ಪುತ್ತೂರು
ಪುತ್ತೂರಿನಲ್ಲಿ ಇನ್ನು ಮುಂದೆ 3 ಹೊತ್ತು ಮೊಳಗಲಿದೆ ಸೈರನ್..! 1975ರಲ್ಲಿ ನಿರ್ಮಾಣವಾಗಿ ಮತ್ತೆ ಸ್ಥಗಿತಗೊಂಡಿದ್ದ ಸೈರನ್ ಗೆ ಮರುಜೀವ ನೀಡಿದ ಶಾಸಕ ರೈ
ಪುತ್ತೂರು: ಹಲವು ವರ್ಷಗಳ ಹಿಂದೆ ಪುತ್ತೂರಿನಲ್ಲಿ ಮೊಳಗುತ್ತಿದ್ದ ಸೈರನ್ ಇತಿಹಾಸದ ಪುಟ ಸೇರಿ ಅನೇಕ ವರ್ಷಗಳೇ ಕಳೆದಿದೆ. ಪುತ್ತೂರಿನ ಕಿಲ್ಲೆ ಮೈದಾನದ ಮೇಲ್ಬಾಗದಲ್ಲಿ ಮೊಳಗುತ್ತಿದ್ದ ಈ ಸೈರನ್ ಕಿ ಮೀ ದೂರಕ್ಕೂ ಕೇಳುತ್ತಿತ್ತು, ಮಧ್ಯಾಹ್ನ 12 ಗಂಟೆ ವೇಳೆ ಮತ್ತು ರಾತ್ರಿ 8 ಗಂಟೆ ವೇಳೆ ಈ ಸೈರನ್ ಮೊಳಗುತ್ತಿತ್ತು.
1975 ನೇ ಇಸವಿಯಲ್ಲಿ ನಿರ್ಮಾಣವಾಗಿದ್ದ ಈ ಸೈರನ್ ಆ ಬಳಿಕ ಯಾವುದೋ ಕಾರಣಕ್ಕೆ ನಿಂತು ಹೋಗಿತ್ತು ಅದರ ಕಟ್ಟಡ ಯಂತ್ರೋಪಕರಣಗಳು ಇನ್ನೂ ಹಾಗೆಯೇ ಇದೆ. ಇದೇ ಸೈರನ್ ಗೆ ಇದೀಗ ಮರು ಜೀವ ಬರಲಿದೆ.
ಸೈರನ್ ಕೇಂದ್ರವನ್ನು ಪುನರಾರಂಭ ಮಾಡುವಂತೆ ಶಾಸಕ ಅಶೋಕ್ ಕುಮಾರ್ ರೈ ಅವರು ನಗರಸಭೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಯಾವ ಉದ್ದೇಶದಿಂದ ಈ ಸೈರನ್ ಕೇಂದ್ರವನ್ನು ಪ್ರಾರಂಭ ಮಾಡಿದರು ಎಂಬುದು ಯಾರಿಗೂ ಗೊತ್ತಿಲ್ಲ. ಈಗ ಇರುವ ಮಿನಿ ವಿಧಾನ ಸೌಧದ ಹಿಂದುಗಡೆ ಕಟ್ಟಡದಲ್ಲಿ ನ್ಯಾಯಾಲಯ ಸಂಕೀರ್ಣ ಆರಂಭವಾದಾಗ ಸೈರನ್‌ಗೆ ಬ್ರೇಕ್ ಬಿದ್ದಿತ್ತು ಎಂದು ಹಿರಿಯರು ಮಾಹಿತಿ ನೀಡಿದ್ದಾರೆ.
ಸೈರನ್ ಮೊಳಗಿದರೆ ಅದು ಕೋರ್ಟು ಕಲಾಪಕ್ಕೆ ಅಡ್ಡಿಯಾಗುತ್ತದೆ ಎಂಬ ಕಾರಣಕ್ಕೆ ಬಂದ್ ಮಾಡಲಾಗಿತ್ತು. ಈಗ ಅಲ್ಲಿ ನ್ಯಾಯಾಲಯ ಸಂಕೀರ್ಣ ಇಲ್ಲ. ಪಕ್ಕದಲ್ಲೇ ಕೋರ್ಟು ಇದ್ದರೂ ಅದು ಬನ್ನೂರಿನ ಆನೆಮಜಲಿನಲ್ಲಿರುವ ಹೊಸ ಕಟ್ಟಡಕ್ಕೆ ಶೀಘ್ರ ಸ್ಥಳಾಂತರವಾಗಲಿದೆ. ಇನ್ನು ಮುಂದೆ ಸೈರನ್ ಮೊಳಗಿದರೆ ನ್ಯಾಯಾಲಯ ಕಲಾಪಕ್ಕೆ ಅಡ್ಡಿಯಾಗುವ ಆತಂಕವಿಲ್ಲದೇ ಇರುವ ಕಾರಣ ಪುತ್ತೂರು ನಗರದ ಮಧ್ಯಭಾಗದಲ್ಲಿ ಸೈರನ್ ಮೊಳಗಲಿದೆ.
ಹಿಂದಿನ ಕಾಲದ ಗತವೈಭವ ಮತ್ತೆ ಮರಳಲಿ ಎಂಬುದು ಅನೇಕರ ಬೇಡಿಕೆ ಇದೆ. ಜನರಿಗೆ ಇಷ್ಟವಾದ ಈ ಸೈರನ್ ಮತ್ತೆ ಮೊಳಗಿಸುವ ವ್ಯವಸ್ಥೆ ಮಾಡುತ್ತೇನೆ. ನಗರಸಭೆಗೆ ಸೂಚನೆಯನ್ನು ನೀಡಿದ್ದೇನೆ. ಸೋಮವಾರವೇ ಸೈರನ್ ಕೇಂದ್ರವನ್ನು ಪರಿಶೀಲಿಸಿ ಅದಕ್ಕೆ ಬೇಕಾದ ಎಲ್ಲಾ ವ್ಯವಸ್ಥೆಗಳನ್ನು ಮಾಡುವಂತೆ ಸೂಚನೆಯನ್ನು ನೀಡಿದ್ದೇನೆ. ಮುಂದಿನ ದಿನಗಳಲ್ಲಿ ಬೆಳಿಗ್ಗೆ 8 ಗಂಟೆಗೆ ಮಧ್ಯಾಹ್ನ 12ಗಂಟೆ ಹಾಗೂ ರಾತ್ರಿ 8 ಗಂಟೆಗೆ ಸೈರನ್ ಮೊಳಗಲಿದೆ ಎಂದು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ತಿಳಿಸಿದ್ದಾರೆ.
ಮಂಗಳೂರು
Bantwal rape case verdict ಮಂಗಳೂರು: ಮಹಿಳೆ ಮೇಲೆ ಹಲ್ಲೆ ನಡೆಸಿ ಅತ್ಯಾಚಾರ : ಆರೋಪಿಗೆ 10 ವರ್ಷ ಜೈಲು, ₹54 ಸಾವಿರ ದಂಡ

ಬಂಟ್ವಾಳ: ಮಹಿಳೆಗೆ ಹಲ್ಲೆ ನಡೆಸಿ ಅತ್ಯಾಚಾರವೆಸಗಿ , ಜೀವ ಬೆದರಿಕೆ ಹಾಕಿದ ಅಪರಾಧಿಗೆ 10 ವರ್ಷಗಳ ಜೈಲು ಶಿಕ್ಷೆ ಹಾಗೂ ₹54 ಸಾವಿರ ದಂಡ ವಿಧಿಸಿ ಮಂಗಳೂರಿನ 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಆದೇಶಿಸಿದೆ.
Bantwal rape case verdict: ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2021ರಲ್ಲಿ ಈ ಘಟನೆ ನಡೆದಿತ್ತು. ಸಂತ್ರಸ್ತ ಮಹಿಳೆಯ ಮನೆಯ ನೆರೆಮನೆಯ ನಿವಾಸಿಯಾಗಿದ್ದ ಅನಿಲ್ ಎಂಬಾತ ಮಹಿಳೆಯ ಮೇಲೆ ಹಲ್ಲೆ ನಡೆಸಿ ಅತ್ಯಾಚಾರವೆಸಗಿದ್ದಲ್ಲದೆ, ಜೀವ ಬೆದರಿಕೆಯನ್ನೂ ಹಾಕಿದ್ದ ಎಂದು ಆರೋಪಿಸಲಾಗಿತ್ತು. ಈ ಕುರಿತು ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅ.ಕ್ರ. 92/2021ರಂತೆ ಭಾರತೀಯ ದಂಡ ಸಂಹಿತೆಯ ಕಲಂ 376, 448, 323, 504 ಹಾಗೂ 506ರ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.
ಪ್ರಕರಣದ ತನಿಖೆ ಕೈಗೆತ್ತಿಕೊಂಡಿದ್ದ ಅಂದಿನ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕ ಪ್ರಸನ್ನ ಎಂ.ಎಸ್. ಅವರು ಆರೋಪಿಯನ್ನು ಪತ್ತೆಹಚ್ಚಿದ್ದರು. ಬಳಿಕ ಪ್ರಕರಣದ ತನಿಖಾಧಿಕಾರಿಗಳಾಗಿದ್ದ ಬಂಟ್ವಾಳ ವೃತ್ತ ನಿರೀಕ್ಷಕ ಟಿ.ಡಿ. ನಾಗರಾಜ್ ಅವರು ಅಗತ್ಯ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.
ಮಂಗಳೂರಿನ 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದಲ್ಲಿ ನಡೆದ ವಿಚಾರಣೆಯಲ್ಲಿ ಆರೋಪಿತನ ವಿರುದ್ಧದ ಆರೋಪಗಳು ಸಾಬೀತಾದ ಹಿನ್ನೆಲೆಯಲ್ಲಿ ನ್ಯಾಯಾಧೀಶರಾದ ರಾಜೇಶ ಮಾರುತಿ ಕಾಮಟೆ ಅವರು ಆರೋಪಿಗೆ 10 ವರ್ಷಗಳ ಜೈಲು ಶಿಕ್ಷೆ ಹಾಗೂ ₹54,000 ದಂಡ ವಿಧಿಸಿ ಆದೇಶ ಹೊರಡಿಸಿದ್ದಾರೆ.
ಪ್ರಕರಣದಲ್ಲಿ ಸರ್ಕಾರಿ ಅಭಿಯೋಜಕ ಮೋತಿಲಾಲ ಚೌಧರಿ ಅವರು ಸರ್ಕಾರದ ಪರವಾಗಿ ಸಮರ್ಥವಾಗಿ ವಾದ ಮಂಡಿಸಿದ್ದರು.
ಶಿಕ್ಷಣ
Puttur-ಪುತ್ತೂರಿನ ಸುಪ್ರಜಾ ರಾವ್ ಗೆ ರಾಜ್ಯೋತ್ಸವ ಸಾಧಕ ಪುರಸ್ಕಾರ
ಕನ್ನಡ ರಾಜ್ಯೋತ್ಸವ ಆಚರಣಾ ಸಮಿತಿ ಕಲ್ಕೂರ ಪ್ರತಿಷ್ಠಾನ(ರಿ) ಕನ್ನಡ ರಾಜ್ಯೋತ್ಸವದ ಅಂಗವಾಗಿ ನ 20 ರಂದು ಮಂಗಳೂರಿನ ಕೊಡಿಯಾಲ್ ಬೈಲ್ ಶಾರದಾ ವಿದ್ಯಾಲಯ ಸಭಾಭವನದಲ್ಲಿ ನಡೆದ ರಾಜ್ಯೋತ್ಸವ ಸಂದೇಶ – ಗೌರವ ಪುರಸ್ಕಾರ ಕಾರ್ಯಕ್ರಮದಲ್ಲಿ ಪುತ್ತೂರಿನ ಸುಪ್ರಜಾ ರಾವ್ ಗೆ ರಾಜ್ಯೋತ್ಸವ ಸಾಧಕ ಪುರಸ್ಕಾರವನ್ನು ನೀಡಿ ಗೌರವಿಸಲಾಯಿತು.
ಪುತ್ತೂರು: ಕನ್ನಡ ರಾಜ್ಯೋತ್ಸವ ಆಚರಣಾ ಸಮಿತಿ ಕಲ್ಕೂರ ಪ್ರತಿಷ್ಠಾನ(ರಿ) ಕನ್ನಡ ರಾಜ್ಯೋತ್ಸವದ ಅಂಗವಾಗಿ ನ 20 ರಂದು ಮಂಗಳೂರಿನ ಕೊಡಿಯಾಲ್ ಬೈಲ್ ಶಾರದಾ ವಿದ್ಯಾಲಯ ಸಭಾಭವನದಲ್ಲಿ ನಡೆದ ರಾಜ್ಯೋತ್ಸವ ಸಂದೇಶ – ಗೌರವ ಪುರಸ್ಕಾರ ಕಾರ್ಯಕ್ರಮದಲ್ಲಿ ಪುತ್ತೂರಿನ ಸುಪ್ರಜಾ ರಾವ್ ಗೆ
ರಾಜ್ಯೋತ್ಸವ ಸಾಧಕ ಪುರಸ್ಕಾರವನ್ನು ನೀಡಿ ಗೌರವಿಸಲಾಯಿತು.
ಇವರು ಮಂಗಳೂರಿನ ಸಹ್ಯಾದ್ರಿ ಇಂಜಿನಿಯರಿಂಗ್ ಕಾಲೇಜ್ ನ ಪ್ರಾಧ್ಯಾಪಕರಾದ ಡಾ.ಪ್ರಶಾಂತ್ ರಾವ್ ಹಾಗೂ ಪುತ್ತೂರಿನ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕರಾದ ಸುಮನಾ ರಾವ್ ದಂಪತಿಗಳ ಪುತ್ರಿಯಾಗಿದ್ದು, ಪ್ರಸಕ್ತ ವಿವೇಕಾನಂದ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವ್ಯಾಸಂಗ ಮಾಡುತ್ತಿದ್ದಾರೆ.
ಕಾರ್ಯಕ್ರಮಗಳು
Puttur-ಪುತ್ತೂರಿನಲ್ಲಿ ‘ಸಾಮರಸ್ಯದ ತುಡರ್’ ಕಾರ್ಯಕ್ರಮ: ಮಹಾಲಿಂಗೇಶ್ವರ ದೇವಸ್ಥಾನದಿಂದ ಮನೆಮನೆಗೆ ದೀಪದ ಬೆಳಕು
ಸಾಮರಸ್ಯ ವೇದಿಕೆ ಪುತ್ತೂರು ಜಿಲ್ಲೆ ಹಾಗೂ ಸಾಮರಸ್ಯ ವೇದಿಕೆ ಪುತ್ತೂರು ನಗರ ಘಟಕದ ವತಿಯಿಂದ ‘ಸಾಮರಸ್ಯದ ತುಡರ್’ ಕಾರ್ಯಕ್ರಮ ನಡೆಯಿತು. ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಗರ್ಭಗುಡಿಯಲ್ಲಿ ಉರಿಯುತ್ತಿದ್ದ ದೀಪದಿಂದ ಉರ್ಲಾಂಡಿ, ಮಣ್ಣಾಪು, ಶೇವಿರೆ ಹಾಗೂ ಬ್ರಹ್ಮನಗರ ಪ್ರದೇಶದ ಉಪೇಕ್ಷಿತ ಬಂಧುಗಳು ತಂದ ದೀಪಗಳನ್ನು ದೇವಸ್ಥಾನದ ಅರ್ಚಕರು ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಪುತ್ತೂರು: ಸಾಮರಸ್ಯ ವೇದಿಕೆ ಪುತ್ತೂರು ಜಿಲ್ಲೆ ಹಾಗೂ ಸಾಮರಸ್ಯ ವೇದಿಕೆ ಪುತ್ತೂರು ನಗರ ಘಟಕದ ವತಿಯಿಂದ ‘ಸಾಮರಸ್ಯದ ತುಡರ್’ ಕಾರ್ಯಕ್ರಮ ನಡೆಯಿತು.
ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಗರ್ಭಗುಡಿಯಲ್ಲಿ ಉರಿಯುತ್ತಿದ್ದ ದೀಪದಿಂದ ಉರ್ಲಾಂಡಿ, ಮಣ್ಣಾಪು, ಶೇವಿರೆ ಹಾಗೂ ಬ್ರಹ್ಮನಗರ ಪ್ರದೇಶದ ಉಪೇಕ್ಷಿತ ಬಂಧುಗಳು ತಂದ ದೀಪಗಳನ್ನು ದೇವಸ್ಥಾನದ ಅರ್ಚಕರು ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಬಳಿಕ ದೇವಸ್ಥಾನದಲ್ಲಿ ಬೆಳಗಿಸಿದ ದೀಪವನ್ನು ಮೆರವಣಿಗೆಯ ಮೂಲಕ ಕೊಂಡೊಯ್ದು ಉರ್ಲಾಂಡಿ, ಮಣ್ಣಾಪು, ಶೇವಿರೆ ಹಾಗೂ ಬ್ರಹ್ಮನಗರ ಪ್ರದೇಶಗಳ ಸುತ್ತಮುತ್ತಲಿನ ಮನೆಗಳಲ್ಲಿ ದೀಪ ಬೆಳಗಿಸಲಾಯಿತು.
ಕಾರ್ಯಕ್ರಮದಲ್ಲಿ ಮಂಗಳೂರು ವಿಭಾಗದ ಸಾಮರಸ್ಯ ಸಂಯೋಜಕ ರವೀಂದ್ರ, ಜಿಲ್ಲಾ ಸಾಮರಸ್ಯ ಸಂಯೋಜಕ ಶ್ರೀಕುಮಾರ್ ಸುಬ್ರಹ್ಮಣ್ಯ, ದಾಮೋದರ ಪಾಟಲಿ, ಅಪ್ಪಯ್ಯ ಮಣಿಯಾಣಿ, ರಮೇಶ್ ಪ್ರಭು, ಸಂತೋಷ್ ಬೊನಂತಾಯ, ರಮೇಶ್ ನೆಗಳಗುಳಿ, ದಯಾನಂದ ಬೋಲ್ವಾರ್, ಸಚಿನ್ ಶೆಣೈ, ರಮೇಶ್ ಉರ್ಲಾಂಡಿ, ಅಶೋಕ್ ಬ್ರಹ್ಮನಗರ ಸೇರಿದಂತೆ ಪ್ರಮುಖರು ಹಾಗೂ ಮಾತೆಯರು ಉಪಸ್ಥಿತರಿದ್ದರು.















