ಸ್ಥಳೀಯ
Chikkamagaluru-ಚಿಕ್ಕಮಗಳೂರು: ಕಾಡಿನಲ್ಲಿ ಕಳೆದುಹೋಗಿದ್ದ ವೃದ್ಧ ವೈದ್ಯನನ್ನು ಪತ್ತೆಹಚ್ಚಿದ ಪೊಲೀಸ್ ಶ್ವಾನ
ಕೊಪ್ಪ ತಾಲ್ಲೂಕಿನ ಗುಣವಂತೆ ಕಾಡಿನಲ್ಲಿ ಕಳೆದುಹೋಗಿದ್ದ ವೃದ್ಧ ವೈದ್ಯರೊಬ್ಬರನ್ನು ಪೊಲೀಸ್ ಶ್ವಾನವೊಂದು ಯಶಸ್ವಿಯಾಗಿ ಪತ್ತೆ ಮಾಡಿದ ಪ್ರಶಂಸನೀಯ ಘಟನೆ ನಡೆದಿದೆ.
ಚಿಕ್ಕಮಗಳೂರು: ಕೊಪ್ಪ ತಾಲ್ಲೂಕಿನ ಗುಣವಂತೆ ಕಾಡಿನಲ್ಲಿ ಕಳೆದುಹೋಗಿದ್ದ ವೃದ್ಧ ವೈದ್ಯರೊಬ್ಬರನ್ನು ಪೊಲೀಸ್ ಶ್ವಾನವೊಂದು ಯಶಸ್ವಿಯಾಗಿ ಪತ್ತೆ ಮಾಡಿದ ಪ್ರಶಂಸನೀಯ ಘಟನೆ ನಡೆದಿದೆ.
ನವೆಂಬರ್ 2ರಂದು ವಿಹಾರಕ್ಕೆಂದು ಬಂದಿದ್ದ ವೈದ್ಯ ವೆಂಕಟೇಗೌಡ ದಾರಿ ತಪ್ಪಿ ಕಾಡಿನೊಳಗೆ ಸೇರಿಕೊಂಡಿದ್ದರು. ಮರೆವಿನ ಕಾಯಿಲೆಯಿಂದ ಬಳಲುತ್ತಿದ್ದ ಅವರಿಗೆ ಹಿಂತಿರುಗುವ ಮಾರ್ಗ ಸಿಕ್ಕಿರಲಿಲ್ಲ. ಕಾಡಂಚಿನ ಗುಣವಂತೆ ಗ್ರಾಮದ ಮನೆಯೊಂದರಲ್ಲಿ ನೀರು ಕುಡಿದು ಹೋಗಿದ್ದ ಅವರು ಸುಮಾರು ನಾಲ್ಕು ದಿನಗಳ ಕಾಲ ಕಾಡಿನಲ್ಲಿಯೇ ಸುತ್ತಾಡಿ ಉಳಿದುಕೊಂಡಿದ್ದರು.
ಮನೆಯವರು ಪೊಲೀಸರಿಗೆ ದೂರು ನೀಡಿದ ನಂತರ, ಕಾಡು, ಅರಣ್ಯ ಪ್ರದೇಶ ಮತ್ತು ಸುತ್ತಮುತ್ತಲಿನ ಹಳ್ಳಿಗಳಲ್ಲಿ ಹುಡುಕಾಡಿದರೂ ಅವರು ಪತ್ತೆಯಾಗಿರಲಿಲ್ಲ. ಈ ಸಂದರ್ಭದಲ್ಲಿ ನಾಪತ್ತೆಯಾಗಿದ್ದ ವೆಂಕಟೇಗೌಡರ ಪಂಚೆ ಒಂದು ಸಿಕ್ಕಿತ್ತು. ಆ ಪಂಚೆಯ ವಾಸನೆಯನ್ನು ಹಿಡಿದು ಹೊರಟ ಪೊಲೀಸ್ ಶ್ವಾನವು ಸುಮಾರು 5 ಕಿಲೋಮೀಟರ್ ದೂರದ ಕಾಡಿನ ಆಳದಲ್ಲಿ ವೃದ್ಧ ವೈದ್ಯರನ್ನು ಪತ್ತೆ ಮಾಡಿದೆ.
ಗುಣವಂತೆ ಕಾಡಿನ ಆಳದ ಪ್ರದೇಶದಲ್ಲಿದ್ದ ವೆಂಕಟೇಗೌಡ ಅವರನ್ನು ಸುರಕ್ಷಿತವಾಗಿ ರಕ್ಷಿಸಲಾಗಿದ್ದು, ಪೊಲೀಸ್ ಶ್ವಾನದ ಕಾರ್ಯಕ್ಕೆ ಎಲ್ಲೆಡೆಯಿಂದ ವ್ಯಾಪಕ ಶ್ಲಾಘನೆ ವ್ಯಕ್ತವಾಗಿದೆ.
ನಿಧನ ವಾರ್ತೆ
Kolar-ಕೋಲಾರ: ಹೆದ್ದಾರಿ ಬದಿಯಲ್ಲಿ ಪಾರ್ಸೆಲ್ ರೂಪದಲ್ಲಿ ಮಹಿಳೆಯ ಮೃತದೇಹ ಪತ್ತೆ
ಚೆನ್ನೈ-ಬೆಂಗಳೂರು ಎಕ್ಸ್‌ಪ್ರೆಸ್ ಹೆದ್ದಾರಿಗೆ ಹೊಂದಿಕೊಂಡಿರುವ ಸರ್ವೀಸ್ ರಸ್ತೆಯ ಬಳಿ ಪಾರ್ಸೆಲ್‌ನಂತೆ ಕಟ್ಟಿದ ಅಪರಿಚಿತ ಮಹಿಳೆಯ ಮೃತದೇಹ ಪತ್ತೆಯಾಗಿರುವ ಘಟನೆ ಕೆಜಿಎಫ್ ತಾಲ್ಲೂಕಿನ ಸುಂದರಪಾಳ್ಯ ಗ್ರಾಮದ ಸಮೀಪ ಬೆಳಕಿಗೆ ಬಂದಿದೆ.
ಕೋಲಾರ: ಚೆನ್ನೈ-ಬೆಂಗಳೂರು ಎಕ್ಸ್‌ಪ್ರೆಸ್ ಹೆದ್ದಾರಿಗೆ ಹೊಂದಿಕೊಂಡಿರುವ ಸರ್ವೀಸ್ ರಸ್ತೆಯ ಬಳಿ ಪಾರ್ಸೆಲ್‌ನಂತೆ ಕಟ್ಟಿದ ಅಪರಿಚಿತ ಮಹಿಳೆಯ ಮೃತದೇಹ ಪತ್ತೆಯಾಗಿರುವ ಘಟನೆ ಕೆಜಿಎಫ್ ತಾಲ್ಲೂಕಿನ ಸುಂದರಪಾಳ್ಯ ಗ್ರಾಮದ ಸಮೀಪ ಬೆಳಕಿಗೆ ಬಂದಿದೆ.
ಆಂಧ್ರಪ್ರದೇಶ ಹಾಗೂ ತಮಿಳುನಾಡು ರಾಜ್ಯಗಳ ಗಡಿಗೆ ಹೊಂದಿಕೊಂಡಿರುವ ಈ ಪ್ರದೇಶದಲ್ಲಿ ಶನಿವಾರ ಬೆಳಿಗ್ಗೆ ಪಾರ್ಸೆಲ್ ರೂಪದ ವಸ್ತುವೊಂದು ಬಿದ್ದಿರುವುದನ್ನು ಸ್ಥಳೀಯರು ಗಮನಿಸಿದ್ದಾರೆ. ಅದರಿಂದ ದುರ್ವಾಸನೆ ಬರುತ್ತಿದ್ದ ಹಿನ್ನೆಲೆಯಲ್ಲಿ ತಕ್ಷಣ ಬೇತಮಂಗಲ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಶೀಲನೆ ನಡೆಸಿದಾಗ ಅದರೊಳಗೆ ಮಹಿಳೆಯ ಮೃತದೇಹ ಇರುವುದು ಪತ್ತೆಯಾಗಿದೆ.
ಮೃತ ಮಹಿಳೆಗೆ ಸುಮಾರು 35 ವರ್ಷ ವಯಸ್ಸಾಗಿರಬಹುದು ಎಂದು ಅಂದಾಜಿಸಲಾಗಿದೆ. ಮಹಿಳೆಯನ್ನು ಉಸಿರುಗಟ್ಟಿಸಿ ಕೊಲೆ ಮಾಡಿದ ಬಳಿಕ, ಮೃತದೇಹವನ್ನು ಕುಳಿತ ಭಂಗಿಯಲ್ಲಿ ಕೈಕಾಲುಗಳನ್ನು ಕಟ್ಟಿ ಗೋಣಿ ಚೀಲದಲ್ಲಿ ತುಂಬಿಸಲಾಗಿತ್ತು. ಬಳಿಕ ಅದರ ಮೇಲೆ ಪ್ಲಾಸ್ಟಿಕ್ ಕವರ್ ಸುತ್ತಿ, ಪಾರ್ಸೆಲ್ ಪ್ಲಾಸ್ಟರ್‌ನಿಂದ ಬಿಗಿಯಾಗಿ ಕಟ್ಟಲಾಗಿತ್ತು. ಮೃತದೇಹವನ್ನು ಸಾಗಿಸಲು ಅನುಕೂಲವಾಗುವಂತೆ ಟ್ರಾಲಿಯ ಮೇಲೆ ಇರಿಸಿ ಎಸೆದಿರುವುದು ಪೊಲೀಸರ ಪ್ರಾಥಮಿಕ ಪರಿಶೀಲನೆಯಲ್ಲಿ ಕಂಡುಬಂದಿದೆ.
ಸ್ಥಳಕ್ಕೆ ಹಿರಿಯ ಅಧಿಕಾರಿಗಳ ಭೇಟಿ:
ಘಟನಾ ಸ್ಥಳಕ್ಕೆ ಕೆಜಿಎಫ್ ಎಸ್ಪಿ ಶಿವಾಂಶು ರಜಪೂತ್, ಡಿವೈಎಸ್ಪಿ ಲಕ್ಷ್ಮಯ್ಯ ಸೇರಿದಂತೆ ಸೋಕೋ ತಂಡ, ಬೆರಳಚ್ಚು ತಜ್ಞರು ಹಾಗೂ ಶ್ವಾನದಳ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸ್ಥಳದಲ್ಲಿ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಲಾಗಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಮಹಿಳೆಯ ಗುರುತು ಪತ್ತೆಹಚ್ಚಲು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಸಿಸಿಟಿವಿ ಸುಳಿವು; ವಿಶೇಷ ತಂಡ ರಚನೆ:
ದುಷ್ಕರ್ಮಿಗಳು ಕಾರಿನಲ್ಲಿ ಬಂದು ಮೃತದೇಹವನ್ನು ಎಸೆದು ಹೋಗಿರುವ ದೃಶ್ಯಗಳು ಹೆದ್ದಾರಿಯ ಟೋಲ್‌ನಲ್ಲಿ ಅಳವಡಿಸಲಾಗಿದ್ದ ಸಿಸಿಟಿವಿ ಕ್ಯಾಮರಾಗಳಲ್ಲಿ ಸೆರೆಯಾಗಿವೆ ಎನ್ನಲಾಗಿದೆ. ಸುಂದರಪಾಳ್ಯ ಅಂತಾರಾಜ್ಯ ಗಡಿ ಪ್ರದೇಶದಲ್ಲಿರುವ ಹಿನ್ನೆಲೆಯಲ್ಲಿ ನೆರೆಯ ಆಂಧ್ರಪ್ರದೇಶ ಹಾಗೂ ತಮಿಳುನಾಡು ಪೊಲೀಸರಿಗೂ ಮಾಹಿತಿ ರವಾನಿಸಲಾಗಿದೆ.
ಆರೋಪಿಗಳ ಪತ್ತೆಗಾಗಿ ಎರಡು ವಿಶೇಷ ತಂಡಗಳನ್ನು ರಚಿಸಲಾಗಿದ್ದು, ಸಿಸಿಟಿವಿ ದೃಶ್ಯಾವಳಿ ಹಾಗೂ ತಾಂತ್ರಿಕ ಮಾಹಿತಿಗಳ ಆಧಾರದಲ್ಲಿ ಪೊಲೀಸರು ತನಿಖೆಯನ್ನು ತೀವ್ರಗೊಳಿಸಿದ್ದಾರೆ.
ಸ್ಥಳೀಯ
Arrested-ಕುಂಭಾಶಿ ದೇವಸ್ಥಾನದಲ್ಲಿ ವೃದ್ಧೆಯ ಚಿನ್ನದ ಸರ ಕಳವು; ತಮಿಳುನಾಡಿನ ಮೂವರು ಮಹಿಳೆಯರ ಬಂಧನ
ಗಣೇಶ ಚತುರ್ಥಿಯ ಸಂದರ್ಭದಲ್ಲಿ ಕುಂಭಾಶಿ ಶ್ರೀ ವಿನಾಯಕ ದೇವಸ್ಥಾನದಲ್ಲಿ ಜನಸಂದಣಿಯ ನಡುವೆ ವೃದ್ಧೆಯೊಬ್ಬರ ಕುತ್ತಿಗೆಯಲ್ಲಿದ್ದ ಚಿನ್ನದ ಸರ ಕಳವು ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತಮಿಳುನಾಡು ಮೂಲದ ಮೂವರು ಮಹಿಳೆಯರನ್ನು ಪೊಲೀಸರು ವಶಕ್ಕೆ ಪಡೆದು, ಕಳವಾಗಿದ್ದ ಚಿನ್ನದ ಸರವನ್ನು ವಶಪಡಿಸಿಕೊಂಡಿದ್ದಾರೆ.
ಕುಂದಾಪುರ: ಗಣೇಶ ಚತುರ್ಥಿಯ ಸಂದರ್ಭದಲ್ಲಿ ಕುಂಭಾಶಿ ಶ್ರೀ ವಿನಾಯಕ ದೇವಸ್ಥಾನದಲ್ಲಿ ಜನಸಂದಣಿಯ ನಡುವೆ ವೃದ್ಧೆಯೊಬ್ಬರ ಕುತ್ತಿಗೆಯಲ್ಲಿದ್ದ ಚಿನ್ನದ ಸರ ಕಳವು ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತಮಿಳುನಾಡು ಮೂಲದ ಮೂವರು ಮಹಿಳೆಯರನ್ನು ಪೊಲೀಸರು ವಶಕ್ಕೆ ಪಡೆದು, ಕಳವಾಗಿದ್ದ ಚಿನ್ನದ ಸರವನ್ನು ವಶಪಡಿಸಿಕೊಂಡಿದ್ದಾರೆ.
2026ರ ಸೆಪ್ಟೆಂಬರ್ 14ರಂದು ಬೈಂದೂರು ತಾಲೂಕಿನ ನಾಡ ಗುಡ್ಡೆಯಂಗಡಿ ನಿವಾಸಿ ಮುತ್ತು (75) ಅವರು ಕುಂಭಾಶಿ ಶ್ರೀ ವಿನಾಯಕ ದೇವಸ್ಥಾನದಲ್ಲಿ ಪ್ರದಕ್ಷಿಣೆ ಹಾಕುತ್ತಿದ್ದ ವೇಳೆ ಜನಸಂದಣಿಯ ನಡುವೆ ಅವರ ಕುತ್ತಿಗೆಯಲ್ಲಿದ್ದ ಚಿನ್ನದ ಸರವನ್ನು ಕಳವು ಮಾಡಲಾಗಿತ್ತು. ಈ ಕುರಿತು ಕುಂದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಪ್ರಕರಣದ ತನಿಖೆ ನಡೆಸುತ್ತಿದ್ದ ವೇಳೆ ಕೃತ್ಯದಲ್ಲಿ ಭಾಗಿಯಾಗಿದ್ದ ತಮಿಳುನಾಡು ಮೂಲದ ವಲ್ಲಿಯಮ್ಮ, ದೇವಿ ಯಾನೆ ತಿಲೋತ್ತಮ ಹಾಗೂ ಪೊನ್ನಿ ಎಂಬ ಮೂವರು ಮಹಿಳೆಯರನ್ನು ಕೇರಳದ ವಯನಾಡು ಜಿಲ್ಲೆಯ ಮಾನಂತವಾಡಿ ತಾಲೂಕಿನ ತಿರುನೆಲ್ಲಿ ಪೊಲೀಸರು ಬಂಧಿಸಿರುವ ಮಾಹಿತಿ ಕುಂದಾಪುರ ಪೊಲೀಸರಿಗೆ ಲಭ್ಯವಾಗಿತ್ತು.
ಕುಂದಾಪುರ ಉಪವಿಭಾಗದ ಪೊಲೀಸ್ ಉಪಾಧೀಕ್ಷಕರ ನಿರ್ದೇಶನದಂತೆ, ಕುಂದಾಪುರ ಪೊಲೀಸ್ ಠಾಣೆಯ ನಿರೀಕ್ಷಕರು ನ್ಯಾಯಾಲಯದ ಅನುಮತಿ ಪಡೆದು ಮಾನಂತವಾಡಿ ಜೈಲಿನಲ್ಲಿದ್ದ ಮೂವರು ಆರೋಪಿಗಳನ್ನು ಕುಂದಾಪುರಕ್ಕೆ ಕರೆತಂದು ವಿಚಾರಣೆ ನಡೆಸಿದ್ದಾರೆ.
ನಿಧನ ವಾರ್ತೆ
Beltangadi-ಬೆಳ್ತಂಗಡಿ: ವಿಷ ಸೇವಿಸಿ ಚಿಕಿತ್ಸೆ ಫಲಿಸದೆ ಐಟಿಐ ವಿದ್ಯಾರ್ಥಿ ಸಾವು
ಬೆಳ್ತಂಗಡಿ ತಾಲೂಕಿನ ಪಟ್ರಮೆ ಗ್ರಾಮದ ದೇವಸಕೋಡಿ ನಿವಾಸಿ ಹರ್ಷಿತ್ (18) ಎಂಬ ಯುವಕ ವಿಷ ಸೇವಿಸಿ ಮೃತಪಟ್ಟ ಘಟನೆ ನವೆಂಬರ್ 27ರಂದು ನಡೆದಿದೆ. ಮಾಲಾಡಿಯಲ್ಲಿ ದ್ವಿತೀಯ ವರ್ಷದ ಐಟಿಐ ವ್ಯಾಸಂಗ ಮಾಡುತ್ತಿದ್ದ ಹರ್ಷಿತ್, ನವೆಂಬರ್ 26ರಂದು ಬೆಳಿಗ್ಗೆ ಮನೆಯಲ್ಲೇ ವಿಷ ಸೇವಿಸಿ ಅಸ್ವಸ್ಥಗೊಂಡಿದ್ದರು.
ಬೆಳ್ತಂಗಡಿ: ತಾಲೂಕಿನ ಪಟ್ರಮೆ ಗ್ರಾಮದ ದೇವಸಕೋಡಿ ನಿವಾಸಿ ಹರ್ಷಿತ್ (18) ಎಂಬ ಯುವಕ ವಿಷ ಸೇವಿಸಿ ಮೃತಪಟ್ಟ ಘಟನೆ ನವೆಂಬರ್ 27ರಂದು ನಡೆದಿದೆ.
ಮಾಲಾಡಿಯಲ್ಲಿ ದ್ವಿತೀಯ ವರ್ಷದ ಐಟಿಐ ವ್ಯಾಸಂಗ ಮಾಡುತ್ತಿದ್ದ ಹರ್ಷಿತ್, ನವೆಂಬರ್ 26ರಂದು ಬೆಳಿಗ್ಗೆ ಮನೆಯಲ್ಲೇ ವಿಷ ಸೇವಿಸಿ ಅಸ್ವಸ್ಥಗೊಂಡಿದ್ದರು. ತಕ್ಷಣ ಕುಟುಂಬಸ್ಥರು ಅವರನ್ನು ಉಜಿರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು.
ಆದರೆ, ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದ ಹಿನ್ನೆಲೆಯಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು. ಅಲ್ಲಿ ವೈದ್ಯರು ನಿರಂತರ ಚಿಕಿತ್ಸೆ ನೀಡಿದರೂ ಫಲಕಾರಿಯಾಗದೆ ನವೆಂಬರ್ 27ರಂದು ಹರ್ಷಿತ್ ಕೊನೆಯುಸಿರೆಳೆದಿದ್ದಾರೆ.
ಯುವಕನ ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಮೃತರು ತಾಯಿ ಚೆಲುವಮ್ಮ ಹಾಗೂ ಸಹೋದರಿ ಪ್ರತೀಕ್ಷಾ ಅವರನ್ನು ಅಗಲಿದ್ದಾರೆ.
-
ಬಿಗ್ ನ್ಯೂಸ್19 hours agoVitla-ವಿಟ್ಲ: ಚಿಕ್ಕಪ್ಪನನ್ನು ಕತ್ತಿಯಿಂದ ಕಡಿದು ಹತ್ಯೆಗೈದ ಯುವತಿ ಬಂಧನ
-
ಬಿಗ್ ನ್ಯೂಸ್19 hours agoVirupaksha Bhat-ಮಹಾಲಿಂಗೇಶ್ವರ ದೇವಸ್ಥಾನದ ಕಾಮಗಾರಿಗಳಿಗೆ ಹೈಕೋರ್ಟ್ ತಡೆಯಾಜ್ಞೆ: ಅನುಮತಿಯಿಲ್ಲದ ಕಾಮಗಾರಿ, ಟೆಂಡರ್ ಪ್ರಕ್ರಿಯೆ ಮುಂದುವರಿಸದಂತೆ ಮಧ್ಯಂತರ ಆದೇಶ; ದೇವಸ್ಥಾನದ ಅಭಿವೃದ್ಧಿಗೆ ನಮ್ಮ ವಿರೋಧವಿಲ್ಲ, ನಿಯಮಬದ್ಧ ಆಡಳಿತಕ್ಕೆ ಆಗ್ರಹ : ದೂರುದಾರ ವಿರೂಪಾಕ್ಷ ಭಟ್ ಪತ್ರಿಕಾಗೋಷ್ಟಿ
-
ಅಪರಾಧ22 hours agoBantwal-ಬಂಟ್ವಾಳ: ಬ್ರಹ್ಮರಕೂಟ್ಲು ಟೋಲ್ ಪ್ಲಾಜಾದಲ್ಲಿ ಗುಂಪುಗೂಡಿ ಗಲಾಟೆ; ಟೋಲ್ ಉಪಕರಣಗಳಿಗೆ ಹಾನಿ ಯತ್ನ – ಪ್ರಕರಣ ದಾಖಲು
-
ಶಿಕ್ಷಣ23 hours agoNarendra-ನ.28 : ನರೇಂದ್ರ ಪ.ಪೂ.ಕಾಲೇಜಿನ ವಾರ್ಷಿಕೋತ್ಸವ ಸಂಭ್ರಮ “ಪ್ರತಿಭಾ ಪರ್ವ”
-
ನಿಧನ ವಾರ್ತೆ22 minutes agoBeltangadi-ಬೆಳ್ತಂಗಡಿ: ವಿಷ ಸೇವಿಸಿ ಚಿಕಿತ್ಸೆ ಫಲಿಸದೆ ಐಟಿಐ ವಿದ್ಯಾರ್ಥಿ ಸಾವು
-
ಸ್ಥಳೀಯ13 minutes agoArrested-ಕುಂಭಾಶಿ ದೇವಸ್ಥಾನದಲ್ಲಿ ವೃದ್ಧೆಯ ಚಿನ್ನದ ಸರ ಕಳವು; ತಮಿಳುನಾಡಿನ ಮೂವರು ಮಹಿಳೆಯರ ಬಂಧನ
-
ನಿಧನ ವಾರ್ತೆ2 minutes agoKolar-ಕೋಲಾರ: ಹೆದ್ದಾರಿ ಬದಿಯಲ್ಲಿ ಪಾರ್ಸೆಲ್ ರೂಪದಲ್ಲಿ ಮಹಿಳೆಯ ಮೃತದೇಹ ಪತ್ತೆ















