Connect with us

ಕಾರ್ಯಕ್ರಮಗಳು

Sharavuru-ಶ್ರೀಕ್ಷೇತ್ರ ಶರವೂರು ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನೂತನ ಧ್ವಜಸ್ತಂಭ ಸ್ಥಾಪನೆ : 36.5 ಅಡಿ ಉದ್ದದ 22 ಟನ್ ತೂಕದ ಭವ್ಯ ಶಿಲಾಮಯ ಧ್ವಜಸ್ತಂಭ

Published

on



Ad Widget

Ad Widget

Ad Widget

Ad Widget

ಸಮಗ್ರ ಜೀರ್ಣೋದ್ಧಾರ ಕಾರ್ಯಗಳು ಭರದಿಂದ ಸಾಗುತ್ತಿರುವ ಆಲಂಕಾರು ಸೀಮಾ ದೇವಸ್ಥಾನ ಶ್ರೀ ಕ್ಷೇತ್ರ ಶರವೂರು ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ, ಅಕ್ಟೋಬರ್ 29ರಂದು ನೂತನ ಶಿಲಾಮಯ ಧ್ವಜಸ್ತಂಭವನ್ನು ಯಶಸ್ವಿಯಾಗಿ ಸ್ಥಾಪಿಸಲಾಯಿತು. ಈ ಮೂಲಕ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯ ಮತ್ತೊಂದು ಹಂತ ತಲುಪಿದೆ.

Ad Widget

Ad Widget

Ad Widget

Ad Widget

ಆಲಂಕಾರು: ಸಮಗ್ರ ಜೀರ್ಣೋದ್ಧಾರ ಕಾರ್ಯಗಳು ಭರದಿಂದ ಸಾಗುತ್ತಿರುವ ಆಲಂಕಾರು ಸೀಮಾ ದೇವಸ್ಥಾನ ಶ್ರೀ ಕ್ಷೇತ್ರ ಶರವೂರು ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ, ಅಕ್ಟೋಬರ್ 29ರಂದು ನೂತನ ಶಿಲಾಮಯ ಧ್ವಜಸ್ತಂಭವನ್ನು ಯಶಸ್ವಿಯಾಗಿ ಸ್ಥಾಪಿಸಲಾಯಿತು. ಈ ಮೂಲಕ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯ ಮತ್ತೊಂದು ಹಂತ ತಲುಪಿದೆ.

Ad Widget

Ad Widget

Ad Widget alt="Ad Widget"/>

Ad Widget

ದೇವಸ್ಥಾನದ ತಂತ್ರಿಗಳಾದ ವೇ.ಮೂ. ಕುಡುಪು ನರಸಿಂಹ ತಂತ್ರಿಯವರ ಮಾರ್ಗದರ್ಶನದಲ್ಲಿ, ಅವರ ಪುತ್ರ ಹಾಗೂ ವಾಸ್ತುತಜ್ಞ ಕೃಷ್ಣರಾಜ್ ತಂತ್ರಿಯವರು ಬೆಳಿಗ್ಗೆ ಪೂಜಾ ವಿಧಿವಿಧಾನಗಳನ್ನು ನೆರವೇರಿಸಿದ ನಂತರ ಧ್ವಜಸ್ತಂಭ ಸ್ಥಾಪನೆ ಪ್ರಕ್ರಿಯೆಗೆ ಚಾಲನೆ ನೀಡಲಾಯಿತು.

Ad Widget

Ad Widget <> Ad Widget

ಭವ್ಯ ಧ್ವಜಸ್ತಂಭದ ಸ್ಥಾಪನೆ:
36.5 ಅಡಿ ಉದ್ದ ಮತ್ತು 22 ಟನ್ ತೂಕದ ಈ ಬೃಹತ್ ಶಿಲಾಮಯ ಧ್ವಜಸ್ತಂಭವನ್ನು ರಥಬೀದಿಯಿಂದ ದೇವಾಲಯದ ಮುಂಭಾಗಕ್ಕೆ ತರಲು ಎರಡು ಕ್ರೇನ್‌ಗಳನ್ನು ಬಳಸಲಾಯಿತು. ಶ್ರೀ ದೇವಿಯಲ್ಲಿ ಪ್ರಾರ್ಥನೆ ಸಲ್ಲಿಸಿದ ಬಳಿಕ, ಧ್ವಜಸ್ತಂಭದ ಪಂಚಾಂಗಕ್ಕೆ ಬೆಳ್ಳಿ ಮತ್ತು ಬಂಗಾರವನ್ನು ಅರ್ಪಿಸಲಾಯಿತು. ನಂತರ, ಭಕ್ತಾದಿಗಳ ಮತ್ತು ಕ್ರೇನ್‌ಗಳ ಸಹಕಾರದೊಂದಿಗೆ ಧ್ವಜಸ್ತಂಭವನ್ನು ನಿಗದಿತ ಸ್ಥಳದಲ್ಲಿ ಭದ್ರವಾಗಿ ಸ್ಥಾಪಿಸಲಾಯಿತು.



Ad Widget

ಈ ಸಂಧರ್ಭದಲ್ಲಿ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಸುಬ್ರಹ್ಮಣ್ಯ ರಾವ್.ಕೆ, ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಹೇಮಂತ್ ರೈ ಮನವಳಿಕೆಗುತ್ತು, ವ್ಯವಸ್ಥಾಪನ ಸಮಿತಿ, ಅಭಿವೃದ್ಧಿ ಸಮಿತಿ ಸದಸ್ಯರು, ವ್ಯವಸ್ಥಾಪನ ಸಮಿತಿಯ ಮಾಜಿ ಅಧ್ಯಕ್ಷರು, ಸದಸ್ಯರು, ಹಾಗು ವಿವಿಧ ಸಮಿತಿಯ ಅಧ್ಯಕ್ಷರು ಪದಾಧಿಕಾರಿಗಳು, ಸದಸ್ಯರು, ಭಕ್ತಾದಿಗಳು ಉಪಸ್ಥಿತರಿದ್ದರು.

Ad Widget

Ad Widget

ಶ್ರೀ ಕ್ಷೇತ್ರ ಶರವೂರು ದುರ್ಗಾಪರಮೇಶ್ವರಿ ದೇವಸ್ಥಾನದ ಭೂ ಪ್ರದೇಶದಲ್ಲಿ ವರ್ಷದ 12 ತಿಂಗಳಿನಲ್ಲಿಯೂ ನೀರು ಮತ್ತು ನೀರಿನ ಅಂಶವಿರುವ ಕಾರಣ ಇಲ್ಲಿ ಶಾಸ್ರೋಕ್ತವಾಗಿ ಶಿಲಾಮಯ ಧ್ವಜಸ್ತಂಭವನ್ನು ಸ್ಥಾಪಿಸಲಾಗಿದೆ ಎಂದು ಕ್ಷೇತ್ರದ ತಂತ್ರಿಗಳು ಹಾಗೂ ವಾಸ್ತು ತಜ್ಞರಾದ ಕುಡುಪು ಕೃಷ್ಣರಾಜ್ ತಂತ್ರಿಯವರು ತಿಳಿಸಿದ್ದಾರೆ. ಶಿಲಾಮಯ ಧ್ವಜಸ್ತಂಭದ ಪೂರ್ತಿ ಖರ್ಚನ್ನು ನಗ್ರಿ ಪೆರ್ಲತ್ತಾಯ ಕುಟುಂಬಸ್ಥರು ಭರಿಸಲಿದ್ದಾರೆ ಎಂದು ವ್ಯವಸ್ಥಾಪನ ಸಮಿತಿ, ಅಭಿವೃದ್ಧಿ ಸಮಿತಿಯವರು ತಿಳಿಸಿದ್ದಾರೆ.

ಶರವೂರು ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಶಿಲಾಮಯ ಧ್ವಜಸ್ತಂಭ ಸ್ಥಾಪನೆಯಾಗಿದೆ. ಸಾಮಾನ್ಯವಾಗಿ ದ.ಕ ಜಿಲ್ಲೆಯಲ್ಲಿ ಮರದ “ಧ್ವಜಸ್ತಂಭಗಳು ಇರುತ್ತವೆ. ಶ್ರೀ ಕ್ಷೇತ್ರ ಶರವೂರು ಪ್ರಾಕೃತಿಕವಾಗಿ ಸರೋವರ ಕ್ಷೇತ್ರವಾದ ಕಾರಣ ವರ್ಷದ 12 ತಿಂಗಳಿನಲ್ಲಿ ನೀರಿನ ಹರಿವು ಇರುತ್ತದೆ. ಮರದ ಧ್ವಜಸ್ತಂಭ ಸ್ಥಾಪನೆ ಮಾಡಿದರೆ ಅದರ ಬಾಳಿಕೆ ಕಡಿಮೆಯಾಗುತ್ತದೆ. ಈ ವಿಷಯ ಮನಗಂಡು ಭಕ್ತಾದಿಗಳ ಅಭಿಪ್ರಾಯದಂತೆ ಏಕಶಿಲೆಯಲ್ಲಿ ಶಿಲಾಮಯ ಧ್ವಜಸ್ತಂಭ ಸ್ಥಾಪನೆ ಮಾಡಲಾಗಿದೆ. ಶಾಸ್ತ್ರದಲ್ಲೂ ಶಿಲಾಮಯ ಧ್ವಜಸ್ತಂಭ ಮಾಡಲು ಅವಕಾಶವಿದೆ. ಶಿಲಾಮಯ ಧ್ವಜಸ್ತಂಭ ಶಾಶ್ವತವಾಗಿ ಇರುತ್ತದೆ. ಶ್ರೀ ದೇವಿಯ ಇಚ್ಚೆಯಂತೆ ಸಮಗ್ರ ಜೀರ್ಣೋದ್ಧಾರ ಕೆಲಸ ಕಾರ್ಯಗಳು ಸುಸೂತ್ರವಾಗಿವಾಗಿ ನಡೆಯುತ್ತಿದೆ. ಎಲ್ಲರಿಗೂ ಶುಭವಾಗಲಿ.- ಕುಡುಪು ಕೃಷ್ಣರಾಜ ತಂತ್ರಿ ಕ್ಷೇತ್ರದ ತಂತ್ರಿಗಳು ಹಾಗೂ ವಾಸ್ತುತಜ್ಞರು

ಶರವೂರು ದುರ್ಗಾಪರಮೇಶ್ವರಿ ದೇವಸ್ಥಾನದ ಜೀರ್ಣೋದ್ಧಾರ ಪೂರ್ವಕಾಲದಲ್ಲಿ ಶಿಲಾಮಯ ಧ್ವಜಸ್ತಂಭ ಸ್ಥಾಪನೆ ಮಾಡಿದ್ದು ತುಂಬಾ ಸಂತೋಷದ ವಿಚಾರ .ಇದನ್ನು ನಗ್ರಿ ಪರ್ಲತ್ತಾಯ ಕುಟುಂಬಸ್ಥರು ಸೇವಾರೂಪವಾಗಿ ನೀಡಿದ್ದಾರೆ. ದೇವಸ್ಥಾನದ ಗರ್ಭಗುಡಿ, ನಮಸ್ಕಾರ ಮಂಟಪದ ಕೆಲಸ ಕಾರ್ಯಗಳು 95ಕ್ಕೆ ನಡೆದಿದೆ. ಸುತ್ತುಪೌಳಿ ಸೇರಿದಂತೆ ಉಳಿದ ಅನೇಕ ಕೆಲಸ ಕಾರ್ಯಗಳು ಭರದಿಂದ ಸಾಗುತ್ತಿದೆ.ಎಲ್ಲಾ ಭಕ್ತಾದಿಗಳು ಸಹಕರಿಸುವಂತೆ ವಿನಂತಿಸಿಕೊಳ್ಳುತ್ತೇವೆ. -ಸುಬ್ರಹ್ಮಣ್ಯ ರಾವ್ .ಕೆ ಅಧ್ಯಕ್ಷರು, ವ್ಯವಸ್ಥಾಪನಾ ಸಮಿತಿ ಶ್ರೀ ಕ್ಷೇತ್ರ ಶರವೂರು

ಶರವೂರು ದುರ್ಗಾಪರಮೇಶ್ವರಿ ದೇವಸ್ಥಾನ 5000 ವರ್ಷಗಳ ಇತಿಹಾಸವುಳ್ಳ ದೇವಸ್ಥಾನ, 2024ರಿಂದ ಜೀರ್ಣೋದ್ಧಾರ ಕೆಲಸ ಪ್ರಾರಂಭವಾಗಿದೆ. ದೇವಾಲಯದ ಸಮಗ್ರ ಜೀರ್ಣೋದ್ದಾರವಾಗುತ್ತಿರುವುದು ಸಂತಸದ ವಿಚಾರ. ಶಿಲಾಮಯ ಧ್ವಜಸ್ತಂಭದ ಸೇವಾಕರ್ತರಾದ ನಗ್ರಿ ಪರ್ಲತ್ತಾಯ ಕುಟುಂಬಸ್ಥರಿಗೆ ಹೃತೂರ್ವಕ ಅಭಿನಂದನೆಗಳು -ಎಂ. ಗೋಪಾಲಕೃಷ್ಣ ಪಡ್ಡಿಲ್ಲಾಯ. ಮಾಜಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರು

ಶರವೂರು ದುರ್ಗಾಪರಮೇಶ್ವರಿ ದೇವಸ್ಥಾನ ಎ ಗ್ರೇಡ್ ದೇವಸ್ಥಾನವಾಗಿದ್ದು ಪಾಂಡವರ ಕಾಲದಲ್ಲಿ ಭೌಮ್ಯ ಮಹರ್ಪಿಗಳು ಶ್ರೀ ದೇವಿಯನ್ನು ಪ್ರತಿಷ್ಠಾಪಿಸಿದರು. ದೇವಸ್ಥಾನದ ಸಮಗ್ರ ಜೀರ್ಣೋದ್ಧಾರ ಸುಮಾರು 10 ಕೋಟಿ ರೂ. ವೆಚ್ಚದಲ್ಲಿ ಗರ್ಭಗುಡಿ, ನಮಸ್ಕಾರ ಮಂಟಪ, ಸುತ್ತುಪೌಳಿ, ಬ್ರಹ್ಮರಥ, ರಾಜಗೋಪುರ, 40 ಅಡಿ ಎತ್ತರದಲ್ಲಿ ಸ್ವಾಗತ ಗೋಪುರ, ದೈವಗಳ ಗುಡಿ, ಇನ್ನಿತರ ಕೆಲಸ ಕಾರ್ಯಗಳು ನಡೆದು “ಭಕ್ತರಪಾಲಿನ ಆರಾಧ್ಯ ಕ್ಷೇತ್ರವಾಗುತ್ತದೆ.ಸಮಗ್ರ ಜೀರ್ಣೋದ್ಧಾರ ಕೆಲಸ ಕಾರ್ಯದಲ್ಲಿ ಸೇವಾಕರ್ತರು ತಮ್ಮ ತಮ್ಮ ಕೊಡುಗೆಯನ್ನು ನೀಡಿದ್ದಾರೆ. ಶ್ರೀ ದೇವಿಯ ಸಮಗ್ರ ಜೀರ್ಸೋದ್ಧಾರ ಕೆಲಸ ಕಾರ್ಯದಲ್ಲಿ ಊರ ಪರವೂರ ಭಕ್ತಾದಿಗಳು ತನು, ಮನೆ,ಧನಗಳಿಂದ ಸಹಕರಿಸಿ ಶ್ರೀ ದೇವಿಯ ಕೃಪೆಗೆ ಪಾತ್ರರಾಗುವಂತೆ ವಿನಂತಿ.- ಡಾ. ಹೇಮಂತ್ ರೈ ಮನವಳಿಕೆಗುತ್ತು, ಅಧ್ಯಕ್ಷರು, ಅಭಿವೃದ್ಧಿ ಸಮಿತಿ

Ad Widget
Click to comment

Leave a Reply

ಮಂಗಳೂರು

Mangaluru-ಬೆಳೆ ವಿಮೆ ಅನ್ಯಾಯ ಆರೋಪ: ಅ.9ರಂದು ಮಂಗಳೂರಿನಲ್ಲಿ ರೈತರ ಬೃಹತ್ ಹಕ್ಕೊತ್ತಾಯ | ಸಹಕಾರ ಭಾರತಿ – ಬಿಜೆಪಿ ಬೆಂಬಲ

Published

on



Ad Widget

Ad Widget

Ad Widget

Ad Widget

ಬೆಳೆ ವಿಮೆ ಪಾವತಿಯಲ್ಲಿ ರೈತರಿಗೆ ಅನ್ಯಾಯವಾಗಿದೆ ಎಂದು ಆರೋಪಿಸಿ ಸಹಕಾರ ಭಾರತಿ ಹಾಗೂ ಬಿಜೆಪಿ ನೇತೃತ್ವದಲ್ಲಿ ಅ.9ರಂದು ಮಂಗಳೂರಿನಲ್ಲಿ ಬೃಹತ್ ಹಕ್ಕೊತ್ತಾಯ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಮಂಗಳೂರಿನ ಟೌನ್‌ಹಾಲ್‌ನಲ್ಲಿ ಶುಕ್ರವಾರ ಬೆಳಗ್ಗೆ 10.30ಕ್ಕೆ ಕಾರ್ಯಕ್ರಮ ನಡೆಯಲಿದೆ.

Ad Widget

Ad Widget

Ad Widget

Ad Widget

ಮಂಗಳೂರು: ಬೆಳೆ ವಿಮೆ ಪಾವತಿಯಲ್ಲಿ ರೈತರಿಗೆ ಅನ್ಯಾಯವಾಗಿದೆ ಎಂದು ಆರೋಪಿಸಿ ಸಹಕಾರ ಭಾರತಿ ಹಾಗೂ ಬಿಜೆಪಿ ನೇತೃತ್ವದಲ್ಲಿ ಅ.9ರಂದು ಮಂಗಳೂರಿನಲ್ಲಿ ಬೃಹತ್ ಹಕ್ಕೊತ್ತಾಯ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

Ad Widget

Ad Widget

Ad Widget alt="Ad Widget"/>

Ad Widget

ಮಂಗಳೂರಿನ ಟೌನ್‌ಹಾಲ್‌ನಲ್ಲಿ ಶುಕ್ರವಾರ ಬೆಳಗ್ಗೆ 10.30ಕ್ಕೆ ಕಾರ್ಯಕ್ರಮ ನಡೆಯಲಿದೆ. ಬೆಳೆ ವಿಮೆ ಯೋಜನೆಯಡಿ ರೈತರಿಗೆ ಸೂಕ್ತ ಪರಿಹಾರ ದೊರೆಯದಿರುವುದು ಸೇರಿದಂತೆ ವಿಮೆ ಪಾವತಿಗೆ ಸಂಬಂಧಿಸಿದ ಸಮಸ್ಯೆಗಳ ಕುರಿತು ಸಭೆಯಲ್ಲಿ ಧ್ವನಿ ಎತ್ತಲಾಗುತ್ತದೆ.

Ad Widget

Ad Widget <> Ad Widget

ಬೆಳೆ ವಿಮೆ ಯೋಜನೆಯಡಿ ರೈತರಿಗೆ ನ್ಯಾಯಯುತ ಪರಿಹಾರ ದೊರೆಯಬೇಕು ಹಾಗೂ ವಿಮೆ ಪಾವತಿಯಲ್ಲಿ ಉಂಟಾಗಿರುವ ಸಮಸ್ಯೆಗಳಿಗೆ ಶೀಘ್ರ ಪರಿಹಾರ ಕಲ್ಪಿಸಬೇಕು ಎಂಬುದು ಪ್ರಮುಖ ಬೇಡಿಕೆಯಾಗಿದೆ.



Ad Widget

ದಕ್ಷಿಣ ಕನ್ನಡ ಜಿಲ್ಲೆಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಸದಸ್ಯರು ಸೇರಿದಂತೆ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಬೆಳೆ ವಿಮೆಯಲ್ಲಿ ಆಗಿರುವ ಅನ್ಯಾಯದ ವಿರುದ್ಧ ಒಗ್ಗಟ್ಟಿನಿಂದ ಹಕ್ಕೊತ್ತಾಯ ಮಂಡಿಸುವಂತೆ ಆಯೋಜಕರು ಮನವಿ ಮಾಡಿದ್ದಾರೆ.

Continue Reading

ಸ್ಥಳೀಯ

Dharmasthala-ಅ. 11 ರಿಂದ 19 : ಧರ್ಮಸ್ಥಳದಲ್ಲಿ ನವರಾತ್ರಿ ವೈಭವ

Published

on



Ad Widget

Ad Widget

Ad Widget

Ad Widget

ನವರಾತ್ರಿ ಪ್ರಯುಕ್ತ ಧರ್ಮಸ್ಥಳದಲ್ಲಿ ಇದೇ 11 ರಿಂದ 19 ರ ವರೆಗೆ ವಿಶೇಷ ಕಾರ್ಯಕ್ರಮಗಳು ನಡೆಯಲಿವೆ. ಪ್ರತಿ ದಿನ ರಾತ್ರಿ ಅಮ್ಮನವರ ಸನ್ನಿಧಿಯಲ್ಲಿ ವಿಶೇಷ ಪೂಜೆ ನಡೆಯುತ್ತದೆ.

Ad Widget

Ad Widget

Ad Widget

Ad Widget

ಉಜಿರೆ: ನವರಾತ್ರಿ ಪ್ರಯುಕ್ತ ಧರ್ಮಸ್ಥಳದಲ್ಲಿ ಇದೇ 11 ರಿಂದ 19 ರ ವರೆಗೆ ವಿಶೇಷ ಕಾರ್ಯಕ್ರಮಗಳು ನಡೆಯಲಿವೆ. ಪ್ರತಿ ದಿನ ರಾತ್ರಿ ಅಮ್ಮನವರ ಸನ್ನಿಧಿಯಲ್ಲಿ ವಿಶೇಷ ಪೂಜೆ ನಡೆಯುತ್ತದೆ.

Ad Widget

Ad Widget

Ad Widget alt="Ad Widget"/>

Ad Widget

ದೇವಸ್ಥಾನದ ಎದುರು ಇರುವ ಪ್ರವಚನಮಂಟಪದಲ್ಲಿ ಸಂಜೆ ಆರು ಗಂಟೆಯಿಂದ ಒಂಭತ್ತು ಗಂಟೆ ವರೆಗೆ ನಾಡಿನ ಖ್ಯಾತ ಕಲಾವಿದರಿಂದ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲಾಗಿದೆ.

Ad Widget

Ad Widget <> Ad Widget

ಅ. 11: ಭಾನುವಾರ: ಕುಮಾರಿ ಪ್ರಾಪ್ತಿ ಶೆಟ್ಟಿ, ಧರ್ಮಸ್ಥಳ ಮತ್ತು ಕುಮಾರಿ ಆದ್ವಿ, ನಿಡಿಗಲ್ (ಭಕ್ತಿಸಂಗೀತ), ಅ. 12: ಸೋಮವಾರ: ಪವಿತ್ರವಿನಯ್ ಮಯ್ಯ ಅರ್ಕುಳ, ಮಂಗಳೂರು (ಸುಗಮ ಸಂಗೀತ), ಅ. 13: ಮಂಗಳವಾರ: ಕುಮಾರಿ ಮಾನ್ಸಿ, ಮೈಸೂರು (ಭಕ್ತಿಸಂಗೀತ), ಅ. 14: ಬುಧವಾರ: ಮಾಸ್ಟರ್ ಆಗಮ, ಪೆರ್ಲ, ಮಂಗಳೂರು (ಕರ್ನಾಟಕ ಶಾಸ್ತ್ರೀಯ ಸಂಗೀತ), ಅ. 15: ಗುರುವಾರ: ಕುಮಾರಿ ಧೃತಿ ಬಿ. ಆತ್ರೇಯಾಸ್, ಕುಮಾರಿ ಧನ್ವಿ ಬಿ. ಆತ್ರೇಯಾಸ್ ಮತ್ತು ಮಾಸ್ಟರ್ ಅಸ್ರಮೇಯ ಗುರುಪ್ರಸಾದ್, ಬೆಂಗಳೂರು (ನೃತ್ಯ, ಗಾನಲಹರಿ), ಅ. 16: ಶುಕ್ರವಾರ: ಸನತ್‌ಕುಮಾರ್, ಬೆಂಗಳೂರು (ವಯಲಿನ್ ವಾದನ), ಅ. 17: ಶನಿವಾರ: ಕುಮಾರಿ ಮಯೂರಿ ಭಟ್ ಪೊಳಲಿ, ಬಂಟ್ವಾಳ (ಕರ್ನಾಟಕ ಶಾಸ್ತ್ರೀಯ ಸಂಗೀತ), ಅ. 18: ಆದಿತ್ಯವಾರ: ಕುಮಾರಿ ಐಶ್ವರ್ಯ ಜೋಗಿ ಮತ್ತು ತಂಡ, ಕುಂದಾಪುರ (ಸುಮಧುರ ಗಾನವೈಭವ), ಅ. 19: ಸೋಮವಾರ: ಕುಮಾರಿ ಅರ್ಚಿಷಾ ರಾವ್ ಮತ್ತು ಬಳಗ, ಬೆಂಗಳೂರು (ಸಂಜೆ ಗಂಟೆ 6.30 ರಿಂದ 8.30). ಮಲ್ಲಿಕಾಮಟ್ಟಿ ಮತ್ತು ಬಳಗ, ಪೊಳಲಿ (ರಾತ್ರಿ ಗಂಟೆ 9 ರಿಂದ 11.30) ಭಕ್ತಿ ಸಂಗೀತ.



Ad Widget
Ad Widget
Continue Reading

ಸ್ಥಳೀಯ

Excel-ಎಕ್ಸೆಲ್ ಗುರು ನಮನ 2026: ಸಾಮರಸ್ಯವೇ ಸಮಾಜದ ಉನ್ನತಿಗೆ ತಳಪಾಯ: ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ

Published

on



Ad Widget

Ad Widget

Ad Widget

Ad Widget

ಎಕ್ಸೆಲ್ ಗುರುವಾಯನ ಕೆರೆಯಲ್ಲಿ ನಡೆದ ಗುರು ನಮನ 2026 ಕಾರ್ಯಕ್ರಮದಲ್ಲಿ ಮಾಣಿಲ ಶ್ರೀ ದುರ್ಗಾ ಮಹಾಲಕ್ಷ್ಮೀ ಕ್ಷೇತ್ರದ ಪರಮ ಪೂಜ್ಯ ಶ್ರೀ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿಯವರು ಮಾತನಾಡಿದರು.

Ad Widget

Ad Widget

Ad Widget

Ad Widget

ಗುರುವಾಯನಕೆರೆ, ಅ.4 : “ಸಮಾಜದಲ್ಲಿ ಎಲ್ಲರಿಗೂ ಬದುಕುವ ಅವಕಾಶವಿದೆ. ಪ್ರತಿಯೊಂದು ವರ್ಗ, ಸಮುದಾಯಕ್ಕೂ ಈ ಸಮಾಜ ಆಶ್ರಯ ನೀಡಿದೆ. ಪ್ರತಿಯೊಬ್ಬರ ನಂಬಿಕೆ ಆಚರಣೆಗಳು ಬೇರೆ ಬೇರೆಯಾಗಿರುತ್ತವೆ. ಅವರವರ ನಂಬಿಕೆ ಮತ್ತು ಆಚರಣೆಗಳನ್ನು ತಿರಸ್ಕರಿಸಿದಾಗ ಸಮಾಜದಲ್ಲಿ ಘರ್ಷಣೆಗಳು ಏರ್ಪಡುತ್ತವೆ. ಪ್ರತಿಯೊಬ್ಬರನ್ನೂ ಸಾಮರಸ್ಯದಿಂದ ನೋಡುವ ಗುಣ ನಮ್ಮದಾಗಬೇಕು. ಸಾಮರಸ್ಯವೇ ಸಮಾಜದ ಉನ್ನತಿಗೆ ಅಡಿಪಾಯವಿದ್ದಂತೆ” ಎಂದು ಎಕ್ಸೆಲ್ ಗುರುವಾಯನ ಕೆರೆಯಲ್ಲಿ ನಡೆದ ಗುರು ನಮನ 2026 ಕಾರ್ಯಕ್ರಮದಲ್ಲಿ ಮಾಣಿಲ ಶ್ರೀ ದುರ್ಗಾ ಮಹಾಲಕ್ಷ್ಮೀ ಕ್ಷೇತ್ರದ ಪರಮ ಪೂಜ್ಯ ಶ್ರೀ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿಯವರು ಹೇಳಿದರು.

Ad Widget

Ad Widget

Ad Widget alt="Ad Widget"/>

Ad Widget

ಸ್ವಾಮೀಜಿಯವರು ಮಾತನಾಡುತ್ತಾ ಎಕ್ಸೆಲ್ ವಿದ್ಯಾಸಂಸ್ಥೆಯು ಸುಂದರ ಪರಿಸರದಲ್ಲಿ ನಿರ್ಮಾಣಗೊಂಡಿದೆ. ಈ ವಿದ್ಯಾಸಂಸ್ಥೆಯಿಂದ ವಿದ್ಯಾರ್ಥಿಗಳ ಭವಿಷ್ಯ ರೂಪಗೊಳ್ಳುತ್ತದೆ. ವಿದ್ಯಾರ್ಥಿಗಳು ಪರಸ್ಪರ ಗೌರವಿಸಿರಿ. ಈ ಸಮಾಜಕ್ಕೆ ಒಳ್ಳೆಯದನ್ನು ಬಯಸಿ. ನೀವು ಓದಿದ ವಿದ್ಯಾ ಸಂಸ್ಥೆಗೆ ಚಿರಋಣಿಯಾಗಿರಬೇಕೆಂದು, ಈ ಸಂಸ್ಥೆಯು ಸಾವಿರಾರು ಶಿಕ್ಷಕರನ್ನು ನಿರಂತರವಾಗಿ ಗೌರವಿಸುತ್ತಾ ಬಂದಿರುವುದು ನಿಜವಾಗಿಯೂ ಅತ್ಯುತ್ತಮ ಬೆಳವಣಿಗೆಯಾಗಿದೆ. ಇದು ಸುಮಂತ್ ಕುಮಾರ್ ಅವರ ಈ ನಿಸ್ವಾರ್ಥ ಸೇವೆಗೆ ಸಾಕ್ಷಿಯಾಗಿದೆ ಎಂದರು.

Ad Widget

Ad Widget <> Ad Widget

ಸುಬ್ರಮಣ್ಯದ ಶ್ರೀ ಕುಕ್ಕೆ ಸುಬ್ರಹ್ಮಣ್ಯ ಪದವಿಪೂರ್ವ ಕಾಲೇಜಿನ ಪ್ರಾಚಾರ್ಯರಾದ ಸೋಮಶೇಖರ್ ನಾಯಕ್ ಇವರು ಮಾತನಾಡುತ್ತಾ ” ವಿದ್ಯಾರ್ಥಿಗಳು ಕಷ್ಟಕರ ವಿಷಯಗಳ ಕಡೆಗೆ ಹೆಚ್ಚು ಗಮನ ಕೊಡಬೇಕು. ನೀವೆಲ್ಲ ಎಕ್ಸೆಲ್ ವಿದ್ಯಾಸಂಸ್ಥೆಯಲ್ಲಿ ಓದುತ್ತಿರುವುದು ನಿಮ್ಮೆಲ್ಲರ ಅದೃಷ್ಟವೇ ಸರಿ. ಈ ಸಂಸ್ಥೆಯ ಅಧ್ಯಕ್ಷರಾದ ನುಮಂತ್ ಕುಮಾರ್ ಜೈನ್ ಇವರು ಉದಾರ ವ್ಯಕ್ತಿತ್ವದ ವ್ಯಕ್ತಿ. ಅವರ ಸೇವಾ ಮನೋಭಾವದಿಂದಲೇ ಈ ಶಿಕ್ಷಣ ಸಂಸ್ಥೆಯು ಎತ್ತರಕ್ಕೆ ಬೆಳೆಯುತ್ತಿದೆ. ಜಿಲ್ಲೆಯ ಯಾವುದೇ ಶೈಕ್ಷಣಿಕ ಸಾಮಾಜಿಕ ಧಾರ್ಮಿಕ ಕಾರ್ಯಕ್ರಮಗಳಿಗೆ ಸುಮಂತ್ ಅವರ ಕೊಡುಗೆ ಅಪಾರವಾದದ್ದು. ಈ ಸಂಸ್ಥೆಗೆ ನನ್ನನ್ನು ಆಹ್ವಾನಿಸಿ ಸನ್ಮಾನಿಸಿದ್ದೀರಿ. ನನ್ನಲ್ಲಿ ಕೃತಾರ್ಥತೆ ಭಾವ ಮೂಡುತ್ತಿದೆ. ಎಕ್ಸೆಲ್ ವಿದ್ಯಾಸಂಸ್ಥೆಗೆ ನಾನು ಚಿರಋಣಿ” ಎಂದು ಸಂತಸ ವ್ಯಕ್ತಪಡಿಸಿದರು.



Ad Widget

ಮೂಲ್ಕಿಯ ವಿಜಯ ಕಾಲೇಜಿನ ವಿಶ್ರಾಂತ ಪಾಚಾರ್ಯರಾದ ಡಾ .ನಾರಾಯಣ ಪೂಜಾರಿ ಮತ್ತು ಸಾಮಾಜಿಕ ಮತ್ತು ಧಾರ್ಮಿಕ ಮುಖಂಡರಾದ ಸಂತೋಷ್ ಕುಮಾರ್ ಕಾಪಿನಡ್ಕ ಇವರು ವಿದ್ಯಾರ್ಥಿಗಳ ಭವಿಷ್ಯಕ್ಕೆ ಶುಭ ಕೋರಿದರು.

Ad Widget

Ad Widget

ಎಕ್ಸೆಲ್ ವಿದ್ಯಾ ಸಂಸ್ಥೆಯ ಹಿತೈಷಿಗಳಾದ ರತ್ನರಾಜ್ ಜೈನ್ ಮತ್ತು ಪತ್ರಿಕೋದ್ಯಮಿಗಳಾದ ಸಂತೋಷ್ ಕೋಟ್ಯಾನ್ ಇವರು ಈ ಕಾರ್ಯಕ್ರಮದ ಭಾಗವಾಗಿ ಸನ್ಮಾನ ಸ್ವೀಕರಿಸಿದರು.

ಸಂಸ್ಥೆಯ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್ ಅವರು ಅಧ್ಯಕ್ಷೀಯ ಭಾಷಣವನ್ನು ಮಾಡುತ್ತಾ “ನಮ್ಮ ಎಕ್ಸೆಲ್ ಸಂಸ್ಥೆಯ ವಿದ್ಯಾರ್ಥಿಗಳು ದೇಶವಿದೇಶಗಳಲ್ಲಿ ಉನ್ನತ ಶಿಕ್ಷಣವನ್ನು ಮಾಡುತ್ತಿದ್ದಾರೆ . ಇಲ್ಲಿ ಓದಿದ ವಿದ್ಯಾರ್ಥಿಗಳು ಆದರ್ಶ ವ್ಯಕ್ತಿಗಳಾಗಿ ರೂಪಗೊಳ್ಳುತ್ತಿದ್ದಾರೆ. ಈ ಕಾರ್ಯಕ್ರಮದಲ್ಲಿ ಗುರುಗಳನ್ನು ಗೌರವಿಸುವ ಮೂಲಕ ನಮ್ಮಲ್ಲಿ ಧನ್ಯತಾಭಾವ ಮೂಡಿದೆ. ಶಿಕ್ಷಕರು ಜಗತ್ತಿನ ಪ್ರಥಮ ಪೂಜ್ಯರು . ಅಂತಹ ಶಿಕ್ಷಕರನ್ನು ಸನ್ಮಾನಿಸುವುದು ನಮ್ಮ ಸೌಭಾಗ್ಯ” ಎಂದು ಹೇಳಿದರು.

ಕಾಲೇಜಿನ ಬ್ರೋಚರ್ಸ್ ಅನ್ನು ಈ ಸಂದರ್ಭದಲ್ಲಿ ಲೋಕಾರ್ಪಣೆ ಮಾಡಲಾಯಿತು.ಕರ್ನಾಟಕ ರಾಜ್ಯದ ವಿವಿಧ ಜಿಲ್ಲೆ, ತಾಲೂಕು ಗ್ರಾಮಗಳಲ್ಲಿ ಶಿಕ್ಷಕ ವೃತ್ತಿಯನ್ನು ಮಾಡುತ್ತ ವಿದ್ಯಾರ್ಥಿಗಳ ಭವಿಷ್ಯವನ್ನು ರೂಪಿಸುತ್ತಿರುವ 300 ಹೆಚ್ಚು ಶಿಕ್ಷಕರನ್ನು ಗೌರವಿಸಿದ್ದು ಅತ್ಯಂತ ವಿರಳ ಮತ್ತು ಸೃಜನಾತ್ಮಕ ಕಾರ್ಯಕ್ರಮವಾಗಿತ್ತು. ಎಲ್ಲ ಶಿಕ್ಷಕರಿಗೆ ಹಾರ , ಶಾಲು, ಪೇಟ ಮತ್ತು ಸ್ಮರಣಿಕೆ, ಉಡುಗೊರೆಗಳನ್ನು ನೀಡಿ ಸನ್ಮಾನಿಸಲಾಯಿತು. ಪ್ರಾಂಶುಪಾಲರಾದ ಡಾ ನವೀನ್ ಕುಮಾರ್ ಮರಿಕೆ ಸ್ವಾಗತಿಸಿದರು. ಎಕ್ಸೆಲ್ ಟೆಕ್ನೋ ಸ್ಕೂಲ್ ವೇಣೂರಿನ ಮುಖ್ಯೋಪಾಧ್ಯಯರಾದ ಶಾಂತಿರಾಜ್ ಜೈನ್ ವಂದಿಸಿದರು.

ಉಪನ್ಯಾಸಕರಾದ ಪ್ರಸನ್ನ ಭೋಜ, ತಿಪ್ಪೇಸ್ವಾಮಿ, ಪ್ರಜ್ವಿತ್ ರೈ, ಅನನ್ಯ ಜೈನ್, ವೈಷ್ಣವಿಯವರು ಕಾರ್ಯಕ್ರಮವನ್ನು ನಿರೂಪಿಸಿದರು. ದ್ವಿತೀಯ ಪಿಯು ವಿದ್ಯಾರ್ಥಿಗಳು ಪ್ರಾರ್ಥನೆ ಹಾಡುವ ಮೂಲಕ ಈ ಕಾರ್ಯಕ್ರಮಕ್ಕೆ ಆರಂಭವನ್ನು ಒದಗಿಸಿದರು.

ಪ್ರಾಂಶುಪಾಲರಾದ ಡಾ. ನವೀನ್ ಕುಮಾರ್ ಮರಿಕೆ, ಡಾ. ಪ್ರಜ್ವಲ್, ಉಪ ಪ್ರಾಚಾರ್ಯರಾದ ರೋಹಿತ್, ಹರೀಶ್ ಕುಮಾರ್ ಗುರುವಾಯನಕೆರೆ ಟೆಕ್ನೋ ಸ್ಕೂಲಿನ ಮುಖ್ಯ ಶಿಕ್ಷಕಿ ಸುಮಿತ್ರ, ವೇಣೂರು ಶಾಲೆಯ ಮುಖ್ಯೋಪಾಧ್ಯಾಯರಾದ ಶಾಂತಿರಾಜ್ ಜೈನ್, ವಿದ್ಯಾರ್ಥಿಗಳು, ಪೋಷಕರು, ಬೋಧಕ ಬೋಧಕೇತರ ಸಿಬ್ಬಂದಿಯವರು ಭಾಗವಹಿಸಿದ್ದರು.

ಎಕ್ಸೆಲ್ ಸಿಬ್ಬಂದಿಯಿಂದ ಸಾಂಸ್ಕೃತಿಕ ವೈಭವ: ಗಿರಿಜಾ ಕಲ್ಯಾಣ ಹಾಗೂ ತಾರಕಾಸುರ ವಧೆ ಯಕ್ಷಗಾನ ಪ್ರದರ್ಶನ

ಗುರು ನಮನ ಕಾರ್ಯಕ್ರಮದ ಅಂಗವಾಗಿ ಎಕ್ಸೆಲ್ ಶಿಕ್ಷಣ ಸಂಸ್ಥೆಗಳ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಯವರಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಆಯೋಜನೆಗೊಂಡಿದ್ದವು. ಎಕ್ಸೆಲ್ ಪಿಯು ಕಾಲೇಜಿನ ಸಿಬ್ಬಂದಿಯ ಜೊತೆಗೆ ಎಕ್ಸೆಲ್ ಟೆಕ್ನೋ ಸ್ಕೂಲ್ ಗುರುವಾಯನಕೆರೆ ಮತ್ತು ವೇಣೂರು ಶಾಲೆಗಳ ಸಿಬ್ಬಂದಿಯವರು ಭಾಗವಹಿಸಿದ್ದರು.

ಈ ಕಾರ್ಯಕ್ರಮದಲ್ಲಿ ಸಿಬ್ಬಂದಿ ವರ್ಗದವರು ವಿವಿಧ ನೃತ್ಯ,ಹಾಡು, ರೂಪಕ, ಭರತನಾಟ್ಯ ವೈವಿಧ್ಯಮಯ ಕಾರ್ಯಕ್ರಮಗಳನ್ನು ನಡೆಸಿಕೊಡುವ ಮೂಲಕ ಸರ್ವರನ್ನು ರೋಮಾಂಚನಗೊಳಿಸಿದರು. ಗಿರಿಜಾ ಕಲ್ಯಾಣ ಮತ್ತು ತಾರಕಾಸುರ ವಧೆ ಎನ್ನುವ ಯಕ್ಷಗಾನ ಪ್ರಸಂಗವನ್ನು ಪ್ರದರ್ಶಿಸಿದರು.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading