Connect with us

ನಿಧನ ವಾರ್ತೆ

Abhishek Alva-ಮಂಗಳೂರು : ತಿರುವೈಲುಗುತ್ತು ಉದ್ಯಮಿಯ ಪುತ್ರ, ನೆಲ್ಯಾಡಿಯ ಹೊಟೇಲ್ ಉದ್ಯಮಿ ಅಭಿಷೇಕ್ ಆಳ್ವ ಶಾಂಭವಿ ನದಿಗೆ ಹಾರಿ ಆತ್ಮಹತ್ಯೆ

Published

on

Ad Widget

Ad Widget

Ad Widget

Ad Widget

ತಿರುವೈಲ್ ಗುತ್ತು ಮನೆತನದ ಉದ್ಯಮಿ ನವೀನ್ ಆಳ್ವ ಅವರ ಪುತ್ರ, ನೆಲ್ಯಾಡಿಯ ಹೊಟೇಲ್ ಉದ್ಯಮಿ ಅಭಿಷೇಕ್ ಆಳ್ವ ಅವರು ಮೂಲ್ಕಿ ಸಮೀಪದ ಬಪ್ಪನಾಡು ಸೇತುವೆ ಬಳಿ ಶಾಂಭವಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದುರಂತ ಘಟನೆ ವರದಿಯಾಗಿದೆ. ನವೆಂಬರ್ 6ರ ರಾತ್ರಿಯಿಂದ ನಾಪತ್ತೆಯಾಗಿದ್ದ ಅವರ ಮೃತದೇಹ ಇಂದು (ನವೆಂಬರ್ 7) ಶಾಂಭವಿ ನದಿಯಲ್ಲಿ ಪತ್ತೆಯಾಗಿದೆ.

Ad Widget

Ad Widget

Ad Widget

Ad Widget

ಮಂಗಳೂರು: ತಿರುವೈಲ್ ಗುತ್ತು ಮನೆತನದ ಉದ್ಯಮಿ ನವೀನ್ ಆಳ್ವ ಅವರ ಪುತ್ರ, ನೆಲ್ಯಾಡಿಯ ಚರಣ್ ಬಾರ್ & ರೆಸ್ಟೋರೆಂಟ್ ಮಾಲಕ ಅಭಿಷೇಕ್ ಆಳ್ವ ಅವರು ಮೂಲ್ಕಿ ಸಮೀಪದ ಬಪ್ಪನಾಡು ಸೇತುವೆ ಬಳಿ ಶಾಂಭವಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ದುರಂತ ಘಟನೆ ವರದಿಯಾಗಿದೆ.

Ad Widget

Ad Widget alt="Ad Widget"/>

Ad Widget

ನವೆಂಬರ್ 6ರ ರಾತ್ರಿಯಿಂದ ನಾಪತ್ತೆಯಾಗಿದ್ದ ಅವರ ಮೃತದೇಹ ಇಂದು (ನವೆಂಬರ್ 7) ಶಾಂಭವಿ ನದಿಯಲ್ಲಿ ಪತ್ತೆಯಾಗಿದೆ.

Ad Widget

Ad Widget <> Ad Widget

ಘಟನೆಯ ವಿವರಗಳ ಪ್ರಕಾರ, ನವೆಂಬರ್ 6ರ ರಾತ್ರಿ ಅಭಿಷೇಕ್ ಆಳ್ವ ಅವರು ಮನೆಯಿಂದ ಹೊರಟು ಮರಳಿ ಬಾರದಿದ್ದಾಗ, ಅವರ ತಂದೆ ನವೀನ್ ಚಂದ್ರ ಆಳ್ವ ಅವರು ಪಡುಬಿದ್ರೆ ಠಾಣೆಗೆ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡ ಪೊಲೀಸರು ತಕ್ಷಣ ಶೋಧ ಕಾರ್ಯ ಆರಂಭಿಸಿದಾಗ, ಬಪ್ಪನಾಡು ಸಮೀಪದ ಸೇತುವೆ ಬಳಿ ಅಭಿಷೇಕ್ ಅವರ ಕಾರು ಪತ್ತೆಯಾಯಿತು.

ಮುಳುಗು ತಜ್ಞ ಈಶ್ವರ್ ಮಲ್ಪೆ ಅವರ ತಂಡವು ಮಧ್ಯರಾತ್ರಿವರೆಗೂ ನದಿಯಲ್ಲಿ ಶೋಧ ಕಾರ್ಯ ನಡೆಸಿದರೂ, ಮೃತದೇಹ ಪತ್ತೆಯಾಗಿರಲಿಲ್ಲ.

Ad Widget

Ad Widget

ಇಂದು (ನವೆಂಬರ್ 7) ಬೆಳಗ್ಗೆ ಸ್ಥಳೀಯರಾದ ಸಚಿನ್ ನಾಯಕ್ ಅವರು ಬೋಟ್ ಮೂಲಕ ಶೋಧ ಕಾರ್ಯ ಮುಂದುವರಿಸಿದಾಗ, ಚಂದ್ರ ಶಾನುಭಾಗರ ಕುದ್ರು ಬಳಿ ಅಭಿಷೇಕ್ ಅವರ ಶವ ಪತ್ತೆಯಾಯಿತು. ನಂತರ ಶವವನ್ನು ನದಿಯಿಂದ ಮೇಲಕ್ಕೆತ್ತಿ, ಮರಣೋತ್ತರ ಪರೀಕ್ಷೆಗಾಗಿ ಮಂಗಳೂರಿನ ಆಸ್ಪತ್ರೆಗೆ ರವಾನಿಸಲಾಗಿದೆ.

ಅಭಿಷೇಕ್ ಆಳ್ವ ಅವರು ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮವನ್ನು ನಡೆಸುತ್ತಿದ್ದರು. ನವೆಂಬರ್ 6ರಂದು ಮಂಗಳೂರಿನಿಂದ ತಮ್ಮ ಕಾರಿನಲ್ಲಿ ಉಡುಪಿ ಕಡೆಗೆ ಪ್ರಯಾಣಿಸುವ ಮಾರ್ಗ ಮಧ್ಯೆ, ಬಪ್ಪನಾಡು ಸಮೀಪ ಕಾರು ನಿಲ್ಲಿಸಿ ಶಾಂಭವಿ ನದಿಗೆ ಹಾರಿದ್ದಾರೆ ಎಂದು ಶಂಕಿಸಲಾಗಿದೆ.

ಬಪ್ಪನಾಡು ಚೆಕ್‌ಪೋಸ್ಟ್ ಬಳಿ ಅವರ ಕಾರು ಪ್ರಯಾಣಿಸಿದ ದೃಶ್ಯಗಳು ಸಿಸಿಟಿವಿ ಕ್ಯಾಮರಾಗಳಲ್ಲಿ ದಾಖಲಾಗಿವೆ. ಈ ಸಂಬಂಧ ಮೂಲ್ಕಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Ad Widget
Click to comment

Leave a Reply

ನಿಧನ ವಾರ್ತೆ

Mudbidri-ಮಂಗಳೂರಿನಲ್ಲಿ ಮೇಲ್ಛಾವಣಿ ಕೆಲಸದ ವೇಳೆ ಅವಘಡ: ಮೂಡುಬಿದಿರೆ ತಾ.ಪಂ. ಮಾಜಿ ಉಪಾಧ್ಯಕ್ಷ ಸಾವು

Published

on

Ad Widget

Ad Widget

Ad Widget

Ad Widget

ಮೂಡುಬಿದಿರೆ ತಾಲೂಕು ಪಂಚಾಯತ್‌ನ ಮಾಜಿ ಉಪಾಧ್ಯಕ್ಷ ಸಂತೋಷ್ ಅವರು ಮಂಗಳೂರಿನಲ್ಲಿ ಮನೆಯ ಮೇಲ್ಛಾವಣಿಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಆಯತಪ್ಪಿ ಕೆಳಗೆ ಬಿದ್ದು ಮೃತಪಟ್ಟಿದ್ದಾರೆ. ಗುರುವಾರ ಸಂಭವಿಸಿದ ಈ ದುರಂತ ಘಟನೆ ದುಃಖಕ್ಕೆ ಕಾರಣವಾಗಿದೆ.

Ad Widget

Ad Widget

Ad Widget

Ad Widget

ಮೂಡುಬಿದಿರೆ, ನ.20: ಮೂಡುಬಿದಿರೆ ತಾಲೂಕು ಪಂಚಾಯತ್‌ನ ಮಾಜಿ ಉಪಾಧ್ಯಕ್ಷ ಸಂತೋಷ್ ಅವರು ಮಂಗಳೂರಿನಲ್ಲಿ ಮನೆಯ ಮೇಲ್ಛಾವಣಿಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಆಯತಪ್ಪಿ ಕೆಳಗೆ ಬಿದ್ದು ಮೃತಪಟ್ಟಿದ್ದಾರೆ. ಗುರುವಾರ ಸಂಭವಿಸಿದ ಈ ದುರಂತ ಘಟನೆ ದುಃಖಕ್ಕೆ ಕಾರಣವಾಗಿದೆ.

Ad Widget

Ad Widget alt="Ad Widget"/>

Ad Widget

ಮೂಡುಬಿದಿರೆ ತಾಲೂಕಿನ ಬೆಳುವಾಯಿ ನಿವಾಸಿಯಾಗಿದ್ದ ಸಂತೋಷ್ ಅವರು ಬೆಳುವಾಯಿ ಕ್ಷೇತ್ರದಿಂದ ತಾಲೂಕು ಪಂಚಾಯತ್ ಸದಸ್ಯರಾಗಿ ಆಯ್ಕೆಯಾಗಿದ್ದರು. ಹೊಸದಾಗಿ ರಚನೆಯಾಗಿದ್ದ ಮೂಡುಬಿದಿರೆ ತಾಲೂಕು ಪಂಚಾಯತ್‌ನ ಮೊದಲ ಅವಧಿಯಲ್ಲಿ ಉಪಾಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು.

Ad Widget

Ad Widget <> Ad Widget

ಸಂತೋಷ್ ಅವರು ಪ್ರತಿದಿನ ಕೆಲಸದ ನಿಮಿತ್ತ ಮಂಗಳೂರಿಗೆ ತೆರಳುತ್ತಿದ್ದರು. ಗುರುವಾರ ಬೇರೆ ಸ್ಥಳದಲ್ಲಿ ಬದಲಿ ಕೆಲಸಗಾರನಾಗಿ ಕೆಲಸಕ್ಕೆ ತೆರಳಿದ್ದ ಅವರು, ಮನೆಯೊಂದರ ಮೇಲ್ಛಾವಣಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ ಕೆಳಕ್ಕೆ ಬಿದ್ದಿದ್ದಾರೆ ಎನ್ನಲಾಗಿದೆ.

ಘಟನೆಯಲ್ಲಿ ಗಂಭೀರ ಗಾಯಗೊಂಡ ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ.

Ad Widget

Ad Widget

ಮೃತ ಸಂತೋಷ್ ಅವರು ಪತ್ನಿ ಹಾಗೂ ಪುಟ್ಟ ಮಗುವನ್ನು ಅಗಲಿದ್ದಾರೆ. ಜನಪ್ರತಿನಿಧಿಯಾಗಿ ಸೇವೆ ಸಲ್ಲಿಸಿದ್ದ ಅವರ ಅಕಾಲಿಕ ನಿಧನಕ್ಕೆ ಸ್ಥಳೀಯರು ಹಾಗೂ ಗಣ್ಯರು ಸಂತಾಪ ಸೂಚಿಸಿದ್ದಾರೆ.

Ad Widget
Continue Reading

ನಿಧನ ವಾರ್ತೆ

Heart attack-ಸಾಲಿಗ್ರಾಮ: ಕಚೇರಿಯಲ್ಲೇ ಹೃದಯಾಘಾತ; ಬಹುಮುಖ ಪ್ರತಿಭೆ ದಿನೇಶ್ ಹೊಳ್ಳ ನಿಧನ

Published

on

Ad Widget

Ad Widget

Ad Widget

Ad Widget

ಫೋಟೋಗ್ರಫಿ, ಕಂಪ್ಯೂಟರ್ ತಂತ್ರಜ್ಞಾನ, ವೆಬ್‌ಡಿಸೈನಿಂಗ್ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಪರಿಣತಿ ಹೊಂದಿದ್ದ ಸಾಲಿಗ್ರಾಮದ ಬಹುಮುಖ ಪ್ರತಿಭೆ ದಿನೇಶ್ ಹೊಳ್ಳ (52) ಅವರು ಗುರುವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ.

Ad Widget

Ad Widget

Ad Widget

Ad Widget

ಸಾಲಿಗ್ರಾಮ: ಫೋಟೋಗ್ರಫಿ, ಕಂಪ್ಯೂಟರ್ ತಂತ್ರಜ್ಞಾನ, ವೆಬ್‌ಡಿಸೈನಿಂಗ್ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಪರಿಣತಿ ಹೊಂದಿದ್ದ ಸಾಲಿಗ್ರಾಮದ ಬಹುಮುಖ ಪ್ರತಿಭೆ ದಿನೇಶ್ ಹೊಳ್ಳ (52) ಅವರು ಗುರುವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ.

Ad Widget

Ad Widget alt="Ad Widget"/>

Ad Widget

ಗುರುವಾರ ಬೆಳಿಗ್ಗೆ ಸಾಲಿಗ್ರಾಮದಲ್ಲಿರುವ ತಮ್ಮ ಕಚೇರಿಯಲ್ಲಿ ಕುಳಿತಿದ್ದ ವೇಳೆ ಅವರಿಗೆ ತೀವ್ರ ಹೃದಯಾಘಾತ ಸಂಭವಿಸಿದ್ದು, ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ. ಅವರ ಅಕಾಲಿಕ ನಿಧನದ ಸುದ್ದಿ ಬಂಧುಮಿತ್ರರು ಹಾಗೂ ಸ್ಥಳೀಯರಲ್ಲಿ ತೀವ್ರ ದುಃಖಕ್ಕೆ ಕಾರಣವಾಗಿದೆ.

Ad Widget

Ad Widget <> Ad Widget

ದಿನೇಶ್ ಹೊಳ್ಳ ಅವರು ಫೋಟೋಗ್ರಫಿ, ಕಂಪ್ಯೂಟರ್ ತಂತ್ರಜ್ಞಾನ, ವೆಬ್‌ಡಿಸೈನಿಂಗ್, ವ್ಯಂಗ್ಯಚಿತ್ರ ರಚನೆ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ತಮ್ಮ ಪ್ರತಿಭೆ ಹಾಗೂ ಪರಿಣತಿಯಿಂದ ಗುರುತಿಸಿಕೊಂಡಿದ್ದರು. ಇದರ ಜೊತೆಗೆ ಚಪ್ಪಲಿ ಉದ್ಯಮದಲ್ಲಿಯೂ ತೊಡಗಿಸಿಕೊಂಡು ಹಲವು ಕ್ಷೇತ್ರಗಳಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದರು.

ಬಹುಮುಖ ಪ್ರತಿಭೆ ಹಾಗೂ ವಿವಿಧ ಕ್ಷೇತ್ರಗಳ ಜ್ಞಾನ ಹೊಂದಿದ್ದ ಅವರು ಸ್ನೇಹಜೀವಿಯಾಗಿದ್ದು, ಎಲ್ಲರೊಂದಿಗೆ ಆತ್ಮೀಯ ಒಡನಾಟ ಹೊಂದಿದ್ದರು.

Ad Widget

Ad Widget

ಮೃತರು ತಾಯಿ, ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ.

Ad Widget
Continue Reading

ನಿಧನ ವಾರ್ತೆ

Savitri Devi-ಸಿಎಂ ಯೋಗಿ ಆದಿತ್ಯನಾಥ್ ತಾಯಿ ಸಾವಿತ್ರಿ ದೇವಿ ನಿಧನ

Published

on

Ad Widget

Ad Widget

Ad Widget

Ad Widget

ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ತಾಯಿ ಸಾವಿತ್ರಿ ದೇವಿ (91) ಅವರು ವಯೋಸಹಜ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಉತ್ತರಾಖಂಡದ ಪೌರಿ ಜಿಲ್ಲೆಯ ಯಮಕೇಶ್ವರ ಬ್ಲಾಕ್‌ನ ಪಂಚೂರ್ ಗ್ರಾಮದಲ್ಲಿರುವ ತಮ್ಮ ನಿವಾಸದಲ್ಲಿ ಅವರು ಕೊನೆಯುಸಿರೆಳೆದಿದ್ದಾರೆ.

Ad Widget

Ad Widget

Ad Widget

Ad Widget

ಡೆಹ್ರಾಡೂನ್: ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ತಾಯಿ ಸಾವಿತ್ರಿ ದೇವಿ (91) ಅವರು ವಯೋಸಹಜ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಉತ್ತರಾಖಂಡದ ಪೌರಿ ಜಿಲ್ಲೆಯ ಯಮಕೇಶ್ವರ ಬ್ಲಾಕ್‌ನ ಪಂಚೂರ್ ಗ್ರಾಮದಲ್ಲಿರುವ ತಮ್ಮ ನಿವಾಸದಲ್ಲಿ ಅವರು ಕೊನೆಯುಸಿರೆಳೆದಿದ್ದಾರೆ.

Ad Widget

Ad Widget alt="Ad Widget"/>

Ad Widget

ಸಾವಿತ್ರಿ ದೇವಿ ಅವರ ನಿಧನಕ್ಕೆ ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಈ ಸುದ್ದಿ ಅತ್ಯಂತ ದುಃಖದಾಯಕ ಹಾಗೂ ಹೃದಯವಿದ್ರಾವಕವಾಗಿದೆ ಎಂದು ಅವರು ತಿಳಿಸಿದ್ದಾರೆ.

Ad Widget

Ad Widget <> Ad Widget

ತಾಯಿಯ ವಾತ್ಸಲ್ಯ, ಆಶೀರ್ವಾದ ಮತ್ತು ಪ್ರೀತಿ ಜೀವನದ ಅತ್ಯಮೂಲ್ಯ ಸಂಪತ್ತು. ಅವರ ಅಗಲಿಕೆ ಕುಟುಂಬಕ್ಕೆ ತುಂಬಲಾರದ ನಷ್ಟವಾಗಿದೆ ಎಂದು ಧಾಮಿ ಸಂತಾಪ ಸೂಚಿಸಿದ್ದಾರೆ.

ಅಗಲಿದ ಆತ್ಮಕ್ಕೆ ಭಗವಾನ್ ಕೇದಾರನಾಥರು ಶಾಂತಿ ಕರುಣಿಸಲಿ. ತಾಯಿ ಅಗಲಿಕೆಯ ದುಃಖವನ್ನು ಸಹಿಸಿಕೊಳ್ಳುವ ಶಕ್ತಿಯನ್ನು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹಾಗೂ ಅವರ ಕುಟುಂಬದವರಿಗೆ ನೀಡಲಿ ಎಂದು ಪ್ರಾರ್ಥಿಸಿದ್ದಾರೆ.

Ad Widget

Ad Widget

ಯೋಗಿ ಆದಿತ್ಯನಾಥ್ ಅವರು ತಾಯಿಯ ಅಂತಿಮ ದರ್ಶನಕ್ಕೆ ತೆರಳುವ ಕುರಿತು ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!