ಆರೋಗ್ಯ
Dhanvantari-ನ.06: ಧನ್ವಂತರಿ ಕ್ಲಿನಿಕಲ್ ಲ್ಯಾಬೋರೇಟರಿ ಬೊಳುವಾರು ಶಾಖೆಯಲ್ಲಿ ಉಚಿತ ಥೈರಾಯಿಡ್, ಹಿಮೋಗ್ಲೋಬಿನ್ ಹಾಗೂ ಮಧುಮೇಹ ತಪಾಸಣಾ ಶಿಬಿರ
ನಗರದ ಪ್ರತಿಷ್ಠಿತ ಆರೋಗ್ಯ ಸೇವಾ ಸಂಸ್ಥೆಯಾದ ಧನ್ವಂತರಿ ಕ್ಲಿನಿಕಲ್ ಲ್ಯಾಬೋರೇಟರಿಯು ಧ್ರುವ ಸಂಕೀರ್ಣದಲ್ಲಿರುವ ತನ್ನ ಬೊಳುವಾರು ಶಾಖೆಯಲ್ಲಿ ನ.06, ಗುರುವಾರದಂದು ಉಚಿತ ಥೈರಾಯಿಡ್ (TSH) , ಹಿಮೋಗ್ಲೋಬಿನ್ಹಾಗೂ ಮಧುಮೇಹ (ಶುಗರ್) ತಪಾಸಣಾ ಶಿಬಿರವನ್ನು ಆಯೋಜಿಸಿದೆ.
ಪುತ್ತೂರು : ನಗರದ ಪ್ರತಿಷ್ಠಿತ ಆರೋಗ್ಯ ಸೇವಾ ಸಂಸ್ಥೆಯಾದ ಧನ್ವಂತರಿ ಕ್ಲಿನಿಕಲ್ ಲ್ಯಾಬೋರೇಟರಿಯು ಧ್ರುವ ಸಂಕೀರ್ಣದಲ್ಲಿರುವ ತನ್ನ ಬೊಳುವಾರು ಶಾಖೆಯಲ್ಲಿ ನ.06, ಗುರುವಾರದಂದು ಉಚಿತ ಥೈರಾಯಿಡ್ (TSH) , ಹಿಮೋಗ್ಲೋಬಿನ್ಹಾಗೂ ಮಧುಮೇಹ (ಶುಗರ್) ತಪಾಸಣಾ ಶಿಬಿರವನ್ನು ಆಯೋಜಿಸಿದೆ.
ಈ ಶಿಬಿರದ ಪ್ರಯುಕ್ತ, ಎಲ್ಲಾ ಮಾದರಿಯ ರಕ್ತ ಪರೀಕ್ಷಾ ಪ್ಯಾಕೇಜ್ಗಳ ಮೇಲೆ ಶೇ. 10 ರಿಂದ 20 ರಷ್ಟು ವಿಶೇಷ ರಿಯಾಯಿತಿ ಇರಲಿದೆ.
ಮೆಟ್ರೋ ಸಿಟಿಗಳಲ್ಲಿ ಮಾತ್ರ ಲಭ್ಯವಿರುವ ವಿವಿಧ ರಕ್ತ ತಪಾಸಣೆಗಳು ಇದೀಗ ಪುತ್ತೂರಿನಲ್ಲಿ ಲಭ್ಯವಿದೆ.
ಧನ್ವಂತರಿಯಲ್ಲಿ ಲಭ್ಯವಿರುವ ಕ್ಯಾನ್ಸರ್ ಸಂಬಂಧಿತ ವಿವಿಧ ರಕ್ತ ತಪಾಸಣೆಗಳು ಅಲ್ಲದೆ ಕ್ಯಾನ್ಸರ್ ಸ್ಟೀನಿಂಗ್ ಪ್ಯಾಕೇಜ್ಗಳು ಇಲ್ಲಿ ಲಭ್ಯ
CA-15.3- ಸ್ತನದ ಕ್ಯಾನ್ಸರ್ ಪತ್ತೆಗಾಗಿ
HPV-ಸರ್ವೈಕಲ್ ಕ್ಯಾನ್ಸರ್ ಪತ್ತೆಗಾಗಿ (35 ವರ್ಷ ದಾಟಿದ ಮಹಿಳೆಯರಲ್ಲಿ)
CA-19.9 – ಪ್ಯಾಂಕ್ರಿಯಾಸ್ (ಮೇದೋಜೀರಕ ಗ್ರಂಥಿ) ಮತ್ತು ಕೋಲನ್ (ದೊಡ್ಡಕರುಳು) ಕ್ಯಾನ್ಸರ್ ತಪಾಸಣೆ
CA-125 ಓವರಿಯನ್(ಗರ್ಭ ಕೋಶದ) ಕ್ಯಾನ್ಸರ್ಗಾಗಿ
AFP-ಲಿವರ್ (ಯಕೃತ್) ಟೆಸ್ಟಿಕ್ಯುಲರ್ (ವೃಷಣ) ಹಾಗೂ ಓವರಿಯನ್ (ಅಂಡಾಶಯಗಳ) ಕ್ಯಾನ್ಸರ್ ತಪಾಸಣೆ
PSA-ಪ್ರೋಸ್ಟೇಟ್ (ಪುರುಷರ ಜನನೇಂದ್ರಿಯಕ್ಕೆ ಸಂಬಂಧಿಸಿದ ಒಂದು ಗ್ರಂಥಿ) ಕ್ಯಾನ್ಸರ್ ತಪಾಸಣೆ
BHCG-ಜೆರ್ಮ್ ಸೆಲ್ (ಜೀವಕೋಶದ) ಕ್ಯಾನ್ಸರ್ (ಗರ್ಭಿಣಿಯರಲ್ಲದ ಮಹಿಳೆಯರಲ್ಲಿ) ಹಾಗೂ ಪುರುಷರಲ್ಲಿ
CEA- ಕೊಲೊರೆಕ್ಟಲ್ ಕ್ಯಾನ್ಸರ್,ಲಂಗ್ಸ್ ಬ್ರೆಸ್ಟ್ ಮತ್ತು ಪಾಂಕ್ರಿಯಸ್
ಆರೋಗ್ಯ
Bantwal-ಆಯುಷ್ಮಾನ್ ಭಾರತ್ ಯೋಜನೆಯಡಿ ಬಂಟ್ವಾಳ ಸರ್ಕಾರಿ ಆಸ್ಪತ್ರೆಯಲ್ಲಿ ಉಚಿತ ಹಿಪ್ ರಿಪ್ಲೇಸ್ಮೆಂಟ್ ಶಸ್ತ್ರಚಿಕಿತ್ಸೆ ಯಶಸ್ವಿ
ಕಳೆದ ಎಂಟು ತಿಂಗಳಿನಿಂದ ಎರಡೂ ಸೊಂಟಗಳ ತೀವ್ರ ನೋವಿನಿಂದ ಬಳಲುತ್ತಿದ್ದ 41 ವರ್ಷದ ವ್ಯಕ್ತಿಯೊಬ್ಬರಿಗೆ ಬಂಟ್ವಾಳ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ಆಯುಷ್ಮಾನ್ ಭಾರತ್–ಆರೋಗ್ಯ ಕರ್ನಾಟಕ ಯೋಜನೆಯಡಿ ಸಂಪೂರ್ಣ ಉಚಿತವಾಗಿ ಯಶಸ್ವಿ ಹಿಪ್ ರಿಪ್ಲೇಸ್ಮೆಂಟ್ ಶಸ್ತ್ರಚಿಕಿತ್ಸೆ ನಡೆಸಲಾಗಿದೆ.
ಬಂಟ್ವಾಳ: ಕಳೆದ ಎಂಟು ತಿಂಗಳಿನಿಂದ ಎರಡೂ ಸೊಂಟಗಳ ತೀವ್ರ ನೋವಿನಿಂದ ಬಳಲುತ್ತಿದ್ದ 41 ವರ್ಷದ ವ್ಯಕ್ತಿಯೊಬ್ಬರಿಗೆ ಬಂಟ್ವಾಳ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ಆಯುಷ್ಮಾನ್ ಭಾರತ್–ಆರೋಗ್ಯ ಕರ್ನಾಟಕ ಯೋಜನೆಯಡಿ ಸಂಪೂರ್ಣ ಉಚಿತವಾಗಿ ಯಶಸ್ವಿ ಶಸ್ತ್ರಚಿಕಿತ್ಸೆ ನಡೆಸಲಾಗಿದೆ.
ಬಂಟ್ವಾಳ ತಾಲೂಕಿನ ನಿವಾಸಿಯಾಗಿರುವ ಈ ವ್ಯಕ್ತಿಗೆ ‘ಬೈಲ್ಯಾಟರಲ್ ಹಿಪ್ ಅವಾಸ್ಕುಲರ್ ನೆಕ್ರೋಸಿಸ್’ (Bilateral Hip Avascular Necrosis) ಎಂಬ ಕಾಯಿಲೆ ಇರುವುದು ವೈದ್ಯಕೀಯ ತಪಾಸಣೆಯಲ್ಲಿ ಪತ್ತೆಯಾಗಿತ್ತು. ಇದರಿಂದ ಎರಡೂ ಸೊಂಟದ ಮೂಳೆಗಳು ಹಾನಿಗೊಳಗಾಗಿದ್ದು, ಬಲಭಾಗಕ್ಕಿಂತ ಎಡಭಾಗದ ಮೂಳೆಯ ಸ್ಥಿತಿ ಗಂಭೀರವಾಗಿತ್ತು.
ಈ ಹಿಂದೆ ಮಂಗಳೂರಿನ ವೆನ್ಲಾಕ್ ಜಿಲ್ಲಾ ಆಸ್ಪತ್ರೆ ಸೇರಿದಂತೆ ವಿವಿಧ ಖಾಸಗಿ ಆಸ್ಪತ್ರೆಗಳು ಹಾಗೂ ಮೂಳೆ ತಜ್ಞರನ್ನು ಸಂಪರ್ಕಿಸಿದ್ದ ರೋಗಿಗೆ ಶಸ್ತ್ರಚಿಕಿತ್ಸೆಯೊಂದೇ ಶಾಶ್ವತ ಪರಿಹಾರ ಎಂದು ವೈದ್ಯರು ಸಲಹೆ ನೀಡಿದ್ದರು. ಬಳಿಕ ಸ್ಥಳೀಯರ ಸಹಕಾರದೊಂದಿಗೆ ಹೆಚ್ಚಿನ ಚಿಕಿತ್ಸೆಗಾಗಿ ಬಂಟ್ವಾಳ ತಾಲೂಕು ಸಾರ್ವಜನಿಕ ಆಸ್ಪತ್ರೆಗೆ ದಾಖಲಾಗಿದ್ದರು.
ರೋಗಿಯ ಆರ್ಥಿಕ ಹಾಗೂ ಆರೋಗ್ಯದ ಸಂಕಷ್ಟವನ್ನು ಅರಿತ ಆಸ್ಪತ್ರೆಯ ವೈದ್ಯಕೀಯ ತಂಡವು ಆಯುಷ್ಮಾನ್ ಭಾರತ್–ಆರೋಗ್ಯ ಕರ್ನಾಟಕ ಯೋಜನೆಯಡಿ ಉಚಿತವಾಗಿ ಶಸ್ತ್ರಚಿಕಿತ್ಸೆ ನಡೆಸಲು ನಿರ್ಧರಿಸಿತು. ನವೆಂಬರ್ 4ರಂದು ಯೋಜನೆಯಡಿ ಅನುಮೋದನೆಗಾಗಿ ಅರ್ಜಿ ಸಲ್ಲಿಸಲಾಗಿದ್ದು, ನವೆಂಬರ್ 11ರಂದು ಅನುಮತಿ ದೊರೆತಿತ್ತು. ಬಳಿಕ ನವೆಂಬರ್ 17ರಂದು ವೈದ್ಯರ ತಂಡ ಯಶಸ್ವಿಯಾಗಿ ಶಸ್ತ್ರಚಿಕಿತ್ಸೆ ಪೂರ್ಣಗೊಳಿಸಿದೆ.
ಜಿಲ್ಲಾ ಆರೋಗ್ಯಾಧಿಕಾರಿ ಡಾ. ತಿಮ್ಮಯ್ಯ ಅವರ ಮಾರ್ಗದರ್ಶನದಲ್ಲಿ ಮಾರ್ಗದರ್ಶಕ ಶಸ್ತ್ರಚಿಕಿತ್ಸಕ ಡಾ. ಅಭಿಷೇಕ್ ಶೆಟ್ಟಿ ಹಾಗೂ ಬಂಟ್ವಾಳ ಸರ್ಕಾರಿ ಆಸ್ಪತ್ರೆಯ ಮೂಳೆ ತಜ್ಞ ಡಾ. ಚೇತನ್ರಾಜ್ ಅವರ ನೇತೃತ್ವದಲ್ಲಿ ಶಸ್ತ್ರಚಿಕಿತ್ಸೆ ನೆರವೇರಿತು.
ಅರವಳಿಕೆ ತಜ್ಞರಾದ ಡಾ. ವಿದ್ಯಾಸಾಗರ್ ಹಾಗೂ ಡಾ. ತುಷಾರ್ ಕೆ., ಶಸ್ತ್ರಚಿಕಿತ್ಸಾ ವಿಭಾಗದ ಶುಶ್ರೂಷಾಧಿಕಾರಿಗಳಾದ ವಾಣಿ, ಪುಷ್ಪಾ, ಕೀರ್ತಿಶಾಲಿನಿ, ತಂತ್ರಜ್ಞರಾದ ಧನ್ಯಾ ಮತ್ತು ಶಶಿಕಲಾ ಹಾಗೂ ಡಿ-ದರ್ಜೆ ನೌಕರರಾದ ಸವಿತಾ, ಜಲಜಾ ಮತ್ತು ಚಂದ್ರಾವತಿ ಅವರು ಶಸ್ತ್ರಚಿಕಿತ್ಸೆಗೆ ಸಹಕರಿಸಿದರು.
ಸರ್ಕಾರಿ ಆಸ್ಪತ್ರೆಯಲ್ಲೇ ಯಾವುದೇ ವೆಚ್ಚವಿಲ್ಲದೆ ಗುಣಮಟ್ಟದ ಚಿಕಿತ್ಸೆ ದೊರೆತಿರುವುದಕ್ಕೆ ರೋಗಿಯ ಕುಟುಂಬಸ್ಥರು ಹಾಗೂ ಸಾರ್ವಜನಿಕರು ವೈದ್ಯಕೀಯ ತಂಡಕ್ಕೆ ಕೃತಜ್ಞತೆ ಸಲ್ಲಿಸಿದ್ದಾರೆ ಎಂದು ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ. ದಿನೇಶ್ ಕಾಮತ್ ತಿಳಿಸಿದ್ದಾರೆ.
ಆರೋಗ್ಯ
Puttur-ಪುತ್ತೂರು: ಸಿಟಿ ಆಸ್ಪತ್ರೆಯಲ್ಲಿ ಉಚಿತ ಮೂಳೆ ಖನಿಜ ಸಾಂದ್ರತೆ (BMD) ಚಿಕಿತ್ಸಾ ಶಿಬಿರ
ಪುತ್ತೂರು ಸಿಟಿ ಆಸ್ಪತ್ರೆ ಚಾರಿಟೇಬಲ್ ಟ್ರಸ್ಟ್ ಹಾಗೂ ಇನ್ನರ್ ವೀಲ್ ಕ್ಲಬ್ ಪುತ್ತೂರು ಇವರ ಸಹಯೋಗದಲ್ಲಿ ಇಂದು (ನ.19) ಬೆಳಿಗ್ಗೆ 9.30ರಿಂದ ಮಧ್ಯಾಹ್ನ 2.30ರವರೆಗೆ ಉಚಿತ ಮೂಳೆ ಖನಿಜ ಸಾಂದ್ರತೆ (BMD) ಚಿಕಿತ್ಸಾ ಶಿಬಿರವು ನಡೆಯಿತು. ಪುತ್ತೂರು ಸಿಟಿ ಆಸ್ಪತ್ರೆಯಲ್ಲಿ ಶಿಬಿರವನ್ನು ಏರ್ಪಡಿಸಲಾಗಿತ್ತು.
ಪುತ್ತೂರು: ಪುತ್ತೂರು ಸಿಟಿ ಆಸ್ಪತ್ರೆ ಚಾರಿಟೇಬಲ್ ಟ್ರಸ್ಟ್ ಹಾಗೂ ಇನ್ನರ್ ವೀಲ್ ಕ್ಲಬ್ ಪುತ್ತೂರು ಇವರ ಸಹಯೋಗದಲ್ಲಿ ಇಂದು (ನ.19) ಬೆಳಿಗ್ಗೆ 9.30ರಿಂದ ಮಧ್ಯಾಹ್ನ 2.30ರವರೆಗೆ ಉಚಿತ ಮೂಳೆ ಖನಿಜ ಸಾಂದ್ರತೆ (BMD) ಚಿಕಿತ್ಸಾ ಶಿಬಿರವು ನಡೆಯಿತು. ಪುತ್ತೂರು ಸಿಟಿ ಆಸ್ಪತ್ರೆಯಲ್ಲಿ ಶಿಬಿರವನ್ನು ಏರ್ಪಡಿಸಲಾಗಿತ್ತು.
ಬೆನ್ನು ನೋವು, ಮೊಣಕಾಲು ನೋವು, ಸೊಂಟ ನೋವು ಹಾಗೂ ಸ್ನಾಯು ನೋವು ಮುಂತಾದ ಸಮಸ್ಯೆಗಳು ಮೂಳೆ ಸವೆತ ಅಥವಾ ಮುಂದಿನ ದಿನಗಳಲ್ಲಿ ಮೂಳೆ ಮುರಿತಕ್ಕೆ ಕಾರಣವಾಗುವ ಸಾಧ್ಯತೆಯಿದೆ. ಇಂತಹ ಲಕ್ಷಣಗಳನ್ನು ನಿರ್ಲಕ್ಷಿಸದೆ ಆರಂಭದಲ್ಲೇ ತಪಾಸಣೆ ಮಾಡಿಸಿಕೊಂಡು ಸೂಕ್ತ ಚಿಕಿತ್ಸೆ ಪಡೆಯುವುದು ಅಗತ್ಯ. ಈ ನಿಟ್ಟಿನಲ್ಲಿ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಉಚಿತ BMD ಶಿಬಿರವನ್ನು ಆಯೋಜಿಸಲಾಗಿತ್ತು. ಆರೋಗ್ಯ ಸೇವಾ ವಿಭಾಗದ ಇಂಡ್ಕೆಮಿ ಹೆಲ್ತ್ ಸ್ಪೆಷಾಲಿಟಿ ಪ್ರೈವೇಟ್ ಲಿಮಿಟೆಡ್ ಪ್ರಾಯೋಜಕತ್ವದಲ್ಲಿ ಶಿಬಿರ ನಡೆಯಿತು.
ಶಿಬಿರದಲ್ಲಿ ಮೂಳೆ ತಜ್ಞರಾದ ಡಾ. ಭಾಸ್ಕರ್ ಎಸ್. (D’Ortho), ಆಡಳಿತ ನಿರ್ದೇಶಕರು, ಪುತ್ತೂರು ಸಿಟಿ ಆಸ್ಪತ್ರೆ ಇವರು ತಪಾಸಣೆ ಹಾಗೂ ಸಲಹೆ ನೀಡಿದರು.
ಇನ್ನರ್ ವೀಲ್ ಕ್ಲಬ್ ನ ನಿರ್ದೇಶಕಿ ಮಂಜುಳ ಭಾಸ್ಕರ್, ಅಧ್ಯಕ್ಷೆ ಮನೋರಮಾ ಸೂರ್ಯ, ಖಜಾಂಜಿ ಕವಿತಾ ಕೊಳತ್ತಾಯ, ಕಾರ್ಯದರ್ಶಿ ಶ್ರುತಿ ಎಸ್. ಬಂಗೇರ ಶಿಬಿರದಲ್ಲಿ ಉಪಸ್ಥಿತರಿದ್ದರು.
ಆರೋಗ್ಯ
‘Ritu Taare’ scheme-35 ವರ್ಷ ಮೇಲ್ಪಟ್ಟ ಮಹಿಳೆಯರ ಆರೋಗ್ಯಕ್ಕೆ ‘ಋತು ತಾರೆ’ ಯೋಜನೆ; ದ.ಕ.ದಲ್ಲಿ ಮೂರು ತಿಂಗಳ ಪ್ರಾಯೋಗಿಕ ಅನುಷ್ಠಾನ..! ನಟಿ ರಮ್ಯಾ ರಾಯಭಾರಿ
35 ವರ್ಷ ಮೇಲ್ಪಟ್ಟ ಮಹಿಳೆಯರ ಆರೋಗ್ಯ ಮತ್ತು ಆರೈಕೆಗೆ ವಿಶೇಷ ಆದ್ಯತೆ ನೀಡುವ ಉದ್ದೇಶದಿಂದ ರಾಜ್ಯ ಸರಕಾರ ‘ಋತು ತಾರೆ’ ಎಂಬ ಮಧ್ಯವಯಸ್ಕ ಮಹಿಳೆಯರ ಆರೋಗ್ಯ ಮತ್ತು ಮೆನೋಪಾಸ್ ಕಾರ್ಯಕ್ರಮವನ್ನು ಜಾರಿಗೆ ತಂದಿದೆ. ಈ ಕಾರ್ಯಕ್ರಮದ ರಾಯಭಾರಿಯಾಗಿ ಚಿತ್ರನಟಿ ರಮ್ಯಾ ಕಾರ್ಯನಿರ್ವಹಿಸಲಿದ್ದಾರೆ.
ಬೆಂಗಳೂರು: 35 ವರ್ಷ ಮೇಲ್ಪಟ್ಟ ಮಹಿಳೆಯರ ಆರೋಗ್ಯ ಮತ್ತು ಆರೈಕೆಗೆ ವಿಶೇಷ ಆದ್ಯತೆ ನೀಡುವ ಉದ್ದೇಶದಿಂದ ರಾಜ್ಯ ಸರಕಾರ ‘ಋತು ತಾರೆ’ ಎಂಬ ಮಧ್ಯವಯಸ್ಕ ಮಹಿಳೆಯರ ಆರೋಗ್ಯ ಮತ್ತು ಮೆನೋಪಾಸ್ ಕಾರ್ಯಕ್ರಮವನ್ನು ಜಾರಿಗೆ ತಂದಿದೆ.
ಈ ಕುರಿತು ಆರೋಗ್ಯ ಇಲಾಖೆ ಆದೇಶ ಹೊರಡಿಸಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೂರು ತಿಂಗಳ ಕಾಲ ಪ್ರಾಯೋಗಿಕವಾಗಿ ಕಾರ್ಯಕ್ರಮ ಅನುಷ್ಠಾನಗೊಳ್ಳಲಿದೆ. ಈ ಹಂತದ ಅನುಭವದ ಆಧಾರದಲ್ಲಿ ಬಳಿಕ ರಾಜ್ಯದಾದ್ಯಂತ ವಿಸ್ತರಿಸಲು ಸರಕಾರ ಉದ್ದೇಶಿಸಿದೆ.
ಮಹಿಳೆಯರ ಆರೋಗ್ಯವು ಕೇವಲ ತಾಯ್ತನಕ್ಕೆ ಸೀಮಿತವಾಗಿಲ್ಲ. ಮೆನೋಪಾಸ್ ಹಂತದಲ್ಲಿ ನಿದ್ರಾಹೀನತೆ, ದೇಹದಲ್ಲಿ ಏಕಾಏಕಿ ಬಿಸಿಯ ಅನುಭವ, ಕೀಲು ನೋವು, ಮೂಳೆಗಳ ದುರ್ಬಲತೆ, ಆತಂಕ ಹಾಗೂ ಮಾನಸಿಕ ಏರುಪೇರು ಸೇರಿದಂತೆ ಹಲವು ಸಮಸ್ಯೆಗಳು ಕಾಣಿಸಿಕೊಳ್ಳಬಹುದು. ಇವುಗಳನ್ನು ವಯಸ್ಸಿನ ಸಹಜ ಬದಲಾವಣೆ ಎಂದು ನಿರ್ಲಕ್ಷಿಸದೆ ಸೂಕ್ತ ತಪಾಸಣೆ ಮತ್ತು ಚಿಕಿತ್ಸೆ ಪಡೆಯುವುದು ಅಗತ್ಯ ಎಂದು ಸರಕಾರ ತಿಳಿಸಿದೆ.
‘ಋತು ತಾರೆ’ ಯೋಜನೆಯಡಿ ಮಹಿಳೆಯರಿಗಾಗಿ ಪ್ರತ್ಯೇಕ ಕ್ಲಿನಿಕ್ಗಳನ್ನು ತೆರೆಯಲಾಗುತ್ತದೆ. ಇಲ್ಲಿ ಸಮಗ್ರ ಆರೋಗ್ಯ ತಪಾಸಣೆ, ಮಾನಸಿಕ ಆರೋಗ್ಯ ಮತ್ತು ಪೌಷ್ಟಿಕ ಆಹಾರದ ಕುರಿತು ಮಾರ್ಗದರ್ಶನ ನೀಡಲಾಗುತ್ತದೆ. ಅಗತ್ಯವಿರುವವರಿಗೆ ತಜ್ಞ ವೈದ್ಯರಿಂದ ಚಿಕಿತ್ಸೆ ಒದಗಿಸುವುದರ ಜೊತೆಗೆ, ಆರೋಗ್ಯದ ವಿವರಗಳನ್ನು ದಾಖಲಿಸಲು ‘ಮಿಡ್-ಲೈಫ್ ಹೆಲ್ತ್ ಕಾರ್ಡ್’ ವಿತರಿಸಲಾಗುತ್ತದೆ.
ಈ ಕಾರ್ಯಕ್ರಮದ ರಾಯಭಾರಿಯಾಗಿ ಚಿತ್ರನಟಿ ರಮ್ಯಾ ಕಾರ್ಯನಿರ್ವಹಿಸಲಿದ್ದಾರೆ. ಮೆನೋಪಾಸ್ ಹಾಗೂ ಮಧ್ಯವಯಸ್ಕ ಮಹಿಳೆಯರ ಆರೋಗ್ಯದ ಕುರಿತು ಜಾಗೃತಿ ಮೂಡಿಸಿ, ಕಾರ್ಯಕ್ರಮದ ಸಂದೇಶವನ್ನು ರಾಜ್ಯದ ಮೂಲೆಮೂಲೆಗೂ ತಲುಪಿಸಲು ಅವರು ಸಹಕರಿಸಲಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೂರು ತಿಂಗಳ ಪ್ರಾಯೋಗಿಕ ಅನುಷ್ಠಾನ ಪೂರ್ಣಗೊಂಡ ಬಳಿಕ ಯೋಜನೆಯನ್ನು ರಾಜ್ಯಾದ್ಯಂತ ವಿಸ್ತರಿಸಲಾಗುವುದು. ಮಹಿಳೆಯರ ಬದುಕಿನ ಪ್ರತಿಯೊಂದು ಹಂತದಲ್ಲೂ ಉತ್ತಮ ಆರೋಗ್ಯ ಸೇವೆ, ಸೂಕ್ತ ಆರೈಕೆ ಮತ್ತು ಘನತೆಯ ಬದುಕು ದೊರೆಯಬೇಕು ಎಂಬ ಉದ್ದೇಶದಿಂದ ಈ ಕಾರ್ಯಕ್ರಮ ರೂಪಿಸಲಾಗಿದೆ ಎಂದು ಸರಕಾರ ತಿಳಿಸಿದೆ.
-
ಬಿಗ್ ನ್ಯೂಸ್23 hours agoHigh Court-Social Media ಅಕೌಂಟ್ ಇದ್ದ ಮಾತ್ರಕ್ಕೆ ಮನಸ್ಸಿಗೆ ಬಂದಿದ್ದನ್ನೆಲ್ಲ ಪೋಸ್ಟ್ ಮಾಡುವ Free Licence ಇಲ್ಲ : ಬೆಳ್ತಂಗಡಿಯ ಮೋಹನ್ ಬೋಳಂಗಡಿ – ಶುಭಾ ರೈ ವಿರುದ್ಧ ದಾಖಲಾದ ಪ್ರಕರಣದಲ್ಲಿ ಹೈಕೋರ್ಟ್ ಮಹತ್ವದ ಎಚ್ಚರಿಕೆ
-
ದಕ್ಷಿಣ ಕನ್ನಡ21 hours ago
Ashok janamana 2026 : ಪುತ್ತೂರಿನಲ್ಲಿ ಅದ್ದೂರಿ ‘ಅಶೋಕ ಜನಮನ-2026’ ಸಂಭ್ರಮಕ್ಕೆ ಕ್ಷಣಗಣನೆ ! ಬಿ.ಕೆ. ಹರಿಪ್ರಸಾದ್, ಕೃಷ್ಣ ಬೈರೇಗೌಡ, ಯು.ಟಿ. ಖಾದರ್ ಸಹಿತ ರಾಜಕೀಯ, ಧಾರ್ಮಿಕ ಗಣ್ಯರ ಸಮಾಗಮ
-
ನಿಧನ ವಾರ್ತೆ23 hours agoSavitri Devi-ಸಿಎಂ ಯೋಗಿ ಆದಿತ್ಯನಾಥ್ ತಾಯಿ ಸಾವಿತ್ರಿ ದೇವಿ ನಿಧನ
-
ಅಪರಾಧ22 hours agoMangalore-ಮಂಗಳೂರು: ಕೆಲಸ ಮಾಡಿದ ಹಣ ನೀಡದ ವಿಚಾರಕ್ಕೆ ಮನೆ ಮಾಲೀಕನ ಕೊಲೆ; ಆರೋಪಿಗೆ ಜೀವಾವಧಿ ಶಿಕ್ಷೆ, ಮತ್ತೊಬ್ಬ ಖುಲಾಸೆ
-
ಬಿಗ್ ನ್ಯೂಸ್7 hours agoBail rejected-ಸಿದ್ದರಾಮಯ್ಯ ವಿರುದ್ಧದ ‘ಸ್ಟಿಂಗ್’ ಪ್ರಕರಣ: ಕೃಪಾ ಆಳ್ವಾ, ರಾಕೇಶ್ ಶೆಟ್ಟಿ ಸೇರಿ 6 ಮಂದಿಯ ಜಾಮೀನು ಅರ್ಜಿ ವಜಾ
-
ನಿಧನ ವಾರ್ತೆ6 hours agoHeart attack-ಸಾಲಿಗ್ರಾಮ: ಕಚೇರಿಯಲ್ಲೇ ಹೃದಯಾಘಾತ; ಬಹುಮುಖ ಪ್ರತಿಭೆ ದಿನೇಶ್ ಹೊಳ್ಳ ನಿಧನ
-
ನಿಧನ ವಾರ್ತೆ6 hours agoMudbidri-ಮಂಗಳೂರಿನಲ್ಲಿ ಮೇಲ್ಛಾವಣಿ ಕೆಲಸದ ವೇಳೆ ಅವಘಡ: ಮೂಡುಬಿದಿರೆ ತಾ.ಪಂ. ಮಾಜಿ ಉಪಾಧ್ಯಕ್ಷ ಸಾವು
-
ಮಂಗಳೂರು23 hours agoSavanuru Cooperative Society-ʻಅತ್ಯುತ್ತಮ ವಿವಿಧೋದ್ದೇಶ ಸಹಕಾರ ಸಂಘʼಪ್ರಶಸ್ತಿಯ ಗರಿ ಮುಡಿಗೇರಿಸಿಕೊಂಡ ‘ಆದರ್ಶ ವಿವಿಧೋದ್ದೇಶ ಸಹಕಾರ ಸಂಘ’; ಸವಣೂರು ಸೀತಾರಾಮ ರೈ ಅವರಿಗೆ ಜಿ.ಟಿ. ದೇವೇಗೌಡರಿಂದ ಪ್ರಶಸ್ತಿ ಪ್ರಧಾನ















