ನಿಧನ ವಾರ್ತೆ
Vitla Shambhu Sharma-ಯಕ್ಷಗಾನದ ಹಿರಿಯ ತಾಳಮದ್ದಳೆ ಅರ್ಥಧಾರಿ ವಿಟ್ಲ ಶಂಭು ಶರ್ಮ ನಿಧನ
ಖ್ಯಾತ ಯಕ್ಷಗಾನ ಕಲಾವಿದ ಹಾಗೂ ತಾಳಮದ್ದಳೆ ಅರ್ಥಧಾರಿ ವಿಟ್ಲ ಶಂಭು ಶರ್ಮ (74) ಅವರು ಶನಿವಾರ ಬೆಳಗಿನ ಜಾವ ನಿಧನರಾದರು. ಅವರು ಪತ್ನಿ ಮತ್ತು ಪುತ್ರನನ್ನು ಅಗಲಿದ್ದಾರೆ.
ಮಂಗಳೂರು: ಖ್ಯಾತ ಯಕ್ಷಗಾನ ಕಲಾವಿದ ಹಾಗೂ ತಾಳಮದ್ದಳೆ ಅರ್ಥಧಾರಿ ವಿಟ್ಲ ಶಂಭು ಶರ್ಮ (74) ಅವರು ಶನಿವಾರ ಬೆಳಗಿನ ಜಾವ ನಿಧನರಾದರು. ಅವರು ಪತ್ನಿ ಮತ್ತು ಪುತ್ರನನ್ನು ಅಗಲಿದ್ದಾರೆ.
ಕುಂಬಳೆ ಸೀಮೆಯ ಎಡನಾಡು ಗ್ರಾಮದ ಶೆಡಂಪಾಡಿಯಲ್ಲಿ 1951ರ ಅಕ್ಟೋಬರ್ 13ರಂದು ಕೃಷ್ಣ ಭಟ್ಟ ಮತ್ತು ಹೇಮಾವತಿ ದಂಪತಿಯ ಪುತ್ರನಾಗಿ ಜನಿಸಿದ ಶಂಭು ಶರ್ಮ, ಆಕಸ್ಮಿಕ ಸಂದರ್ಭವೊಂದರಲ್ಲಿ ತಾಳಮದ್ದಳೆ ಅರ್ಥ ಹೇಳುವ ಮೂಲಕ ಯಕ್ಷ ಕ್ಷೇತ್ರಕ್ಕೆ ಪ್ರವೇಶಿಸಿದರು. ಬಳಿಕ ಇದೇ ಕ್ಷೇತ್ರದಲ್ಲಿ ತಮ್ಮನ್ನು ಸಂಪೂರ್ಣವಾಗಿ ತೊಡಗಿಸಿಕೊಂಡು ಪ್ರಸಿದ್ಧ ಅರ್ಥಧಾರಿಯಾಗಿ ಹೆಸರು ಗಳಿಸಿದರು.
ವೃತ್ತಿಯಲ್ಲಿ ಉಪನ್ಯಾಸಕರಾಗಿದ್ದ ಶಂಭು ಶರ್ಮರು ಪ್ರವೃತ್ತಿಯಲ್ಲಿ ಶ್ರೇಷ್ಠ ಕಲಾವಿದರಾಗಿದ್ದರು. ಸುಬ್ರಹ್ಮಣ್ಯ ಮೇಳ, ಕದ್ರಿ ಮೇಳ ಸೇರಿದಂತೆ ಹಲವಾರು ಮೇಳಗಳಲ್ಲಿ ಅತಿಥಿ ಕಲಾವಿದರಾಗಿ ಪಾತ್ರ ನಿರ್ವಹಿಸಿ ಪ್ರೇಕ್ಷಕರ ಮನ ಗೆದ್ದಿದ್ದರು.
ಅವರ ಕಲಾಸೇವೆಗೆ ಯಕ್ಷರಂಗ ಪ್ರಶಸ್ತಿ, ಪೆರ್ಲ ಕೃಷ್ಣ ಭಟ್ಟ ಪ್ರಶಸ್ತಿ, ವಿಟ್ಲ ಜೋಶಿ ಪ್ರಶಸ್ತಿ ಸೇರಿದಂತೆ ಅನೇಕ ಪ್ರತಿಷ್ಠಿತ ಪ್ರಶಸ್ತಿಗಳು ಸಂದಿವೆ.
ನಿಧನ ವಾರ್ತೆ
Subramanya-ಸರ್ಪಸಂಸ್ಕಾರ ಸೇವೆಗೆ ಬಂದ ಯಾತ್ರಾರ್ಥಿಯ ಮೃತದೇಹ ಕುಮಾರಧಾರ ನದಿಯಲ್ಲಿ ಪತ್ತೆ
ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ಧ ಪುಣ್ಯಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯಕ್ಕೆ ಸರ್ಪಸಂಸ್ಕಾರ ಸೇವೆಗಾಗಿ ಆಗಮಿಸಿದ್ದ ತುಮಕೂರು ಜಿಲ್ಲೆಯ ಯಾತ್ರಾರ್ಥಿಯೊಬ್ಬರ ಮೃತದೇಹ ಮಂಗಳವಾರ ಬೆಳಗ್ಗೆ ಕುಮಾರಧಾರ ನದಿಯಲ್ಲಿ ಪತ್ತೆಯಾಗಿದೆ. ಮೃತರನ್ನು ತುಮಕೂರು ಜಿಲ್ಲೆಯ ತುರುವೇಕೆರೆ ನಿವಾಸಿ ದೇವೇಗೌಡ ಎಂದು ಗುರುತಿಸಲಾಗಿದೆ.
ಸುಬ್ರಹ್ಮಣ್ಯ: ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ಧ ಪುಣ್ಯಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯಕ್ಕೆ ಸರ್ಪಸಂಸ್ಕಾರ ಸೇವೆಗಾಗಿ ಆಗಮಿಸಿದ್ದ ತುಮಕೂರು ಜಿಲ್ಲೆಯ ಯಾತ್ರಾರ್ಥಿಯೊಬ್ಬರ ಮೃತದೇಹ ಮಂಗಳವಾರ ಬೆಳಗ್ಗೆ ಕುಮಾರಧಾರ ನದಿಯಲ್ಲಿ ಪತ್ತೆಯಾಗಿದೆ.
ಮೃತರನ್ನು ತುಮಕೂರು ಜಿಲ್ಲೆಯ ತುರುವೇಕೆರೆ ನಿವಾಸಿ ದೇವೇಗೌಡ ಎಂದು ಗುರುತಿಸಲಾಗಿದೆ.
ಅನಾರೋಗ್ಯದಿಂದ ವಸತಿಗೃಹದಲ್ಲೇ ವಿಶ್ರಾಂತಿ
ದೇವೇಗೌಡ ಅವರು ತುರುವೇಕೆರೆಯಿಂದ ಇತರ ಯಾತ್ರಾರ್ಥಿಗಳೊಂದಿಗೆ ಕುಕ್ಕೆ ಸುಬ್ರಹ್ಮಣ್ಯಕ್ಕೆ ಸರ್ಪಸಂಸ್ಕಾರ ಪೂಜಾ ಕೈಂಕರ್ಯಗಳನ್ನು ನೆರವೇರಿಸಲು ಬಂದಿದ್ದರು ಎನ್ನಲಾಗಿದೆ. ದೂರದ ಪ್ರಯಾಣದ ಬಳಿಕ ಅನಾರೋಗ್ಯಕ್ಕೆ ಒಳಗಾದ ಅವರು, ಪೂಜಾ ಸ್ಥಳಕ್ಕೆ ತೆರಳದೆ ತಾವು ತಂಗಿದ್ದ ವಸತಿಗೃಹದಲ್ಲೇ ವಿಶ್ರಾಂತಿ ಪಡೆಯುತ್ತಿದ್ದರು ಎಂದು ತಿಳಿದುಬಂದಿದೆ.
ನದಿಯಲ್ಲಿ ತೇಲುತ್ತಿದ್ದ ಮೃತದೇಹ ಪತ್ತೆ
ಮಂಗಳವಾರ ಮುಂಜಾನೆ ಸುಬ್ರಹ್ಮಣ್ಯದ ಕುಲ್ಕುಂದ ಕಾಲನಿ ರಸ್ತೆಯಿಂದ ಕುಮಾರಧಾರ ನದಿಗೆ ಸಂಪರ್ಕ ಕಲ್ಪಿಸುವ ಸ್ಥಳದ ಸಮೀಪ ನದಿಯಲ್ಲಿ ವ್ಯಕ್ತಿಯೊಬ್ಬರ ಮೃತದೇಹ ತೇಲುತ್ತಿರುವುದು ಸ್ಥಳೀಯರ ಗಮನಕ್ಕೆ ಬಂದಿದೆ.
ಇದೇ ವೇಳೆ, ವಸತಿಗೃಹದಲ್ಲಿದ್ದ ದೇವೇಗೌಡ ಅವರು ಕಾಣೆಯಾಗಿರುವುದನ್ನು ಗಮನಿಸಿದ ಕುಟುಂಬಸ್ಥರು ಹಾಗೂ ಅವರೊಂದಿಗೆ ಬಂದಿದ್ದವರು ಹುಡುಕಾಟ ನಡೆಸಿದ್ದಾರೆ. ಬಳಿಕ ಸುಬ್ರಹ್ಮಣ್ಯ ಪೊಲೀಸ್ ಠಾಣೆಗೆ ನಾಪತ್ತೆ ದೂರು ನೀಡಲು ತೆರಳಿದಾಗ ನದಿಯಲ್ಲಿ ಮೃತದೇಹ ಪತ್ತೆಯಾಗಿರುವ ಮಾಹಿತಿ ಲಭಿಸಿದೆ. ಸ್ಥಳಕ್ಕೆ ತೆರಳಿ ಪರಿಶೀಲಿಸಿದಾಗ ಮೃತದೇಹ ದೇವೇಗೌಡ ಅವರದ್ದೇ ಎಂಬುದು ದೃಢಪಟ್ಟಿದೆ ಎಂದು ತಿಳಿದುಬಂದಿದೆ.
ಸಾವಿನ ಸುತ್ತ ಹಲವು ಅನುಮಾನ
ಅನಾರೋಗ್ಯದಿಂದ ವಸತಿಗೃಹದಲ್ಲೇ ವಿಶ್ರಾಂತಿ ಪಡೆಯುತ್ತಿದ್ದ ದೇವೇಗೌಡ ಅವರು ನದಿಯ ಬಳಿಗೆ ತೆರಳಿದ್ದು ಹೇಗೆ? ಆಕಸ್ಮಿಕವಾಗಿ ಕಾಲು ಜಾರಿ ನದಿಗೆ ಬಿದ್ದಿದ್ದಾರೆಯೇ ಅಥವಾ ಬೇರೆ ಯಾವುದಾದರೂ ಕಾರಣದಿಂದ ಮೃತಪಟ್ಟಿದ್ದಾರೆಯೇ ಎಂಬುದು ತನಿಖೆಯಿಂದ ತಿಳಿದುಬರಬೇಕಿದೆ.
ಘಟನಾ ಸ್ಥಳಕ್ಕೆ ಸುಬ್ರಹ್ಮಣ್ಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.
ನಿಧನ ವಾರ್ತೆ
Kalmadka-ಸುಳ್ಯ ಕಲ್ಮಡ್ಕದಲ್ಲಿ ದುರಂತ: ವಿದ್ಯುತ್ ಸ್ಪರ್ಶಿಸಿ ಮೀನು ಹಿಡಿಯಲು ಹೋದ ಬಾವ–ಬಾಮೈದ ಸಾವು
ಮೀನು ಹಿಡಿಯಲು ತೆರಳಿದ್ದ ಇಬ್ಬರು ವಿದ್ಯುತ್ ಸ್ಪರ್ಶಿಸಿ ಮೃತಪಟ್ಟ ದಾರುಣ ಘಟನೆ ಸುಳ್ಯ ತಾಲೂಕಿನ ಕಲ್ಮಡ್ಕದಲ್ಲಿ ಅ.12ರ ರಾತ್ರಿ ಸಂಭವಿಸಿದೆ. ಮೃತಪಟ್ಟವರು ಬಾವ–ಬಾಮೈದ ಸಂಬಂಧಿಗಳಾಗಿದ್ದು, ಅವರೊಂದಿಗೆ ತೆರಳಿದ್ದ ಮತ್ತೊಬ್ಬ ಯುವಕ ಗಾಯಗೊಂಡಿದ್ದಾರೆ.
ಕಲ್ಮಡ್ಕ: ಮೀನು ಹಿಡಿಯಲು ತೆರಳಿದ್ದ ಇಬ್ಬರು ವಿದ್ಯುತ್ ಸ್ಪರ್ಶಿಸಿ ಮೃತಪಟ್ಟ ದಾರುಣ ಘಟನೆ ಸುಳ್ಯ ತಾಲೂಕಿನ ಕಲ್ಮಡ್ಕದಲ್ಲಿ ಅ.12ರ ರಾತ್ರಿ ಸಂಭವಿಸಿದೆ. ಮೃತಪಟ್ಟವರು ಬಾವ–ಬಾಮೈದ ಸಂಬಂಧಿಗಳಾಗಿದ್ದು, ಅವರೊಂದಿಗೆ ತೆರಳಿದ್ದ ಮತ್ತೊಬ್ಬ ಯುವಕ ಗಾಯಗೊಂಡಿದ್ದಾರೆ.
ಕಲ್ಮಡ್ಕದ ಬೊಮ್ಮೆಟ್ಟಿ ನಿವಾಸಿಗಳಾದ ಬಾಬು–ಸೀತಾ ದಂಪತಿಯ ಪುತ್ರ ಭರತ್ (28) ಹಾಗೂ ಭರತ್ ಅವರ ಸಹೋದರಿ ಭವ್ಯಾ ಅವರ ಪತಿ, ಬೆಳ್ತಂಗಡಿ ತಾಲೂಕಿನ ಮುಂಗೆಲು ನಿವಾಸಿಗಳಾದ ವೀರಪ್ಪ–ಸೀತಮ್ಮ ದಂಪತಿಯ ಪುತ್ರ ರಮೇಶ್ (34) ಮೃತಪಟ್ಟವರು. ಗಾಯಗೊಂಡ ಯುವಕನನ್ನು ಅವರ ಸಂಬಂಧಿ ಸಿಂಚನ್ ಎಂದು ಗುರುತಿಸಲಾಗಿದೆ.
ಅ.12ರಂದು ರಾತ್ರಿ ಸುಮಾರು 10.30ರ ವೇಳೆಗೆ ಭರತ್, ರಮೇಶ್ ಹಾಗೂ ಸಿಂಚನ್ ಅವರು ಮನೆಯಿಂದ ಸುಮಾರು ಒಂದೂವರೆ ಕಿ.ಮೀ. ದೂರದಲ್ಲಿರುವ ತೋಡಿಗೆ ಮೀನು ಹಿಡಿಯಲು ತೆರಳಿದ್ದರು ಎನ್ನಲಾಗಿದೆ. ತೋಡಿನ ಮೇಲ್ಭಾಗದಲ್ಲಿ ತಂತಿ ಅಳವಡಿಸಿ ಅದಕ್ಕೆ ವಿದ್ಯುತ್ ಸಂಪರ್ಕ ನೀಡಲಾಗಿತ್ತು ಎಂದು ತಿಳಿದುಬಂದಿದೆ.
ಈ ತಂತಿಯನ್ನು ದಾಟುವ ವೇಳೆ ಭರತ್ ಮತ್ತು ರಮೇಶ್ ಅವರಿಗೆ ವಿದ್ಯುತ್ ಸ್ಪರ್ಶಿಸಿದ್ದು, ಇಬ್ಬರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಅವರೊಂದಿಗೆ ಇದ್ದ ಸಿಂಚನ್ ಅವರಿಗೂ ವಿದ್ಯುತ್ ತಗುಲಿ ಎಸೆಯಲ್ಪಟ್ಟಿದ್ದು, ಕೈ, ಎದೆ ಹಾಗೂ ಕಾಲುಗಳಿಗೆ ಸುಟ್ಟ ಗಾಯಗಳಾಗಿವೆ ಎಂದು ತಿಳಿದುಬಂದಿದೆ.
ನಿಧನ ವಾರ್ತೆ
Sullia-Big Breaking: ಸುಳ್ಯ: ವಿದ್ಯುತ್ ಶಾಕ್‌ಗೆ ಇಬ್ಬರು ಯುವಕರು ಬಲಿ; ಬಾಲಕನಿಗೆ ಗಾಯ
ಸುಳ್ಯ ತಾಲೂಕಿನ ಕಲ್ಮಡ್ಕ ಗ್ರಾಮದ ಬೊಮ್ಮೆಟ್ಟಿಯಲ್ಲಿ ವಿದ್ಯುತ್ ಶಾಕ್ ತಗುಲಿ ಇಬ್ಬರು ಯುವಕರು ಮೃತಪಟ್ಟ ದಾರುಣ ಘಟನೆ ಅ.12ರ ತಡರಾತ್ರಿ ನಡೆದಿದೆ. ಘಟನೆಯಲ್ಲಿ ಮತ್ತೋರ್ವ ಬಾಲಕ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಸುಳ್ಯ: ತಾಲೂಕಿನ ಕಲ್ಮಡ್ಕ ಗ್ರಾಮದ ಬೊಮ್ಮೆಟ್ಟಿಯಲ್ಲಿ ವಿದ್ಯುತ್ ಶಾಕ್ ತಗುಲಿ ಇಬ್ಬರು ಯುವಕರು ಮೃತಪಟ್ಟ ದಾರುಣ ಘಟನೆ ಅ.12ರ ತಡರಾತ್ರಿ ನಡೆದಿದೆ. ಘಟನೆಯಲ್ಲಿ ಮತ್ತೋರ್ವ ಬಾಲಕ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಮೃತರನ್ನು ಬೊಮ್ಮೆಟ್ಟಿ ನಿವಾಸಿಗಳಾದ ಗಣೇಶ್ ಹಾಗೂ ಭರತ್ ಎಂದು ಗುರುತಿಸಲಾಗಿದೆ. ತಡರಾತ್ರಿ ಸಂಭವಿಸಿದ ಈ ದುರಂತದಿಂದ ಸ್ಥಳೀಯರಲ್ಲಿ ಆತಂಕ ಹಾಗೂ ಶೋಕದ ವಾತಾವರಣ ನಿರ್ಮಾಣವಾಗಿದೆ.
ವಿದ್ಯುತ್ ಶಾಕ್ ತಗುಲಲು ನಿಖರ ಕಾರಣವೇನು ಎಂಬುದು ಇನ್ನಷ್ಟೇ ತಿಳಿದುಬರಬೇಕಿದೆ. ಘಟನೆಯ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.
-
ನಿಧನ ವಾರ್ತೆ12 hours agoSullia-Big Breaking: ಸುಳ್ಯ: ವಿದ್ಯುತ್ ಶಾಕ್‌ಗೆ ಇಬ್ಬರು ಯುವಕರು ಬಲಿ; ಬಾಲಕನಿಗೆ ಗಾಯ
-
ಸ್ಥಳೀಯ10 hours agoArrested-1,000 ಅಡಿ ಆಳದ ಪ್ರಪಾತದಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿನಿ ಶವ ಪತ್ತೆ; ಆತ್ಮಹತ್ಯೆ ಕತೆ ಕಟ್ಟಿದ ಪ್ರಿಯಕರ ಅರೆಸ್ಟ್..!
-
ಮಂಗಳೂರು9 hours agoSoujanya Case-BIG BREAKING NEWS: ಸೌಜನ್ಯ ಪ್ರಕರಣ: ಮಂಗಳೂರಿನಲ್ಲಿ ಎಸ್ಐಟಿ ಮಹತ್ವದ ಸಭೆ; ಸೌಜನ್ಯ ದೇಹ ಸಿಕ್ಕ ಸ್ಥಳಕ್ಕೆ ಭೇಟಿ ಸಾಧ್ಯತೆ
-
ನಿಧನ ವಾರ್ತೆ6 hours agoKalmadka-ಸುಳ್ಯ ಕಲ್ಮಡ್ಕದಲ್ಲಿ ದುರಂತ: ವಿದ್ಯುತ್ ಸ್ಪರ್ಶಿಸಿ ಮೀನು ಹಿಡಿಯಲು ಹೋದ ಬಾವ–ಬಾಮೈದ ಸಾವು
-
ಸ್ಥಳೀಯ11 hours agoSatish Patri-ಚಿಕ್ಕಮಗಳೂರು: ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ಅತ್ಯಾಚಾರ ಆರೋಪ; ತಲೆಮರೆಸಿಕೊಂಡಿದ್ದ ಅರ್ಚಕ ಸತೀಶ್ ಪಾತ್ರಿ ಅರೆಸ್ಟ್..!
-
ಬಿಗ್ ನ್ಯೂಸ್6 hours agoVitla-ವಿಟ್ಲ: ಕಾರು–ಆಕ್ಟಿವಾ ಡಿಕ್ಕಿ; ಸವಾರನಿಗೆ ಗಂಭೀರ ಗಾಯ
-
ರಾಜಕೀಯ10 hours agoSudha Yadav-ಆರು ರಾಜ್ಯಗಳಿಗೆ ರಾಜ್ಯಪಾಲರ ಬದಲಾವಣೆ: ಕರ್ನಾಟಕಕ್ಕೆ ನೂತನ ರಾಜ್ಯಪಾಲರಾಗಿ ಸುಧಾ ಯಾದವ್
-
ಶಿಕ್ಷಣ5 hours agoVivekananda-ಪುತ್ತೂರಿನ ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನ ಇಬ್ಬರು ಉಪನ್ಯಾಸಕರಿಗೆ ಡಾಕ್ಟರೇಟ್ ಪದವಿ


















