ರಾಜಕೀಯ
D.K. Shivakumar-ಧರ್ಮಸ್ಥಳ ಕ್ಷೇತ್ರ ಮತ್ತು ಒಂದು ಕುಟುಂಬದ ತೇಜೋವಧೆ ಮಾಡಲು ಸಾಕಷ್ಟು ಷಡ್ಯಂತ್ರಗಳು ನಡೆದಿವೆ : ಡಿ.ಕೆ. ಶಿವಕುಮಾರ್
ಧರ್ಮಸ್ಥಳ ಗ್ರಾಮದಲ್ಲಿ ನಡೆದಿದೆ ಎನ್ನಲಾದ ಪ್ರಕರಣಗಳ ಕುರಿತು ವಿಶೇಷ ತನಿಖಾ ತಂಡ (ಎಸ್‌ಐಟಿ)ದ ವರದಿ ಬಂದ ನಂತರ ಹಲವು ಸತ್ಯಗಳು ಬಯಲಾಗಲಿವೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಗುರುವಾರ ಬೆಂಗಳೂರಿನ ವಿಧಾನಸೌಧದಲ್ಲಿ ಸುದ್ದಿಗಾರರಿಗೆ ತಿಳಿಸಿದರು.
ಬೆಂಗಳೂರು: ಧರ್ಮಸ್ಥಳ ಗ್ರಾಮದಲ್ಲಿ ನಡೆದಿದೆ ಎನ್ನಲಾದ ಪ್ರಕರಣಗಳ ಕುರಿತು ವಿಶೇಷ ತನಿಖಾ ತಂಡ (ಎಸ್‌ಐಟಿ)ದ ವರದಿ ಬಂದ ನಂತರ ಹಲವು ಸತ್ಯಗಳು ಬಯಲಾಗಲಿವೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಗುರುವಾರ ಬೆಂಗಳೂರಿನ ವಿಧಾನಸೌಧದಲ್ಲಿ ಸುದ್ದಿಗಾರರಿಗೆ ತಿಳಿಸಿದರು.
“ಧರ್ಮಸ್ಥಳ ಕ್ಷೇತ್ರ ಮತ್ತು ಒಂದು ಕುಟುಂಬದ ತೇಜೋವಧೆ ಮಾಡಲು ಸಾಕಷ್ಟು ಷಡ್ಯಂತ್ರಗಳು ನಡೆದಿವೆ. ಅವುಗಳಿಂದ ವೈಯಕ್ತಿಕವಾಗಿ ನನಗೆ ನೋವಾಗಿದೆ. ಇದೀಗ ಆರೋಪಿತರು ತಮ್ಮ ವಿರುದ್ಧದ ಎಫ್‌ಐಆರ್ ರದ್ದುಗೊಳಿಸುವಂತೆ ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ನ್ಯಾಯಾಲಯ ಕಾನೂನಿನ ಪ್ರಕಾರ ಕ್ರಮ ಕೈಗೊಳ್ಳಲಿದೆ,” ಎಂದು ಅವರು ಹೇಳಿದರು.
ಧರ್ಮಸ್ಥಳ ಗ್ರಾಮದಲ್ಲಿ ಅಪರಿಚಿತ ಶವ ಹೂತಿಟ್ಟ ಆರೋಪಕ್ಕೆ ಸಂಬಂಧಿಸಿದಂತೆ ರಚಿಸಲಾಗಿದ್ದ ಎಸ್‌ಐಟಿ ಇನ್ನೂ ತನ್ನ ತನಿಖಾ ವರದಿಯನ್ನು ಸಲ್ಲಿಸಿಲ್ಲ. ಎಸ್‌ಐಟಿಯಿಂದ ವರದಿ ಸಲ್ಲಿಕೆಯಾದ ನಂತರ ಮತ್ತಷ್ಟು ವಿಚಾರಗಳು ಹೊರಬರಲಿವೆ. ನ್ಯಾಯ ಉಳಿಯಬೇಕು ಎನ್ನುವುದು ನಮ್ಮ ಮುಖ್ಯ ಉದ್ದೇಶ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದರು.
ಅಂತರ ರಾಜ್ಯ
Jnanesh kumar-ವಿಪಕ್ಷಗಳ ರಾಜೀನಾಮೆ ಒತ್ತಾಯದ ನಡುವೆ ಜ್ಞಾನೇಶ್ ಕುಮಾರ್ ಛತ್ತೀಸ್‌ಗಢ ಭೇಟಿ ಮುಂದೂಡಿಕೆ
ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ವಿಪಕ್ಷಗಳು ಪ್ರತಿಭಟನೆ ನಡೆಸುತ್ತಿರುವ ಬೆನ್ನಲ್ಲೇ, ಅವರು ಕೈಗೊಳ್ಳಬೇಕಿದ್ದ ಎರಡು ದಿನಗಳ ಛತ್ತೀಸ್‌ಗಢ ಭೇಟಿಯನ್ನು ಮುಂದೂಡಲಾಗಿದೆ.
ಹೊಸದಿಲ್ಲಿ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ವಿಪಕ್ಷಗಳು ಪ್ರತಿಭಟನೆ ನಡೆಸುತ್ತಿರುವ ಬೆನ್ನಲ್ಲೇ, ಅವರು ಕೈಗೊಳ್ಳಬೇಕಿದ್ದ ಎರಡು ದಿನಗಳ ಛತ್ತೀಸ್‌ಗಢ ಭೇಟಿಯನ್ನು ಮುಂದೂಡಲಾಗಿದೆ.
ಅಕ್ಟೋಬರ್ 7 ಮತ್ತು 8ರಂದು ಜ್ಞಾನೇಶ್ ಕುಮಾರ್ ಅವರು ಛತ್ತೀಸ್‌ಗಢಕ್ಕೆ ಭೇಟಿ ನೀಡಬೇಕಿತ್ತು. ಆದರೆ ಅನಿವಾರ್ಯ ಕಾರಣಗಳಿಂದ ಈ ಭೇಟಿಯನ್ನು ಮುಂದೂಡಲಾಗಿದೆ ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.
ಜ್ಞಾನೇಶ್ ಕುಮಾರ್ ವಿರುದ್ಧ ವಾಗ್ದಂಡನೆ ನಿರ್ಣಯ ಮಂಡಿಸುವ ಸಾಧ್ಯತೆ ಇದೆ ಎಂಬ ವದಂತಿಗಳು ಹರಿದಾಡುತ್ತಿರುವ ಸಂದರ್ಭದಲ್ಲೇ ಈ ಬೆಳವಣಿಗೆ ನಡೆದಿದೆ. ಇದೇ ವೇಳೆ ಚುನಾವಣಾ ಆಯೋಗಕ್ಕೆ ಸಂಬಂಧಿಸಿದ ಹಲವು ಅರ್ಜಿಗಳು ಸುಪ್ರೀಂ ಕೋರ್ಟ್‌ನಲ್ಲಿ ಬಾಕಿ ಇವೆ.
ಚುನಾವಣಾ ಆಯೋಗದ ವಿರುದ್ಧ ವಿಪಕ್ಷಗಳ ಆಕ್ರೋಶ
ವಿಶೇಷ ತೀವ್ರ ಮತಪಟ್ಟಿ ಪರಿಷ್ಕರಣೆ (SIR) ಹಾಗೂ ಅರ್ಜಿ ನಮೂನೆ-6ರಲ್ಲಿನ ಮಾರ್ಪಾಡು ಸೇರಿದಂತೆ ಹಲವು ವಿಚಾರಗಳಲ್ಲಿ ಚುನಾವಣಾ ಆಯೋಗ ಟೀಕೆಗೆ ಗುರಿಯಾಗಿದೆ. ಈ ಹಿನ್ನೆಲೆಯಲ್ಲಿ ಮುಖ್ಯ ಚುನಾವಣಾ ಆಯುಕ್ತರ ರಾಜೀನಾಮೆಗೆ ವಿಪಕ್ಷಗಳು ಒತ್ತಾಯಿಸುತ್ತಿವೆ.
ದೇವಾಲಯ, ಜಲಪಾತಗಳಿಗೆ ಭೇಟಿ ನೀಡಬೇಕಿತ್ತು
ಎರಡು ದಿನಗಳ ಛತ್ತೀಸ್‌ಗಢ ಪ್ರವಾಸದ ವೇಳೆ ಜ್ಞಾನೇಶ್ ಕುಮಾರ್ ಅವರು ದಾಂತೇವಾಡದಲ್ಲಿರುವ ದಾಂತೇಶ್ವರಿ ದೇವಾಲಯ, ಬಸ್ತಾರ್‌ನ ಚಿತ್ರಕೋಟೆ ಜಲಪಾತ ಹಾಗೂ ಕಬೀರ್ ಧಾಮ್ ಜಿಲ್ಲೆಯ ಭೋರಂಡಿಯೊ ದೇವಾಲಯಕ್ಕೆ ಭೇಟಿ ನೀಡುವ ಕಾರ್ಯಕ್ರಮ ನಿಗದಿಯಾಗಿತ್ತು.
ಈ ಭೇಟಿಯ ಹಿನ್ನೆಲೆಯಲ್ಲಿ ಛತ್ತೀಸ್‌ಗಢ ಸರ್ಕಾರವು ಜ್ಞಾನೇಶ್ ಕುಮಾರ್ ಅವರಿಗೆ ರಾಜ್ಯ ಅತಿಥಿಯ ಗೌರವ ನೀಡಲು ನಿರ್ಧರಿಸಿತ್ತು. ಅವರನ್ನು ಸ್ವಾಗತಿಸುವುದು ಹಾಗೂ ಭದ್ರತಾ ವ್ಯವಸ್ಥೆ ಕೈಗೊಳ್ಳಲು ರಾಯ್‌ಪುರ ಜಿಲ್ಲಾಡಳಿತ, ಪೊಲೀಸರು ಮತ್ತು ಸ್ವಾಮಿ ವಿವೇಕಾನಂದ ವಿಮಾನ ನಿಲ್ದಾಣ ಪ್ರಾಧಿಕಾರಗಳು ಸಿದ್ಧತೆ ಆರಂಭಿಸಿದ್ದವು. ಇದೀಗ ಭೇಟಿಯನ್ನು ಮುಂದೂಡಲಾಗಿದೆ.
ರಾಜಕೀಯ
Ashok Rai-ಪಕ್ಷ ಸಂಘಟನೆಗೆ ಅಶೋಕ್ ರೈ ಹೊಸ ಹೆಜ್ಜೆ: ಪುತ್ತೂರು ಬ್ಲಾಕ್ ಕಾಂಗ್ರೆಸ್‌ಗೆ ಬೊಲೆರೋ
ಪಕ್ಷದ ಸಂಘಟನೆ ಮತ್ತು ಅಭಿವೃದ್ಧಿಯ ದೃಷ್ಟಿಯಿಂದ ಪುತ್ತೂರು ಬ್ಲಾಕ್ ಕಾಂಗ್ರೆಸ್‌ಗೆ ಹೊಸ ಬೊಲೆರೋ ವಾಹನವನ್ನು ಒದಗಿಸಲಾಗಿದೆ. ಕಾಂಗ್ರೆಸ್ ಭವನ ನಿರ್ಮಾಣ ಹಂತದಲ್ಲಿರುವಾಗಲೇ ಬ್ಲಾಕ್ ಅಧ್ಯಕ್ಷರಿಗೆ ಮೊದಲ ಬಾರಿಗೆ ವಾಹನ ನೀಡಲಾಗಿದ್ದು, ಪಕ್ಷದ ಸಂಘಟನೆ ಹಾಗೂ ವಿವಿಧ ಕಾರ್ಯಕ್ರಮಗಳಿಗೆ ಇದನ್ನು ಬಳಸಿಕೊಳ್ಳಲಾಗುವುದು ಎಂದು ಶಾಸಕ ಅಶೋಕ್ ಕುಮಾರ್ ರೈ ಹೇಳಿದರು.
ಪುತ್ತೂರು: ಪಕ್ಷದ ಸಂಘಟನೆ ಮತ್ತು ಅಭಿವೃದ್ಧಿಯ ದೃಷ್ಟಿಯಿಂದ ಪುತ್ತೂರು ಬ್ಲಾಕ್ ಕಾಂಗ್ರೆಸ್‌ಗೆ ಹೊಸ ಬೊಲೆರೋ ವಾಹನವನ್ನು ಒದಗಿಸಲಾಗಿದೆ. ಕಾಂಗ್ರೆಸ್ ಭವನ ನಿರ್ಮಾಣ ಹಂತದಲ್ಲಿರುವಾಗಲೇ ಬ್ಲಾಕ್ ಅಧ್ಯಕ್ಷರಿಗೆ ಮೊದಲ ಬಾರಿಗೆ ವಾಹನ ನೀಡಲಾಗಿದ್ದು, ಪಕ್ಷದ ಸಂಘಟನೆ ಹಾಗೂ ವಿವಿಧ ಕಾರ್ಯಕ್ರಮಗಳಿಗೆ ಇದನ್ನು ಬಳಸಿಕೊಳ್ಳಲಾಗುವುದು ಎಂದು ಶಾಸಕ ಅಶೋಕ್ ಕುಮಾರ್ ರೈ ಹೇಳಿದರು.
ಪುತ್ತೂರಿಗೆ ಆಗಮಿಸಿದ ಬೊಲೆರೋ ವಾಹನವನ್ನು ‘ಬ್ಲಾಕ್ ಕಾಂಗ್ರೆಸ್ ವಾಹನ’ ಎಂದು ನಾಮಕರಣ ಮಾಡಿ, ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣಪ್ರಸಾದ್ ಆಳ್ವ ಹಾಗೂ ವಿಟ್ಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪದ್ಮನಾಭ ಪೂಜಾರಿ ಸಣ್ಣಗುತ್ತು ಅವರಿಗೆ ಶಾಸಕ ಅಶೋಕ್ ಕುಮಾರ್ ರೈ ಹಸ್ತಾಂತರಿಸಿದರು.
ಮೂರು ಬ್ಲಾಕ್‌ಗಳಿಗೆ ಒಂದೇ ವಾಹನ
ಪುತ್ತೂರು, ವಿಟ್ಲ ಹಾಗೂ ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್‌ಗಳ ಸಂಘಟನಾ ಚಟುವಟಿಕೆಗಳಿಗೆ ಈ ವಾಹನವನ್ನು ಬಳಸಲಾಗುತ್ತದೆ. ಶಾಸಕರು ಯಾವ ಕ್ಷೇತ್ರ ವ್ಯಾಪ್ತಿಗೆ ಭೇಟಿ ನೀಡುತ್ತಾರೋ, ಆ ಸಂದರ್ಭ ಆಯಾ ಬ್ಲಾಕ್‌ನ ಅಧ್ಯಕ್ಷರು ವಾಹನವನ್ನು ಬಳಸಿಕೊಂಡು ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.
ಪಕ್ಷದ ಸಂಘಟನೆ ಮತ್ತು ಅಭಿವೃದ್ಧಿಯ ದೃಷ್ಟಿಯಿಂದ ರಾಜ್ಯದಲ್ಲೇ ಮಾದರಿಯಾಗುವ ರೀತಿಯಲ್ಲಿ ಈ ಬ್ಲಾಕ್ ಕಾಂಗ್ರೆಸ್ ವಾಹನವನ್ನು ತರಿಸಲಾಗಿದೆ ಎಂದು ಅಶೋಕ್ ಕುಮಾರ್ ರೈ ತಿಳಿಸಿದರು.
ಕಾರ್ಯಕ್ರಮದಲ್ಲಿ ಪುತ್ತೂರು ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಮಹಮ್ಮದ್ ಬಡಗನ್ನೂರು ಹಾಗೂ ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣಪ್ರಸಾದ್ ಆಳ್ವ ಮಾತನಾಡಿದರು.
ವಿಟ್ಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪದ್ಮನಾಭ ಪೂಜಾರಿ, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಮುರಳೀಧರ್ ರೈ ಮಠಂತಬೆಟ್ಟು, ಪುಡಾ ಸದಸ್ಯ ನಿಹಾಲ್ ಪಿ. ಶೆಟ್ಟಿ, ಪುತ್ತೂರು ಕ್ಷೇತ್ರ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಡಾ. ರಾಜಾರಾಂ ಕೆ.ಬಿ., ಇಂಟಕ್ ಅಧ್ಯಕ್ಷ ಜಯಪ್ರಕಾಶ್ ಬದಿನಾರ್, ಎನ್‌ಎಸ್‌ಯುಐ ರಾಜ್ಯ ಉಪಾಧ್ಯಕ್ಷ ಫಾರೂಕ್ ಬಾಯಬ್ಬೆ, ಉದ್ಯಮಿ ಸಿಯಾನ್ ದರ್ಬೆ, ವಿಕ್ರಂ ರೈ ಸಾಂತ್ಯ ಮೊದಲಾದವರು ಉಪಸ್ಥಿತರಿದ್ದರು.
ಮಂಗಳೂರು
Chouta-ಫಾರಂ 7 ಕೊಟ್ಟ ಮಾತ್ರಕ್ಕೆ ಮತ ಡಿಲೀಟ್ ಆಗಲ್ಲ; ಅಕ್ರಮ ಡಿಲೀಷನ್‌ಗೆ ದಾಖಲೆ ತೋರಿಸಿ: ಕಾಂಗ್ರೆಸ್‌ಗೆ ಚೌಟ ಸವಾಲು
ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಕುರಿತು ಕಾಂಗ್ರೆಸ್ ಜನರಲ್ಲಿ ಗೊಂದಲ ಸೃಷ್ಟಿಸುತ್ತಿದ್ದು, ಇದರ ನೆಪದಲ್ಲಿ ದೇಶಾದ್ಯಂತ ಅರಾಜಕತೆ ಸೃಷ್ಟಿಸಲು ಯತ್ನಿಸುತ್ತಿದೆ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಆರೋಪಿಸಿದ್ದಾರೆ.
ಮಂಗಳೂರು, ಅ.6: ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಕುರಿತು ಕಾಂಗ್ರೆಸ್ ಜನರಲ್ಲಿ ಗೊಂದಲ ಸೃಷ್ಟಿಸುತ್ತಿದ್ದು, ಇದರ ನೆಪದಲ್ಲಿ ದೇಶಾದ್ಯಂತ ಅರಾಜಕತೆ ಸೃಷ್ಟಿಸಲು ಯತ್ನಿಸುತ್ತಿದೆ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಆರೋಪಿಸಿದ್ದಾರೆ. ಫಾರಂ 7 ಸಲ್ಲಿಸಿದ ಮಾತ್ರಕ್ಕೆ ಮತದಾರರ ಹೆಸರನ್ನು ಅಳಿಸಲು ಸಾಧ್ಯವಿಲ್ಲ. ಅಕ್ರಮವಾಗಿ ಮತಗಳನ್ನು ಡಿಲೀಟ್ ಮಾಡಲಾಗಿದೆ ಎಂಬ ಆರೋಪಕ್ಕೆ ಕಾಂಗ್ರೆಸ್ ಬಳಿ ದಾಖಲೆಗಳಿದ್ದರೆ ಬಹಿರಂಗಪಡಿಸಲಿ ಎಂದು ಅವರು ಸವಾಲು ಹಾಕಿದ್ದಾರೆ.
ಮಂಗಳೂರಿನ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮತದಾರರ ಪಟ್ಟಿಯ ಪರಿಷ್ಕರಣೆ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಅಗತ್ಯವಾದ ಪ್ರಕ್ರಿಯೆ. ಇದಕ್ಕೆ ರಾಜಕೀಯ ಪಕ್ಷಗಳ ಬೂತ್ ಮಟ್ಟದ ಏಜೆಂಟರು (ಬಿಎಲ್‌ಎ–2) ಸಹಕರಿಸಬೇಕು. ಆದರೆ, ಕಾಂಗ್ರೆಸ್ ಈ ಪ್ರಕ್ರಿಯೆಯಲ್ಲಿ ತೊಡಗಿರುವ ಏಜೆಂಟರನ್ನು ಬೆದರಿಸುವ ಹಾಗೂ ಅಧಿಕಾರಿಗಳ ಕಾರ್ಯಕ್ಕೆ ಅಡ್ಡಿಪಡಿಸುವ ಪ್ರಯತ್ನ ಮಾಡುತ್ತಿದೆ ಎಂದು ದೂರಿದರು.
ಫಾರಂ 7 ಸಲ್ಲಿಸಿದ ತಕ್ಷಣ ಹೆಸರು ಡಿಲೀಟ್ ಆಗಲ್ಲ
ಮತದಾರರು ಸ್ಥಳಾಂತರಗೊಂಡಿರುವುದು, ಮೃತಪಟ್ಟಿರುವುದು ಅಥವಾ ಭಾರತೀಯ ಪ್ರಜೆಯಲ್ಲ ಎಂಬ ಆಕ್ಷೇಪಣೆಗಳಿದ್ದಲ್ಲಿ ಫಾರಂ 7 ಮೂಲಕ ಅರ್ಜಿ ಸಲ್ಲಿಸಬಹುದು. ಆದರೆ, ಅರ್ಜಿ ಸಲ್ಲಿಕೆಯಾದ ಮಾತ್ರಕ್ಕೆ ಮತದಾರರ ಹೆಸರನ್ನು ಏಕಪಕ್ಷೀಯವಾಗಿ ಅಳಿಸಲು ಸಾಧ್ಯವಿಲ್ಲ. ಚುನಾವಣಾಧಿಕಾರಿಗಳು ಆಕ್ಷೇಪಣೆಯನ್ನು ಪರಿಶೀಲಿಸಿ, ಸೂಕ್ತ ದೃಢೀಕರಣದ ಬಳಿಕವೇ ನಿಯಮಾನುಸಾರ ಕ್ರಮ ಕೈಗೊಳ್ಳಲು ಸಾಧ್ಯ ಎಂದು ಚೌಟ ವಿವರಿಸಿದರು.
ಫಾರಂ 7 ಮೂಲಕ ಅಲ್ಪಸಂಖ್ಯಾತ ಮತದಾರರನ್ನು ಗುರಿಯಾಗಿಸಲಾಗುತ್ತಿದೆ ಎಂಬ ಕಾಂಗ್ರೆಸ್ ಆರೋಪವನ್ನು ಅವರು ತಳ್ಳಿಹಾಕಿದರು. ಅಕ್ರಮವಾಗಿ ಮತದಾರರ ಹೆಸರುಗಳನ್ನು ಅಳಿಸಲಾಗಿದೆ ಎಂಬುದಕ್ಕೆ ನಿರ್ದಿಷ್ಟ ದಾಖಲೆಗಳಿದ್ದರೆ ಚುನಾವಣಾ ಆಯೋಗದ ಮುಂದೆ ಸಲ್ಲಿಸಲಿ. ಅಂತಹ ಮತದಾರರನ್ನೇ ಕರೆತಂದು ತೋರಿಸಲಿ ಎಂದು ಸವಾಲು ಹಾಕಿದರು.
5.54 ಕೋಟಿ ಮತದಾರರ ಲೆಕ್ಕ ಮುಂದಿಟ್ಟು ಗೊಂದಲ ಎಂದ ಚೌಟ
ಕರ್ನಾಟಕದಲ್ಲಿ 5.54 ಕೋಟಿಗೂ ಅಧಿಕ ಮತದಾರರಿದ್ದರೂ ಕರಡು ಮತದಾರರ ಪಟ್ಟಿಯಲ್ಲಿ ಸುಮಾರು 4.46 ಕೋಟಿ ಮತದಾರರಿದ್ದಾರೆ ಎಂದು ಕಾಂಗ್ರೆಸ್ ಹೇಳುವ ಮೂಲಕ ಜನರಲ್ಲಿ ಗೊಂದಲ ಮೂಡಿಸುತ್ತಿದೆ ಎಂದು ಅವರು ಆರೋಪಿಸಿದರು.
ಕರಡು ಮತದಾರರ ಪಟ್ಟಿ ಅಂತಿಮವಲ್ಲ. ಕರಡು ಪಟ್ಟಿ ಪ್ರಕಟವಾದ ಬಳಿಕವೂ ಹೆಸರು ಸೇರ್ಪಡೆ, ತಿದ್ದುಪಡಿ ಹಾಗೂ ಆಕ್ಷೇಪಣೆ ಸಲ್ಲಿಸಲು ಅವಕಾಶವಿದೆ. ಇಂತಹ ಪ್ರಕ್ರಿಯೆಯ ವಿರುದ್ಧವೇ ಜನರನ್ನು ಎತ್ತಿಕಟ್ಟುವುದು ಸರಿಯಲ್ಲ ಎಂದು ಹೇಳಿದರು.
ಮುಖ್ಯಮಂತ್ರಿಯ ವಿರುದ್ಧ ಎಫ್‌ಐಆರ್‌ಗೆ ಆಗ್ರಹ
ಕಾಂಗ್ರೆಸ್‌ಗೆ ಸಂವಿಧಾನ ಮತ್ತು ಕಾನೂನಿನ ಬಗ್ಗೆ ಗೌರವವಿಲ್ಲ ಎಂದು ಆರೋಪಿಸಿದ ಚೌಟ, ಮುಖ್ಯಮಂತ್ರಿಯೊಬ್ಬರು ಚುನಾವಣಾ ಆಯೋಗದ ಕಚೇರಿ ಎದುರು ಪ್ರತಿಭಟನೆ ನಡೆಸುವುದು ಸರಿಯೇ ಎಂದು ಪ್ರಶ್ನಿಸಿದರು. ಸಾಂವಿಧಾನಿಕ ಸಂಸ್ಥೆಗಳ ಕಾರ್ಯವಿಧಾನ ಹಾಗೂ ಪ್ರತಿಭಟನೆಗೆ ಸಂಬಂಧಿಸಿದ ನಿಯಮಗಳ ಬಗ್ಗೆ ಅರಿವು ಇರಬೇಕು. ಚುನಾವಣಾ ಆಯೋಗದ ಕಾರ್ಯದಲ್ಲಿ ರಾಜಕೀಯ ಹಸ್ತಕ್ಷೇಪ ಮಾಡಬಾರದು. ಈ ವಿಚಾರದಲ್ಲಿ ಮುಖ್ಯಮಂತ್ರಿಯ ವಿರುದ್ಧ ಎಫ್‌ಐಆರ್ ದಾಖಲಿಸಬೇಕು ಎಂದು ಆಗ್ರಹಿಸಿದರು.
ಬಿಜೆಪಿ ಕಾರ್ಯಕರ್ತರಿಗೆ ಬೆದರಿಕೆ ಹಾಕಿದರೆ ಸುಮ್ಮನಿರಲ್ಲ
ಎಸ್‌ಐಆರ್ ಪ್ರಕ್ರಿಯೆಯಲ್ಲಿ ಬಿಜೆಪಿ ಕಾರ್ಯಕರ್ತರು ಕಾನೂನುಬದ್ಧವಾಗಿ ಪಾಲ್ಗೊಳ್ಳುತ್ತಿದ್ದಾರೆ. ಅವರನ್ನು ಬೆದರಿಸುವ ಅಥವಾ ಒತ್ತಡಕ್ಕೆ ಒಳಪಡಿಸುವ ಪ್ರಯತ್ನಗಳನ್ನು ಸಹಿಸುವುದಿಲ್ಲ ಎಂದು ಚೌಟ ಎಚ್ಚರಿಸಿದರು. ಆಕ್ಷೇಪಣೆಗಳಿಗೆ ಬೆದರಿಕೆ ಮೂಲಕ ಉತ್ತರಿಸುವ ಬದಲು ನಿಗದಿತ ಕಾನೂನು ಪ್ರಕ್ರಿಯೆಯ ಮೂಲಕವೇ ಮತದಾರರ ಪಟ್ಟಿಯನ್ನು ಪರಿಷ್ಕರಿಸಬೇಕು ಎಂದರು.
ಮತದಾರರ ಪಟ್ಟಿಯಲ್ಲಿ ಅನರ್ಹರ ಹೆಸರುಗಳು ಉಳಿದರೆ ಅರ್ಹ ಮತದಾರರ ಹಕ್ಕಿಗೆ ಧಕ್ಕೆಯಾಗಬಹುದು. ಹೀಗಾಗಿ ಶುದ್ಧ ಮತದಾರರ ಪಟ್ಟಿ ಪ್ರತಿಯೊಬ್ಬ ಮತದಾರನ ಹಕ್ಕು ಎಂದು ಪ್ರತಿಪಾದಿಸಿದ ಅವರು, ಎಸ್‌ಐಆರ್‌ಗೆ ಕೋಮು ಬಣ್ಣ ನೀಡುವ ಬದಲು ವಾಸ್ತವಾಂಶಗಳ ಆಧಾರದಲ್ಲಿ ಚರ್ಚೆ ನಡೆಯಬೇಕು ಎಂದು ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಪೂಜಾ ಪೈ, ಪೂರ್ಣಿಮಾ, ಸುಜಿತ್ ಪ್ರತಾಪ್, ರಾಜಗೋಪಾಲ ರೈ, ವಸಂತ ಜೆ. ಪೂಜಾರಿ, ಜೀವನ್ ಕುಮಾರ್ ತೊಕ್ಕೊಟ್ಟು ಹಾಗೂ ಸಂಜಯ ಪ್ರಭು ಉಪಸ್ಥಿತರಿದ್ದರು.
-
ಬಿಗ್ ನ್ಯೂಸ್21 hours agoಡಿಕೆಶಿ ಸರ್ಕಾರದಿಂದ ಜನತೆಗೆ ಬಿಗ್ ಶಾಕ್ – ರೈತರಿಗೆ ಬಂಪರ್ ಗಿಫ್ಟ್..! ಹಾಲಿನ ದರ 8 ರೂ. ಏರಿಕೆ : 6 ರೂ. ರೈತರಿಗೆ..! ನ.1 ರಿಂದ ಬಹುತೇಕ ಜಾರಿ
-
Uncategorized22 hours ago
ಶಿಕ್ಷೆಯ ವಿರುದ್ಧ ಹೈಕೋರ್ಟಿಗೆ ಅಪೀಲು; ನ್ಯಾಯಾಲಯಕ್ಕೆ ಗೈರು: ನೆಕ್ಕಿಲಾಡಿಯಲ್ಲಿ ಆರೋಪಿಯ ಬಂಧನ
-
ರಾಜಕೀಯ21 hours ago2027ರ ಜನವರಿ ಮೊದಲ ವಾರದಲ್ಲೇ ಜಿ.ಪಂ ಮತ್ತು ತಾ.ಪಂ ಚುನಾವಣೆ : ಸಚಿವ ಸಂಪುಟದಲ್ಲಿ ಚರ್ಚೆ..!
-
Uncategorized21 hours ago
Rahul Gandhi ;8 ಗಂಟೆಗಳ ಧರಣಿ ಬಳಿಕ ಪೊಲೀಸ್ ಆ್ಯಕ್ಷನ್: ರಾಹುಲ್–ಪ್ರಿಯಾಂಕಾ ಸೇರಿ 50 ಸಂಸದರು ವಶ
-
ಮಂಗಳೂರು10 hours agoChouta-ಫಾರಂ 7 ಕೊಟ್ಟ ಮಾತ್ರಕ್ಕೆ ಮತ ಡಿಲೀಟ್ ಆಗಲ್ಲ; ಅಕ್ರಮ ಡಿಲೀಷನ್‌ಗೆ ದಾಖಲೆ ತೋರಿಸಿ: ಕಾಂಗ್ರೆಸ್‌ಗೆ ಚೌಟ ಸವಾಲು
-
ಅಂತರ ರಾಜ್ಯ8 hours agoಕಾಸರಗೋಡು: ಆರ್ಎಸ್ಎಸ್ ವಕ್ತಾರರ ಭಾಗವಹಿಸುವಿಕೆ ವಿರೋಧಿಸಿ ಪ್ರತಿಭಟನೆ; ಘರ್ಷಣೆಯಲ್ಲಿ ಮೂವರು ವಿದ್ಯಾರ್ಥಿಗಳಿಗೆ ಗಾಯ
-
ರಾಜಕೀಯ9 hours agoAshok Rai-ಪಕ್ಷ ಸಂಘಟನೆಗೆ ಅಶೋಕ್ ರೈ ಹೊಸ ಹೆಜ್ಜೆ: ಪುತ್ತೂರು ಬ್ಲಾಕ್ ಕಾಂಗ್ರೆಸ್‌ಗೆ ಬೊಲೆರೋ
-
ಸ್ಥಳೀಯ8 hours agoBeltangadi-ಬೆಳ್ತಂಗಡಿ: ಚಾಲಕನ ಸಮಯಪ್ರಜ್ಞೆ; ಬಸ್ನಲ್ಲಿ ಅಸ್ವಸ್ಥಗೊಂಡ ಮಹಿಳೆ ಅಪಾಯದಿಂದ ಪಾರು


















