ಕ್ರೀಡೆ
RCB-ಐಪಿಎಲ್‌ನ ಜನಪ್ರಿಯ ತಂಡ ಆರ್‌ಸಿಬಿ ಫ್ರಾಂಚೈಸಿ ಮಾರಾಟಕ್ಕೆ
ಐಪಿಎಲ್‌ನ ಜನಪ್ರಿಯ ತಂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಮಾರಾಟಕ್ಕಿದೆ. ತಂಡದ ಮಾಲೀಕರಾದ ಡಿಯಾಜಿಯೊ ಕಂಪೆನಿಯು ಆರ್‌ಸಿಬಿ ಫ್ರಾಂಚೈಸಿಯನ್ನು ಮಾರಾಟ ಮಾಡಲು ಅಧಿಕೃತವಾಗಿ ನಿರ್ಧರಿಸಿದೆ ಎಂದು ಬುಧವಾರ ಬಾಂಬೆ ಷೇರು ವಿನಿಮಯ ಕೇಂದ್ರಕ್ಕೆ (ಬಿಎಸ್‌ಇ) ಮಾಹಿತಿ ನೀಡಿದೆ.
ಬೆಂಗಳೂರು, ನ. 5: ಐಪಿಎಲ್‌ನ ಜನಪ್ರಿಯ ತಂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಮಾರಾಟಕ್ಕಿದೆ. ತಂಡದ ಮಾಲೀಕರಾದ ಡಿಯಾಜಿಯೊ ಕಂಪೆನಿಯು ಆರ್‌ಸಿಬಿ ಫ್ರಾಂಚೈಸಿಯನ್ನು ಮಾರಾಟ ಮಾಡಲು ಅಧಿಕೃತವಾಗಿ ನಿರ್ಧರಿಸಿದೆ ಎಂದು ಬುಧವಾರ ಬಾಂಬೆ ಷೇರು ವಿನಿಮಯ ಕೇಂದ್ರಕ್ಕೆ (ಬಿಎಸ್‌ಇ) ಮಾಹಿತಿ ನೀಡಿದೆ.
ಈ ಮಾರಾಟ ಪ್ರಕ್ರಿಯೆಯು ಮಾರ್ಚ್ 31, 2026ರೊಳಗೆ ಪೂರ್ಣಗೊಳ್ಳುವ ನಿರೀಕ್ಷೆಯಿದೆ. ಡಿಯಾಜಿಯೊ ತನ್ನ ಭಾರತೀಯ ಅಂಗಸಂಸ್ಥೆ ಯುನೈಟೆಡ್ ಸ್ಪಿರಿಟ್ಸ್ ಲಿಮಿಟೆಡ್ (USL) ಮೂಲಕ ಆರ್‌ಸಿಬಿಯನ್ನು ನಿರ್ವಹಿಸುತ್ತಿದೆ.
USL ಹೊರಡಿಸಿದ ಪ್ರಕಟಣೆಯ ಪ್ರಕಾರ, ಕಂಪೆನಿಯು ತನ್ನ ಸಂಪೂರ್ಣ ಸ್ವಾಮ್ಯದ ಅಂಗಸಂಸ್ಥೆಯಾದ ರಾಯಲ್ ಚಾಲೆಂಜರ್ಸ್ ಸ್ಪೋರ್ಟ್ಸ್ ಪ್ರೈವೇಟ್ ಲಿಮಿಟೆಡ್ (RCSPL) ನಲ್ಲಿನ ಹೂಡಿಕೆಯ ಕಾರ್ಯತಂತ್ರದ ವಿಮರ್ಶೆಯನ್ನು ಪ್ರಾರಂಭಿಸಿದೆ. RCSPL ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ಆಯೋಜಿಸುವ ಐಪಿಎಲ್ ಮತ್ತು ಮಹಿಳಾ ಪ್ರೀಮಿಯರ್ ಲೀಗ್ (WPL) ತಂಡ ಆರ್‌ಸಿಬಿಯ ಮಾಲೀಕತ್ವವನ್ನು ಹೊಂದಿದೆ.
USL ನ ವ್ಯವಸ್ಥಾಪಕ ನಿರ್ದೇಶಕ ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರವೀಣ್ ಸೋಮೇಶ್ವರ್ ಮಾತನಾಡಿ, “ಆರ್‌ಸಿಬಿ ನಮಗೆ ಮೌಲ್ಯಯುತವಾದ ಆಸ್ತಿಯಾಗಿದ್ದರೂ, ಇದು ನಮ್ಮ ಮುಖ್ಯ ಆಲ್ಕೋಬೆವ್ ವ್ಯವಹಾರದ ಭಾಗವಲ್ಲ. RCSPL ನ ದೀರ್ಘಕಾಲೀನ ಮೌಲ್ಯವನ್ನು ಉಳಿಸಿಕೊಂಡು ಎಲ್ಲಾ ಪಾಲುದಾರರಿಗೆ ಅನುಕೂಲವಾಗುವ ಹೂಡಿಕೆ ಆಯ್ಕೆಗಳನ್ನು ನಾವು ಪರಿಶೀಲಿಸುತ್ತೇವೆ” ಎಂದು ತಿಳಿಸಿದ್ದಾರೆ.
ಸೆಬಿಯ ನಿಯಮ 30ರ ಅಡಿಯಲ್ಲಿ ಈ ಮಾಹಿತಿಯನ್ನು ಬಹಿರಂಗಪಡಿಸಲಾಗಿದ್ದು, ಮಾರಾಟ ಅಥವಾ ಹೂಡಿಕೆ ಪುನರ್‌ವ್ಯವಸ್ಥೆಯು 2026ರ ಮಾರ್ಚ್ 31ರೊಳಗೆ ಮುಗಿಯುವ ಸಾಧ್ಯತೆ ಇದೆ.
ಆರ್‌ಸಿಬಿ ಖರೀದಿಸಲು ಅದಾನಿ ಗ್ರೂಪ್, ಜಿಂದಾಲ್‌ನ ISW ಗ್ರೂಪ್, ಸೀರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾದ ಸೈರಸ್ ಪೂನಾವಾಲಾ ಮತ್ತು ದೇವಯಾನಿ ಇಂಟರ್‌ನ್ಯಾಷನಲ್‌ನ ರವಿ ಜೈಪುರಿಯಾ ಆಸಕ್ತಿ ತೋರಿದ್ದಾರೆ ಎಂದು ಮೂಲಗಳು ಹೇಳಿವೆ.
ಜೂನ್ 4ರಂದು ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗೆ ನಡೆದ ಕಾಲ್ತುಳಿತದಲ್ಲಿ 11 ಅಭಿಮಾನಿಗಳು ಮೃತಪಟ್ಟ ನಂತರ ಆರ್‌ಸಿಬಿ ಮಾರಾಟದ ವದಂತಿಗಳು ಬಲಗೊಂಡಿದ್ದವು. ಕಂಪೆನಿಯು ತನ್ನ ಮುಖ್ಯವಲ್ಲದ ಹೂಡಿಕೆಗಳಿಂದ ಹೊರಬರುವ ಕಾರ್ಯತಂತ್ರದ ಭಾಗವಾಗಿ ಈ ನಿರ್ಧಾರ ಕೈಗೊಂಡಿದೆ ಎಂದು ತಿಳಿದುಬಂದಿದೆ.
ಕ್ರೀಡೆ
India-West Indies match-ಒಂದೇ ODI ಪಂದ್ಯದಲ್ಲಿ 5 ಶತಕ: ಗುವಾಹಟಿಯಲ್ಲಿ ವಿಶ್ವದಾಖಲೆ ಬರೆದ ಭಾರತ–ವೆಸ್ಟ್ ಇಂಡೀಸ್ ಕದನ
ಗುವಾಹಟಿಯ ಬಾರಾಸ್ಪರ ಕ್ರೀಡಾಂಗಣದಲ್ಲಿ ಬುಧವಾರ ನಡೆದ ಭಾರತ–ವೆಸ್ಟ್ ಇಂಡೀಸ್ ನಡುವಿನ ಎರಡನೇ ಏಕದಿನ ಪಂದ್ಯ ದಾಖಲೆಯ ಪುಸ್ತಕ ಸೇರಿದೆ. ಪಂದ್ಯದಲ್ಲಿ ಒಂದೆರಡಲ್ಲ, ಬರೋಬ್ಬರಿ ಐದು ಶತಕಗಳು ದಾಖಲಾಗಿದ್ದು, ಇದರಲ್ಲಿ ಒಂದು ದ್ವಿಶತಕವೂ ಸೇರಿದೆ. 55 ವರ್ಷಗಳ ಏಕದಿನ ಕ್ರಿಕೆಟ್ ಇತಿಹಾಸದಲ್ಲಿ ಒಂದೇ ಪಂದ್ಯದಲ್ಲಿ ಐದು ಶತಕಗಳು ದಾಖಲಾಗಿರುವುದು ಇದೇ ಮೊದಲು.
ಗುವಾಹಟಿ: ಗುವಾಹಟಿಯ ಬಾರಾಸ್ಪರ ಕ್ರೀಡಾಂಗಣದಲ್ಲಿ ಬುಧವಾರ ನಡೆದ ಭಾರತ–ವೆಸ್ಟ್ ಇಂಡೀಸ್ ನಡುವಿನ ಎರಡನೇ ಏಕದಿನ ಪಂದ್ಯ ದಾಖಲೆಯ ಪುಸ್ತಕ ಸೇರಿದೆ. ಪಂದ್ಯದಲ್ಲಿ ಒಂದೆರಡಲ್ಲ, ಬರೋಬ್ಬರಿ ಐದು ಶತಕಗಳು ದಾಖಲಾಗಿದ್ದು, ಇದರಲ್ಲಿ ಒಂದು ದ್ವಿಶತಕವೂ ಸೇರಿದೆ. 55 ವರ್ಷಗಳ ಏಕದಿನ ಕ್ರಿಕೆಟ್ ಇತಿಹಾಸದಲ್ಲಿ ಒಂದೇ ಪಂದ್ಯದಲ್ಲಿ ಐದು ಶತಕಗಳು ದಾಖಲಾಗಿರುವುದು ಇದೇ ಮೊದಲು.
ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ವೆಸ್ಟ್ ಇಂಡೀಸ್ ತಂಡ ಜಾನ್ ಕ್ಯಾಂಬೆಲ್ (101), ಶಾಯಿ ಹೋಪ್ (104) ಹಾಗೂ ಅಮಿರ್ ಜಾಂಗೋ (114) ಅವರ ಶತಕಗಳ ನೆರವಿನಿಂದ 405 ರನ್‌ಗಳ ಬೃಹತ್ ಮೊತ್ತ ಕಲೆಹಾಕಿತು.
ಇದಕ್ಕೆ ಉತ್ತರವಾಗಿ ಭಾರತ ತಂಡದ ಆರಂಭಿಕರಾದ ನಾಯಕ ಶುಭಮನ್ ಗಿಲ್ ಹಾಗೂ ಮಾಜಿ ನಾಯಕ ರೋಹಿತ್ ಶರ್ಮಾ ಕೂಡ ಶತಕ ಸಿಡಿಸಿದರು. ಗಿಲ್ ಅಜೇಯ 223 ರನ್ ಗಳಿಸಿದರೆ, ರೋಹಿತ್ ಶರ್ಮಾ 101 ರನ್ ಬಾರಿಸಿದರು. ಇಬ್ಬರೂ ಮೊದಲ ವಿಕೆಟ್‌ಗೆ 255 ರನ್‌ಗಳ ಭರ್ಜರಿ ಜೊತೆಯಾಟವಾಡಿದರು.
ಒಂದೇ ಪಂದ್ಯದಲ್ಲಿ 5 ಶತಕ
1971ರಲ್ಲಿ ಮೊದಲ ಏಕದಿನ ಪಂದ್ಯ ನಡೆದ ಬಳಿಕ ಇದುವರೆಗೆ 5,023 ODI ಪಂದ್ಯಗಳು ನಡೆದಿವೆ. ಆದರೆ ಒಂದೇ ಪಂದ್ಯದಲ್ಲಿ ಐದು ಶತಕಗಳು ದಾಖಲಾಗಿರುವುದು ಇದೇ ಮೊದಲು.
ಇದಕ್ಕೂ ಮೊದಲು ಒಂದೇ ODI ಪಂದ್ಯದಲ್ಲಿ ನಾಲ್ಕು ಶತಕಗಳು ದಾಖಲಾಗಿದ್ದೇ ಗರಿಷ್ಠ ಸಾಧನೆಯಾಗಿತ್ತು. 1998ರಲ್ಲಿ ಲಾಹೋರ್‌ನಲ್ಲಿ ಪಾಕಿಸ್ತಾನ–ಆಸ್ಟ್ರೇಲಿಯಾ ಪಂದ್ಯ, 2013ರಲ್ಲಿ ನಾಗ್ಪುರದಲ್ಲಿ ಭಾರತ–ಆಸ್ಟ್ರೇಲಿಯಾ ಪಂದ್ಯ ಹಾಗೂ 2023ರಲ್ಲಿ ಹೈದರಾಬಾದ್‌ನಲ್ಲಿ ಪಾಕಿಸ್ತಾನ–ಶ್ರೀಲಂಕಾ ಪಂದ್ಯಗಳಲ್ಲಿ ತಲಾ ನಾಲ್ಕು ಶತಕಗಳು ದಾಖಲಾಗಿದ್ದವು.
ವಿಶೇಷವೆಂದರೆ, ಈ ಹಿಂದೆ ನಾಲ್ಕು ಶತಕಗಳು ದಾಖಲಾಗಿದ್ದ ಪಂದ್ಯಗಳೂ ಏಷ್ಯಾ ಖಂಡದಲ್ಲೇ ನಡೆದಿದ್ದವು.
ಒಂದೇ ಇನ್ನಿಂಗ್ಸ್‌ನಲ್ಲಿ 3 ಶತಕ
ವೆಸ್ಟ್ ಇಂಡೀಸ್ ತಂಡದ ಪರ ಜಾನ್ ಕ್ಯಾಂಬೆಲ್, ಶಾಯಿ ಹೋಪ್ ಮತ್ತು ಅಮಿರ್ ಜಾಂಗೋ ಶತಕ ಸಿಡಿಸುವ ಮೂಲಕ ಮತ್ತೊಂದು ಅಪರೂಪದ ದಾಖಲೆಗೂ ಕಾರಣರಾದರು. ಏಕದಿನ ಇತಿಹಾಸದಲ್ಲಿ ಒಂದೇ ಇನ್ನಿಂಗ್ಸ್‌ನಲ್ಲಿ ಮೂವರು ಬ್ಯಾಟರ್‌ಗಳು ಶತಕ ಬಾರಿಸಿರುವುದು ಇದು ಆರನೇ ಬಾರಿ.
ಈ ಹಿಂದೆ 2015ರಲ್ಲಿ ದಕ್ಷಿಣ ಆಫ್ರಿಕಾ–ವೆಸ್ಟ್ ಇಂಡೀಸ್, 2015ರಲ್ಲಿ ದಕ್ಷಿಣ ಆಫ್ರಿಕಾ–ಭಾರತ, 2022ರಲ್ಲಿ ಇಂಗ್ಲೆಂಡ್–ನೆದರ್ಲ್ಯಾಂಡ್ಸ್, 2023ರಲ್ಲಿ ದಕ್ಷಿಣ ಆಫ್ರಿಕಾ–ಶ್ರೀಲಂಕಾ ಹಾಗೂ 2025ರಲ್ಲಿ ಆಸ್ಟ್ರೇಲಿಯಾ–ದಕ್ಷಿಣ ಆಫ್ರಿಕಾ ಪಂದ್ಯಗಳಲ್ಲಿ ಒಂದೇ ಇನ್ನಿಂಗ್ಸ್‌ನಲ್ಲಿ ಮೂವರು ಬ್ಯಾಟರ್‌ಗಳು ಶತಕ ಸಿಡಿಸಿದ್ದರು.
ವೆಸ್ಟ್ ಇಂಡೀಸ್‌ಗೆ ಒಂದೇ ಇನ್ನಿಂಗ್ಸ್‌ನಲ್ಲಿ ಮೂವರು ಬ್ಯಾಟರ್‌ಗಳು ಶತಕ ಬಾರಿಸಿರುವುದು ಇದೇ ಮೊದಲ ಅನುಭವವಾಗಿದೆ. ಭಾರತ ವಿರುದ್ಧದ ಪಂದ್ಯದಲ್ಲಿ ಎದುರಾಳಿ ತಂಡವೊಂದು ಒಂದೇ ಇನ್ನಿಂಗ್ಸ್‌ನಲ್ಲಿ ಮೂರು ಶತಕಗಳನ್ನು ದಾಖಲಿಸಿರುವುದು ಇದು ಎರಡನೇ ಬಾರಿ.
ಇದರೊಂದಿಗೆ ಒಂದೇ ಇನ್ನಿಂಗ್ಸ್‌ನಲ್ಲಿ ಮೂವರು ಬ್ಯಾಟರ್‌ಗಳು ಶತಕ ಬಾರಿಸಿದರೂ ಪಂದ್ಯ ಸೋತ ಮೊದಲ ತಂಡ ಎಂಬ ಅನಪೇಕ್ಷಿತ ದಾಖಲೆಯೂ ವೆಸ್ಟ್ ಇಂಡೀಸ್ ಪಾಲಾಗಿದೆ.
ಕ್ರೀಡೆ
Asian Games-ಏಷ್ಯನ್ ಗೇಮ್ಸ್ ನಲ್ಲಿ ಮಿಂಚಿದ ಭಾರತದ ಮಹಿಳೆಯರು; 4×400 ರಿಲೇಯಲ್ಲಿ ಚಿನ್ನ, ಹೈಜಂಪ್-ಮಿಶ್ರ ರಿಲೇಯಲ್ಲಿ ಕಂಚು
ಜಪಾನ್‌ನಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್ 2026ರಲ್ಲಿ ಭಾರತದ ಅಥ್ಲೆಟಿಕ್ಸ್ ತಂಡ ಪದಕಗಳ ಬೇಟೆ ಮುಂದುವರಿಸಿದೆ. ಮಹಿಳೆಯರ 4×400 ಮೀಟರ್ ರಿಲೇಯಲ್ಲಿ ಭಾರತ ಚಿನ್ನದ ಪದಕ ಗೆದ್ದಿದ್ದು, ಮಹಿಳೆಯರ ಹೈಜಂಪ್‌ನಲ್ಲಿ ಪೂಜಾ ಸಿಂಗ್ ಕಂಚಿನ ಪದಕ ಹಾಗೂ ಮಿಶ್ರ 4×100 ಮೀಟರ್ ರಿಲೇಯಲ್ಲಿ ಭಾರತ ಕಂಚಿನ ಪದಕ ಗೆದ್ದಿದೆ.
ನಗೋಯಾ: ಜಪಾನ್‌ನಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್ 2026ರಲ್ಲಿ ಭಾರತದ ಅಥ್ಲೆಟಿಕ್ಸ್ ತಂಡ ಪದಕಗಳ ಬೇಟೆ ಮುಂದುವರಿಸಿದೆ. ಮಹಿಳೆಯರ 4×400 ಮೀಟರ್ ರಿಲೇಯಲ್ಲಿ ಭಾರತ ಚಿನ್ನದ ಪದಕ ಗೆದ್ದಿದ್ದು, ಮಹಿಳೆಯರ ಹೈಜಂಪ್‌ನಲ್ಲಿ ಪೂಜಾ ಸಿಂಗ್ ಕಂಚಿನ ಪದಕ ಹಾಗೂ ಮಿಶ್ರ 4×100 ಮೀಟರ್ ರಿಲೇಯಲ್ಲಿ ಭಾರತ ಕಂಚಿನ ಪದಕ ಗೆದ್ದಿದೆ.
4×400 ಮೀಟರ್ ರಿಲೇಯಲ್ಲಿ ಬಂಗಾರದ ಓಟ
ಮಹಿಳೆಯರ 4×400 ಮೀಟರ್ ರಿಲೇಯಲ್ಲಿ ಕಿರಣ್ ಪಹಾಲ್, ಎಂ.ಆರ್. ಪೂವಮ್ಮ, ಪ್ರಾಚಿ ಚೌಧರಿ ಹಾಗೂ ವಿಥ್ಯಾ ರಾಮರಾಜ್ ಅವರನ್ನೊಳಗೊಂಡ ಭಾರತ ತಂಡ 3:29.69 ಸೆಕೆಂಡ್‌ಗಳಲ್ಲಿ ಗುರಿ ತಲುಪಿ ಚಿನ್ನದ ಪದಕ ತನ್ನದಾಗಿಸಿಕೊಂಡಿತು. ಬಹ್ರೇನ್ 3:30.21 ಸಮಯದೊಂದಿಗೆ ಬೆಳ್ಳಿ ಹಾಗೂ ಚೀನಾ 3:31.02 ಸಮಯದೊಂದಿಗೆ ಕಂಚಿನ ಪದಕ ಗೆದ್ದವು.
ಈ ಗೆಲುವಿನೊಂದಿಗೆ ಏಷ್ಯನ್ ಗೇಮ್ಸ್ 2026ರಲ್ಲಿ ಅಥ್ಲೆಟಿಕ್ಸ್ ವಿಭಾಗದಲ್ಲಿ ಭಾರತ ತನ್ನ ಮೊದಲ ಚಿನ್ನದ ಪದಕ ಗೆದ್ದಂತಾಗಿದೆ. ವಿಥ್ಯಾ ರಾಮರಾಜ್ ಅವರಿಗೆ ಇದು ಕೂಟದ ಮೂರನೇ ಪದಕವಾಗಿದೆ. ಅವರು ಈ ಹಿಂದೆ ಮಿಶ್ರ 4×400 ಮೀಟರ್ ರಿಲೇಯಲ್ಲಿ ಬೆಳ್ಳಿ ಹಾಗೂ ಮಹಿಳೆಯರ 400 ಮೀಟರ್ ಹರ್ಡಲ್ಸ್‌ನಲ್ಲಿ ಕಂಚು ಗೆದ್ದಿದ್ದರು.
ಹೈಜಂಪ್‌ನಲ್ಲಿ ಪೂಜಾಗೆ ಕಂಚು
ಮಹಿಳೆಯರ ಹೈಜಂಪ್ ಫೈನಲ್‌ನಲ್ಲಿ ಭಾರತದ ಪೂಜಾ ಸಿಂಗ್ 1.84 ಮೀಟರ್ ಎತ್ತರ ಜಿಗಿದು ಕಂಚಿನ ಪದಕ ಗೆದ್ದರು. 1.84 ಮೀಟರ್‌ವರೆಗಿನ ಎತ್ತರವನ್ನು ಅವರು ಯಶಸ್ವಿಯಾಗಿ ದಾಟಿದರೂ, 1.87 ಮೀಟರ್ ಎತ್ತರವನ್ನು ಮೂರು ಪ್ರಯತ್ನಗಳಲ್ಲೂ ದಾಟಲು ಸಾಧ್ಯವಾಗಲಿಲ್ಲ.
ಮಿಶ್ರ 4×100 ಮೀಟರ್ ರಿಲೇಯಲ್ಲಿ ಕಂಚು
ಗುರುಂದರ್‌ವೀರ್ ಸಿಂಗ್, ಸ್ನೇಹಾ ಸತ್ಯನಾರಾಯಣ, ಅನಿಮೇಶ್ ಕುಜುರ್ ಹಾಗೂ ಹರಿತಾ ಭದ್ರಾ ಅವರನ್ನೊಳಗೊಂಡ ಭಾರತ ತಂಡ ಮಿಶ್ರ 4×100 ಮೀಟರ್ ರಿಲೇಯಲ್ಲಿ 41.06 ಸೆಕೆಂಡ್‌ಗಳ ಋತುವಿನ ಅತ್ಯುತ್ತಮ ಸಮಯದೊಂದಿಗೆ ಕಂಚಿನ ಪದಕ ಗೆದ್ದಿತು.
ಚೀನಾ 40.78 ಸೆಕೆಂಡ್‌ಗಳಲ್ಲಿ ಚಿನ್ನ ಹಾಗೂ ಥೈಲ್ಯಾಂಡ್ 40.87 ಸೆಕೆಂಡ್‌ಗಳಲ್ಲಿ ಬೆಳ್ಳಿ ಪದಕ ಗೆದ್ದವು. ಭಾರತ 41.06 ಸೆಕೆಂಡ್‌ಗಳಲ್ಲಿ ಗುರಿ ತಲುಪಿ ಮೂರನೇ ಸ್ಥಾನ ಪಡೆಯಿತು
ಕ್ರೀಡೆ
Fariba-ತಾಲಿಬಾನ್ ಆಡಳಿತದಲ್ಲಿ ಮಹಿಳೆಯರಿಗೆ ನಿರ್ಬಂಧ: ಪುರುಷರ ರೀತಿ ವೇಷ ಧರಿಸಿ ತರಬೇತಿ ಪಡೆದು ಏಷ್ಯನ್ ಗೇಮ್ಸ್ ನಲ್ಲಿ ಬೆಳ್ಳಿ ಪದಕ ಗೆದ್ದ ಅಫ್ಘಾನಿಸ್ತಾನದ ಮೊದಲ ಮಹಿಳಾ ಕ್ರೀಡಾಪಟು ಫರೀಬಾ..!
ತಾಲಿಬಾನ್ ಆಡಳಿತದ ಕಠಿಣ ನಿರ್ಬಂಧಗಳು, ಹಿಂಸಾಚಾರ ಹಾಗೂ ಜೀವಭಯದ ನಡುವೆಯೂ ಕ್ರೀಡಾ ಕನಸನ್ನು ಜೀವಂತವಾಗಿರಿಸಿಕೊಂಡಿದ್ದ ಅಫ್ಘಾನಿಸ್ತಾನದ ಯುವ ಸೈಕ್ಲಿಸ್ಟ್ ಫರೀಬಾ ಹಾಶಿಮಿ ಏಷ್ಯನ್ ಗೇಮ್ಸ್‌ನಲ್ಲಿ ಬೆಳ್ಳಿ ಪದಕ ಗೆದ್ದು ಗಮನಾರ್ಹ ಸಾಧನೆ ಮಾಡಿದ್ದಾರೆ.
ಐಚಿ-ನಗೋಯಾ: ತಾಲಿಬಾನ್ ಆಡಳಿತದ ಕಠಿಣ ನಿರ್ಬಂಧಗಳು, ಹಿಂಸಾಚಾರ ಹಾಗೂ ಜೀವಭಯದ ನಡುವೆಯೂ ಕ್ರೀಡಾ ಕನಸನ್ನು ಜೀವಂತವಾಗಿರಿಸಿಕೊಂಡಿದ್ದ ಅಫ್ಘಾನಿಸ್ತಾನದ ಯುವ ಸೈಕ್ಲಿಸ್ಟ್ ಫರೀಬಾ ಹಾಶಿಮಿ ಏಷ್ಯನ್ ಗೇಮ್ಸ್‌ನಲ್ಲಿ ಬೆಳ್ಳಿ ಪದಕ ಗೆದ್ದು ಗಮನಾರ್ಹ ಸಾಧನೆ ಮಾಡಿದ್ದಾರೆ.
ಜಪಾನ್‌ನ ಐಚಿ ಪ್ರಾಂತ್ಯದ ಶಿನ್‌ಶಿರೋ ಸೈಕ್ಲಿಂಗ್ ರೋಡ್ ಕೋರ್ಸ್‌ನಲ್ಲಿ ಸೆ.22ರಂದು ನಡೆದ ಮಹಿಳೆಯರ 90.4 ಕಿ.ಮೀ. ವೈಯಕ್ತಿಕ ರೋಡ್ ರೇಸ್‌ನಲ್ಲಿ 23 ವರ್ಷದ ಫರೀಬಾ ಬೆಳ್ಳಿ ಪದಕ ಗೆದ್ದರು. ಇದರೊಂದಿಗೆ 2002ರ ಬಳಿಕ ಏಷ್ಯನ್ ಗೇಮ್ಸ್‌ನಲ್ಲಿ ಪದಕ ಗೆದ್ದ ಅಫ್ಘಾನಿಸ್ತಾನದ ಮೊದಲ ಮಹಿಳಾ ಕ್ರೀಡಾಪಟು ಎಂಬ ಹೆಗ್ಗಳಿಕೆಗೂ ಪಾತ್ರರಾದರು.
ರೋಚಕವಾಗಿ ನಡೆದ ಫೈನಲ್‌ನಲ್ಲಿ ಫರೀಬಾ ಹಾಗೂ ಚಿನ್ನದ ಪದಕ ಗೆದ್ದ ಚೀನಾದ ಗುವೋ ಲಿ ಇಬ್ಬರೂ 2 ಗಂಟೆ 50 ನಿಮಿಷ 05 ಸೆಕೆಂಡ್‌ಗಳಲ್ಲಿ ಗುರಿ ತಲುಪಿದರು. ಮೊದಲ ಎರಡು ಲ್ಯಾಪ್‌ಗಳಲ್ಲಿ ಫರೀಬಾ ಮುನ್ನಡೆ ಸಾಧಿಸಿದ್ದರು. ಆದರೆ ಅಂತಿಮ 300–400 ಮೀಟರ್‌ಗಳಲ್ಲಿ ಗುವೋ ಲಿ ಅತ್ಯಲ್ಪ ಅಂತರದಲ್ಲಿ ಮುನ್ನಡೆ ಪಡೆದು ಸ್ವರ್ಣ ಪದಕ ಗೆದ್ದರು. ಹಾಂಗ್‌ಕಾಂಗ್‌ನ ಲಿಯಾಂಗ್ ವಿಂಗ್ ಯೀ ಕಂಚಿನ ಪದಕ ಪಡೆದರು.
ಇದಕ್ಕೂ ಎರಡು ದಿನಗಳ ಮೊದಲು ನಡೆದ 24.2 ಕಿ.ಮೀ. ವೈಯಕ್ತಿಕ ಟೈಮ್ ಟ್ರಯಲ್ ಸ್ಪರ್ಧೆಯಲ್ಲಿ ಫರೀಬಾ ಏಳನೇ ಸ್ಥಾನ ಪಡೆದಿದ್ದರು.
ವೇಷ ಬದಲಿಸಿ ಸೈಕ್ಲಿಂಗ್ ತರಬೇತಿ
ಉತ್ತರ ಅಫ್ಘಾನಿಸ್ತಾನದ ಫರ್ಯಾಬ್ ಪ್ರಾಂತ್ಯದ ಫರೀಬಾ ತಮ್ಮ 15ನೇ ವಯಸ್ಸಿನಲ್ಲಿ ಅಕ್ಕ ಯುಲ್ದುಜ್ ಹಾಶಿಮಿ ಅವರ ಪ್ರೇರಣೆಯಿಂದ ಸೈಕ್ಲಿಂಗ್ ಆರಂಭಿಸಿದ್ದರು. ಮಹಿಳೆಯರು ಸಾರ್ವಜನಿಕವಾಗಿ ಸೈಕಲ್ ಚಲಾಯಿಸುವುದಕ್ಕೆ ವಿರೋಧವಿದ್ದ ಸಾಂಪ್ರದಾಯಿಕ ವಾತಾವರಣದಲ್ಲಿ ಗುರುತು ಪತ್ತೆಯಾಗದಂತೆ ಪುರುಷರ ವೇಷ ಧರಿಸಿ ಅವರು ತರಬೇತಿ ಪಡೆಯುತ್ತಿದ್ದರು.
ಮುಖಕ್ಕೆ ಎರಡು-ಮೂರು ಮಾಸ್ಕ್‌ಗಳು, ಹೆಡ್‌ಸ್ಕಾರ್ಫ್ ಹಾಗೂ ಸನ್‌ಗ್ಲಾಸ್ ಧರಿಸಿ ಸೈಕ್ಲಿಂಗ್ ಮಾಡುತ್ತಿದ್ದ ಫರೀಬಾ ಮತ್ತು ಅವರ ಸಹೋದರಿಗೆ ತರಬೇತಿ ವೇಳೆ ಜನರು ಕಲ್ಲು, ಬಾಟಲಿ ಎಸೆದು ನಿಂದಿಸುತ್ತಿದ್ದರು. ಇದೇ ವೇಳೆ ನಡೆದ ರಿಕ್ಷಾ ಅಪಘಾತದಲ್ಲಿ ಯುಲ್ದುಜ್ ಅವರ ಮಣಿಕಟ್ಟು ಮುರಿದ ಘಟನೆಯೂ ನಡೆದಿದೆ.
ತಾಲಿಬಾನ್ ಆಡಳಿತದ ಬಳಿಕ ದೇಶತ್ಯಾಗ
2020ರಲ್ಲಿ ಫರೀಬಾ ಮತ್ತು ಯುಲ್ದುಜ್ ಅಫ್ಘಾನಿಸ್ತಾನದ ರಾಷ್ಟ್ರೀಯ ತಂಡಕ್ಕೆ ಆಯ್ಕೆಯಾಗಿದ್ದರು. ಆದರೆ 2021ರಲ್ಲಿ ತಾಲಿಬಾನ್ ಅಧಿಕಾರಕ್ಕೆ ಬಂದ ಬಳಿಕ ಕ್ರೀಡೆಗಳ ಮೇಲಿನ ನಿರ್ಬಂಧದಿಂದಾಗಿ ಅವರ ಕ್ರೀಡಾ ಬದುಕಿಗೂ ಸಂಕಷ್ಟ ಎದುರಾಯಿತು.
ಮಾಜಿ ವಿಶ್ವ ಚಾಂಪಿಯನ್ ಅಲೆಸ್ಸಾಂಡ್ರಾ ಕ್ಯಾಪೆಲ್ಲೊಟ್ಟೊ ಅವರ ನೆರವಿನಿಂದ ಸಹೋದರಿಯರು ಇಟಲಿಗೆ ವಲಸೆ ಹೋದರು. ಅಲ್ಲಿ ತರಬೇತಿ ಮುಂದುವರಿಸಿದ ಫರೀಬಾ 2022ರಲ್ಲಿ ಅಫ್ಘಾನ್ ರಾಷ್ಟ್ರೀಯ ಚಾಂಪಿಯನ್ ಆದರು. ಅಲ್ಲದೆ, UCI ರೇಸ್ ಗೆದ್ದ ಮೊದಲ ಅಫ್ಘಾನ್ ಮಹಿಳಾ ಸೈಕ್ಲಿಸ್ಟ್ ಎಂಬ ಸಾಧನೆ ಮಾಡಿದರು. 2024ರ ಪ್ಯಾರಿಸ್ ಒಲಿಂಪಿಕ್ಸ್‌ನಲ್ಲೂ ಅಫ್ಘಾನಿಸ್ತಾನವನ್ನು ಪ್ರತಿನಿಧಿಸಿದ್ದರು.
‘ಅಫ್ಘಾನ್ ಮಹಿಳೆಯರ ಶಕ್ತಿಯ ಸಂಕೇತ’
ಬೆಳ್ಳಿ ಪದಕ ಗೆದ್ದ ಬಳಿಕ ಮಾತನಾಡಿದ ಫರೀಬಾ, ಈ ಪದಕ ಅಫ್ಘಾನ್ ಮಹಿಳೆಯರ ಪ್ರತಿರೋಧ ಮತ್ತು ಶಕ್ತಿಯ ಸಂಕೇತವಾಗಿದೆ ಎಂದು ಹೇಳಿದರು.
“ನಾವು ಇಂದಿಗೂ ಬದುಕುಳಿದಿದ್ದೇವೆ ಮತ್ತು ಹೋರಾಡುತ್ತಿದ್ದೇವೆ ಎಂಬುದಕ್ಕೆ ಇದು ಸಾಕ್ಷಿ. ನನ್ನ ಮೇಲೆ ಬಿದ್ದ ಪ್ರತಿಯೊಂದು ಕಲ್ಲು ಸ್ವಾತಂತ್ರ್ಯಕ್ಕಾಗಿ ಹೋರಾಡುವ ಶಕ್ತಿಯನ್ನು ನೀಡಿತು. ಮುಂದಿನ ಪೀಳಿಗೆಯ ಅಫ್ಘಾನ್ ಹೆಣ್ಣುಮಕ್ಕಳು ಯಾವುದೇ ಭಯವಿಲ್ಲದೆ ಅಂತರರಾಷ್ಟ್ರೀಯ ಮಟ್ಟದಲ್ಲಿ ದೇಶವನ್ನು ಪ್ರತಿನಿಧಿಸುವಂತಾಗಲಿ” ಎಂದು ಅವರು ಆಶಯ ವ್ಯಕ್ತಪಡಿಸಿದರು.
ತಾಲಿಬಾನ್ ಆಡಳಿತದ ಬಳಿಕ ಅಫ್ಘಾನ್ ಮಹಿಳಾ ಕ್ರೀಡಾಪಟುಗಳ ಪರಿಸ್ಥಿತಿ ಜಾಗತಿಕ ಗಮನ ಸೆಳೆದಿದೆ. ನಿರಾಶ್ರಿತರಾಗಿರುವ ಅಫ್ಘಾನಿಸ್ತಾನದ ಮಹಿಳಾ ಕ್ರಿಕೆಟ್ ತಂಡ ಆಸ್ಟ್ರೇಲಿಯಾದಲ್ಲಿ ತರಬೇತಿ ಪಡೆಯುತ್ತಿರುವ ವರದಿಗಳೂ ಈ ಹಿಂದೆ ಪ್ರಕಟವಾಗಿದ್ದವು.
-
ಮಂಗಳೂರು17 hours agoAuto passengers-ದಕ್ಷಿಣ ಕನ್ನಡದಲ್ಲಿ ಆಟೊ ಪ್ರಯಾಣಿಕರಿಗೆ ಮತ್ತೊಂದು ದರ ಏರಿಕೆ ಶಾಕ್: ಇಲ್ಲಿದೆ ಪರಿಷ್ಕೃತ ರೇಟ್ ಕಾರ್ಡ್
-
Uncategorized14 hours ago
Puttur Court retaining wall collapse : ಹತ್ತು ತಿಂಗಳ ಹಿಂದಷ್ಟೇ ಉದ್ಘಾಟನೆ; ಪುತ್ತೂರು ಹೊಸ ನ್ಯಾಯಾಲಯದ ತಡೆಗೋಡೆ ಕುಸಿತ- ಕಾಮಗಾರಿಯ ಗುಣಮಟ್ಟದ ಬಗ್ಗೆ ಚರ್ಚೆ
-
Uncategorized12 hours ago
ಪುತ್ತೂರು : ಬಾಡಿಗೆ ಮನೆಯಲ್ಲಿ ಮಲಗಿದ್ದ ಸ್ಥಿತಿಯಲ್ಲೇ ಯುವಕ ಸಾವು
-
ಅಂತರ ರಾಜ್ಯ22 hours agoಕಾಸರಗೋಡು: ಆರ್ಎಸ್ಎಸ್ ವಕ್ತಾರರ ಭಾಗವಹಿಸುವಿಕೆ ವಿರೋಧಿಸಿ ಪ್ರತಿಭಟನೆ; ಘರ್ಷಣೆಯಲ್ಲಿ ಮೂವರು ವಿದ್ಯಾರ್ಥಿಗಳಿಗೆ ಗಾಯ
-
ಸ್ಥಳೀಯ21 hours agoBeltangadi-ಬೆಳ್ತಂಗಡಿ: ಚಾಲಕನ ಸಮಯಪ್ರಜ್ಞೆ; ಬಸ್ನಲ್ಲಿ ಅಸ್ವಸ್ಥಗೊಂಡ ಮಹಿಳೆ ಅಪಾಯದಿಂದ ಪಾರು
-
ಉದ್ಯೋಗ18 hours agoPuttur-Salesನಿಂದ Technicianವರೆಗೆ; ಪುತ್ತೂರಿನ ಶ್ರೀ ತಿರುಮಲಾ TVSನಲ್ಲಿ ಭರ್ಜರಿ Job Opening
-
ಮಂಗಳೂರು24 hours agoChouta-ಫಾರಂ 7 ಕೊಟ್ಟ ಮಾತ್ರಕ್ಕೆ ಮತ ಡಿಲೀಟ್ ಆಗಲ್ಲ; ಅಕ್ರಮ ಡಿಲೀಷನ್ಗೆ ದಾಖಲೆ ತೋರಿಸಿ: ಕಾಂಗ್ರೆಸ್ಗೆ ಚೌಟ ಸವಾಲು
-
ಅಂತರ ರಾಜ್ಯ16 hours agoBlackmail-ದೋಸೆಯಲ್ಲಿ ಸತ್ತ ಇಲಿ ಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ದೂರು ನೀಡಿದ್ದ ಮಹಿಳೆಯಿಂದಲೇ ₹25 ಲಕ್ಷಕ್ಕೆ ಬ್ಲ್ಯಾಕ್ಮೇಲ್..!


















