ಬಿಗ್ ನ್ಯೂಸ್
High Court-ಹೆಣ್ಣಾನೆ ‘ಸುಭದ್ರೆ’ ಮಾಲೀಕತ್ವ ವಿವಾದ: ಅರ್ಜಿ ಆಕ್ಷೇಪಣೆಗೆ ಶ್ರೀಕೃಷ್ಣಮಠಕ್ಕೆ ಹೈಕೋರ್ಟ್ ನಿಂದ ಕೊನೆ ಅವಕಾಶ
ಹೆಣ್ಣಾನೆ ‘ಸುಭದ್ರೆ’ ಮಾಲೀಕತ್ವ ವಿವಾದಕ್ಕೆ ಸಂಬಂಧಿಸಿದಂತೆ ದಾವಣಗೆರೆ ಜಿಲ್ಲೆಯ ಹೊನ್ನಾಳಿಯ ಚನ್ನಬಸಪ್ಪಸ್ವಾಮಿ ಹಿರೇಕಲ್ಮಠ ಸಂಸ್ಥಾನ ಹಾಗೂ ಉಡುಪಿಯ ಶ್ರೀಕೃಷ್ಣಮಠದ ನಡುವೆ ಹೈಕೋರ್ಟ್‌ನಲ್ಲಿ ವಿಚಾರಣೆ ನಡೆದಿದೆ. ಶ್ರೀಕೃಷ್ಣಮಠವು ಅರ್ಜಿ ಆಕ್ಷೇಪಣೆ ಸಲ್ಲಿಸಲು ಹೈಕೋರ್ಟ್ ಕೊನೆಯ ಅವಕಾಶ ನೀಡಿದೆ.
ಬೆಂಗಳೂರು: ಹೆಣ್ಣಾನೆ ‘ಸುಭದ್ರೆ’ ಮಾಲೀಕತ್ವ ವಿವಾದಕ್ಕೆ ಸಂಬಂಧಿಸಿದಂತೆ ದಾವಣಗೆರೆ ಜಿಲ್ಲೆಯ ಹೊನ್ನಾಳಿಯ ಚನ್ನಬಸಪ್ಪಸ್ವಾಮಿ ಹಿರೇಕಲ್ಮಠ ಸಂಸ್ಥಾನ ಹಾಗೂ ಉಡುಪಿಯ ಶ್ರೀಕೃಷ್ಣಮಠದ ನಡುವೆ ಹೈಕೋರ್ಟ್‌ನಲ್ಲಿ ವಿಚಾರಣೆ ನಡೆದಿದೆ. ಶ್ರೀಕೃಷ್ಣಮಠವು ಅರ್ಜಿ ಆಕ್ಷೇಪಣೆ ಸಲ್ಲಿಸಲು ಹೈಕೋರ್ಟ್ ಕೊನೆಯ ಅವಕಾಶ ನೀಡಿದೆ.
ಹೆಣ್ಣಾನೆ ಸುಭದ್ರೆಯನ್ನು ಶ್ರೀಕೃಷ್ಣಮಠಕ್ಕೆ ಸ್ಥಳಾಂತರಿಸುವಂತೆ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ (ಪಿಸಿಸಿಎಫ್) ಸೆಪ್ಟೆಂಬರ್ 10, 2025ರಂದು ಹೊರಡಿಸಿದ್ದ ಆದೇಶವನ್ನು ಪ್ರಶ್ನಿಸಿ ಹಿರೇಕಲ್ಮಠ ಸಂಸ್ಥಾನದ ಪ್ರತಿನಿಧಿ ಎಂ.ಪಿ.ಎಂ. ಚನ್ನಬಸಯ್ಯ ಅರ್ಜಿ ಸಲ್ಲಿಸಿದ್ದಾರೆ. ಈ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಬುಧವಾರ ನಡೆಸಿತು.
ಅರ್ಜಿದಾರರ ಪರ ವಕೀಲರು ವಾದ ಮಂಡಿಸಿ, ಹಿರೇಕಲ್ಮಠ ಸಂಸ್ಥಾನವು ಸುಭದ್ರೆಯನ್ನು 26 ವರ್ಷಗಳ ಕಾಲ ಪೋಷಿಸಿದೆ. ಗಾಯಗಳಾದಾಗ ಆನೆಯನ್ನು ಶಿಬಿರಕ್ಕೆ ಸ್ಥಳಾಂತರಿಸಿ, ನಂತರ ಮತ್ತೆ ಮಠಕ್ಕೆ ಮರಳಿಸಲಾಗಿತ್ತು. ಆದರೆ, ಈಗ ಪಿಸಿಸಿಎಫ್ ಶ್ರೀಕೃಷ್ಣಮಠಕ್ಕೆ ಹಸ್ತಾಂತರಿಸುವಂತೆ ಆದೇಶಿಸಿದ್ದಾರೆ. ಈ ಹಿಂದೆ ಹೈಕೋರ್ಟ್ ಆದೇಶದಂತೆ 6 ಪಶು ವೈದ್ಯ ತಜ್ಞರ ತಂಡ ಸುಭದ್ರೆಯನ್ನು ಪರಿಶೀಲಿಸಿದ್ದು, ಆನೆ ಆರೋಗ್ಯವಾಗಿದೆ ಎಂದು ವರದಿಯಲ್ಲಿ ತಿಳಿಸಿದೆ ಎಂದು ನ್ಯಾಯಪೀಠದ ಗಮನಕ್ಕೆ ತಂದರು.
ಶ್ರೀಕೃಷ್ಣಮಠದ ಪರ ವಕೀಲರು ಅರ್ಜಿ ಆಕ್ಷೇಪಣೆ ಸಲ್ಲಿಸಲು ಕಾಲಾವಕಾಶ ಕೋರಿದರು. ಇದನ್ನು ಪರಿಗಣಿಸಿದ ನ್ಯಾಯಪೀಠವು ನವೆಂಬರ್ 27ರೊಳಗೆ ಆಕ್ಷೇಪಣೆ ಸಲ್ಲಿಸಲು ಕೊನೆಯ ಅವಕಾಶ ನೀಡಿ, ವಿಚಾರಣೆಯನ್ನು ಡಿಸೆಂಬರ್ 2ಕ್ಕೆ ಮುಂದೂಡಿತು. ಅಲ್ಲದೆ, ಸೆಪ್ಟೆಂಬರ್ 23ರಂದು ನೀಡಲಾಗಿದ್ದ ಸುಭದ್ರೆಯನ್ನು ಆತುರವಾಗಿ ಸ್ಥಳಾಂತರ ಮಾಡದಂತೆ ನೀಡಿದ್ದ ಮಧ್ಯಂತರ ಆದೇಶವನ್ನು ನ್ಯಾಯಪೀಠ ವಿಸ್ತರಿಸಿತು.
ಬಿಗ್ ನ್ಯೂಸ್
Half helmet-ಕರ್ನಾಟಕದಲ್ಲಿ ಹಾಫ್ ಹೆಲ್ಮೆಟ್ ಸಂಪೂರ್ಣ ನಿಷೇಧ
ರಸ್ತೆ ಅಪಘಾತಗಳನ್ನು ತಡೆಗಟ್ಟುವ ಹಾಗೂ ದ್ವಿಚಕ್ರ ವಾಹನ ಸವಾರರ ಸುರಕ್ಷತೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ಕ್ರಮ ಕೈಗೊಂಡಿದ್ದು, ರಾಜ್ಯಾದ್ಯಂತ ಹಾಫ್ ಹೆಲ್ಮೆಟ್‌ಗಳ ಬಳಕೆ, ತಯಾರಿಕೆ ಮತ್ತು ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ತಿಳಿಸಿದೆ.
ಬೆಂಗಳೂರು: ರಸ್ತೆ ಅಪಘಾತಗಳನ್ನು ತಡೆಗಟ್ಟುವ ಹಾಗೂ ದ್ವಿಚಕ್ರ ವಾಹನ ಸವಾರರ ಸುರಕ್ಷತೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ಕ್ರಮ ಕೈಗೊಂಡಿದ್ದು, ರಾಜ್ಯಾದ್ಯಂತ ಹಾಫ್ ಹೆಲ್ಮೆಟ್‌ಗಳ ಬಳಕೆ, ತಯಾರಿಕೆ ಮತ್ತು ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ತಿಳಿಸಿದೆ.
ದ್ವಿಚಕ್ರ ವಾಹನ ಸವಾರರು ಕಡ್ಡಾಯವಾಗಿ ಬ್ಯೂರೋ ಆಫ್ ಇಂಡಿಯನ್ ಸ್ಟ್ಯಾಂಡರ್ಡ್ಸ್ (BIS) ಅಥವಾ ಐಎಸ್‌ಐ ಗುಣಮಟ್ಟದ ಮಾನದಂಡ ಹೊಂದಿರುವ ಸುರಕ್ಷಿತ ಹೆಲ್ಮೆಟ್‌ಗಳನ್ನೇ ಧರಿಸಬೇಕು. ತಪಾಸಣೆಯಿಂದ ತಪ್ಪಿಸಿಕೊಳ್ಳುವ ಉದ್ದೇಶದಿಂದ ಕಳಪೆ ಗುಣಮಟ್ಟದ ಅಥವಾ ಹಾಫ್ ಹೆಲ್ಮೆಟ್‌ಗಳನ್ನು ಬಳಸುವುದರಿಂದ ಅಪಘಾತ ಸಂಭವಿಸಿದ ಸಂದರ್ಭದಲ್ಲಿ ಗಂಭೀರ ತಲೆಪೆಟ್ಟಾಗುವ ಅಪಾಯ ಹೆಚ್ಚಿರುವ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.
ಹಾಫ್ ಹೆಲ್ಮೆಟ್‌ಗಳನ್ನು ಬಳಸುವ ಸವಾರರ ವಿರುದ್ಧ ಮಾತ್ರವಲ್ಲದೆ, ಕಳಪೆ ಗುಣಮಟ್ಟದ ಹೆಲ್ಮೆಟ್‌ಗಳನ್ನು ತಯಾರಿಸುವ ಘಟಕಗಳು ಹಾಗೂ ಅವುಗಳನ್ನು ಮಾರಾಟ ಮಾಡುವ ಅಂಗಡಿಗಳ ವಿರುದ್ಧವೂ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ. ಅನಧಿಕೃತವಾಗಿ ಇಂತಹ ಹೆಲ್ಮೆಟ್‌ಗಳನ್ನು ಮಾರಾಟ ಮಾಡುವವರ ವಿರುದ್ಧ ವ್ಯಾಪಕ ಕಾರ್ಯಾಚರಣೆ ನಡೆಸಲು ಸಾರಿಗೆ ಇಲಾಖೆ ಸಿದ್ಧತೆ ನಡೆಸಿದೆ.
ಸರ್ಕಾರದ ನಿಯಮ ಉಲ್ಲಂಘಿಸಿ ಹಾಫ್ ಹೆಲ್ಮೆಟ್ ಧರಿಸಿ ವಾಹನ ಚಲಾಯಿಸುವ ಸವಾರರ ವಿರುದ್ಧ ಪೊಲೀಸರು ಹಾಗೂ ಸಾರಿಗೆ ಅಧಿಕಾರಿಗಳು ದಂಡ ಸೇರಿದಂತೆ ಕಾನೂನು ಕ್ರಮ ಕೈಗೊಳ್ಳಲಿದ್ದಾರೆ.
ಬಿಗ್ ನ್ಯೂಸ್
Puttur-ಪುತ್ತೂರು : ಕೋಟಿ- ಚೆನ್ನಯ KSRTC ಬಸ್ ನಿಲ್ದಾಣದ ನಿಲ್ದಾಣಾಧಿಕಾರಿಯಾಗಿ ಕೆ. ಭಾಸ್ಕರ ಶೆಟ್ಟಿ ಬಜನಿಗುತ್ತು ಪದೋನ್ನತಿ
ಸುಳ್ಯ ತಾಲೂಕಿನ ಬಾಳಿಲ ಗ್ರಾಮದ ಬಜನಿಗುತ್ತು ಕೆ.ಭಾಸ್ಕರ ಶೆಟ್ಟಿಯವರು ಸಹಾಯಕ ಸಂಚಾರ ನಿರೀಕ್ಷಕರಾಗಿ ಪದನ್ನೋತಿ ಹೊಂದಿ ಪುತ್ತೂರು ಕೋಟಿ- ಚೆನ್ನಯ KSRTC ಬಸ್ ನಿಲ್ದಾಣದ ನಿಲ್ದಾಣಾಧಿಕಾರಿಯಾಗಿ ನಿಯೋಜನೆಗೊಂಡಿದ್ದಾರೆ. 1992 ರಲ್ಲಿ ನಿರ್ವಾಹಕರಾಗಿ KSRTC ಮಂಗಳೂರು ವಿಭಾಗದಲ್ಲಿ ನೇಮಕಗೊಂಡರು.
ಪುತ್ತೂರು : ಸುಳ್ಯ ತಾಲೂಕಿನ ಬಾಳಿಲ ಗ್ರಾಮದ ಬಜನಿಗುತ್ತು ಕೆ.ಭಾಸ್ಕರ ಶೆಟ್ಟಿಯವರು ಸಹಾಯಕ ಸಂಚಾರ ನಿರೀಕ್ಷಕರಾಗಿ ಪದನ್ನೋತಿ ಹೊಂದಿ ಪುತ್ತೂರು ಕೋಟಿ- ಚೆನ್ನಯ KSRTC ಬಸ್ ನಿಲ್ದಾಣದ ನಿಲ್ದಾಣಾಧಿಕಾರಿಯಾಗಿ ನಿಯೋಜನೆಗೊಂಡಿದ್ದಾರೆ.
1992 ರಲ್ಲಿ ನಿರ್ವಾಹಕರಾಗಿ KSRTC ಮಂಗಳೂರು ವಿಭಾಗದಲ್ಲಿ ನೇಮಕಗೊಂಡರು.
2022ರಲ್ಲಿ ಸಂಚಾರ ನಿಯಂತ್ರಕರಾಗಿ ಕುಕ್ಕೆ ಸುಬ್ರಹ್ಮಣ್ಯ ಬಸ್ ನಿಲ್ದಾಣದಲ್ಲಿ ಸೇವೆ ಸಲ್ಲಿಸಿದ ಭಾಸ್ಕರ ಶೆಟ್ಟಿಯವರು 2024ರಿಂದ ಪುತ್ತೂರು ಬಸ್ ನಿಲ್ದಾಣದಲ್ಲಿ ಮುಂಗಡ ಟಿಕೆಟ್ ಕಾಯ್ದಿರಿಸುವ ಕೌಂಟರ್ ನಲ್ಲಿ ಕಾರ್ಯನಿರ್ವಹಿಸಿ, 2026 ಜೂನ್ ನಲ್ಲಿ ಬಸ್ ನಿಲ್ದಾಣದ ಸಹಾಯಕ ಸಂಚಾರ ನಿರೀಕ್ಷಕರಾಗಿ ಪದೋನ್ನತಿ ಹೊಂದಿದ್ದಾರೆ.
ಬಜನಿಯಲ್ಲಿ ಕೃಷಿಕರಾಗಿಯೂ ತಮ್ಮನ್ನು ತೊಡಗಿಸಿಕೊಂಡಿರುವ ಭಾಸ್ಕರ ಶೆಟ್ಟಿಯವರ ಪತ್ನಿ ಸೀಮಾ ಬಿ. ಶೆಟ್ಟಿ, ಹಿರಿಯ ಪುತ್ರಿ ಕು. ಸನ್ಮಿತಾ ಶೆಟ್ಟಿ ಬಿ.ಇ ಪದವೀಧರೆಯಾಗಿ ಬೆಂಗಳೂರಿನಲ್ಲಿ ಸಾಫ್ಟ್‌ವೇರ್ ಇಂಜಿನಿಯರ್ ಆಗಿ ಉದ್ಯೋಗದಲ್ಲಿದ್ದಾರೆ.
ಮಂಗಳೂರು
Auto passengers-ದಕ್ಷಿಣ ಕನ್ನಡದಲ್ಲಿ ಆಟೊ ಪ್ರಯಾಣಿಕರಿಗೆ ಮತ್ತೊಂದು ದರ ಏರಿಕೆ ಶಾಕ್: ಇಲ್ಲಿದೆ ಪರಿಷ್ಕೃತ ರೇಟ್ ಕಾರ್ಡ್
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆಟೊರಿಕ್ಷಾ ಪ್ರಯಾಣ ದರವನ್ನು ಮತ್ತೊಮ್ಮೆ ಪರಿಷ್ಕರಿಸಲಾಗಿದ್ದು, ನವೆಂಬರ್ 1ರಿಂದ ಮೊದಲ 1.5 ಕಿ.ಮೀಗೆ ಕನಿಷ್ಠ ₹40 ಹಾಗೂ ಬಳಿಕ ಪ್ರತಿ ಕಿ.ಮೀಗೆ ₹23 ದರ ನಿಗದಿಪಡಿಸಲಾಗಿದೆ.
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆಟೊರಿಕ್ಷಾ ಪ್ರಯಾಣ ದರವನ್ನು ಮತ್ತೊಮ್ಮೆ ಪರಿಷ್ಕರಿಸಲಾಗಿದ್ದು, ನವೆಂಬರ್ 1ರಿಂದ ಮೊದಲ 1.5 ಕಿ.ಮೀಗೆ ಕನಿಷ್ಠ ₹40 ಹಾಗೂ ಬಳಿಕ ಪ್ರತಿ ಕಿ.ಮೀಗೆ ₹23 ದರ ನಿಗದಿಪಡಿಸಲಾಗಿದೆ.
ಆಗಸ್ಟ್ 28ರಂದು ಹೊರಡಿಸಿದ್ದ ಅಧಿಸೂಚನೆಯಲ್ಲಿ ಮೊದಲ 1.5 ಕಿ.ಮೀಗೆ ಕನಿಷ್ಠ ದರವನ್ನು ₹35ರಿಂದ ₹40ಕ್ಕೆ ಹೆಚ್ಚಿಸಲಾಗಿತ್ತು. ಆದರೆ, ಪ್ರತಿ ಕಿ.ಮೀಗೆ ₹20ರಂತೆ ಇದ್ದ ದರವನ್ನು ಅದೇ ರೀತಿ ಮುಂದುವರಿಸಲಾಗಿತ್ತು. 2022ರ ನವೆಂಬರ್ 23ರಂದು ಪ್ರಾದೇಶಿಕ ಸಾರಿಗೆ ಪ್ರಾಧಿಕಾರ (ಆರ್‌ಟಿಎ) ನಿಗದಿಪಡಿಸಿದ್ದ ಪ್ರತಿ ಕಿ.ಮೀಗೆ ₹20ರ ದರವನ್ನು ಆಗಸ್ಟ್ 28ರ ಅಧಿಸೂಚನೆಯಲ್ಲಿ ಪರಿಗಣಿಸಲಾಗಿರಲಿಲ್ಲ ಎಂದು ಅ.1ರಂದು ಹೊರಡಿಸಿರುವ ಪರಿಷ್ಕೃತ ಅಧಿಸೂಚನೆಯಲ್ಲಿ ಆರ್‌ಟಿಎ ಸದಸ್ಯ ಕಾರ್ಯದರ್ಶಿ ತಿಳಿಸಿದ್ದಾರೆ.
ಆಟೊ ಚಾಲಕರು ಹಾಗೂ ಮಾಲೀಕರ ಪ್ರತಿನಿಧಿಗಳು ಕನಿಷ್ಠ ದರವನ್ನು ₹35ರಿಂದ ₹50ಕ್ಕೆ ಹಾಗೂ ಪ್ರತಿ ಕಿ.ಮೀ. ದರವನ್ನು ₹30ಕ್ಕೆ ಹೆಚ್ಚಿಸುವಂತೆ ಮನವಿ ಮಾಡಿದ್ದರು. ಇಂಧನ, ಬಿಡಿಭಾಗ ಸೇರಿದಂತೆ ನಿರ್ವಹಣಾ ವೆಚ್ಚಗಳು ಗಣನೀಯವಾಗಿ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ದರ ಹೆಚ್ಚಳ ಅಗತ್ಯ ಎಂದು ಅವರು ಕೋರಿದ್ದರು.
ಆದರೆ, ₹50 ಕನಿಷ್ಠ ದರ ಹಾಗೂ ಕಿ.ಮೀಗೆ ₹30ಕ್ಕೆ ದರ ಏರಿಸಿದರೆ ಸಾರ್ವಜನಿಕರು ಆಟೊರಿಕ್ಷಾ ಬಳಕೆಯಿಂದ ದೂರ ಸರಿದು ಪರ್ಯಾಯ ಸಾರಿಗೆ ವ್ಯವಸ್ಥೆಗಳತ್ತ ಮುಖ ಮಾಡುವ ಸಾಧ್ಯತೆಯಿದೆ. ಇದರಿಂದ ಆಟೊರಿಕ್ಷಾ ಚಾಲಕರು ಮತ್ತು ಮಾಲೀಕರಿಗೂ ತೊಂದರೆಯಾಗಬಹುದು ಎಂದು ಆರ್‌ಟಿಎ ಅಭಿಪ್ರಾಯಪಟ್ಟಿದೆ.
ಹೊಸ ದರ ಹೀಗಿದೆ
ಗರಿಷ್ಠ ಮೂರು ಪ್ರಯಾಣಿಕರನ್ನು ಕರೆದೊಯ್ಯುವ ಆಟೊರಿಕ್ಷಾಗಳಿಗೆ ಮೊದಲ 1.5 ಕಿ.ಮೀಗೆ ₹40 ಹಾಗೂ ನಂತರ ಪ್ರತಿ ಕಿ.ಮೀಗೆ ₹23 ದರ ನಿಗದಿಯಾಗಿದೆ.
- ಮೊದಲ 10 ನಿಮಿಷ ಕಾಯುವಿಕೆಗೆ ಶುಲ್ಕವಿಲ್ಲ.
- ನಂತರದ 15 ನಿಮಿಷ ಅಥವಾ ಅದರ ಭಾಗಕ್ಕೆ ₹5 ಶುಲ್ಕ.
- 20 ಕೆ.ಜಿ.ವರೆಗೆ ಸಾಮಾನುಗಳಿಗೆ ಶುಲ್ಕವಿಲ್ಲ.
- ಮುಂದಿನ 20 ಕೆ.ಜಿ. ಅಥವಾ ಅದರ ಭಾಗಕ್ಕೆ ₹25 ಶುಲ್ಕ.
- ರಾತ್ರಿ 10ರಿಂದ ಬೆಳಗ್ಗೆ 5ರವರೆಗೆ ಸಾಮಾನ್ಯ ದರದ ಒಂದೂವರೆ ಪಟ್ಟು ಶುಲ್ಕ ವಿಧಿಸಬಹುದು.
ಪರಿಷ್ಕೃತ ದರದ ಪಟ್ಟಿಯನ್ನು ಪ್ರತಿಯೊಂದು ಆಟೊರಿಕ್ಷಾದಲ್ಲೂ ಕಡ್ಡಾಯವಾಗಿ ಪ್ರದರ್ಶಿಸುವಂತೆ ಆರ್‌ಟಿಎ ಸೂಚಿಸಿದೆ. ಅಲ್ಲದೆ, ಮೀಟರ್‌ಗಳನ್ನು ಪರಿಷ್ಕೃತ ದರಕ್ಕೆ ಮರುಹೊಂದಿಸಿ, ಶೀಘ್ರದಲ್ಲೇ ಸೀಲ್ ಮಾಡಿಸಿಕೊಳ್ಳುವಂತೆ ಸೂಚಿಸಲಾಗಿದೆ.
ಮೀಟರ್‌ಗಳ ಮರುಹೊಂದಿಕೆ ಪೂರ್ಣಗೊಳ್ಳುವವರೆಗೆ ಚಾಲಕರಿಗೆ ಪ್ರದರ್ಶಿಸಲು ಅಗತ್ಯವಿರುವ ಹೋಲಿಕೆ ದರಪಟ್ಟಿಯನ್ನು ಚಾಲಕರ ಸಂಘಗಳಿಗೆ ನೀಡಲಾಗುವುದು. ಸಂಘಗಳು ಅದನ್ನು ಚಾಲಕರಿಗೆ ವಿತರಿಸಲಿವೆ ಎಂದು ಆರ್‌ಟಿಎ ತಿಳಿಸಿದೆ.
-
Uncategorized14 hours ago
ಪುತ್ತೂರು : ಬಾಡಿಗೆ ಮನೆಯಲ್ಲಿ ಮಲಗಿದ್ದ ಸ್ಥಿತಿಯಲ್ಲೇ ಯುವಕ ಸಾವು
-
Uncategorized16 hours ago
Puttur Court retaining wall collapse : ಹತ್ತು ತಿಂಗಳ ಹಿಂದಷ್ಟೇ ಉದ್ಘಾಟನೆ; ಪುತ್ತೂರು ಹೊಸ ನ್ಯಾಯಾಲಯದ ತಡೆಗೋಡೆ ಕುಸಿತ- ಕಾಮಗಾರಿಯ ಗುಣಮಟ್ಟದ ಬಗ್ಗೆ ಚರ್ಚೆ
-
ಮಂಗಳೂರು19 hours agoAuto passengers-ದಕ್ಷಿಣ ಕನ್ನಡದಲ್ಲಿ ಆಟೊ ಪ್ರಯಾಣಿಕರಿಗೆ ಮತ್ತೊಂದು ದರ ಏರಿಕೆ ಶಾಕ್: ಇಲ್ಲಿದೆ ಪರಿಷ್ಕೃತ ರೇಟ್ ಕಾರ್ಡ್
-
ಅಂತರ ರಾಜ್ಯ18 hours agoBlackmail-ದೋಸೆಯಲ್ಲಿ ಸತ್ತ ಇಲಿ ಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ದೂರು ನೀಡಿದ್ದ ಮಹಿಳೆಯಿಂದಲೇ ₹25 ಲಕ್ಷಕ್ಕೆ ಬ್ಲ್ಯಾಕ್ಮೇಲ್..!
-
ಅಂತರ ರಾಜ್ಯ23 hours agoಕಾಸರಗೋಡು: ಆರ್ಎಸ್ಎಸ್ ವಕ್ತಾರರ ಭಾಗವಹಿಸುವಿಕೆ ವಿರೋಧಿಸಿ ಪ್ರತಿಭಟನೆ; ಘರ್ಷಣೆಯಲ್ಲಿ ಮೂವರು ವಿದ್ಯಾರ್ಥಿಗಳಿಗೆ ಗಾಯ
-
ಉದ್ಯೋಗ19 hours agoPuttur-Salesನಿಂದ Technicianವರೆಗೆ; ಪುತ್ತೂರಿನ ಶ್ರೀ ತಿರುಮಲಾ TVSನಲ್ಲಿ ಭರ್ಜರಿ Job Opening
-
ಬಿಗ್ ನ್ಯೂಸ್19 hours agoPuttur-ಪುತ್ತೂರು : ಕೋಟಿ- ಚೆನ್ನಯ KSRTC ಬಸ್ ನಿಲ್ದಾಣದ ನಿಲ್ದಾಣಾಧಿಕಾರಿಯಾಗಿ ಕೆ. ಭಾಸ್ಕರ ಶೆಟ್ಟಿ ಬಜನಿಗುತ್ತು ಪದೋನ್ನತಿ
-
ಸ್ಥಳೀಯ23 hours agoBeltangadi-ಬೆಳ್ತಂಗಡಿ: ಚಾಲಕನ ಸಮಯಪ್ರಜ್ಞೆ; ಬಸ್ನಲ್ಲಿ ಅಸ್ವಸ್ಥಗೊಂಡ ಮಹಿಳೆ ಅಪಾಯದಿಂದ ಪಾರು


















