ಕ್ರೀಡೆ
Direct recruitment-ಅಂತರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ಪದಕ ವಿಜೇತ ಕ್ರೀಡಾಪಟುಗಳಿಗೆ ಪೊಲೀಸ್ ಇಲಾಖೆಯಲ್ಲಿ ನೇರ ನೇಮಕಾತಿ- ಸಿಎಂ
ಅಂತರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ಪದಕ ವಿಜೇತ ಕ್ರೀಡಾಪಟುಗಳಿಗೆ ಪೊಲೀಸ್ ಇಲಾಖೆಯಲ್ಲಿ ನೇರ ನೇಮಕಾತಿ ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಪೊಲೀಸ್ ಇಲಾಖೆಯಲ್ಲಿ ಶೇ.3ರಷ್ಟು ಹುದ್ದೆಗಳು ಮತ್ತು ಇತರ ಇಲಾಖೆಗಳಲ್ಲಿ ಶೇ.2ರಷ್ಟು ಹುದ್ದೆಗಳನ್ನು ಕ್ರೀಡಾಪಟುಗಳಿಗೆ ಮೀಸಲಿಡಲಾಗುವುದು ಎಂದು ಅವರು ತಿಳಿಸಿದರು.
ಬೆಂಗಳೂರು: ಅಂತರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ಪದಕ ವಿಜೇತ ಕ್ರೀಡಾಪಟುಗಳಿಗೆ ಪೊಲೀಸ್ ಇಲಾಖೆಯಲ್ಲಿ ನೇರ ನೇಮಕಾತಿ ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಪೊಲೀಸ್ ಇಲಾಖೆಯಲ್ಲಿ ಶೇ.3ರಷ್ಟು ಹುದ್ದೆಗಳು ಮತ್ತು ಇತರ ಇಲಾಖೆಗಳಲ್ಲಿ ಶೇ.2ರಷ್ಟು ಹುದ್ದೆಗಳನ್ನು ಕ್ರೀಡಾಪಟುಗಳಿಗೆ ಮೀಸಲಿಡಲಾಗುವುದು ಎಂದು ಅವರು ತಿಳಿಸಿದರು.
ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ಕ್ರೀಡಾ ಮತ್ತು ಯುವಜನ ಸೇವಾ ಇಲಾಖೆ ಹಾಗೂ ರಾಜ್ಯ ಒಲಿಂಪಿಕ್ ಅಸೋಸಿಯೇಷನ್ ಆಯೋಜಿಸಿದ್ದ 14 ವರ್ಷದೊಳಗಿನ ಮಕ್ಕಳ ಮಿನಿ ಕರ್ನಾಟಕ ಕ್ರೀಡಾಕೂಟವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಕ್ರೀಡೆಗೆ ಪ್ರೋತ್ಸಾಹ ನೀಡುವ ಸಲುವಾಗಿ, ಪದಕ ವಿಜೇತ ಕ್ರೀಡಾಪಟುಗಳಿಗೆ ನಗದು ಬಹುಮಾನವನ್ನೂ ನೀಡಲಾಗುತ್ತಿದೆ. ಚಿನ್ನ ಗೆದ್ದವರಿಗೆ 10 ಲಕ್ಷ ರೂ., ಬೆಳ್ಳಿ ಗೆದ್ದವರಿಗೆ 5 ಲಕ್ಷ ರೂ. ಮತ್ತು ಕಂಚು ಗೆದ್ದವರಿಗೆ 2 ಲಕ್ಷ ರೂ. ನೀಡಲಾಗುತ್ತಿದೆ ಎಂದು ಸಿಎಂ ಹೇಳಿದರು.
ಶಿಕ್ಷಣದಲ್ಲೂ ಕ್ರೀಡಾಪಟುಗಳಿಗೆ ಆದ್ಯತೆ
ಕ್ರೀಡಾಪಟುಗಳಿಗೆ ಹಾಜರಾತಿಯಲ್ಲಿ ವಿನಾಯಿತಿ ನೀಡಲಾಗುವುದು. ಎಂಜಿನಿಯರಿಂಗ್ ಮತ್ತು ವೈದ್ಯಕೀಯ ಶಿಕ್ಷಣದಲ್ಲೂ ಕ್ರೀಡಾಪಟುಗಳಿಗೆ ಆದ್ಯತೆ ನೀಡಲಾಗುವುದು. “ಶಿಕ್ಷಣದ ಜತೆಗೆ ಕ್ರೀಡೆಯಲ್ಲೂ ಸಾಧನೆ ಮಾಡಬೇಕು ಎಂಬುದು ನಮ್ಮ ಆಶಯ,” ಎಂದ ಸಿಎಂ, ರಾಜ್ಯ ಸರ್ಕಾರ ಕ್ರೀಡೆಗೆ ನಿರಂತರ ಸಹಕಾರ ನೀಡುತ್ತಿದೆ ಮತ್ತು ಕ್ರೀಡಾಪಟುಗಳ ಉತ್ಸಾಹಕ್ಕೆ ತಕ್ಕ ಪ್ರೋತ್ಸಾಹ ನೀಡಲು ಸಿದ್ಧವಿದೆ ಎಂದು ಭರವಸೆ ನೀಡಿದರು.
ಕೋಚ್ಗಳ ನೇಮಕಾತಿಗೆ ಮನವಿ
ರಾಜ್ಯ ಒಲಿಂಪಿಕ್ ಅಸೋಸಿಯೇಷನ್ ಅಧ್ಯಕ್ಷ ಕೆ. ಗೋವಿಂದರಾಜು ಮಾತನಾಡಿ, ರಾಜ್ಯದಲ್ಲಿ ಕೋಚ್ಗಳ ಕೊರತೆಯಿಂದ ಮಕ್ಕಳಿಗೆ ಸೂಕ್ತ ಕ್ರೀಡಾ ತರಬೇತಿ ನೀಡಲು ಸಾಧ್ಯವಾಗುತ್ತಿಲ್ಲ ಎಂದು ಅಳಲು ತೋಡಿಕೊಂಡರು. 170 ಕೋಚ್ಗಳನ್ನು ನೇಮಕ ಮಾಡಿಕೊಳ್ಳುವಂತೆ ಮನವಿ ಸಲ್ಲಿಸಲಾಗಿದ್ದು, ಮುಖ್ಯಮಂತ್ರಿಗಳು ಕೋಚ್ಗಳ ನೇಮಕಾತಿಗೆ ಸೂಚನೆ ನೀಡಬೇಕೆಂದು ಅವರು ಮನವಿ ಮಾಡಿದರು.
ಶಾಸಕ ರಿಜ್ವಾನ್ ಅರ್ಷದ್, ಸಚಿವ ರಾಮಲಿಂಗಾರೆಡ್ಡಿ, ಅನಂತರಾಜು, ಚೇತನ್ ಮತ್ತು ಸರ್ಕಾರದ ಕಾರ್ಯದರ್ಶಿ ನವೀನ್ರಾಜ ಸಿಂಗ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಕ್ರೀಡೆಯಲ್ಲಿ ಭಾಗವಹಿಸುವಿಕೆಯ ಮಹತ್ವ
“ನಮ್ಮ ಸರ್ಕಾರ ಕ್ರೀಡೆಗೆ ನಿರಂತರವಾಗಿ ಪ್ರೋತ್ಸಾಹ ನೀಡುತ್ತಿದೆ. ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಕ್ರೀಡೆಗಳಲ್ಲಿ ಭಾಗವಹಿಸಲು ಇಂತಹ ಕ್ರೀಡಾಕೂಟಗಳು ಸಹಕಾರಿ ಆಗುತ್ತವೆ. ಆದ್ದರಿಂದ ಪ್ರತಿಯೊಬ್ಬರೂ ಉತ್ಸಾಹದಿಂದ ಭಾಗವಹಿಸಿ. ಕ್ರೀಡೆಯಲ್ಲಿ ಸೋಲು, ಗೆಲುವಿಗಿಂತ ಭಾಗವಹಿಸುವಿಕೆ ಅತಿ ಮುಖ್ಯ,” ಎಂದು ಸಿಎಂ ಸಿದ್ದರಾಮಯ್ಯ ಒತ್ತಿ ಹೇಳಿದರು. “ಇಂದಿನ ಕ್ರೀಡೆಯಲ್ಲಿ ಸೋತರೆ ಮುಂದಿನ ವರ್ಷದ ಕ್ರೀಡೆಯಲ್ಲಿ ಗೆಲ್ಲಲೇಬೇಕು ಎಂಬ ಛಲ ನಿಮ್ಮಲ್ಲಿರಲಿ. ಗೆಲುವು ಅಮೂಲ್ಯ. 14 ವರ್ಷದ ಮಕ್ಕಳಿಗಾಗಿ ಮಿನಿ ಕರ್ನಾಟಕ ಕ್ರೀಡಾಕೂಟ ಏರ್ಪಡಿಸಿ ಮಕ್ಕಳಲ್ಲಿ ಕ್ರೀಡಾ ಮನೋಭಾವದ ಜತೆಗೆ ಸೂಕ್ತ ತರಬೇತಿ ನೀಡುವುದು ಇದರ ಮುಖ್ಯ ಉದ್ದೇಶ. ಒಲಿಂಪಿಕ್ಸ್, ಏಷ್ಯನ್, ಕಾಮನ್ವೆಲ್ತ್ ಸೇರಿದಂತೆ ಅನೇಕ ಅಂತಾರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸಲು ಮಕ್ಕಳನ್ನು ತಯಾರು ಮಾಡಲು ಇದು ಅಡಿಪಾಯ ಆಗಲಿದೆ” ಎಂದು ಸಿಎಂ ತಿಳಿಸಿದರು.
ಕ್ರೀಡೆ
Vivekananda-ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನ ಭುವನ್ರಾಮ್ ಭಾರ ಎತ್ತುವ ಸ್ಪರ್ಧೆಯಲ್ಲಿ ವಿಟಿಯು ತಂಡಕ್ಕೆ ಆಯ್ಕೆ
ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಭುವನ್ರಾಮ್ ಜಗದೀಶ್ ಭಂಡಾರಿ ಇವರು ಅಖಿಲ ಭಾರತ ದಕ್ಷಿಣ ವಲಯ ಅಂತರ್ ವಿಶ್ವವಿದ್ಯಾನಿಲಯ ಭಾರ ಎತ್ತುವ ಸ್ಪರ್ಧೆಯಲ್ಲಿ 75 ಕೆಜಿ ವಿಭಾಗದಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ ತಂಡಕ್ಕೆ ಆಯ್ಕೆಯಾಗಿದ್ದಾರೆ.
ಪುತ್ತೂರು: ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಭುವನ್ರಾಮ್ ಜಗದೀಶ್ ಭಂಡಾರಿ ಇವರು ಅಖಿಲ ಭಾರತ ದಕ್ಷಿಣ ವಲಯ ಅಂತರ್ ವಿಶ್ವವಿದ್ಯಾನಿಲಯ ಭಾರ ಎತ್ತುವ ಸ್ಪರ್ಧೆಯಲ್ಲಿ 75 ಕೆಜಿ ವಿಭಾಗದಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ ತಂಡಕ್ಕೆ ಆಯ್ಕೆಯಾಗಿದ್ದಾರೆ.
ಅಂತಿಮ ವರ್ಷದ ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿಯಾಗಿರುವ ಇವರು ಚೆನ್ನೈನ ವಿನಾಯಕ ಮಿಶನ್ಸ್ ರೀಸರ್ಚ್ ಫೌಂಡೇಶನ್ ಆಶ್ರಯದಲ್ಲಿ ನವೆಂಬರ್ 21 ರಿಂದ 23 ರವರೆಗೆ ನಡೆಯುವ ಈ ಸ್ಪರ್ಧೆಯಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯವನ್ನು ಪ್ರತಿನಿಧಿಸಲಿದ್ದಾರೆ.
ಇವರಿಗೆ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಬಾಲಚಂದ್ರ ಗೌಡ ಭಾರ್ತಿಕುಮೇರು ಮಾರ್ಗದರ್ಶನವನ್ನು ನೀಡಿದ್ದಾರೆ ಎಂದು ಪ್ರಾಂಶುಪಾಲ ಡಾ.ಪುರುಷೋತ್ತಮ ಚಿಪ್ಪಾರ್ ತಿಳಿಸಿದ್ದಾರೆ.
ಕ್ರೀಡೆ
IPL 2027-ಐಪಿಎಲ್ 2027 ಮಿನಿ ಹರಾಜು ಡಿ.16ಕ್ಕೆ ಫಿಕ್ಸ್: ಆರ್ಸಿಬಿ ಸೇರಿ 10 ತಂಡಗಳ ಪರ್ಸ್ ವಿವರ ಇಲ್ಲಿದೆ..
ಐಪಿಎಲ್ 2027ರ ಮಿನಿ ಹರಾಜಿಗೆ ಸಿದ್ಧತೆಗಳು ಪೂರ್ಣಗೊಂಡಿದ್ದು, ಎಲ್ಲಾ 10 ಫ್ರಾಂಚೈಸಿಗಳು ತಾವು ಉಳಿಸಿಕೊಂಡಿರುವ ಹಾಗೂ ಬಿಡುಗಡೆ ಮಾಡಿರುವ ಆಟಗಾರರ ಅಂತಿಮ ಪಟ್ಟಿಯನ್ನು ನವೆಂಬರ್ 17ರ ಗಡುವಿನೊಳಗೆ ಬಿಸಿಸಿಐಗೆ ಸಲ್ಲಿಸಿವೆ. ಕಳೆದ ಕೆಲವು ತಿಂಗಳುಗಳಿಂದ ನಡೆಯುತ್ತಿದ್ದ ಆಟಗಾರರ ರಿಟೆನ್ಷನ್ ಮತ್ತು ಟ್ರೇಡಿಂಗ್ ಪ್ರಕ್ರಿಯೆ ಮುಕ್ತಾಯಗೊಂಡಿದ್ದು, ಇದೀಗ ಹರಾಜಿನಲ್ಲಿ ಯಾವ ತಂಡದ ಬಳಿ ಎಷ್ಟು ಹಣ ಉಳಿದಿದೆ ಮತ್ತು ಎಷ್ಟು ಆಟಗಾರರನ್ನು ಖರೀದಿಸಲು ಅವಕಾಶವಿದೆ ಎಂಬ ಲೆಕ್ಕಾಚಾರ ಬಹಿರಂಗವಾಗಿದೆ.
ಬೆಂಗಳೂರು, ನ.18: ಐಪಿಎಲ್ 2027ರ ಮಿನಿ ಹರಾಜಿಗೆ ಸಿದ್ಧತೆಗಳು ಪೂರ್ಣಗೊಂಡಿದ್ದು, ಎಲ್ಲಾ 10 ಫ್ರಾಂಚೈಸಿಗಳು ತಾವು ಉಳಿಸಿಕೊಂಡಿರುವ ಹಾಗೂ ಬಿಡುಗಡೆ ಮಾಡಿರುವ ಆಟಗಾರರ ಅಂತಿಮ ಪಟ್ಟಿಯನ್ನು ನವೆಂಬರ್ 17ರ ಗಡುವಿನೊಳಗೆ ಬಿಸಿಸಿಐಗೆ ಸಲ್ಲಿಸಿವೆ. ಕಳೆದ ಕೆಲವು ತಿಂಗಳುಗಳಿಂದ ನಡೆಯುತ್ತಿದ್ದ ಆಟಗಾರರ ರಿಟೆನ್ಷನ್ ಮತ್ತು ಟ್ರೇಡಿಂಗ್ ಪ್ರಕ್ರಿಯೆ ಮುಕ್ತಾಯಗೊಂಡಿದ್ದು, ಇದೀಗ ಹರಾಜಿನಲ್ಲಿ ಯಾವ ತಂಡದ ಬಳಿ ಎಷ್ಟು ಹಣ ಉಳಿದಿದೆ ಮತ್ತು ಎಷ್ಟು ಆಟಗಾರರನ್ನು ಖರೀದಿಸಲು ಅವಕಾಶವಿದೆ ಎಂಬ ಲೆಕ್ಕಾಚಾರ ಬಹಿರಂಗವಾಗಿದೆ.
ಲಕ್ನೋ ಸೂಪರ್ ಜೈಂಟ್ಸ್ ಬಳಿ ಅತಿ ಹೆಚ್ಚು ಹಣ!
ಐಪಿಎಲ್ 2027ರ ಮಿನಿ ಹರಾಜಿನಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡ ಅತಿ ಹೆಚ್ಚು ಹಣದೊಂದಿಗೆ ಕಣಕ್ಕಿಳಿಯಲಿದೆ. ಆಟಗಾರರನ್ನು ಉಳಿಸಿಕೊಂಡ ಬಳಿಕ ತಂಡದ ಪರ್ಸ್ನಲ್ಲಿ ಬರೋಬ್ಬರಿ ₹47.45 ಕೋಟಿ ಉಳಿದಿದೆ.
ಕೋಲ್ಕತ್ತಾ ನೈಟ್ ರೈಡರ್ಸ್ ₹41.65 ಕೋಟಿ ಹಾಗೂ ಸನ್ರೈಸರ್ಸ್ ಹೈದರಾಬಾದ್ ₹40.15 ಕೋಟಿ ಹಣದೊಂದಿಗೆ ನಂತರದ ಸ್ಥಾನಗಳಲ್ಲಿವೆ. ಡೆಲ್ಲಿ ಕ್ಯಾಪಿಟಲ್ಸ್ ಬಳಿ ₹39.50 ಕೋಟಿ ಹಾಗೂ ಮುಂಬೈ ಇಂಡಿಯನ್ಸ್ ಬಳಿ ₹32.60 ಕೋಟಿ ಹಣವಿದೆ.
ಇನ್ನೊಂದೆಡೆ, ಗುಜರಾತ್ ಟೈಟಾನ್ಸ್ ತಂಡದ ಬಳಿ ಕೇವಲ ₹8.75 ಕೋಟಿ ಮಾತ್ರ ಉಳಿದಿದ್ದು, 10 ತಂಡಗಳ ಪೈಕಿ ಅತ್ಯಂತ ಕಡಿಮೆ ಮೊತ್ತ ಹೊಂದಿರುವ ತಂಡವಾಗಿದೆ.
ಡೆಲ್ಲಿ, ಮುಂಬೈಗೆ ಹೆಚ್ಚು ಆಟಗಾರರ ಖರೀದಿ ಅವಕಾಶ
ಖಾಲಿ ಇರುವ ಆಟಗಾರರ ಸ್ಥಾನಗಳ ಲೆಕ್ಕಾಚಾರದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಮುಂಬೈ ಇಂಡಿಯನ್ಸ್ ತಂಡಗಳು ಮುಂಚೂಣಿಯಲ್ಲಿವೆ. ಈ ಎರಡೂ ತಂಡಗಳು ತಲಾ 9 ಆಟಗಾರರನ್ನು ಖರೀದಿಸಲು ಅವಕಾಶ ಹೊಂದಿವೆ.
ಕೋಲ್ಕತ್ತಾ ನೈಟ್ ರೈಡರ್ಸ್ 8, ಲಕ್ನೋ ಸೂಪರ್ ಜೈಂಟ್ಸ್ ಮತ್ತು ಸನ್ರೈಸರ್ಸ್ ಹೈದರಾಬಾದ್ ತಲಾ 7 ಆಟಗಾರರನ್ನು ಖರೀದಿಸಬಹುದು. ಚೆನ್ನೈ ಸೂಪರ್ ಕಿಂಗ್ಸ್, ರಾಜಸ್ಥಾನ್ ರಾಯಲ್ಸ್ ಮತ್ತು ಪಂಜಾಬ್ ಕಿಂಗ್ಸ್ ತಂಡಗಳಲ್ಲಿ ತಲಾ 6 ಸ್ಥಾನಗಳು ಖಾಲಿಯಿವೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ 6 ಆಟಗಾರರನ್ನು ಖರೀದಿಸುವ ಅವಕಾಶವಿದ್ದು, ಗುಜರಾತ್ ಟೈಟಾನ್ಸ್ ತಂಡದಲ್ಲಿ ಕೇವಲ 3 ಸ್ಥಾನಗಳು ಮಾತ್ರ ಖಾಲಿಯಿವೆ.
10 ತಂಡಗಳ ಪರ್ಸ್ ಮೊತ್ತ ಮತ್ತು ಖಾಲಿ ಸ್ಥಾನಗಳ ವಿವರ
ತಂಡ ಉಳಿದ ಹಣ ಖಾಲಿ ಸ್ಥಾನ ವಿದೇಶಿ ಆಟಗಾರರ ಸ್ಥಾನ
ಲಕ್ನೋ ಸೂಪರ್ ಜೈಂಟ್ಸ್ ₹47.45 ಕೋಟಿ 7 3
ಕೋಲ್ಕತ್ತಾ ನೈಟ್ ರೈಡರ್ಸ್ ₹41.65 ಕೋಟಿ 8 3
ಸನ್ರೈಸರ್ಸ್ ಹೈದರಾಬಾದ್ ₹40.15 ಕೋಟಿ 7 3
ಡೆಲ್ಲಿ ಕ್ಯಾಪಿಟಲ್ಸ್ ₹39.50 ಕೋಟಿ 9 4
ಮುಂಬೈ ಇಂಡಿಯನ್ಸ್ ₹32.60 ಕೋಟಿ 9 2
ಚೆನ್ನೈ ಸೂಪರ್ ಕಿಂಗ್ಸ್ ₹28.05 ಕೋಟಿ 6 2
ರಾಜಸ್ಥಾನ್ ರಾಯಲ್ಸ್ ₹27.05 ಕೋಟಿ 6 2
ಪಂಜಾಬ್ ಕಿಂಗ್ಸ್ ₹18.60 ಕೋಟಿ 6 2
ರಾಯಲ್ ಚಾಲೆಂಜರ್ಸ್ ಬೆಂಗಳೂರು ₹14.15 ಕೋಟಿ 6 1
ಗುಜರಾತ್ ಟೈಟಾನ್ಸ್ ₹8.75 ಕೋಟಿ 3 2
ಡಿಸೆಂಬರ್ 16ರಂದು ಗೋವಾದಲ್ಲಿ ಮಿನಿ ಹರಾಜು
ಐಪಿಎಲ್ 2027ರ ಮಿನಿ ಹರಾಜು ಡಿಸೆಂಬರ್ 16, 2026ರಂದು ಗೋವಾದಲ್ಲಿ ನಡೆಯಲಿದೆ. ಈ ಹರಾಜಿನಲ್ಲಿ ಎಲ್ಲಾ 10 ತಂಡಗಳು ತಮ್ಮ ತಂಡಕ್ಕೆ ಅಗತ್ಯವಿರುವ ಆಟಗಾರರನ್ನು ಖರೀದಿಸಲು ಪೈಪೋಟಿ ನಡೆಸಲಿವೆ.
2025ರಿಂದ 2027ರವರೆಗಿನ ಮೂರು ವರ್ಷಗಳ ಅವಧಿಯ ಆರಂಭದಲ್ಲಿ ಪ್ರತಿ ತಂಡಕ್ಕೆ ಆಟಗಾರರ ಖರೀದಿಗಾಗಿ ₹120 ಕೋಟಿ ಪರ್ಸ್ ನಿಗದಿಪಡಿಸಲಾಗಿತ್ತು. ನಿಯಮದ ಪ್ರಕಾರ ಪ್ರತಿ ಮಿನಿ ಹರಾಜಿಗೂ ಮುನ್ನ ಈ ಮೊತ್ತಕ್ಕೆ ಹೆಚ್ಚುವರಿಯಾಗಿ ₹5 ಕೋಟಿ ಸೇರ್ಪಡೆಯಾಗುತ್ತದೆ. ಹೀಗಾಗಿ 2027ರ ಮಿನಿ ಹರಾಜಿನಲ್ಲಿ ಪ್ರತಿ ತಂಡದ ಒಟ್ಟು ಪರ್ಸ್ ಮೊತ್ತ ₹130 ಕೋಟಿಗೆ ಏರಿಕೆಯಾಗಲಿದೆ.
ಡಿಸೆಂಬರ್ 16ರಂದು ನಡೆಯಲಿರುವ ಹರಾಜಿನಲ್ಲಿ ಯಾವ ತಂಡ ಯಾವ ಸ್ಟಾರ್ ಆಟಗಾರರನ್ನು ತನ್ನ ತೆಕ್ಕೆಗೆ ತೆಗೆದುಕೊಳ್ಳಲಿದೆ ಮತ್ತು ಯಾವ ತಂಡ ಬಲಿಷ್ಠ ಪಡೆಯನ್ನು ಕಟ್ಟಲಿದೆ ಎಂಬ ಕುತೂಹಲ ಕ್ರಿಕೆಟ್ ಅಭಿಮಾನಿಗಳಲ್ಲಿ ಮನೆಮಾಡಿದೆ.
ಅಂತರ ರಾಜ್ಯ
Mohammed Shami: ಟೆಸ್ಟ್ ಕ್ರಿಕೆಟ್ಗೆ ವಿದಾಯ ಹೇಳಿದ ಟೀಂ ಇಂಡಿಯಾ ವೇಗಿ ಮೊಹಮ್ಮದ್ ಶಮಿ
ಟೀಂ ಇಂಡಿಯಾದ ಅನುಭವಿ ವೇಗದ ಬೌಲರ್ ಮೊಹಮ್ಮದ್ ಶಮಿ ಟೆಸ್ಟ್ ಕ್ರಿಕೆಟ್ಗೆ ನಿವೃತ್ತಿ ಘೋಷಿಸಿದ್ದಾರೆ. ಸದ್ಯ ಭಾರತ ತಂಡದಲ್ಲಿ ಸ್ಥಾನ ಪಡೆಯದಿರುವ ಶಮಿ, ಶುಕ್ರವಾರ ಇನ್ಸ್ಟಾಗ್ರಾಂನಲ್ಲಿ ಭಾವನಾತ್ಮಕ ಸಂದೇಶವೊಂದನ್ನು ಹಂಚಿಕೊಳ್ಳುವ ಮೂಲಕ ತಮ್ಮ ಟೆಸ್ಟ್ ಕ್ರಿಕೆಟ್ ಪಯಣಕ್ಕೆ ತೆರೆ ಎಳೆದಿದ್ದಾರೆ.
ಹೊಸದಿಲ್ಲಿ: ಟೀಂ ಇಂಡಿಯಾದ ಅನುಭವಿ ವೇಗದ ಬೌಲರ್ ಮೊಹಮ್ಮದ್ ಶಮಿ ಟೆಸ್ಟ್ ಕ್ರಿಕೆಟ್ಗೆ ನಿವೃತ್ತಿ ಘೋಷಿಸಿದ್ದಾರೆ. ಸದ್ಯ ಭಾರತ ತಂಡದಲ್ಲಿ ಸ್ಥಾನ ಪಡೆಯದಿರುವ ಶಮಿ, ಶುಕ್ರವಾರ ಇನ್ಸ್ಟಾಗ್ರಾಂನಲ್ಲಿ ಭಾವನಾತ್ಮಕ ಸಂದೇಶವೊಂದನ್ನು ಹಂಚಿಕೊಳ್ಳುವ ಮೂಲಕ ತಮ್ಮ ಟೆಸ್ಟ್ ಕ್ರಿಕೆಟ್ ಪಯಣಕ್ಕೆ ತೆರೆ ಎಳೆದಿದ್ದಾರೆ.
‘ನಾನು ಬಿಳಿ ಜೆರ್ಸಿಗೆ ವಿದಾಯ ಹೇಳುತ್ತಿದ್ದೇನೆ. ಆದರೆ ಅದರೊಂದಿಗೆ ಬೆಸೆದುಕೊಂಡಿರುವ ನೆನಪುಗಳಿಗೆ ಎಂದಿಗೂ ವಿದಾಯ ಹೇಳುವುದಿಲ್ಲ’ ಎಂದು ಶಮಿ ತಮ್ಮ ನಿವೃತ್ತಿ ನಿರ್ಧಾರವನ್ನು ಪ್ರಕಟಿಸಿದ್ದಾರೆ.
ಭಾರತದ ಟೆಸ್ಟ್ ಜೆರ್ಸಿಯನ್ನು ಮೊದಲ ಬಾರಿಗೆ ಧರಿಸಿದ ಕ್ಷಣವನ್ನು ನೆನಪಿಸಿಕೊಂಡಿರುವ ಅವರು, ‘ಮೊದಲ ಬಾರಿಗೆ ಭಾರತದ ಟೆಸ್ಟ್ ಜೆರ್ಸಿ ಧರಿಸಿದಾಗ ನನ್ನಲ್ಲಿದ್ದದ್ದು ಒಂದೇ ಕನಸು. ನನ್ನ ದೇಶಕ್ಕಾಗಿ ಏನಾದರೂ ಮಾಡಬೇಕು ಎಂಬುದಾಗಿತ್ತು. ಅಂದಿನಿಂದ ಪ್ರತಿಯೊಂದು ವಿಕೆಟ್, ಪ್ರತಿಯೊಂದು ಹೋರಾಟ, ಪ್ರತಿಯೊಂದು ಗಾಯ ಹಾಗೂ ಪ್ರತಿಯೊಂದು ಪುನರಾಗಮನವೂ ನನಗೆ ಹೊಸ ಪಾಠ ಕಲಿಸಿದೆ’ ಎಂದು ಬರೆದುಕೊಂಡಿದ್ದಾರೆ.
ಟೆಸ್ಟ್ ಕ್ರಿಕೆಟ್ ನನ್ನ ಜೀವನದ ವಿಶೇಷ ಭಾಗವಾಗಿತ್ತು
‘ನನ್ನ ಪಾಲಿಗೆ ಟೆಸ್ಟ್ ಕ್ರಿಕೆಟ್ ಕೇವಲ ಒಂದು ಮಾದರಿಯಾಗಿರಲಿಲ್ಲ. ಅದು ನನ್ನ ಜೀವನದ ಅತ್ಯಂತ ವಿಶೇಷ ಭಾಗವಾಗಿತ್ತು. ಇಂದು ಭಾರವಾದ ಹೃದಯ ಹಾಗೂ ಅಸಂಖ್ಯಾತ ಸುಂದರ ನೆನಪುಗಳೊಂದಿಗೆ ಟೆಸ್ಟ್ ಕ್ರಿಕೆಟ್ನಿಂದ ನಿವೃತ್ತಿಯಾಗುವ ನಿರ್ಧಾರ ಕೈಗೊಂಡಿದ್ದೇನೆ’ ಎಂದು ತಮ್ಮ ಭಾವನೆಗಳನ್ನು ವ್ಯಕ್ತಪಡಿಸಿದ್ದಾರೆ.
ಇದೇ ವೇಳೆ, ತಮ್ಮ ಕ್ರಿಕೆಟ್ ಪಯಣದಲ್ಲಿ ಬೆಂಬಲವಾಗಿ ನಿಂತ ಸಹ ಆಟಗಾರರು, ತರಬೇತುದಾರರು ಹಾಗೂ ಕುಟುಂಬ ಸದಸ್ಯರಿಗೆ ಶಮಿ ಹೃದಯಪೂರ್ವಕ ಧನ್ಯವಾದ ಸಲ್ಲಿಸಿದ್ದಾರೆ. ಒಳ್ಳೆಯ ಹಾಗೂ ಕಷ್ಟದ ಸಮಯಗಳಲ್ಲೂ ತಮ್ಮ ಮೇಲೆ ನಂಬಿಕೆ ಇಟ್ಟ ಲಕ್ಷಾಂತರ ಭಾರತೀಯ ಅಭಿಮಾನಿಗಳಿಗೂ ಕೃತಜ್ಞತೆ ತಿಳಿಸಿದ್ದಾರೆ.
ತಮ್ಮ ಪ್ರತಿಭೆಯನ್ನು ಗುರುತಿಸಿ, ಬೆಳೆಯಲು ಅವಕಾಶ ನೀಡಿದ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಹಾಗೂ ಕ್ರಿಕೆಟ್ ಅಸೋಸಿಯೇಷನ್ ಆಫ್ ಬೆಂಗಾಲ್ (ಸಿಎಬಿ) ಸಂಸ್ಥೆಗಳಿಗೂ ಧನ್ಯವಾದ ಅರ್ಪಿಸಿದ್ದಾರೆ. ಈ ಸಂಸ್ಥೆಗಳು ನೀಡಿದ ಬೆಂಬಲ ಹಾಗೂ ವಿಶ್ವಾಸ ಸದಾ ತಮ್ಮ ಪಾಲಿಗೆ ವಿಶೇಷವಾಗಿರಲಿದೆ ಎಂದು ಹೇಳಿದ್ದಾರೆ.
-
ಸ್ಥಳೀಯ28 minutes agoWedding-ಕ್ಯಾಸೆಟ್ಗಳ ಅಬ್ಬರವಿಲ್ಲ, ಡ್ಯಾನ್ಸ್ಗಳ ಹಂಗಿಲ್ಲ; ಅದ್ದೂರಿತನಕ್ಕೆ ಬ್ರೇಕ್ ಹಾಕಿ ಸರಳತೆಯಲ್ಲೇ ಮದುವೆ ಸಂಭ್ರಮ..!
-
ಶಿಕ್ಷಣ1 hour agoScience Fair-ಪುತ್ತೂರಿನಲ್ಲಿ ಜಿಲ್ಲಾ ಮಟ್ಟದ ಕೋಡ್ಕ್ರಾಫ್ಟ್ ವಿಜ್ಞಾನ ಮೇಳ-2026: ಗ್ರಾಮೀಣ ವಿದ್ಯಾರ್ಥಿಗಳ ಪ್ರತಿಭಾ ಅನಾವರಣ
-
ಶಿಕ್ಷಣ2 hours agoPhilomena-ಸಂತ ಫಿಲೋಮಿನಾ ಕಾಲೇಜಿನಲ್ಲಿ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಐದು ದಿನಗಳ ಡಿಜಿಟಲ್ ಕೌಶಲ್ಯಾಭಿವೃದ್ಧಿ ಮತ್ತು ಉದ್ಯೋಗ ಸಿದ್ಧತಾ ತರಬೇತಿ ಕಾರ್ಯಕ್ರಮ















