Connect with us

ಸ್ಥಳೀಯ

Subrahmanya-ಸುಬ್ರಹ್ಮಣ್ಯ: ಚಂಪಾಷಷ್ಠಿ ಜಾತ್ರಾ ಸಂಭ್ರಮಕ್ಕೆ ಚಾಲನೆ: ಕುಕ್ಕೆ ರಥಗಳಿಗೆ ಸಾಂಪ್ರದಾಯಿಕ ಗೂಟ ಪೂಜೆ!

Published

on



Ad Widget

Ad Widget

Ad Widget

Ad Widget

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವಾರ್ಷಿಕ ಚಂಪಾಷಷ್ಠಿ ಜಾತ್ರಾ ಮಹೋತ್ಸವದ ಸಿದ್ಧತೆಗಳು ಅಧಿಕೃತವಾಗಿ ಆರಂಭಗೊಂಡಿವೆ. ಜಾತ್ರೆಯ ಪ್ರಮುಖ ಆಕರ್ಷಣೆಯಾದ ರಥೋತ್ಸವಕ್ಕಾಗಿ ಬ್ರಹ್ಮರಥ ಮತ್ತು ಪಂಚಮಿ ರಥಗಳನ್ನು ನಿರ್ಮಿಸುವ ಮುನ್ನ ನಡೆಯುವ ಸಾಂಪ್ರದಾಯಿಕ “ಗೂಟ ಪೂಜಾ ಮುಹೂರ್ತ” ಬುಧವಾರ ವಿಜೃಂಭಣೆಯಿಂದ ನೆರವೇರಿತು.

Ad Widget

Ad Widget

Ad Widget

Ad Widget

ಸುಬ್ರಹ್ಮಣ್ಯ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವಾರ್ಷಿಕ ಚಂಪಾಷಷ್ಠಿ ಜಾತ್ರಾ ಮಹೋತ್ಸವದ ಸಿದ್ಧತೆಗಳು ಅಧಿಕೃತವಾಗಿ ಆರಂಭಗೊಂಡಿವೆ. ಜಾತ್ರೆಯ ಪ್ರಮುಖ ಆಕರ್ಷಣೆಯಾದ ರಥೋತ್ಸವಕ್ಕಾಗಿ ಬ್ರಹ್ಮರಥ ಮತ್ತು ಪಂಚಮಿ ರಥಗಳನ್ನು ನಿರ್ಮಿಸುವ ಮುನ್ನ ನಡೆಯುವ ಸಾಂಪ್ರದಾಯಿಕ “ಗೂಟ ಪೂಜಾ ಮುಹೂರ್ತ” ಬುಧವಾರ ವಿಜೃಂಭಣೆಯಿಂದ ನೆರವೇರಿತು.

Ad Widget

Ad Widget

Ad Widget alt="Ad Widget"/>

Ad Widget

ಕಾರ್ತಿಕ ಹುಣ್ಣಿಮೆಯಂದು ಗೂಟ ಪೂಜೆ:
ದೇಗುಲದಲ್ಲಿ ವಿಶೇಷ ಪೂಜೆಗಳು ನೆರವೇರಿದ ಬಳಿಕ, ಕಾರ್ತಿಕ ಹುಣ್ಣಿಮೆಯ ಶುಭ ದಿನವಾದ ಬುಧವಾರ, ಕ್ಷೇತ್ರ ಪುರೋಹಿತ ಮಧುಸೂಧನ ಕಲ್ಲೂರಾಯ ಅವರು ಗೂಟ ಪೂಜಾ ಮುಹೂರ್ತವನ್ನು ವಿವಿಧ ವೈದಿಕ ವಿಧಿವಿಧಾನಗಳೊಂದಿಗೆ ನೆರವೇರಿಸಿದರು. ಬ್ರಹ್ಮರಥ ಮತ್ತು ಪಂಚಮಿ ರಥಗಳ ನಿರ್ಮಾಣಕ್ಕೆ ಬಳಸಲಾಗುವ ಗೂಟಗಳಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು.

Ad Widget

Ad Widget <> Ad Widget

ಮಲೆಕುಡಿಯ ಜನಾಂಗಕ್ಕೆ ವೀಳ್ಯ ಪ್ರಸಾದ:
ಸಾಂಪ್ರದಾಯಿಕ ಪೂಜೆಗಳ ಬಳಿಕ, ಕ್ಷೇತ್ರ ಪುರೋಹಿತರು ಪೂರ್ವಶಿಷ್ಟ ಸಂಪ್ರದಾಯದಂತೆ ರಥಗಳನ್ನು ಕಟ್ಟುವ ಜವಾಬ್ದಾರಿ ಹೊಂದಿರುವ ಮೂಲನಿವಾಸಿ ಮಲೆಕುಡಿಯ ಜನಾಂಗದ ಗುರಿಕಾರರಿಗೆ ಪ್ರಸಾದ ರೂಪದಲ್ಲಿ ವೀಳ್ಯ ನೀಡಿ ಗೌರವಿಸಿದರು. ನಂತರ ಇತರ ಭಕ್ತಾದಿಗಳಿಗೆ ಪ್ರಸಾದ ವಿತರಿಸಲಾಯಿತು.



Ad Widget

ರಥ ನಿರ್ಮಾಣಕ್ಕೆ ಮಲೆಕುಡಿಯರ ಕೈಂಕರ್ಯ:
ವೀಳ್ಯ ಸ್ವೀಕರಿಸಿದ ನಂತರ, ಮೂಲನಿವಾಸಿ ಮಲೆಕುಡಿಯ ಜನಾಂಗದವರು ಭಕ್ತಿಭಾವದಿಂದ ಬ್ರಹ್ಮರಥ ಮತ್ತು ಪಂಚಮಿ ರಥಗಳಿಗೆ ಗೂಟ ನೆಡುವ ಕೈಂಕರ್ಯವನ್ನು ನೆರವೇರಿಸಿದರು. ಇದು ಚಂಪಾಷಷ್ಠಿ ಜಾತ್ರೆಯ ಪೂರ್ವಸಿದ್ಧತೆಯ ಪ್ರಮುಖ ಹೆಜ್ಜೆಯಾಗಿದೆ.

Ad Widget

Ad Widget

ಗಣ್ಯರು ಮತ್ತು ಭಕ್ತರ ಉಪಸ್ಥಿತಿ:
ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹರೀಶ್.ಎಸ್. ಇಂಜಾಡಿ, ಕಾರ್ಯನಿರ್ವಹಣಾಧಿಕಾರಿ ಅರವಿಂದ ಅಯ್ಯಪ್ಪ ಸುತಗುಂಡಿ, ಸಹಾಯಕ ಕಾರ್ಯನಿರ್ವಹಣಾಧಿಕಾರಿ ಎಸ್.ಜೆ.ಯೇಸುರಾಜ್, ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಅಶೋಕ್ ನೆಕ್ಸಾಜಿ, ಸೌಮ್ಯಾ ಭರತ್, ಅಜಿತ್ ಕುಮಾರ್, ಲೀಲಾ ಮನಮೋಹನ್, ಪ್ರವೀಣ ರೈ ಮರುವಂಜ ಹಾಗೂ ಮಾಸ್ಟರ್‌ಪ್ಲಾನ್ ಸಮಿತಿ ಸದಸ್ಯರಾದ ಪವನ್‌ಎಂ.ಡಿ., ಸತೀಶ್ ಕೂಜುಗೋಡು, ಲೋಲಾಕ್ಷ ಕೈಕಂಬ, ಅಚ್ಯುತ್ತ ಗೌಡ ಬಳ್ಳ ಉಪಸ್ಥಿತರಿದ್ದರು.

ಅಲ್ಲದೆ, ಕಚೇರಿ ಅಧೀಕ್ಷಕ ಕೆ.ಎಂ.ಗೋಪಿನಾಥ್ ನಂಬೀಶ, ಶಿಷ್ಟಾಚಾರ ಅಧಿಕಾರಿ ಜಯರಾಮ ರಾವ್, ಹೆಬ್ಬಾರ್‌ಪ್ರಸನ್ನ ಭಟ್, ದೇವಳದ ಪಾಟಾಳಿ ಲೋಕೇಶ್ ಎ.ಆರ್., ಮೂಲನಿವಾಸಿ ಮಲೆಕುಡಿಯ ಜನಾಂಗದ ಗುರಿಕಾರ ಚಂದ್ರಶೇಖರ ಕೋಡಿಕಣೆ, ಹಿರಿಯರಾದ ವೇದ ಮಲೆ, ಎ.ವಿ.ನಾಗೇಶ್, ಮೋಂಟಮಲೆ ಚನಿಯಪ್ಪಮಲೆ, ಎ.ವಿ.ನಾರಾಯಣ ಮಲೆ, ಶಿವಕುಮಾರ್ ಆರ್ಗುಡಿ, ಪ್ರಮುಖರಾದ ಭಾಸ್ಕರ ಅರ್ಗುಡಿ, ರೋಹಿತಾಕ್ಷ, ಎ.ಎನ್. ಜಗದೀಶ್, ದಿನಕರ, ಶ್ರೇಯಸ್, ಧನುಷ್, ಪದ್ಮಯ್ಯ ಸೇರಿದಂತೆ ರಥ ಕಟ್ಟುವ ಮೂಲನಿವಾಸಿ ಮಲೆಕುಡಿಯ ಜನಾಂಗದ 60 ಯುವಕರು ಮತ್ತು ನೂರಾರು ಭಕ್ತರು ಈ ಧಾರ್ಮಿಕ ಕಾರ್ಯಕ್ರಮಕ್ಕೆ ಸಾಕ್ಷಿಯಾದರು.

Ad Widget
Click to comment

Leave a Reply

ಶಿಕ್ಷಣ

Vivekananda-ತಾಲೂಕು ಮಟ್ಟದ ಟೇಬಲ್ ಟೆನ್ನಿಸ್ ಪಂದ್ಯಾಟ – ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕಿಯರ ತಂಡ ಜಿಲ್ಲಾಮಟ್ಟಕ್ಕೆ ಆಯ್ಕೆ

Published

on



Ad Widget

Ad Widget

Ad Widget

Ad Widget

ಶಾಲಾ ಶಿಕ್ಷಣ ಇಲಾಖೆ ಪದವಿಪೂರ್ವ ವಿಭಾಗ ತಾಲೂಕು ಮಟ್ಟದ ಟೇಬಲ್ ಟೆನ್ನಿಸ್ ಪಂದ್ಯಾಟ ಬಾಲಕಿಯರ ಸರಕಾರಿ ಪದವಿಪೂರ್ವ ಕಾಲೇಜು ಮುಕ್ರಂಪಾಡಿ ಇವರ ಸಹಯೋಗದಲ್ಲಿ ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ನಡೆಯಿತು. ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕರ ತಂಡ ದ್ವಿತೀಯ ಹಾಗೂ ಬಾಲಕಿಯರ ತಂಡ ಪ್ರಥಮ ಸ್ಥಾನ ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

Ad Widget

Ad Widget

Ad Widget

Ad Widget

ಶಾಲಾ ಶಿಕ್ಷಣ ಇಲಾಖೆ ಪದವಿಪೂರ್ವ ವಿಭಾಗ ತಾಲೂಕು ಮಟ್ಟದ ಟೇಬಲ್ ಟೆನ್ನಿಸ್ ಪಂದ್ಯಾಟ ಬಾಲಕಿಯರ ಸರಕಾರಿ ಪದವಿಪೂರ್ವ ಕಾಲೇಜು ಮುಕ್ರಂಪಾಡಿ ಇವರ ಸಹಯೋಗದಲ್ಲಿ ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ನಡೆಯಿತು.

Ad Widget

Ad Widget

Ad Widget alt="Ad Widget"/>

Ad Widget

ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕರ ತಂಡ ದ್ವಿತೀಯ ಹಾಗೂ ಬಾಲಕಿಯರ ತಂಡ ಪ್ರಥಮ ಸ್ಥಾನ ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

Ad Widget

Ad Widget <> Ad Widget

ಬಾಲಕರ ತಂಡದಲ್ಲಿ ಪ್ರಥಮ ಪಿಯುಸಿಯ ವಿದ್ಯಾರ್ಥಿಗಳಾದ ಕೆ. ವಿ. ನಿಖಿಲ್ ಕುಮಾರ್, ನಿಹಾಲ್ ಸಿ. ರೈ. ದ್ವಿತೀಯ ಪಿಯುಸಿ ಅಭಿಲಾಷ್, ವಿಕ್ರಮ್ ಎ. ಜಿ ಹಾಗೂ ಬಾಲಕಿಯರ ತಂಡದಲ್ಲಿ ದ್ವಿತೀಯ ಪಿಯುಸಿ ಆತ್ಮಿಕಾ, ಎಚ್. ಮನ್ಮಿತಾ, ಶರಣ್ಯಾ ಎಚ್. ಎನ್ ಭಾಗವಹಿಸಿರುತ್ತಾರೆ.



Ad Widget

ತಂಡವು ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ರವಿಶಂಕರ್ ,ಡಾ .ಜ್ಯೋತಿ ಮತ್ತು ಯತೀಶ್ ಇವರ ನೇತೃತ್ವದಲ್ಲಿ ತರಬೇತಿಯನ್ನು ಪಡೆದಿರುತ್ತಾರೆ .ಇವರನ್ನು ಕಾಲೇಜಿನ ಆಡಳಿತ ಮಂಡಳಿ ಪ್ರಾಂಶುಪಾಲರು ಹಾಗು ಉಪನ್ಯಾಸಕ ,ಉಪನ್ಯಾಸಕೇತರ ವೃಂದದವರು ಅಭಿನಂದಿಸಿರುತ್ತಾರೆ.

Continue Reading

ಸ್ಥಳೀಯ

Dharmasthala-ಅ. 11 ರಿಂದ 19 : ಧರ್ಮಸ್ಥಳದಲ್ಲಿ ನವರಾತ್ರಿ ವೈಭವ

Published

on



Ad Widget

Ad Widget

Ad Widget

Ad Widget

ನವರಾತ್ರಿ ಪ್ರಯುಕ್ತ ಧರ್ಮಸ್ಥಳದಲ್ಲಿ ಇದೇ 11 ರಿಂದ 19 ರ ವರೆಗೆ ವಿಶೇಷ ಕಾರ್ಯಕ್ರಮಗಳು ನಡೆಯಲಿವೆ. ಪ್ರತಿ ದಿನ ರಾತ್ರಿ ಅಮ್ಮನವರ ಸನ್ನಿಧಿಯಲ್ಲಿ ವಿಶೇಷ ಪೂಜೆ ನಡೆಯುತ್ತದೆ.

Ad Widget

Ad Widget

Ad Widget

Ad Widget

ಉಜಿರೆ: ನವರಾತ್ರಿ ಪ್ರಯುಕ್ತ ಧರ್ಮಸ್ಥಳದಲ್ಲಿ ಇದೇ 11 ರಿಂದ 19 ರ ವರೆಗೆ ವಿಶೇಷ ಕಾರ್ಯಕ್ರಮಗಳು ನಡೆಯಲಿವೆ. ಪ್ರತಿ ದಿನ ರಾತ್ರಿ ಅಮ್ಮನವರ ಸನ್ನಿಧಿಯಲ್ಲಿ ವಿಶೇಷ ಪೂಜೆ ನಡೆಯುತ್ತದೆ.

Ad Widget

Ad Widget

Ad Widget alt="Ad Widget"/>

Ad Widget

ದೇವಸ್ಥಾನದ ಎದುರು ಇರುವ ಪ್ರವಚನಮಂಟಪದಲ್ಲಿ ಸಂಜೆ ಆರು ಗಂಟೆಯಿಂದ ಒಂಭತ್ತು ಗಂಟೆ ವರೆಗೆ ನಾಡಿನ ಖ್ಯಾತ ಕಲಾವಿದರಿಂದ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲಾಗಿದೆ.

Ad Widget

Ad Widget <> Ad Widget

ಅ. 11: ಭಾನುವಾರ: ಕುಮಾರಿ ಪ್ರಾಪ್ತಿ ಶೆಟ್ಟಿ, ಧರ್ಮಸ್ಥಳ ಮತ್ತು ಕುಮಾರಿ ಆದ್ವಿ, ನಿಡಿಗಲ್ (ಭಕ್ತಿಸಂಗೀತ), ಅ. 12: ಸೋಮವಾರ: ಪವಿತ್ರವಿನಯ್ ಮಯ್ಯ ಅರ್ಕುಳ, ಮಂಗಳೂರು (ಸುಗಮ ಸಂಗೀತ), ಅ. 13: ಮಂಗಳವಾರ: ಕುಮಾರಿ ಮಾನ್ಸಿ, ಮೈಸೂರು (ಭಕ್ತಿಸಂಗೀತ), ಅ. 14: ಬುಧವಾರ: ಮಾಸ್ಟರ್ ಆಗಮ, ಪೆರ್ಲ, ಮಂಗಳೂರು (ಕರ್ನಾಟಕ ಶಾಸ್ತ್ರೀಯ ಸಂಗೀತ), ಅ. 15: ಗುರುವಾರ: ಕುಮಾರಿ ಧೃತಿ ಬಿ. ಆತ್ರೇಯಾಸ್, ಕುಮಾರಿ ಧನ್ವಿ ಬಿ. ಆತ್ರೇಯಾಸ್ ಮತ್ತು ಮಾಸ್ಟರ್ ಅಸ್ರಮೇಯ ಗುರುಪ್ರಸಾದ್, ಬೆಂಗಳೂರು (ನೃತ್ಯ, ಗಾನಲಹರಿ), ಅ. 16: ಶುಕ್ರವಾರ: ಸನತ್‌ಕುಮಾರ್, ಬೆಂಗಳೂರು (ವಯಲಿನ್ ವಾದನ), ಅ. 17: ಶನಿವಾರ: ಕುಮಾರಿ ಮಯೂರಿ ಭಟ್ ಪೊಳಲಿ, ಬಂಟ್ವಾಳ (ಕರ್ನಾಟಕ ಶಾಸ್ತ್ರೀಯ ಸಂಗೀತ), ಅ. 18: ಆದಿತ್ಯವಾರ: ಕುಮಾರಿ ಐಶ್ವರ್ಯ ಜೋಗಿ ಮತ್ತು ತಂಡ, ಕುಂದಾಪುರ (ಸುಮಧುರ ಗಾನವೈಭವ), ಅ. 19: ಸೋಮವಾರ: ಕುಮಾರಿ ಅರ್ಚಿಷಾ ರಾವ್ ಮತ್ತು ಬಳಗ, ಬೆಂಗಳೂರು (ಸಂಜೆ ಗಂಟೆ 6.30 ರಿಂದ 8.30). ಮಲ್ಲಿಕಾಮಟ್ಟಿ ಮತ್ತು ಬಳಗ, ಪೊಳಲಿ (ರಾತ್ರಿ ಗಂಟೆ 9 ರಿಂದ 11.30) ಭಕ್ತಿ ಸಂಗೀತ.



Ad Widget
Ad Widget
Continue Reading

ಸ್ಥಳೀಯ

Beltangadi-ಬೆಳ್ತಂಗಡಿ: ಚಾಲಕನ ಸಮಯಪ್ರಜ್ಞೆ; ಬಸ್‌ನಲ್ಲಿ ಅಸ್ವಸ್ಥಗೊಂಡ ಮಹಿಳೆ ಅಪಾಯದಿಂದ ಪಾರು

Published

on



Ad Widget

Ad Widget

Ad Widget

Ad Widget

ದಾವಣಗೆರೆಯಿಂದ ಮಂಗಳೂರಿಗೆ ಸಂಚರಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯೊಬ್ಬರು ಮಾರ್ಗಮಧ್ಯೆ ಏಕಾಏಕಿ ಅಸ್ವಸ್ಥಗೊಂಡು ಪ್ರಜ್ಞೆತಪ್ಪಿದ ಘಟನೆ ನಡೆದಿದೆ. ಪರಿಸ್ಥಿತಿಯ ಗಂಭೀರತೆಯನ್ನು ಅರಿತ ಬಸ್ ಚಾಲಕ ತಕ್ಷಣ ಬಸ್ಸನ್ನು ಕಕ್ಕಿಂಜೆಯ ಆಸ್ಪತ್ರೆಗೆ ಕೊಂಡೊಯ್ದು ಮಹಿಳೆಯನ್ನು ದಾಖಲಿಸುವ ಮೂಲಕ ಸಮಯಪ್ರಜ್ಞೆ ಮೆರೆದಿದ್ದಾರೆ.

Ad Widget

Ad Widget

Ad Widget

Ad Widget

ಬೆಳ್ತಂಗಡಿ: ದಾವಣಗೆರೆಯಿಂದ ಮಂಗಳೂರಿಗೆ ಸಂಚರಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯೊಬ್ಬರು ಮಾರ್ಗಮಧ್ಯೆ ಏಕಾಏಕಿ ಅಸ್ವಸ್ಥಗೊಂಡು ಪ್ರಜ್ಞೆತಪ್ಪಿದ ಘಟನೆ ನಡೆದಿದೆ. ಪರಿಸ್ಥಿತಿಯ ಗಂಭೀರತೆಯನ್ನು ಅರಿತ ಬಸ್ ಚಾಲಕ ತಕ್ಷಣ ಬಸ್ಸನ್ನು ಕಕ್ಕಿಂಜೆಯ ಆಸ್ಪತ್ರೆಗೆ ಕೊಂಡೊಯ್ದು ಮಹಿಳೆಯನ್ನು ದಾಖಲಿಸುವ ಮೂಲಕ ಸಮಯಪ್ರಜ್ಞೆ ಮೆರೆದಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಬಾಳೆಹೊನ್ನೂರು ಮೂಲದ 26 ವರ್ಷದ ಮಹಿಳೆಯೊಬ್ಬರು ಮಂಗಳೂರಿನ ಖಾಸಗಿ ಸಂಸ್ಥೆಯಲ್ಲಿ ವಾರ್ಡನ್ ಆಗಿ ಕೆಲಸ ಮಾಡುತ್ತಿದ್ದು, ಕರ್ತವ್ಯಕ್ಕೆ ತೆರಳುತ್ತಿದ್ದರು. ಪ್ರಯಾಣದ ವೇಳೆ ಏಕಾಏಕಿ ಅಸ್ವಸ್ಥಗೊಂಡ ಅವರು ಪ್ರಜ್ಞೆ ಕಳೆದುಕೊಂಡಿದ್ದು, ಮಾತನಾಡಲು ಹಾಗೂ ದೇಹವನ್ನು ಚಲಿಸಲು ಸಾಧ್ಯವಾಗದ ಸ್ಥಿತಿ ನಿರ್ಮಾಣವಾಗಿತ್ತು.

Ad Widget

Ad Widget <> Ad Widget

ಇದನ್ನು ಗಮನಿಸಿದ ಬಸ್ ಚಾಲಕ ಕಿರಣ್ ಅವರು ಯಾವುದೇ ಸಮಯ ವ್ಯರ್ಥ ಮಾಡದೆ ತಕ್ಷಣ ಬಸ್ಸನ್ನು ಕಕ್ಕಿಂಜೆಯ ಆಸ್ಪತ್ರೆಗೆ ಕೊಂಡೊಯ್ದಿದ್ದಾರೆ. ಬಳಿಕ ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಿ ಸೂಕ್ತ ಚಿಕಿತ್ಸೆ ದೊರೆಯುವಂತೆ ನೋಡಿಕೊಂಡಿದ್ದಾರೆ.



Ad Widget

ಸದ್ಯ ಮಹಿಳೆ ಅಪಾಯದಿಂದ ಪಾರಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದು ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.

Ad Widget

Ad Widget

ಈ ಸಂದರ್ಭದಲ್ಲಿ ಅಶ್ರಫ್ ಚಾರ್ಮಾಡಿ, ಫಾರೂಕ್ ಕಕ್ಕಿಂಜೆ ಗಾಂಧಿನಗರ, ನೌಫಲ್ ಕಕ್ಕಿಂಜೆ ಗಾಂಧಿನಗರ ಹಾಗೂ ಬಸ್ ನಿರ್ವಾಹಕ ಸಂತೋಷ್ ಸಂಗಪ್ಪ ಗೌಡ ಅವರು ಸಹಕರಿಸಿದರು. ಚಾಲಕ ಕಿರಣ್ ಅವರ ಸಮಯಪ್ರಜ್ಞೆ ಹಾಗೂ ಸಹಪ್ರಯಾಣಿಕರ ಮಾನವೀಯ ನೆರವಿಗೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading