ಮೈಸೂರು
Ishwar Khandre-ಹುಲಿ ದಾಳಿಗೆ ವ್ಯಕ್ತಿ ಬಲಿ : ನಾಗರಹೊಳೆ, ಬಂಡಿಪುರ ಸಫಾರಿ, ಚಾರಣ ಇಂದಿನಿಂದಲೇ ಬಂದ್ : ಸಚಿವ ಈಶ್ವರ್ ಖಂಡ್ರೆ
ಮಾನವ-ವನ್ಯಜೀವಿ ಸಂಘರ್ಷ ತಾರಕಕ್ಕೇರಿರುವ ಹಿನ್ನೆಲೆಯಲ್ಲಿ, ನಾಗರಹೊಳೆ ಮತ್ತು ಬಂಡೀಪುರ ಸಫಾರಿ ಹಾಗೂ ಸಂಘರ್ಷ ಪೀಡಿತ ಪ್ರದೇಶಗಳಲ್ಲಿ ಚಾರಣವನ್ನು ಇಂದಿನಿಂದಲೇ ಸ್ಥಗಿತಗೊಳಿಸಲು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ. ಖಂಡ್ರೆ ಆದೇಶಿಸಿದ್ದಾರೆ. ಅಲ್ಲದೆ, ಸಫಾರಿ ಸಿಬ್ಬಂದಿಯನ್ನು ಹುಲಿ ಸೆರೆ ಕಾರ್ಯಾಚರಣೆಗೆ ನಿಯೋಜಿಸುವಂತೆ ಸೂಚನೆ ನೀಡಿದ್ದಾರೆ.
ಮೈಸೂರು: ಮಾನವ-ವನ್ಯಜೀವಿ ಸಂಘರ್ಷ ತಾರಕಕ್ಕೇರಿರುವ ಹಿನ್ನೆಲೆಯಲ್ಲಿ, ನಾಗರಹೊಳೆ ಮತ್ತು ಬಂಡೀಪುರ ಸಫಾರಿ ಹಾಗೂ ಸಂಘರ್ಷ ಪೀಡಿತ ಪ್ರದೇಶಗಳಲ್ಲಿ ಚಾರಣವನ್ನು ಇಂದಿನಿಂದಲೇ ಸ್ಥಗಿತಗೊಳಿಸಲು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ. ಖಂಡ್ರೆ ಆದೇಶಿಸಿದ್ದಾರೆ. ಅಲ್ಲದೆ, ಸಫಾರಿ ಸಿಬ್ಬಂದಿಯನ್ನು ಹುಲಿ ಸೆರೆ ಕಾರ್ಯಾಚರಣೆಗೆ ನಿಯೋಜಿಸುವಂತೆ ಸೂಚನೆ ನೀಡಿದ್ದಾರೆ.
ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಹಾಗೂ ಮುಖ್ಯ ವನ್ಯಜೀವಿ ಪರಿಪಾಲಕರಿಗೆ ಲಿಖಿತ ಸೂಚನೆ ನೀಡಿರುವ ಸಚಿವರು, ಸರಗೂರು ತಾಲ್ಲೂಕು ಮೊಳೆಯೂರು ವಲಯದ ಹಳೆ ಹೆಗ್ಗೋಡಿಲು ಗ್ರಾಮದ ಬಳಿ ಇಂದು ಬೆಳಗ್ಗೆ ಚೌಡಯ್ಯ ನಾಯ್ಕ (35) ಎಂಬವರು ಹುಲಿ ದಾಳಿಯಿಂದ ಮೃತಪಟ್ಟ ಘಟನೆಗೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ, ಮುಂದಿನ ಆದೇಶದವರೆಗೆ ಎರಡೂ ರಾಷ್ಟ್ರೀಯ ಉದ್ಯಾನವನಗಳಲ್ಲಿ ಸಫಾರಿ ಸ್ಥಗಿತಗೊಳಿಸಿ, ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನು ಹುಲಿ ಸೆರೆ ಕಾರ್ಯಾಚರಣೆಗೆ ಬಳಸಿಕೊಳ್ಳಲು ನಿರ್ದೇಶನ ನೀಡಿದ್ದಾರೆ.
ಕಳೆದ ಒಂದು ತಿಂಗಳ ಅವಧಿಯಲ್ಲಿ ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಗಳ ಬಂಡೀಪುರ, ನಾಗರಹೊಳೆ ಅರಣ್ಯದಂಚಿನಲ್ಲಿ ಹುಲಿ ದಾಳಿಯಿಂದ ಮೂರು ಅಮೂಲ್ಯ ಜೀವಗಳು ಬಲಿಯಾಗಿರುವುದು ತೀವ್ರ ನೋವು ತಂದಿದೆ ಎಂದು ಈಶ್ವರ ಖಂಡ್ರೆ ತಿಳಿಸಿದ್ದಾರೆ. ಹುಲಿ ದಾಳಿಗಳ ತಡೆಗೆ ಅ. 27ರಂದು ಬಂಡೀಪುರದಲ್ಲಿ ಅಧಿಕಾರಿಗಳ ಸಭೆ ಹಾಗೂ ನ. 2ರಂದು ಚಾಮರಾಜನಗರದಲ್ಲಿ ಸಚಿವರು ಮತ್ತು ಶಾಸಕರ ಸಮ್ಮುಖದಲ್ಲಿ ರೈತರು ಮತ್ತು ಸಾರ್ವಜನಿಕರೊಂದಿಗೆ ಸಂವಾದ ನಡೆಸಿ, ಹುಲಿ ಸೆರೆಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿತ್ತು. ಅಂದೇ ಸಫಾರಿ ಬಂದ್ ಮಾಡುವ ಎಚ್ಚರಿಕೆಯನ್ನೂ ನೀಡಿದ್ದರೂ, ಮತ್ತೊಂದು ದಾರುಣ ಘಟನೆ ಸಂಭವಿಸಿರುವುದು ತೀವ್ರ ಆಘಾತ ಮೂಡಿಸಿದೆ ಎಂದು ಸಚಿವರು ಹೇಳಿದ್ದಾರೆ.
ಈ ಹಿನ್ನೆಲೆಯಲ್ಲಿ, ಮುಂದಿನ ಆದೇಶದವರೆಗೆ ಇಂದಿನಿಂದಲೇ ನಾಗರಹೊಳೆ ಮತ್ತು ಬಂಡೀಪುರದಲ್ಲಿ ಸಫಾರಿ ಹಾಗೂ ಮಾನವ-ವನ್ಯಜೀವಿ ಸಂಘರ್ಷ ಇರುವ ಪ್ರದೇಶದಲ್ಲಿ ಟ್ರೆಕ್ಕಿಂಗ್ ಅನ್ನು ಸ್ಥಗಿತಗೊಳಿಸಲು ಸ್ಪಷ್ಟ ಸೂಚನೆ ನೀಡಲಾಗಿದೆ. ಅಲ್ಲದೆ, ಬಂಡೀಪುರ, ನಾಗರಹೊಳೆ ಸಫಾರಿಯಲ್ಲಿ ನಿಯೋಜನೆಗೊಂಡಿರುವ ಎಲ್ಲ ಅಧಿಕಾರಿಗಳು ಮತ್ತು ವಾಹನ ಚಾಲಕರು ಸೇರಿದಂತೆ ಎಲ್ಲ ಸಿಬ್ಬಂದಿಯನ್ನು ಹುಲಿ ಸೆರೆ ಕಾರ್ಯಾಚರಣೆಗೆ ನಿಯೋಜಿಸಲು ಹಾಗೂ ವನ್ಯಜೀವಿ ವಿಭಾಗದ ಎಪಿಸಿಸಿಎಫ್ ಮತ್ತು ಹುಲಿ ಯೋಜನೆಯ ನಿರ್ದೇಶಕರು ಸ್ಥಳದಲ್ಲೇ ಮೊಕ್ಕಾಂ ಹೂಡಿ ಪದೇ ಪದೇ ದಾಳಿ ಮಾಡುತ್ತಿರುವ ಹುಲಿಯನ್ನು ಹಿಡಿಯಲು ಅಗತ್ಯ ಕ್ರಮ ಕೈಗೊಳ್ಳುವಂತೆ ಸಚಿವರು ನಿರ್ದೇಶನ ನೀಡಿದ್ದಾರೆ.
ಸಿನೆಮಾ
Rajinikanth-ಚಾಮುಂಡೇಶ್ವರಿ ದೇವಿಯ ದರ್ಶನ ಪಡೆದ ತಲೈವಾ: ರಜಿನಿಕಾಂತ್ ನೋಡಲು ಮುಗಿಬಿದ್ದ ಅಭಿಮಾನಿಗಳು
‘ಧರ್ಮನ್’ ಚಿತ್ರದ ಚಿತ್ರೀಕರಣಕ್ಕಾಗಿ ಮೈಸೂರಿಗೆ ಆಗಮಿಸಿರುವ ಸೂಪರ್ ಸ್ಟಾರ್ ರಜಿನಿಕಾಂತ್ ಅವರು ಬುಧವಾರ (ಸೆ.30) ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿ ಶ್ರೀ ಚಾಮುಂಡೇಶ್ವರಿ ದೇವಿಯ ದರ್ಶನ ಪಡೆದಿದ್ದಾರೆ.
ಮೈಸೂರು: ‘ಧರ್ಮನ್’ ಚಿತ್ರದ ಚಿತ್ರೀಕರಣಕ್ಕಾಗಿ ಮೈಸೂರಿಗೆ ಆಗಮಿಸಿರುವ ಸೂಪರ್ ಸ್ಟಾರ್ ರಜಿನಿಕಾಂತ್ ಅವರು ಬುಧವಾರ (ಸೆ.30) ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿ ಶ್ರೀ ಚಾಮುಂಡೇಶ್ವರಿ ದೇವಿಯ ದರ್ಶನ ಪಡೆದಿದ್ದಾರೆ.
ಮೈಸೂರಿನ ಸುತ್ತಮುತ್ತ ‘ಧರ್ಮನ್’ ಚಿತ್ರದ ಚಿತ್ರೀಕರಣ ನಡೆಯುತ್ತಿದ್ದು, ರಜಿನಿಕಾಂತ್ ಅವರು ನಗರದಲ್ಲಿರುವ ವಿಚಾರ ತಿಳಿಯುತ್ತಿದ್ದಂತೆ ಅಭಿಮಾನಿಗಳಲ್ಲಿ ಸಂಭ್ರಮ ಮನೆಮಾಡಿದೆ. ʻತಲೈವಾʼನನ್ನು ಕಣ್ತುಂಬಿಕೊಳ್ಳಲು ಅಭಿಮಾನಿಗಳು ಶೂಟಿಂಗ್ ಸ್ಥಳಗಳು ಹಾಗೂ ಅವರು ಭೇಟಿ ನೀಡುವ ಪ್ರದೇಶಗಳತ್ತ ಹೆಚ್ಚಿನ ಸಂಖ್ಯೆಯಲ್ಲಿ ಧಾವಿಸುತ್ತಿದ್ದಾರೆ.
ಚಾಮುಂಡೇಶ್ವರಿ ದೇವಾಲಯಕ್ಕೆ ರಜಿನಿಕಾಂತ್ ಭೇಟಿ ನೀಡಿರುವ ಸುದ್ದಿ ತಿಳಿಯುತ್ತಿದ್ದಂತೆ ನೂರಾರು ಅಭಿಮಾನಿಗಳು ಅವರನ್ನು ನೋಡಲು ಚಾಮುಂಡಿಬೆಟ್ಟಕ್ಕೆ ಆಗಮಿಸಿದ್ದರು. ಈ ವೇಳೆ ಅಭಿಮಾನಿಗಳನ್ನು ಕಂಡ ರಜಿನಿಕಾಂತ್ ಅವರು ಪ್ರೀತಿಯಿಂದ ಕೈಬೀಸಿ ಅಭಿಮಾನಿಗಳ ಖುಷಿಗೆ ಕಾರಣರಾದರು.
ಇದಕ್ಕೂ ಮುನ್ನ ಮಂಗಳವಾರ (ಸೆ.29) ಸೋಮನಾಥಪುರದಲ್ಲಿ ‘ಧರ್ಮನ್’ ಚಿತ್ರದ ಚಿತ್ರೀಕರಣ ನಡೆಯುತ್ತಿದ್ದ ವೇಳೆ ನಟ ವಿಷ್ಣುವರ್ಧನ್ ಅವರ ಕುಟುಂಬದ ಸದಸ್ಯರು ರಜಿನಿಕಾಂತ್ ಅವರನ್ನು ಭೇಟಿಯಾಗಿದ್ದರು. ಈ ವೇಳೆ ಕೆಲಕಾಲ ಆತ್ಮೀಯವಾಗಿ ಮಾತುಕತೆ ನಡೆಸಿದ್ದು, ಭೇಟಿಯ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದವು.
ಕರ್ನಾಟಕದಲ್ಲಿ ರಜಿನಿಕಾಂತ್ ಅವರಿಗೆ ದೊಡ್ಡ ಅಭಿಮಾನಿ ಬಳಗವಿದ್ದು, ಅವರು ರಾಜ್ಯಕ್ಕೆ ಆಗಮಿಸಿದಾಗಲೆಲ್ಲ ಅಭಿಮಾನಿಗಳಿಂದ ಅದ್ಧೂರಿ ಸ್ವಾಗತ ದೊರೆಯುತ್ತದೆ. ಇದೀಗ ಮೈಸೂರಿನಲ್ಲಿ ನಡೆಯುತ್ತಿರುವ ‘ಧರ್ಮನ್’ ಚಿತ್ರದ ಚಿತ್ರೀಕರಣದ ಹಿನ್ನೆಲೆಯಲ್ಲಿ ತಲೈವಾ ನಗರದಲ್ಲಿರುವುದು ಅಭಿಮಾನಿಗಳಲ್ಲಿ ಮತ್ತಷ್ಟು ಉತ್ಸಾಹ ಮೂಡಿಸಿದೆ.
ರಜಿನಿಕಾಂತ್ ಅಭಿನಯದ ಮುಂದಿನ ಬಹುನಿರೀಕ್ಷಿತ ಚಿತ್ರ ‘ಜೈಲರ್-2’ ಕೂಡ ಸದ್ಯ ಗಮನ ಸೆಳೆಯುತ್ತಿದೆ. ಚಿತ್ರದಲ್ಲಿ ಕನ್ನಡದ ನಟ ಶಿವರಾಜ್ ಕುಮಾರ್ ಸೇರಿದಂತೆ ಹಲವು ಪ್ರಮುಖ ಕಲಾವಿದರು ನಟಿಸಿದ್ದಾರೆ. ‘ಜೈಲರ್-2’ ಅಕ್ಟೋಬರ್ 15ರಂದು ತೆರೆಗೆ ಬರಲಿದೆ.
ಅಪರಾಧ
Case filed-ಪ್ರತಾಪ್ ಸಿಂಹ ವಿರುದ್ಧ ದಲಿತ ದೌರ್ಜನ್ಯ ಪ್ರಕರಣ ದಾಖಲು
ದಲಿತ ಸಮುದಾಯ ಹಾಗೂ ಅವರ ಸಾಂಸ್ಕೃತಿಕ ಅಸ್ಮಿತೆಯಾದ ನೀಲಿ ಶಾಲನ್ನು ಅವಮಾನಿಸಲಾಗಿದೆ ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ದಲಿತ ದೌರ್ಜನ್ಯ ಪ್ರಕರಣ ದಾಖಲಾಗಿದೆ.
ಮೈಸೂರು, ಸೆ. 23: ದಲಿತ ಸಮುದಾಯ ಹಾಗೂ ಅವರ ಸಾಂಸ್ಕೃತಿಕ ಅಸ್ಮಿತೆಯಾದ ನೀಲಿ ಶಾಲನ್ನು ಅವಮಾನಿಸಲಾಗಿದೆ ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ದಲಿತ ದೌರ್ಜನ್ಯ ಪ್ರಕರಣ ದಾಖಲಾಗಿದೆ.
ಡಾ. ಬಿ.ಆರ್. ಅಂಬೇಡ್ಕರ್ ಕ್ರೀಡಾ ಕಲಾ ಸಂಘದ ಅಧ್ಯಕ್ಷ ಮಧು ಕೆ.ಟಿ. ಅವರು ಟಿ.ನರಸೀಪುರ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಿದ್ದಾರೆ. ಪ್ರತಾಪ್ ಸಿಂಹ ದಲಿತರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿ, ಸಾರ್ವಜನಿಕವಾಗಿ ನಿಂದಿಸಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.
ದೂರಿನಲ್ಲಿ ತಿಳಿಸಿರುವಂತೆ, ಸೆಪ್ಟೆಂಬರ್ 18ರಂದು ಟಿ.ನರಸೀಪುರ ಪೊಲೀಸ್ ಠಾಣೆಯ ಮುಂಭಾಗದಲ್ಲಿ ನಡೆದ ಗಣೇಶ ವಿಸರ್ಜನಾ ಮೆರವಣಿಗೆಯ ಸಂದರ್ಭದಲ್ಲಿ ಪ್ರತಾಪ್ ಸಿಂಹ ನೂರಾರು ಜನರ ಸಮ್ಮುಖದಲ್ಲಿ ಮತ್ತು ಮಾಧ್ಯಮಗಳ ಕ್ಯಾಮೆರಾ-ಮೈಕ್‌ಗಳ ಮುಂದೆ ನಿಂತು ದಲಿತ ಸಮುದಾಯವನ್ನು ಹೀಯಾಳಿಸುವ ಮತ್ತು ಕೀಳಾಗಿ ಚಿತ್ರಿಸುವ ಉದ್ದೇಶದಿಂದ ಅತ್ಯಂತ ಅವಹೇಳನಕಾರಿ ಹಾಗೂ ನಿಂದನಾತ್ಮಕ ಭಾಷಣ ಮಾಡಿದ್ದಾರೆ.
ತಮ್ಮ ಭಾಷಣದಲ್ಲಿ ದಲಿತ ಸಮುದಾಯದ ಕಾರ್ಯಕರ್ತರನ್ನು ನೇರವಾಗಿ ಗುರಿಯಾಗಿಸಿ, “ನೀವು ಕೇವಲ ನೀಲಿ ಶಾಲು ಹೊದ್ದು ನಾವು ಏನೇ ಮಾಡಿದರೂ ಅಡ್ಡ ಬಂದು ನಿಲ್ಲುತ್ತೀರಿ. ನಿಮಗೆ ಅಂಬೇಡ್ಕರ್ ಅವರ ಬಗ್ಗೆ ಏನೂ ಗೊತ್ತಿಲ್ಲ. ಮೊದಲು ಅಂಬೇಡ್ಕರ್ ಓದಿ” ಎಂದು ಸಾರ್ವಜನಿಕವಾಗಿ ನಿಂದಿಸಿದ್ದಾರೆ. ಈ ಮೂಲಕ ದಲಿತ ಸಮುದಾಯದ ಸಾಂಸ್ಕೃತಿಕ ಅಸ್ಮಿತೆಯಾದ ನೀಲಿ ಶಾಲಿನ ಗೌರವವನ್ನು ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ವಿಚಾರಗಳನ್ನು ಸಾರ್ವಜನಿಕವಾಗಿ ಹೀಯಾಳಿಸಿದ್ದಾರೆ ಎಂದು ದೂರಿನಲ್ಲಿ ಹೇಳಲಾಗಿದೆ.
ಆರೋಪಿತರು ಕೇವಲ ಒಂದು ರಾಜಕೀಯ ಪಕ್ಷದ ವಿರುದ್ಧ ಮಾತನಾಡುತ್ತಿಲ್ಲ. ಬದಲಿಗೆ ಶೋಷಿತರ ಹಕ್ಕುಗಳಿಗಾಗಿ ಹೋರಾಡುವ ದಲಿತ ಸಂಘಟನೆಯ ಪದಾಧಿಕಾರಿಗಳನ್ನು “ಹಣದ ಆಸೆಗಾಗಿ ಅಥವಾ ವೈಯಕ್ತಿಕ ಲಾಭಕ್ಕಾಗಿ ಹೋರಾಟ ಮಾಡುವವರು” ಎಂದು ಸಾರಾಸಗಟಾಗಿ ಸುಳ್ಳು ಆರೋಪ ಮಾಡಿದ್ದಾರೆ. ಇದು ಸಂಘಟನೆಯ ನೈತಿಕತೆಯನ್ನು ಸಾರ್ವಜನಿಕವಾಗಿ ಹತ್ಯೆ ಮಾಡುವ ಉದ್ದೇಶಪೂರ್ವಕ ಜಾತಿ ನಿಂದನೆ ಎಂದು ದೂರುದಾರರು ತಿಳಿಸಿದ್ದಾರೆ.
ಇದಲ್ಲದೆ, ಅವರು ಒಬ್ಬ ಪೊಲೀಸ್ ಅಧಿಕಾರಿಯ ಜಾತಿಯನ್ನು ಸಾರ್ವಜನಿಕವಾಗಿ ಪ್ರಸ್ತಾಪಿಸಿ, “ನಿಮ್ಮ ಜಾತಿಯ ಅಧಿಕಾರಿ ಎಂಬ ಒಂದೇ ಕಾರಣಕ್ಕೆ ನೀವು ಅವರನ್ನು ಬೆಂಬಲಿಸುತ್ತೀರಿ ಮತ್ತು ರಕ್ಷಣೆಗೆ ನಿಲ್ಲುತ್ತೀರಿ. ಆತ ಒಬ್ಬ ಕ್ಷುಲ್ಲಕ, ಕಳಪೆ ವ್ಯಕ್ತಿತ್ವದ ಇನ್ಸ್‌ಪೆಕ್ಟರ್” ಎಂದು ಹೇಳುವ ಮೂಲಕ ಪರಿಶಿಷ್ಟ ಜಾತಿಗೆ ಸೇರಿದ ಧನಂಜಯರನ್ನು ಜಾತಿ ಹೆಸರಿನಲ್ಲಿ ನಿಂದಿಸಿ, ಬೆದರಿಕೆ ಹಾಗೂ ತುಚ್ಛವಾಗಿ ಮಾತನಾಡಿದ್ದಾರೆ. ಆ ಮೂಲಕ ಸಾರ್ವಜನಿಕವಾಗಿ ಅಪಮಾನಗೊಳಿಸಿ, ಜಾತಿ ವ್ಯವಸ್ಥೆಯನ್ನು ಕೆರಳಿಸುವ ಮತ್ತು ಸಮಾಜದಲ್ಲಿ ವಿವಿಧ ಜಾತಿಗಳ ನಡುವೆ ತಾರತಮ್ಯ, ದ್ವೇಷ ಹಾಗೂ ನಾಗರಿಕ ಸಂಘರ್ಷದ ವಾತಾವರಣವನ್ನು ಸೃಷ್ಟಿಸುವ ತೀವ್ರ ಪ್ರಯತ್ನ ಮಾಡಿದ್ದಾರೆ ಎಂದು ದೂರಲಾಗಿದೆ.
ಈ ಇಡೀ ಕೃತ್ಯವು ಆಕಸ್ಮಿಕವಾಗಿ ನಡೆದದ್ದಲ್ಲ. ಮುಖ್ಯ ಆರೋಪಿತರು ಹಾಗೂ ಶೋಭಾ ಯಾತ್ರೆಯ ಮುಖ್ಯ ಆಯೋಜಕರು (ಸಹ ಆರೋಪಿಗಳು) ಒಟ್ಟಾಗಿ ಸೇರಿ, ಪಟ್ಟಣದ ಸಾಮಾಜಿಕ ಶಾಂತಿ ಮತ್ತು ಸೌಹಾರ್ದ ಕೆಡಿಸುವ ಹಾಗೂ ದಲಿತ ಸಮುದಾಯವನ್ನು ಸಾರ್ವಜನಿಕವಾಗಿ ಅಪಮಾನಿಸುವ ಉದ್ದೇಶದಿಂದಲೇ ಮೊದಲೇ ಯೋಜಿತ ಸಂಚು ರೂಪಿಸಿ ಈ ವೇದಿಕೆಯನ್ನು ಬಳಸಿಕೊಂಡಿದ್ದಾರೆ. ಪ್ರಚೋದನಾತ್ಮಕ ಹೇಳಿಕೆ ನೀಡಲು ಮುಕ್ತವಾಗಿ ಅವಕಾಶ ಮಾಡಿಕೊಟ್ಟು, ಅದಕ್ಕೆ ಕುಮ್ಮಕ್ಕು ನೀಡಿ ಸಹಕರಿಸಿರುವ ಆಯೋಜಕರು ಸಹ ಈ ಅಪರಾಧದಲ್ಲಿ ಸಮಾನ ಭಾಗಿಗಳು ಎಂದು ಪೊಲೀಸ್ ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಮೈಸೂರು
Pramodadevi-ದಸರಾ ವೇಳೆ ಕಂಬಳ ಆಯೋಜನೆ ಅಗತ್ಯವಿಲ್ಲ; ಕರಾವಳಿಯ ಕ್ರೀಡೆಗೆ ಪ್ರತ್ಯೇಕ ಮಹತ್ವ ಸಿಗಲಿ: ಪ್ರಮೋದಾದೇವಿ
ದಸರಾ ಉತ್ಸವದ ಭಾಗವಾಗಿ ಕರಾವಳಿಯ ಜನಪ್ರಿಯ ಕ್ರೀಡೆ ಕಂಬಳವನ್ನು ಆಯೋಜಿಸುವ ಅಗತ್ಯವಿರಲಿಲ್ಲ ಎಂಬುದು ತಮ್ಮ ವೈಯಕ್ತಿಕ ಅಭಿಪ್ರಾಯ ಎಂದು ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ತಿಳಿಸಿದ್ದಾರೆ.
ಮೈಸೂರು: ದಸರಾ ಉತ್ಸವದ ಭಾಗವಾಗಿ ಕರಾವಳಿಯ ಜನಪ್ರಿಯ ಕ್ರೀಡೆ ಕಂಬಳವನ್ನು ಆಯೋಜಿಸುವ ಅಗತ್ಯವಿರಲಿಲ್ಲ ಎಂಬುದು ತಮ್ಮ ವೈಯಕ್ತಿಕ ಅಭಿಪ್ರಾಯ ಎಂದು ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ತಿಳಿಸಿದ್ದಾರೆ.
ಕಂಬಳಕ್ಕೆ ಕರಾವಳಿ ಭಾಗದಲ್ಲಿ ತನ್ನದೇ ಆದ ವಿಶಿಷ್ಟ ಪರಂಪರೆ ಹಾಗೂ ಮಹತ್ವವಿದೆ. ಹೀಗಾಗಿ ದಸರಾ ಉತ್ಸವದೊಂದಿಗೆ ಕಂಬಳವನ್ನು ಸೇರಿಸುವುದು ಸೂಕ್ತವಲ್ಲ ಎಂಬುದು ತಮ್ಮ ಅಭಿಪ್ರಾಯ ಎಂದು ಅವರು ಹೇಳಿದ್ದಾರೆ.
ಕಂಬಳವನ್ನು ಪ್ರತ್ಯೇಕವಾಗಿ ಆಯೋಜಿಸಿದರೆ ಕ್ರೀಡೆಗೆ ಇನ್ನಷ್ಟು ಮಹತ್ವ ಹಾಗೂ ಗಮನ ಸಿಗಲಿದೆ. ಆದರೆ ದಸರಾ ಉತ್ಸವದ ಭಾಗವಾಗಿ ಆಯೋಜಿಸಿದರೆ ಕಂಬಳಕ್ಕೆ ಸಿಗಬೇಕಾದ ಪ್ರತ್ಯೇಕ ಗಮನ ಕಡಿಮೆಯಾಗುವ ಸಾಧ್ಯತೆಯಿದೆ ಎಂದು ಪ್ರಮೋದಾದೇವಿ ಒಡೆಯರ್ ಅಭಿಪ್ರಾಯಪಟ್ಟಿದ್ದಾರೆ.
-
ಬಿಗ್ ನ್ಯೂಸ್24 hours agoKaavu-BIG BREAKING: ಕಾವು ಬಳಿ ಹೆದ್ದಾರಿಗೆ ಉರುಳಿದ ಮರಗಳು, ಹೈಟೆನ್ಷನ್ ವಿದ್ಯುತ್ ಕಂಬ : ಮಾಣಿ – ಮೈಸೂರು ಹೈವೆಯಲ್ಲಿ ವಾಹನ ಸಂಚಾರ ಸ್ಥಗಿತ
-
ನಿಧನ ವಾರ್ತೆ7 hours agoMumbai-ಪ್ರೀತಿಸಿ ಮದುವೆಯಾಗಿದ್ದ ಜೋಡಿಯ ದುರಂತ ಅಂತ್ಯ? ಸರಪಳಿಯಿಂದ ಕಾಲು ಕಟ್ಟಿದ ಸ್ಥಿತಿಯಲ್ಲಿ ಶವ ಪತ್ತೆ
-
ಮಂಗಳೂರು5 hours agoUjire-ಭಾರೀ ಜನಸ್ತೋಮದೊಂದಿಗೆ ಸೌಜನ್ಯ ನ್ಯಾಯದ ನಡಿಗೆ
-
ಅಂತರ ರಾಜ್ಯ6 hours agoArrested-ಕಾಸರಗೋಡು: ಮದುವೆಯ ನೆಪದಲ್ಲಿ ಹತ್ತಾರು ಯುವತಿಯರಿಗೆ ವಂಚನೆ: ಮದುವೆಯಾದ ಮೂರೇ ದಿನಕ್ಕೆ ಚಿನ್ನ, ಹಣದೊಂದಿಗೆ ಪರಾರಿ; ಆರೋಪಿ ಬಿಜು ಆಂಟನಿ ಬಂಧನ
-
ಅಂತರ ರಾಜ್ಯ6 hours agoJantar Mantar-ಸಿಜೆಪಿ ಪ್ರತಿಭಟನೆಗೆ ದೆಹಲಿಯಲ್ಲಿ ಬಿಗಿ ಭದ್ರತೆ – ಪಂಚರ್ ಆಗಲು ರಸ್ತೆಗಳಿಗೆ ತಡೆಬೇಲಿ..! ವಿಮಾನದಲ್ಲೇ ಅಭಿಜಿತ್ ದಿಪ್ಕೆ ಪೊಲೀಸ್ ವಶಕ್ಕೆ..! ಸಾವಿರಕ್ಕೂ ಮಿಕ್ಕಿ ಪ್ರತಿಭಟನಾಕಾರರೂ ವಶಕ್ಕೆ-ಸುಪ್ರೀಂ ಕೋರ್ಟ್ ವಕೀಲರಿಗೆ ತಡೆ..! ತೀವ್ರ ಅಡೆತಡೆಗಳ ನಡುವೆ ಜಂತರ್ ಮಂತರ್ ಗೆ ಹರಿದು ಬರುತ್ತಿರುವ ಜನಸಾಗರ
-
ರಾಜ್ಯ6 hours agoRobotic technology-ರೋಬೋಟಿಕ್ ತಂತ್ರಜ್ಞಾನದ ಅದ್ಭುತ: ಸ್ಪೇನ್ನಲ್ಲಿ ಕುಳಿತು ಕರ್ನಾಟಕದ ಮಹಿಳೆಗೆ ಹೃದಯ ಶಸ್ತ್ರಚಿಕಿತ್ಸೆ
-
Uncategorized8 hours agoCJP protest-ಇಂದು CJP ಪ್ರತಿಭಟನೆ : ದೆಹಲಿಗೆ ಬರಬೇಕಾಗಿದ್ದ 250 ರೈಲು ರದ್ದು, ಹಲವು ರೈಲಿನ ವೇಳಾಪಟ್ಟಿ ಬದಲಾವಣೆ : ಮೆಟ್ರೋ ಸಂಚಾರ ಸ್ಥಗಿತ – ಇಂಟರ್ ನೆಟ್ ಬಂದ್..! ‘ಹೆದರಿದ್ರಾ ಮೋದಿಜೀ..?’ ಎಂದ CJP
-
ಅಂತರ ರಾಜ್ಯ8 hours agoDhruv Rati-BIG BREAKING: ದೆಹಲಿಯ ಜಂತರ್ ಮಂತರ್ ನಲ್ಲಿ ಸಿಜೆಪಿ ಪ್ರತಿಭಟನೆ ಹಿನ್ನಲೆ – ಯೂಟ್ಯೂಬರ್ ಧ್ರುವ್ ರಾಠಿ ಪೊಲೀಸ್ ವಶಕ್ಕೆ?


















