ಅಪರಾಧ
Mangalore-ಮಂಗಳೂರು: ವೈಯಕ್ತಿಕ ಸಮಸ್ಯೆಗಳ ಪರಿಹಾರಕ್ಕೆ ʼಪೂಜೆ’; ₹24 ಲಕ್ಷ ವಂಚಿಸಿದ ಆರೋಪಿಯ ಬಂಧನ..!
ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ವೈಯಕ್ತಿಕ ಸಮಸ್ಯೆಗಳಿಗೆ ಶೀಘ್ರ ಪೂಜೆ ಮಾಡಿ ಪರಿಹಾರ ನೀಡುವುದಾಗಿ ಜಾಹೀರಾತು ನೀಡಿ, ವ್ಯಕ್ತಿಯೊಬ್ಬರಿಗೆ ಸುಮಾರು ₹24,78,274 ಸೈಬರ್ ವಂಚನೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ದಕ್ಷಿಣ ಕನ್ನಡ ಜಿಲ್ಲಾ ಸೈಬರ್ ಅಪರಾಧ ಪೊಲೀಸ್ ಠಾಣೆಯ ಪೊಲೀಸರು ಯಶವಂತಪುರದ ವಾಸುದೇವ ಆರ್ (32) ಎಂಬಾತನನ್ನು ಮಂಗಳವಾರ ಬಂಧಿಸಿದ್ದಾರೆ.
ಮಂಗಳೂರು: ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ವೈಯಕ್ತಿಕ ಸಮಸ್ಯೆಗಳಿಗೆ ಶೀಘ್ರ ಪೂಜೆ ಮಾಡಿ ಪರಿಹಾರ ನೀಡುವುದಾಗಿ ಜಾಹೀರಾತು ನೀಡಿ, ವ್ಯಕ್ತಿಯೊಬ್ಬರಿಗೆ ಸುಮಾರು ₹24,78,274 ಸೈಬರ್ ವಂಚನೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ದಕ್ಷಿಣ ಕನ್ನಡ ಜಿಲ್ಲಾ ಸೈಬರ್ ಅಪರಾಧ ಪೊಲೀಸ್ ಠಾಣೆಯ ಪೊಲೀಸರು ಯಶವಂತಪುರದ ವಾಸುದೇವ ಆರ್ (32) ಎಂಬಾತನನ್ನು ಮಂಗಳವಾರ ಬಂಧಿಸಿದ್ದಾರೆ.
ಪ್ರಕರಣದ ಹಿನ್ನೆಲೆ:
ಮಂಗಳೂರಿನ ವ್ಯಕ್ತಿಯೊಬ್ಬರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ಇನ್‌ಸ್ಟಾಗ್ರಾಮ್‌ನಲ್ಲಿ ಕಂಡ ಜಾಹೀರಾತನ್ನು ನಂಬಿ ವಾಸುದೇವನನ್ನು ಸಂಪರ್ಕಿಸಿದ್ದರು. ಆತ “ವಿಶೇಷ ಪೂಜೆ”ಗಳನ್ನು ನೆರವೇರಿಸುವುದಾಗಿ ನಂಬಿಸಿ ಹಂತ ಹಂತವಾಗಿ ಹಣ ಪಡೆದಿದ್ದಾನೆ. ಕೊನೆಗೆ ವ್ಯಕ್ತಿ ₹24,78,274 ಕಳೆದುಕೊಂಡಿರುವುದು ಗೊತ್ತಾದಾಗ ಸೈಬರ್ ಪೊಲೀಸರಿಗೆ ದೂರು ನೀಡಿದ್ದರು.
ಪೊಲೀಸರ ಕಾರ್ಯಾಚರಣೆ:
ದೂರಿನಂತೆ ದಕ್ಷಿಣ ಕನ್ನಡ ಜಿಲ್ಲಾ ಸೈಬರ್ ಅಪರಾಧ ಪೊಲೀಸ್ ಠಾಣೆಯಲ್ಲಿ ಆರೋಪಿ ವಿರುದ್ಧ ಪ್ರಕರಣ ದಾಖಲಾಗಿತ್ತು. ತನಿಖೆ ಕೈಗೊಂಡ ಪೊಲೀಸರು ಆರೋಪಿ ವಾಸುದೇವನನ್ನು ಯಶವಂತಪುರದಲ್ಲಿ ಪತ್ತೆಹಚ್ಚಿ ಬಂಧಿಸಿದ್ದಾರೆ. ಬಂಧಿತ ಆರೋಪಿಯಿಂದ ವಂಚನೆ ಕೃತ್ಯಕ್ಕೆ ಬಳಸಿದ 4 ಮೊಬೈಲ್ ಫೋನ್‌ಗಳು ಹಾಗೂ ₹20,300 ನಗದು ಹಣವನ್ನು ವಶಪಡಿಸಿಕೊಂಡಿದ್ದು, ವಶಪಡಿಸಿಕೊಂಡ ಸೊತ್ತಿನ ಒಟ್ಟು ಮೌಲ್ಯ ₹1,60,300 ಆಗಿರುತ್ತದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಆರೋಪಿಯನ್ನು ನವೆಂಬರ್ 5 ರಂದು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಆತನಿಗೆ ನ್ಯಾಯಾಂಗ ಬಂಧನ ವಿಧಿಸಿದೆ.
ಅಪರಾಧ
Puttur-ಪುತ್ತೂರು: ಅಕ್ರಮ ಗೋ ಸಾಗಾಟ ಪ್ರಕರಣ; ಪರಾರಿಯಾಗಿದ್ದ ಇಬ್ಬರು ವಶಕ್ಕೆ, ಆರೋಪಿ ಶಿವಪ್ರಸಾದ್ ಮನೆ ಮಹಜರು?
ಪಿಕಪ್ ವಾಹನದಲ್ಲಿ 11 ಜಾನುವಾರುಗಳನ್ನು ಹಿಂಸಾತ್ಮಕ ರೀತಿಯಲ್ಲಿ ತುಂಬಿಸಿ, ಅಗತ್ಯ ಪರವಾನಿಗೆ ಇಲ್ಲದೆ ಕೇರಳದ ಕಡೆಗೆ ಸಾಗಿಸುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿ, ಪೊಲೀಸ್ ಕಾರ್ಯಾಚರಣೆ ವೇಳೆ ಪರಾರಿಯಾಗಿದ್ದ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಜಾನುವಾರುಗಳನ್ನು ಪರವಾನಿಗೆ ಇಲ್ಲದೆ ಮಾರಾಟ ಮಾಡಿದ ಆರೋಪದ ಮೇಲೆ ಬಂಧಿತನಾಗಿರುವ ಆರ್ಯಾಪು ನಿವಾಸಿ ಶಿವಪ್ರಸಾದ್‌ಗೆ ಸೇರಿದ ದೇವಸ್ಯದಲ್ಲಿರುವ ಮನೆಯನ್ನು ಪೊಲೀಸರು ಮಹಜರು ನಡೆಸಲಿದ್ದಾರೆ ಎಂದು ತಿಳಿದುಬಂದಿದೆ.
ಪುತ್ತೂರು: ಪಿಕಪ್ ವಾಹನದಲ್ಲಿ 11 ಜಾನುವಾರುಗಳನ್ನು ಹಿಂಸಾತ್ಮಕ ರೀತಿಯಲ್ಲಿ ತುಂಬಿಸಿ, ಅಗತ್ಯ ಪರವಾನಿಗೆ ಇಲ್ಲದೆ ಕೇರಳದ ಕಡೆಗೆ ಸಾಗಿಸುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿ, ಪೊಲೀಸ್ ಕಾರ್ಯಾಚರಣೆ ವೇಳೆ ಪರಾರಿಯಾಗಿದ್ದ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಜಾನುವಾರುಗಳನ್ನು ಪರವಾನಿಗೆ ಇಲ್ಲದೆ ಮಾರಾಟ ಮಾಡಿದ ಆರೋಪದ ಮೇಲೆ ಬಂಧಿತನಾಗಿರುವ ಆರ್ಯಾಪು ನಿವಾಸಿ ಶಿವಪ್ರಸಾದ್‌ಗೆ ಸೇರಿದ ದೇವಸ್ಯದಲ್ಲಿರುವ ಮನೆಯನ್ನು ಪೊಲೀಸರು ಮಹಜರು ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ. ಆದರೇ ಪೊಲೀಸ್ ಇಲಾಖೆ ಅದನ್ನು ಖಚಿತ ಪಡಿಸಿಲ್ಲ.
ಬಲ್ನಾಡಿನಲ್ಲಿ 11 ಜಾನುವಾರುಗಳ ರಕ್ಷಣೆ
ಕೇರಳದ ಕಡೆಗೆ ಅಕ್ರಮವಾಗಿ ಜಾನುವಾರುಗಳನ್ನು ಸಾಗಿಸಲಾಗುತ್ತಿದೆ ಎಂಬ ಮಾಹಿತಿ ಮೇರೆಗೆ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯ ಉಪನಿರೀಕ್ಷಕಿ ಸುಷ್ಮಾ ಭಂಡಾರಿ ಅವರು ಸಿಬ್ಬಂದಿಯೊಂದಿಗೆ ಬಲ್ನಾಡು ಗ್ರಾಮದ ಬೆಳೆಯೂರುಕಟ್ಟೆ ಬಳಿ ಕಾರ್ಯಾಚರಣೆ ನಡೆಸಿದ್ದರು.
ಈ ವೇಳೆ ಪಿಕಪ್ ವಾಹನವನ್ನು ತಡೆದು ಪರಿಶೀಲಿಸಿದಾಗ, ವಾಹನದೊಳಗೆ 11 ಜಾನುವಾರುಗಳನ್ನು ಹಿಂಸಾತ್ಮಕ ರೀತಿಯಲ್ಲಿ ತುಂಬಿಸಿರುವುದು ಪತ್ತೆಯಾಗಿತ್ತು. ಪೊಲೀಸರು ವಾಹನವನ್ನು ತಡೆದ ಸಂದರ್ಭದಲ್ಲಿ ಚಾಲಕ ಹಾಗೂ ಮತ್ತೋರ್ವ ವ್ಯಕ್ತಿ ಸ್ಥಳದಿಂದ ಪರಾರಿಯಾಗಿದ್ದರು.
ಜಾನುವಾರುಗಳನ್ನು ಅಗತ್ಯ ಪರವಾನಿಗೆ ಇಲ್ಲದೆ ಮಾಂಸಕ್ಕಾಗಿ ಮಾರಾಟ ಮಾಡುವ ಉದ್ದೇಶದಿಂದ ಕೇರಳದ ಕಡೆಗೆ ಸಾಗಿಸಲಾಗುತ್ತಿತ್ತು ಎಂಬ ಆರೋಪದ ಮೇರೆಗೆ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಪರಾರಿಯಾಗಿದ್ದ ಇಬ್ಬರು ವಶಕ್ಕೆ
ಪ್ರಕರಣದ ತನಿಖೆ ಮುಂದುವರಿಸಿದ ಪೊಲೀಸರು, ಅಗತ್ಯ ಪರವಾನಿಗೆ ಇಲ್ಲದೆ ಜಾನುವಾರುಗಳನ್ನು ಮಾರಾಟ ಮಾಡಿದ ಆರೋಪದ ಮೇಲೆ ಆರ್ಯಾಪು ನಿವಾಸಿ ಶಿವಪ್ರಸಾದ್‌ನನ್ನು ಬಂಧಿಸಿದ್ದರು. ಬಳಿಕ ಪರಾರಿಯಾಗಿದ್ದ ಪಿಕಪ್ ಚಾಲಕ ಹಾಗೂ ಮತ್ತೋರ್ವ ಆರೋಪಿಯ ಪತ್ತೆಗಾಗಿ ಕಾರ್ಯಾಚರಣೆ ಮುಂದುವರಿಸಿದ್ದರು.
ಇದೀಗ ಸರೋಳಿ ನಿವಾಸಿ ಇಸ್ಮಾಯಿಲ್ ಅವರ ಪುತ್ರ ಹಸ್ಪರ್ ಅಲಿಯಾಸ್ ಅಮ್ಮಿ ಹಾಗೂ ಕದಿಲ ಗ್ರಾಮದ ಸತ್ತಿಕಲು ನಿವಾಸಿ ಅಬ್ಬಾಸ್ ಅವರ ಪುತ್ರ ಇಬ್ರಾಹಿಂ ಮಾಡಲಾ ಎಂಬಿಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಜಾನುವಾರುಗಳನ್ನು ಪರವಾನಿಗೆ ಇಲ್ಲದೆ ಮಾರಾಟ ಮಾಡಿದ ಆರೋಪ ಎದುರಿಸುತ್ತಿರುವ ಶಿವಪ್ರಸಾದ್‌ಗೆ ಸೇರಿದ ಆರ್ಯಾಪು ಗ್ರಾಮದ ದೇವಸ್ಯದಲ್ಲಿರುವ ಮನೆಯನ್ನು ಪೊಲೀಸರು ಮಹಜರು ನಡೆಸಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದ್ದು ಸೀಜ್ ಮಾಡುವ ಅಧಿಕೃತ ಪ್ರಕ್ರಿಯೆ ಸಹಾಯಕ ಆಯುಕ್ತರ ಆದೇಶದ ಬಳಿಕ ನಡೆಯಲಿದೆ ಎಂದು ತಿಳಿದು ಬಂದಿದೆ. ಪ್ರಕರಣದ ಕುರಿತು ಹೆಚ್ಚಿನ ತನಿಖೆ ಮುಂದುವರಿದಿದೆ.
ಸ್ಥಳೀಯ
Navoor clinic-ನಾವೂರು ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ: ಘಟನಾ ಸ್ಥಳಕ್ಕೆ ಎಎಸ್ಪಿ ಭೇಟಿ, ಪರಿಶೀಲನೆ
ಡೀಸೆಲ್ ಸುರಿದು ಬೆಂಕಿ ಹಚ್ಚಲಾಗಿದ್ದ ನಾವೂರು ಆರೋಗ್ಯ ಕ್ಲಿನಿಕ್‌ಗೆ ದಕ್ಷಿಣ ಕನ್ನಡ ಜಿಲ್ಲೆಯ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಅನಿಲ್ ಕುಮಾರ್ ಎಸ್. ಭೂಮರೆಡ್ಡಿ ಅವರು ಅ. 8ರ ಸಂಜೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ನಾವೂರು: ಡೀಸೆಲ್ ಸುರಿದು ಬೆಂಕಿ ಹಚ್ಚಲಾಗಿದ್ದ ನಾವೂರು ಆರೋಗ್ಯ ಕ್ಲಿನಿಕ್‌ಗೆ ದಕ್ಷಿಣ ಕನ್ನಡ ಜಿಲ್ಲೆಯ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಅನಿಲ್ ಕುಮಾರ್ ಎಸ್. ಭೂಮರೆಡ್ಡಿ ಅವರು ಅ. 8ರ ಸಂಜೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಈ ವೇಳೆ ಘಟನಾ ಸ್ಥಳವನ್ನು ಪರಿಶೀಲಿಸಿದ ಅವರು, ಕ್ಲಿನಿಕ್‌ನ ವೈದ್ಯ ಡಾ. ಪ್ರದೀಪ್ ಅವರಿಂದ ಘಟನೆಯ ಕುರಿತು ಮಾಹಿತಿ ಪಡೆದುಕೊಂಡರು.
ಪ್ರಕರಣದ ಕುರಿತು ಸಮಗ್ರ ತನಿಖೆ ನಡೆಸಿ, ಕೃತ್ಯದಲ್ಲಿ ಭಾಗಿಯಾದ ಆರೋಪಿಗಳನ್ನು ಶೀಘ್ರ ಪತ್ತೆಹಚ್ಚಿ ನ್ಯಾಯ ಒದಗಿಸುವ ಭರವಸೆಯನ್ನು ಅವರು ನೀಡಿದರು.
ಈ ಸಂದರ್ಭದಲ್ಲಿ ಬೆಳ್ತಂಗಡಿ ಪೊಲೀಸ್ ಠಾಣೆಯ ಅಧಿಕಾರಿಗಳು ಹಾಗೂ ಸ್ಥಳೀಯ ಗ್ರಾಮಸ್ಥರು ಉಪಸ್ಥಿತರಿದ್ದರು.
ಅಪರಾಧ
Mangalore-ವಾಟರ್ ಪ್ಯೂರಿಫೈಯರ್ ಒಳಗೆ ಕೋಟ್ಯಾಂತರ ರೂ ಮೌಲ್ಯದ ಡ್ರಗ್ಸ್- ಕೋರಿಯರ್ ಮೂಲಕ ಸಾಗಾಟ | ಪೊಲೀಸರ ಕಣ್ಣಿಗೆ ಮಣ್ಣೆರೆಚುವ ಯತ್ನ ಮಂಗಳೂರಿನಲ್ಲಿ ವಿಫಲ – ಮೂವರ ಬಂಧನ..!
ಕೋರಿಯರ್ ಮೂಲಕ ಮಾದಕವಸ್ತು ಎಂಡಿಎಂಎ ಸಾಗಾಟ ಮಾಡಿ ಮಂಗಳೂರು ನಗರ ಹಾಗೂ ಕೇರಳದ ವಿವಿಧ ಪ್ರದೇಶಗಳಲ್ಲಿ ಮಾರಾಟ ಮಾಡಲು ಸಂಚು ರೂಪಿಸಿದ್ದ ಜಾಲವನ್ನು ಮಂಗಳೂರು ಸಿಸಿಬಿ ಪೊಲೀಸರು ಪತ್ತೆಹಚ್ಚಿದ್ದಾರೆ. ಕಾರ್ಯಾಚರಣೆಯಲ್ಲಿ ಮೂವರು ಆರೋಪಿಗಳನ್ನು ಬಂಧಿಸಲಾಗಿದ್ದು, ₹1.58 ಕೋಟಿ ಮೌಲ್ಯದ 1 ಕೆಜಿ 796.96 ಗ್ರಾಂ ಎಂಡಿಎಂಎ ಸೇರಿದಂತೆ ಒಟ್ಟು ₹1.63 ಕೋಟಿ ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.
ಮಂಗಳೂರು: ಕೋರಿಯರ್ ಮೂಲಕ ಮಾದಕವಸ್ತು ಎಂಡಿಎಂಎ ಸಾಗಾಟ ಮಾಡಿ ಮಂಗಳೂರು ನಗರ ಹಾಗೂ ಕೇರಳದ ವಿವಿಧ ಪ್ರದೇಶಗಳಲ್ಲಿ ಮಾರಾಟ ಮಾಡಲು ಸಂಚು ರೂಪಿಸಿದ್ದ ಜಾಲವನ್ನು ಮಂಗಳೂರು ಸಿಸಿಬಿ ಪೊಲೀಸರು ಪತ್ತೆಹಚ್ಚಿದ್ದಾರೆ. ಕಾರ್ಯಾಚರಣೆಯಲ್ಲಿ ಮೂವರು ಆರೋಪಿಗಳನ್ನು ಬಂಧಿಸಲಾಗಿದ್ದು, ₹1.58 ಕೋಟಿ ಮೌಲ್ಯದ 1 ಕೆಜಿ 796.96 ಗ್ರಾಂ ಎಂಡಿಎಂಎ ಸೇರಿದಂತೆ ಒಟ್ಟು ₹1.63 ಕೋಟಿ ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.
ಅ.8ರಂದು ರಾತ್ರಿ ಸುಮಾರು 10 ಗಂಟೆಗೆ ಉಳ್ಳಾಲ ತಾಲೂಕಿನ ಕುಂಪಲದ ಡಿಮಾರ್ಟ್ ಸಮೀಪ ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ. ಆರೋಪಿಗಳಿಂದ ಎಂಡಿಎಂಎ, ಮೂರು ಮೊಬೈಲ್ ಫೋನ್‌ಗಳು, ಮಾದಕವಸ್ತು ಸಾಗಾಟಕ್ಕೆ ಬಳಸಿದ ಮಾರುತಿ ಸುಜುಕಿ ಸ್ವಿಫ್ಟ್ ಕಾರು ಮತ್ತು ಆಟೋ ರಿಕ್ಷಾ, ಕೋರಿಯರ್ ರಟ್ಟಿನ ಬಾಕ್ಸ್ ಹಾಗೂ ವಾಟರ್ ಪ್ಯೂರಿಫೈಯರ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತುಗಳ ಒಟ್ಟು ಮೌಲ್ಯ ₹1,63,84,000 ಎಂದು ಪೊಲೀಸರು ತಿಳಿಸಿದ್ದಾರೆ.
ಬಂಧಿತ ಆರೋಪಿಗಳು:
ಅಬ್ದುಲ್ ಹಾಪೀಲ್ (25) ಮಂಗಳಪಾಡಿ, ಕಾಸರಗೋಡು
ಜಿಯಾವುಲ್ ಹಕ್ (30) ಕಸಬಾ ಬೆಂಗ್ರೆ, ಕೂಳೂರು, ಮಂಗಳೂರು
ಅಲ್ತಾಫ್ (28) ಪಾಂಡೇಶ್ವರ, ಮಂಗಳೂರು
ವಾಟರ್ ಪ್ಯೂರಿಫೈಯರ್‌ನಲ್ಲಿ ಎಂಡಿಎಂಎ ಬಚ್ಚಿಟ್ಟು ಸಾಗಾಟಕ್ಕೆ ಸಂಚು
ಪೊಲೀಸರ ಪ್ರಾಥಮಿಕ ತನಿಖೆಯ ಪ್ರಕಾರ, ಆರೋಪಿಗಳು ಪಂಜಾಬ್‌ನ ಅಮೃತಸರದಿಂದ ಎಂಡಿಎಂಎ ಖರೀದಿಸಿ, ಅದನ್ನು ವಾಟರ್ ಪ್ಯೂರಿಫೈಯರ್‌ನ ನೀರು ಸಂಗ್ರಹಿಸುವ ಭಾಗದಲ್ಲಿ ಭದ್ರವಾಗಿ ಬಚ್ಚಿಡುತ್ತಿದ್ದರು. ಬಳಿಕ ಕೋರಿಯರ್ ಮೂಲಕ ಮಂಗಳೂರಿಗೆ ಕಳುಹಿಸಿ, ಇಲ್ಲಿಂದ ಮಂಗಳೂರು ನಗರ ಹಾಗೂ ಕೇರಳದ ವಿವಿಧ ಪ್ರದೇಶಗಳಿಗೆ ಪೂರೈಕೆ ಮಾಡಿ ಮಾರಾಟ ಮಾಡಲು ಸಂಚು ರೂಪಿಸಿದ್ದರು ಎನ್ನಲಾಗಿದೆ.
ಸಾರ್ವಜನಿಕರನ್ನು ಗುರಿಯಾಗಿಸಿಕೊಂಡು ಮಾದಕವಸ್ತು ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಪೊಲೀಸರು, ಕಾರ್ಯಾಚರಣೆ ನಡೆಸಿ ಜಾಲವನ್ನು ಪತ್ತೆಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ.
ಆರೋಪಿಗಳ ವಿರುದ್ಧ ಈ ಹಿಂದೆಯೂ ಪ್ರಕರಣ
ಬಂಧಿತ ಅಬ್ದುಲ್ ಹಾಪೀಲ್ ವಿರುದ್ಧ ಈ ಹಿಂದೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಮಾದಕವಸ್ತು ಸೇವನೆಗೆ ಸಂಬಂಧಿಸಿದ ಪ್ರಕರಣ ದಾಖಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.
ಜಿಯಾವುಲ್ ಹಕ್ ದುಬೈನ ರಾಸ್ ಅಲ್ ಖೈಮಾದಲ್ಲಿ ಮಾದಕವಸ್ತು ಮಾರಾಟ ಪ್ರಕರಣದಲ್ಲಿ ಭಾಗಿಯಾಗಿ ಮೂರು ವರ್ಷಗಳ ಜೈಲು ಶಿಕ್ಷೆ ಅನುಭವಿಸಿ ಭಾರತಕ್ಕೆ ಮರಳಿದ್ದಾನೆ ಎಂದು ಪೊಲೀಸ್ ಪ್ರಕಟಣೆ ತಿಳಿಸಿದೆ. ಅಲ್ತಾಫ್ ವಿರುದ್ಧವೂ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಮಾದಕವಸ್ತು ಸೇವನೆಗೆ ಸಂಬಂಧಿಸಿದ ಪ್ರಕರಣ ದಾಖಲಾಗಿತ್ತು.
ಈ ಸಂಬಂಧ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ. ಬಂಧಿತ ಮೂವರು ಆರೋಪಿಗಳನ್ನು ವಿಚಾರಣೆಗೆ ಒಳಪಡಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.
-
ಮಂಗಳೂರು12 hours agoMangalore-ಮಂಗಳೂರು : 2 ತಿಂಗಳ ಬಳಿಕ ಸಮಾಧಿಯಿಂದ ಹೊರಬರಲಿದೆ ಆಲ್ಬರ್ಟ್ ರೇಗೋ ಶವ..!; ಮಗಳಿಂದಲೇ ತಂದೆಯ ಕೊಲೆ : ಸ್ನೇಹಿತನ ಆರೋಪ – ತನಿಖೆಗೆ ಸಿಗಲಿದೆ ಮಹತ್ವದ ತಿರುವು
-
ಅಪರಾಧ15 hours agoRaid-ರಾಜ್ಯದ 45 ಐಸ್ಕ್ರೀಂ ಘಟಕಗಳ ಮೇಲೆ ದಾಳಿ: 4 ಕಡೆ ನಿಯಮ ಉಲ್ಲಂಘನೆ, ಅವಧಿ ಮೀರಿದ ಪದಾರ್ಥ ಪತ್ತೆ..!
-
ಸ್ಥಳೀಯ17 hours agoGanja-ಸಾಗರದ ಲಾಡ್ಜ್ನಲ್ಲಿ ಗಾಂಜಾ ಸೇವನೆ: ಯುವತಿ ಸೇರಿ ನಾಲ್ವರು ವಶಕ್ಕೆ – ಗಾಂಜಾ ಸಾಗಾಟಗಾರನ ಮಾಹಿತಿ ಬಿಚ್ಚಿಟ್ಟ ಯುವತಿ..!
-
ಬಿಗ್ ನ್ಯೂಸ್17 hours agoAYUSH Federation-ಡಾ. ಪ್ರದೀಪ್ ನಾವೂರು ಅವರ ಆರೋಗ್ಯ ಕ್ಲಿನಿಕ್ ಗೆ ಬೆಂಕಿ : ಆಯುಷ್ ಫೆಡರೇಶನ್ ತೀವ್ರ ಖಂಡನೆ
-
ಬಿಗ್ ನ್ಯೂಸ್10 hours agoKaavu-BIG BREAKING: ಕಾವು ಬಳಿ ಹೆದ್ದಾರಿಗೆ ಉರುಳಿದ ಮರಗಳು, ಹೈಟೆನ್ಷನ್ ವಿದ್ಯುತ್ ಕಂಬ : ಮಾಣಿ – ಮೈಸೂರು ಹೈವೆಯಲ್ಲಿ ವಾಹನ ಸಂಚಾರ ಸ್ಥಗಿತ
-
ಅಪರಾಧ10 hours agoPuttur-ಪುತ್ತೂರು: ಅಕ್ರಮ ಗೋ ಸಾಗಾಟ ಪ್ರಕರಣ; ಪರಾರಿಯಾಗಿದ್ದ ಇಬ್ಬರು ವಶಕ್ಕೆ, ಆರೋಪಿ ಶಿವಪ್ರಸಾದ್ ಮನೆ ಮಹಜರು?
-
ಮಂಗಳೂರು10 hours agoMRPL accident-MRPL ಅವಘಡದಲ್ಲಿ ಮೃತಪಟ್ಟ ಕರ್ಕಡ ಕುಟುಂಬಕ್ಕೆ EPFO ಕ್ಲೈಮ್ ಸಂದಾಯ
-
ಅಪರಾಧ12 hours agoMangalore-ವಾಟರ್ ಪ್ಯೂರಿಫೈಯರ್ ಒಳಗೆ ಕೋಟ್ಯಾಂತರ ರೂ ಮೌಲ್ಯದ ಡ್ರಗ್ಸ್- ಕೋರಿಯರ್ ಮೂಲಕ ಸಾಗಾಟ | ಪೊಲೀಸರ ಕಣ್ಣಿಗೆ ಮಣ್ಣೆರೆಚುವ ಯತ್ನ ಮಂಗಳೂರಿನಲ್ಲಿ ವಿಫಲ – ಮೂವರ ಬಂಧನ..!


















