Connect with us

ಅಂತರ ರಾಜ್ಯ

Anil Ambani-ಅನಿಲ್ ಅಂಬಾನಿಯಿಂದ ಅಕ್ರಮ ಹಣ ವರ್ಗಾವಣೆ : 3 ಸಾವಿರ ಕೋಟಿ ಆಸ್ತಿ ಮುಟ್ಟುಗೋಲು

Published

on



Ad Widget

Ad Widget

Ad Widget

Ad Widget

ರಿಲಯನ್ಸ್ ಗ್ರೂಪ್ ಅಧ್ಯಕ್ಷ ಅನಿಲ್ ಅಂಬಾನಿ ಅವರ ಕಂಪನಿಗಳ ವಿರುದ್ಧದ ಹಣ ವರ್ಗಾವಣೆ ತನಿಖೆಯ ಭಾಗವಾಗಿ ಜಾರಿ ನಿರ್ದೇಶನಾಲಯ (ED) 3,000 ಕೋಟಿ ರೂ.ಗಳಿಗೂ ಹೆಚ್ಚಿನ ಮೌಲ್ಯದ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಂಡಿದೆ. ಪಿಟಿಐ ವರದಿಯ ಪ್ರಕಾರ, ಇ.ಡಿ ಈ ಕುರಿತು ನಾಲ್ಕು ತಾತ್ಕಾಲಿಕ ಆದೇಶಗಳನ್ನು ಹೊರಡಿಸಿದೆ.

Ad Widget

Ad Widget

Ad Widget

Ad Widget

ನವದೆಹಲಿ: ರಿಲಯನ್ಸ್ ಗ್ರೂಪ್ ಅಧ್ಯಕ್ಷ ಅನಿಲ್ ಅಂಬಾನಿ ಅವರ ಕಂಪನಿಗಳ ವಿರುದ್ಧದ ಹಣ ವರ್ಗಾವಣೆ ತನಿಖೆಯ ಭಾಗವಾಗಿ ಜಾರಿ ನಿರ್ದೇಶನಾಲಯ (ED) 3,000 ಕೋಟಿ ರೂ.ಗಳಿಗೂ ಹೆಚ್ಚಿನ ಮೌಲ್ಯದ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಂಡಿದೆ. ಪಿಟಿಐ ವರದಿಯ ಪ್ರಕಾರ, ಇ.ಡಿ ಈ ಕುರಿತು ನಾಲ್ಕು ತಾತ್ಕಾಲಿಕ ಆದೇಶಗಳನ್ನು ಹೊರಡಿಸಿದೆ.

Ad Widget

Ad Widget

Ad Widget alt="Ad Widget"/>

Ad Widget

ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆ (PMLA) ಅಡಿಯಲ್ಲಿ ಮುಟ್ಟುಗೋಲು ಹಾಕಿಕೊಂಡಿರುವ ಆಸ್ತಿಗಳಲ್ಲಿ ಮುಂಬೈನ ಪಾಲಿ ಹಿಲ್‌ನಲ್ಲಿರುವ ಅನಿಲ್ ಅಂಬಾನಿ ಅವರ ಮನೆ, ಅವರ ಸಮೂಹ ಕಂಪನಿಗಳಿಗೆ ಸೇರಿದ ಇತರ ವಸತಿ ಮತ್ತು ವಾಣಿಜ್ಯ ಆಸ್ತಿಗಳು ಸೇರಿವೆ.

Ad Widget

Ad Widget <> Ad Widget

ಇದಲ್ಲದೆ, ದೆಹಲಿಯ ಮಹಾರಾಜ ರಂಜಿತ್ ಸಿಂಗ್ ಮಾರ್ಗದಲ್ಲಿರುವ ರಿಲಯನ್ಸ್ ಸೆಂಟರ್‌ಗೆ ಸೇರಿದ ಭೂಮಿ, ಮತ್ತು ರಾಷ್ಟ್ರ ರಾಜಧಾನಿ ಪ್ರದೇಶದ ನೋಯ್ಡಾ, ಗಾಜಿಯಾಬಾದ್, ಮುಂಬೈ, ಪುಣೆ, ಥಾಣೆ, ಹೈದರಾಬಾದ್, ಚೆನ್ನೈ ಹಾಗೂ ಪೂರ್ವ ಗೋದಾವರಿಯಲ್ಲಿರುವ ಹಲವು ಇತರೆ ಆಸ್ತಿಗಳನ್ನೂ ಇ.ಡಿ ವಶಕ್ಕೆ ಪಡೆದಿದೆ. ಈ ಕ್ರಮವು ಅಂಬಾನಿ ಸಮೂಹದ ವಿರುದ್ಧ ನಡೆಯುತ್ತಿರುವ ಹಣ ವರ್ಗಾವಣೆ ತನಿಖೆಯ ಮಹತ್ವದ ಭಾಗವಾಗಿದೆ.



Ad Widget
Ad Widget
Click to comment

Leave a Reply

ಅಂತರ ರಾಜ್ಯ

ಕಾಸರಗೋಡು: ಆರ್‌ಎಸ್‌ಎಸ್‌ ವಕ್ತಾರರ ಭಾಗವಹಿಸುವಿಕೆ ವಿರೋಧಿಸಿ ಪ್ರತಿಭಟನೆ; ಘರ್ಷಣೆಯಲ್ಲಿ ಮೂವರು ವಿದ್ಯಾರ್ಥಿಗಳಿಗೆ ಗಾಯ

Published

on



Ad Widget

Ad Widget

Ad Widget

Ad Widget

ವಂದೇ ಮಾತರಂನ 150ನೇ ವಾರ್ಷಿಕೋತ್ಸವದ ಅಂಗವಾಗಿ ಕೇರಳ ಕೇಂದ್ರ ವಿಶ್ವವಿದ್ಯಾಲಯದಲ್ಲಿ ನಡೆಯುತ್ತಿರುವ ಎರಡು ದಿನಗಳ ರಾಷ್ಟ್ರೀಯ ವಿಚಾರಸಂಕಿರಣದಲ್ಲಿ ಆರ್‌ಎಸ್‌ಎಸ್‌ಗೆ ಸಂಬಂಧಿಸಿದ ವಕ್ತಾರರು ಭಾಗವಹಿಸಿರುವುದನ್ನು ವಿರೋಧಿಸಿ ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆ ನಡೆಸಿವೆ. ಈ ವೇಳೆ ಪೊಲೀಸರು ಹಾಗೂ ವಿದ್ಯಾರ್ಥಿಗಳ ನಡುವೆ ನಡೆದ ಘರ್ಷಣೆಯಲ್ಲಿ ಮೂವರು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ.

Ad Widget

Ad Widget

Ad Widget

Ad Widget

ಕಾಸರಗೋಡು, ಅ.6: ವಂದೇ ಮಾತರಂನ 150ನೇ ವಾರ್ಷಿಕೋತ್ಸವದ ಅಂಗವಾಗಿ ಕೇರಳ ಕೇಂದ್ರ ವಿಶ್ವವಿದ್ಯಾಲಯದಲ್ಲಿ ನಡೆಯುತ್ತಿರುವ ಎರಡು ದಿನಗಳ ರಾಷ್ಟ್ರೀಯ ವಿಚಾರಸಂಕಿರಣದಲ್ಲಿ ಆರ್‌ಎಸ್‌ಎಸ್‌ಗೆ ಸಂಬಂಧಿಸಿದ ವಕ್ತಾರರು ಭಾಗವಹಿಸಿರುವುದನ್ನು ವಿರೋಧಿಸಿ ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆ ನಡೆಸಿವೆ. ಈ ವೇಳೆ ಪೊಲೀಸರು ಹಾಗೂ ವಿದ್ಯಾರ್ಥಿಗಳ ನಡುವೆ ನಡೆದ ಘರ್ಷಣೆಯಲ್ಲಿ ಮೂವರು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಸಾಹಿತ್ಯ ಅಕಾಡೆಮಿ, ಅಖಿಲ ಭಾರತೀಯ ಸಾಹಿತ್ಯ ಪರಿಷತ್ ಹಾಗೂ ಕೇರಳ ಕೇಂದ್ರ ವಿಶ್ವವಿದ್ಯಾಲಯದ ಸಹಯೋಗದಲ್ಲಿ ಈ ವಿಚಾರಸಂಕಿರಣ ಆಯೋಜಿಸಲಾಗಿದೆ. ಆರ್‌ಎಸ್‌ಎಸ್‌ನ ಬೌದ್ಧಿಕ ವಿಭಾಗವೆಂದು ಪರಿಗಣಿಸಲಾಗುವ ಪ್ರಜ್ಞಾ ಪ್ರವಾಹದ ರಾಷ್ಟ್ರೀಯ ಸಂಚಾಲಕ ಜೆ. ನಂದಕುಮಾರ್ ಅವರು ವಿಚಾರಸಂಕಿರಣದಲ್ಲಿ ಮುಖ್ಯ ಭಾಷಣ ಮಾಡುತ್ತಿರುವುದನ್ನು ವಿರೋಧಿಸಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.

Ad Widget

Ad Widget <> Ad Widget

ಕಾರ್ಯಕ್ರಮ ನಡೆಯುತ್ತಿದ್ದ ಗ್ರಂಥಾಲಯಕ್ಕೆ ವಿದ್ಯಾರ್ಥಿಗಳು ಪ್ರವೇಶಿಸಲು ಯತ್ನಿಸಿದಾಗ ಪೊಲೀಸರು ಅವರನ್ನು ತಡೆದರು. ಈ ವೇಳೆ ಪೊಲೀಸರು ಮತ್ತು ವಿದ್ಯಾರ್ಥಿಗಳ ನಡುವೆ ಘರ್ಷಣೆ ಸಂಭವಿಸಿದೆ.



Ad Widget

ಘರ್ಷಣೆಯಲ್ಲಿ ಎಸ್‌ಎಫ್‌ಐ ಕೇರಳ ಕೇಂದ್ರ ವಿಶ್ವವಿದ್ಯಾಲಯ ಘಟಕದ ಕಾರ್ಯದರ್ಶಿ ಸೈಯದ್ ಅಲಿ, ಪ್ಲಾಂಟ್ ಸೈನ್ಸ್ ವಿಭಾಗದ ಅಭಿರಾಗ್ ಹಾಗೂ ಇಂಟರ್‌ನ್ಯಾಷನಲ್ ರಿಲೇಶನ್ಸ್ ವಿಭಾಗದ ಮುರಳೀಕೃಷ್ಣನ್ ಎಂಬ ಮೂವರು ವಿದ್ಯಾರ್ಥಿಗಳಿಗೆ ಸಣ್ಣಪುಟ್ಟ ಗಾಯಗಳಾಗಿವೆ.

Ad Widget

Ad Widget

ಇನ್ನು ವಿಚಾರಸಂಕಿರಣದಲ್ಲಿ ಭಾಗವಹಿಸಿದ್ದ ಗಣ್ಯರು ಮಧ್ಯಾಹ್ನ ಕಾರ್ಯಕ್ರಮದ ಸ್ಥಳದಿಂದ ಹೊರಬರುವಾಗಲೂ ವಿದ್ಯಾರ್ಥಿಗಳು ಪ್ರತಿಭಟನೆ ಮುಂದುವರಿಸಿ ಘೋಷಣೆಗಳನ್ನು ಕೂಗಿದರು.

Ad Widget
Continue Reading

ಅಂತರ ರಾಜ್ಯ

Fire truck-ಬಿಜೆಪಿ ಶಾಸಕನ ಬಂಗಲೆ ತೊಳೆಯಲು ಅಗ್ನಿಶಾಮಕ ವಾಹನ ಬಳಕೆ; ವಿಡಿಯೋ ವೈರಲ್ ಬಳಿಕ ₹2,700 ದಂಡ

Published

on



Ad Widget

Ad Widget

Ad Widget

Ad Widget

ಗುಜರಾತ್‌ನ ದಾಹೋದ್ ಜಿಲ್ಲೆಯಲ್ಲಿ ಬಿಜೆಪಿ ಶಾಸಕರೊಬ್ಬರ ಬಂಗಲೆಯನ್ನು ಸ್ವಚ್ಛಗೊಳಿಸಲು ಅಗ್ನಿಶಾಮಕ ದಳದ ವಾಹನ ಬಳಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಸಾರ್ವಜನಿಕರಿಂದಲೂ ಆಕ್ಷೇಪ ವ್ಯಕ್ತವಾಗಿದೆ.

Ad Widget

Ad Widget

Ad Widget

Ad Widget

ದಾಹೋದ್: ಗುಜರಾತ್‌ನ ದಾಹೋದ್ ಜಿಲ್ಲೆಯಲ್ಲಿ ಬಿಜೆಪಿ ಶಾಸಕರೊಬ್ಬರ ಬಂಗಲೆಯನ್ನು ಸ್ವಚ್ಛಗೊಳಿಸಲು ಅಗ್ನಿಶಾಮಕ ದಳದ ವಾಹನ ಬಳಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಸಾರ್ವಜನಿಕರಿಂದಲೂ ಆಕ್ಷೇಪ ವ್ಯಕ್ತವಾಗಿದೆ.

Ad Widget

Ad Widget

Ad Widget alt="Ad Widget"/>

Ad Widget

ದೇವಗಢ್ ಬಾರಿಯಾ ಪುರಸಭೆಯ ಅಗ್ನಿಶಾಮಕ ವಾಹನವು ಧನ್‌ಪುರ್ ತಾಲೂಕಿನಲ್ಲಿರುವ ಬಿಜೆಪಿ ಶಾಸಕ ಬಚುಭಾಯ್ ಖಬಾದ್ ಅವರ ನಿವಾಸದ ಬಳಿ ನಿಂತಿದ್ದು, ಸಿಬ್ಬಂದಿ ಬಂಗಲೆಯ ಆವರಣ ಹಾಗೂ ಗೋಡೆಗಳಿಗೆ ಪೈಪ್ ಮೂಲಕ ನೀರು ಸಿಂಪಡಿಸುತ್ತಿರುವುದು ವಿಡಿಯೋದಲ್ಲಿ ಕಂಡುಬಂದಿದೆ.

Ad Widget

Ad Widget <> Ad Widget

ವಿಡಿಯೋ ವೈರಲ್ ಆದ ಬಳಿಕ ತುರ್ತು ಸೇವೆಗೆ ಮೀಸಲಾಗಿರುವ ಅಗ್ನಿಶಾಮಕ ವಾಹನವನ್ನು ವೈಯಕ್ತಿಕ ಬಳಕೆಗೆ ಬಳಸಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ಶಾಸಕ ಖಬಾದ್ ಅವರಿಂದ ₹2,700 ದಂಡ ವಸೂಲಿ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.



Ad Widget

ಈ ಕುರಿತು ಎಎನ್‌ಐ ಸುದ್ದಿಸಂಸ್ಥೆಯೊಂದಿಗೆ ಮಾತನಾಡಿದ ದೇವಗಢ್ ಬಾರಿಯಾ ಪುರಸಭೆ ಅಧ್ಯಕ್ಷ ಘಮೇಶ್ ಕಲಾಲ್, ಅಗ್ನಿಶಾಮಕ ವಾಹನ ಕಳುಹಿಸುವಂತೆ ಶಾಸಕರು ಕರೆ ಮಾಡಿದ್ದರು. ಯಾವುದಾದರೂ ಗಂಭೀರ ಘಟನೆ ಸಂಭವಿಸಿರಬಹುದು ಎಂದು ಭಾವಿಸಿ ತಕ್ಷಣ ಅಗ್ನಿಶಾಮಕ ದಳವನ್ನು ಸಂಪರ್ಕಿಸಿ ವಾಹನ ಕಳುಹಿಸಿದ್ದಾಗಿ ತಿಳಿಸಿದ್ದಾರೆ.

Ad Widget

Ad Widget

ಆದರೆ, ಬಂಗಲೆ ಸ್ವಚ್ಛಗೊಳಿಸುವ ಉದ್ದೇಶಕ್ಕಾಗಿ ಅಗ್ನಿಶಾಮಕ ವಾಹನವನ್ನು ಬಳಸಲಾಗುತ್ತಿದೆ ಎಂಬುದು ತಮಗೆ ತಿಳಿದಿರಲಿಲ್ಲ ಎಂದು ಅಗ್ನಿಶಾಮಕ ಅಧಿಕಾರಿ ಸ್ಪಷ್ಟಪಡಿಸಿದ್ದಾರೆ.

ಬಂಗಲೆ ತೊಳೆಯಲು ವಾಹನ ಬಳಸಲಾಗುತ್ತದೆ ಎಂಬ ಮಾಹಿತಿ ಮುಂಚಿತವಾಗಿ ನೀಡಲಾಗಿರಲಿಲ್ಲ. ಈ ಕಾರಣದಿಂದ ಅಚಾತುರ್ಯ ಸಂಭವಿಸಿದೆ. ಇದೀಗ ತಪ್ಪಿತಸ್ಥರಿಂದ ದಂಡ ವಸೂಲಿ ಮಾಡಲಾಗಿದೆ ಎಂದು ಅಗ್ನಿಶಾಮಕ ಇಲಾಖೆ ತಿಳಿಸಿದೆ.

ವಿಡಿಯೋದಲ್ಲಿ ಏನಿದೆ?
ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ವಿಡಿಯೋದಲ್ಲಿ ಬೃಹತ್ ಬಂಗಲೆಯೊಂದರ ಮುಂಭಾಗ ಅಗ್ನಿಶಾಮಕ ವಾಹನ ನಿಂತಿರುವುದು ಕಾಣಿಸುತ್ತದೆ. ಅಗ್ನಿಶಾಮಕ ಸಿಬ್ಬಂದಿ ಪೈಪ್‌ಗಳ ಮೂಲಕ ಬಂಗಲೆಯ ಕಂಪೌಂಡ್ ಹಾಗೂ ಗೋಡೆಗಳಿಗೆ ನೀರು ಸಿಂಪಡಿಸಿ ಸ್ವಚ್ಛಗೊಳಿಸುತ್ತಿರುವ ದೃಶ್ಯಗಳು ವಿಡಿಯೋದಲ್ಲಿವೆ.

Ad Widget
Continue Reading

ಸಿನೆಮಾ

Drishyam 3-ಮಲಯಾಳಂ ನ ದಾಖಲೆ ಮುರಿದು ಬಾಕ್ಸ್ ಆಫೀಸ್‌ನಲ್ಲಿ ‘ದೃಶ್ಯಂ 3’ ಧಮಾಕಾ; 4 ದಿನದಲ್ಲೇ ₹300 ಕೋಟಿ ಕ್ಲಬ್‌ಗೆ ಎಂಟ್ರಿ..!

Published

on



Ad Widget

Ad Widget

Ad Widget

Ad Widget

ಅಜಯ್ ದೇವಗನ್ ಅಭಿನಯದ ‘ದೃಶ್ಯಂ 3: ದಿ ಕನ್‌ಕ್ಲೂಷನ್’ ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ಭರ್ಜರಿ ಪ್ರದರ್ಶನ ಮುಂದುವರಿಸಿದ್ದು, ಬಿಡುಗಡೆಯಾದ ಕೇವಲ ನಾಲ್ಕು ದಿನಗಳಲ್ಲಿ ವಿಶ್ವಾದ್ಯಂತ ₹300 ಕೋಟಿ ಗಡಿ ದಾಟಿದೆ. ಚಿತ್ರದ ಒಟ್ಟು ವಿಶ್ವಾದ್ಯಂತ ಗಳಿಕೆ ಇದೀಗ ₹303 ಕೋಟಿ ತಲುಪಿದೆ.

Ad Widget

Ad Widget

Ad Widget

Ad Widget

ಮುಂಬೈ: ಅಜಯ್ ದೇವಗನ್ ಅಭಿನಯದ ‘ದೃಶ್ಯಂ 3: ದಿ ಕನ್‌ಕ್ಲೂಷನ್’ ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ಭರ್ಜರಿ ಪ್ರದರ್ಶನ ಮುಂದುವರಿಸಿದ್ದು, ಬಿಡುಗಡೆಯಾದ ಕೇವಲ ನಾಲ್ಕು ದಿನಗಳಲ್ಲಿ ವಿಶ್ವಾದ್ಯಂತ ₹300 ಕೋಟಿ ಗಡಿ ದಾಟಿದೆ. ಚಿತ್ರದ ಒಟ್ಟು ವಿಶ್ವಾದ್ಯಂತ ಗಳಿಕೆ ಇದೀಗ ₹303 ಕೋಟಿ ತಲುಪಿದೆ.

Ad Widget

Ad Widget

Ad Widget alt="Ad Widget"/>

Ad Widget

ಬಿಡುಗಡೆಯ ನಾಲ್ಕನೇ ದಿನ ಚಿತ್ರವು ಭಾರತದಲ್ಲಿ 16,274 ಪ್ರದರ್ಶನಗಳಿಂದ ಸುಮಾರು ₹21 ಕೋಟಿ ನಿವ್ವಳ ಗಳಿಸಿದೆ. ಇದರೊಂದಿಗೆ ಭಾರತದಲ್ಲಿ ಚಿತ್ರದ ಒಟ್ಟು ನಿವ್ವಳ ಗಳಿಕೆ ₹197.50 ಕೋಟಿಗೆ ತಲುಪಿದ್ದು, ಒಟ್ಟು ಕಲೆಕ್ಷನ್ ಸುಮಾರು ₹237 ಕೋಟಿ ಆಗಿದೆ.

Ad Widget

Ad Widget <> Ad Widget

ಚಿತ್ರಕ್ಕೆ ಭಾರತ ಮಾತ್ರವಲ್ಲದೆ ಸಾಗರೋತ್ತರ ಮಾರುಕಟ್ಟೆಯಲ್ಲೂ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ನಾಲ್ಕನೇ ದಿನ ವಿದೇಶಿ ಮಾರುಕಟ್ಟೆಯಲ್ಲಿ ಸುಮಾರು ₹5 ಕೋಟಿ ಗಳಿಸಿದ್ದು, ಇದರೊಂದಿಗೆ ವಿದೇಶದಲ್ಲಿನ ಒಟ್ಟು ಗಳಿಕೆ ₹66 ಕೋಟಿ ತಲುಪಿದೆ.



Ad Widget

ಮಲಯಾಳಂ ‘ದೃಶ್ಯಂ 3’ ಗಳಿಕೆಯನ್ನೂ ಮೀರಿಸಿದ ಹಿಂದಿ ಸಿನಿಮಾ
ಅಜಯ್ ದೇವಗನ್ ಅಭಿನಯದ ಹಿಂದಿ ‘ದೃಶ್ಯಂ 3’ಗೂ ಮುನ್ನ ಮೋಹನ್‌ಲಾಲ್ ನಟನೆಯ ಮಲಯಾಳಂ ‘Drishyam 3: The Past Never Stays Silent’ ಬಿಡುಗಡೆಯಾಗಿತ್ತು. ಆ ಚಿತ್ರವು ವಿಶ್ವಾದ್ಯಂತ ₹237.70 ಕೋಟಿ ಗಳಿಕೆ ದಾಖಲಿಸಿತ್ತು ಎಂದು ವರದಿಯಾಗಿದೆ.

Ad Widget

Ad Widget

ಬಾಕ್ಸ್ ಆಫೀಸ್ ಗಳಿಕೆಯ ವಿವರ
ಕೇರಳ: ಸುಮಾರು ₹86.25 ಕೋಟಿ
ಭಾರತದ ಇತರ ಭಾಗಗಳು: ₹37.52 ಕೋಟಿ
ವಿದೇಶಿ ಮಾರುಕಟ್ಟೆ: ₹109.15 ಕೋಟಿ

ಮಧ್ಯಪ್ರಾಚ್ಯ, ಉತ್ತರ ಅಮೆರಿಕಾ ಹಾಗೂ ಯುಕೆ ಮಾರುಕಟ್ಟೆಗಳಲ್ಲಿ ಚಿತ್ರದ ಗಳಿಕೆ ಗಮನಾರ್ಹವಾಗಿದ್ದು, ವಿದೇಶಿ ಕಲೆಕ್ಷನ್ ಹೆಚ್ಚಲು ಈ ಪ್ರದೇಶಗಳ ಕೊಡುಗೆ ಪ್ರಮುಖವಾಗಿದೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading