Connect with us

ಬಿಗ್ ನ್ಯೂಸ್

Puttur-ಪುತ್ತೂರು:‌ ಎಸ್.ಆರ್.ಕೆ. ಲ್ಯಾಡರ್ಸ್‌ನ ಮಾಲಕ ಕೇಶವ ಅಮೈ ಜನ್ಮದಿನ ಆಚರಣೆ : ಸಿಬ್ಬಂದಿ ಸಹಿತ 66 ಜನರಿಂದ ನೇತ್ರದಾನ ಪತ್ರಕ್ಕೆ ಸಹಿ – ಮಾದರಿ ಹುಟ್ಟುಹಬ್ಬ ಆಚರಣೆ

Published

on



Ad Widget

Ad Widget

Ad Widget

Ad Widget

ಮನುಷ್ಯನ ದೇಹಕ್ಕೆ ಸಾವು ಬಂದರೂ, ಕಣ್ಣುಗಳಿಗೆ ಸಾವಿಲ್ಲ ಎಂಬುದನ್ನು ಸಾರಿದ ಎಸ್.ಆರ್.ಕೆ. ಲ್ಯಾಡರ್ಸ್‌ನ ಮಾಲಕ ಕೇಶವ ಅಮೈ ಅವರ ಹುಟ್ಟುಹಬ್ಬವನ್ನು ಅವರ ಸಂಸ್ಥೆಯು ಅತ್ಯಂತ ವಿಶಿಷ್ಟ ಹಾಗೂ ಸಮಾಜಮುಖಿ ಕಾರ್ಯಕ್ರಮಗಳ ಮೂಲಕ ಆಚರಿಸಿದೆ. ನವೆಂಬರ್ 7 ರಂದು ನಡೆದ ಈ ಕಾರ್ಯಕ್ರಮದಲ್ಲಿ, ಕೇಶವ ಅಮೈ ಅವರ ಸಿಬ್ಬಂದಿ ಸಹಿತ 66 ಮಂದಿ ನೇತ್ರದಾನ ಪತ್ರಕ್ಕೆ ಸಹಿ ಹಾಕಿ, ಮತ್ತೊಬ್ಬರ ಬಾಳಿಗೆ ಬೆಳಕಾಗುವ ಸಂಕಲ್ಪ ಮಾಡಿದ್ದಾರೆ.

Ad Widget

Ad Widget

Ad Widget

Ad Widget

ಪುತ್ತೂರು, ನ. 7: ಮನುಷ್ಯನ ದೇಹಕ್ಕೆ ಸಾವು ಬಂದರೂ, ಕಣ್ಣುಗಳಿಗೆ ಸಾವಿಲ್ಲ ಎಂಬುದನ್ನು ಸಾರಿದ ಎಸ್.ಆರ್.ಕೆ. ಲ್ಯಾಡರ್ಸ್‌ನ ಮಾಲಕ ಕೇಶವ ಅಮೈ ಅವರ ಹುಟ್ಟುಹಬ್ಬವನ್ನು ಅವರ ಸಂಸ್ಥೆಯು ಅತ್ಯಂತ ವಿಶಿಷ್ಟ ಹಾಗೂ ಸಮಾಜಮುಖಿ ಕಾರ್ಯಕ್ರಮಗಳ ಮೂಲಕ ಆಚರಿಸಿದೆ. ನವೆಂಬರ್ 7 ರಂದು ನಡೆದ ಈ ಕಾರ್ಯಕ್ರಮದಲ್ಲಿ, ಕೇಶವ ಅಮೈ ಅವರ ಸಿಬ್ಬಂದಿ ಸಹಿತ 66 ಮಂದಿ ನೇತ್ರದಾನ ಪತ್ರಕ್ಕೆ ಸಹಿ ಹಾಕಿ, ಮತ್ತೊಬ್ಬರ ಬಾಳಿಗೆ ಬೆಳಕಾಗುವ ಸಂಕಲ್ಪ ಮಾಡಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ನೇತ್ರದಾನ ನೋಂದಾವಣೆ ಶಿಬಿರ:
ಕೇಶವ ಅಮೈ ಅವರ ಹುಟ್ಟುಹಬ್ಬದ ಅಂಗವಾಗಿ ಎಸ್.ಆರ್.ಕೆ. ಲ್ಯಾಡರ್ಸ್ ಸಂಸ್ಥೆಯಲ್ಲಿ ಬೆಳಗ್ಗೆ ನೇತ್ರದಾನ ನೋಂದಾವಣೆ ಶಿಬಿರವನ್ನು ಆಯೋಜಿಸಲಾಗಿತ್ತು. ಪ್ರಸಾದ್ ನೇತ್ರಾಲಯದ ಮನೋಹರ್ ಅವರು ನೋಂದಾವಣೆ ಕಾರ್ಯವನ್ನು ನಿರ್ವಹಿಸಿದರು. ನೇತ್ರದಾನಕ್ಕೆ ಮುಂದೆಬಂದ 66 ಮಂದಿ ಸಹಿದಾರರೊಂದಿಗೆ, ಇದು ಕೇಶವ ಅಮೈ ಅವರ ಹುಟ್ಟುಹಬ್ಬಕ್ಕೆ ಸಂದ ಮಹತ್ವದ ಕೊಡುಗೆಯಾಗಿದೆ.

Ad Widget

Ad Widget <> Ad Widget

ಲೋಕಾರ್ಪಣೆ ಕಾರ್ಯಕ್ರಮ
ಇದೇ ಸಂದರ್ಭದಲ್ಲಿ, ಅಡಿಕೆಯನ್ನು ಗೊನೆಯಿಂದ ಬಿಡಿಸುವ ಮತ್ತು ಕಾಳುಮೆಣಸು ಸ್ವಚ್ಛಗೊಳಿಸುವ ಯಂತ್ರಗಳ ಲೋಕಾರ್ಪಣೆ ನಡೆಯಿತು. ಮಹಿಳಾ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಝೇವಿಯರ್ ಡಿ ಸೋಜ ಅವರು ಅಡಿಕೆ ಬಿಡಿಸುವ ಯಂತ್ರವನ್ನು, ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕ ಶಿವರಾಮ ಏನೆಕಲ್ಲು ಅವರು ಕಾಳುಮೆಣಸು ಸ್ವಚ್ಛಗೊಳಿಸುವ ಯಂತ್ರವನ್ನು ಉದ್ಘಾಟಿಸಿದರು. ನಂತರ, ಬೀರುಮಲೆಯಲ್ಲಿರುವ ಪ್ರಜ್ಞಾ ಆಶ್ರಮಕ್ಕೆ ಎಸ್.ಆರ್.ಕೆ. ಲ್ಯಾಡರ್ಸ್ ವತಿಯಿಂದ ನೀಡಲಾದ ನೆಟ್ ಬೇಲಿಯನ್ನು ನಿವೃತ್ತ ಯುವಜನಸೇವಾ ಕ್ರೀಡಾಧಿಕಾರಿ ಮಾಧವ ಬಿ.ಕೆ ಅವರು ಉದ್ಘಾಟಿಸಿದರು.



Ad Widget

ಬೆಳಕು ನೀಡುವ ಸಂದೇಶ ಮಾದರಿ:
ರೋಟರಿ ಕ್ಲಬ್ ಪುತ್ತೂರಿನ ಅಧ್ಯಕ್ಷ ಡಾ. ಶ್ರೀಪ್ರಕಾಶ್ ಮಾತನಾಡಿ, “ಕೇಶವ ಅಮೈ ಅವರು ತಮ್ಮ ಹುಟ್ಟುಹಬ್ಬದಲ್ಲಿ ಬದುಕಲ್ಲಿ ಬೆಳಕು ನೀಡುವ ಸಂದೇಶ ನೀಡಿದ್ದಾರೆ. ಪ್ರಸಾದ್ ನೇತ್ರಾಲಯದ ಮೂಲಕ ದೃಷ್ಟಿ ಕೊಡುವ ನಿಟ್ಟಿನಲ್ಲಿ ನೇತ್ರದಾನದ ನೋಂದಾವಣೆ ಮಾಡುವ ಕಾರ್ಯಕ್ರಮ ಎಲ್ಲರಿಗೂ ಮಾದರಿ” ಎಂದರು. ನೇತ್ರದಾನದ ಮಹತ್ವ ಮತ್ತು ಪ್ರಕ್ರಿಯೆಗಳ ಬಗ್ಗೆಯೂ ಅವರು ಮಾಹಿತಿ ನೀಡಿದರು.

Ad Widget

Ad Widget

ಕೇಶವರ ದೂರದೃಷ್ಟಿ ಸಮಾಜಕ್ಕೆ ಆದರ್ಶ:
ರಾಜ್ಯ ಪ್ರಶಸ್ತಿ ವಿಜೇತ ಶಿಕ್ಷಕ ಸತೀಶ್ ಭಟ್ ಮಾತನಾಡಿ, ಕೇಶವ ಅಮೈ ಅವರ ದೂರದೃಷ್ಟಿ ಸಮಾಜಕ್ಕೆ ಆದರ್ಶಪ್ರಾಯವಾಗಿದೆ. ಸಮಾಜಮುಖಿ ಕಾರ್ಯಗಳ ಮೂಲಕ ಅವರು ತಮ್ಮ ಸಿಬ್ಬಂದಿಯನ್ನು ಕೂಡ ಬೆಳೆಸಿದ್ದಾರೆ ಎಂದು ಪ್ರಶಂಸಿಸಿದರು.

ಕೇಶವಣ್ಣನಿಂದ ಸಮಾಜಕ್ಕೆ ಮಾದರಿ ಕೊಡುಗೆ:
ನೇತ್ರದಾನದ ಪ್ರಥಮ ನೋಂದಾವಣೆ ಮಾಡಿಕೊಂಡ ಸುಬ್ರಹ್ಮಣ್ಯ ಲೋಕೋಪಯೋಗಿ ಇಲಾಖೆಯ ಸಹಾಯಕ ಇಂಜಿನಿಯರ್ ಪ್ರಮೋದ್ ಕೆ.ಕೆ ಮಾತನಾಡಿ, “ಕೇಶವಣ್ಣ ಅವರು ಸಮಾಜಕ್ಕೆ ಮಾದರಿ ಕೆಲಸ ಮಾಡಿ ತಮ್ಮ ಜೀವನದ ಸಾರ್ಥಕತೆಯನ್ನು ಕಂಡುಕೊಂಡಿದ್ದಾರೆ. ದೇಶದಲ್ಲಿ 18 ಲಕ್ಷ ಅಂಧರಿದ್ದು, ಅವರಲ್ಲಿ 10 ಲಕ್ಷ ಮಕ್ಕಳು. ಅವರಿಗೆ ಬೆಳಕು ನೀಡಲು ನಾವೆಲ್ಲರೂ ನೇತ್ರದಾನಕ್ಕೆ ಮುಂದಾಗಬೇಕು” ಎಂದು ಕರೆ ನೀಡಿದರು.

ಎಸ್.ಆರ್.ಕೆ. ಲ್ಯಾಡರ್ಸ್ ಮಾಲಕ ಕೇಶವ ಅಮೈ ಅವರು ಮಾತನಾಡಿ, “ಇಂತಹ ಆತ್ಮೀಯರು, ಹಿತೈಷಿಗಳು, ಮಿತ್ರರು, ಬಂಧುಗಳನ್ನು ಪಡೆದಿರುವ ನನಗೆ ಚೆನ್ನಾಗಿರುವ ಯೋಗವಿದೆ. ಹುಟ್ಟುಹಬ್ಬದ ದಿನ ಸಮಾಜಮುಖಿ ಕಾರ್ಯದ ಆಲೋಚನೆ ಟೀಮ್ ಎಸ್.ಆರ್.ಕೆ.ಯದ್ದು, ನನ್ನದಲ್ಲ. ಈ ಯೋಜನೆ, ಯೋಚನೆಯ ಶ್ರೇಯಸ್ಸು ಅವರಿಗೇ ಸಲ್ಲುತ್ತದೆ” ಎಂದರು.

ಕಾರ್ಯಕ್ರಮದಲ್ಲಿ ಕೇಶವ ಅಮೈ ಮತ್ತು ಅವರ ಸಹೋದರಿ ಶ್ರೀಲತಾ ಅವರಿಗೆ ಕೇಕ್ ಕತ್ತರಿಸುವ ಮೂಲಕ ಹುಟ್ಟುಹಬ್ಬದ ಶುಭಾಶಯ ಕೋರಲಾಯಿತು. ರಕ್ಷಿತ್ ಆಚಾರ್ಯ ಸ್ವಾಗತಿಸಿದರು, ಅಶ್ವಿನಿ ವಂದಿಸಿದರು. ಕಾರ್ಯಕ್ರಮ ಯೋಜನೆಯ ರೂವಾರಿ ದಿನೇಶ್ ಕಾರ್ಯಕ್ರಮ ನಿರೂಪಿಸಿದರು. ಕೇಶವ ಅಮೈ ಅವರ ಕುಟುಂಬ ಸದಸ್ಯರು, ಸಿಬ್ಬಂದಿ ಹಾಗೂ ಅನೇಕ ಗಣ್ಯರು ಉಪಸ್ಥಿತರಿದ್ದರು. ಈ ಮಾದರಿ ಕಾರ್ಯಕ್ರಮವು ನೇತ್ರದಾನದ ಬಗ್ಗೆ ಸಮಾಜದಲ್ಲಿ ಜಾಗೃತಿ ಮೂಡಿಸುವಲ್ಲಿ ಮಹತ್ವದ ಪಾತ್ರ ವಹಿಸಿದೆ.

Ad Widget
Click to comment

Leave a Reply

ಬಿಗ್ ನ್ಯೂಸ್

Kaavu-BIG BREAKING: ಕಾವು ಬಳಿ ಹೆದ್ದಾರಿಗೆ ಉರುಳಿದ ಮರಗಳು, ಹೈಟೆನ್ಷನ್ ವಿದ್ಯುತ್ ಕಂಬ : ಮಾಣಿ – ಮೈಸೂರು ಹೈವೆಯಲ್ಲಿ ವಾಹನ ಸಂಚಾರ ಸ್ಥಗಿತ

Published

on



Ad Widget

Ad Widget

Ad Widget

Ad Widget

ಭಾರೀ ಗಾಳಿ ಮಳೆಗೆ ಮಾಣಿ–ಮೈಸೂರು ಹೆದ್ದಾರಿಯ ಕಾವು ಬಳಿ ಮರ ಹಾಗೂ ಹೈಟೆನ್ಷನ್ ವಿದ್ಯುತ್ ಕಂಬ ರಸ್ತೆಗೆ ಉರುಳಿಬಿದ್ದ ಪರಿಣಾಮ ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ಇದರಿಂದ ಸುಳ್ಯ, ಮಡಿಕೇರಿ ಹಾಗೂ ಮೈಸೂರು ಕಡೆಗೆ ತೆರಳುವ ವಾಹನ ಸವಾರರು ತೊಂದರೆ ಅನುಭವಿಸುವಂತಾಗಿದೆ.

Ad Widget

Ad Widget

Ad Widget

Ad Widget

ಪುತ್ತೂರು: ಭಾರೀ ಗಾಳಿ ಮಳೆಗೆ ಮಾಣಿ–ಮೈಸೂರು ಹೆದ್ದಾರಿಯ ಕಾವು ಬಳಿ ಮರ ಹಾಗೂ ಹೈಟೆನ್ಷನ್ ವಿದ್ಯುತ್ ಕಂಬ ರಸ್ತೆಗೆ ಉರುಳಿಬಿದ್ದ ಪರಿಣಾಮ ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ಇದರಿಂದ ಸುಳ್ಯ, ಮಡಿಕೇರಿ ಹಾಗೂ ಮೈಸೂರು ಕಡೆಗೆ ತೆರಳುವ ವಾಹನ ಸವಾರರು ತೊಂದರೆ ಅನುಭವಿಸುವಂತಾಗಿದೆ.

Ad Widget

Ad Widget

Ad Widget alt="Ad Widget"/>

Ad Widget

ಶುಕ್ರವಾರ (ಅ. 9) ಮಧ್ಯಾಹ್ನ ಸುಮಾರು 4 ಗಂಟೆಗೆ ಕಾವು ಪರಿಸರದಲ್ಲಿ ಭಾರೀ ಗಾಳಿ ಮಳೆಯಾಗಿದೆ. ಈ ವೇಳೆ ಮರ ಹಾಗೂ ವಿದ್ಯುತ್ ಕಂಬ ಹೆದ್ದಾರಿಗೆ ಅಡ್ಡಲಾಗಿ ಬಿದ್ದಿದ್ದು, ಮಡ್ಯಂಗಳ , ಮದ್ಲ ಎಂಬಲ್ಲಿ ಹಲವು ಮರಗಳು ಧರೆಗುರುಳಿವೆ. ಪೆರಿಗೇರಿ ರಸ್ತೆಯಲ್ಲೂ ಒಂದು ಮರ ಧರೆಗುರುಳಿದೆ ಜೊತೆಗೆ ವಿದ್ಯುತ್ ತಂತಿಗಳೂ ರಸ್ತೆಗೆ ಬಿದ್ದಿವೆ. ಇದರಿಂದ ಈ ಮಾರ್ಗದಲ್ಲಿ ವಾಹನ ಸಂಚಾರಕ್ಕೆ ಅಡ್ಡಿಯುಂಟಾಗಿದೆ.

Ad Widget

Ad Widget <> Ad Widget

ಸ್ಥಳೀಯರ ನೆರವಿನೊಂದಿಗೆ ಮೆಸ್ಕಾಂ, ತಾಲೂಕು ಆಡಳಿತ ಹಾಗೂ ಅರಣ್ಯ ಇಲಾಖೆಯ ಸಿಬ್ಬಂದಿ ಮರ, ವಿದ್ಯುತ್ ಕಂಬ ಮತ್ತು ತಂತಿಗಳನ್ನು ತೆರವುಗೊಳಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಪುತ್ತೂರು ಗ್ರಾಮಾಂತರ ಠಾಣೆಯ ಪೊಲೀಸರು ಸ್ಥಳದಲ್ಲಿ ಸಂಚಾರ ನಿಯಂತ್ರಿಸುತ್ತಿದ್ದಾರೆ.



Ad Widget

ತೆರವು ಕಾರ್ಯಾಚರಣೆಗೆ ಸುಮಾರು 3ರಿಂದ 4 ಗಂಟೆಗಳ ಕಾಲ ಬೇಕಾಗುವ ಸಾಧ್ಯತೆಯಿದ್ದು, ಪುತ್ತೂರಿನಿಂದ ಮೈಸೂರು ಕಡೆಗೆ ತೆರಳುವ ವಾಹನ ಸವಾರರು ಪರ್ಯಾಯ ಮಾರ್ಗ ಬಳಸುವಂತೆ ಪುತ್ತೂರು ಗ್ರಾಮಾಂತರ ಠಾಣೆಯ ಎಸ್ಐ ಸುಷ್ಮಾ ಭಂಡಾರಿ ತಿಳಿಸಿದ್ದಾರೆ.

Ad Widget

Ad Widget

ಪರ್ಯಾಯ ಮಾರ್ಗ: ಪುತ್ತೂರಿನಿಂದ ಬೆಳ್ಳಾರೆ ಮಾರ್ಗವಾಗಿ ಸುಳ್ಯ ತಲುಪಿ ಅಲ್ಲಿಂದ ಮೈಸೂರು ಕಡೆಗೆ ಪ್ರಯಾಣಿಸಬಹುದು ಎಂದು ಅವರು ಮಾಹಿತಿ ನೀಡಿದ್ದಾರೆ.

Ad Widget
Continue Reading

ಮಂಗಳೂರು

MRPL accident-MRPL ಅವಘಡದಲ್ಲಿ ಮೃತಪಟ್ಟ ಕರ್ಕಡ ಕುಟುಂಬಕ್ಕೆ EPFO ಕ್ಲೈಮ್ ಸಂದಾಯ

Published

on



Ad Widget

Ad Widget

Ad Widget

Ad Widget

MRPL ಕಾರ್ಮಿಕರ ಭವಿಷ್ಯ ನಿಧಿ ಸಂಘಟನೆ (EPFO), ಮಂಗಳೂರು ಪ್ರಾದೇಶಿಕ ಕಚೇರಿಯು, 30.09.2026 ರಂದು ಮಂಗಳೂರು ಪೆಟ್ರೋಕೆಮಿಕಲ್ಸ್ ಲಿಮಿಟೆಡ್ ನಲ್ಲಿ ಸಂಭವಿಸಿದ ಕೈಗಾರಿಕಾ ಅಪಘಾತದಲ್ಲಿ ಮರಣ ಹೊಂದಿದ ಭವಿಷ್ಯ ನಿಧಿ ಚಂದಾದಾರರಾದ ದಿವಂಗತ ಮನೀಶ್ ಕರ್ಕಡ ಅವರ ಕುಟುಂಬದ ಅವಲಂಬಿತರ ಸಾಮಾಜಿಕ ಭದ್ರತಾ ಸೌಲಭ್ಯಗಳ ಕ್ಷೇಮುಗಳನ್ನು ತ್ವರಿತವಾಗಿ ಇತ್ಯರ್ಥಪಡಿಸಲಾಗಿದೆ.

Ad Widget

Ad Widget

Ad Widget

Ad Widget

ಮಂಗಳೂರು : MRPL ಕಾರ್ಮಿಕರ ಭವಿಷ್ಯ ನಿಧಿ ಸಂಘಟನೆ (EPFO), ಮಂಗಳೂರು ಪ್ರಾದೇಶಿಕ ಕಚೇರಿಯು, 30.09.2026 ರಂದು ಮಂಗಳೂರು ಪೆಟ್ರೋಕೆಮಿಕಲ್ಸ್ ಲಿಮಿಟೆಡ್ ನಲ್ಲಿ ಸಂಭವಿಸಿದ ಕೈಗಾರಿಕಾ ಅಪಘಾತದಲ್ಲಿ ಮರಣ ಹೊಂದಿದ ಭವಿಷ್ಯ ನಿಧಿ ಚಂದಾದಾರರಾದ ದಿವಂಗತ ಮನೀಶ್ ಕರ್ಕಡ ಅವರ ಕುಟುಂಬದ ಅವಲಂಬಿತರ ಸಾಮಾಜಿಕ ಭದ್ರತಾ ಸೌಲಭ್ಯಗಳ ಕ್ಷೇಮುಗಳನ್ನು ತ್ವರಿತವಾಗಿ ಇತ್ಯರ್ಥಪಡಿಸಲಾಗಿದೆ.

Ad Widget

Ad Widget

Ad Widget alt="Ad Widget"/>

Ad Widget

ಕಾರ್ಮಿಕರ ಭವಿಷ್ಯ ನಿಧಿ ಸಂಘಟನೆ (EPFO) ವತಿಯಿಂದ ಕುಟುಂಬಕ್ಕೆ ಪಾವತಿಸಬೇಕಾದ ಉದ್ಯೋಗಿಗಳ ಭವಿಷ್ಯ ನಿಧಿ ಹಾಗೂ ಉದ್ಯೋಗಿಗಳ ಠೇವಣಿ ಆಧಾರಿತ ವಿಮಾ ಸೌಲಭ್ಯಗಳ ಕ್ಷೇಮುಗಳನ್ನು ಇತ್ಯರ್ಥಪಡಿಸಲಾಗಿದೆ.

Ad Widget

Ad Widget <> Ad Widget

ಇದರೊಂದಿಗೆ ಉದ್ಯೋಗಿಗಳ ಪಿಂಚಣಿ ಯೋಜನೆ 2026ರ ಅಡಿಯಲ್ಲಿ, ಮಾಸಿಕ ಪಿಂಚಣಿಯನ್ನೂ ಮಂಜೂರು ಮಾಡಿ ಪಾವತಿ ಪ್ರಾರಂಭಿಸಲಾಗಿದೆ. ಈ ಎಲ್ಲಾ ಸೌಲಭ್ಯಗಳನ್ನು 08.10.2026 ರಂದು ಇತ್ಯರ್ಥಪಡಿಸಿ ಜಾರಿಗೊಳಿಸಲಾಗಿದೆ ಹಾಗೂ ಮೊತ್ತವನ್ನು ಪಾವತಿಸಲಾಗಿದೆ.



Ad Widget

ದುಃಖತಪ್ತ ಕುಟುಂಬಕ್ಕೆ ಸಂತಾಪ ಹಾಗೂ ಸಾಂತ್ವನ ಸಲ್ಲಿಸುವ ಉದ್ದೇಶದಿಂದ, ಪ್ರಾದೇಶಿಕ ಭವಿಷ್ಯ ನಿಧಿ ಆಯುಕ್ತರಾದ ಸಂದೀಪ್ ಬಿಸ್ವಾಸ್ ಅವರು, ಸಹಾಯಕ ಭವಿಷ್ಯ ನಿಧಿ ಆಯುಕ್ತರಾದ ಅಂಕಿತ್ ಸಿಂಗ್ ಹಾಗೂ ಪ್ರವರ್ತನಾಧಿಕಾರಿಯಾದ ಶ್ರೀಮತಿ ಅನಿತಾ ಆರ್ ಅವರೊಂದಿಗೆ 09.10.2026 ರಂದು ದಿವಂಗತ ಶ್ರೀ ಮನೀಶ್ ಕರ್ಕಡ ಅವರ ನಿವಾಸಕ್ಕೆ ಭೇಟಿ ನೀಡಿ, ಫಲಾನುಭವಿಗೆ ಪಿಂಚಣಿ ಪಾವತಿ ಆದೇಶವನ್ನು (PPO) ಹಸ್ತಾಂತರಿಸಿದರು. ಈ ಭೇಟಿಯು ಸಂಕಷ್ಟದ ಸಂದರ್ಭದಲ್ಲಿ ತನ್ನ ಸದಸ್ಯರ ಕುಟುಂಬಗಳೊಂದಿಗೆ ನಿಲ್ಲುವ EPFO ಸಂಸ್ಥೆಯ ಮಾನವೀಯ ಕಾಳಜಿ ಮತ್ತು ಬದ್ಧತೆಯನ್ನು ಪ್ರತಿಬಿಂಬಿಸುತ್ತದೆ.

Ad Widget

Ad Widget

ಅನಿರೀಕ್ಷಿತ ದುರಂತಗಳ ಸಂದರ್ಭದಲ್ಲಿ ತನ್ನ ಸದಸ್ಯರ ಕುಟುಂಬಗಳಿಗೆ ಸಲ್ಲಬೇಕಾದ ಸಾಮಾಜಿಕ ಭದ್ರತಾ ಸೌಲಭ್ಯಗಳನ್ನು ಸಕಾಲದಲ್ಲಿ ಒದಗಿಸುವುದು EPFO ಸಂಸ್ಥೆಯ ಬದ್ಧತೆಯಾಗಿದೆ ಎಂಬುದನ್ನು ಈ ತ್ವರಿತ ಇತ್ಯರ್ಥವು ಮತ್ತೊಮ್ಮೆ ದೃಢಪಡಿಸಿದೆ.

EPFO ಸಂಸ್ಥೆಯು ಮೃತ ಸದಸ್ಯರ ಕುಟುಂಬಕ್ಕೆ ತನ್ನ ತೀವ್ರ ಸಂತಾಪವನ್ನು ವ್ಯಕ್ತಪಡಿಸುತ್ತಿದ್ದು, ಈ ಕಷ್ಟದ ಸಮಯದಲ್ಲಿ ಅಗತ್ಯವಿರುವ ಎಲ್ಲಾ ರೀತಿಯ ನೆರವು ನೀಡಲು ಬದ್ಧವಾಗಿದೆ.

Ad Widget
Continue Reading

ಮಂಗಳೂರು

Mangalore-ಮಂಗಳೂರು : 2 ತಿಂಗಳ ಬಳಿಕ ಸಮಾಧಿಯಿಂದ ಹೊರಬರಲಿದೆ ಆಲ್ಬರ್ಟ್ ರೇಗೋ ಶವ..!; ಮಗಳಿಂದಲೇ ತಂದೆಯ ಕೊಲೆ : ಸ್ನೇಹಿತನ ಆರೋಪ – ತನಿಖೆಗೆ ಸಿಗಲಿದೆ ಮಹತ್ವದ ತಿರುವು

Published

on



Ad Widget

Ad Widget

Ad Widget

Ad Widget

ಎರಡು ತಿಂಗಳ ಹಿಂದೆ ಮೃತಪಟ್ಟ ವ್ಯಕ್ತಿಯ ಸಾವಿನ ಸುತ್ತ ಅನುಮಾನದ ಹುತ್ತ ಬೆಳೆದಿದ್ದು, ಇದೀಗ ಹೂತು ಹಾಕಿದ್ದ ಶವವನ್ನೇ ಹೊರತೆಗೆದು ಪರೀಕ್ಷೆ ನಡೆಸಲು ಪೊಲೀಸರು ಮುಂದಾಗಿದ್ದಾರೆ ಎಂಬ ಮಾಹಿತಿ ಎಲ್ಲೆಡೆ ಹರಡಿದೆ. ಆಸ್ತಿ ವಿವಾದದ ಹಿನ್ನೆಲೆಯಲ್ಲಿ ಮಗಳೇ ತಂದೆಯ ಕೊಲೆಗೆ ಸಂಚು ರೂಪಿಸಿದ್ದಾರೆ ಎಂಬ ಆರೋಪ ಕೇಳಿಬಂದಿರುವ ಈ ಪ್ರಕರಣ ಮಂಗಳೂರಿನಲ್ಲಿ ತೀವ್ರ ಕುತೂಹಲ ಮೂಡಿಸಿದೆ.

Ad Widget

Ad Widget

Ad Widget

Ad Widget

ಮಂಗಳೂರು, ಅ 9: ಎರಡು ತಿಂಗಳ ಹಿಂದೆ ಮೃತಪಟ್ಟ ವ್ಯಕ್ತಿಯ ಸಾವಿನ ಸುತ್ತ ಅನುಮಾನದ ಹುತ್ತ ಬೆಳೆದಿದ್ದು, ಇದೀಗ ಹೂತು ಹಾಕಿದ್ದ ಶವವನ್ನೇ ಹೊರತೆಗೆದು ಪರೀಕ್ಷೆ ನಡೆಸಲು ಪೊಲೀಸರು ಮುಂದಾಗಿದ್ದಾರೆ ಎಂಬ ಮಾಹಿತಿ ಎಲ್ಲೆಡೆ ಹರಡಿದೆ. ಆಸ್ತಿ ವಿವಾದದ ಹಿನ್ನೆಲೆಯಲ್ಲಿ ಮಗಳೇ ತಂದೆಯ ಕೊಲೆಗೆ ಸಂಚು ರೂಪಿಸಿದ್ದಾರೆ ಎಂಬ ಆರೋಪ ಕೇಳಿಬಂದಿರುವ ಈ ಪ್ರಕರಣ ಮಂಗಳೂರಿನಲ್ಲಿ ತೀವ್ರ ಕುತೂಹಲ ಮೂಡಿಸಿದೆ.

Ad Widget

Ad Widget

Ad Widget alt="Ad Widget"/>

Ad Widget

ಮಂಗಳೂರಿನ ಕೊಟ್ಟಾರ ಫಸ್ಟ್ ಕ್ರಾಸ್ ನಿವಾಸಿ ಆಲ್ಬರ್ಟ್ ರೇಗೋ (Albert Rego) ಅವರು ಕಳೆದ ಜುಲೈ 19ರಂದು ಸಂಶಯಾಸ್ಪದ ರೀತಿಯಲ್ಲಿ ಮೃತಪಟ್ಟಿದ್ದರು. ಅವರ ಸಾವಿನ ಬಳಿಕ ಮರಣೋತ್ತರ ಪರೀಕ್ಷೆ ನಡೆಸದೆ ಅಂತ್ಯಕ್ರಿಯೆ ನೆರವೇರಿಸಲಾಗಿದೆ ಎಂಬ ಆರೋಪ ಪ್ರಕರಣಕ್ಕೆ ಹೊಸ ತಿರುವು ನೀಡಿದೆ. ಇದೀಗ ಕುಂಟಿಕಾನ ಸಮೀಪದ ದೇರೆಬೈಲ್ ಚರ್ಚ್ ಆವರಣದ ದಫನ ಭೂಮಿಯಲ್ಲಿ ಹೂತು ಹಾಕಿರುವ ಅವರ ಶವವನ್ನು ಹೊರತೆಗೆದು ವಿಧಿವಿಜ್ಞಾನ ಪ್ರಯೋಗಾಲಯದ (ಎಫ್‌ಎಸ್‌ಎಲ್) ತಜ್ಞರ ನೆರವಿನಿಂದ ಪರಿಶೀಲಿಸಲು ಪೊಲೀಸರು ಸಿದ್ಧತೆ ನಡೆಸಿದ್ದಾರೆ ಎನ್ನಲಾಗಿದೆ.

Ad Widget

Ad Widget <> Ad Widget

ಸ್ನೇಹಿತನ ದೂರಿನಿಂದ ಬಯಲಿಗೆ ಬಂದ ಅನುಮಾನ



Ad Widget

ಆಲ್ಬರ್ಟ್ ರೇಗೋ ಅವರ ಸಾವಿನ ಕುರಿತು ಅನುಮಾನ ವ್ಯಕ್ತಪಡಿಸಿದ ಅವರ ಸ್ನೇಹಿತ ಹೆರಾಲ್ಡ್ ಪಿರೇರಾ ಅವರು ಉರ್ವಾ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಸಾವಿನ ಬಗ್ಗೆ ಸ್ಥಳೀಯರಿಗೆ ಹಾಗೂ ಕುಟುಂಬದ ಇತರ ಸದಸ್ಯರಿಗೆ ಮಾಹಿತಿ ನೀಡದೆ, ಆಪ್ತರ ಮೂಲಕ ಮಗಳು ಮಾಯಾ ರೇಗೋ ಅಂತ್ಯಕ್ರಿಯೆ ನಡೆಸಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಈ ಹಿನ್ನೆಲೆಯಲ್ಲಿ ಮಾಯಾ ರೇಗೋ ಸೇರಿದಂತೆ ಇತರರ ವಿರುದ್ಧ ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದರು.

Ad Widget

Ad Widget

ಆಸ್ತಿಗಾಗಿ ಕಿರುಕುಳ ನೀಡಿದ್ದ ಆರೋಪ

ಆಲ್ಬರ್ಟ್ ರೇಗೋ ಅವರು ಹಿಂದೆ ವಿದೇಶದಲ್ಲಿ ಉದ್ಯೋಗದಲ್ಲಿದ್ದು, ಸಾಕಷ್ಟು ಆಸ್ತಿ ಸಂಪಾದಿಸಿದ್ದರು ಎನ್ನಲಾಗಿದೆ. ಅವರ ಇಬ್ಬರು ಮಕ್ಕಳು ಬೇರೆ ಬೇರೆ ಕಡೆ ನೆಲೆಸಿದ್ದರೆ, ಮಾಯಾ ರೇಗೋ ಮಾತ್ರ ಅವರೊಂದಿಗೆ ವಾಸವಾಗಿದ್ದರು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಮಗಳು ನಿರಂತರವಾಗಿ ಕಿರುಕುಳ ನೀಡುತ್ತಿದ್ದು, ಬಲವಂತವಾಗಿ ಆಸ್ತಿಯನ್ನು ತನ್ನ ಹೆಸರಿಗೆ ವರ್ಗಾಯಿಸಿಕೊಳ್ಳಲು ಯತ್ನಿಸಿದ್ದಾಳೆ ಎಂಬುದು ದೂರುದಾರರ ಆರೋಪ. ತನಗೆ ಹಲ್ಲೆ ನಡೆಸಿ ಕಿರುಕುಳ ನೀಡುತ್ತಿರುವ ಬಗ್ಗೆ ಆಲ್ಬರ್ಟ್ ಅವರು ಸ್ನೇಹಿತರ ಬಳಿ ಹೇಳಿಕೊಂಡಿದ್ದರು. ತನಗೇನಾದರೂ ಅನಾಹುತ ಸಂಭವಿಸಿದರೆ ಅದಕ್ಕೆ ಮಗಳ ಕಿರುಕುಳವೇ ಕಾರಣವಾಗಬಹುದು ಎಂಬ ಆತಂಕವನ್ನೂ ವ್ಯಕ್ತಪಡಿಸಿದ್ದರು ಎಂದು ಹೆರಾಲ್ಡ್ ಪಿರೇರಾ ದೂರಿನಲ್ಲಿ ತಿಳಿಸಿದ್ದಾರೆ.

ಮಾದಕ ವ್ಯಸನದ ಆರೋಪವನ್ನೂ ಮಾಯಾ ರೇಗೋ ವಿರುದ್ಧ ಮಾಡಲಾಗಿದ್ದು, ಹಣ ಮತ್ತು ಆಸ್ತಿಯ ವಿಚಾರವಾಗಿ ಇತರರ ನೆರವಿನಿಂದ ತಂದೆಯನ್ನು ಕೊಲೆ ಮಾಡಲಾಗಿದೆ ಎಂಬ ಗಂಭೀರ ಆರೋಪವನ್ನು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಈ ಕೃತ್ಯಕ್ಕೆ ಬೋಂದೆಲ್‌ನ ವೈದ್ಯರೊಬ್ಬರು ಹಾಗೂ ಪೊಲೀಸ್ ಪೇದೆಯೊಬ್ಬರು ಸಹಕರಿಸಿದ್ದಾರೆ ಎಂದೂ ಆರೋಪಿಸಲಾಗಿದೆ. ಆದರೆ, ಈ ಆರೋಪಗಳು ತನಿಖೆಯಿಂದ ದೃಢಪಡಬೇಕಿದೆ.

ಅಸ್ಥಿಪಂಜರದ ಪರೀಕ್ಷೆಯಿಂದ ಸಿಗಲಿದೆಯೇ ಸುಳಿವು?

ಪ್ರಕರಣದ ತನಿಖೆಯಲ್ಲಿ ವಿವಿಧ ಸಾಕ್ಷ್ಯಗಳನ್ನು ಸಂಗ್ರಹಿಸಿರುವ ಪೊಲೀಸರು, ಇದೀಗ ಸಾವಿನ ನೈಜ ಕಾರಣ ಪತ್ತೆಹಚ್ಚಲು ಹೂತು ಹಾಕಿರುವ ಶವವನ್ನು ಹೊರತೆಗೆಯುವ ನಿರ್ಧಾರ ಕೈಗೊಂಡಿದ್ದಾರೆ. ದೇರೆಬೈಲ್ ಚರ್ಚ್ ಆವರಣದ ದಫನ ಭೂಮಿಯಲ್ಲಿ ಪೊಲೀಸರು ಹಾಗೂ ಎಫ್‌ಎಸ್‌ಎಲ್ ತಜ್ಞರು ಸ್ಥಳಕ್ಕೆ ಆಗಮಿಸಿ ಪ್ರಕ್ರಿಯೆಗೆ ಮುಂದಾಗಿದ್ದಾರೆ.

ಮಾಯಾ ರೇಗೋ ಹಾಗೂ ದೂರುದಾರರ ಸಮ್ಮುಖದಲ್ಲಿ ಅಸ್ಥಿಪಂಜರವನ್ನು ಹೊರತೆಗೆದು ವಿಧಿವಿಜ್ಞಾನ ಪರೀಕ್ಷೆಗೆ ಒಳಪಡಿಸುವ ಪ್ರಕ್ರಿಯೆ ನಡೆಯಲಿದೆ ಎಂದು ತಿಳಿದುಬಂದಿದೆ.

ಎರಡು ತಿಂಗಳ ಹಿಂದೆ ನಡೆದ ಸಾವು ಕೊಲೆ ಕೃತ್ಯವೇ? ಸಾವಿನ ಹಿಂದಿದೆಯಾ ಆಸ್ತಿ ವಿವಾದ ? ಎಂಬ ಪ್ರಶ್ನೆಗಳಿಗೆ ವಿಧಿವಿಜ್ಞಾನ ಪರೀಕ್ಷೆ ಮತ್ತು ಪೊಲೀಸ್ ತನಿಖೆಯಿಂದ ಉತ್ತರ ಸಿಗಬೇಕಿದೆ. ಸದ್ಯ ಪ್ರಕರಣದ ಆರೋಪಗಳು ತನಿಖಾ ಹಂತದಲ್ಲಿದ್ದು, ಪರೀಕ್ಷೆಯ ವರದಿ ಹಾಗೂ ಮುಂದಿನ ತನಿಖೆ ನಿರ್ಣಾಯಕವಾಗಲಿವೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading