ಸ್ಥಳೀಯ
Dharmasthala-3ನೇ ವರ್ಷದ ಪಾದಯಾತ್ರೆ ಪೂರ್ವಭಾವಿ ಸಭೆ; ಧರ್ಮಸ್ಥಳ ಲಕ್ಷ ದೀಪೋತ್ಸವ ಪಾದಯಾತ್ರೆಯ ಕರಪತ್ರ ಬಿಡುಗಡೆ; ಕಾವಂದರ ಬಿಳಿಯ ಶುಭ್ರ ವಸ್ತ್ರವನ್ನು ಯಾರೂ ಕಪ್ಪು ಮಾಡಲು ಸಾಧ್ಯವಿಲ್ಲ : ಹರೀಶ್ ಕುಮಾರ್
ಉಜಿರೆಯ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದ ರಾಮಕೃಷ್ಣ ಸಭಾ ಮಂಟಪದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವದ 13ನೇ ವರ್ಷದ ಪಾದಯಾತ್ರೆಯ ಪೂರ್ವಭಾವಿ ಸಭೆ ನಡೆಯಿತು.
ಉಜಿರೆ : ಉಜಿರೆಯ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದ ರಾಮಕೃಷ್ಣ ಸಭಾ ಮಂಟಪದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವದ 13ನೇ ವರ್ಷದ ಪಾದಯಾತ್ರೆಯ ಪೂರ್ವಭಾವಿ ಸಭೆ ನಡೆಯಿತು.
ಸಭೆಯಲ್ಲಿ ಉಜಿರೆಯ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರರಾದ ಶರತ್ ಕೃಷ್ಣ ಪಡುವೇಟ್ನಾಯರ್ ಮಾತನಾಡಿ, ನಮ್ಮ ಸಾತ್ವಿಕ ಶಕ್ತಿಯನ್ನು ತೋರಿಸುವ ಸಲುವಾಗಿ ದಿವಂಗತ ಡಾಕ್ಟರ್ ಬಿ. ಯಶೋವರ್ಮ ಹಾಗು ದಿವಂಗತ ವಿಜಯ ರಾಘವ ಪಡುವೇಟ್ನಾಯರ್ ಮಾರ್ಗದರ್ಶನದಲ್ಲಿ ಕೇವಲ 500 ಜನರಿಂದ ಆರಂಭವಾದ ಈ ಪಾದಯಾತ್ರೆ ಇಂದು ಬೃಹತ್ ಹೆಮ್ಮರವಾಗಿ ಬೆಳೆದಿದೆ. ಹಿರಿಯರು ಮತ್ತು ಊರಿನವರ ಭಕ್ತಿ ಮತ್ತು ಸಹಕಾರದಿಂದ ಇದೊಂದು ಧಾರ್ಮಿಕ ಪರಂಪರೆಯಾಗಿ ಬೆಳೆಯುತ್ತಿದೆ. ಬಹು ಶಿಸ್ತಿನಿಂದ ನಡೆದುಕೊಂಡು ಬಂದಿರುವ ಈ ಪಾದಯಾತ್ರೆ ಇನ್ನು ಮುಂದೆಯೂ ಹೀಗೆ ಸಾಗುತ್ತದೆ ಎಂದರು.
ಮಾಜಿ ಎಂ.ಎಲ್.ಸಿ ಹಾಗೂ ಮಂಗಳೂರು ಮೆಸ್ಕಾಂ ಅಧ್ಯಕ್ಷ ಹರೀಶ್ ಕುಮಾರ್ ಮಾತನಾಡಿ ಪ್ರತಿ ಸವಾಲುಗಳನ್ನು ಮೆಟ್ಟಿ ನಾವು ಹೆಜ್ಜೆ ಹಾಕಬೇಕು. ಆರಂಭದಿಂದಲೂ ಶ್ರೀ ಕ್ಷೇತ್ರ ಧರ್ಮಸ್ಥಳದ ಮೇಲೆ ಕಳಂಕ ಹೊರಿಸುವ ಪ್ರಯತ್ನಗಳು ನಡೆಯುತ್ತಾ ಬಂದಿದೆ. ಧರ್ಮಾಧಿಕಾರಿಗಳಾದ ಪೂಜ್ಯ ಕಾವಂದರ ಬಿಳಿಯ ಶುಭ್ರ ವಸ್ತ್ರವನ್ನು ಯಾರೂ ಕಪ್ಪು ಮಾಡಲು ಸಾಧ್ಯವಿಲ್ಲ. ಶ್ರದ್ಧೆ ಮತ್ತು ಭಕ್ತಿಯಿಂದ ನಾವೆಲ್ಲ ಒಟ್ಟು ಸೇರಿ ಈ ಪಾದಯಾತ್ರೆಯನ್ನು ಯಶಸ್ವಿ ಮಾಡೋಣ ಎಂದರು.
ಸಭೆಯಲ್ಲಿ ಪ್ರಸ್ತಾವಿಕ ಮಾತುಗಳನ್ನಾಡಿದ ಉಜಿರೆಯ ಎಸ್.ಡಿ.ಎಂ ಶಿಕ್ಷಣ ಸಂಸ್ಥೆಯ ಐಟಿ ಮತ್ತು ಹಾಸ್ಟೆಲ್ ಆಡಳಿತ ವಿಭಾಗದ ಮುಖ್ಯ ಕಾರ್ಯನಿರ್ವಾಹಣ ಅಧಿಕಾರಿ ಪೂರನ್ ವರ್ಮ, ದಿನಾಂಕ 15 ರಂದು 2:30ಕ್ಕೆ ಸರಿಯಾಗಿ ಎಲ್ಲರೂ ಶ್ರೀ ಕ್ಷೇತ್ರ ಜನಾರ್ದನ ಸ್ವಾಮಿ ದೇವಸ್ಥಾನದ ಸನ್ನಿಧಿಯಲ್ಲಿ ಸೇರುವರು. ಬಳಿಕ 3 ಗಂಟೆಗೆ ಸರಿಯಾಗಿ 13ನೇ ವರ್ಷದ ಪಾದಯಾತ್ರೆಗೆ ಚಾಲನೆ ನೀಡಿ, 3:30ಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದೆಡೆಗಿನ ಪಾದಯಾತ್ರೆಯ ಮೆರವಣಿಗೆ ಆರಂಭವಾಗುತ್ತದೆ. ಪಾದಯಾತ್ರೆಯಲ್ಲಿ ಪಾಲ್ಗೊಳ್ಳುವ ಭಕ್ತಾದಿಗಳಿಗೆ ದಾರಿ ಯುದ್ಧಕ್ಕೂ ನೀರು ಮತ್ತು ಬೆಲ್ಲದ ವ್ಯವಸ್ಥೆ ಮಾಡಲಾಗುತ್ತದೆ. ಶ್ರೀ ಕ್ಷೇತ್ರ ಧರ್ಮಸ್ಥಳ ತಲುಪಿದ ಬಳಿಕ 5:30ಕ್ಕೆ ಪೂಜ್ಯ ಡಾ. ಡಿ ವೀರೇಂದ್ರ ಹೆಗಡೆಯವರಿಂದ ಆಶೀರ್ವಚನ ಕಾರ್ಯಕ್ರಮ ನಡೆಯಲಿದೆ ಎಂದರು. ಸಭೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ಮುಖ್ಯ ಹಣಕಾಸು ಅಧಿಕಾರಿ ಶಾಂತರಾಮ ಪೈ ಮಾತನಾಡಿದರು.
ಸಭೆಯ ವೇದಿಕೆಯಲ್ಲಿ ಸಾದಶಿವ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರ ಹಾಗು ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಸತೀಶ್ಚಂದ್ರ ಎಸ್, ಬೆಳ್ತಂಗಡಿ ತಾಲೂಕಿನ ಜನಜಾಗ್ರತೆ ವೇದಿಕೆಯ ಅಧ್ಯಕ್ಷ ಕಾಸಿಂ ಮಲ್ಲಿಗೆ ಮನೆ, ಉಜಿರೆ ಪಂಚಾಯಿತಿ ಅಧ್ಯಕ್ಷೆ ಉಷಾ ಕಾರಂತ್, ಬೆಳ್ತಂಗಡಿ ವರ್ತಕರ ಸಂಘದ ಅಧ್ಯಕ್ಷ ಪ್ರಸಾದ್ ಸೇರಿದಂತೆ ಇತರೆ ಗಣ್ಯರು ಉಪಸ್ಥಿತರಿದ್ದರು.
ಸಭೆಯಲ್ಲಿ ಯೋಗೀಶ್ ಕುಮಾರ್ ನಡಕರ, ಲಕ್ಷ್ಮಿ ಇಂಡಸ್ಟ್ರೀಸ್ ಮಾಲಕರಾದ ಮೋಹನ್ ಕುಮಾರ್, ಸಂಧ್ಯಾ ಟ್ರೇಡರ್ಸ್ ಮಾಲಕ ರಾಜೇಶ್ ಪೈ, ಹಿರಿಯ ವಕೀಲ ಅಗರ್ತ ಸೇರಿದಂತೆ ಊರಿನ ಸದಸ್ಯರು ಭಾಗಿಯಾಗಿದ್ದರು.
ಸಭೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ಲಕ್ಷದೀಪೋತ್ಸವದ 13ನೇ ವರ್ಷದ ಪಾದಯಾತ್ರೆಯ ಕರಪತ್ರವನ್ನು ಸರ್ವರ ಸಮ್ಮುಖದಲ್ಲಿ ಗಣ್ಯರಿಂದ ಬಿಡುಗಡೆ ಮಾಡಲಾಯಿತು.
ಸಭೆಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಯೋಜನೆಯ ರಾಮಕುಮಾರ್ ನಿರೂಪಿಸಿ, ವರ್ತಕರ ಸಂಘದ ಅಧ್ಯಕ್ಷ ಪ್ರಸಾದ್ ವಂದಿಸಿದರು.
ಆರಂಭದಿಂದಲೂ ಶ್ರೀ ಕ್ಷೇತ್ರ ಧರ್ಮಸ್ಥಳದ ಮೇಲೆ ಕಳಂಕ ಹೊರಿಸುವ ಪ್ರಯತ್ನಗಳು ನಡೆಯುತ್ತಾ ಬಂದಿದೆ. ಧರ್ಮಾಧಿಕಾರಿಗಳಾದ ಪೂಜ್ಯ ಕಾವಂದರ ಬಿಳಿಯ ಶುಭ್ರ ವಸ್ತ್ರವನ್ನು ಯಾರೂ ಕಪ್ಪು ಮಾಡಲು ಸಾಧ್ಯವಿಲ್ಲ. ಶ್ರದ್ಧೆ ಮತ್ತು ಭಕ್ತಿಯಿಂದ ನಾವೆಲ್ಲ ಒಟ್ಟು ಸೇರಿ ಈ ಪಾದಯಾತ್ರೆಯನ್ನು ಯಶಸ್ವಿ ಮಾಡೋಣ. – ಹರೀಶ್ ಕುಮಾರ್, ಮಾಜಿ ಎಂ.ಎಲ್.ಸಿ,ಮಂಗಳೂರು ಮೆಸ್ಕಾಂ ಅಧ್ಯಕ್ಷ.
ಅಪರಾಧ
Raid-ರಾಜ್ಯದ 45 ಐಸ್‌ಕ್ರೀಂ ಘಟಕಗಳ ಮೇಲೆ ದಾಳಿ: 4 ಕಡೆ ನಿಯಮ ಉಲ್ಲಂಘನೆ, ಅವಧಿ ಮೀರಿದ ಪದಾರ್ಥ ಪತ್ತೆ..!
ರಾಜ್ಯಾದ್ಯಂತ ಐಸ್‌ಕ್ರೀಂ ತಯಾರಿಕಾ ಘಟಕಗಳ ಮೇಲೆ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆಯ ಆಹಾರ ಸುರಕ್ಷತಾ ವಿಭಾಗ ಗುರುವಾರ ವಿಶೇಷ ತಪಾಸಣೆ ನಡೆಸಿದೆ. ಒಟ್ಟು 45 ಘಟಕಗಳ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಲಾಗಿದ್ದು, ಬೆಂಗಳೂರು, ಮೈಸೂರು ಮತ್ತು ರಾಯಚೂರಿನ ನಾಲ್ಕು ಘಟಕಗಳಲ್ಲಿ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆಯ ಉಲ್ಲಂಘನೆಗಳು ಪತ್ತೆಯಾಗಿವೆ ಎಂದು ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
ಬೆಂಗಳೂರು, ಅ. 9: ರಾಜ್ಯಾದ್ಯಂತ ಐಸ್‌ಕ್ರೀಂ ತಯಾರಿಕಾ ಘಟಕಗಳ ಮೇಲೆ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆಯ ಆಹಾರ ಸುರಕ್ಷತಾ ವಿಭಾಗ ಗುರುವಾರ ವಿಶೇಷ ತಪಾಸಣೆ ನಡೆಸಿದೆ. ಒಟ್ಟು 45 ಘಟಕಗಳ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಲಾಗಿದ್ದು, ಬೆಂಗಳೂರು, ಮೈಸೂರು ಮತ್ತು ರಾಯಚೂರಿನ ನಾಲ್ಕು ಘಟಕಗಳಲ್ಲಿ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆಯ ಉಲ್ಲಂಘನೆಗಳು ಪತ್ತೆಯಾಗಿವೆ ಎಂದು ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
ನಾಲ್ಕು ಘಟಕಗಳಲ್ಲಿ ನಿಯಮ ಉಲ್ಲಂಘನೆ
ಪರಿಶೀಲನೆ ವೇಳೆ ಬೆಂಗಳೂರಿನ ಜಯನಗರ 3ನೇ ಬ್ಲಾಕ್‌ನ ಸಾವರ ಐಸ್‌ಕ್ರೀಂ ಕೆಫೆ, ಬನ್ನೇರುಘಟ್ಟ ರಸ್ತೆಯ ಬಿಳೇಕಹಳ್ಳಿಯ ಎಂ.ಎನ್. ಎಂಟರ್‌ಪ್ರೈಸಸ್, ಮೈಸೂರಿನ ಜಾನ್ ಕ್ಯಾಂಡಿ ಐಸ್‌ಕ್ರೀಂ ತಯಾರಿಕಾ ಘಟಕ ಹಾಗೂ ರಾಯಚೂರಿನ ಜೆಮಿನಿ ಐಸ್‌ಕ್ರೀಂ ತಯಾರಿಕಾ ಘಟಕಗಳಲ್ಲಿ ನಿಯಮ ಉಲ್ಲಂಘನೆ ಕಂಡುಬಂದಿದೆ.
ಈ ಘಟಕಗಳ ವಿರುದ್ಧ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ 2006 ಹಾಗೂ ಸಂಬಂಧಿತ ನಿಯಮಗಳ ಅಡಿಯಲ್ಲಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಇಲಾಖೆ ತಿಳಿಸಿದೆ.
70 ಆಹಾರ ಮಾದರಿಗಳ ಸಂಗ್ರಹ
ವಿಶೇಷ ತಪಾಸಣೆಯ ಸಂದರ್ಭದಲ್ಲಿ ವಿವಿಧ ಘಟಕಗಳಿಂದ ಐಸ್‌ಕ್ರೀಂ, ಹಾಲು, ಹಾಲಿನ ಪುಡಿ, ಫ್ಲೇವರಿಂಗ್ ಪದಾರ್ಥಗಳು, ಸಕ್ಕರೆ, ಆಹಾರ ಸೇರ್ಪಡೆ ಪದಾರ್ಥಗಳು ಸೇರಿದಂತೆ ವಿವಿಧ ಕಚ್ಚಾವಸ್ತುಗಳ ಒಟ್ಟು 70 ಮಾದರಿಗಳನ್ನು ಸಂಗ್ರಹಿಸಲಾಗಿದೆ.
ಈ ಮಾದರಿಗಳನ್ನು ಗುಣಮಟ್ಟ ಮತ್ತು ಆಹಾರ ಸುರಕ್ಷತಾ ಮಾನದಂಡಗಳ ಪರಿಶೀಲನೆಗಾಗಿ ಪ್ರಯೋಗಾಲಯಗಳಿಗೆ ಕಳುಹಿಸಲಾಗಿದೆ. ಪ್ರಯೋಗಾಲಯದ ವರದಿಗಳ ಆಧಾರದ ಮೇಲೆ ಮುಂದಿನ ಕ್ರಮ ಕೈಗೊಳ್ಳುವ ಸಾಧ್ಯತೆಯಿದೆ.
ಅವಧಿ ಮೀರಿದ ಆಹಾರ ಪದಾರ್ಥ ಪತ್ತೆ
ಪರಿಶೀಲನೆಯ ವೇಳೆ ಅವಧಿ ಮೀರಿದ ಐಸ್‌ಕ್ರೀಂ, ಹಾಲು, ಬಿಸ್ಕತ್ ಹಾಗೂ ಕೊಬ್ಬರಿ ಪುಡಿ ಪತ್ತೆಯಾಗಿವೆ. ಅಲ್ಲದೆ, ಕೆಲವು ಆಹಾರ ಉತ್ಪನ್ನಗಳ ಮೇಲೆ ಲೇಬಲಿಂಗ್ ನಿಯಮಗಳನ್ನು ಸರಿಯಾಗಿ ಪಾಲಿಸದಿರುವುದೂ ಅಧಿಕಾರಿಗಳ ಗಮನಕ್ಕೆ ಬಂದಿದೆ ಎಂದು ಪ್ರಕಟಣೆ ತಿಳಿಸಿದೆ.
ಆಹಾರ ಪದಾರ್ಥಗಳ ಗುಣಮಟ್ಟ ಮತ್ತು ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳುವ ಉದ್ದೇಶದಿಂದ ಈ ವಿಶೇಷ ಕಾರ್ಯಾಚರಣೆ ನಡೆಸಲಾಗಿದೆ. ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ರಾಜ್ಯಾದ್ಯಂತ ಇಂತಹ ತಪಾಸಣೆಗಳನ್ನು ಮುಂದುವರಿಸಲಾಗುವುದು. ನಿಯಮ ಉಲ್ಲಂಘಿಸುವವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಇಲಾಖೆಯ ಆಯುಕ್ತರು ತಿಳಿಸಿದ್ದಾರೆ.
ಶಿಕ್ಷಣ
Philomena-ಸಂತ ಫಿಲೋಮಿನಾ ಕಾಲೇಜಿನಲ್ಲಿ ಇಂಗ್ಲಿಷ್ ಭಾಷಣ ಸ್ಪರ್ಧೆ
ಸಂತ ಫಿಲೋಮಿನಾ ಕಾಲೇಜು (ಸ್ವಾಯತ್ತ), ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರ ಹಾಗೂ ಪರ್ಫಾರ್ಮಿಂಗ್ ಆರ್ಟ್ಸ್ ಅಸೋಸಿಯೇಷನ್ ಜಂಟಿ ಆಶ್ರಯದಲ್ಲಿ ರಾಷ್ಟ್ರೀಯ ಗ್ರಂಥಾಲಯ ಸಪ್ತಾಹ (ನವೆಂಬರ್ 14-20), 2026 ಆಚರಣೆಯ ಭಾಗವಾಗಿ ಆಯೋಜಿಸಿದ್ದ ಇಂಗ್ಲಿಷ್ ಭಾಷಣ ಸ್ಪರ್ಧೆಯು ಕಾಲೇಜಿನ ಪಿ.ಜಿ ಸೆಮಿನಾರ್ ಹಾಲ್‌ನಲ್ಲಿ ಯಶಸ್ವಿಯಾಗಿ ಸಂಪನ್ನಗೊಂಡಿತ್ತು.
ಪುತ್ತೂರು, ಅ.8: ಇಲ್ಲಿನ ಸಂತ ಫಿಲೋಮಿನಾ ಕಾಲೇಜು (ಸ್ವಾಯತ್ತ), ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರ ಹಾಗೂ ಪರ್ಫಾರ್ಮಿಂಗ್ ಆರ್ಟ್ಸ್ ಅಸೋಸಿಯೇಷನ್ ಜಂಟಿ ಆಶ್ರಯದಲ್ಲಿ ರಾಷ್ಟ್ರೀಯ ಗ್ರಂಥಾಲಯ ಸಪ್ತಾಹ (ನವೆಂಬರ್ 14-20), 2026 ಆಚರಣೆಯ ಭಾಗವಾಗಿ ಆಯೋಜಿಸಿದ್ದ ಇಂಗ್ಲಿಷ್ ಭಾಷಣ ಸ್ಪರ್ಧೆಯು ಕಾಲೇಜಿನ ಪಿ.ಜಿ ಸೆಮಿನಾರ್ ಹಾಲ್‌ನಲ್ಲಿ ಯಶಸ್ವಿಯಾಗಿ ಸಂಪನ್ನಗೊಂಡಿತ್ತು.
“ಎಮೋಷನಲ್ ಇಂಟೆಲಿಜೆನ್ಸ್, ಎಮೋಷನಲ್ ಲೈಫ್, ಎಮೋಷನಲ್ ಕೋಶಂಟ್ ಮತ್ತು ಎಮೋಷನಲ್ ಮ್ಯಾನೇಜ್ಮೆಂಟ್” ಎಂಬ ವಿಷಯದ ಕುರಿತು ನಡೆದ ಈ ಸ್ಪರ್ಧೆಯನ್ನು ಪ್ರಾಂಶುಪಾಲರಾದ ರೆ| ಡಾ| ಆಂಟನಿ ಪ್ರಕಾಶ್ ಮೊಂತೇರೊ ಅವರು ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, “ಇಂದಿನ ವೇಗವಾಗಿ ಬದಲಾಗುತ್ತಿರುವ ಜಗತ್ತಿನಲ್ಲಿ ಭಾವನಾತ್ಮಕ ಬುದ್ಧಿವಂತಿಕೆ ಮತ್ತು ಭಾವನಾತ್ಮಕ ನಿರ್ವಹಣೆಯ ಪ್ರಸ್ತುತತೆಯನ್ನು ಎತ್ತಿ ತೋರಿಸಿದರು. ಯಶಸ್ಸಿಗೆ ಕೇವಲ ಶೈಕ್ಷಣಿಕ ಜ್ಞಾನವೊಂದೇ ಸಾಕಾಗುವುದಿಲ್ಲ; ವಿದ್ಯಾರ್ಥಿಗಳು ತಮ್ಮ ಭಾವನೆಗಳನ್ನು ಅರ್ಥಮಾಡಿಕೊಳ್ಳುವ ಮತ್ತು ನಿರ್ವಹಿಸುವ, ಇತರರೊಂದಿಗೆ ಸಹಾನುಭೂತಿ ಹೊಂದುವ, ಸವಾಲುಗಳನ್ನು ಎದುರಿಸುವ ಮತ್ತು ಆರೋಗ್ಯಕರ ಸಂಬಂಧಗಳನ್ನು ಕಾಪಾಡಿಕೊಳ್ಳುವ ಸಾಮರ್ಥ್ಯವನ್ನು ಹೊಂದಿರಬೇಕು” ಎಂದು ಅವರು ಅಭಿಪ್ರಾಯಪಟ್ಟರು.
ಭಾಷಣ ಸ್ಪರ್ಧೆಗಳಂತಹ ವೇದಿಕೆಗಳು ವಿದ್ಯಾರ್ಥಿಗಳು ತಮ್ಮ ಆಲೋಚನೆಗಳನ್ನು ಆತ್ಮವಿಶ್ವಾಸದಿಂದ ವ್ಯಕ್ತಪಡಿಸಲು, ವಿಮರ್ಶಾತ್ಮಕ ಚಿಂತನೆಯನ್ನು ಬೆಳೆಸಿಕೊಳ್ಳಲು ಮತ್ತು ತಮ್ಮ ಆಲೋಚನೆಗಳನ್ನು ಪರಿಣಾಮಕಾರಿಯಾಗಿ ಸಂವಹನ ಮಾಡಲು ಕಲಿಯಲು ಅನುವು ಮಾಡಿಕೊಡುತ್ತದೆ ಎಂದು ಅವರು ತಿಳಿಸಿದರು.
ಸ್ಪರ್ಧೆಯಲ್ಲಿ ಕಾಲೇಜಿನ ನಿವೃತ್ತ ಉಪ-ಪ್ರಾಂಶುಪಾಲರಾದ ಡಾ| ಎ. ಪಿ. ರಾಧಾಕೃಷ್ಣ ಮತ್ತು ಮಡಂತ್ಯಾರಿನ ಸೇಕ್ರೆಡ್ ಹಾರ್ಟ್ ಕಾಲೇಜಿನ ನಿವೃತ್ತ ಪ್ರಾಧ್ಯಾಪಕರಾದ ಡಾ| ಈಶ್ವರ ಗೌಡ ಪಿ. ಅವರು ತೀರ್ಪುಗಾರರಾಗಿ ಭಾಗವಹಿಸಿದ್ದರು
ಸ್ಪರ್ಧೆಯ ಫಲಿತಾಂಶ:
ತೀವ್ರ ಪೈಪೋಟಿಯಿಂದ ನಡೆದ ಈ ಭಾಷಣ ಸ್ಪರ್ಧೆಯಲ್ಲಿ ದ್ವಿತೀಯ ಎಂ.ಸಿ.ಎ ತರಗತಿಯ ಡೆಲಿಶಾ ಲೋಬೋ ಪ್ರಥಮ ಸ್ಥಾನ, ತೃತೀಯ ಬಿ.ಕಾಂನ ಅಪೂರ್ವ ಡಿ. ದ್ವಿತೀಯ ಸ್ಥಾನ ಹಾಗೂ ದ್ವಿತೀಯ ಬಿ.ಸಿ.ಎ ತರಗತಿಯ ಪ್ರತ್ಯಕ್ಷ ಪಿ. ಎ. ತೃತೀಯ ಸ್ಥಾನ ಪಡೆದರು. ಜೆನಿಶಾ ಕುಟಿನ್ಹಾ (ದ್ವಿತೀಯ ಬಿ.ಎಸ್ಸಿ) ಮತ್ತು ಕೃಷ್ಣ ವಂಶಿ (ದ್ವಿತೀಯ ಬಿ.ಬಿ.ಎ) ಸಮಾಧಾನಕರ ಬಹುಮಾನಗಳನ್ನು ಪಡೆದುಕೊಂಡರು.
ಪರ್ಫಾರ್ಮಿಂಗ್ ಆರ್ಟ್ಸ್ ಅಸೋಸಿಯೇಷನ್ ಸಂಯೋಜಕರಾದ ಪ್ರಶಾಂತ್ ರೈ ಸ್ವಾಗತಿಸಿ, ಕಾರ್ಯಕ್ರಮ ನಿರ್ವಹಿಸಿದರು. ಕಾಲೇಜಿನ ಆಯ್ಕೆ ಶ್ರೇಣಿ ಗ್ರಂಥಪಾಲಕರಾದ ಅಬ್ದುಲ್ ರೆಹಮಾನ್ ಜಿ. ವಂದನಾರ್ಪಣೆ ಮಾಡಿದರು ಸನ್ನಿಧಿ (ಪ್ರಥಮ ಬಿ.ಬಿ.ಎ.) ಮತ್ತು ಮಾನಸ (ತೃತೀಯ ಬಿ.ಎಸ್ಸಿ.) ಪ್ರಾರ್ಥಿಸಿದರು.
ಸ್ನಾತಕೋತ್ತರ ವಿಭಾಗದ ಗ್ರಂಥಪಾಲಕ ಮನೋಹರ್ ಎಸ್. ಜಿ. ಹಾಗೂ ಎಂ.ಸಿ.ಎ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಅಕ್ಷತಾ ಬಿ. ಸಹಕರಿಸಿದರು.
ಶಿಕ್ಷಣ
Philomena-ಎತ್ತರ ಜಿಗಿತ: ಸಂತ ಫಿಲೋಮಿನಾ ಪ ಪೂ ಕಾಲೇಜಿನ ಮೊಹಮ್ಮದ್ ಸುಫೈ ರಾಷ್ಟ್ರ ಮಟ್ಟಕ್ಕೆ ಆಯ್ಕೆ
ಅ 5 ಮತ್ತು 7 ರಂದು ತುಮಕೂರಿನ ಮಹಾತ್ಮ ಗಾಂಧಿ ಕ್ರೀಡಾಂಗಣದಲ್ಲಿ ನಡೆದ ಕರ್ನಾಟಕ ಸ್ಟೇಟ್ ಜೂನಿಯರ್ ಅಥ್ಲೆಟಿಕ್ ಮೀಟ್ – 2026 ನಲ್ಲಿ ಎತ್ತರ ಜಿಗಿತ ಸ್ಪರ್ಧೆಯಲ್ಲಿ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಪ್ರಥಮ ವಾಣಿಜ್ಯ ವಿಭಾಗದ ಮೊಹಮ್ಮದ್ ಸುಫೈ ಬೆಳ್ಳಿಯ ಪದಕವನ್ನು ಪಡೆದುಕೊಂಡು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.
ಪುತ್ತೂರು: ತುಮಕೂರು ಡಿಸ್ಟ್ರಿಕ್ಟ್ ಅಥ್ಲೆಟಿಕ್ ಅಸೋಸಿಯೇಷನ್ ನ ಆಶ್ರಯದಲ್ಲಿ ಅ 5 ಮತ್ತು 7 ರಂದು ತುಮಕೂರಿನ ಮಹಾತ್ಮ ಗಾಂಧಿ ಕ್ರೀಡಾಂಗಣದಲ್ಲಿ ನಡೆದ ಕರ್ನಾಟಕ ಸ್ಟೇಟ್ ಜೂನಿಯರ್ ಅಥ್ಲೆಟಿಕ್ ಮೀಟ್ – 2026 ನಲ್ಲಿ ಎತ್ತರ ಜಿಗಿತ ಸ್ಪರ್ಧೆಯಲ್ಲಿ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಪ್ರಥಮ ವಾಣಿಜ್ಯ ವಿಭಾಗದ ಮೊಹಮ್ಮದ್ ಸುಫೈ ಬೆಳ್ಳಿಯ ಪದಕವನ್ನು ಪಡೆದುಕೊಂಡು, ಅ 23 ಮತ್ತು 27ರಂದು ತಮಿಳುನಾಡಿನ ಜೆ. ಎನ್ ಕ್ರೀಡಾಂಗಣ ಚೆನ್ನೈ ನಲ್ಲಿ ನಡೆಯಲಿರುವ ರಾಷ್ಟ್ರಮಟ್ಟದ ಎತ್ತರ ಜಿಗಿತ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ.
ಇವರು ಬಪ್ಪಳಿಗೆ ನಿವಾಸಿ ಇಸ್ಮೈಲ್ ಪಿ ಎಂ ಹಾಗೂ ಕಮರುನ್ನಿಸಾ ದಂಪತಿಗಳ ಪುತ್ರನಾಗಿರುತ್ತಾರೆ.
ಕಾಲೇಜಿನ ಪ್ರಾಂಶುಪಾಲರಾದ ರೆ. ಫಾ ಅಶೋಕ್ ರಾಯನ್ ಕ್ರಾಸ್ತಾ ಅಭಿನಂದಿಸಿದರು. ದೈಹಿಕ ಶಿಕ್ಷಣ ನಿರ್ದೇಶಕರಾದ ರಾಜೇಶ್ ಮೂಲ್ಯ ಉಪಸ್ಥಿತರಿದ್ದರು.
-
ಬಿಗ್ ನ್ಯೂಸ್24 hours agoSting Operation | ಸ್ಟಿಂಗ್ ಆಪರೇಷನ್ ಚರ್ಚೆ: ಪುತ್ತೂರಿಗೂ ವ್ಯಾಪಿಸಿದೆಯೇ ರಾಜಕೀಯದ ‘ಸ್ಟಿಂಗ್’ ಸದ್ದು..?
-
ಬಿಗ್ ನ್ಯೂಸ್23 hours agoSDPI-ಮಕ್ಕಳ ಆಟದ ಉಪಕರಣಗಳೇ ಹಾಳು: ಕಾರಂತರ ಬಾಲವನದ ದುಸ್ಥಿತಿಗೆ ಎಸ್ಡಿಪಿಐ ಅಸಮಾಧಾನ
-
ಬಿಗ್ ನ್ಯೂಸ್22 hours agoReservation-ದ.ಕ. ಜಿ.ಪಂ., ತಾ.ಪಂ. ಮೀಸಲಾತಿ ಪ್ರಕಟ: ಮಹಿಳೆಯರಿಗೆ ತಾ.ಪಂ. 65, ಜಿ.ಪಂ. 18 ಸ್ಥಾನ ಮೀಸಲು
-
ಅಪರಾಧ22 hours agoDigital Arrest-‘ಡಿಜಿಟಲ್ ಅರೆಸ್ಟ್’ ಹೆಸರಿನಲ್ಲಿ 75 ವರ್ಷದ ಮಹಿಳೆಗೆ ₹2 ಕೋಟಿ ವಂಚನೆ
-
ಅಂತರ ರಾಜ್ಯ21 hours agoNana Patekar-ಕಾರ್ಗಿಲ್ ಯುದ್ಧದ ವೇಳೆ ಸೈನಿಕನಾಗಿಯೂ ದೇಶ ಸೇವೆ ಮಾಡಿದ್ದ ನಾನಾ ಪಾಟೇಕರ್
-
ಅಂತರ ರಾಜ್ಯ21 hours agoDK Shivakumar-‘ಸ್ಟಿಂಗ್ ಆಪರೇಷನ್’ ಬಗ್ಗೆ ಎಲ್ಲಾ ಮಾಹಿತಿ ಇದೆ..! ಚರ್ಚೆಗೆಂದು ಬಂದು ಏನೇನು ಮಾಡಿದ್ದಾರೆ ಎಂದು ಗೊತ್ತಿದೆ : ಇದರ ಪಿತಾಮಹ ಯಾರೆಂದೂ ತಿಳಿದಿದೆ : ಡಿಕೆಶಿ ಸ್ಫೋಟಕ ಹೇಳಿಕೆ
-
ಅಂತರ ರಾಜ್ಯ23 hours agoCEC Jnanesh Kumar-ವಿಪಕ್ಷಗಳ ಪ್ರತಿಭಟನೆ ತೀವ್ರ: ಸಿಇಸಿ ಜ್ಞಾನೇಶ್ ಕುಮಾರ್ ನಿವಾಸಕ್ಕೆ ತೀವ್ರ ಭದ್ರತೆ
-
ಮಂಗಳೂರು20 hours agoMangaluru-ಬೆಳೆ ವಿಮೆ ಅನ್ಯಾಯ ಆರೋಪ: ಅ.9ರಂದು ಮಂಗಳೂರಿನಲ್ಲಿ ರೈತರ ಬೃಹತ್ ಹಕ್ಕೊತ್ತಾಯ | ಸಹಕಾರ ಭಾರತಿ – ಬಿಜೆಪಿ ಬೆಂಬಲ


















