Connect with us

ಕ್ರೀಡೆ

womens worldcup | ಮಹಿಳಾ ಕ್ರಿಕೆಟ್ ನಲ್ಲಿ ಹೊಸ ಶಕೆ ಆರಂಭ : ಮೊಟ್ಟ ಮೊದಲ ಬಾರಿ ವಿಶ್ವಕಪ್ ಮುಡಿಗೇರಿಸಿಕೊಂಡ ಭಾರತ – 50 ವರ್ಷಗಳ ಕನಸು ನನಸು – ಹೇಗಿತ್ತು ಗೊತ್ತೆ ಟೀಂ ಇಂಡಿಯಾ ಆಟ..?

Published

on

Ad Widget

Ad Widget

Ad Widget

Ad Widget

ನವಿ ಮುಂಬೈ: ಮಹಿಳಾ ಕ್ರಿಕೆಟ್ ರಂಗದಲ್ಲಿ ಭಾನುವಾರ ಹೊಸ ಶಕೆ ಆರಂಭವಾಯಿತು. ಡಿವೈ ಪಾಟೀಲ ಕ್ರೀಡಾಂಗಣದಲ್ಲಿ ಭಾರತ ತಂಡವು ಮೊದಲ ಬಾರಿಗೆ ವಿಶ್ವ ಕಿರೀಟ (womens worldcup) ಮುಡಿಗೇರಿಸಿಕೊಂಡು ಚಾರಿತ್ರಿಕ ಸಾಧನೆ ಮೆರೆಯಿತು. ಹಲವು ವರ್ಷಗಳಿಂದ ಕೋಟ್ಯಂತರ ಕ್ರಿಕೆಟ್ ಅಭಿಮಾನಿಗಳು ಕಂಡಿದ್ದ ಕನಸು ನನಸಾಯಿತು. ಹರ್ಮನ್ ಪ್ರೀತ್ ಕೌರ್ ಬಳಗದ ಆಟಗಾರ್ತಿಯರು ಹರ್ಷದ ಹೊನಲಲ್ಲಿ ತೇಲಿದರು.

Ad Widget

Ad Widget

Ad Widget

Ad Widget

ಮಹಿಳೆಯರ ಏಕದಿನ ಕ್ರಿಕೆಟ್ ವಿಶ್ವಕಪ್ ಫೈನಲ್‌ನಲ್ಲಿ ಭಾರತ ತಂಡವು 52 ರನ್‌ಗಳಿಂದ ದಕ್ಷಿಣ ಆಫ್ರಿಕಾ ಎದುರು ಜಯಭೇರಿ ಬಾರಿಸಿತು. ಮೊದಲು ಬ್ಯಾಟಿಂಗ್ ಮಾಡಿದ ಭಾರತ ಮಹಿಳಾ ತಂಡವು 50 ಓವರ್‌ಗಳಲ್ಲಿ 7 ವಿಕೆಟ್‌ಗಳಿಗೆ 298 ರನ್ ಗಳಿಸಿತು. ಅದಕ್ಕುತ್ತರವಾಗಿ ದಿಟ್ಟ ಹೋರಾಟ ನಡೆಸಿದ ದಕ್ಷಿಣ ಆಫ್ರಿಕಾ ತಂಡದ ನಾಯಕಿ ಲಾರಾ ವೋಲ್ಟಾರ್ಟ್ (101ರನ್) ಅಮೋಘ ಶತಕ ಬಾರಿಸಿದರು. ಆದರೆ ಉಳಿದ ಬ್ಯಾಟರ್‌ಗಳಿಂದ ದೀರ್ಘ ಇನಿಂಗ್ಸ್ ಮೂಡಿಬರಲಿಲ್ಲ. ಅದರ ಫಲವಾಗಿ ಮೊದಲ ವಿಶ್ವಕಪ್‌ ಜಯದ ಸಂಭ್ರಮ ದಕ್ಷಿಣ ಆಫ್ರಿಕಾದ ಕೈತಪ್ಪಿತು.

Ad Widget

Ad Widget alt="Ad Widget"/>

Ad Widget

45.3 ಓವರ್‌ಗಳಲ್ಲಿ 246 ರನ್ ಗಳಿಸಿ ಎಲ್ಲ ವಿಕೆಟ್ ಕಳೆದುಕೊಂಡಿತು.

Ad Widget

Ad Widget <> Ad Widget

ಡಿವೈ ಪಾಟೀಲ ಕ್ರೀಡಾಂಗಣ ದಲ್ಲಿ ಭಾನುವಾರ ಮಧ್ಯಾಹ್ನ ಮಳೆ ಸುರಿದಿದ್ದರಿಂದ ಎರಡು ತಾಸು ತಡವಾಗಿ ಪಂದ್ಯ ಆರಂಭವಾಯಿತು.

ಟಾಸ್ ಗೆದ್ದ ದಕ್ಷಿಣ ಆಫ್ರಿಕಾ ತಂಡವು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು. ಆತಿಥೇಯ ತಂಡದ ಆರಂಭಿಕ ಜೋಡಿ ಸ್ಮೃತಿ ಮಂದಾನ (45) ಮತ್ತು ಶಫಾಲಿ ವರ್ಮ (87) ಮೊದಲ ವಿಕೆಟ್ ಜೊತೆಯಾಟದಲ್ಲಿ 104 ರನ್ ಸೇರಿಸಿದರು. ಅರ್ಧಶತಕದತ್ತ ಹೆಜ್ಜೆಯಿಟ್ಟಿದ್ದ ಸ್ಮೃತಿ ಅವರು ಕ್ಲೋಯೆ ಟ್ರಯನ್ ಅವರು ಹಾಕಿದ 18ನೇ ಓವರ್‌ನಲ್ಲಿ ವಿಕೆಟ್‌ ಕೀಪರ್ ಜಾಫ್ತಾಗೆ ಕ್ಯಾಚ್ ಕೊಟ್ಟರು.

Ad Widget

Ad Widget

ಪ್ರತಿಕಾ ರಾವಲ್ ಅವರು ಗಾಯಗೊಂಡಿದ್ದರಿಂದ ತಂಡದಲ್ಲಿ ಸ್ಥಾನ ಪಡೆದಿರುವ ಶಫಾಲಿ ಈ ಟೂರ್ನಿಯಲ್ಲಿ ಆಡಿದ ಎರಡನೇ ಪಂದ್ಯವಿದು. ಸೆಮಿಫೈನಲ್‌ನಲ್ಲಿ ಮಿಂಚಿರಲಿಲ್ಲ. ಆದರೆ ಶಫಾಲಿ ಈ ಪಂದ್ಯದಲ್ಲಿ ತಮ್ಮ ಸಾಮರ್ಥ್ಯ ಮೆರೆದರು. ದಕ್ಷಿಣ ಆಫ್ರಿಕಾ ಬೌಲರ್‌ಗಳ ಶಿಸ್ತಿನ ದಾಳಿಗೆ ದಿಟ್ಟ ಉತ್ತರ ಕೊಟ್ಟರು.

ಆದರೆ ಶತಕದ ಸಮೀಪದದಲ್ಲಿದ್ದಾಗ ಅಯಬೊಂಗಾ ಕಾಕಾ ಬೌಲಿಂಗ್‌ನಲ್ಲಿ ಔಟಾದರು. ಸೆಮಿಫೈನಲ್ ಪಂದ್ಯದ ಗೆಲುವಿನ ರೂವಾರಿಯಾಗಿದ್ದ ಜಿಮಿಮಾ ರಾಡ್ರಿಗಸ್ (24 ರನ್) ಅವರೊಂದಿಗೆ ಶಫಾಲಿ 62 ರನ್ ಸೇರಿಸಿದರು. ಜಿಮಿಮಾ ಅವರ ಆಟಕ್ಕೂ ಅಯಬೋಂಗಾ ತಡೆಯೊಡ್ಡಿದರು.

ನಾಯಕಿ ಹರ್ಮನ್‌ಪ್ರೀತ್ ಕೌರ್ (20 ರನ್) ಅವರನ್ನು ನಿಯಂತ್ರಿಸುವಲ್ಲಿ ಮ್ಹಾಬಾ ಯಶಸ್ವಿಯಾದರು. ಒಂದು ಕಡೆ ವಿಕೆಟ್ ಪತನವಾಗುತ್ತಿದ್ದರೂ ದೀಪ್ತಿ ಶರ್ಮಾ ಗಟ್ಟಿಯಾಗಿ ನಿಂತರು. 100ರ ಸ್ಟೈಕ್‌ರೇಟ್‌ನಲ್ಲಿ ರನ್ ಗಳಿಸಿದರು. ಮೂರು ಬೌಂಡರಿ ಮತ್ತು ಒಂದು ಸಿಕ್ಸ‌ರ್ ಬಾರಿಸಿದರು. ರಿಚಾ ಘೋಷ್ (34) ಕೂಡ ಬೀಸಾಟವಾಡಿದರು. ರಿಚಾ ಅವರ ವಿಕೆಟ್ ಕೂಡ ಅಯಬೋಂಗಾ ಪಾಲಾಯಿತು. ದೀಪ್ತಿ ಕೊನೆಯ ಓವರ್‌ನಲ್ಲಿ ರನ್‌ಔಟ್‌ ಆದರು.

ಗುರಿ ಬೆನ್ನಟ್ಟಿದ ದಕ್ಷಿಣ ಆಫ್ರಿಕಾ ತಂಡವು ಉತ್ತಮ ಆರಂಭವನ್ನೇ ಮಾಡಿತು. ಲಾರಾ ವೋಲ್ವಾರ್ಟ್ ಮತ್ತು ತಾಲ್ಮೀನ್‌ ಬ್ರಿಟ್ಸ್ ಮೊದಲ ವಿಕೆಟ್‌ಗೆ 51 ರನ್‌ ಸೇರಿಸಿದರು. 10ನೇ ಓವರ್‌ನಲ್ಲಿ ಬ್ರಿಟ್ಸ್‌ ರನೌಟ್ ಆಗುವುದರೊಂದಿಗೆ ಭಾರತಕ್ಕೆ ಮೊದಲ ಯಶಸ್ಸು ದೊರೆಯಿತು.

ಆದರೆ ಲಾರಾ ಒಂದು ಕಡೆ ಬೀಸಾಟವಾಡುತ್ತಿದ್ದರು. ಇದನ್ನು ಮನಗಂಡ ಭಾರತದ ಬೌಲರ್‌ಗಳು ಇನ್ನೊಂದು ಬದಿಯಲ್ಲಿ ಬ್ಯಾಟರ್‌ಗಳೂ ಕಾಲೂರಲು ಬಿಡಲಿಲ್ಲ. ಚಾಣಾಕ್ಷತೆ ಮೆರೆದರು. ಕೆಲವು ಬಾರಿ ಮಿಸ್‌ಫೀಲ್ಡ್ ಮತ್ತು ಕ್ಯಾಚ್‌ಗಳನ್ನು ಕೈಚೆಲ್ಲಿದರೂ ಭಾರತದ ಆಟಗಾರ್ತಿಯರು ಧೈರ್ಯ ಕಳೆದುಕೊಳ್ಳಲಿಲ್ಲ.

ಮರಳಿ, ಮರಳಿ ಯತ್ನವ ಮಾಡಿದರು. ಅದಕ್ಕೆ ತಕ್ಕಂತೆ ಮೋಡಿ ಮಾಡಿದ ದೀಪ್ತಿ ಐದು ವಿಕೆಟ್ ಗೊಂಚಲು ಗಳಿಸಿದರು. ಶಫಾಲಿ ಕೂಡ ಎರಡು ವಿಕೆಟ್ ಪಡೆದರು. 46ನೇ ಓವರ್‌ನಲ್ಲಿ ದೀಪ್ತಿ ಎಸೆತವನ್ನು ಎತ್ತಿ ಹೊಡೆದ ನದೀನ್ ಡಿ ಕ್ಲರ್ಕ್ ಅವರ ಕ್ಯಾಚ್ ಅನ್ನು ಸ್ವಲ್ಪ ದೂರದವರೆಗೂ ಓಡಿ ಹೋಗಿ ಕೈತುಂಬಿಕೊಂಡ ನಾಯಕಿ ಹರ್ಮನ್ ಸಂಭ್ರಮದಿಂದ ಕುಣಿದಾಡಿದರು. ಮರುಕ್ಷಣವೇ ಸಹ ಆಟಗಾರ್ತಿಯರು ತಮ್ಮ ನಾಯಕಿಯನ್ನು ಬಿಗಿದಪ್ಪಿ ಸಂಭ್ರಮಿಸಿದರು. ಎಲ್ಲರ ಕಂಗಳಲ್ಲಿಯೂ ಆನಂದ ಭಾಷ್ಪ ಜಿನುಗಿತು.

ಏಳು ಬಾರಿಯ ವಿಶ್ವ ಚಾಂಪಿಯನ್ ಆಸ್ಟ್ರೇಲಿಯಾ ತಂಡವನ್ನು ಸೆಮಿಫೈನಲ್ ನಲ್ಲಿ ಸೋಲಿಸಿದ್ದ ಭಾರತ ಮತ್ತು ನಾಲ್ಕು ಸಲ ಕಿರೀಟ ಧರಿಸಿದ್ದ ಇಂಗ್ಲೆಂಡ್ ತಂಡ ವನ್ನು ಮಣಿಸಿದ್ದ ದಕ್ಷಿಣ ಆಫ್ರಿಕಾ ಫೈನಲ್ ನಲ್ಲಿ ಮುಖಾಮುಖಿಯಾಗಿದ್ದವು.

1975ರ ಆಸುಪಾಸಿನಲ್ಲಿ ಪ್ರಾರಂಭವಾದ ಮಹಿಳೆಯರ ಕ್ರಿಕೇಟ್ ತಂಡ ಬರೋಬ್ಬರಿ 50 ವರ್ಷಗಳ ನಂತರ ವಿಶ್ವಕಪ್ ತನ್ನ ಮುಡಿಗೇರಿಸಿಕೊಂಡಿತು.

Ad Widget
Click to comment

Leave a Reply

ಕ್ರೀಡೆ

Vivekananda-ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನ ಭುವನ್‌ರಾಮ್ ಭಾರ ಎತ್ತುವ ಸ್ಪರ್ಧೆಯಲ್ಲಿ ವಿಟಿಯು ತಂಡಕ್ಕೆ ಆಯ್ಕೆ

Published

on

Ad Widget

Ad Widget

Ad Widget

Ad Widget

ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಭುವನ್‌ರಾಮ್ ಜಗದೀಶ್ ಭಂಡಾರಿ ಇವರು ಅಖಿಲ ಭಾರತ ದಕ್ಷಿಣ ವಲಯ ಅಂತರ್ ವಿಶ್ವವಿದ್ಯಾನಿಲಯ ಭಾರ ಎತ್ತುವ ಸ್ಪರ್ಧೆಯಲ್ಲಿ 75 ಕೆಜಿ ವಿಭಾಗದಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ ತಂಡಕ್ಕೆ ಆಯ್ಕೆಯಾಗಿದ್ದಾರೆ.

Ad Widget

Ad Widget

Ad Widget

Ad Widget

ಪುತ್ತೂರು: ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಭುವನ್‌ರಾಮ್ ಜಗದೀಶ್ ಭಂಡಾರಿ ಇವರು ಅಖಿಲ ಭಾರತ ದಕ್ಷಿಣ ವಲಯ ಅಂತರ್ ವಿಶ್ವವಿದ್ಯಾನಿಲಯ ಭಾರ ಎತ್ತುವ ಸ್ಪರ್ಧೆಯಲ್ಲಿ 75 ಕೆಜಿ ವಿಭಾಗದಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ ತಂಡಕ್ಕೆ ಆಯ್ಕೆಯಾಗಿದ್ದಾರೆ.

Ad Widget

Ad Widget alt="Ad Widget"/>

Ad Widget

ಅಂತಿಮ ವರ್ಷದ ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿಯಾಗಿರುವ ಇವರು ಚೆನ್ನೈನ ವಿನಾಯಕ ಮಿಶನ್ಸ್ ರೀಸರ್ಚ್ ಫೌಂಡೇಶನ್ ಆಶ್ರಯದಲ್ಲಿ ನವೆಂಬರ್ 21 ರಿಂದ 23 ರವರೆಗೆ ನಡೆಯುವ ಈ ಸ್ಪರ್ಧೆಯಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯವನ್ನು ಪ್ರತಿನಿಧಿಸಲಿದ್ದಾರೆ.

Ad Widget

Ad Widget <> Ad Widget

ಇವರಿಗೆ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಬಾಲಚಂದ್ರ ಗೌಡ ಭಾರ್ತಿಕುಮೇರು ಮಾರ್ಗದರ್ಶನವನ್ನು ನೀಡಿದ್ದಾರೆ ಎಂದು ಪ್ರಾಂಶುಪಾಲ ಡಾ.ಪುರುಷೋತ್ತಮ ಚಿಪ್ಪಾರ್ ತಿಳಿಸಿದ್ದಾರೆ.

Ad Widget
Continue Reading

ಕ್ರೀಡೆ

IPL 2027-ಐಪಿಎಲ್ 2027 ಮಿನಿ ಹರಾಜು ಡಿ.16ಕ್ಕೆ ಫಿಕ್ಸ್: ಆರ್‌ಸಿಬಿ ಸೇರಿ 10 ತಂಡಗಳ ಪರ್ಸ್ ವಿವರ ಇಲ್ಲಿದೆ..

Published

on

Ad Widget

Ad Widget

Ad Widget

Ad Widget

ಐಪಿಎಲ್ 2027ರ ಮಿನಿ ಹರಾಜಿಗೆ ಸಿದ್ಧತೆಗಳು ಪೂರ್ಣಗೊಂಡಿದ್ದು, ಎಲ್ಲಾ 10 ಫ್ರಾಂಚೈಸಿಗಳು ತಾವು ಉಳಿಸಿಕೊಂಡಿರುವ ಹಾಗೂ ಬಿಡುಗಡೆ ಮಾಡಿರುವ ಆಟಗಾರರ ಅಂತಿಮ ಪಟ್ಟಿಯನ್ನು ನವೆಂಬರ್ 17ರ ಗಡುವಿನೊಳಗೆ ಬಿಸಿಸಿಐಗೆ ಸಲ್ಲಿಸಿವೆ. ಕಳೆದ ಕೆಲವು ತಿಂಗಳುಗಳಿಂದ ನಡೆಯುತ್ತಿದ್ದ ಆಟಗಾರರ ರಿಟೆನ್ಷನ್ ಮತ್ತು ಟ್ರೇಡಿಂಗ್ ಪ್ರಕ್ರಿಯೆ ಮುಕ್ತಾಯಗೊಂಡಿದ್ದು, ಇದೀಗ ಹರಾಜಿನಲ್ಲಿ ಯಾವ ತಂಡದ ಬಳಿ ಎಷ್ಟು ಹಣ ಉಳಿದಿದೆ ಮತ್ತು ಎಷ್ಟು ಆಟಗಾರರನ್ನು ಖರೀದಿಸಲು ಅವಕಾಶವಿದೆ ಎಂಬ ಲೆಕ್ಕಾಚಾರ ಬಹಿರಂಗವಾಗಿದೆ.

Ad Widget

Ad Widget

Ad Widget

Ad Widget

ಬೆಂಗಳೂರು, ನ.18: ಐಪಿಎಲ್ 2027ರ ಮಿನಿ ಹರಾಜಿಗೆ ಸಿದ್ಧತೆಗಳು ಪೂರ್ಣಗೊಂಡಿದ್ದು, ಎಲ್ಲಾ 10 ಫ್ರಾಂಚೈಸಿಗಳು ತಾವು ಉಳಿಸಿಕೊಂಡಿರುವ ಹಾಗೂ ಬಿಡುಗಡೆ ಮಾಡಿರುವ ಆಟಗಾರರ ಅಂತಿಮ ಪಟ್ಟಿಯನ್ನು ನವೆಂಬರ್ 17ರ ಗಡುವಿನೊಳಗೆ ಬಿಸಿಸಿಐಗೆ ಸಲ್ಲಿಸಿವೆ. ಕಳೆದ ಕೆಲವು ತಿಂಗಳುಗಳಿಂದ ನಡೆಯುತ್ತಿದ್ದ ಆಟಗಾರರ ರಿಟೆನ್ಷನ್ ಮತ್ತು ಟ್ರೇಡಿಂಗ್ ಪ್ರಕ್ರಿಯೆ ಮುಕ್ತಾಯಗೊಂಡಿದ್ದು, ಇದೀಗ ಹರಾಜಿನಲ್ಲಿ ಯಾವ ತಂಡದ ಬಳಿ ಎಷ್ಟು ಹಣ ಉಳಿದಿದೆ ಮತ್ತು ಎಷ್ಟು ಆಟಗಾರರನ್ನು ಖರೀದಿಸಲು ಅವಕಾಶವಿದೆ ಎಂಬ ಲೆಕ್ಕಾಚಾರ ಬಹಿರಂಗವಾಗಿದೆ.

Ad Widget

Ad Widget alt="Ad Widget"/>

Ad Widget

ಲಕ್ನೋ ಸೂಪರ್ ಜೈಂಟ್ಸ್ ಬಳಿ ಅತಿ ಹೆಚ್ಚು ಹಣ!
ಐಪಿಎಲ್ 2027ರ ಮಿನಿ ಹರಾಜಿನಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡ ಅತಿ ಹೆಚ್ಚು ಹಣದೊಂದಿಗೆ ಕಣಕ್ಕಿಳಿಯಲಿದೆ. ಆಟಗಾರರನ್ನು ಉಳಿಸಿಕೊಂಡ ಬಳಿಕ ತಂಡದ ಪರ್ಸ್‌ನಲ್ಲಿ ಬರೋಬ್ಬರಿ ₹47.45 ಕೋಟಿ ಉಳಿದಿದೆ.

Ad Widget

Ad Widget <> Ad Widget

ಕೋಲ್ಕತ್ತಾ ನೈಟ್ ರೈಡರ್ಸ್ ₹41.65 ಕೋಟಿ ಹಾಗೂ ಸನ್‌ರೈಸರ್ಸ್ ಹೈದರಾಬಾದ್ ₹40.15 ಕೋಟಿ ಹಣದೊಂದಿಗೆ ನಂತರದ ಸ್ಥಾನಗಳಲ್ಲಿವೆ. ಡೆಲ್ಲಿ ಕ್ಯಾಪಿಟಲ್ಸ್ ಬಳಿ ₹39.50 ಕೋಟಿ ಹಾಗೂ ಮುಂಬೈ ಇಂಡಿಯನ್ಸ್ ಬಳಿ ₹32.60 ಕೋಟಿ ಹಣವಿದೆ.

ಇನ್ನೊಂದೆಡೆ, ಗುಜರಾತ್ ಟೈಟಾನ್ಸ್ ತಂಡದ ಬಳಿ ಕೇವಲ ₹8.75 ಕೋಟಿ ಮಾತ್ರ ಉಳಿದಿದ್ದು, 10 ತಂಡಗಳ ಪೈಕಿ ಅತ್ಯಂತ ಕಡಿಮೆ ಮೊತ್ತ ಹೊಂದಿರುವ ತಂಡವಾಗಿದೆ.

Ad Widget

Ad Widget

ಡೆಲ್ಲಿ, ಮುಂಬೈಗೆ ಹೆಚ್ಚು ಆಟಗಾರರ ಖರೀದಿ ಅವಕಾಶ
ಖಾಲಿ ಇರುವ ಆಟಗಾರರ ಸ್ಥಾನಗಳ ಲೆಕ್ಕಾಚಾರದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಮುಂಬೈ ಇಂಡಿಯನ್ಸ್ ತಂಡಗಳು ಮುಂಚೂಣಿಯಲ್ಲಿವೆ. ಈ ಎರಡೂ ತಂಡಗಳು ತಲಾ 9 ಆಟಗಾರರನ್ನು ಖರೀದಿಸಲು ಅವಕಾಶ ಹೊಂದಿವೆ.

ಕೋಲ್ಕತ್ತಾ ನೈಟ್ ರೈಡರ್ಸ್ 8, ಲಕ್ನೋ ಸೂಪರ್ ಜೈಂಟ್ಸ್ ಮತ್ತು ಸನ್‌ರೈಸರ್ಸ್ ಹೈದರಾಬಾದ್ ತಲಾ 7 ಆಟಗಾರರನ್ನು ಖರೀದಿಸಬಹುದು. ಚೆನ್ನೈ ಸೂಪರ್ ಕಿಂಗ್ಸ್, ರಾಜಸ್ಥಾನ್ ರಾಯಲ್ಸ್ ಮತ್ತು ಪಂಜಾಬ್ ಕಿಂಗ್ಸ್ ತಂಡಗಳಲ್ಲಿ ತಲಾ 6 ಸ್ಥಾನಗಳು ಖಾಲಿಯಿವೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ 6 ಆಟಗಾರರನ್ನು ಖರೀದಿಸುವ ಅವಕಾಶವಿದ್ದು, ಗುಜರಾತ್ ಟೈಟಾನ್ಸ್ ತಂಡದಲ್ಲಿ ಕೇವಲ 3 ಸ್ಥಾನಗಳು ಮಾತ್ರ ಖಾಲಿಯಿವೆ.

10 ತಂಡಗಳ ಪರ್ಸ್ ಮೊತ್ತ ಮತ್ತು ಖಾಲಿ ಸ್ಥಾನಗಳ ವಿವರ
ತಂಡ ಉಳಿದ ಹಣ ಖಾಲಿ ಸ್ಥಾನ ವಿದೇಶಿ ಆಟಗಾರರ ಸ್ಥಾನ
ಲಕ್ನೋ ಸೂಪರ್ ಜೈಂಟ್ಸ್ ₹47.45 ಕೋಟಿ 7 3
ಕೋಲ್ಕತ್ತಾ ನೈಟ್ ರೈಡರ್ಸ್ ₹41.65 ಕೋಟಿ 8 3
ಸನ್‌ರೈಸರ್ಸ್ ಹೈದರಾಬಾದ್ ₹40.15 ಕೋಟಿ 7 3
ಡೆಲ್ಲಿ ಕ್ಯಾಪಿಟಲ್ಸ್ ₹39.50 ಕೋಟಿ 9 4
ಮುಂಬೈ ಇಂಡಿಯನ್ಸ್ ₹32.60 ಕೋಟಿ 9 2
ಚೆನ್ನೈ ಸೂಪರ್ ಕಿಂಗ್ಸ್ ₹28.05 ಕೋಟಿ 6 2
ರಾಜಸ್ಥಾನ್ ರಾಯಲ್ಸ್ ₹27.05 ಕೋಟಿ 6 2
ಪಂಜಾಬ್ ಕಿಂಗ್ಸ್ ₹18.60 ಕೋಟಿ 6 2
ರಾಯಲ್ ಚಾಲೆಂಜರ್ಸ್ ಬೆಂಗಳೂರು ₹14.15 ಕೋಟಿ 6 1
ಗುಜರಾತ್ ಟೈಟಾನ್ಸ್ ₹8.75 ಕೋಟಿ 3 2

ಡಿಸೆಂಬರ್ 16ರಂದು ಗೋವಾದಲ್ಲಿ ಮಿನಿ ಹರಾಜು
ಐಪಿಎಲ್ 2027ರ ಮಿನಿ ಹರಾಜು ಡಿಸೆಂಬರ್ 16, 2026ರಂದು ಗೋವಾದಲ್ಲಿ ನಡೆಯಲಿದೆ. ಈ ಹರಾಜಿನಲ್ಲಿ ಎಲ್ಲಾ 10 ತಂಡಗಳು ತಮ್ಮ ತಂಡಕ್ಕೆ ಅಗತ್ಯವಿರುವ ಆಟಗಾರರನ್ನು ಖರೀದಿಸಲು ಪೈಪೋಟಿ ನಡೆಸಲಿವೆ.

2025ರಿಂದ 2027ರವರೆಗಿನ ಮೂರು ವರ್ಷಗಳ ಅವಧಿಯ ಆರಂಭದಲ್ಲಿ ಪ್ರತಿ ತಂಡಕ್ಕೆ ಆಟಗಾರರ ಖರೀದಿಗಾಗಿ ₹120 ಕೋಟಿ ಪರ್ಸ್ ನಿಗದಿಪಡಿಸಲಾಗಿತ್ತು. ನಿಯಮದ ಪ್ರಕಾರ ಪ್ರತಿ ಮಿನಿ ಹರಾಜಿಗೂ ಮುನ್ನ ಈ ಮೊತ್ತಕ್ಕೆ ಹೆಚ್ಚುವರಿಯಾಗಿ ₹5 ಕೋಟಿ ಸೇರ್ಪಡೆಯಾಗುತ್ತದೆ. ಹೀಗಾಗಿ 2027ರ ಮಿನಿ ಹರಾಜಿನಲ್ಲಿ ಪ್ರತಿ ತಂಡದ ಒಟ್ಟು ಪರ್ಸ್ ಮೊತ್ತ ₹130 ಕೋಟಿಗೆ ಏರಿಕೆಯಾಗಲಿದೆ.

ಡಿಸೆಂಬರ್ 16ರಂದು ನಡೆಯಲಿರುವ ಹರಾಜಿನಲ್ಲಿ ಯಾವ ತಂಡ ಯಾವ ಸ್ಟಾರ್ ಆಟಗಾರರನ್ನು ತನ್ನ ತೆಕ್ಕೆಗೆ ತೆಗೆದುಕೊಳ್ಳಲಿದೆ ಮತ್ತು ಯಾವ ತಂಡ ಬಲಿಷ್ಠ ಪಡೆಯನ್ನು ಕಟ್ಟಲಿದೆ ಎಂಬ ಕುತೂಹಲ ಕ್ರಿಕೆಟ್ ಅಭಿಮಾನಿಗಳಲ್ಲಿ ಮನೆಮಾಡಿದೆ.

Ad Widget
Continue Reading

ಅಂತರ ರಾಜ್ಯ

Mohammed Shami: ಟೆಸ್ಟ್ ಕ್ರಿಕೆಟ್‌ಗೆ ವಿದಾಯ ಹೇಳಿದ ಟೀಂ ಇಂಡಿಯಾ ವೇಗಿ ಮೊಹಮ್ಮದ್ ಶಮಿ

Published

on

Ad Widget

Ad Widget

Ad Widget

Ad Widget

ಟೀಂ ಇಂಡಿಯಾದ ಅನುಭವಿ ವೇಗದ ಬೌಲರ್ ಮೊಹಮ್ಮದ್ ಶಮಿ ಟೆಸ್ಟ್ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ. ಸದ್ಯ ಭಾರತ ತಂಡದಲ್ಲಿ ಸ್ಥಾನ ಪಡೆಯದಿರುವ ಶಮಿ, ಶುಕ್ರವಾರ ಇನ್‌ಸ್ಟಾಗ್ರಾಂನಲ್ಲಿ ಭಾವನಾತ್ಮಕ ಸಂದೇಶವೊಂದನ್ನು ಹಂಚಿಕೊಳ್ಳುವ ಮೂಲಕ ತಮ್ಮ ಟೆಸ್ಟ್ ಕ್ರಿಕೆಟ್ ಪಯಣಕ್ಕೆ ತೆರೆ ಎಳೆದಿದ್ದಾರೆ.

Ad Widget

Ad Widget

Ad Widget

Ad Widget

ಹೊಸದಿಲ್ಲಿ: ಟೀಂ ಇಂಡಿಯಾದ ಅನುಭವಿ ವೇಗದ ಬೌಲರ್ ಮೊಹಮ್ಮದ್ ಶಮಿ ಟೆಸ್ಟ್ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ. ಸದ್ಯ ಭಾರತ ತಂಡದಲ್ಲಿ ಸ್ಥಾನ ಪಡೆಯದಿರುವ ಶಮಿ, ಶುಕ್ರವಾರ ಇನ್‌ಸ್ಟಾಗ್ರಾಂನಲ್ಲಿ ಭಾವನಾತ್ಮಕ ಸಂದೇಶವೊಂದನ್ನು ಹಂಚಿಕೊಳ್ಳುವ ಮೂಲಕ ತಮ್ಮ ಟೆಸ್ಟ್ ಕ್ರಿಕೆಟ್ ಪಯಣಕ್ಕೆ ತೆರೆ ಎಳೆದಿದ್ದಾರೆ.

Ad Widget

Ad Widget alt="Ad Widget"/>

Ad Widget

‘ನಾನು ಬಿಳಿ ಜೆರ್ಸಿಗೆ ವಿದಾಯ ಹೇಳುತ್ತಿದ್ದೇನೆ. ಆದರೆ ಅದರೊಂದಿಗೆ ಬೆಸೆದುಕೊಂಡಿರುವ ನೆನಪುಗಳಿಗೆ ಎಂದಿಗೂ ವಿದಾಯ ಹೇಳುವುದಿಲ್ಲ’ ಎಂದು ಶಮಿ ತಮ್ಮ ನಿವೃತ್ತಿ ನಿರ್ಧಾರವನ್ನು ಪ್ರಕಟಿಸಿದ್ದಾರೆ.

Ad Widget

Ad Widget <> Ad Widget

ಭಾರತದ ಟೆಸ್ಟ್ ಜೆರ್ಸಿಯನ್ನು ಮೊದಲ ಬಾರಿಗೆ ಧರಿಸಿದ ಕ್ಷಣವನ್ನು ನೆನಪಿಸಿಕೊಂಡಿರುವ ಅವರು, ‘ಮೊದಲ ಬಾರಿಗೆ ಭಾರತದ ಟೆಸ್ಟ್ ಜೆರ್ಸಿ ಧರಿಸಿದಾಗ ನನ್ನಲ್ಲಿದ್ದದ್ದು ಒಂದೇ ಕನಸು. ನನ್ನ ದೇಶಕ್ಕಾಗಿ ಏನಾದರೂ ಮಾಡಬೇಕು ಎಂಬುದಾಗಿತ್ತು. ಅಂದಿನಿಂದ ಪ್ರತಿಯೊಂದು ವಿಕೆಟ್, ಪ್ರತಿಯೊಂದು ಹೋರಾಟ, ಪ್ರತಿಯೊಂದು ಗಾಯ ಹಾಗೂ ಪ್ರತಿಯೊಂದು ಪುನರಾಗಮನವೂ ನನಗೆ ಹೊಸ ಪಾಠ ಕಲಿಸಿದೆ’ ಎಂದು ಬರೆದುಕೊಂಡಿದ್ದಾರೆ.

ಟೆಸ್ಟ್ ಕ್ರಿಕೆಟ್ ನನ್ನ ಜೀವನದ ವಿಶೇಷ ಭಾಗವಾಗಿತ್ತು
‘ನನ್ನ ಪಾಲಿಗೆ ಟೆಸ್ಟ್ ಕ್ರಿಕೆಟ್ ಕೇವಲ ಒಂದು ಮಾದರಿಯಾಗಿರಲಿಲ್ಲ. ಅದು ನನ್ನ ಜೀವನದ ಅತ್ಯಂತ ವಿಶೇಷ ಭಾಗವಾಗಿತ್ತು. ಇಂದು ಭಾರವಾದ ಹೃದಯ ಹಾಗೂ ಅಸಂಖ್ಯಾತ ಸುಂದರ ನೆನಪುಗಳೊಂದಿಗೆ ಟೆಸ್ಟ್ ಕ್ರಿಕೆಟ್‌ನಿಂದ ನಿವೃತ್ತಿಯಾಗುವ ನಿರ್ಧಾರ ಕೈಗೊಂಡಿದ್ದೇನೆ’ ಎಂದು ತಮ್ಮ ಭಾವನೆಗಳನ್ನು ವ್ಯಕ್ತಪಡಿಸಿದ್ದಾರೆ.

Ad Widget

Ad Widget

ಇದೇ ವೇಳೆ, ತಮ್ಮ ಕ್ರಿಕೆಟ್ ಪಯಣದಲ್ಲಿ ಬೆಂಬಲವಾಗಿ ನಿಂತ ಸಹ ಆಟಗಾರರು, ತರಬೇತುದಾರರು ಹಾಗೂ ಕುಟುಂಬ ಸದಸ್ಯರಿಗೆ ಶಮಿ ಹೃದಯಪೂರ್ವಕ ಧನ್ಯವಾದ ಸಲ್ಲಿಸಿದ್ದಾರೆ. ಒಳ್ಳೆಯ ಹಾಗೂ ಕಷ್ಟದ ಸಮಯಗಳಲ್ಲೂ ತಮ್ಮ ಮೇಲೆ ನಂಬಿಕೆ ಇಟ್ಟ ಲಕ್ಷಾಂತರ ಭಾರತೀಯ ಅಭಿಮಾನಿಗಳಿಗೂ ಕೃತಜ್ಞತೆ ತಿಳಿಸಿದ್ದಾರೆ.

ತಮ್ಮ ಪ್ರತಿಭೆಯನ್ನು ಗುರುತಿಸಿ, ಬೆಳೆಯಲು ಅವಕಾಶ ನೀಡಿದ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಹಾಗೂ ಕ್ರಿಕೆಟ್ ಅಸೋಸಿಯೇಷನ್ ಆಫ್ ಬೆಂಗಾಲ್ (ಸಿಎಬಿ) ಸಂಸ್ಥೆಗಳಿಗೂ ಧನ್ಯವಾದ ಅರ್ಪಿಸಿದ್ದಾರೆ. ಈ ಸಂಸ್ಥೆಗಳು ನೀಡಿದ ಬೆಂಬಲ ಹಾಗೂ ವಿಶ್ವಾಸ ಸದಾ ತಮ್ಮ ಪಾಲಿಗೆ ವಿಶೇಷವಾಗಿರಲಿದೆ ಎಂದು ಹೇಳಿದ್ದಾರೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!