ಸ್ಥಳೀಯ
Karavara-ಮುಂಬೈನಿಂದ ಮಂಗಳೂರಿಗೆ ಸ್ವೀಟ್ ಬಾಕ್ಸ್ ಮಾದರಿಯಲ್ಲಿ ಹಣ, ಚಿನ್ನ ಸಾಗಾಟ : ಮೂಲ ಪತ್ತೆಗಿಳಿದ ಪೊಲೀಸರು..!
ಮುಂಬೈನಿಂದ ಮಂಗಳೂರಿಗೆ ಹೊರಟಿದ್ದ ಖಾಸಗಿ ಬಸ್ಸಿನಲ್ಲಿ ಬರೋಬ್ಬರಿ 401 ಗ್ರಾಂ ತೂಕದ 32 ಚಿನ್ನದ ಬಳೆಗಳು ಮತ್ತು ₹50 ಲಕ್ಷ ನಗದನ್ನು ಭಟ್ಕಳ ಪೊಲೀಸರು ಜಪ್ತಿ ಮಾಡಿದ್ದಾರೆ. “ಸ್ವೀಟ್ ಬಾಕ್ಸ್” ಮಾದರಿಯಲ್ಲಿ ಸೂಟ್ಕೇಸ್ನಲ್ಲಿ ಅಡಗಿಸಿಟ್ಟು ಕಳ್ಳಸಾಗಣೆ ಮಾಡುತ್ತಿದ್ದ ಜಾಲವನ್ನು ಭಟ್ಕಳ ಶಹರ ಪೊಲೀಸರು ಬೇಧಿಸಿದ್ದಾರೆ.
ಕಾರವಾರ: ಮುಂಬೈನಿಂದ ಮಂಗಳೂರಿಗೆ ಹೊರಟಿದ್ದ ಖಾಸಗಿ ಬಸ್ಸಿನಲ್ಲಿ ಬರೋಬ್ಬರಿ 401 ಗ್ರಾಂ ತೂಕದ 32 ಚಿನ್ನದ ಬಳೆಗಳು ಮತ್ತು ₹50 ಲಕ್ಷ ನಗದನ್ನು ಭಟ್ಕಳ ಪೊಲೀಸರು ಜಪ್ತಿ ಮಾಡಿದ್ದಾರೆ. “ಸ್ವೀಟ್ ಬಾಕ್ಸ್” ಮಾದರಿಯಲ್ಲಿ ಸೂಟ್ಕೇಸ್ನಲ್ಲಿ ಅಡಗಿಸಿಟ್ಟು ಕಳ್ಳಸಾಗಣೆ ಮಾಡುತ್ತಿದ್ದ ಜಾಲವನ್ನು ಭಟ್ಕಳ ಶಹರ ಪೊಲೀಸರು ಬೇಧಿಸಿದ್ದಾರೆ.
ಘಟನೆ ನಡೆದಿದ್ದು ಹೇಗೆ?
ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ವಾಹನ ತಪಾಸಣೆ ನಡೆಸುತ್ತಿದ್ದಾಗ ಬಸ್ವೊಂದನ್ನು ತಪಾಸಣೆ ನಡೆಸಿದ ಸಂದರ್ಭದಲ್ಲಿ ಸೂಟ್ಕೇಸ್ ಕಂಡಿದೆ. ಅದನ್ನು ಪರಿಶೀಲಿಸಿದಾಗ, ಅದರೊಳಗೆ ಸ್ವೀಟ್ ಬಾಕ್ಸ್ಗಳ ಮರೆಯಲ್ಲಿ ಹಣ ಮತ್ತು ಚಿನ್ನಾಭರಣಗಳು ಅಡಗಿಸಿಟ್ಟಿದ್ದು ಪತ್ತೆಯಾಗಿವೆ.
ಅನಾಮಿಕನ ಕೈಚಳಕ, ಚಾಲಕನ ವಿವರಣೆ
ಬಸ್ ಚಾಲಕನನ್ನು ವಿಚಾರಿಸಿದಾಗ, ಮುಂಬೈನಲ್ಲಿ ಒಬ್ಬ ಅನಾಮಿಕ ವ್ಯಕ್ತಿ ಸೂಟ್ಕೇಸ್ ನೀಡಿ, ಮಂಗಳೂರಿನ ಬಸ್ ನಿಲ್ದಾಣದಲ್ಲಿ ಅದನ್ನು ಪಡೆಯುವುದಾಗಿ ಹೇಳಿದ್ದಾನೆ. “ಬಸ್ ಸಂಖ್ಯೆ ಹೇಳುತ್ತೇನೆ, ನಮ್ಮವರು ಬಂದು ಅದನ್ನು ಪಡೆಯುತ್ತಾರೆ, ಇರ್ಫಾನ್ ಎಂಬುವವರಿಗೆ ಸೂಟ್ಕೇಸ್ ಕೊಡುವಂತೆ ತಿಳಿಸಿದ್ದರು” ಎಂದು ಚಾಲಕ ಪೊಲೀಸರಿಗೆ ಮಾಹಿತಿ ನೀಡಿದ್ದಾನೆ. ಚಾಲಕನ ವಿವರಣೆ ಮತ್ತು ಅನುಮಾನಾಸ್ಪದ ಸೂಟ್ಕೇಸ್ನಿಂದ ಪೊಲೀಸರು ತಪಾಸಣೆ ತೀವ್ರಗೊಳಿಸಿ ಕಳ್ಳಸಾಗಣೆ ಬಯಲಿಗೆಳೆದಿದ್ದಾರೆ.
ಸದ್ಯ, ಭಟ್ಕಳ ಶಹರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಚಾಲಕನಿಂದ ನಗದು ಮತ್ತು ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ. ಈ ಕಳ್ಳಸಾಗಣೆಯ ಮಾಲೀಕರು ಯಾರು ಮತ್ತು ಇದು ಯಾವ ಜಾಲಕ್ಕೆ ಸೇರಿದೆ ಎಂಬ ಕುರಿತು ತೀವ್ರ ತನಿಖೆ ಮುಂದುವರಿಸಿದ್ದಾರೆ.
ಗೋವಾ ಮದ್ಯ ಜಪ್ತಿ!
ಇದೇ ವೇಳೆ, ಕಾರವಾರ ತಾಲೂಕಿನ ಮೈಂಗಿಣಿ ಅರಣ್ಯ ಪ್ರದೇಶದಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ಗೋವಾ ಮದ್ಯವನ್ನು ತಲೆ ಮೇಲೆ ಹೊತ್ತು ಅಕ್ರಮವಾಗಿ ಸಾಗಿಸುತ್ತಿದ್ದವರನ್ನು ಪೊಲೀಸರು ಬಂಧಿಸಿದ್ದಾರೆ. ಕಾರವಾರ ಚಿತಾಕುಲ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ. ಒಂದೆಡೆ ಚಿನ್ನ, ಹಣ ಮತ್ತೊಂದೆಡೆ ಮದ್ಯ ಕಳ್ಳಸಾಗಣೆ ಜಾಲಕ್ಕೆ ಪೊಲೀಸರು ಉತ್ತರ ಕನ್ನಡದಲ್ಲಿ ಭಾರಿ ಹೊಡೆತ ನೀಡಿದ್ದಾರೆ.
ಬಿಗ್ ನ್ಯೂಸ್
Neralakatte-Big Breaking: ನೇರಳಕಟ್ಟೆ : ಲಾರಿ ಡಿಕ್ಕಿಯಾಗಿ ರಸ್ತೆ ದಾಟುತ್ತಿದ್ದ 14ರ ಬಾಲಕಿ ದುರ್ಮರಣ
ರಸ್ತೆ ದಾಟುತ್ತಿದ್ದ ವೇಳೆ ವೇಗವಾಗಿ ಬಂದ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ 14 ವರ್ಷದ ಬಾಲಕಿಯೊಬ್ಬಳು ಸ್ಥಳದಲ್ಲೇ ಮೃತಪಟ್ಟ ಘಟನೆ ಮಾಣಿ – ಮೈಸೂರು ಹೆದ್ದಾರಿಯ ನೇರಳಕಟ್ಟೆ ಎಂಬಲ್ಲಿ ನಡೆದಿದೆ. ಮೃತ ಬಾಲಕಿಯನ್ನು ನೆಟ್ಲಮುಡ್ನೂರು ನಿವಾಸಿ ಫಾತಿಮಾ ಇಝಾ ಇಲ್ಯಾಸ್ (14) ಎಂದು ಗುರುತಿಸಲಾಗಿದೆ.
ವಿಟ್ಲ: ರಸ್ತೆ ದಾಟುತ್ತಿದ್ದ ವೇಳೆ ವೇಗವಾಗಿ ಬಂದ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ 14 ವರ್ಷದ ಬಾಲಕಿಯೊಬ್ಬಳು ಸ್ಥಳದಲ್ಲೇ ಮೃತಪಟ್ಟ ಘಟನೆ ಮಾಣಿ – ಮೈಸೂರು ಹೆದ್ದಾರಿಯ ನೇರಳಕಟ್ಟೆ ಎಂಬಲ್ಲಿ ನಡೆದಿದೆ.
ಮೃತ ಬಾಲಕಿಯನ್ನು ನೆಟ್ಲಮುಡ್ನೂರು ನಿವಾಸಿ ಫಾತಿಮಾ ಇಝಾ ಇಲ್ಯಾಸ್ (14) ಎಂದು ಗುರುತಿಸಲಾಗಿದೆ. ಈಕೆ ಕಂಬಳಬೆಟ್ಟು ಶಾಲೆಯ ವಿದ್ಯಾರ್ಥಿನಿಯಾಗಿದ್ದಳು ಎಂದು ತಿಳಿದುಬಂದಿದೆ.
ಬಾಲಕಿ ರಸ್ತೆ ದಾಟುತ್ತಿದ್ದ ಸಂದರ್ಭದಲ್ಲಿ ಲಾರಿ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಡಿಕ್ಕಿಯ ರಭಸಕ್ಕೆ ಬಾಲಕಿ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾಳೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ವಿಟ್ಲ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.
ಆರೋಗ್ಯ
Puttur-ಪುತ್ತೂರು: ಸಿಟಿ ಆಸ್ಪತ್ರೆಯಲ್ಲಿ ಉಚಿತ ಮೂಳೆ ಖನಿಜ ಸಾಂದ್ರತೆ (BMD) ಚಿಕಿತ್ಸಾ ಶಿಬಿರ
ಪುತ್ತೂರು ಸಿಟಿ ಆಸ್ಪತ್ರೆ ಚಾರಿಟೇಬಲ್ ಟ್ರಸ್ಟ್ ಹಾಗೂ ಇನ್ನರ್ ವೀಲ್ ಕ್ಲಬ್ ಪುತ್ತೂರು ಇವರ ಸಹಯೋಗದಲ್ಲಿ ಇಂದು (ನ.19) ಬೆಳಿಗ್ಗೆ 9.30ರಿಂದ ಮಧ್ಯಾಹ್ನ 2.30ರವರೆಗೆ ಉಚಿತ ಮೂಳೆ ಖನಿಜ ಸಾಂದ್ರತೆ (BMD) ಚಿಕಿತ್ಸಾ ಶಿಬಿರವು ನಡೆಯಿತು. ಪುತ್ತೂರು ಸಿಟಿ ಆಸ್ಪತ್ರೆಯಲ್ಲಿ ಶಿಬಿರವನ್ನು ಏರ್ಪಡಿಸಲಾಗಿತ್ತು.
ಪುತ್ತೂರು: ಪುತ್ತೂರು ಸಿಟಿ ಆಸ್ಪತ್ರೆ ಚಾರಿಟೇಬಲ್ ಟ್ರಸ್ಟ್ ಹಾಗೂ ಇನ್ನರ್ ವೀಲ್ ಕ್ಲಬ್ ಪುತ್ತೂರು ಇವರ ಸಹಯೋಗದಲ್ಲಿ ಇಂದು (ನ.19) ಬೆಳಿಗ್ಗೆ 9.30ರಿಂದ ಮಧ್ಯಾಹ್ನ 2.30ರವರೆಗೆ ಉಚಿತ ಮೂಳೆ ಖನಿಜ ಸಾಂದ್ರತೆ (BMD) ಚಿಕಿತ್ಸಾ ಶಿಬಿರವು ನಡೆಯಿತು. ಪುತ್ತೂರು ಸಿಟಿ ಆಸ್ಪತ್ರೆಯಲ್ಲಿ ಶಿಬಿರವನ್ನು ಏರ್ಪಡಿಸಲಾಗಿತ್ತು.
ಬೆನ್ನು ನೋವು, ಮೊಣಕಾಲು ನೋವು, ಸೊಂಟ ನೋವು ಹಾಗೂ ಸ್ನಾಯು ನೋವು ಮುಂತಾದ ಸಮಸ್ಯೆಗಳು ಮೂಳೆ ಸವೆತ ಅಥವಾ ಮುಂದಿನ ದಿನಗಳಲ್ಲಿ ಮೂಳೆ ಮುರಿತಕ್ಕೆ ಕಾರಣವಾಗುವ ಸಾಧ್ಯತೆಯಿದೆ. ಇಂತಹ ಲಕ್ಷಣಗಳನ್ನು ನಿರ್ಲಕ್ಷಿಸದೆ ಆರಂಭದಲ್ಲೇ ತಪಾಸಣೆ ಮಾಡಿಸಿಕೊಂಡು ಸೂಕ್ತ ಚಿಕಿತ್ಸೆ ಪಡೆಯುವುದು ಅಗತ್ಯ. ಈ ನಿಟ್ಟಿನಲ್ಲಿ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಉಚಿತ BMD ಶಿಬಿರವನ್ನು ಆಯೋಜಿಸಲಾಗಿತ್ತು. ಆರೋಗ್ಯ ಸೇವಾ ವಿಭಾಗದ ಇಂಡ್ಕೆಮಿ ಹೆಲ್ತ್ ಸ್ಪೆಷಾಲಿಟಿ ಪ್ರೈವೇಟ್ ಲಿಮಿಟೆಡ್ ಪ್ರಾಯೋಜಕತ್ವದಲ್ಲಿ ಶಿಬಿರ ನಡೆಯಿತು.
ಶಿಬಿರದಲ್ಲಿ ಮೂಳೆ ತಜ್ಞರಾದ ಡಾ. ಭಾಸ್ಕರ್ ಎಸ್. (D’Ortho), ಆಡಳಿತ ನಿರ್ದೇಶಕರು, ಪುತ್ತೂರು ಸಿಟಿ ಆಸ್ಪತ್ರೆ ಇವರು ತಪಾಸಣೆ ಹಾಗೂ ಸಲಹೆ ನೀಡಿದರು.
ಇನ್ನರ್ ವೀಲ್ ಕ್ಲಬ್ ನ ನಿರ್ದೇಶಕಿ ಮಂಜುಳ ಭಾಸ್ಕರ್, ಅಧ್ಯಕ್ಷೆ ಮನೋರಮಾ ಸೂರ್ಯ, ಖಜಾಂಜಿ ಕವಿತಾ ಕೊಳತ್ತಾಯ, ಕಾರ್ಯದರ್ಶಿ ಶ್ರುತಿ ಎಸ್. ಬಂಗೇರ ಶಿಬಿರದಲ್ಲಿ ಉಪಸ್ಥಿತರಿದ್ದರು.
ಬಿಗ್ ನ್ಯೂಸ್
Puttur-ಎಸ್ಡಿಪಿಐ ನಿರಂತರ ಪ್ರಯತ್ನ: ಪುತ್ತೂರಿನ ಅಲ್ಪಸಂಖ್ಯಾತರ ಸೇವಾ ಕೇಂದ್ರ ಪುನರಾರಂಭ
ಕಳೆದ ಮೂರು ವರ್ಷಗಳಿಂದ ಕಾರ್ಯಾಚರಣೆ ಸ್ಥಗಿತಗೊಂಡಿದ್ದ ಪುತ್ತೂರು ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಇದೀಗ ಮತ್ತೆ ಸಾರ್ವಜನಿಕರ ಸೇವೆಗೆ ಲಭ್ಯವಾಗಿದೆ. ಕೇಂದ್ರವನ್ನು ಪುನರಾರಂಭಿಸುವಂತೆ ಎಸ್ಡಿಪಿಐ ಪುತ್ತೂರು ನಗರ ಸಮಿತಿಯು ಸಂಬಂಧಪಟ್ಟ ಅಧಿಕಾರಿಗಳ ಗಮನ ಸೆಳೆದು ನಿರಂತರ ಪ್ರಯತ್ನ ನಡೆಸಿತ್ತು.
ಪುತ್ತೂರು: ಕಳೆದ ಮೂರು ವರ್ಷಗಳಿಂದ ಕಾರ್ಯಾಚರಣೆ ಸ್ಥಗಿತಗೊಂಡಿದ್ದ ಪುತ್ತೂರು ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಇದೀಗ ಮತ್ತೆ ಸಾರ್ವಜನಿಕರ ಸೇವೆಗೆ ಲಭ್ಯವಾಗಿದೆ.
ಕೇಂದ್ರವನ್ನು ಪುನರಾರಂಭಿಸುವಂತೆ ಎಸ್ಡಿಪಿಐ ಪುತ್ತೂರು ನಗರ ಸಮಿತಿಯು ಸಂಬಂಧಪಟ್ಟ ಅಧಿಕಾರಿಗಳ ಗಮನ ಸೆಳೆದು ನಿರಂತರ ಪ್ರಯತ್ನ ನಡೆಸಿತ್ತು. ಸಾರ್ವಜನಿಕರಿಗೆ ಅನುಕೂಲವಾಗುವ ಈ ಸೇವಾ ಕೇಂದ್ರವನ್ನು ಮತ್ತೆ ಆರಂಭಿಸಬೇಕೆಂದು ಸಮಿತಿಯು ಒತ್ತಾಯಿಸಿತ್ತು.
ಈ ನಡುವೆ, ಕೇಂದ್ರಕ್ಕೆ ಸಂಬಂಧಿಸಿದ ಕಟ್ಟಡವನ್ನು ಹಾಸ್ಟೆಲ್ ಬಳಕೆಗೆ ಪರಿವರ್ತಿಸಲು ಪುತ್ತೂರು ಶಾಸಕರು ಪ್ರಯತ್ನಿಸಿದ್ದರು ಎಂಬ ವಿಚಾರ ವಿವಾದಕ್ಕೆ ಕಾರಣವಾಗಿತ್ತು.
ಇದೀಗ ಮೂರು ವರ್ಷಗಳ ಬಳಿಕ ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಮತ್ತೆ ಕಾರ್ಯಾರಂಭ ಮಾಡಿದ್ದು, ಸಾರ್ವಜನಿಕರಿಗೆ ಸೇವೆ ಲಭ್ಯವಾಗಿರುವುದಾಗಿ ಎಸ್ಡಿಪಿಐ ಪುತ್ತೂರು ನಗರ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.
-
ಬಿಗ್ ನ್ಯೂಸ್18 hours agoPuttur-ಪುತ್ತೂರು: ದರ್ಬೆಯಲ್ಲಿ ಭೀಕರ ಕಾರು ಅಪಘಾತ: ಓರ್ವ ಮೃತ್ಯು, ಮತ್ತೊಬ್ಬರಿಗೆ ಗಂಭೀರ ಗಾಯ
-
ಬಿಗ್ ನ್ಯೂಸ್10 hours agoNeralakatte-Big Breaking: ನೇರಳಕಟ್ಟೆ : ಲಾರಿ ಡಿಕ್ಕಿಯಾಗಿ ರಸ್ತೆ ದಾಟುತ್ತಿದ್ದ 14ರ ಬಾಲಕಿ ದುರ್ಮರಣ
-
ಅಂತರ ರಾಜ್ಯ16 hours agoToll Plaza-ವಾಹನ ಸವಾರರೇ ಗಮನಿಸಿ; ಇನ್ಮುಂದೆ ಟೋಲ್ನಲ್ಲೇ ವಾಹನ ವಿಮೆ ಪರಿಶೀಲನೆ: ಅವಧಿ ಮುಗಿದಿದ್ದರೆ ಮೊಬೈಲ್ಗೆ SMS, 10 ಸಾವಿರ ರೂ.ವರೆಗೆ ದಂಡ..!
-
ಮಂಗಳೂರು18 hours agoFarmers-ಕೋಳಿ ಫಾರಂಗಳಿಂದ ಹೆಚ್ಚುತ್ತಿರುವ ನೊಣಗಳು : ಕಂಪನಿಗಳ ವಿರುದ್ಧ ಹೋರಾಟಕ್ಕೆ ರೈತರು ಸಜ್ಜು
-
Uncategorized17 hours agoPuttur-ಪುತ್ತೂರು: ಕೃಷ್ಣನಗರದಲ್ಲಿ ಮನೆ ಕಳ್ಳತನ- 2.19 ಲಕ್ಷ ರೂ. ಮೌಲ್ಯದ ಸೊತ್ತು ಕಳವು
-
ಬಿಗ್ ನ್ಯೂಸ್18 hours agoTransfer-ರಾಜ್ಯ ಪೊಲೀಸ್ ಇಲಾಖೆಯಲ್ಲಿ ಭಾರಿ ಬದಲಾವಣೆ: 32 ಐಪಿಎಸ್ ಅಧಿಕಾರಿಗಳ ವರ್ಗಾವಣೆ – ಪಶ್ಚಿಮ ವಲಯ ಐಜಿಪಿಯಾಗಿ ಶಶಿಕುಮಾರ್
-
ರಾಜಕೀಯ16 hours agoPuttur-ಪುತ್ತೂರಿನಲ್ಲಿ ಎಲ್ಲಿ ನೋಡಿದರೂ ಭ್ರಷ್ಟಾಚಾರ ಮತ್ತು ದುಷ್ಟ ರಾಜಕೀಯವೇ ತಾಂಡವವಾಡುತ್ತಿದೆ: ಬೂಡಿಯಾರು; ಶಾಸಕರು ಬ್ಯಾನರ್ ಹಾಕಿ, ತೆಂಗಿನಕಾಯಿ ಒಡೆಯುವುದು ಮಾತ್ರ : ಸಾಜ
-
ಬಿಗ್ ನ್ಯೂಸ್17 hours agoPuttur-ಪುತ್ತೂರು: ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘಕ್ಕೆ ರಾಜ್ಯಮಟ್ಟದ ಉತ್ತಮ ಸಹಕಾರ ಸಂಘ ಪ್ರಶಸ್ತಿ















