ನಿಧನ ವಾರ್ತೆ
Mathura-ಕ್ಯಾನ್ಸರ್ ವಿರುದ್ಧ ಗೆದ್ದರೂ ಮಗನ ಕೈಯಿಂದಲೇ ಗುಂಡೇಟಿಗೆ ಹತ್ಯೆಯಾದ ಸಾವಿರಾರು ಕೋಟಿ ಒಡೆಯ ‘ದಿನೇಶ್ 555’ ಬೀಡಿ ಮಾಲಕ : ಪುತ್ರನೂ ಗುಂಡು ಹಾರಿಸಿಕೊಂಡು ಆತ್ಮಹತ್ಯೆ..!
ಉತ್ತರ ಪ್ರದೇಶದ ಮಥುರಾದಲ್ಲಿ ದೀನೇಶ್ 555 ಬೀಡಿ ಮಾಲೀಕ ಸುರೇಶ್ ಚಂದ್ ಅಗರ್ವಾಲ್ ಮತ್ತು ಅವರ ಪುತ್ರ ನರೇಶ್ ಅಗರ್ವಾಲ್ ಅವರ ದಾರುಣ ಸಾವಿನಿಂದ ಇಡೀ ನಗರವೇ ಆಘಾತಕ್ಕೊಳಗಾಗಿದೆ. ಸಣ್ಣ ಕೌಟುಂಬಿಕ ಕಲಹವೊಂದು ಇಬ್ಬರ ಜೀವವನ್ನು ಬಲಿ ತೆಗೆದುಕೊಂಡಿದ್ದು, ದುರಂತ ಘಟನೆಗೆ ಕಾರಣವಾಗಿದೆ.
ಉತ್ತರ ಪ್ರದೇಶದ ಮಥುರಾದಲ್ಲಿ ದೀನೇಶ್ 555 ಬೀಡಿ ಮಾಲೀಕ ಸುರೇಶ್ ಚಂದ್ ಅಗರ್ವಾಲ್ ಮತ್ತು ಅವರ ಪುತ್ರ ನರೇಶ್ ಅಗರ್ವಾಲ್ ಅವರ ದಾರುಣ ಸಾವಿನಿಂದ ಇಡೀ ನಗರವೇ ಆಘಾತಕ್ಕೊಳಗಾಗಿದೆ. ಸಣ್ಣ ಕೌಟುಂಬಿಕ ಕಲಹವೊಂದು ಇಬ್ಬರ ಜೀವವನ್ನು ಬಲಿ ತೆಗೆದುಕೊಂಡಿದ್ದು, ದುರಂತ ಘಟನೆಗೆ ಕಾರಣವಾಗಿದೆ.
ವೃಂದಾವನ ಕೊತ್ವಾಲಿ ಪೊಲೀಸ್ ಠಾಣೆ ವ್ಯಾಪ್ತಿಯ ಗೋರಾ ನಗರದಲ್ಲಿ ಶುಕ್ರವಾರ ತಂದೆ ಸುರೇಶ್ ಚಂದ್ ಮತ್ತು ಪುತ್ರ ನರೇಶ್ ನಡುವೆ ಮದ್ಯಪಾನದ ವಿಷಯಕ್ಕೆ ಸಂಬಂಧಿಸಿದಂತೆ ಜಗಳ ಪ್ರಾರಂಭವಾಗಿದೆ. ನರೇಶ್ ಮದ್ಯ ಸೇವಿಸಲು ಮುಂದಾದಾಗ, ಸುರೇಶ್ ಅವರು ಇದನ್ನು ವಿರೋಧಿಸಿದ್ದಾರೆ. ಜಗಳ ವಿಕೋಪಕ್ಕೆ ತಿರುಗಿದಾಗ, ನರೇಶ್ ತನ್ನ ಸರ್ವಿಸ್ ರಿವಾಲ್ವರ್ನಿಂದ ತಂದೆಗೆ ಗುಂಡು ಹಾರಿಸಿದ್ದಾನೆ. ನಂತರ, ಆಘಾತಕ್ಕೊಳಗಾದ ನರೇಶ್, ಅದೇ ರಿವಾಲ್ವರ್ನಿಂದ ತನ್ನ ಹಣೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಕ್ಯಾನ್ಸರ್ ವಿರುದ್ಧ ಹೋರಾಡಿ ಗೆದ್ದಿದ್ದ ಸುರೇಶ್ ಅಗರ್ವಾಲ್ ಅವರು ಇತ್ತೀಚೆಗೆ ಸಂಪೂರ್ಣವಾಗಿ ಗುಣಮುಖರಾಗಿದ್ದರು. ಆದರೆ, ಪುತ್ರನ ಮದ್ಯದ ಚಟದಿಂದ ಅಕಾಲಿಕ ಮರಣವಪ್ಪಿದರು. ಪುತ್ರ ನರೇಶ್ ಕುಡಿತಕ್ಕೆ ದಾಸನಾಗಿದ್ದ ಎಂದು ತಿಳಿದುಬಂದಿದೆ.
ಶನಿವಾರ ತಂದೆ ಮತ್ತು ಮಗನ ಅಂತ್ಯಕ್ರಿಯೆಯನ್ನು ಮಥುರಾದ ಗೋರಾ ನಗರದಲ್ಲಿ ನಡೆಸಲಾಯಿತು. ಸಾವಿರಾರು ಜನರು ಈ ದುಃಖಕರ ಕಾರ್ಯದಲ್ಲಿ ಭಾಗವಹಿಸಿದ್ದರು. ಯಶಸ್ವಿ ಉದ್ಯಮಿಯೊಬ್ಬರ ಜೀವನ ಹೀಗೆ ದುರಂತವಾಗಿ ಅಂತ್ಯಗೊಂಡಿರುವುದು ಎಲ್ಲರನ್ನೂ ಚಿಂತೆಗೀಡು ಮಾಡಿದೆ.
ಹಿಟ್ಟಿನ ಗಿರಣಿಯಿಂದ ಸಾವಿರಾರು ಕೋಟಿ ಮೌಲ್ಯದ ಬೀಡಿ ಸಾಮ್ರಾಜ್ಯದವರೆಗೆ
ಸುರೇಶ್ ಅಗರ್ವಾಲ್ ಅವರ ಜೀವನವು ಒಂದು ಸಾಧನೆಯ ಕಥೆಯಾಗಿತ್ತು. 1977ರಲ್ಲಿ ಅವರು ಬೀಡಿ ಉದ್ಯಮವನ್ನು ಪ್ರಾರಂಭಿಸುವ ಮೊದಲು ಹಿಟ್ಟಿನ ಗಿರಣಿಯನ್ನು ನಡೆಸುತ್ತಿದ್ದರು. ಅಲ್ಲಿಂದಲೇ ತಮ್ಮ ವಾಣಿಜ್ಯ ಪಯಣವನ್ನು ಪ್ರಾರಂಭಿಸಿದ ಅವರು, ನೂರಾರು ಜನರಿಗೆ ಉದ್ಯೋಗ ನೀಡಿದರು.
ನಂತರ, ದೀನೇಶ್ ಬೀಡಿ ಕಂಪನಿಯನ್ನು ಸ್ಥಾಪಿಸಿ, ತಮ್ಮ ವ್ಯಾಪಾರವನ್ನು ಬಿಹಾರ, ಜಾರ್ಖಂಡ್, ಮಧ್ಯಪ್ರದೇಶ ಮತ್ತು ಉತ್ತರ ಪ್ರದೇಶದ ಹಲವು ರಾಜ್ಯಗಳಿಗೆ ವಿಸ್ತರಿಸಿದರು. ಆರಂಭದಲ್ಲಿ, ಅವರು ಬೀಡಿ ಎಲೆಗಳನ್ನು ಸಂಗ್ರಹಿಸಲು ಶಿವಪುರಿಯ ಕಾಡುಗಳಿಗೆ ಹೋಗುತ್ತಿದ್ದರು. ಅವರ ಪರಿಶ್ರಮದಿಂದ, ಈ ಉದ್ಯಮವು ಸಾವಿರಾರು ಕೋಟಿ ಮೌಲ್ಯದ ಸಾಮ್ರಾಜ್ಯವಾಗಿ ಬೆಳೆಯಿತು. ಆದರೆ, ಅವರ ಪುತ್ರನ ದುಶ್ಚಟದಿಂದ ಇಂತಹ ಯಶಸ್ವಿ ವ್ಯಕ್ತಿಯ ಜೀವನ ದುರಂತದಲ್ಲಿ ಮುಕ್ತಾಯಗೊಂಡಿರುವುದು ನಿಜಕ್ಕೂ ವಿಪರ್ಯಾಸ.
ನಿಧನ ವಾರ್ತೆ
One-sided love-ಇನ್ಸ್ಟಾಗ್ರಾಮ್ ಇನ್ಫ್ಲುಯೆನ್ಸರ್ ಮೇಲಿನ ಒನ್ಸೈಡೆಡ್ ಲವ್; ಹಲ್ಲೆಗೊಳಗಾದ ಯುವಕ ಸಾವು
ಸೋಶಿಯಲ್ ಮೀಡಿಯಾದಲ್ಲಿ ಖ್ಯಾತಿ ಪಡೆದಿದ್ದ ಮಹಿಳಾ ಇನ್ಫ್ಲುಯೆನ್ಸರ್ ಮೇಲಿನ ಏಕಪಕ್ಷೀಯ ಪ್ರೀತಿಯ ಹಿನ್ನೆಲೆಯಲ್ಲಿ ಯುವಕನೊಬ್ಬನ ದುರಂತ ಅಂತ್ಯವಾಗಿರುವ ಘಟನೆ ದೆಹಲಿಯಲ್ಲಿ ನಡೆದಿದೆ. ಇನ್ಸ್ಟಾಗ್ರಾಮ್ನಲ್ಲಿ 6 ಲಕ್ಷಕ್ಕೂ ಅಧಿಕ ಫಾಲೋವರ್ಸ್ ಹೊಂದಿರುವ ಕಂಟೆಂಟ್ ಕ್ರಿಯೇಟರ್ ನೇಹಾ ಬಿಷ್ಟ್ ಅವರ ಮನೆಯಲ್ಲೇ ಈ ಘಟನೆ ನಡೆದಿದೆ.
ನವದೆಹಲಿ: ಸೋಶಿಯಲ್ ಮೀಡಿಯಾದಲ್ಲಿ ಖ್ಯಾತಿ ಪಡೆದಿದ್ದ ಮಹಿಳಾ ಇನ್ಫ್ಲುಯೆನ್ಸರ್ ಮೇಲಿನ ಏಕಪಕ್ಷೀಯ ಪ್ರೀತಿಯ ಹಿನ್ನೆಲೆಯಲ್ಲಿ ಯುವಕನೊಬ್ಬನ ದುರಂತ ಅಂತ್ಯವಾಗಿರುವ ಘಟನೆ ದೆಹಲಿಯಲ್ಲಿ ನಡೆದಿದೆ. ಇನ್ಸ್ಟಾಗ್ರಾಮ್ನಲ್ಲಿ 6 ಲಕ್ಷಕ್ಕೂ ಅಧಿಕ ಫಾಲೋವರ್ಸ್ ಹೊಂದಿರುವ ಕಂಟೆಂಟ್ ಕ್ರಿಯೇಟರ್ ನೇಹಾ ಬಿಷ್ಟ್ ಅವರ ಮನೆಯಲ್ಲೇ ಈ ಘಟನೆ ನಡೆದಿದೆ.
ನೇಹಾ ಬಿಷ್ಟ್ ಇತ್ತೀಚೆಗೆ ತಮ್ಮ ನಿಶ್ಚಿತಾರ್ಥ ಹಾಗೂ ಮುಂಬರುವ ವಿವಾಹದ ಸಿದ್ಧತೆಗಳ ಕುರಿತು ಇನ್ಸ್ಟಾಗ್ರಾಮ್ ಮತ್ತು ಯೂಟ್ಯೂಬ್ನಲ್ಲಿ ನಿರಂತರವಾಗಿ ವಿಡಿಯೋಗಳನ್ನು ಹಂಚಿಕೊಳ್ಳುತ್ತಿದ್ದರು. ಈ ವಿಚಾರದಿಂದ ಅಸಮಾಧಾನಗೊಂಡಿದ್ದ ಉತ್ತರ ಪ್ರದೇಶದ ಗಾಜಿಪುರ ಮೂಲದ ಅಭಿನವ್ ಎಂಬ ಯುವಕ ಚೆನ್ನೈನಿಂದ ದೆಹಲಿಗೆ ಬಂದಿದ್ದಾನೆ.
ಚೆನ್ನೈನ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಅಭಿನವ್, ನವೆಂಬರ್ 7ರಂದು ಪೂರ್ವ ದೆಹಲಿಯ ಮಧು ವಿಹಾರ್ನಲ್ಲಿರುವ ನೇಹಾ ಬಿಷ್ಟ್ ಅವರ ಮನೆಗೆ ಬಲವಂತವಾಗಿ ಪ್ರವೇಶಿಸಿದ್ದಾನೆ. ಈ ವೇಳೆ ನೇಹಾ ಅವರನ್ನೇ ಮದುವೆಯಾಗಬೇಕೆಂದು ಪಟ್ಟು ಹಿಡಿದು ಗಲಾಟೆ ನಡೆಸಿದ್ದಾನೆ ಎನ್ನಲಾಗಿದೆ. ಮರುದಿನ ದಾಖಲಾದ ಎಫ್ಐಆರ್ನಲ್ಲಿ ಆತ ಮದ್ಯಪಾನ ಮಾಡಿದ್ದನೆಂದು ಉಲ್ಲೇಖಿಸಲಾಗಿದೆ.
ಯುವಕನ ವರ್ತನೆಯಿಂದ ಆಕ್ರೋಶಗೊಂಡ ನೇಹಾ ಅವರ ಕುಟುಂಬದ ಸದಸ್ಯರು ಹಾಗೂ ಕೆಲವು ನೆರೆಹೊರೆಯವರು ಆತನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಪೊಲೀಸರು ಬೆನ್ನು ಹಾಗೂ ಬಲಗಾಲಿಗೆ ಗಂಭೀರ ಗಾಯಗಳಾಗಿ ರಕ್ತಸ್ರಾವವಾಗುತ್ತಿದ್ದ ಅಭಿನವ್ನನ್ನು ತಕ್ಷಣ ರಾಜೀವ್ ಗಾಂಧಿ ಆಸ್ಪತ್ರೆಗೆ ದಾಖಲಿಸಿದ್ದರು.
ಸುಮಾರು ಒಂದು ವಾರ ಕಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅಭಿನವ್, ಚಿಕಿತ್ಸೆ ಫಲಕಾರಿಯಾಗದೆ ನವೆಂಬರ್ 15ರಂದು ಮೃತಪಟ್ಟಿದ್ದಾನೆ.
ಪೊಲೀಸರ ತನಿಖೆಯ ವೇಳೆ ಅಭಿನವ್ ನಿರಂತರವಾಗಿ ನೇಹಾ ಬಿಷ್ಟ್ ಅವರ ವಿಡಿಯೋಗಳನ್ನು ವೀಕ್ಷಿಸುತ್ತಿದ್ದು, ಅವರ ಮೇಲೆ ಏಕಪಕ್ಷೀಯ ಪ್ರೀತಿ ಬೆಳೆಸಿಕೊಂಡಿದ್ದ ಎಂಬ ವಿಚಾರ ಬೆಳಕಿಗೆ ಬಂದಿದೆ ಎನ್ನಲಾಗಿದೆ. ಕೆಲವು ತಿಂಗಳ ಹಿಂದೆಯೂ ಅಭಿಮಾನಿಯ ಸೋಗಿನಲ್ಲಿ ನೇಹಾ ಅವರ ಮನೆಗೆ ಭೇಟಿ ನೀಡಿದ್ದ ಎಂದು ತಿಳಿದುಬಂದಿದೆ.
ನೇಹಾ ಬೇರೊಬ್ಬರೊಂದಿಗೆ ವಿವಾಹವಾಗುತ್ತಿರುವ ವಿಚಾರ ತಿಳಿದ ಬಳಿಕ ಅಭಿನವ್ ಅಸಮಾಧಾನಗೊಂಡಿದ್ದ ಎನ್ನಲಾಗಿದೆ. ಆದರೆ, ಅಭಿನವ್ ಯಾರೆಂಬುದೇ ನೇಹಾ ಅವರಿಗೆ ತಿಳಿದಿರಲಿಲ್ಲ ಎಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ.
ಯುವಕನ ಸಾವಿನ ಹಿನ್ನೆಲೆಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ನೇಹಾ ಬಿಷ್ಟ್ ಅವರ ತಂದೆ ವೀರೇಂದ್ರ ಬಿಷ್ಟ್ ಹಾಗೂ ಓರ್ವ ನೆರೆಹೊರೆಯ ವ್ಯಕ್ತಿಯನ್ನು ಬಂಧಿಸಿದ್ದಾರೆ. ಪ್ರಕರಣದಲ್ಲಿ ಭಾಗಿಯಾಗಿರುವ ಇತರ ಆರೋಪಿಗಳ ಪತ್ತೆಗಾಗಿ ಪೊಲೀಸರು ತನಿಖೆ ಮುಂದುವರಿಸಿದ್ದು, ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದಾರೆ.
ನಿಧನ ವಾರ್ತೆ
Mudbidri-ಮಂಗಳೂರಿನಲ್ಲಿ ಮೇಲ್ಛಾವಣಿ ಕೆಲಸದ ವೇಳೆ ಅವಘಡ: ಮೂಡುಬಿದಿರೆ ತಾ.ಪಂ. ಮಾಜಿ ಉಪಾಧ್ಯಕ್ಷ ಸಾವು
ಮೂಡುಬಿದಿರೆ ತಾಲೂಕು ಪಂಚಾಯತ್ನ ಮಾಜಿ ಉಪಾಧ್ಯಕ್ಷ ಸಂತೋಷ್ ಅವರು ಮಂಗಳೂರಿನಲ್ಲಿ ಮನೆಯ ಮೇಲ್ಛಾವಣಿಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಆಯತಪ್ಪಿ ಕೆಳಗೆ ಬಿದ್ದು ಮೃತಪಟ್ಟಿದ್ದಾರೆ. ಗುರುವಾರ ಸಂಭವಿಸಿದ ಈ ದುರಂತ ಘಟನೆ ದುಃಖಕ್ಕೆ ಕಾರಣವಾಗಿದೆ.
ಮೂಡುಬಿದಿರೆ, ನ.20: ಮೂಡುಬಿದಿರೆ ತಾಲೂಕು ಪಂಚಾಯತ್ನ ಮಾಜಿ ಉಪಾಧ್ಯಕ್ಷ ಸಂತೋಷ್ ಅವರು ಮಂಗಳೂರಿನಲ್ಲಿ ಮನೆಯ ಮೇಲ್ಛಾವಣಿಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಆಯತಪ್ಪಿ ಕೆಳಗೆ ಬಿದ್ದು ಮೃತಪಟ್ಟಿದ್ದಾರೆ. ಗುರುವಾರ ಸಂಭವಿಸಿದ ಈ ದುರಂತ ಘಟನೆ ದುಃಖಕ್ಕೆ ಕಾರಣವಾಗಿದೆ.
ಮೂಡುಬಿದಿರೆ ತಾಲೂಕಿನ ಬೆಳುವಾಯಿ ನಿವಾಸಿಯಾಗಿದ್ದ ಸಂತೋಷ್ ಅವರು ಬೆಳುವಾಯಿ ಕ್ಷೇತ್ರದಿಂದ ತಾಲೂಕು ಪಂಚಾಯತ್ ಸದಸ್ಯರಾಗಿ ಆಯ್ಕೆಯಾಗಿದ್ದರು. ಹೊಸದಾಗಿ ರಚನೆಯಾಗಿದ್ದ ಮೂಡುಬಿದಿರೆ ತಾಲೂಕು ಪಂಚಾಯತ್ನ ಮೊದಲ ಅವಧಿಯಲ್ಲಿ ಉಪಾಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು.
ಸಂತೋಷ್ ಅವರು ಪ್ರತಿದಿನ ಕೆಲಸದ ನಿಮಿತ್ತ ಮಂಗಳೂರಿಗೆ ತೆರಳುತ್ತಿದ್ದರು. ಗುರುವಾರ ಬೇರೆ ಸ್ಥಳದಲ್ಲಿ ಬದಲಿ ಕೆಲಸಗಾರನಾಗಿ ಕೆಲಸಕ್ಕೆ ತೆರಳಿದ್ದ ಅವರು, ಮನೆಯೊಂದರ ಮೇಲ್ಛಾವಣಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ ಕೆಳಕ್ಕೆ ಬಿದ್ದಿದ್ದಾರೆ ಎನ್ನಲಾಗಿದೆ.
ಘಟನೆಯಲ್ಲಿ ಗಂಭೀರ ಗಾಯಗೊಂಡ ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ.
ನಿಧನ ವಾರ್ತೆ
Heart attack-ಸಾಲಿಗ್ರಾಮ: ಕಚೇರಿಯಲ್ಲೇ ಹೃದಯಾಘಾತ; ಬಹುಮುಖ ಪ್ರತಿಭೆ ದಿನೇಶ್ ಹೊಳ್ಳ ನಿಧನ
ಫೋಟೋಗ್ರಫಿ, ಕಂಪ್ಯೂಟರ್ ತಂತ್ರಜ್ಞಾನ, ವೆಬ್ಡಿಸೈನಿಂಗ್ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಪರಿಣತಿ ಹೊಂದಿದ್ದ ಸಾಲಿಗ್ರಾಮದ ಬಹುಮುಖ ಪ್ರತಿಭೆ ದಿನೇಶ್ ಹೊಳ್ಳ (52) ಅವರು ಗುರುವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ.
ಸಾಲಿಗ್ರಾಮ: ಫೋಟೋಗ್ರಫಿ, ಕಂಪ್ಯೂಟರ್ ತಂತ್ರಜ್ಞಾನ, ವೆಬ್ಡಿಸೈನಿಂಗ್ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಪರಿಣತಿ ಹೊಂದಿದ್ದ ಸಾಲಿಗ್ರಾಮದ ಬಹುಮುಖ ಪ್ರತಿಭೆ ದಿನೇಶ್ ಹೊಳ್ಳ (52) ಅವರು ಗುರುವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ.
ಗುರುವಾರ ಬೆಳಿಗ್ಗೆ ಸಾಲಿಗ್ರಾಮದಲ್ಲಿರುವ ತಮ್ಮ ಕಚೇರಿಯಲ್ಲಿ ಕುಳಿತಿದ್ದ ವೇಳೆ ಅವರಿಗೆ ತೀವ್ರ ಹೃದಯಾಘಾತ ಸಂಭವಿಸಿದ್ದು, ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ. ಅವರ ಅಕಾಲಿಕ ನಿಧನದ ಸುದ್ದಿ ಬಂಧುಮಿತ್ರರು ಹಾಗೂ ಸ್ಥಳೀಯರಲ್ಲಿ ತೀವ್ರ ದುಃಖಕ್ಕೆ ಕಾರಣವಾಗಿದೆ.
ದಿನೇಶ್ ಹೊಳ್ಳ ಅವರು ಫೋಟೋಗ್ರಫಿ, ಕಂಪ್ಯೂಟರ್ ತಂತ್ರಜ್ಞಾನ, ವೆಬ್ಡಿಸೈನಿಂಗ್, ವ್ಯಂಗ್ಯಚಿತ್ರ ರಚನೆ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ತಮ್ಮ ಪ್ರತಿಭೆ ಹಾಗೂ ಪರಿಣತಿಯಿಂದ ಗುರುತಿಸಿಕೊಂಡಿದ್ದರು. ಇದರ ಜೊತೆಗೆ ಚಪ್ಪಲಿ ಉದ್ಯಮದಲ್ಲಿಯೂ ತೊಡಗಿಸಿಕೊಂಡು ಹಲವು ಕ್ಷೇತ್ರಗಳಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದರು.
ಬಹುಮುಖ ಪ್ರತಿಭೆ ಹಾಗೂ ವಿವಿಧ ಕ್ಷೇತ್ರಗಳ ಜ್ಞಾನ ಹೊಂದಿದ್ದ ಅವರು ಸ್ನೇಹಜೀವಿಯಾಗಿದ್ದು, ಎಲ್ಲರೊಂದಿಗೆ ಆತ್ಮೀಯ ಒಡನಾಟ ಹೊಂದಿದ್ದರು.















