Connect with us

ಸ್ಥಳೀಯ

Excel-ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜು: ಉಚಿತ ಶಿಕ್ಷಣಕ್ಕೆ ಅರ್ಜಿ ಆಹ್ವಾನ; ಈ ಯೋಜನೆಯಡಿ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಎರಡು ವರ್ಷ ಶಿಕ್ಷಣದೊಂದಿಗೆ ಆಯ್ಕೆಯ ಕೋಚಿಂಗ್ ಉಚಿತ

Published

on



Ad Widget

Ad Widget

Ad Widget

Ad Widget

ಪಿಯು ಶಿಕ್ಷಣ ಹಾಗೂ ನೀಟ್, ಜೆಇಇ, ಸಿಇಟಿ, ಎನ್ ಡಿ ಎ, ನಾಟಾ, ಬಿಎಸ್ಸಿ ಅಗ್ರಿ, ವಾಣಿಜ್ಯ ವಿಭಾಗದಲ್ಲಿ ಸಿಎ,ಸಿ ಎಸ್, ಕ್ಲಾಟ್ ಮೊದಲಾದ ಪರೀಕ್ಷೆಗಳಲ್ಲಿ ರಾಷ್ಟ್ರ ಮಟ್ಟದಲ್ಲಿ ಹೆಸರಾಗಿರುವ ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜು ಕಳೆದ ಬಾರಿಯಂತೆ, ಈ ವರ್ಷವೂ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ ನೀಡಲು ಅರ್ಜಿ ಆಹ್ವಾನಿಸುತ್ತಿದೆ ಎಂದು ಎಕ್ಸೆಲ್ ಶಿಕ್ಷಣ ಸಂಸ್ಥೆ ಪ್ರಕಟಣೆಯಲ್ಲಿ ತಿಳಿಸಿದೆ.

Ad Widget

Ad Widget

Ad Widget

Ad Widget

ಗುರುವಾಯನಕೆರೆ: ಪಿಯು ಶಿಕ್ಷಣ ಹಾಗೂ ನೀಟ್, ಜೆಇಇ, ಸಿಇಟಿ, ಎನ್ ಡಿ ಎ, ನಾಟಾ, ಬಿಎಸ್ಸಿ ಅಗ್ರಿ, ವಾಣಿಜ್ಯ ವಿಭಾಗದಲ್ಲಿ ಸಿಎ,ಸಿ ಎಸ್, ಕ್ಲಾಟ್ ಮೊದಲಾದ ಪರೀಕ್ಷೆಗಳಲ್ಲಿ ರಾಷ್ಟ್ರ ಮಟ್ಟದಲ್ಲಿ ಹೆಸರಾಗಿರುವ ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜು ಕಳೆದ ಬಾರಿಯಂತೆ, ಈ ವರ್ಷವೂ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ ನೀಡಲು ಅರ್ಜಿ ಆಹ್ವಾನಿಸುತ್ತಿದೆ ಎಂದು ಎಕ್ಸೆಲ್ ಶಿಕ್ಷಣ ಸಂಸ್ಥೆ ಪ್ರಕಟಣೆಯಲ್ಲಿ ತಿಳಿಸಿದೆ.

Ad Widget

Ad Widget

Ad Widget alt="Ad Widget"/>

Ad Widget

ರಾಜ್ಯ ಪಠ್ಯ ಕ್ರಮದ ಒಂಬತ್ತನೆಯ ತರಗತಿಯ ಅಂತಿಮ ಪರೀಕ್ಷೆಯಲ್ಲಿ ಶೇಕಡಾ 98 ಮತ್ತು ಅದಕ್ಕಿಂತ ಹೆಚ್ಚು ಅಂಕ ಪಡೆದವರು ಹಾಗೂ ಸಿ ಬಿ ಎಸ್ ಇ/ಐ ಸಿ ಎಸ್ ಇ ಯ ವಿದ್ಯಾರ್ಥಿಗಳು ಶೇಕಡಾ 95 ಮತ್ತು ಹೆಚ್ಚು ಅಂಕ ಪಡೆದವರು ಈ ಯೋಜನೆಗೆ ಅರ್ಹರು. ಹತ್ತನೇ ತರಗತಿಯ ಮಧ್ಯಾವಧಿ ಪರೀಕ್ಷೆಯಲ್ಲಿ ಕ್ರಮವಾಗಿ 98 ಶೇಕಡಾ ಹಾಗೂ 95 ಶೇಕಡಾಕ್ಕಿಂತ ಅಧಿಕ ಪಡೆದವರಿಗೆ ಕೂಡಾ ಈ ಯೋಜನೆಯಲ್ಲಿ ಉಚಿತ ಶಿಕ್ಷಣ ನೀಡಲಾಗುತ್ತದೆ.

Ad Widget

Ad Widget <> Ad Widget

ಎಕ್ಸೆಲ್ ಬೆಳಕು ಯೋಜನೆಯಡಿ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಎರಡು ವರ್ಷಗಳ ಪದವಿ ಪೂರ್ವ ಶಿಕ್ಷಣ ಹಾಗೂ ಅವರ ಆಯ್ಕೆಯ ಕೋಚಿಂಗ್ ನ್ನು ಸಂಪೂರ್ಣ ಉಚಿತವಾಗಿ ನೀಡಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.



Ad Widget

ಆಸಕ್ತ ವಿದ್ಯಾರ್ಥಿಗಳು ಅಥವಾ ಪಾಲಕರು ಕಾಲೇಜು ಕಚೇರಿಗೆ ನೇರವಾಗಿ ಭೇಟಿ ನೀಡಬಹುದು. ಅಥವಾ ‪+918867242769‬ ದೂರವಾಣಿ ಸಂಖ್ಯೆಗೆ ಸಂಪರ್ಕಿಸಬಹುದು ಎಂದು ತಿಳಿಸಿದ್ದಾರೆ.

Click to comment

Leave a Reply

ಸ್ಥಳೀಯ

Yatnal-ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕಲು ನಕಲಿ ಮರಣ ಪ್ರಮಾಣಪತ್ರ ಲಗತ್ತಿಸಿದ ಆರೋಪ : ಯತ್ನಾಳ್ ವಿರುದ್ಧ ಎಫ್‌ಐಆರ್

Published

on



Ad Widget

Ad Widget

Ad Widget

Ad Widget

ಜೀವಂತವಾಗಿರುವ ವ್ಯಕ್ತಿ ಮೃತಪಟ್ಟಿದ್ದಾರೆ ಎಂದು ನಕಲಿ ಮರಣ ಪ್ರಮಾಣಪತ್ರ ಲಗತ್ತಿಸಿ ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕಲು ಅರ್ಜಿ ಸಲ್ಲಿಸಿದ ಆರೋಪದ ಮೇಲೆ ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಇದೇ ರೀತಿಯ ಆರೋಪದಡಿ ಬಿಜೆಪಿ ಪಾಲಿಕೆ ಸದಸ್ಯ ಗಿರೀಶ ಪಾಟೀಲ ಹಾಗೂ ತಿಕೋಟಾದ ಆರು ಮಂದಿ ವಿರುದ್ಧವೂ ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ.

Ad Widget

Ad Widget

Ad Widget

Ad Widget

ವಿಜಯಪುರ: ಜೀವಂತವಾಗಿರುವ ವ್ಯಕ್ತಿ ಮೃತಪಟ್ಟಿದ್ದಾರೆ ಎಂದು ನಕಲಿ ಮರಣ ಪ್ರಮಾಣಪತ್ರ ಲಗತ್ತಿಸಿ ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕಲು ಅರ್ಜಿ ಸಲ್ಲಿಸಿದ ಆರೋಪದ ಮೇಲೆ ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಇದೇ ರೀತಿಯ ಆರೋಪದಡಿ ಬಿಜೆಪಿ ಪಾಲಿಕೆ ಸದಸ್ಯ ಗಿರೀಶ ಪಾಟೀಲ ಹಾಗೂ ತಿಕೋಟಾದ ಆರು ಮಂದಿ ವಿರುದ್ಧವೂ ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ.

Ad Widget

Ad Widget

Ad Widget alt="Ad Widget"/>

Ad Widget

ಯತ್ನಾಳ್ ವಿರುದ್ಧ ದೂರು
ವಿಜಯಪುರ ನಗರದ ಬಾಗವಾನ ಕಾಲೊನಿ ನಿವಾಸಿ ಅಬ್ದುಲ ರಜಾಕ ಬಾಗವಾನ್ (50) ಅವರು ಗುರುವಾರ ಜಲನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

Ad Widget

Ad Widget <> Ad Widget

ತಾನು ಜೀವಂತವಾಗಿದ್ದು, ತರಕಾರಿ ವ್ಯಾಪಾರ ಮಾಡಿಕೊಂಡಿದ್ದೇನೆ. ವಿಜಯಪುರ ನಗರ ವಿಧಾನಸಭಾ ಕ್ಷೇತ್ರದ ಮತದಾರನಾಗಿದ್ದು, ಮತದಾರರ ಗುರುತಿನ ಚೀಟಿಯನ್ನೂ ಹೊಂದಿದ್ದೇನೆ ಎಂದು ಅವರು ದೂರಿನಲ್ಲಿ ತಿಳಿಸಿದ್ದಾರೆ.



Ad Widget

ಆದರೆ, ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಅವರು ತಾನು ಮೃತಪಟ್ಟಿರುವುದಾಗಿ ನಕಲಿ ಮರಣ ಪ್ರಮಾಣಪತ್ರವನ್ನು ಲಗತ್ತಿಸಿ, ತನ್ನ ಹೆಸರನ್ನು ಮತದಾರರ ಪಟ್ಟಿಯಿಂದ ತೆಗೆದುಹಾಕುವಂತೆ ಸೆಪ್ಟೆಂಬರ್ 3ರಂದು ವಿಜಯಪುರ ಮಹಾನಗರ ಪಾಲಿಕೆ ಆಯುಕ್ತರಿಗೆ ಎಸ್‌ಐಆರ್ ಫಾರ್ಮ್-7 ಸಲ್ಲಿಸಿದ್ದಾರೆ ಎಂದು ಆರೋಪಿಸಿದ್ದಾರೆ. ಈ ಮೂಲಕ ವಂಚನೆ ಎಸಗಿರುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ.

Ad Widget

Ad Widget

ಪಾಲಿಕೆ ಸದಸ್ಯ ಗಿರೀಶ ಪಾಟೀಲ ವಿರುದ್ಧವೂ ಪ್ರಕರಣ
ವಿಜಯಪುರ ನಗರದ ನಿಸಾರಮಡ್ಡಿ ನಿವಾಸಿ ಜಾವೀದ್ ಇಂಡಿಕರ್ (32) ಅವರು ಮಹಾನಗರ ಪಾಲಿಕೆ ಬಿಜೆಪಿ ಸದಸ್ಯ ಹಾಗೂ ಶಾಸಕ ಯತ್ನಾಳ್ ಅವರ ಬೆಂಬಲಿಗ ಗಿರೀಶ ಪಾಟೀಲ ವಿರುದ್ಧ ಗಾಂಧಿಚೌಕ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ತಾನು ನಿಸಾರಮಡ್ಡಿಯಲ್ಲಿ ವಾಸವಿಲ್ಲ ಎಂಬುದಾಗಿ ಸುಳ್ಳು ದಾಖಲೆ ಸೃಷ್ಟಿಸಿ, ತನ್ನ ಹೆಸರನ್ನು ಮತದಾರರ ಪಟ್ಟಿಯಿಂದ ಅಳಿಸುವಂತೆ ಗಿರೀಶ ಪಾಟೀಲ ಅವರು ಎಸ್‌ಐಆರ್ ಫಾರ್ಮ್-7 ಸಲ್ಲಿಸಿದ್ದಾರೆ ಎಂದು ಜಾವೀದ್ ಆರೋಪಿಸಿದ್ದಾರೆ. ಈ ಸಂಬಂಧ ಅಕ್ಟೋಬರ್ 6ರಂದು ದೂರು ದಾಖಲಿಸಿದ್ದು, ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.

ತಿಕೋಟಾದ ಆರು ಮಂದಿ ವಿರುದ್ಧ ಎಫ್‌ಐಆರ್
ತಿಕೋಟಾ ಪಟ್ಟಣದ ನಿವಾಸಿ ಹಾಜಿಲಾಲ ಕೊಟ್ಟಲಗಿ (68) ಅವರ ಹೆಸರನ್ನು ಮತದಾರರ ಪಟ್ಟಿಯಿಂದ ತೆಗೆದುಹಾಕಲು ಎಸ್‌ಐಆರ್ ಫಾರ್ಮ್-7 ಸಲ್ಲಿಸಿದ ಆರೋಪದ ಮೇಲೆ ಆರು ಮಂದಿ ವಿರುದ್ಧ ತಿಕೋಟಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಭೀಮು ಗೊಳಸಂಗಿ, ವಿನಾಯಕ ಮಮದಾಪುರ, ಮಹೇಶ ಮುಕರ್ತಿಹಾಳ, ಆನಂದ ಅಂಬಿಗೇರ, ಹುಚ್ಚಪ್ಪ ಗಾಣಿಗೇರ ಹಾಗೂ ಗೋವಿಂದ ಮುದನೂರ ವಿರುದ್ಧ ಹಾಜಿಲಾಲ ಕೊಟ್ಟಲಗಿ ಅಕ್ಟೋಬರ್ 6ರಂದು ದೂರು ನೀಡಿದ್ದಾರೆ.

ತಾನು ಮುಸ್ಲಿಂ ಎಂಬ ಕಾರಣಕ್ಕೆ ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕುವ ಉದ್ದೇಶದಿಂದ ನಕಲಿ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಲಾಗಿದೆ ಎಂದು ಅವರು ದೂರಿನಲ್ಲಿ ಆರೋಪಿಸಿದ್ದಾರೆ. ಈ ಬಗ್ಗೆ ಸಂಬಂಧಪಟ್ಟವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ.

Ad Widget
Continue Reading

ಸ್ಥಳೀಯ

Navuru health clinic-ನಾವೂರು ಆರೋಗ್ಯ ಕ್ಲಿನಿಕ್‌ಗೆ ಬೆಂಕಿ: ಔಷಧ, ಉಪಕರಣಗಳು ಭಸ್ಮ; ಕಿಡಿಗೇಡಿಗಳ ಬಂಧನಕ್ಕೆ ಗ್ರಾಮಸ್ಥರ ಆಗ್ರಹ

Published

on



Ad Widget

Ad Widget

Ad Widget

Ad Widget

ನಾವೂರು ಪೇಟೆಯಲ್ಲಿರುವ ಡಾ. ಪ್ರದೀಪ್ ಎ. ಅವರ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ತಗುಲಿ ಮೂರು ಕೊಠಡಿಗಳು ಹಾನಿಗೀಡಾಗಿದ್ದು, ಔಷಧಗಳು, ಹಾಸಿಗೆಗಳು ಹಾಗೂ ಎಲೆಕ್ಟ್ರಾನಿಕ್ ಉಪಕರಣಗಳು ಸುಟ್ಟುಹೋಗಿವೆ. ಕ್ಲಿನಿಕ್‌ಗೆ ಉದ್ದೇಶಪೂರ್ವಕವಾಗಿ ಬೆಂಕಿ ಹಚ್ಚಿರುವ ಶಂಕೆ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ, ಘಟನೆಯ ಹಿಂದಿನ ಸತ್ಯವನ್ನು ಪತ್ತೆಹಚ್ಚಿ ತಪ್ಪಿತಸ್ಥರನ್ನು ಶೀಘ್ರ ಬಂಧಿಸಬೇಕು ಎಂದು ಆಗ್ರಹಿಸಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು.

Ad Widget

Ad Widget

Ad Widget

Ad Widget

ಬೆಳ್ತಂಗಡಿ: ನಾವೂರು ಪೇಟೆಯಲ್ಲಿರುವ ಡಾ. ಪ್ರದೀಪ್ ಎ. ಅವರ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ತಗುಲಿ ಮೂರು ಕೊಠಡಿಗಳು ಹಾನಿಗೀಡಾಗಿದ್ದು, ಔಷಧಗಳು, ಹಾಸಿಗೆಗಳು ಹಾಗೂ ಎಲೆಕ್ಟ್ರಾನಿಕ್ ಉಪಕರಣಗಳು ಸುಟ್ಟುಹೋಗಿವೆ. ಕ್ಲಿನಿಕ್‌ಗೆ ಉದ್ದೇಶಪೂರ್ವಕವಾಗಿ ಬೆಂಕಿ ಹಚ್ಚಿರುವ ಶಂಕೆ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ, ಘಟನೆಯ ಹಿಂದಿನ ಸತ್ಯವನ್ನು ಪತ್ತೆಹಚ್ಚಿ ತಪ್ಪಿತಸ್ಥರನ್ನು ಶೀಘ್ರ ಬಂಧಿಸಬೇಕು ಎಂದು ಆಗ್ರಹಿಸಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು.

Ad Widget

Ad Widget

Ad Widget alt="Ad Widget"/>

Ad Widget

ನಾವೂರು ಗ್ರಾಮದ ಶೇಖರ್ ಪೂಜಾರಿ ಅವರ ಮಾಲಕತ್ವದ ಸ್ವಾತಿ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಕ್ಲಿನಿಕ್‌ನಲ್ಲಿ ಮಂಗಳವಾರ ತಡರಾತ್ರಿ ಬೆಂಕಿ ಕಾಣಿಸಿಕೊಂಡಿತ್ತು. ಗುರುವಾರ ಬೆಳಗ್ಗೆ ಘಟನೆ ಬೆಳಕಿಗೆ ಬಂದಿದ್ದು, ಬೆಂಕಿಯ ತೀವ್ರತೆಗೆ ಕನ್ಸಲ್ಟೇಶನ್ ಕೊಠಡಿ ಸೇರಿದಂತೆ ಮೂರು ಕೊಠಡಿಗಳು ಹಾನಿಗೊಳಗಾಗಿವೆ. ಅಪಾರ ಪ್ರಮಾಣದ ವೈದ್ಯಕೀಯ ಸಾಮಗ್ರಿಗಳು ಹಾಗೂ ಇತರ ವಸ್ತುಗಳು ಸುಟ್ಟುಹೋಗಿದ್ದು, ಭಾರೀ ನಷ್ಟ ಸಂಭವಿಸಿದೆ. ಪಕ್ಕದಲ್ಲಿದ್ದ ಖಾಸಗಿ ಸಂಸ್ಥೆಯ ಕಚೇರಿಗೆ ಹಾನಿಯಾಗಿಲ್ಲ.

Ad Widget

Ad Widget <> Ad Widget

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಬೆಳ್ತಂಗಡಿ ಪೊಲೀಸರು ಹಾಗೂ ಸೋಕೋ ತಂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸುಟ್ಟ ವಸ್ತುಗಳು ಸೇರಿದಂತೆ ವಿವಿಧ ಸಾಕ್ಷ್ಯಗಳನ್ನು ಸಂಗ್ರಹಿಸಿದ್ದು, ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೆಂಕಿ ಅವಘಡದ ಹಿಂದಿನ ಕಾರಣವೇನು ಎಂಬ ಬಗ್ಗೆ ತನಿಖೆ ಮುಂದುವರಿದಿದೆ.



Ad Widget

ಧರ್ಮಾತೀತವಾಗಿ ಬೆಂಬಲಿಸಿದ ಗ್ರಾಮಸ್ಥರು

Ad Widget

Ad Widget

ಘಟನೆಯನ್ನು ಖಂಡಿಸಿ ಶ್ರೀ ಗೋಪಾಲಕೃಷ್ಣ ದೇವಸ್ಥಾನ ಸೇವಾ ಟ್ರಸ್ಟ್, ನಾವೂರು ವತಿಯಿಂದ ಶ್ರೀ ಗೋಪಾಲಕೃಷ್ಣ ದೇವರ ಸನ್ನಿಧಿಯಲ್ಲಿ ವಿಷ್ಣುಸಹಸ್ರನಾಮ ಪಠಣ ಹಾಗೂ ವಿಶೇಷ ಪ್ರಾರ್ಥನೆ ನಡೆಸಲಾಯಿತು. ಬಳಿಕ ಕ್ಲಿನಿಕ್ ಆವರಣದಲ್ಲಿ ಸಾರ್ವಜನಿಕ ಖಂಡನಾ ಸಭೆ ನಡೆಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಡಾ. ಪ್ರದೀಪ್ ಎ. ಆಟಿಕುಕ್ಕೆ, “ಆಗಬಾರದ ಘಟನೆ ನಡೆದುಹೋಗಿದೆ. ಆರಂಭದಲ್ಲಿ ವಿದ್ಯುತ್ ಅವಘಡವಿರಬಹುದು ಎಂದು ಭಾವಿಸಿದ್ದೆ. ಆದರೆ ಬಳಿಕ ಬೆಂಕಿ ಹಚ್ಚಿರುವ ಶಂಕೆ ವ್ಯಕ್ತವಾಗಿದೆ. ಧರ್ಮವನ್ನು ಮೀರಿ ಊರಿನವರು ನನ್ನೊಂದಿಗೆ ನಿಂತಿರುವುದು ಸಂತೋಷ ತಂದಿದೆ. ಔಷಧಗಳು ಭಸ್ಮವಾಗಿವೆ, ಆದರೆ ನನ್ನ ಇಚ್ಛಾಶಕ್ತಿ ಭಸ್ಮವಾಗಿಲ್ಲ” ಎಂದು ಹೇಳಿದರು.

ಘಟನೆ ನಡೆದ ರಾತ್ರಿ ಸುಮಾರು 9 ಗಂಟೆಯವರೆಗೆ ಕ್ಲಿನಿಕ್‌ನಲ್ಲಿದ್ದೆ. ಬಳಿಕ ನಡೆದ ಘಟನೆಯ ಕುರಿತು ಗುರುವಾರ ಬೆಳಗ್ಗೆ 8 ಗಂಟೆಗೆ ಮಾಹಿತಿ ಲಭಿಸಿತು. ಯಾರೊಂದಿಗೂ ವೈಯಕ್ತಿಕ ದ್ವೇಷವಿಲ್ಲ. ಪೊಲೀಸ್ ತನಿಖೆಯಿಂದ ಸತ್ಯ ಹೊರಬರಬೇಕು ಎಂದು ಅವರು ತಿಳಿಸಿದರು.

ಪೊಲೀಸ್ ಠಾಣೆಗೆ ತೆರಳಿ ಮನವಿ

ಸಭೆಯ ಬಳಿಕ ಗ್ರಾಮಸ್ಥರು ಒಟ್ಟಾಗಿ ಬೆಳ್ತಂಗಡಿ ಪೊಲೀಸ್ ಠಾಣೆಗೆ ತೆರಳಿ ಮನವಿ ಸಲ್ಲಿಸಿದರು. ಕ್ಲಿನಿಕ್‌ಗೆ ಬೆಂಕಿ ಹಚ್ಚಿದವರನ್ನು ಶೀಘ್ರ ಪತ್ತೆಹಚ್ಚಿ ಬಂಧಿಸಬೇಕು. ಕೃತ್ಯದ ಹಿಂದಿನ ಉದ್ದೇಶ ಹಾಗೂ ಭಾಗಿಯಾಗಿರುವವರ ಕುರಿತು ಸಮಗ್ರ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಸಭೆಯಲ್ಲಿ ಶಾಸಕ ಹರೀಶ್ ಪೂಂಜ, ಉದ್ಯಮಿ ಶಶಿಧರ್ ಶೆಟ್ಟಿ ಬರೋಡಾ, ಮಾಜಿ ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್, ಸಂಪತ್ ಸುವರ್ಣ, ಜಗದೀಶ್ ಪ್ರಸಾದ್, ಶೇಖರ್ ಪೂಜಾರಿ, ತನುಜಾ ಶೇಖರ್, ಹರೀಶ್ ಸಾಲ್ಯಾನ್, ಗಣೇಶ್ ಗೌಡ, ಡಾ. ಹರಿಕಿರಣ್, ನಿವೃತ್ತ ಪ್ರಾಂಶುಪಾಲ ಟಿ.ಪಿ. ಆ್ಯಂಟನಿ, ರಾಜಶೇಖರ್ ಅಜಿ, ಜ್ಯೋತಿ ಆಸ್ಪತ್ರೆಯ ಡಾ. ಅನುಜಾ, ವಿ.ಜಿ. ಪ್ರವೀಣ್ ನಡ ಹಾಗೂ ವಿಶ್ವ ಹಿಂದೂ ಪರಿಷತ್‌ನ ವಿಜಯ ಹೊಡಿಕಾರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Ad Widget
Continue Reading

ಅಪರಾಧ

Udupi-ಭೂಗತ ಪಾತಕಿ ಹೇಮಂತ್ ಪೂಜಾರಿ ಹೆಸರಿನಲ್ಲಿ ಬೆದರಿಕೆ ಕರೆ : ಉಡುಪಿ, ಮೂಲ್ಕಿಯಲ್ಲಿ 4 ಪ್ರಕರಣ ದಾಖಲು

Published

on



Ad Widget

Ad Widget

Ad Widget

Ad Widget

ಮುದರಂಗಡಿಯ ಉದ್ಯಮಿ ಡೇವಿಡ್ ಡಿಸೋಜಾ ಕೊಲೆ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ಭೂಗತ ಪಾತಕಿ ಹೇಮಂತ್ ಪೂಜಾರಿ ಹೆಸರಿನಲ್ಲಿ ಉದ್ಯಮಿಗಳು ಹಾಗೂ ಪ್ರತಿಷ್ಠಿತ ವ್ಯಕ್ತಿಗಳಿಗೆ ಬೆದರಿಕೆ ಕರೆಗಳು ಬರುತ್ತಿರುವ ಪ್ರಕರಣಗಳು ವರದಿಯಾಗಿವೆ. ಉಡುಪಿ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ಮೂರು ಹಾಗೂ ಮೂಲ್ಕಿ ಪೊಲೀಸ್ ಠಾಣೆಯಲ್ಲಿ ಒಂದು ಸೇರಿದಂತೆ ಒಟ್ಟು ನಾಲ್ಕು ಪ್ರಕರಣಗಳು ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Ad Widget

Ad Widget

Ad Widget

Ad Widget

ಉಡುಪಿ, ಅ.8: ಮುದರಂಗಡಿಯ ಉದ್ಯಮಿ ಡೇವಿಡ್ ಡಿಸೋಜಾ ಕೊಲೆ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ಭೂಗತ ಪಾತಕಿ ಹೇಮಂತ್ ಪೂಜಾರಿ ಹೆಸರಿನಲ್ಲಿ ಉದ್ಯಮಿಗಳು ಹಾಗೂ ಪ್ರತಿಷ್ಠಿತ ವ್ಯಕ್ತಿಗಳಿಗೆ ಬೆದರಿಕೆ ಕರೆಗಳು ಬರುತ್ತಿರುವ ಪ್ರಕರಣಗಳು ವರದಿಯಾಗಿವೆ. ಉಡುಪಿ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ಮೂರು ಹಾಗೂ ಮೂಲ್ಕಿ ಪೊಲೀಸ್ ಠಾಣೆಯಲ್ಲಿ ಒಂದು ಸೇರಿದಂತೆ ಒಟ್ಟು ನಾಲ್ಕು ಪ್ರಕರಣಗಳು ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಕೊಲೆಯಾದ ಉದ್ಯಮಿ ಡೇವಿಡ್ ಡಿಸೋಜಾ ಅವರ ಪುತ್ರನಿಗೆ ವಾಟ್ಸಾಪ್ ಕರೆ ಮಾಡಿರುವ ಅಪರಿಚಿತ ವ್ಯಕ್ತಿಯೊಬ್ಬ, ₹5 ಕೋಟಿ ನೀಡುವಂತೆ ಬೇಡಿಕೆ ಇಟ್ಟು ಜೀವ ಬೆದರಿಕೆ ಹಾಕಿದ್ದಾನೆ ಎನ್ನಲಾಗಿದೆ.

Ad Widget

Ad Widget <> Ad Widget

“ನಿನ್ನ ತಂದೆಯಿಂದ ನನ್ನ ಸಹೋದರನಿಗೆ ಸಾಕಷ್ಟು ನಷ್ಟವಾಗಿತ್ತು. ಆ ಕಾರಣಕ್ಕೆ ನಾನೇ ಕೊಲೆ ಮಾಡಿಸಿದ್ದೆ. ನಮಗಾಗಿರುವ ನಷ್ಟವನ್ನು ತುಂಬಿಕೊಡಲು ₹5 ಕೋಟಿ ನೀಡಬೇಕು” ಎಂದು ಕರೆ ಮಾಡಿದ ವ್ಯಕ್ತಿ ಬೆದರಿಕೆ ಹಾಕಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಈ ಸಂಬಂಧ ಶಿರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



Ad Widget

ಇನ್ನೊಬ್ಬ ಉದ್ಯಮಿ ಹಾಗೂ ಖಾಸಗಿ ಸಂಸ್ಥೆಯ ವ್ಯಕ್ತಿಗೂ ಹೇಮಂತ್ ಪೂಜಾರಿ ಹೆಸರಿನಲ್ಲಿ ವಾಟ್ಸಾಪ್ ಕರೆಗಳು ಬಂದಿದ್ದು, ಹಣಕ್ಕೆ ಬೇಡಿಕೆ ಇಟ್ಟು ಜೀವ ಬೆದರಿಕೆ ಹಾಕಲಾಗಿದೆ ಎನ್ನಲಾಗಿದೆ. ಈ ಸಂಬಂಧ ಪಡುಬಿದ್ರಿ ಪೊಲೀಸ್ ಠಾಣೆಯಲ್ಲೂ ಪ್ರಕರಣಗಳು ದಾಖಲಾಗಿವೆ.

Ad Widget

Ad Widget

25 ವರ್ಷಗಳಿಂದ ಪೊಲೀಸರಿಗೆ ಬೇಕಾಗಿರುವ ಆರೋಪಿ
ಮುದರಂಗಡಿಯ ಉದ್ಯಮಿ ಡೇವಿಡ್ ಡಿಸೋಜಾ ಕೊಲೆ ಪ್ರಕರಣದಲ್ಲಿ ಭೂಗತ ಪಾತಕಿ ಹೇಮಂತ್ ಪೂಜಾರಿ ಪ್ರಮುಖ ಆರೋಪಿಯಾಗಿದ್ದಾನೆ. ಆತನ ಸಹೋದರ ಹಾಗೂ ಇತರ ಸಹಚರರ ನೆರವಿನಿಂದ ಹೊರರಾಜ್ಯದ ಶೂಟರ್‌ಗಳನ್ನು ಕರೆಸಿ ಕೊಲೆ ಮಾಡಿಸಲಾಗಿದೆ ಎಂಬ ಆರೋಪ ಪ್ರಕರಣದಲ್ಲಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹೇಮಂತ್ ಪೂಜಾರಿಯನ್ನು ಹೊರತುಪಡಿಸಿ ಉಳಿದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ ಎನ್ನಲಾಗಿದೆ.

ಕಳೆದ 25 ವರ್ಷಗಳಿಂದ ಪೊಲೀಸರಿಗೆ ಬೇಕಾಗಿರುವ ಹೇಮಂತ್ ಪೂಜಾರಿ ಬಗ್ಗೆ ಇದುವರೆಗೂ ಸ್ಪಷ್ಟ ಸುಳಿವು ಲಭ್ಯವಾಗಿಲ್ಲ. ಈ ನಡುವೆ ಆತನ ಹೆಸರಿನಲ್ಲಿ ಉದ್ಯಮಿಗಳು ಹಾಗೂ ಪ್ರತಿಷ್ಠಿತ ವ್ಯಕ್ತಿಗಳಿಗೆ ಬೆದರಿಕೆ ಕರೆಗಳು ಬಂದಿರುವುದು ಪೊಲೀಸರ ಗಮನ ಸೆಳೆದಿದೆ.

ಕರೆ ಮಾಡುತ್ತಿರುವವರು ಯಾರು?
ಹೇಮಂತ್ ಪೂಜಾರಿಯೇ ಕರೆ ಮಾಡುತ್ತಿದ್ದಾನೆಯೇ ಅಥವಾ ಆತನ ಹೆಸರನ್ನು ದುರ್ಬಳಕೆ ಮಾಡಿಕೊಂಡು ಬೇರೆಯವರು ಬೆದರಿಕೆ ಹಾಕುತ್ತಿದ್ದಾರೆಯೇ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಕರೆಗಳ ಮೂಲ, ಹಣದ ಬೇಡಿಕೆಯ ಹಿಂದಿನ ಉದ್ದೇಶ ಹಾಗೂ ಪ್ರಕರಣಗಳ ನಡುವಿನ ಸಂಬಂಧದ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading