Connect with us

Uncategorized

RSS first reply-ಮಲ್ಲಿಕಾರ್ಜುನ್-ಪ್ರಿಯಾಂಕ ಖರ್ಗೆಯಿಂದ RSS ನಿಷೇಧ ಹೇಳಿಕೆ : RSS ಮೊದಲ  ರಿಪ್ಲೈ

Published

on

Ad Widget

Ad Widget

Ad Widget

Ad Widget

ಕೆಲವರು ಹೇಳಿದ ಮಾತ್ರಕ್ಕೆ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ವನ್ನು ನಿಷೇಧಿಸಲು ಸಾಧ್ಯವಿಲ್ಲ ಎಂದು ಆರ್‌ಎಸ್‌ಎಸ್ ಪ್ರಧಾನ ಕಾರ್ಯದರ್ಶಿ ದತ್ತಾತ್ರೇಯ ಹೊಸಬಾಳೆ ಅವರು ಶನಿವಾರ ಸ್ಪಷ್ಟಪಡಿಸಿದ್ದಾರೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಅವರ ಪುತ್ರ, ಕರ್ನಾಟಕ ಸಚಿವ ಪ್ರಿಯಾಂಕ್ ಖರ್ಗೆ ಅವರು ಆರ್‌ಎಸ್‌ಎಸ್‌ ನಿಷೇಧಕ್ಕೆ ಒತ್ತಾಯಿಸಿದ ನಂತರ ಇದೇ ಮೊದಲ ಬಾರಿಗೆ ಸಂಘದ ವತಿಯಿಂದ ಈ ಪ್ರತಿಕ್ರಿಯೆ ವ್ಯಕ್ತವಾಗಿದೆ.

Ad Widget

Ad Widget

Ad Widget

Ad Widget

ಜಬಲ್ಪುರ: ಕೆಲವರು ಹೇಳಿದ ಮಾತ್ರಕ್ಕೆ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ವನ್ನು ನಿಷೇಧಿಸಲು ಸಾಧ್ಯವಿಲ್ಲ ಎಂದು ಆರ್‌ಎಸ್‌ಎಸ್ ಪ್ರಧಾನ ಕಾರ್ಯದರ್ಶಿ ದತ್ತಾತ್ರೇಯ ಹೊಸಬಾಳೆ ಅವರು ಶನಿವಾರ ಸ್ಪಷ್ಟಪಡಿಸಿದ್ದಾರೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಅವರ ಪುತ್ರ, ಕರ್ನಾಟಕ ಸಚಿವ ಪ್ರಿಯಾಂಕ್ ಖರ್ಗೆ ಅವರು ಆರ್‌ಎಸ್‌ಎಸ್‌ ನಿಷೇಧಕ್ಕೆ ಒತ್ತಾಯಿಸಿದ ನಂತರ ಇದೇ ಮೊದಲ ಬಾರಿಗೆ ಸಂಘದ ವತಿಯಿಂದ ಈ ಪ್ರತಿಕ್ರಿಯೆ ವ್ಯಕ್ತವಾಗಿದೆ.

Ad Widget

Ad Widget alt="Ad Widget"/>

Ad Widget

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಹೊಸಬಾಳೆ, “ಕಾಂಗ್ರೆಸ್ ಈ ಹಿಂದೆ ಹಲವು ಬಾರಿ ಆರ್‌ಎಸ್‌ಎಸ್ ಅನ್ನು ನಿಷೇಧಿಸಲು ಪ್ರಯತ್ನಿಸಿತ್ತು. ಆ ಪ್ರಯತ್ನಗಳಿಂದ ಆದ ಅನುಭವಗಳಿಂದ ಖರ್ಗೆ ಅವರು ಪಾಠ ಕಲಿಯಬೇಕು. ಅವರ ಹಿರಿಯ ನಾಯಕರೊಬ್ಬರು ಮೂರು ಬಾರಿ ನಿಷೇಧ ಹೇರಲು ಪ್ರಯತ್ನಿಸಿದ್ದರು. ಆಗ ಏನಾಯಿತು? ನ್ಯಾಯಾಲಯಗಳು ಮತ್ತು ಜನತೆ ಯಾವ ತೀರ್ಪು ನೀಡಿದ್ದರು ಎಂಬುದನ್ನು ಅವರು ತಿಳಿದುಕೊಳ್ಳಬೇಕು” ಎಂದು ಕಾಂಗ್ರೆಸ್‌ಗೆ ತಿರುಗೇಟು ನೀಡಿದರು.

Ad Widget

Ad Widget <> Ad Widget

“ರಾಷ್ಟ್ರ ನಿರ್ಮಾಣದಲ್ಲಿ ಆರ್‌ಎಸ್‌ಎಸ್ ಪ್ರಮುಖ ಪಾತ್ರ ವಹಿಸಿದೆ ಎಂಬುದನ್ನು ದೇಶದ ಜನ ಒಪ್ಪಿಕೊಂಡಿದ್ದಾರೆ. ಅಂತಹ ಸಂಘಟನೆಯನ್ನು ನಿಷೇಧಿಸಲು ನಿರ್ದಿಷ್ಟ ಮತ್ತು ನಿಖರ ಕಾರಣ ಇರಬೇಕು. ಆದರೆ, ಅಂತಹ ಯಾವುದೇ ಕಾರಣ ಇಲ್ಲ. ಅದನ್ನು ನಿಷೇಧಿಸುವುದರಿಂದ ನೀವು ಏನು ಸಾಧಿಸುತ್ತೀರಿ?” ಎಂದು ಹೊಸಬಾಳೆ ಖಾರವಾಗಿ ಪ್ರಶ್ನಿಸಿದರು.

ಶುಕ್ರವಾರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು, ಬಿಜೆಪಿ-ಆರ್‌ಎಸ್‌ಎಸ್‌ನಿಂದಲೇ ದೇಶದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಸಮಸ್ಯೆಗಳು ಉದ್ಭವಿಸುತ್ತವೆ ಎಂದು ಆರೋಪಿಸಿ, ಆರ್‌ಎಸ್‌ಎಸ್‌ ನಿಷೇಧಿಸಬೇಕು ಎಂದು ಒತ್ತಾಯಿಸಿದ್ದರು. ಇತ್ತ, ಕರ್ನಾಟಕದ ಸಚಿವ ಪ್ರಿಯಾಂಕ್ ಖರ್ಗೆ ಅವರು ಸಹ ಆರ್‌ಎಸ್‌ಎಸ್ ನಿಷೇಧಕ್ಕೆ ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದರು. ಈ ಬೆನ್ನಲ್ಲೇ ರಾಜ್ಯ ಸರ್ಕಾರ, ಸಂಘ ಸಂಸ್ಥೆಗಳು ಖಾಸಗಿ ಶಾಲಾ ಆವರಣಗಳಲ್ಲಿ ಸರ್ಕಾರದ ಅನುಮತಿ ಪಡೆಯದೆ ಕಾರ್ಯಕ್ರಮ ನಡೆಸುವಂತಿಲ್ಲ ಎಂಬ ಆದೇಶ ಹೊರಡಿಸಿತ್ತು. ಆದರೆ, ಈ ಆದೇಶಕ್ಕೆ ಹೈಕೋರ್ಟ್ ತಡೆ ನೀಡಿತ್ತು.

Ad Widget

Ad Widget

ಹೊಸಬಾಳೆ ಅವರ ಪ್ರಮುಖ ಅಂಶಗಳು:
*ಈ ಹಿಂದೆ ನಡೆದ ಪ್ರಯತ್ನಗಳಿಂದ ಖರ್ಗೆ ಪಾಠ ಕಲಿಯಬೇಕು.
*ಕಾಂಗ್ರೆಸ್‌ನ ಹಿರಿಯ ನಾಯಕರೊಬ್ಬರು ಮೂರು ಬಾರಿ ನಿಷೇಧಕ್ಕೆ ಯತ್ನಿಸಿ ವಿಫಲರಾಗಿದ್ದರು.
*ಆರ್‌ಎಸ್‌ಎಸ್ ರಾಷ್ಟ್ರ ನಿರ್ಮಾಣದಲ್ಲಿ ತೊಡಗಿದೆ ಮತ್ತು ಇದಕ್ಕೆ ಜನರ ಬೆಂಬಲವಿದೆ.
*ಯಾವುದೇ ಸಂಘಟನೆಯನ್ನು ನಿಷೇಧಿಸಲು ನಿರ್ದಿಷ್ಟ ಕಾರಣಗಳು ಬೇಕು, ಅದು ಇಲ್ಲಿ ಇಲ್ಲ.
*ಸಂಘಟನೆಗೆ ಜನ ಮತ್ತು ನ್ಯಾಯಾಲಯದ ಬೆಂಬಲವಿದೆ.

Ad Widget
Click to comment

Leave a Reply

Uncategorized

Philomena-ಫಿಲೋಮಿನಾ ಪ.ಪೂ. ಕಾಲೇಜಿನಲ್ಲಿ ವೃತ್ತಿ ಮಾರ್ಗದರ್ಶನದ ಕುರಿತು ಮಾಹಿತಿ ಕಾರ್ಯಾಗಾರ

Published

on

Ad Widget

Ad Widget

Ad Widget

Ad Widget

ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜು ಹಾಗೂ ವೃತ್ತಿ ಮಾರ್ಗದರ್ಶನ ವಿಭಾಗದ ಆಶ್ರಯದಲ್ಲಿ ನ 20 ರಂದು  ಕಾಲೇಜು ಸಭಾಂಗಣದಲ್ಲಿ  ವೃತ್ತಿ ಮಾರ್ಗದರ್ಶನದ ಕುರಿತು ಮಾಹಿತಿ ಕಾರ್ಯಗಾರವು ನಡೆಯಿತು.

Ad Widget

Ad Widget

Ad Widget

Ad Widget

ಪುತ್ತೂರು: ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜು ಹಾಗೂ ವೃತ್ತಿ ಮಾರ್ಗದರ್ಶನ ವಿಭಾಗದ ಆಶ್ರಯದಲ್ಲಿ ನ 20 ರಂದು  ಕಾಲೇಜು ಸಭಾಂಗಣದಲ್ಲಿ  ವೃತ್ತಿ ಮಾರ್ಗದರ್ಶನದ ಕುರಿತು ಮಾಹಿತಿ ಕಾರ್ಯಗಾರವು ನಡೆಯಿತು.

Ad Widget

Ad Widget alt="Ad Widget"/>

Ad Widget

ಸಂಪನ್ಮೂಲ ವ್ಯಕ್ತಿಗಳಾಗಿ ಕೆನರಾ ಇಂಜಿನಿಯರಿಂಗ್ ಕಾಲೇಜಿನ ಉಪನ್ಯಾಸಕರಾದ ವಂದನ ಶಂಕರ್ ಮಾತನಾಡಿ, ಪಿ ಯು ಸಿ ನಂತರದ ಅವಕಾಶಗಳು, ಇಂಜಿನಿಯರಿಂಗ್ ವಿಭಾಗಗಳಲ್ಲಿ ಇರುವ ಉದ್ಯೋಗಾವಕಾಶಗಳ ಬಗ್ಗೆ ತಿಳಿಸಿದರು.

Ad Widget

Ad Widget <> Ad Widget

ಇನ್ನೋರ್ವ ಸಂಪನ್ಮೂಲ ವ್ಯಕ್ತಿಗಳಾದ ಚೇತನ್ ಮಾತನಾಡಿ, ಮಾದಕ ವಸ್ತುಗಳು ಹಾಗೂ ದೂಮಪಾನದ ವ್ಯಸನ ನಮ್ಮ ನೆನಪಿನ ಶಕ್ತಿಯನ್ನು ಕುಗ್ಗಿಸುತ್ತದೆ ಮತ್ತು ಕ್ಯಾನ್ಸರ್ ನಂತಹ ಮಾರಕ ರೋಗಗಳಿಗೆ ದಾರಿ ಮಾಡಿಕೊಡುತ್ತದೆ. ಹಾಗೆಯೇ ಸಾಮಾಜಿಕ ಜಾಲತಾಣಗಳ ಅತಿಯಾದ ಬಳಕೆ ನಮ್ಮ ಏಕಾಗ್ರತೆಯನ್ನು ಭಂಗ ಗೊಳಿಸುತ್ತದೆ ಎಂದು ಹೇಳಿದರು.

ವೃತ್ತಿ ಮಾರ್ಗದರ್ಶನ ವಿಭಾಗದ ನಿರ್ದೇಶಕರಾದ ರವಿಪ್ರಸಾದ್ ಬಿ. ಜಿ ನಿರಂಜನ್ ಜಿ. ಯು, ಕವಿತಾ ಕೆ ಹಾಗೂ ಕಾಲೇಜಿನ ಬೋಧಕ /ಬೋಧಕೇತರ ವರ್ಗ ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡರು.

Ad Widget

Ad Widget

ಕಾಲೇಜಿನ ವಿದ್ಯಾರ್ಥಿಗಳು ಪ್ರಾರ್ಥಿಸಿ, ವಿದ್ಯಾರ್ಥಿ ಮೊಹಮ್ಮದ್ ಶಯಾನ್ ಅಬ್ಬಾಸ್ ಸ್ವಾಗತಿಸಿ, ವಂದಿಸಿ,
ಕಾರ್ಯಕ್ರಮವನ್ನು ನಿರೂಪಿಸಿದರು.

Ad Widget
Continue Reading

Uncategorized

ಹಿರಿಯ ಸಹಕಾರಿ ಧುರೀಣ ಕೆ.ಕೆ. ನಾರಾಯಣ ಚಳ್ಳಂಗಾರು ನಿಧನ

Published

on

Ad Widget

Ad Widget

Ad Widget

Ad Widget

Ad Widget

Ad Widget

Ad Widget

Ad Widget

ಕಲ್ಮಡ್ಕ: ತಾಲೂಕಿನ ಹಿರಿಯ ಸಹಕಾರಿ ಧುರೀಣ, ಸಾಮಾಜಿಕ ಮುಖಂಡ, ಬಹುಮುಖ ಚಿಂತಕ ಕಲ್ಮಡ್ಕ ಗ್ರಾಮದ ಚಳ್ಳಂಗಾರು ಕೆ.ಕೆ. ನಾರಾಯಣ (88) ಅವರು ವಯೋಸಹಜ ಅನಾರೋಗ್ಯದಿಂದ ಗುರುವಾರ ಸಂಜೆ ನಿಧನರಾದರು.

Ad Widget

Ad Widget alt="Ad Widget"/>

Ad Widget

ಮಂಡಲ ಪಂಚಾಯತ್ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದ ಅವರು, ತಮ್ಮ ಅವಧಿಯಲ್ಲಿ ಗ್ರಾಮದಲ್ಲಿ ಅಭಿವೃದ್ಧಿಯ ಹೊಸ ಶಕೆಗೆ ನಾಂದಿ ಹಾಡಿದ್ದರು. ಕಲ್ಮಡ್ಕ ಸಹಕಾರಿ ಸಂಘದ ನಿರ್ದೇಶಕರಾಗಿ ಸಂಸ್ಥೆಯ ಬೆಳವಣಿಗೆಗೆ ಮಹತ್ವದ ಕೊಡುಗೆ ನೀಡಿದ್ದ ಅವರು, ಸಹಕಾರ ಕ್ಷೇತ್ರದಲ್ಲಿ ಅಪಾರ ಅನುಭವ ಹೊಂದಿದ್ದರು. ಪ್ರಗತಿಪರ ಕೃಷಿಕರಾಗಿಯೂ ಗುರುತಿಸಿಕೊಂಡಿದ್ದರು.

Ad Widget

Ad Widget <> Ad Widget

ಕಲ್ಮಡ್ಕ ಪ್ರಾಥಮಿಕ ಶಾಲೆಯ ಅಭಿವೃದ್ಧಿಗೆ ವಿಶೇಷ ಶ್ರಮ ವಹಿಸಿದ್ದ ಅವರು, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು. ಯಕ್ಷಗಾನದ ಅರ್ಥಧಾರಿಯಾಗಿ ಕಲಾ ಕ್ಷೇತ್ರದಲ್ಲಿಯೂ ಗುರುತಿಸಿಕೊಂಡಿದ್ದ ನಾರಾಯಣ ಅವರು, ಸಂಗಮ ಕಲಾ ಸಂಘದ ನಿರ್ದೇಶಕರಾಗಿ ಹಲವು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದರು. ಉತ್ತಮ ಓದುಗ ಹಾಗೂ ವಿಮರ್ಶಕರಾಗಿದ್ದ ಅವರು ಸಾಹಿತ್ಯ, ಕಲೆ, ಸಹಕಾರ ಮತ್ತು ಸಾಮಾಜಿಕ ಕ್ಷೇತ್ರಗಳಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದರು.

ಮೃತರು ಪತ್ನಿ ಸುಬ್ಬಮ್ಮ, ಪುತ್ರಿಯರಾದ ವಿದ್ಯಾ, ಜಯಶ್ರೀ, ದೀಪಿಕಾ, ಪುತ್ರ, ಕ್ಯಾಂಪ್ಕೋ ನಿರ್ದೇಶಕ ಹಾಗೂ ಬಿಜೆಪಿ ಮುಖಂಡ ನ್ಯಾಯವಾದಿ ಮುರಳಿಕೃಷ್ಣ ಚಳ್ಳಂಗಾರು, ಸೊಸೆ ರಮ್ಯಾ ಸೇರಿದಂತೆ ಅಪಾರ ಬಂಧುಮಿತ್ರರನ್ನು ಅಗಲಿದ್ದಾರೆ.

Continue Reading

Uncategorized

ನೆಲಪ್ಪಾಲು ವೀರಾಂಜನೇಯ ಕ್ಷೇತ್ರದಲ್ಲಿ ಪಂಚಮುಖಿ ಆಂಜನೇಯ ಹವನ- ಆಟೋ ರಿಕ್ಷಾಗಳಿಗೆ ಸ್ಟಿಕ್ಕ‌ರ್ ಅಭಿಯಾನಕ್ಕೆ ವಿಪಕ್ಷ ನಾಯಕ ಆರ್ ಅಶೋಕ್ ಚಾಲನೆ

Published

on

Ad Widget

Ad Widget

Ad Widget

Ad Widget

ಪುತ್ತೂರು: ಲೋಕಕಲ್ಯಾಣ ಹಾಗೂ ಹಿಂದೂ ಸಮಾಜದ ಏಕತೆಯ ಸಂಕಲ್ಪದೊಂದಿಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಥಮ ಬಾರಿಗೆ ಪುತ್ತೂರು ತಾಲೂಕಿನ ನೆಲಪ್ಪಾಲು ವೀರಾಂಜನೇಯ ಕ್ಷೇತ್ರದಲ್ಲಿ ನ.26ರಿಂದ 29ರವರೆಗೆ ನಡೆಯಲಿರುವ ಪಂಚಮುಖಿ ಆಂಜನೇಯ ಹವನದ ಪ್ರಚಾರಾರ್ಥ ಆಟೋ ರಿಕ್ಷಾಗಳಿಗೆ ಸ್ಟಿಕ್ಕ‌ರ್ ಅಭಿಯಾನಕ್ಕೆ ವಿಧಾನಸಭೆಯ ವಿರೋಧಪಕ್ಷದ ನಾಯಕ ಆ‌ರ್.ಅಶೋಕ್ ಅವರು ಚಾಲನೆ ನೀಡಿದರು.

Ad Widget

Ad Widget

Ad Widget

Ad Widget

ನ.19ರಂದು ಪುತ್ತೂರಿನಲ್ಲಿ ಖಾಸಗಿ ಕಾರ್ಯಕ್ರಮಕ್ಕೆ ಆಗಮಿಸಿದ ಅವರು ಪುತ್ತೂರು ಕೆ.ಎಸ್.ಆರ್.ಟಿ.ಸಿ ಬಸ್‌ ನಿಲ್ದಾಣದ ಬಳಿ ವೀರಾಂಜನೇಯ ಕ್ಷೇತ್ರದಲ್ಲಿ ನಡೆಯುವ ಪಂಚಮುಖಿ ಆಂಜನೇಯ ಹವನದ ಸ್ಟಿಕ್ಕರ್ ಅನ್ನು ಆಟೋ ರಿಕ್ಷಾಗಳಿಗೆ ಅಂಟಿಸುವ ಮೂಲಕ ಚಾಲನೆ ನೀಡಿ ಕಾರ್ಯಕ್ರಮಕ್ಕೆ ಯಶಸ್ಸು ಕೋರಿದರು.

Ad Widget

Ad Widget alt="Ad Widget"/>

Ad Widget

ಆಟೋ ರಿಕ್ಷಾಗಳ ಎದುರಿನ ಮತ್ತು ಹಿಂಬದಿಯ ಭಾಗಕ್ಕೆ ತಾವೆ ಸ್ವತಃ ಸ್ಟಿಕ್ಕರ್ ಅಂಟಿಸಿ ಎಲ್ಲರೂ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಮನವಿ ಮಾಡಿದರು.

Ad Widget

Ad Widget <> Ad Widget

ಈ ಸಂದರ್ಭ ಮಾಜಿ ಶಾಸಕ ಸಂಜೀವ ಮಠಂದೂರು, ಪಂಚಮುಖಿ ಆಂಜನೇಯ ಯಾಗ ಸಮಿತಿ ಪ್ರಧಾನ ಕಾರ್ಯದರ್ಶಿ ಮುರಳಿಕೃಷ್ಣ ಹಸಂತಡ್ಕ, ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್‌ ಕುಂಪಲ, ಬಿಜೆಪಿ ಗ್ರಾಮಾಂತರ ಮಂಡಲದ ಅಧ್ಯಕ್ಷ ದಯಾನಂದ ಶೆಟ್ಟಿ ಉಜಿರೆಮಾರು, ಪ್ರಧಾನ ಕಾರ್ಯದರ್ಶಿ ಸುನಿಲ್ ದಡ್ಡು, ಯಾಗ ಸಮಿತಿಯ ಪ್ರಮುಖರಾದ ಶ್ಯಾಮ ಸುದರ್ಶನ್ ಹೊಸಮೂಲೆ, ಜಯಂತ ಶೆಟ್ಟಿ ಕಂಬಳತ್ತಡ್ಕ, ಶ್ರೀಧ‌ರ್ ತೆಂಕಿಲ ಸಹಿತ ಆಟೋ ರಿಕ್ಷಾ ಚಾಲಕರು ಮತ್ತು ಮಾಲಕರು ಉಪಸ್ಥಿತರಿದ್ದರು.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!