ಅಪರಾಧ
Mangalore-ಮಂಗಳೂರು: ಸೈಬರ್ ವಂಚನೆ: 1930 ಸಹಾಯವಾಣಿ ಮೂಲಕ ಮಹಿಳೆಯ 18,500 ರೂ. ಮರುಪಾವತಿ
ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಮಹಿಳೆಯೊಬ್ಬರ ಬ್ಯಾಂಕ್ ಖಾತೆಯಿಂದ ಅವರಿಗೆ ತಿಳಿಯದಂತೆ 18,500 ರೂಪಾಯಿ ಹಣ ವರ್ಗಾವಣೆಗೊಂಡ ಸೈಬರ್ ವಂಚನೆ ಪ್ರಕರಣದಲ್ಲಿ, ಸೈಬರ್ ಸಹಾಯವಾಣಿ 1930ಕ್ಕೆ ತಕ್ಷಣವೇ ದೂರು ನೀಡಿದ ಪರಿಣಾಮವಾಗಿ ಕೂಡಲೇ ಹಣವನ್ನು ಫ್ರಿಜ್ ಮಾಡಿ ಕಳೆದುಕೊಂಡ ಹಣವನ್ನು ಠಾಣೆಯ ಸೈಬರ್ ಸೆಲ್ ವಿಭಾಗದಿಂದ ಹಿಂದಿರುಗಿಸಲಾಯಿತು.
ಮಂಗಳೂರು: ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಮಹಿಳೆಯೊಬ್ಬರ ಬ್ಯಾಂಕ್ ಖಾತೆಯಿಂದ ಅವರಿಗೆ ತಿಳಿಯದಂತೆ 18,500 ರೂಪಾಯಿ ಹಣ ವರ್ಗಾವಣೆಗೊಂಡ ಸೈಬರ್ ವಂಚನೆ ಪ್ರಕರಣದಲ್ಲಿ, ಸೈಬರ್ ಸಹಾಯವಾಣಿ 1930ಕ್ಕೆ ತಕ್ಷಣವೇ ದೂರು ನೀಡಿದ ಪರಿಣಾಮವಾಗಿ ಕೂಡಲೇ ಹಣವನ್ನು ಫ್ರಿಜ್ ಮಾಡಿ ಕಳೆದುಕೊಂಡ ಹಣವನ್ನು ಠಾಣೆಯ ಸೈಬರ್ ಸೆಲ್ ವಿಭಾಗದಿಂದ ಹಿಂದಿರುಗಿಸಲಾಯಿತು.
ಘಟನೆ ಕುರಿತು ತಕ್ಷಣ ಮಹಿಳೆ ಸೈಬರ್ ಸಹಾಯವಾಣಿ 1930ಗೆ ಕರೆ ಮಾಡಿ ದೂರು ದಾಖಲಿಸಿದ್ದಾರೆ. ಈ ದೂರಿನ ಆಧಾರದ ಮೇಲೆ ಮಂಗಳೂರು ಗ್ರಾಮಾಂತರ ಠಾಣೆಯ ಸೈಬರ್ ಸೆಲ್ ವಿಭಾಗವು ತಕ್ಷಣ ಕಾರ್ಯಪ್ರವೃತ್ತವಾಯಿತು. ವಂಚನೆಗೆ ಒಳಗಾದ ಹಣವನ್ನು ಕೂಡಲೇ ಫ್ರೀಜ್ ಮಾಡಿಸುವ ಮೂಲಕ, ಅಪಹರಣಕಾರರ ಕೈ ಸೇರದಂತೆ ತಡೆಯಲಾಯಿತು. ಬಳಿಕ ತನಿಖೆ ನಡೆಸಿ, ಕಳೆದುಕೊಂಡಿದ್ದ 18,500 ರೂಪಾಯಿ ಹಣವನ್ನು ಮಹಿಳೆಗೆ ಯಶಸ್ವಿಯಾಗಿ ಹಿಂದಿರುಗಿಸಲಾಯಿತು.
ಸೈಬರ್ ವಂಚನೆ ಪ್ರಕರಣಗಳಲ್ಲಿ ತ್ವರಿತವಾಗಿ ಸ್ಪಂದಿಸುವ ಮೂಲಕ ಸೈಬರ್ ಸಹಾಯವಾಣಿ 1930 ಮತ್ತು ಸ್ಥಳೀಯ ಪೊಲೀಸ್ ಠಾಣೆಗಳ ಸೈಬರ್ ಸೆಲ್ ವಿಭಾಗಗಳು ಹೇಗೆ ಸಾರ್ವಜನಿಕರ ಹಣವನ್ನು ರಕ್ಷಿಸಲು ಸಹಾಯ ಮಾಡುತ್ತವೆ ಎಂಬುದಕ್ಕೆ ಈ ಘಟನೆ ಉತ್ತಮ ಉದಾಹರಣೆಯಾಗಿದೆ. ಸೈಬರ್ ವಂಚನೆಗೆ ಒಳಗಾದಾಗ ತಡ ಮಾಡದೆ 1930ಕ್ಕೆ ಕರೆ ಮಾಡುವಂತೆ ಪೊಲೀಸ್ ಇಲಾಖೆ ಸಾರ್ವಜನಿಕರಲ್ಲಿ ಮನವಿ ಮಾಡಿದೆ.
ಸ್ಥಳೀಯ
Bail-ಬೆಳ್ತಂಗಡಿ: ಯತೀಶ್ ಗೌಡ ಕೊಲೆ ಪ್ರಕರಣದಲ್ಲಿ ಆರೋಪಿಗಳಿಗೆ ರಿಲೀಫ್; ಮತ್ತಿಬ್ಬರಿಗೆ ಜಾಮೀನು
ಗುರುವಾಯನಕೆರೆಯ ಅಲಾದಿಕೊಟ್ಟಿಗೆಯಲ್ಲಿ ಕಳೆದ ಜೂನ್ 1ರಂದು ನಡೆದ ಪೆರ್ನೆ ಮೂಲದ ಯತೀಶ್ ಗೌಡ ಕೊಲೆ ಪ್ರಕರಣದಲ್ಲಿ ಬಂಧಿತರಾಗಿದ್ದ ಉಳಿದ ಇಬ್ಬರು ಆರೋಪಿಗಳಿಗೂ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಇದರೊಂದಿಗೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ಮೂವರು ಆರೋಪಿಗಳಿಗೂ ಜಾಮೀನು ದೊರೆತಂತಾಗಿದೆ.
ಬೆಳ್ತಂಗಡಿ: ಗುರುವಾಯನಕೆರೆಯ ಅಲಾದಿಕೊಟ್ಟಿಗೆಯಲ್ಲಿ ಕಳೆದ ಜೂನ್ 1ರಂದು ನಡೆದ ಪೆರ್ನೆ ಮೂಲದ ಯತೀಶ್ ಗೌಡ ಕೊಲೆ ಪ್ರಕರಣದಲ್ಲಿ ಬಂಧಿತರಾಗಿದ್ದ ಉಳಿದ ಇಬ್ಬರು ಆರೋಪಿಗಳಿಗೂ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಇದರೊಂದಿಗೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ಮೂವರು ಆರೋಪಿಗಳಿಗೂ ಜಾಮೀನು ದೊರೆತಂತಾಗಿದೆ.
ಪ್ರಕರಣದ ಆರೋಪಿಗಳಾದ ಬೆಳ್ತಂಗಡಿ ತಾಲೂಕಿನ ಮಿತ್ತಬಾಗಿಲಿನ ಯಶೋಧರ ಹಾಗೂ ಕಡಬ ತಾಲೂಕಿನ ಚಾರ್ವಾಕದ ಮೋಹನ್ ಅವರಿಗೆ ಮಂಗಳೂರಿನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಜಾಮೀನು ನೀಡಿದೆ.
ಕೆಲ ದಿನಗಳ ಹಿಂದೆಯಷ್ಟೇ ಇದೇ ಪ್ರಕರಣದ ಮತ್ತೊಬ್ಬ ಆರೋಪಿ, ಬೆಳ್ತಂಗಡಿ ತಾಲೂಕಿನ ಪಡಂಗಡಿಯ ಇಬ್ರಾಹಿಂ ಅವರಿಗೂ ನ್ಯಾಯಾಲಯ ಜಾಮೀನು ಮಂಜೂರು ಮಾಡಿತ್ತು.
ಪ್ರಕರಣದ ಹಿನ್ನೆಲೆ:
ಜೂನ್ 1ರಂದು ಬೆಳಗ್ಗೆ ಬೆಳ್ತಂಗಡಿ ತಾಲೂಕಿನ ಗುರುವಾಯನಕೆರೆಯ ಅಲಾದಿಕೊಟ್ಟಿಗೆ ಎಂಬಲ್ಲಿ ಅಪರಿಚಿತ ಯುವಕನ ಮೃತದೇಹ ಪತ್ತೆಯಾಗಿತ್ತು. ಈ ಸಂಬಂಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅನುಮಾನಾಸ್ಪದ ಸಾವು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಲಾಗಿತ್ತು.
ಬಳಿಕ ಮೃತ ವ್ಯಕ್ತಿ ಪೆರ್ನೆ ಮೂಲದ ಯತೀಶ್ ಗೌಡ ಎಂಬುದು ಗುರುತಿಸಲ್ಪಟ್ಟಿತ್ತು. ಅವರ ಸಹೋದರ ನಿತಿನ್ ಹಾಗೂ ಸಂಬಂಧಿಕರು ಸ್ಥಳಕ್ಕೆ ಭೇಟಿ ನೀಡಿ ಮೃತದೇಹದ ಗುರುತು ಪತ್ತೆಹಚ್ಚಿದ್ದರು.
ಪ್ರಕರಣದ ತನಿಖೆ ನಡೆಸಿದ ಬೆಳ್ತಂಗಡಿ ಪೊಲೀಸರು ಕೊಲೆ ಆರೋಪದಡಿ ಯಶೋಧರ, ಮೋಹನ್ ಹಾಗೂ ಇಬ್ರಾಹಿಂ ಎಂಬ ಮೂವರನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದರು. ಇದೀಗ ಪ್ರಕರಣದ ಮೂವರು ಆರೋಪಿಗಳಿಗೂ ನ್ಯಾಯಾಲಯದಿಂದ ಜಾಮೀನು ದೊರೆತಿದೆ.
ಅಪರಾಧ
Mangalore-ಮಂಗಳೂರು: ಕೆಲಸ ಮಾಡಿದ ಹಣ ನೀಡದ ವಿಚಾರಕ್ಕೆ ಮನೆ ಮಾಲೀಕನ ಕೊಲೆ; ಆರೋಪಿಗೆ ಜೀವಾವಧಿ ಶಿಕ್ಷೆ, ಮತ್ತೊಬ್ಬ ಖುಲಾಸೆ
ಕೆಲಸ ಮಾಡಿದ ಹಣ ನೀಡದ ವಿಚಾರಕ್ಕೆ ಉಂಟಾದ ಜಗಳ ಕೊಲೆಯಲ್ಲಿ ಅಂತ್ಯಗೊಂಡ ಪ್ರಕರಣದಲ್ಲಿ ಮೊದಲನೇ ಆರೋಪಿಗೆ ಮಂಗಳೂರಿನ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. ಪ್ರಕರಣದ ಎರಡನೇ ಆರೋಪಿಯನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ.
ಮಂಗಳೂರು: ಕೆಲಸ ಮಾಡಿದ ಹಣ ನೀಡದ ವಿಚಾರಕ್ಕೆ ಉಂಟಾದ ಜಗಳ ಕೊಲೆಯಲ್ಲಿ ಅಂತ್ಯಗೊಂಡ ಪ್ರಕರಣದಲ್ಲಿ ಮೊದಲನೇ ಆರೋಪಿಗೆ ಮಂಗಳೂರಿನ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. ಪ್ರಕರಣದ ಎರಡನೇ ಆರೋಪಿಯನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ.
ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯ ಗಾಂಧಿನಗರದ ಮಲ್ಲಿ ಲೇಔಟ್ನಲ್ಲಿರುವ ಸುರೇಂದ್ರನ್ ಅವರ ಮನೆಯಲ್ಲಿ 2020ರ ನವೆಂಬರ್ 3ರಂದು ಈ ಕೊಲೆ ನಡೆದಿತ್ತು.
ಪ್ರಕರಣದ ಮೊದಲನೇ ಆರೋಪಿ ಸಂತು ಅಲಿಯಾಸ್ ಸಂತೋಷ್, ತಾನು ಕೆಲಸ ಮಾಡಿದ ಹಣವನ್ನು ಸುರೇಂದ್ರನ್ ನೀಡಿಲ್ಲವೆಂದು ಎರಡನೇ ಆರೋಪಿ ಸಿದ್ದು ಅಲಿಯಾಸ್ ಸಿದ್ದಪ್ಪನೊಂದಿಗೆ ಹಣ ಕೇಳಲು ಅವರ ಮನೆಗೆ ತೆರಳಿದ್ದನು. ಈ ವೇಳೆ ಸಿದ್ದಪ್ಪನ ಪ್ರೇರಣೆಯಿಂದ ಸಂತೋಷ್ ಮನೆಯೊಳಗೆ ಹೋಗಿ ಸುರೇಂದ್ರನ್ ಅವರಲ್ಲಿ ಹಣ ಕೇಳಿದ್ದಾನೆ. ಈ ವಿಚಾರವಾಗಿ ಇಬ್ಬರ ನಡುವೆ ಮಾತಿನ ಚಕಮಕಿ ನಡೆದಿದೆ.
ಜಗಳ ವಿಕೋಪಕ್ಕೆ ತಿರುಗಿದಾಗ ಸಂತೋಷ್ ಪೇಪರ್ ಕತ್ತರಿಸುವ ಬ್ಲೇಡ್ನಿಂದ ಸುರೇಂದ್ರನ್ ಅವರ ಕುತ್ತಿಗೆ, ಮುಖ ಹಾಗೂ ತಲೆಯ ಭಾಗಕ್ಕೆ ಕೊಯ್ದಿದ್ದಾನೆ. ಅಲ್ಲದೆ, ವ್ಯಾಯಾಮಕ್ಕೆ ಬಳಸುವ ರಾಡ್ನಿಂದ ತಲೆಗೆ ಹೊಡೆದು ಕೊಲೆ ಮಾಡಿದ್ದಾನೆ ಎಂದು ಪ್ರಕರಣದ ಆರೋಪಪಟ್ಟಿಯಲ್ಲಿ ತಿಳಿಸಲಾಗಿತ್ತು.
ಈ ಸಂಬಂಧ ಕಾವೂರು ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 88/2020ರಂತೆ ಐಪಿಸಿ ಕಲಂ 302, 392, 201, 114 ಜೊತೆಗೆ 34ರ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.
ಪ್ರಕರಣದ ತನಿಖೆ ನಡೆಸಿದ್ದ ಅಂದಿನ ಕಾವೂರು ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕ ರಾಘವ್ ಪಡೀಲ್ ಅವರು ಸಂತೋಷ್ ಮತ್ತು ಸಿದ್ದಪ್ಪನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ತನಿಖೆ ಪೂರ್ಣಗೊಳಿಸಿ ಇಬ್ಬರು ಆರೋಪಿಗಳ ವಿರುದ್ಧ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.
ಪ್ರಕರಣದ ವಿಚಾರಣೆ ನಡೆಸಿದ ಮಂಗಳೂರಿನ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಜಗದೀಶ್ ವಿ.ಎನ್. ಅವರು, ಸಾಕ್ಷ್ಯಾಧಾರಗಳ ಪರಿಶೀಲನೆಯ ಬಳಿಕ ಮೊದಲನೇ ಆರೋಪಿ ಸಂತು ಅಲಿಯಾಸ್ ಸಂತೋಷ್ ದೋಷಿ ಎಂದು ತೀರ್ಪು ನೀಡಿ ಜೀವಾವಧಿ ಶಿಕ್ಷೆ ವಿಧಿಸಿದ್ದಾರೆ. ಎರಡನೇ ಆರೋಪಿ ಸಿದ್ದು ಅಲಿಯಾಸ್ ಸಿದ್ದಪ್ಪನನ್ನು ಖುಲಾಸೆಗೊಳಿಸಿದ್ದಾರೆ.
ಆರೋಪಿಗೆ ವಿಧಿಸಿದ ಶಿಕ್ಷೆ:
- ಐಪಿಸಿ ಕಲಂ 302 (ಕೊಲೆ): ಜೀವಾವಧಿ ಶಿಕ್ಷೆ ಹಾಗೂ 25,000 ರೂ. ದಂಡ. ದಂಡ ಪಾವತಿಸದಿದ್ದಲ್ಲಿ ಹೆಚ್ಚುವರಿಯಾಗಿ ಒಂದು ವರ್ಷ ಜೈಲು ಶಿಕ್ಷೆ.
- ಐಪಿಸಿ ಕಲಂ 392 (ದರೋಡೆ): ಎರಡು ವರ್ಷಗಳ ಕಾರಾಗೃಹ ಶಿಕ್ಷೆ ಹಾಗೂ 5,000 ರೂ. ದಂಡ. ದಂಡ ಪಾವತಿಸದಿದ್ದಲ್ಲಿ ಹೆಚ್ಚುವರಿಯಾಗಿ ಒಂದು ತಿಂಗಳ ಶಿಕ್ಷೆ.
- ಐಪಿಸಿ ಕಲಂ 201 (ಸಾಕ್ಷ್ಯ ನಾಶ): ಆರು ತಿಂಗಳ ಕಾರಾಗೃಹ ಶಿಕ್ಷೆ ಹಾಗೂ 2,000 ರೂ. ದಂಡ. ದಂಡ ಪಾವತಿಸದಿದ್ದಲ್ಲಿ ಹೆಚ್ಚುವರಿಯಾಗಿ 15 ದಿನಗಳ ಶಿಕ್ಷೆ.
ಒಟ್ಟು 32,000 ರೂ. ದಂಡದ ಮೊತ್ತದಲ್ಲಿ 7,000 ರೂ. ಸರಕಾರಕ್ಕೆ ಹಾಗೂ 25,000 ರೂ.ಗಳನ್ನು ಕೊಲೆಯಾದ ಸುರೇಂದ್ರನ್ ಅವರ ಪತ್ನಿಗೆ ನೀಡುವಂತೆ ನ್ಯಾಯಾಲಯ ಆದೇಶಿಸಿದೆ.
ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕಿ ಜ್ಯೋತಿ ಪ್ರಮೋದ್ ನಾಯಕ್ ಅವರು ವಾದ ಮಂಡಿಸಿದ್ದರು.
ಅಪರಾಧ
Punacha-ಪುಣಚ: ಅಕ್ರಮ ಮರಳುಗಾರಿಕೆ ಪತ್ತೆ; ಪಿಕಪ್ ವಾಹನ ಜಪ್ತಿ- ನಾಲ್ವರು ವಶಕ್ಕೆ
ಬಂಟ್ವಾಳ ತಾಲೂಕಿನ ಪುಣಚ ಗ್ರಾಮದ ದಂಬೆ ಎಂಬಲ್ಲಿ ಸಾರ್ವಜನಿಕ ತೋಡಿನಿಂದ ಅಕ್ರಮವಾಗಿ ಮರಳು ತೆಗೆದು ಸಾಗಾಟಕ್ಕೆ ಸಿದ್ಧಪಡಿಸುತ್ತಿದ್ದ ನಾಲ್ವರನ್ನು ವಿಟ್ಲ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ಮರಳು ತುಂಬಿದ್ದ ಪಿಕಪ್ ವಾಹನವನ್ನು ಜಪ್ತಿ ಮಾಡಿದ್ದಾರೆ.
ವಿಟ್ಲ, ನ.20: ಬಂಟ್ವಾಳ ತಾಲೂಕಿನ ಪುಣಚ ಗ್ರಾಮದ ದಂಬೆ ಎಂಬಲ್ಲಿ ಸಾರ್ವಜನಿಕ ತೋಡಿನಿಂದ ಅಕ್ರಮವಾಗಿ ಮರಳು ತೆಗೆದು ಸಾಗಾಟಕ್ಕೆ ಸಿದ್ಧಪಡಿಸುತ್ತಿದ್ದ ನಾಲ್ವರನ್ನು ವಿಟ್ಲ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ಮರಳು ತುಂಬಿದ್ದ ಪಿಕಪ್ ವಾಹನವನ್ನು ಜಪ್ತಿ ಮಾಡಿದ್ದಾರೆ.
ಆರೋಪಿಗಳನ್ನು ಪುಣಚ ಗ್ರಾಮದ ವಿಶ್ವಾಸ್ ಹೆಚ್. (27), ಶಶಿಧರ (45), ಹರೀಶ್ ಅಜ್ಜಿನಡ್ಕ (35) ಹಾಗೂ ಕೇಪು ಗ್ರಾಮದ ಪುಷ್ಪರಾಜ್ ಎನ್. (32) ಎಂದು ಗುರುತಿಸಲಾಗಿದೆ.
ನ.19ರಂದು ಬೆಳಿಗ್ಗೆ ಪುಣಚ ಗ್ರಾಮದ ದಂಬೆ ಎಂಬಲ್ಲಿನ ಸಾರ್ವಜನಿಕ ತೋಡಿನಿಂದ ಮಾರಾಟ ಮಾಡುವ ಉದ್ದೇಶದಿಂದ ಅಕ್ರಮವಾಗಿ ಮರಳು ತೆಗೆದು ಪಿಕಪ್ ವಾಹನಕ್ಕೆ ತುಂಬಿಸಲಾಗುತ್ತಿದೆ ಎಂಬ ಖಚಿತ ಮಾಹಿತಿ ವಿಟ್ಲ ಪೊಲೀಸ್ ಠಾಣೆಯ ತನಿಖಾ ವಿಭಾಗದ ಪಿಎಸ್ಐ ರತ್ನಕುಮಾರ್ ಅವರಿಗೆ ಲಭಿಸಿತ್ತು.
ಮಾಹಿತಿ ಮೇರೆಗೆ ಪೊಲೀಸ್ ಸಿಬ್ಬಂದಿಗಳೊಂದಿಗೆ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದಾಗ, ನಾಲ್ವರು ವ್ಯಕ್ತಿಗಳು ತೋಡಿನಿಂದ ಮರಳು ತೆಗೆದು ಪಿಕಪ್ ವಾಹನಕ್ಕೆ ತುಂಬಿಸುತ್ತಿರುವುದು ಕಂಡುಬಂದಿದೆ. ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಯಾವುದೇ ಪರವಾನಿಗೆ ಇಲ್ಲದೆ ಅಕ್ರಮವಾಗಿ ಮರಳು ತೆಗೆಯುತ್ತಿರುವುದು ಪತ್ತೆಯಾದ ಹಿನ್ನೆಲೆಯಲ್ಲಿ, ಸ್ಥಳದಲ್ಲಿದ್ದ ಮರಳು ತುಂಬಿದ KA-70-8785 ನೋಂದಣಿಯ ಪಿಕಪ್ ವಾಹನ ಸೇರಿದಂತೆ ಇತರ ಸೊತ್ತುಗಳನ್ನು ಪೊಲೀಸರು ಸ್ವಾಧೀನಪಡಿಸಿಕೊಂಡಿದ್ದಾರೆ.
-
ಅಪರಾಧ19 hours agoMangalore-ಕಣಚೂರು ಮೆಡಿಕಲ್ ಕಾಲೇಜು ಆವರಣದಲ್ಲೇ ವಿದ್ಯಾರ್ಥಿನಿ ಅಪಹರಣ..! ಹಿಂದೂ ಯುವಕ ಲವ್ ಆರೋಪ – ವಿಡಿಯೋ ವೈರಲ್ : ತನಿಖೆಗೆ ಕಮಿಷನರ್ ಸೂಚನೆ
-
ರಾಜಕೀಯ18 hours agoBJP leaders-ಗಡಿಪಾರಿಗೊಳಗಾದ ನರಸಿಂಹ ಮಾಣಿ ಮನೆಗೆ ಬಿಜೆಪಿ ಮುಖಂಡರ ಭೇಟಿ; ಕುಟುಂಬಕ್ಕೆ ಆತ್ಮಸ್ಥೈರ್ಯ
-
ಚಿನ್ನ-ಬೆಳ್ಳಿ ದರ24 hours agoGold Rate Today-ಆಭರಣಪ್ರಿಯರಿಗೆ ಗುಡ್ನ್ಯೂಸ್: ಚಿನ್ನದ ಬೆಲೆಯಲ್ಲಿ ಭಾರೀ ಕುಸಿತ: 12 ಸಾವಿರ ರೂ. ಗಡಿಯೊಳಗೆ ಬಂದ ಆಭರಣ ಚಿನ್ನ..!
-
ಬಿಗ್ ನ್ಯೂಸ್17 hours agoHigh Court-Social Media ಅಕೌಂಟ್ ಇದ್ದ ಮಾತ್ರಕ್ಕೆ ಮನಸ್ಸಿಗೆ ಬಂದಿದ್ದನ್ನೆಲ್ಲ ಪೋಸ್ಟ್ ಮಾಡುವ Free Licence ಇಲ್ಲ : ಬೆಳ್ತಂಗಡಿಯ ಮೋಹನ್ ಬೋಳಂಗಡಿ – ಶುಭಾ ರೈ ವಿರುದ್ಧ ದಾಖಲಾದ ಪ್ರಕರಣದಲ್ಲಿ ಹೈಕೋರ್ಟ್ ಮಹತ್ವದ ಎಚ್ಚರಿಕೆ
-
ಸಿನೆಮಾ23 hours agoArjun Sarja-ಪುತ್ರಿ ಐಶ್ವರ್ಯಾ ವಿರುದ್ಧ ಅವಹೇಳನಕಾರಿ ವರದಿ: ಮಾಧ್ಯಮಗಳ ವಿರುದ್ಧ ಸಿಡಿದೆದ್ದ ಅರ್ಜುನ್ ಸರ್ಜಾ; ಅಧಿಕೃತ ದೂರು ದಾಖಲು
-
ಸ್ಥಳೀಯ24 hours agoBaindoor-ರೈಲಿನಲ್ಲಿ ಮೊಬೈಲ್ ಕಳವು, UPI ಮೂಲಕ ಹಣ ವರ್ಗಾವಣೆ: ಬೈಂದೂರು ಪೊಲೀಸರಿಂದ ಕುಖ್ಯಾತ ಆರೋಪಿ ಬಂಧನ
-
ಅಪರಾಧ24 hours agoManipal police-ಪಟಾಕಿ ಪ್ರಕರಣ: ಮಣಿಪಾಲ ಪೊಲೀಸರ ವಿರುದ್ಧ ದೌರ್ಜನ್ಯ ಆರೋಪ: ಸಿಎಂಗೆ ಇ-ಮೇಲ್ ಮಾಡಿದ ವಿದ್ಯಾರ್ಥಿಗಳು
-
ನಿಧನ ವಾರ್ತೆ17 hours agoSavitri Devi-ಸಿಎಂ ಯೋಗಿ ಆದಿತ್ಯನಾಥ್ ತಾಯಿ ಸಾವಿತ್ರಿ ದೇವಿ ನಿಧನ















