Connect with us

ಮಂಗಳೂರು

Mangalore-ಮಗುವಿನ ಜತೆ ಸಮದ್ರಕ್ಕೆ ಹಾರಲು ಬಂದು ವಿಡಿಯೋ ಹರಿ ಬಿಟ್ಟ ಯುವಕ – ಸಾಯೋದು ಬೇಡ ಅಪ್ಪ ಎಂದ ಮಗುವಿನ ಆರ್ತನಾದ;- ಮಾಹಿತಿ ತಿಳಿಯುತ್ತಲೇ ಪೊಲೀಸರಿಂದ ರೋಚಕ ಕಾರ್ಯಾಚರಣೆ: ಮನ ಬದಲಿಸಿ ಯುವಕ ಮನೆಗೆ ತೆರಳಿ ಹಗ್ಗಕ್ಕೆ ಕೊರಳೊಡ್ಡುವ ವೇಳೆ ಪೊಲೀಸ್‌ ಎಂಟ್ರಿ | ಖಾಕಿ ಕಾರ್ಯಕ್ಕೆ ವ್ಯಾಪಕ ಶ್ಲ್ಯಾಘನೆ

Published

on

Ad Widget

Ad Widget

Ad Widget

Ad Widget

ಕೌಟುಂಬಿಕ ಕಲಹದಿಂದ ಮನನೊಂದು ತನ್ನ ನಾಲ್ಕು ವರ್ಷದ ಹೆಣ್ಣು ಮಗಳೊಂದಿಗೆ ಸಮುದ್ರಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ್ದ ವ್ಯಕ್ತಿಯೊಬ್ಬನನ್ನು ಮಂಗಳೂರಿನ ಕಾವೂರಿನಲ್ಲಿ ಪೊಲೀಸರು ಸಮಯಪ್ರಜ್ಞೆಯಿಂದ ರಕ್ಷಿಸಿದ್ದಾರೆ. ತಂದೆ-ಮಗಳು ಆತ್ಮಹತ್ಯೆ ಯತ್ನಿಸುತ್ತಿರುವ ವಿಡಿಯೋವನ್ನು ವಾಟ್ಸಾಪ್‌ನಲ್ಲಿ ಹಂಚಿಕೊಂಡಿದ್ದಲ್ಲದೆ, ಬಳಿಕ ಮನೆಗೆ ಬಂದು ನೇಣು ಹಾಕಿಕೊಳ್ಳಲು ಯತ್ನಿಸಿದ್ದಾಗ ಪೊಲೀಸರು ತಡೆದಿದ್ದಾರೆ.

Ad Widget

Ad Widget

Ad Widget

Ad Widget

ಮಂಗಳೂರು, ನ. 4: ಕೌಟುಂಬಿಕ ಕಲಹದಿಂದ ಮನನೊಂದು ತನ್ನ ನಾಲ್ಕು ವರ್ಷದ ಹೆಣ್ಣು ಮಗಳೊಂದಿಗೆ ಸಮುದ್ರಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ್ದ ವ್ಯಕ್ತಿಯೊಬ್ಬನನ್ನು ಮಂಗಳೂರಿನ ಕಾವೂರಿನಲ್ಲಿ ಪೊಲೀಸರು ಸಮಯಪ್ರಜ್ಞೆಯಿಂದ ರಕ್ಷಿಸಿದ್ದಾರೆ. ತಂದೆ-ಮಗಳು ಆತ್ಮಹತ್ಯೆ ಯತ್ನಿಸುತ್ತಿರುವ ವಿಡಿಯೋವನ್ನು ವಾಟ್ಸಾಪ್‌ನಲ್ಲಿ ಹಂಚಿಕೊಂಡಿದ್ದಲ್ಲದೆ, ಬಳಿಕ ಮನೆಗೆ ಬಂದು ನೇಣು ಹಾಕಿಕೊಳ್ಳಲು ಯತ್ನಿಸಿದ್ದಾಗ ಪೊಲೀಸರು ತಡೆದಿದ್ದಾರೆ.

Ad Widget

Ad Widget alt="Ad Widget"/>

Ad Widget

ಕಾವೂರು ಶಾಂತಿನಗರದ ನಿವಾಸಿ, 35 ವರ್ಷದ ರಾಜೇಶ್ ಅಲಿಯಾಸ್ ಸಂತು ರಕ್ಷಿಸಲ್ಪಟ್ಟ ವ್ಯಕ್ತಿ.

Ad Widget

Ad Widget <> Ad Widget

ಏಳು ವರ್ಷಗಳ ಹಿಂದೆ ಬಜ್ಜೆಯ ಯುವತಿಯನ್ನು ಪ್ರೀತಿಸಿ ಮದುವೆಯಾಗಿದ್ದ ರಾಜೇಶ್‌ಗೆ ನಾಲ್ಕು ವರ್ಷದ ಹೆಣ್ಣು ಮಗುವಿದೆ. ಇತ್ತೀಚಿನ ದಿನಗಳಲ್ಲಿ ರಾಜೇಶ್ ತನ್ನ ಪತ್ನಿಯ ನಡತೆ ಬಗ್ಗೆ ಅನುಮಾನ ಪಡುತ್ತಾ ನಿರಂತರವಾಗಿ ಜಗಳ ತೆಗೆದು, ದೈಹಿಕ ಹಿಂಸೆ ನೀಡುತ್ತಿದ್ದ ಎನ್ನಲಾಗಿದೆ.

ಸೋಮವಾರ ಸಂಜೆ, ಪತ್ನಿ ಸರಿಯಿಲ್ಲ ಎಂದು ಮನನೊಂದ ರಾಜೇಶ್, ಮಗಳನ್ನು ಕರೆದುಕೊಂಡು ತಣ್ಣೀರುಬಾವಿ ಬೀಚ್‌ಗೆ ಹೋಗಿದ್ದಾನೆ. “ನಾವು ಸಾಯೋಣ ಮಗಳೇ, ಅವಳಿಗೆ ಬೇಕಾದ ರೀತಿ ಇರಲಿ, ನಿನ್ನ ತಾಯಿ ಸರಿಯಿಲ್ಲ. ನಮಗೆ ಯಾರೂ ಬೇಡ” ಎಂದು ಹೇಳುತ್ತಾ ನೀರಿನತ್ತ ನಡೆಯುವ ವಿಡಿಯೋವನ್ನು ಮಾಡಿ ತನ್ನ ಅಕ್ಕ ಮತ್ತು ಇತರ ಸಂಬಂಧಿಕರಿಗೆ ವಾಟ್ಸಾಪ್ ಮೂಲಕ ಕಳುಹಿಸಿದ್ದಾನೆ. ಈ ವಿಡಿಯೋ ಕ್ಷಣಾರ್ಧದಲ್ಲಿ ಹರಿದಾಡಿ ಸಂಜೆ 7 ಗಂಟೆಯ ಸುಮಾರಿಗೆ ಪಣಂಬೂರು ಪೊಲೀಸರ ಕೈ ಸೇರಿದೆ.
ವಿಡಿಯೋದಲ್ಲಿ ರಾಜೇಶ್ ಮುಖ ಕಾಣಿಸದಿದ್ದರೂ, ಸಮುದ್ರದ ಕಡೆಗೆ ನಡೆಯುತ್ತಿರುವ ತಂದೆ-ಮಗಳ ನೆರಳು ಮಾತ್ರ ಇತ್ತು. ತಕ್ಷಣ ಕಾರ್ಯಪ್ರವೃತ್ತರಾದ ಪಣಂಬೂರು ಇನ್‌ಸ್ಪೆಕ್ಟರ್ ಮಹಮ್ಮದ್ ಸಲೀಂ ನೇತೃತ್ವದ ತಂಡ, ಅದು ತಣ್ಣೀರುಬಾವಿ ಬೀಚ್ ಆಗಿರಬಹುದೆಂದು ಊಹಿಸಿ ಹುಡುಕಾಟ ಆರಂಭಿಸಿತು. ವಿಡಿಯೋದಲ್ಲಿನ ಚಿತ್ರಣಗಳು ಮತ್ತು ಸ್ಥಳೀಯರಿಂದ ಬಂದ ಮಾಹಿತಿ ಆಧರಿಸಿ, ಸೈಬರ್ ಪೊಲೀಸ್ ಸಹಾಯದಿಂದ ರಾಜೇಶ್‌ನ ಮೊಬೈಲ್ ಸಂಖ್ಯೆಯನ್ನು ಪತ್ತೆಹಚ್ಚಿ ಲೊಕೇಶನ್ ನೋಡಿದಾಗ ಅದು ಕಾವೂರು ಶಾಂತಿನಗರವನ್ನು ತೋರಿಸಿದೆ.

Ad Widget

Ad Widget

ಕೂಡಲೇ ಕಾವೂರು ಠಾಣೆಗೆ ಮಾಹಿತಿ ನೀಡಿ, ಪಣಂಬೂರು ಠಾಣೆಯ ಫಕೀರಪ್ಪ ಶರಣಪ್ಪ ಮತ್ತು ರಾಕೇಶ್ ಅವರಿದ್ದ ತಂಡವನ್ನು ರಾಜೇಶ್ ಮನೆಗೆ ಕಳುಹಿಸಲಾಯಿತು. ರಾತ್ರಿ 10 ಗಂಟೆಯ ಸುಮಾರಿಗೆ ಮನೆಗೆ ತಲುಪಿದಾಗ ಬಾಗಿಲು ಹಾಕಲಾಗಿತ್ತು ಮತ್ತು ಒಳಗಿನಿಂದ ಯಾವುದೇ ಸ್ಪಂದನೆ ಇರಲಿಲ್ಲ. ಇನ್‌ಸ್ಪೆಕ್ಟರ್ ಸಲೀಂ ಸೂಚನೆಯಂತೆ ಪೊಲೀಸರು ಬಾಗಿಲು ಒಡೆದು ಒಳನುಗ್ಗಿದರು. ಆಗ ರಾಜೇಶ್ ಛಾವಣಿಗೆ ನೇಣು ಹಗ್ಗ ಕಟ್ಟಿ, ಮಗಳೊಂದಿಗೆ ನೇಣಿಗೆ ಶರಣಾಗಲು ಸಿದ್ಧವಾಗುತ್ತಿದ್ದನು. ಕ್ಷಣಾರ್ಧದಲ್ಲಿ ಪೊಲೀಸರು ಆತನನ್ನು ಹಿಡಿದು, ಎರಡು ಜೀವಗಳನ್ನು ರಕ್ಷಿಸಿದರು.

“ವಿಡಿಯೋದಲ್ಲಿ ತುಳುವಿನಲ್ಲಿ ಮಾತನಾಡುತ್ತಾ ಸಮುದ್ರ ಕಡೆಗೆ ಹೋಗುವುದು ಮಾತ್ರ ಇತ್ತು. ಸಣ್ಣ ಮಗು ಸಾಯೋದು ಬೇಡಪ್ಪಾ ಎನ್ನುತ್ತಿರುವುದನ್ನು ಕೇಳಿ ಕರುಳು ಚುರುಕ್ ಎಂದಿತ್ತು. ಮಂಗಳೂರಿನದ್ದೋ, ಉಡುಪಿಯದ್ದೋ ಎಲ್ಲಿಯ ವಿಡಿಯೋ ಅಂತಲೇ ಗೊತ್ತಿರಲಿಲ್ಲ. ಆದರೆ ಏಳು ಗಂಟೆಯಿಂದ ರಾತ್ರಿ ಹತ್ತು ಗಂಟೆ ವರೆಗೆ ನಾವು ಒಂದು ಜೀವ ಉಳಿಸುವುದಕ್ಕಾಗಿ ಪ್ರಯತ್ನ ಪಟ್ಟಿದ್ದು ಸಾರ್ಥಕವಾಯಿತು” ಎಂದು ಪಣಂಬೂರು ಇನ್‌ಸ್ಪೆಕ್ಟರ್ ಮಹಮ್ಮದ್ ಸಲೀಂ ಸಂತಸ ವ್ಯಕ್ತಪಡಿಸಿದ್ದಾರೆ.

ಮಂಗಳವಾರ ಕಾವೂರು ಠಾಣೆಯಲ್ಲಿ ಗಂಡ-ಹೆಂಡತಿ ಇಬ್ಬರನ್ನೂ ಕರೆಸಿ ಪೊಲೀಸರು ಬುದ್ಧಿವಾದ ಹೇಳಿದ್ದಾರೆ. ಆದರೆ, ಪತ್ನಿ ರಾಜೇಶ್‌ ಜೊತೆ ಬಾಳಲು ಒಪ್ಪದೆ, ವಿಚ್ಛೇದನ ನೀಡಿ ಮಗುವನ್ನು ತಾನೇ ಸಾಕುವುದಾಗಿ ಹೇಳಿದ್ದಾಳೆ.

ಪೊಲೀಸರು ಆತ್ಮಹತ್ಯೆ ಯತ್ನದ ಸೆಕ್ಷನ್ ತೆಗೆದುಹಾಕಿರುವ ಕಾರಣ ಪ್ರಕರಣ ದಾಖಲಿಸಿಲ್ಲವಾದರೂ, ಪಣಂಬೂರು ಪೊಲೀಸರ ಸಮಯಪ್ರಜ್ಞೆ ಮತ್ತು ಕಾರ್ಯಾಚರಣೆಗೆ ನಗರ ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಮತ್ತು ಸಾರ್ವಜನಿಕರಿಂದ ವ್ಯಾಪಕ ಶ್ಲಾಘನೆ ವ್ಯಕ್ತವಾಗಿದೆ.

Ad Widget
Click to comment

Leave a Reply

ಮಂಗಳೂರು

Bantwal rape case verdict ಮಂಗಳೂರು: ಮಹಿಳೆ ಮೇಲೆ ಹಲ್ಲೆ ನಡೆಸಿ ಅತ್ಯಾಚಾರ : ಆರೋಪಿಗೆ 10 ವರ್ಷ ಜೈಲು, ₹54 ಸಾವಿರ ದಂಡ

Published

on

Ad Widget

Ad Widget

Ad Widget

Ad Widget

ಬಂಟ್ವಾಳ: ಮಹಿಳೆಗೆ ಹಲ್ಲೆ ನಡೆಸಿ ಅತ್ಯಾಚಾರವೆಸಗಿ , ಜೀವ ಬೆದರಿಕೆ ಹಾಕಿದ ಅಪರಾಧಿಗೆ 10 ವರ್ಷಗಳ ಜೈಲು ಶಿಕ್ಷೆ ಹಾಗೂ ₹54 ಸಾವಿರ ದಂಡ ವಿಧಿಸಿ ಮಂಗಳೂರಿನ 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಆದೇಶಿಸಿದೆ.

Ad Widget

Ad Widget

Ad Widget

Ad Widget

Bantwal rape case verdict: ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2021ರಲ್ಲಿ ಈ ಘಟನೆ ನಡೆದಿತ್ತು. ಸಂತ್ರಸ್ತ ಮಹಿಳೆಯ ಮನೆಯ ನೆರೆಮನೆಯ ನಿವಾಸಿಯಾಗಿದ್ದ ಅನಿಲ್ ಎಂಬಾತ ಮಹಿಳೆಯ ಮೇಲೆ ಹಲ್ಲೆ ನಡೆಸಿ ಅತ್ಯಾಚಾರವೆಸಗಿದ್ದಲ್ಲದೆ, ಜೀವ ಬೆದರಿಕೆಯನ್ನೂ ಹಾಕಿದ್ದ ಎಂದು ಆರೋಪಿಸಲಾಗಿತ್ತು. ಈ ಕುರಿತು ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅ.ಕ್ರ. 92/2021ರಂತೆ ಭಾರತೀಯ ದಂಡ ಸಂಹಿತೆಯ ಕಲಂ 376, 448, 323, 504 ಹಾಗೂ 506ರ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.

Ad Widget

Ad Widget alt="Ad Widget"/>

Ad Widget

ಪ್ರಕರಣದ ತನಿಖೆ ಕೈಗೆತ್ತಿಕೊಂಡಿದ್ದ ಅಂದಿನ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕ ಪ್ರಸನ್ನ ಎಂ.ಎಸ್. ಅವರು ಆರೋಪಿಯನ್ನು ಪತ್ತೆಹಚ್ಚಿದ್ದರು. ಬಳಿಕ ಪ್ರಕರಣದ ತನಿಖಾಧಿಕಾರಿಗಳಾಗಿದ್ದ ಬಂಟ್ವಾಳ ವೃತ್ತ ನಿರೀಕ್ಷಕ ಟಿ.ಡಿ. ನಾಗರಾಜ್ ಅವರು ಅಗತ್ಯ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.

Ad Widget

Ad Widget <> Ad Widget

ಮಂಗಳೂರಿನ 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದಲ್ಲಿ ನಡೆದ ವಿಚಾರಣೆಯಲ್ಲಿ ಆರೋಪಿತನ ವಿರುದ್ಧದ ಆರೋಪಗಳು ಸಾಬೀತಾದ ಹಿನ್ನೆಲೆಯಲ್ಲಿ ನ್ಯಾಯಾಧೀಶರಾದ ರಾಜೇಶ ಮಾರುತಿ ಕಾಮಟೆ ಅವರು ಆರೋಪಿಗೆ 10 ವರ್ಷಗಳ ಜೈಲು ಶಿಕ್ಷೆ ಹಾಗೂ ₹54,000 ದಂಡ ವಿಧಿಸಿ ಆದೇಶ ಹೊರಡಿಸಿದ್ದಾರೆ.

ಪ್ರಕರಣದಲ್ಲಿ ಸರ್ಕಾರಿ ಅಭಿಯೋಜಕ ಮೋತಿಲಾಲ ಚೌಧರಿ ಅವರು ಸರ್ಕಾರದ ಪರವಾಗಿ ಸಮರ್ಥವಾಗಿ ವಾದ ಮಂಡಿಸಿದ್ದರು.

Continue Reading

ಮಂಗಳೂರು

Mangalore-ಮಂಗಳೂರು ವಿದ್ಯಾರ್ಥಿನಿ ಅಪಹರಣ ಪ್ರಕರಣಕ್ಕೆ ಹೊಸ ತಿರುವು: ಮನೆಯವರ ಜೊತೆ ತೆರಳಲು ಯುವತಿ ನಕಾರ..!

Published

on

Ad Widget

Ad Widget

Ad Widget

Ad Widget

ಮಂಗಳೂರಿನ ದೇರಳಕಟ್ಟೆಯ ಖಾಸಗಿ ವೈದ್ಯಕೀಯ ಕಾಲೇಜು ಆವರಣದಿಂದ ವೈದ್ಯಕೀಯ ವಿದ್ಯಾರ್ಥಿನಿಯನ್ನು ಮಹೀಂದ್ರಾ ಥಾರ್ ವಾಹನದಲ್ಲಿ ಬಲವಂತವಾಗಿ ಕರೆದೊಯ್ದಿದ್ದ ಪ್ರಕರಣ ಇದೀಗ ಹೊಸ ತಿರುವು ಪಡೆದುಕೊಂಡಿದೆ. ಕೇರಳಂನಲ್ಲಿ ವಿದ್ಯಾರ್ಥಿನಿಯನ್ನು ಪತ್ತೆಹಚ್ಚಿದ ಪೊಲೀಸರು ಆಕೆಯ ಹೇಳಿಕೆ ದಾಖಲಿಸಿದ್ದು, ಮನೆಯವರ ಜೊತೆ ತೆರಳಲು ತನಗೆ ಇಷ್ಟವಿಲ್ಲ ಎಂದು ಯುವತಿ ಸ್ಪಷ್ಟಪಡಿಸಿದ್ದಾಳೆ.

Ad Widget

Ad Widget

Ad Widget

Ad Widget

ಮಂಗಳೂರು: ಮಂಗಳೂರಿನ ದೇರಳಕಟ್ಟೆಯ ಖಾಸಗಿ ವೈದ್ಯಕೀಯ ಕಾಲೇಜು ಆವರಣದಿಂದ ವೈದ್ಯಕೀಯ ವಿದ್ಯಾರ್ಥಿನಿಯನ್ನು ಮಹೀಂದ್ರಾ ಥಾರ್ ವಾಹನದಲ್ಲಿ ಬಲವಂತವಾಗಿ ಕರೆದೊಯ್ದಿದ್ದ ಪ್ರಕರಣ ಇದೀಗ ಹೊಸ ತಿರುವು ಪಡೆದುಕೊಂಡಿದೆ. ಕೇರಳಂನಲ್ಲಿ ವಿದ್ಯಾರ್ಥಿನಿಯನ್ನು ಪತ್ತೆಹಚ್ಚಿದ ಪೊಲೀಸರು ಆಕೆಯ ಹೇಳಿಕೆ ದಾಖಲಿಸಿದ್ದು, ಮನೆಯವರ ಜೊತೆ ತೆರಳಲು ತನಗೆ ಇಷ್ಟವಿಲ್ಲ ಎಂದು ಯುವತಿ ಸ್ಪಷ್ಟಪಡಿಸಿದ್ದಾಳೆ.

Ad Widget

Ad Widget alt="Ad Widget"/>

Ad Widget

ಏನಿದು ಪ್ರಕರಣ?
ನ.19ರ ಗುರುವಾರ ಸಂಜೆ ಕಾಲೇಜು ಆವರಣದಿಂದ ಕರೆದೊಯ್ಯಲ್ಪಟ್ಟ ಯುವತಿ ದಕ್ಷಿಣ ಕನ್ನಡ ಜಿಲ್ಲೆಯ ಪುಂಜಾಲಕಟ್ಟೆ ಮೂಲದವರಾಗಿದ್ದು, ದೇರಳಕಟ್ಟೆಯ ಕಣಚೂರು ವೈದ್ಯಕೀಯ ಕಾಲೇಜಿನಲ್ಲಿ ಪ್ರಥಮ ವರ್ಷದ ಎಂಬಿಬಿಎಸ್ ವ್ಯಾಸಂಗ ಮಾಡುತ್ತಿದ್ದಾರೆ ಎನ್ನಲಾಗಿದೆ.

Ad Widget

Ad Widget <> Ad Widget

ಯುವತಿ ಮಂಗಳೂರಿನ ಮತ್ತೊಂದು ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವ್ಯಾಸಂಗ ಮಾಡುತ್ತಿರುವ ಯುವಕನನ್ನು ಪ್ರೀತಿಸುತ್ತಿದ್ದಳು ಎನ್ನಲಾಗಿದೆ. ಈ ವಿಚಾರ ತಿಳಿದ ಯುವತಿಯ ಪೋಷಕರು ಹಾಗೂ ಸಂಬಂಧಿಕರು ಕಾಲೇಜು ಆವರಣಕ್ಕೆ ಆಗಮಿಸಿ, ಆಕೆಯ ಇಚ್ಛೆಗೆ ವಿರುದ್ಧವಾಗಿ ಬಲವಂತವಾಗಿ ಎಳೆದೊಯ್ದು ಮಹೀಂದ್ರಾ ಥಾರ್ ವಾಹನದಲ್ಲಿ ಕರೆದೊಯ್ದಿದ್ದರು. ಈ ಘಟನೆಗೆ ಸಂಬಂಧಿಸಿದ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದವು.

ಘಟನೆಯ ಬಳಿಕ ಕಾರ್ಯಾಚರಣೆ ನಡೆಸಿದ ಪೊಲೀಸರು, ಕೇರಳಂನ ಸಂಬಂಧಿಕರ ಮನೆಯಲ್ಲಿದ್ದ ವಿದ್ಯಾರ್ಥಿನಿಯನ್ನು ಪತ್ತೆಹಚ್ಚಿ ಸುರಕ್ಷಿತವಾಗಿ ಮಂಗಳೂರಿಗೆ ಕರೆತಂದಿದ್ದಾರೆ.

Ad Widget

Ad Widget

ಮನೆಯವರ ಜೊತೆ ಹೋಗಲು ನಿರಾಕರಣೆ
ಪೊಲೀಸರು ರಕ್ಷಿಸಿದ ಬಳಿಕ ಯುವತಿಯ ಹೇಳಿಕೆ ದಾಖಲಿಸಿದ್ದು, ತನ್ನ ಪೋಷಕರು ಅಥವಾ ಮನೆಯವರ ಜೊತೆ ಹೋಗಲು ಇಚ್ಛಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾಳೆ ಎನ್ನಲಾಗಿದೆ. ಯುವತಿ ವಯಸ್ಕಳಾಗಿರುವುದರಿಂದ ತಾನು ಎಲ್ಲಿ ವಾಸಿಸಬೇಕು ಎಂಬುದನ್ನು ನಿರ್ಧರಿಸುವ ಕಾನೂನುಬದ್ಧ ಹಕ್ಕು ಆಕೆಗಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.

ವೈದ್ಯಕೀಯ ತಪಾಸಣೆಯ ಬಳಿಕ ಯುವತಿಯ ಇಚ್ಛೆಯ ಸ್ಥಳಕ್ಕೆ ಅಥವಾ ಸಾಂತ್ವನ ಕೇಂದ್ರಕ್ಕೆ ಪೊಲೀಸ್ ರಕ್ಷಣೆಯಲ್ಲಿ ಕಳುಹಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ವರದಿಯಾಗಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆ (BNS) ಸೆಕ್ಷನ್ 140(3) ಮತ್ತು 126ರ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಇಬ್ಬರನ್ನು ವಿಚಾರಣೆಗೆ ಕರೆಸಲಾಗಿದೆ. ಏಳು ವರ್ಷಕ್ಕಿಂತ ಕಡಿಮೆ ಶಿಕ್ಷೆಯಿರುವ ಅಪರಾಧವಾಗಿರುವ ಹಿನ್ನೆಲೆಯಲ್ಲಿ ಬಿಎನ್‌ಎಸ್‌ಎಸ್ ಅಡಿಯಲ್ಲಿ ನೋಟಿಸ್ ಜಾರಿ ಮಾಡುವ ಪ್ರಕ್ರಿಯೆ ನಡೆಯುತ್ತಿದೆ ಎಂದು ವರದಿಯಾಗಿದೆ.

Ad Widget
Continue Reading

ನಿಧನ ವಾರ್ತೆ

Mudbidri-ಮಂಗಳೂರಿನಲ್ಲಿ ಮೇಲ್ಛಾವಣಿ ಕೆಲಸದ ವೇಳೆ ಅವಘಡ: ಮೂಡುಬಿದಿರೆ ತಾ.ಪಂ. ಮಾಜಿ ಉಪಾಧ್ಯಕ್ಷ ಸಾವು

Published

on

Ad Widget

Ad Widget

Ad Widget

Ad Widget

ಮೂಡುಬಿದಿರೆ ತಾಲೂಕು ಪಂಚಾಯತ್‌ನ ಮಾಜಿ ಉಪಾಧ್ಯಕ್ಷ ಸಂತೋಷ್ ಅವರು ಮಂಗಳೂರಿನಲ್ಲಿ ಮನೆಯ ಮೇಲ್ಛಾವಣಿಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಆಯತಪ್ಪಿ ಕೆಳಗೆ ಬಿದ್ದು ಮೃತಪಟ್ಟಿದ್ದಾರೆ. ಗುರುವಾರ ಸಂಭವಿಸಿದ ಈ ದುರಂತ ಘಟನೆ ದುಃಖಕ್ಕೆ ಕಾರಣವಾಗಿದೆ.

Ad Widget

Ad Widget

Ad Widget

Ad Widget

ಮೂಡುಬಿದಿರೆ, ನ.20: ಮೂಡುಬಿದಿರೆ ತಾಲೂಕು ಪಂಚಾಯತ್‌ನ ಮಾಜಿ ಉಪಾಧ್ಯಕ್ಷ ಸಂತೋಷ್ ಅವರು ಮಂಗಳೂರಿನಲ್ಲಿ ಮನೆಯ ಮೇಲ್ಛಾವಣಿಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಆಯತಪ್ಪಿ ಕೆಳಗೆ ಬಿದ್ದು ಮೃತಪಟ್ಟಿದ್ದಾರೆ. ಗುರುವಾರ ಸಂಭವಿಸಿದ ಈ ದುರಂತ ಘಟನೆ ದುಃಖಕ್ಕೆ ಕಾರಣವಾಗಿದೆ.

Ad Widget

Ad Widget alt="Ad Widget"/>

Ad Widget

ಮೂಡುಬಿದಿರೆ ತಾಲೂಕಿನ ಬೆಳುವಾಯಿ ನಿವಾಸಿಯಾಗಿದ್ದ ಸಂತೋಷ್ ಅವರು ಬೆಳುವಾಯಿ ಕ್ಷೇತ್ರದಿಂದ ತಾಲೂಕು ಪಂಚಾಯತ್ ಸದಸ್ಯರಾಗಿ ಆಯ್ಕೆಯಾಗಿದ್ದರು. ಹೊಸದಾಗಿ ರಚನೆಯಾಗಿದ್ದ ಮೂಡುಬಿದಿರೆ ತಾಲೂಕು ಪಂಚಾಯತ್‌ನ ಮೊದಲ ಅವಧಿಯಲ್ಲಿ ಉಪಾಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು.

Ad Widget

Ad Widget <> Ad Widget

ಸಂತೋಷ್ ಅವರು ಪ್ರತಿದಿನ ಕೆಲಸದ ನಿಮಿತ್ತ ಮಂಗಳೂರಿಗೆ ತೆರಳುತ್ತಿದ್ದರು. ಗುರುವಾರ ಬೇರೆ ಸ್ಥಳದಲ್ಲಿ ಬದಲಿ ಕೆಲಸಗಾರನಾಗಿ ಕೆಲಸಕ್ಕೆ ತೆರಳಿದ್ದ ಅವರು, ಮನೆಯೊಂದರ ಮೇಲ್ಛಾವಣಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ ಕೆಳಕ್ಕೆ ಬಿದ್ದಿದ್ದಾರೆ ಎನ್ನಲಾಗಿದೆ.

ಘಟನೆಯಲ್ಲಿ ಗಂಭೀರ ಗಾಯಗೊಂಡ ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ.

Ad Widget

Ad Widget

ಮೃತ ಸಂತೋಷ್ ಅವರು ಪತ್ನಿ ಹಾಗೂ ಪುಟ್ಟ ಮಗುವನ್ನು ಅಗಲಿದ್ದಾರೆ. ಜನಪ್ರತಿನಿಧಿಯಾಗಿ ಸೇವೆ ಸಲ್ಲಿಸಿದ್ದ ಅವರ ಅಕಾಲಿಕ ನಿಧನಕ್ಕೆ ಸ್ಥಳೀಯರು ಹಾಗೂ ಗಣ್ಯರು ಸಂತಾಪ ಸೂಚಿಸಿದ್ದಾರೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!