Connect with us

ಅಪರಾಧ

Puttur-ಪುತ್ತೂರು: ಸುಳ್ಳು ಭರವಸೆಯ ಕರಪತ್ರಗಳು; ಅಕ್ರಮ ಲಕ್ಕಿ ಸ್ಕೀಮ್‌ಗೆ ಪೊಲೀಸ್ ಬ್ರೇಕ್; ನಾಲ್ವರ ವಿರುದ್ಧ ಪ್ರಕರಣ ದಾಖಲು

Published

on

Ad Widget

Ad Widget

Ad Widget

Ad Widget

ಸಾರ್ವಜನಿಕರನ್ನು ಆಕರ್ಷಿಸಲು ಕರಪತ್ರಗಳ ಮೂಲಕ ಸುಳ್ಳು ಭರವಸೆಗಳನ್ನು ನೀಡಿ ಅಕ್ರಮ ಲಕ್ಕಿ ಡ್ರಾ ನಡೆಸುತ್ತಿದ್ದ ಪ್ರಕರಣಕ್ಕೆ ಪುತ್ತೂರು ನಗರ ಪೊಲೀಸರು ಬ್ರೇಕ್ ಹಾಕಿದ್ದಾರೆ. ‘ಬಿಗ್ ಟಿಕೆಟ್ ಲಕ್ಕಿ ಸ್ಕೀಮ್’ ಹೆಸರಿನ ಈ ಅಕ್ರಮ ಚಟುವಟಿಕೆಯಲ್ಲಿ ಭಾಗಿಯಾದ ನಾಲ್ವರು ಆರೋಪಿಗಳ ವಿರುದ್ಧ ದೂರು ದಾಖಲಿಸಲಾಗಿದೆ.

Ad Widget

Ad Widget

Ad Widget

Ad Widget

ಪುತ್ತೂರು: ಸಾರ್ವಜನಿಕರನ್ನು ಆಕರ್ಷಿಸಲು ಕರಪತ್ರಗಳ ಮೂಲಕ ಸುಳ್ಳು ಭರವಸೆಗಳನ್ನು ನೀಡಿ ಅಕ್ರಮ ಲಕ್ಕಿ ಡ್ರಾ ನಡೆಸುತ್ತಿದ್ದ ಪ್ರಕರಣಕ್ಕೆ ಪುತ್ತೂರು ನಗರ ಪೊಲೀಸರು ಬ್ರೇಕ್ ಹಾಕಿದ್ದಾರೆ. ‘ಬಿಗ್ ಟಿಕೆಟ್ ಲಕ್ಕಿ ಸ್ಕೀಮ್’ ಹೆಸರಿನ ಈ ಅಕ್ರಮ ಚಟುವಟಿಕೆಯಲ್ಲಿ ಭಾಗಿಯಾದ ನಾಲ್ವರು ಆರೋಪಿಗಳ ವಿರುದ್ಧ ದೂರು ದಾಖಲಿಸಲಾಗಿದೆ.

Ad Widget

Ad Widget alt="Ad Widget"/>

Ad Widget

ಅಕ್ಟೋಬರ್ 25ರಂದು ಪೊಲೀಸ್ ರೌಂಡ್ಸ್ ಸಂದರ್ಭದಲ್ಲಿ ಸಾರ್ವಜನಿಕರು ಈ ಕರಪತ್ರಗಳ ಬಗ್ಗೆ ಚರ್ಚಿಸುತ್ತಿದ್ದುದನ್ನು ಗಮನಿಸಿದ ಪೊಲೀಸರು ವಿಚಾರಿಸಿದಾಗ ಆಘಾತಕಾರಿ ಮಾಹಿತಿ ಬಯಲಾಯಿತು.

Ad Widget

Ad Widget <> Ad Widget

ಉಕ್ಕಿನಡ್ಕದ ಮೊಹಮ್ಮದ್ ಶಫಿಕ್, ಪುತ್ತೂರಿನ ಶರೀಫ್ ಮತ್ತು ಆಶಿಕ್ ಎಂಬುವವರು ಈ ಸ್ಕೀಮ್ ನಡೆಸುತ್ತಿದ್ದು, ತಲಾ ರೂ.1,000 ಸಂಗ್ರಹಿಸಿ ಅಕ್ರಮ ಲಕ್ಕಿ ಡ್ರಾ ಆಯೋಜಿಸುತ್ತಿದ್ದರು.

ಈ ಹಿನ್ನೆಲೆಯಲ್ಲಿ ಮೊಹಮ್ಮದ್, ಶಫಿಕ್, ಶರೀಫ್ ಮತ್ತು ಆಶಿಕ್ ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
‌

Click to comment

Leave a Reply

ಅಪರಾಧ

Punacha-ಪುಣಚ: ಅಕ್ರಮ ಮರಳುಗಾರಿಕೆ ಪತ್ತೆ; ಪಿಕಪ್ ವಾಹನ ಜಪ್ತಿ- ನಾಲ್ವರು ವಶಕ್ಕೆ

Published

on

Ad Widget

Ad Widget

Ad Widget

Ad Widget

ಬಂಟ್ವಾಳ ತಾಲೂಕಿನ ಪುಣಚ ಗ್ರಾಮದ ದಂಬೆ ಎಂಬಲ್ಲಿ ಸಾರ್ವಜನಿಕ ತೋಡಿನಿಂದ ಅಕ್ರಮವಾಗಿ ಮರಳು ತೆಗೆದು ಸಾಗಾಟಕ್ಕೆ ಸಿದ್ಧಪಡಿಸುತ್ತಿದ್ದ ನಾಲ್ವರನ್ನು ವಿಟ್ಲ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ಮರಳು ತುಂಬಿದ್ದ ಪಿಕಪ್ ವಾಹನವನ್ನು ಜಪ್ತಿ ಮಾಡಿದ್ದಾರೆ.

Ad Widget

Ad Widget

Ad Widget

Ad Widget

ವಿಟ್ಲ, ನ.20: ಬಂಟ್ವಾಳ ತಾಲೂಕಿನ ಪುಣಚ ಗ್ರಾಮದ ದಂಬೆ ಎಂಬಲ್ಲಿ ಸಾರ್ವಜನಿಕ ತೋಡಿನಿಂದ ಅಕ್ರಮವಾಗಿ ಮರಳು ತೆಗೆದು ಸಾಗಾಟಕ್ಕೆ ಸಿದ್ಧಪಡಿಸುತ್ತಿದ್ದ ನಾಲ್ವರನ್ನು ವಿಟ್ಲ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ಮರಳು ತುಂಬಿದ್ದ ಪಿಕಪ್ ವಾಹನವನ್ನು ಜಪ್ತಿ ಮಾಡಿದ್ದಾರೆ.

Ad Widget

Ad Widget alt="Ad Widget"/>

Ad Widget

ಆರೋಪಿಗಳನ್ನು ಪುಣಚ ಗ್ರಾಮದ ವಿಶ್ವಾಸ್ ಹೆಚ್. (27), ಶಶಿಧರ (45), ಹರೀಶ್ ಅಜ್ಜಿನಡ್ಕ (35) ಹಾಗೂ ಕೇಪು ಗ್ರಾಮದ ಪುಷ್ಪರಾಜ್ ಎನ್. (32) ಎಂದು ಗುರುತಿಸಲಾಗಿದೆ.

Ad Widget

Ad Widget <> Ad Widget

ನ.19ರಂದು ಬೆಳಿಗ್ಗೆ ಪುಣಚ ಗ್ರಾಮದ ದಂಬೆ ಎಂಬಲ್ಲಿನ ಸಾರ್ವಜನಿಕ ತೋಡಿನಿಂದ ಮಾರಾಟ ಮಾಡುವ ಉದ್ದೇಶದಿಂದ ಅಕ್ರಮವಾಗಿ ಮರಳು ತೆಗೆದು ಪಿಕಪ್ ವಾಹನಕ್ಕೆ ತುಂಬಿಸಲಾಗುತ್ತಿದೆ ಎಂಬ ಖಚಿತ ಮಾಹಿತಿ ವಿಟ್ಲ ಪೊಲೀಸ್ ಠಾಣೆಯ ತನಿಖಾ ವಿಭಾಗದ ಪಿಎಸ್‌ಐ ರತ್ನಕುಮಾರ್ ಅವರಿಗೆ ಲಭಿಸಿತ್ತು.

ಮಾಹಿತಿ ಮೇರೆಗೆ ಪೊಲೀಸ್ ಸಿಬ್ಬಂದಿಗಳೊಂದಿಗೆ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದಾಗ, ನಾಲ್ವರು ವ್ಯಕ್ತಿಗಳು ತೋಡಿನಿಂದ ಮರಳು ತೆಗೆದು ಪಿಕಪ್ ವಾಹನಕ್ಕೆ ತುಂಬಿಸುತ್ತಿರುವುದು ಕಂಡುಬಂದಿದೆ. ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಯಾವುದೇ ಪರವಾನಿಗೆ ಇಲ್ಲದೆ ಅಕ್ರಮವಾಗಿ ಮರಳು ತೆಗೆಯುತ್ತಿರುವುದು ಪತ್ತೆಯಾದ ಹಿನ್ನೆಲೆಯಲ್ಲಿ, ಸ್ಥಳದಲ್ಲಿದ್ದ ಮರಳು ತುಂಬಿದ KA-70-8785 ನೋಂದಣಿಯ ಪಿಕಪ್ ವಾಹನ ಸೇರಿದಂತೆ ಇತರ ಸೊತ್ತುಗಳನ್ನು ಪೊಲೀಸರು ಸ್ವಾಧೀನಪಡಿಸಿಕೊಂಡಿದ್ದಾರೆ.

Ad Widget

Ad Widget

ಈ ಸಂಬಂಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಅ.ಕ್ರ. 236/2026ರಂತೆ ಪ್ರಕರಣ ದಾಖಲಿಸಿಕೊಂಡಿದ್ದು, ಕರ್ನಾಟಕ ಕಿರು ಖನಿಜ ರಿಯಾಯಿತಿ ನಿಯಮಗಳು, MMDR ಕಾಯ್ದೆ ಹಾಗೂ ಭಾರತೀಯ ನ್ಯಾಯ ಸಂಹಿತೆಯ ವಿವಿಧ ಕಲಂಗಳಡಿ ತನಿಖೆ ಮುಂದುವರಿದಿದೆ.

Ad Widget
Continue Reading

ಅಪರಾಧ

Vitla-ವಿಟ್ಲ: ಪರವಾನಿಗೆ ಇಲ್ಲದೆ ಕೆಂಪು ಕಲ್ಲು ಸಾಗಾಟ; ಲಾರಿ ವಶ, ಚಾಲಕ–ಮಾಲೀಕನ ವಿರುದ್ಧ ಪ್ರಕರಣ

Published

on

Ad Widget

Ad Widget

Ad Widget

Ad Widget

ಯಾವುದೇ ಪರವಾನಿಗೆ ಅಥವಾ ಸೂಕ್ತ ದಾಖಲೆಗಳಿಲ್ಲದೆ ಲಾರಿಯಲ್ಲಿ ಅಕ್ರಮವಾಗಿ ಕೆಂಪು ಕಲ್ಲು ಸಾಗಾಟ ಮಾಡುತ್ತಿದ್ದ ಲಾರಿಯನ್ನು ವಿಟ್ಲ ಪೊಲೀಸರು ವಶಪಡಿಸಿಕೊಂಡಿದ್ದು, ಚಾಲಕ ಹಾಗೂ ಮಾಲೀಕರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

Ad Widget

Ad Widget

Ad Widget

Ad Widget

ವಿಟ್ಲ,ನ.20: ಯಾವುದೇ ಪರವಾನಿಗೆ ಅಥವಾ ಸೂಕ್ತ ದಾಖಲೆಗಳಿಲ್ಲದೆ ಲಾರಿಯಲ್ಲಿ ಅಕ್ರಮವಾಗಿ ಕೆಂಪು ಕಲ್ಲು ಸಾಗಾಟ ಮಾಡುತ್ತಿದ್ದ ಲಾರಿಯನ್ನು ವಿಟ್ಲ ಪೊಲೀಸರು ವಶಪಡಿಸಿಕೊಂಡಿದ್ದು, ಚಾಲಕ ಹಾಗೂ ಮಾಲೀಕರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

Ad Widget

Ad Widget alt="Ad Widget"/>

Ad Widget

ನ.19ರಂದು ಮಧ್ಯಾಹ್ನ ಕೇರಳ ಕಡೆಯಿಂದ ಮಂಚಿ ಮಾರ್ಗವಾಗಿ ವೀರಕಂಭ ಕಡೆಗೆ ಲಾರಿಯಲ್ಲಿ ಅಕ್ರಮವಾಗಿ ಕೆಂಪು ಕಲ್ಲು ಸಾಗಾಟ ಮಾಡಲಾಗುತ್ತಿದೆ ಎಂಬ ಖಚಿತ ಮಾಹಿತಿ ವಿಟ್ಲ ಪೊಲೀಸ್ ಠಾಣೆಯ ಸಹಾಯಕ ಪೊಲೀಸ್ ಉಪ ನಿರೀಕ್ಷಕ ಜಯರಾಮ ಕೆ. ಅವರಿಗೆ ಲಭಿಸಿತ್ತು.

Ad Widget

Ad Widget <> Ad Widget

ಮಾಹಿತಿಯ ಮೇರೆಗೆ ಪೊಲೀಸ್ ಸಿಬ್ಬಂದಿಗಳೊಂದಿಗೆ ಬಂಟ್ವಾಳ ತಾಲೂಕಿನ ಬೊಳಂತೂರು ಗ್ರಾಮದ ಕೊಕ್ಕಪುನಿ ಎಂಬಲ್ಲಿ ಕಾರ್ಯಾಚರಣೆ ನಡೆಸಿದ ಪೊಲೀಸರು, KA-19-AA-0601 ನೋಂದಣಿಯ ಲಾರಿಯನ್ನು ತಡೆದು ಪರಿಶೀಲಿಸಿದರು. ಈ ವೇಳೆ ಯಾವುದೇ ಪರವಾನಿಗೆ ಅಥವಾ ಸೂಕ್ತ ದಾಖಲೆಗಳಿಲ್ಲದೆ ಕೆಂಪು ಕಲ್ಲು ಸಾಗಾಟ ಮಾಡುತ್ತಿರುವುದು ಪತ್ತೆಯಾಗಿದೆ.

ಪೊಲೀಸರು ಲಾರಿಯನ್ನು ವಶಪಡಿಸಿಕೊಂಡಿದ್ದು, ಚಾಲಕ ಮೊಹಮ್ಮದ್ ರಫೀಕ್ (62) ಹಾಗೂ ಲಾರಿ ಮಾಲೀಕ ಮೊಹಮ್ಮದ್ ಅಶ್ರಫ್ ವಿರುದ್ಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಅ.ಕ್ರ. 237/2026ರಂತೆ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Ad Widget

Ad Widget

ಭಾರತೀಯ ನ್ಯಾಯ ಸಂಹಿತೆ (BNS) 2023ರ ಕಲಂ 303(2), MMDR ಕಾಯ್ದೆ 1957ರ ಕಲಂ 4(1), 21 ಹಾಗೂ ಕರ್ನಾಟಕ ಕಿರು ಖನಿಜ ನಿಯಮಾವಳಿ 1994ರ ಕಲಂ 3, 44ರಂತೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Ad Widget
Continue Reading

ಅಪರಾಧ

Mangalore-ಕಣಚೂರು ಮೆಡಿಕಲ್ ಕಾಲೇಜು ಆವರಣದಲ್ಲೇ ವಿದ್ಯಾರ್ಥಿನಿ ಅಪಹರಣ..! ಹಿಂದೂ ಯುವಕ ಲವ್ ಆರೋಪ – ವಿಡಿಯೋ ವೈರಲ್ : ತನಿಖೆಗೆ ಕಮಿಷನರ್ ಸೂಚನೆ

Published

on

Ad Widget

Ad Widget

Ad Widget

Ad Widget

ಮಂಗಳೂರು ನಗರದ ಹೊರವಲಯದ ದೇರಳಕಟ್ಟೆ ಸಮೀಪದ ಕಣಚೂರು ಮೆಡಿಕಲ್ ಕಾಲೇಜಿನ ಆವರಣದಿಂದ ವಿದ್ಯಾರ್ಥಿನಿಯೊಬ್ಬಳನ್ನು ಬಲವಂತವಾಗಿ ಕಾರಿನಲ್ಲಿ ಕರೆದೊಯ್ದಿರುವ ಘಟನೆ ನಡೆದಿದೆ. ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

Ad Widget

Ad Widget

Ad Widget

Ad Widget

ಮಂಗಳೂರು, ನ.20: ನಗರದ ಹೊರವಲಯದ ದೇರಳಕಟ್ಟೆ ಸಮೀಪದ ಕಣಚೂರು ಮೆಡಿಕಲ್ ಕಾಲೇಜಿನ ಆವರಣದಿಂದ ವಿದ್ಯಾರ್ಥಿನಿಯೊಬ್ಬಳನ್ನು ಬಲವಂತವಾಗಿ ಕಾರಿನಲ್ಲಿ ಕರೆದೊಯ್ದಿರುವ ಘಟನೆ ನಡೆದಿದೆ. ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

Ad Widget

Ad Widget alt="Ad Widget"/>

Ad Widget

ಗುರುವಾರ ಸಂಜೆ ನಡೆದ ಘಟನೆಯಲ್ಲಿ ಕಾಲೇಜಿನ ಮುಸ್ಲಿಂ ವಿದ್ಯಾರ್ಥಿನಿಯೊಬ್ಬಳನ್ನು ಆಕೆಯ ಸಂಬಂಧಿಕರು ಎನ್ನಲಾದ ಕೆಲವರು ಕಾಲೇಜು ಆವರಣದಲ್ಲೇ ಬಲವಂತವಾಗಿ ಕಾರಿಗೆ ಹತ್ತಿಸಿ ಕರೆದೊಯ್ದಿದ್ದಾರೆ ಎನ್ನಲಾಗಿದೆ. ವಿದ್ಯಾರ್ಥಿನಿ ಹಿಂದೂ ಯುವಕನನ್ನು ಪ್ರೀತಿಸುತ್ತಿದ್ದ ಕಾರಣಕ್ಕೆ ಈ ಕೃತ್ಯ ನಡೆದಿದೆ ಎಂಬ ಶಂಕೆ ವ್ಯಕ್ತವಾಗಿದೆ.

Ad Widget

Ad Widget <> Ad Widget

ಹಲವು ಯುವಕರು ಸೇರಿಕೊಂಡು ವಿದ್ಯಾರ್ಥಿನಿಯನ್ನು ಎಳೆದು ಕಾರಿನಲ್ಲಿ ಕರೆದೊಯ್ಯುತ್ತಿರುವ ದೃಶ್ಯ ವಿಡಿಯೋದಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಈ ಘಟನೆ ಸಾರ್ವಜನಿಕ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ.

ಘಟನೆ ಕುರಿತು ಪ್ರತಿಕ್ರಿಯಿಸಿರುವ ಮಂಗಳೂರು ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ, ವಯಸ್ಕರಾದ ಬಳಿಕ ಪ್ರತಿಯೊಬ್ಬರಿಗೂ ತಮ್ಮ ಇಚ್ಛೆಯಂತೆ ಜೀವನ ನಡೆಸುವ ಹಕ್ಕಿದೆ. ವಿದ್ಯಾರ್ಥಿನಿಯೂ ತನ್ನ ಇಚ್ಛೆಯಂತೆ ಬದುಕಲು ಸ್ವತಂತ್ರಳಾಗಿದ್ದಾಳೆ. ಆಕೆಯ ಇಚ್ಛೆಗೆ ವಿರುದ್ಧವಾಗಿ ಕುಟುಂಬಸ್ಥರು ಸೇರಿದಂತೆ ಯಾರೇ ಬಲವಂತವಾಗಿ ಕರೆದೊಯ್ದಿದ್ದರೂ ಅದು ಕಾನೂನುಬಾಹಿರವಾಗಿದ್ದು, ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

Ad Widget

Ad Widget

ಯುವತಿ ವಯಸ್ಕಳಾಗಿದ್ದು, ತಾನು ಎಲ್ಲಿ ಹಾಗೂ ಹೇಗೆ ವಾಸಿಸಬೇಕು ಎಂಬುದನ್ನು ನಿರ್ಧರಿಸುವ ಸಂಪೂರ್ಣ ಹಕ್ಕು ಆಕೆಗಿದೆ. ಘಟನೆಯ ಬಗ್ಗೆ ಪೊಲೀಸರಿಗೆ ತಕ್ಷಣ ಮಾಹಿತಿ ನೀಡಿದ್ದರೆ ತಡೆಯಲು ಸಾಧ್ಯವಾಗುತ್ತಿತ್ತು. ಇದೀಗ ಪ್ರಕರಣ ದಾಖಲಿಸಿ ತನಿಖೆ ನಡೆಸಲಾಗುವುದು. ಯುವತಿಯನ್ನು ಪತ್ತೆಹಚ್ಚಲು ಕ್ರಮ ಕೈಗೊಳ್ಳಲಾಗುವುದು ಎಂದು ಕಮಿಷನರ್ ತಿಳಿಸಿದ್ದಾರೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!