ ನಾಯಕ್ ಕೆ., ಗೊಲೆಕ್ಸ್ ಕ್ಯಾಟಲ್ ಫೀಡ್ಸ್ ನೈತಾಡಿ ಇದರ ಮಾಲಕರಾದ ಕೃಷ್ಣ ಮೋಹನ್ ಪಿ.ಎಸ್. ಜವಾಬ್ದಾರಿ ಸ್ವೀಕರಿಸಿದರು.
ಇವರಿಗೆ ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿಗಳಾದ ವಿಜಯನಾರಾಯಣ ಕೆ.ಎಮ್. ದೀಪ ಪ್ರದಾನ ಮಾಡುವ ಮೂಲಕ ಜವಾಬ್ದಾರಿ ಪ್ರದಾನ ಮಾಡಿದರು. ಜೊತೆ ಕರ್ಯದರ್ಶಿಗಳಾದ ಭರತ್
ಪೈ, ಕೋಶಾಧಿಕಾರಿಗಳಾದ ಸಂತೋಷ ಬಿ., ನಿರ್ದೇಶಕರಾದ ಮಹಾಕ್ಷ್ಮಿ ಕೆ. ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಕಾಲೇಜಿನ ಆಡಳಿತ ಮಂಡಳಿಯ ನಿಕಟಪೂರ್ವ ಅಧ್ಯಕ್ಷರಾದ ಶ್ರೀಕಾಂತ ಕೊಳತ್ತಾಯ, ನಿಕಟಪೂರ್ವ ಸಂಚಾಲಕರಾದ ಸಂತೋಷ ಬಿ., ಕೋಶಾಧಿಕಾರಿಗಳಾದ ಸಂಪತ್
ಕುಮಾರ್ , ಸದಸ್ಯರಾದ ಉಮೇಶ್ ನಾಯಕ್, ಮೋಹಿನಿ ದಿವಾಕರ, ಸೂರ್ಯನಾಥ ಆಳ್ವ ಉಪಸ್ಥಿತರಿದ್ದರು.
ಕಾಲೇಜಿನ ಪ್ರಾಂಶುಪಾಲರಾದ ಪ್ರಸಾದ್ ಶಾನ್ ಭಾಗ್ , ಎಲ್ಲಾ ಉಪನ್ಯಾಸಕರು, ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
ನೂತನ ಆಡಳಿತ ಮಂಡಳಿಯ ಪದಾಧಿಕಾರಿಗಳಿಗೆ ನಿರ್ಗಮಿತ ಸಮಿತಿಯ ಪದಾಧಿಕಾರಿಗಳು ದೀಪ ಜ್ಯೋತಿಯನ್ನು ಹಸ್ತಾಂತರಿಸಿ ಶುಭ ಹಾರೈಸಿದರು.ಈ ಸಂದರ್ಭದಲ್ಲಿ ವಿವೇಕಾನಂದ ವಿದ್ಯಾವರ್ಧಕ
ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಲಕ್ಷ್ಮಿ ಪ್ರಸಾದ್ ಬೊಟ್ಯಾಡಿ ಉಪಸ್ಥಿತರಿದ್ದು ನೂತನ ಸಮಿತಿಗೆ ಶುಭ ಹಾರೈಸಿದರು.
ನಿರ್ಗಮಿತ ಸಮಿತಿಯ ಪದಾಧಿಕಾರಿಗಳು ತಮ್ಮ ಸೇವಾ ಅವಧಿಯಲ್ಲಿ ಸಹಕರಿಸಿದ ಎಲ್ಲರಿಗೂ ಕೃತಜ್ಞತೆಗಳನ್ನು ಸಲ್ಲಿಸಿದರು.ನೂತನ ಸಮಿತಿಯ ಅಧ್ಯಕ್ಷರು, ಸಂಚಾಲಕರು ಮುಂದಿನ ದಿನಗಳಲ್ಲಿ ಸಂಸ್ಥೆಯ ಅಭಿವೃದ್ಧಿಗೆ ಎಲ್ಲರೂ ಒಂದಾಗಿ ಶ್ರಮಿಸುವ ಎಂದು ಎಲ್ಲರ ಸಹಕಾರವನ್ನು ಕೋರಿದರು.
-
ಬಿಗ್ ನ್ಯೂಸ್22 hours agoNeralakatte-Big Breaking: ನೇರಳಕಟ್ಟೆ : ಲಾರಿ ಡಿಕ್ಕಿಯಾಗಿ ರಸ್ತೆ ದಾಟುತ್ತಿದ್ದ 14ರ ಬಾಲಕಿ ದುರ್ಮರಣ
-
ಆರೋಗ್ಯ24 hours agoPuttur-ಪುತ್ತೂರು: ಸಿಟಿ ಆಸ್ಪತ್ರೆಯಲ್ಲಿ ಉಚಿತ ಮೂಳೆ ಖನಿಜ ಸಾಂದ್ರತೆ (BMD) ಚಿಕಿತ್ಸಾ ಶಿಬಿರ
-
ಶಿಕ್ಷಣ6 hours agoVivekananda-ವಿವೇಕಾನಂದ ಪಾಲಿಟೆಕ್ನಿಕ್ – ನೂತನ ಆಡಳಿತ ಮಂಡಳಿಯ ರಚನೆ : ಅಧ್ಯಕ್ಷರಾಗಿ ಕೃಷ್ಣಕುಮಾರ್ ಅತ್ರಿಜಾಲು, ಸಂಚಾಲಕರಾಗಿ ನರಸಿಂಹ ಪೈ
-
ಸ್ಥಳೀಯ5 hours agoBaindoor-ರೈಲಿನಲ್ಲಿ ಮೊಬೈಲ್ ಕಳವು, UPI ಮೂಲಕ ಹಣ ವರ್ಗಾವಣೆ: ಬೈಂದೂರು ಪೊಲೀಸರಿಂದ ಕುಖ್ಯಾತ ಆರೋಪಿ ಬಂಧನ
-
ಚಿನ್ನ-ಬೆಳ್ಳಿ ದರ5 hours agoGold Rate Today-ಆಭರಣಪ್ರಿಯರಿಗೆ ಗುಡ್ನ್ಯೂಸ್: ಚಿನ್ನದ ಬೆಲೆಯಲ್ಲಿ ಭಾರೀ ಕುಸಿತ: 12 ಸಾವಿರ ರೂ. ಗಡಿಯೊಳಗೆ ಬಂದ ಆಭರಣ ಚಿನ್ನ..!
-
ಅಪರಾಧ5 hours agoMangalore-ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ: ಮತ್ತೊಂದು ಪೋಕ್ಸೋ ಪ್ರಕರಣದಲ್ಲಿ ಧರ್ಮಗುರು ಮರುಬಂಧನ
-
ಅಪರಾಧ5 hours agoManipal police-ಪಟಾಕಿ ಪ್ರಕರಣ: ಮಣಿಪಾಲ ಪೊಲೀಸರ ವಿರುದ್ಧ ದೌರ್ಜನ್ಯ ಆರೋಪ: ಸಿಎಂಗೆ ಇ-ಮೇಲ್ ಮಾಡಿದ ವಿದ್ಯಾರ್ಥಿಗಳು
-
ಸಿನೆಮಾ4 hours agoArjun Sarja-ಪುತ್ರಿ ಐಶ್ವರ್ಯಾ ವಿರುದ್ಧ ಅವಹೇಳನಕಾರಿ ವರದಿ: ಮಾಧ್ಯಮಗಳ ವಿರುದ್ಧ ಸಿಡಿದೆದ್ದ ಅರ್ಜುನ್ ಸರ್ಜಾ; ಅಧಿಕೃತ ದೂರು ದಾಖಲು















