Connect with us

ಬಿಗ್ ನ್ಯೂಸ್

Puttur-ಪುತ್ತೂರು: ಹೈಕೋರ್ಟ್ ತಡೆ ನಡುವೆಯೂ ನಗರಸಭೆಗೆ ಆಡಳಿತಾಧಿಕಾರಿ ನೇಮಕ; ಜಿಲ್ಲಾಧಿಕಾರಿಗೆ ಜವಾಬ್ದಾರಿ

Published

on

Ad Widget

Ad Widget

Ad Widget

Ad Widget

ಚುನಾಯಿತ ಕೌನ್ಸಿಲ್ ಅವಧಿ ಮುಕ್ತಾಯಗೊಂಡಿರುವ ಹಿನ್ನೆಲೆಯಲ್ಲಿ, ಪುತ್ತೂರು ನಗರಸಭೆ ಸೇರಿದಂತೆ ರಾಜ್ಯದ 118 ಸ್ಥಳೀಯ ಸಂಸ್ಥೆಗಳಿಗೆ ಸರ್ಕಾರ ಆಡಳಿತಾಧಿಕಾರಿಗಳನ್ನು ನೇಮಕಗೊಳಿಸಿದೆ. ಪುತ್ತೂರು ನಗರಸಭೆಗೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯವರನ್ನು ನವೆಂಬರ್ 3 ರಿಂದ ಅನ್ವಯವಾಗುವಂತೆ ಆಡಳಿತಾಧಿಕಾರಿಯಾಗಿ ನೇಮಿಸಿ ನಗರಾಭಿವೃದ್ಧಿ ಇಲಾಖೆ ನವೆಂಬರ್ 6 ರಂದು ಆದೇಶ ಹೊರಡಿಸಿದೆ.

Ad Widget

Ad Widget

Ad Widget

Ad Widget

ಪುತ್ತೂರು, ನ.07: ಚುನಾಯಿತ ಕೌನ್ಸಿಲ್ ಅವಧಿ ಮುಕ್ತಾಯಗೊಂಡಿರುವ ಹಿನ್ನೆಲೆಯಲ್ಲಿ, ಪುತ್ತೂರು ನಗರಸಭೆ ಸೇರಿದಂತೆ ರಾಜ್ಯದ 118 ಸ್ಥಳೀಯ ಸಂಸ್ಥೆಗಳಿಗೆ ಸರ್ಕಾರ ಆಡಳಿತಾಧಿಕಾರಿಗಳನ್ನು ನೇಮಕಗೊಳಿಸಿದೆ. ಪುತ್ತೂರು ನಗರಸಭೆಗೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯವರನ್ನು ನವೆಂಬರ್ 3 ರಿಂದ ಅನ್ವಯವಾಗುವಂತೆ ಆಡಳಿತಾಧಿಕಾರಿಯಾಗಿ ನೇಮಿಸಿ ನಗರಾಭಿವೃದ್ಧಿ ಇಲಾಖೆ ನವೆಂಬರ್ 6 ರಂದು ಆದೇಶ ಹೊರಡಿಸಿದೆ. ಆದರೆ, ಪುತ್ತೂರು ನಗರಸಭೆಗೆ ಆಡಳಿತಾಧಿಕಾರಿ ನೇಮಕ ಮಾಡದಂತೆ ಕರ್ನಾಟಕ ಹೈಕೋರ್ಟ್ ಮಧ್ಯಂತರ ಆದೇಶ ನೀಡಿದ್ದರೂ, ಸರ್ಕಾರ ಈ ಕ್ರಮಕ್ಕೆ ಮುಂದಾಗಿದೆ.

Ad Widget

Ad Widget

Ad Widget alt="Ad Widget"/>

Ad Widget

ಹೈಕೋರ್ಟ್ ಮಧ್ಯಂತರ ತಡೆ ಆದೇಶ:
ಪುತ್ತೂರು ನಗರಸಭೆಯ ಹಾಲಿ ಅಧ್ಯಕ್ಷೆ ಲೀಲಾವತಿ ಅಣ್ಣುನಾಯ್ಕ, ಉಪಾಧ್ಯಕ್ಷ ಬಾಲಚಂದ್ರ ಕೆಮ್ಮಿಂಜೆ ಮತ್ತು ಸದಸ್ಯರಾದ ಜೀವಂಧರ್ ಜೈನ್ ಹಾಗೂ ಭಾಮಿ ಅಶೋಕ್ ಶೆಣೈ ಅವರು ತಮ್ಮ ಅಧಿಕಾರಾವಧಿ ಮುಗಿಯುವ ಮೊದಲೇ ಆಡಳಿತಾಧಿಕಾರಿ ನೇಮಕಕ್ಕೆ ರಾಜ್ಯ ಚುನಾವಣಾ ಆಯೋಗ ನಿರ್ದೇಶನ ನೀಡಿರುವುದನ್ನು ಪ್ರಶ್ನಿಸಿ ಹೈಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ನಡೆಸಿದ್ದ ನ್ಯಾಯಮೂರ್ತಿ ಆರ್. ನಟರಾಜ್ ಅವರಿದ್ದ ಏಕಸದಸ್ಯ ನ್ಯಾಯಪೀಠ, ಮುಂದಿನ ಆದೇಶದವರೆಗೆ ಪುತ್ತೂರು ನಗರಸಭೆಗೆ ಆಡಳಿತಾಧಿಕಾರಿ ನೇಮಕ ಮಾಡದಂತೆ ಮಧ್ಯಂತರ ತಡೆ ನೀಡಿತ್ತು.

Ad Widget

Ad Widget <> Ad Widget

ಆಡಳಿತಾಧಿಕಾರಿ ನೇಮಕಕ್ಕೆ ಕಾರಣ ಮತ್ತು ವಿವಾದ:
ಪುತ್ತೂರು ನಗರಸಭೆಗೆ 2018ರ ಸೆಪ್ಟೆಂಬರ್ 3ರಂದು ಚುನಾವಣೆ ನಡೆದಿತ್ತು. ಆದರೆ, ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ವಿಳಂಬವಾಗಿದ್ದರಿಂದ ಸುಮಾರು 16 ತಿಂಗಳ ಕಾಲ ಆಡಳಿತಾಧಿಕಾರಿಗಳೇ ಆಡಳಿತ ನಡೆಸಿದ್ದರು. ಎರಡನೇ ಅವಧಿಗೆ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆ 2024ರ ಸೆಪ್ಟೆಂಬರ್ 3 ರಂದು ನಡೆದಿತ್ತು. ಆದರೆ, 2020ರ ನವೆಂಬರ್ 2ರಂದು ನಡೆದ ಪ್ರಥಮ ಸಭೆಯ ಲೆಕ್ಕಾಚಾರದಲ್ಲಿ 5 ವರ್ಷಗಳ ಅವಧಿ ಪೂರ್ಣಗೊಂಡಿದೆ ಎಂದು ಪರಿಗಣಿಸಿ ಚುನಾವಣಾ ಆಯೋಗವು ಆಡಳಿತಾಧಿಕಾರಿ ನೇಮಕಕ್ಕೆ ನಿರ್ದೇಶನ ನೀಡಿತ್ತು. ಆಡಳಿತಾಧಿಕಾರಿಗಳು ಆಡಳಿತ ನಡೆಸಿದ ಅವಧಿಯನ್ನು 5 ವರ್ಷದ ಅಧಿಕಾರಾವಧಿಗೆ ಪರಿಗಣಿಸಬಾರದು, ತಮ್ಮ ಅಧಿಕಾರಾವಧಿ ಮುಗಿಯುವವರೆಗೂ ಆಡಳಿತಾಧಿಕಾರಿ ನೇಮಕಕ್ಕೆ ಅವಕಾಶ ನೀಡಬಾರದು ಎಂದು ಅರ್ಜಿದಾರರು ವಾದಿಸಿದ್ದರು.

Ad Widget

ಮೀಸಲಾತಿ ಅಧಿಸೂಚನೆಗೆ 150 ದಿನಗಳ ಅಗತ್ಯ: ಸರ್ಕಾರದ ಹೇಳಿಕೆ
ರಾಜ್ಯದ 180ಕ್ಕೂ ಹೆಚ್ಚು ನಗರ ಸ್ಥಳೀಯ ಸಂಸ್ಥೆಗಳ ವಾರ್ಡ್‌ವಾರು ಮೀಸಲಾತಿಯ ಅಂತಿಮ ಅಧಿಸೂಚನೆ ಹೊರಡಿಸಲು ಕನಿಷ್ಠ 150 ದಿನಗಳು ಬೇಕಾಗುತ್ತವೆ ಎಂದು ರಾಜ್ಯ ಸರ್ಕಾರ ಹೈಕೋರ್ಟ್‌ಗೆ ತಿಳಿಸಿದೆ. ವಾರ್ಡ್ ಮರು ವಿಂಗಡಣೆ, ಕರಡು ಅಧಿಸೂಚನೆ, ಆಕ್ಷೇಪಣೆ ಆಹ್ವಾನ ಮತ್ತು ಇತ್ಯರ್ಥಕ್ಕೆ ಈ ಸಮಯ ಅಗತ್ಯವಿದೆ ಎಂದು ಸರ್ಕಾರ ವಿವರಿಸಿದೆ.

Ad Widget

Ad Widget

ಮಿತಿಗಿಂತ ಹೆಚ್ಚು ಆಡಳಿತಾಧಿಕಾರಿ ನೇಮಕ ಸಂವಿಧಾನಬಾಹಿರ: ಚುನಾವಣಾ ಆಯೋಗ
ರಾಜ್ಯ ಚುನಾವಣಾ ಆಯೋಗದ ಪರ ವಕೀಲ ಕೆ.ಎನ್. ಫಣೀಂದ್ರ ಅವರು, “ಸ್ಥಳೀಯ ಸಂಸ್ಥೆಗಳಿಗೆ ಕಾಲಮಿತಿಯೊಳಗೆ ಚುನಾವಣೆ ನಡೆಸಬೇಕು. ಮಿತಿಗಿಂತ ಹೆಚ್ಚು ಅವಧಿಗೆ ಆಡಳಿತಾಧಿಕಾರಿಗಳನ್ನು ನೇಮಿಸುವುದು ಸಂವಿಧಾನ ಮತ್ತು ಕಾಯ್ದೆಗೆ ವಿರುದ್ಧವಾಗಿದೆ” ಎಂದು ವಾದಿಸಿದ್ದರು. ಚುನಾವಣಾ ಪ್ರಕ್ರಿಯೆ ನಡೆಯುತ್ತಿರುವಾಗಲೇ ಮತದಾರರ ಪಟ್ಟಿ ತಯಾರಿಸಲು ಅನುಮತಿ ನೀಡುವಂತೆ ಆಯೋಗವು ಮನವಿ ಮಾಡಿದೆ.

ಮುಂದಿನ ವಿಚಾರಣೆ ನವೆಂಬರ್ 10ಕ್ಕೆ:
ಸರಕಾರ ಮತ್ತು ಚುನಾವಣಾ ಆಯೋಗದ ನಡುವಿನ ವಾದವನ್ನು ಆಲಿಸಿದ ನ್ಯಾಯಪೀಠ, ಚುನಾವಣೆ ನಡೆಸುವ ಕುರಿತು ನಿರ್ದಿಷ್ಟ ಕಾಲಮಿತಿ ಮತ್ತು ಮತದಾರರ ಪಟ್ಟಿ ತಯಾರಿಸುವ ಕುರಿತು ಚರ್ಚಿಸಿ, ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸುವಂತೆ ಸೂಚಿಸಿ, ವಿಚಾರಣೆಯನ್ನು ನವೆಂಬರ್ 10 ಕ್ಕೆ ಮುಂದೂಡಿದೆ. ಈ ಮಧ್ಯೆ, ಹೈಕೋರ್ಟ್ ತಡೆ ಆದೇಶವಿದ್ದರೂ ಸರ್ಕಾರ ಆಡಳಿತಾಧಿಕಾರಿಗಳನ್ನು ನೇಮಕಗೊಳಿಸಿರುವುದು ಕಾನೂನು ಹೋರಾಟದ ಮುಂದಿನ ಹಂತಗಳಿಗೆ ದಾರಿ ಮಾಡಿಕೊಟ್ಟಿದೆ.

Ad Widget
Click to comment

Leave a Reply

ಬಿಗ್ ನ್ಯೂಸ್

Golithottu-ಗೋಳಿತ್ತೊಟ್ಟು: ತೋಡಿನ ನೀರಿನಲ್ಲಿ ಮೀನುಗಳ ಮಾರಣಹೋಮ; ತನಿಖೆಗೆ ಸ್ಥಳೀಯರ ಆಗ್ರಹ

Published

on

Ad Widget

Ad Widget

Ad Widget

Ad Widget

ಮಂಗಳೂರು–ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಗೋಳಿತ್ತೊಟ್ಟು ಸಮೀಪದ ಕಾಂಚನ ಕ್ರಾಸ್ ಬಳಿಯ ಹೆದ್ದಾರಿ ಬದಿಯ ತೋಡಿನಲ್ಲಿ ಮೀನುಗಳು ಸತ್ತು ಬಿದ್ದಿರುವ ಘಟನೆ ರವಿವಾರ ಬೆಳಕಿಗೆ ಬಂದಿದೆ. ಮೀನುಗಳ ಸಾವಿಗೆ ನಿಖರ ಕಾರಣವೇನು ಎಂಬುದನ್ನು ಪತ್ತೆಹಚ್ಚಲು ಸಂಬಂಧಪಟ್ಟ ಅಧಿಕಾರಿಗಳು ತನಿಖೆ ನಡೆಸಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.

Ad Widget

Ad Widget

Ad Widget

Ad Widget

ಪುತ್ತೂರು, ಅ.11: ಮಂಗಳೂರು–ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಗೋಳಿತ್ತೊಟ್ಟು ಸಮೀಪದ ಕಾಂಚನ ಕ್ರಾಸ್ ಬಳಿಯ ಹೆದ್ದಾರಿ ಬದಿಯ ತೋಡಿನಲ್ಲಿ ಮೀನುಗಳು ಸತ್ತು ಬಿದ್ದಿರುವ ಘಟನೆ ರವಿವಾರ ಬೆಳಕಿಗೆ ಬಂದಿದೆ. ಮೀನುಗಳ ಸಾವಿಗೆ ನಿಖರ ಕಾರಣವೇನು ಎಂಬುದನ್ನು ಪತ್ತೆಹಚ್ಚಲು ಸಂಬಂಧಪಟ್ಟ ಅಧಿಕಾರಿಗಳು ತನಿಖೆ ನಡೆಸಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.

Ad Widget

Ad Widget

Ad Widget alt="Ad Widget"/>

Ad Widget

ಉಪ್ಪಿನಂಗಡಿಯಿಂದ ನೆಲ್ಯಾಡಿ ಕಡೆಗೆ ಸುಮಾರು 8 ಕಿ.ಮೀ. ದೂರದಲ್ಲಿರುವ ಕಾಂಚನ ಕ್ರಾಸ್ ಸಮೀಪದ ತೋಡಿನ ನೀರಿನಲ್ಲಿ ಸಣ್ಣಪುಟ್ಟ ಮೀನುಗಳು ಏಕಾಏಕಿ ಸತ್ತು ಬಿದ್ದಿರುವುದು ಕಂಡುಬಂದಿದೆ. ತೋಡಿನಲ್ಲಿ ಸಾಕಷ್ಟು ದೂರದವರೆಗೆ ಮೀನುಗಳು ಸತ್ತಿರುವುದು ಸ್ಥಳೀಯರು ಚಿತ್ರೀಕರಿಸಿದ ವಿಡಿಯೋದಲ್ಲಿ ಕಾಣಿಸಿಕೊಂಡಿದೆ.

Ad Widget

Ad Widget <> Ad Widget

ಈ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳಲಾಗಿದ್ದು, ಘಟನೆ ಸ್ಥಳೀಯರ ಆತಂಕಕ್ಕೆ ಕಾರಣವಾಗಿದೆ.

Ad Widget

ಮೀನುಗಳ ಸಾವಿಗೆ ಯಾರಾದರೂ ರಾಸಾಯನಿಕ ಬಳಕೆ ಮಾಡಿರುವುದು ಕಾರಣವೇ ಅಥವಾ ನೀರಿನಲ್ಲಿ ವಿಷಕಾರಿ ಅಂಶ ಬೆರೆತಿರುವುದರಿಂದ ಈ ಘಟನೆ ಸಂಭವಿಸಿದೆಯೇ ಎಂಬ ಅನುಮಾನಗಳು ವ್ಯಕ್ತವಾಗಿವೆ. ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿ, ನೀರಿನ ಮಾದರಿಯನ್ನು ಪರೀಕ್ಷಿಸುವ ಮೂಲಕ ಸಾವಿನ ನಿಖರ ಕಾರಣವನ್ನು ಪತ್ತೆಹಚ್ಚಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.

Continue Reading

ಮಂಗಳೂರು

ABVP protest-ಮಂಗಳೂರಿನ ಆಗ್ನೆಸ್ ಕಾಲೇಜಿನಲ್ಲಿ ದಸರಾ ರಜೆಯಲ್ಲೂ ಪರೀಕ್ಷೆ; ಎಬಿವಿಪಿ ಪ್ರತಿಭಟನೆ ವೇಳೆ ನೂಕಾಟ; ವಿದ್ಯಾರ್ಥಿನಿಯರನ್ನು ತಳ್ಳಿದ ಪೊಲೀಸರ ವಿರುದ್ಧ ಆಕ್ರೋಶ

Published

on

Ad Widget

Ad Widget

Ad Widget

Ad Widget

ದಸರಾ ರಜೆಯ ಸಂದರ್ಭದಲ್ಲಿ ಪರೀಕ್ಷೆ ನಡೆಸುತ್ತಿರುವುದನ್ನು ಖಂಡಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್‌ (ಎಬಿವಿಪಿ) ಕಾರ್ಯಕರ್ತರು ಮಂಗಳೂರಿನ ಆಗ್ನೆಸ್ ಕಾಲೇಜಿನ ಮುಂಭಾಗ ಪ್ರತಿಭಟನೆ ನಡೆಸಿದರು. ಈ ವೇಳೆ ಪ್ರತಿಭಟನಾಕಾರರನ್ನು ನಿಯಂತ್ರಿಸುವ ಸಂದರ್ಭದಲ್ಲಿ ವಿದ್ಯಾರ್ಥಿನಿಯರನ್ನು ಪುರುಷ ಪೊಲೀಸರು ಮುಟ್ಟಿದ್ದಾರೆ ಹಾಗೂ ತಳ್ಳಿದ್ದಾರೆ ಎಂಬ ಆರೋಪ ಕೇಳಿಬಂದಿದ್ದು, ವಿದ್ಯಾರ್ಥಿಗಳ ಆಕ್ರೋಶಕ್ಕೆ ಕಾರಣವಾಗಿದೆ.

Ad Widget

Ad Widget

Ad Widget

Ad Widget

ಮಂಗಳೂರು: ದಸರಾ ರಜೆಯ ಸಂದರ್ಭದಲ್ಲಿ ಪರೀಕ್ಷೆ ನಡೆಸುತ್ತಿರುವುದನ್ನು ಖಂಡಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್‌ (ಎಬಿವಿಪಿ) ಕಾರ್ಯಕರ್ತರು ಮಂಗಳೂರಿನ ಆಗ್ನೆಸ್ ಕಾಲೇಜಿನ ಮುಂಭಾಗ ಪ್ರತಿಭಟನೆ ನಡೆಸಿದರು. ಈ ವೇಳೆ ಪ್ರತಿಭಟನಾಕಾರರನ್ನು ನಿಯಂತ್ರಿಸುವ ಸಂದರ್ಭದಲ್ಲಿ ವಿದ್ಯಾರ್ಥಿನಿಯರನ್ನು ಪುರುಷ ಪೊಲೀಸರು ಮುಟ್ಟಿದ್ದಾರೆ ಹಾಗೂ ತಳ್ಳಿದ್ದಾರೆ ಎಂಬ ಆರೋಪ ಕೇಳಿಬಂದಿದ್ದು, ವಿದ್ಯಾರ್ಥಿಗಳ ಆಕ್ರೋಶಕ್ಕೆ ಕಾರಣವಾಗಿದೆ.

Ad Widget

Ad Widget

Ad Widget alt="Ad Widget"/>

Ad Widget

ದಸರಾ ಹಬ್ಬದ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ರಜೆ ನೀಡುವಂತೆ ಮನವಿ ಮಾಡಿದರೂ ಕಾಲೇಜು ಆಡಳಿತ ಮಂಡಳಿ ಪರೀಕ್ಷೆ ನಡೆಸಲು ಮುಂದಾಗಿದೆ ಎಂದು ಎಬಿವಿಪಿ ಕಾರ್ಯಕರ್ತರು ಆಕ್ಷೇಪ ವ್ಯಕ್ತಪಡಿಸಿದರು. ಈ ಕುರಿತು ಕಾಲೇಜು ಆಡಳಿತ ಮಂಡಳಿಯನ್ನು ಪ್ರಶ್ನಿಸಿದರೂ ಸಮರ್ಪಕ ಉತ್ತರ ನೀಡದೆ ನಿರ್ಲಕ್ಷ್ಯ ವಹಿಸಲಾಗಿದೆ ಎಂದು ಆರೋಪಿಸಿದರು.

Ad Widget

Ad Widget <> Ad Widget

ಕಾಲೇಜಿನ ಪ್ರಾಂಶುಪಾಲರು ಪ್ರತಿಭಟನಾಕಾರರಿಗೆ ಉತ್ತರ ನೀಡಬೇಕು ಎಂದು ಪಟ್ಟು ಹಿಡಿದ ಎಬಿವಿಪಿ ಕಾರ್ಯಕರ್ತರು ಕಾಲೇಜಿನ ಮುಂಭಾಗದ ಗೇಟ್ ಬಳಿ ಪ್ರತಿಭಟನೆ ನಡೆಸಿದರು.

Ad Widget

ವಿದ್ಯಾರ್ಥಿನಿಯರನ್ನು ತಳ್ಳಿದ ಆರೋಪ: ಆಕ್ರೋಶ
ಪ್ರತಿಭಟನೆ ಆರಂಭವಾದ ಸಂದರ್ಭದಲ್ಲಿ ಸ್ಥಳದಲ್ಲಿ ಮಹಿಳಾ ಪೊಲೀಸರ ಕೊರತೆ ಇತ್ತು ಎನ್ನಲಾಗಿದೆ. ವಿದ್ಯಾರ್ಥಿ ಮುಖಂಡರನ್ನು ವಶಕ್ಕೆ ಪಡೆಯುವ ಸಂದರ್ಭದಲ್ಲಿ ನೂಕಾಟ, ತಳ್ಳಾಟ ನಡೆದಿದೆ. ಈ ವೇಳೆ ಪೊಲೀಸರು ವಿದ್ಯಾರ್ಥಿನಿಯರನ್ನು ತಳ್ಳಿದ್ದಾರೆ ಹಾಗೂ ಪುರುಷ ಪೊಲೀಸರು ವಿದ್ಯಾರ್ಥಿನಿಯರ ಮೈ ಮುಟ್ಟಿದ್ದಾರೆ ಎಂದು ಪ್ರತಿಭಟನಾಕಾರರು ಆರೋಪಿಸಿದ್ದಾರೆ.

Ad Widget

Ad Widget

ಘಟನೆಯಿಂದ ಆಕ್ರೋಶಗೊಂಡ ವಿದ್ಯಾರ್ಥಿಗಳು ಪೊಲೀಸರ ವರ್ತನೆಗೆ ಆಕ್ಷೇಪ ವ್ಯಕ್ತಪಡಿಸಿದರು. ದಸರಾ ರಜೆಯ ಸಂದರ್ಭದಲ್ಲಿ ಪರೀಕ್ಷೆ ನಡೆಸಿದ ಕಾಲೇಜಿನ ಕ್ರಮ ಹಾಗೂ ಪ್ರತಿಭಟನೆಯ ವೇಳೆ ನಡೆದ ಪೊಲೀಸ್ ವರ್ತನೆ ಎರಡೂ ವಿಚಾರಗಳು ಸ್ಥಳದಲ್ಲಿ ಉದ್ವಿಗ್ನತೆಗೆ ಕಾರಣವಾದವು.

ಭಾರತ್ ಮಾತಾ ಕೀ ಜೈ ಎಂದ ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ – ಖಂಡನೆ
ದಸರಾ ಹಬ್ಬದ ರಜೆಯ ಅವಧಿಯಲ್ಲಿ ಪರೀಕ್ಷೆಗಳನ್ನು ನಡೆಸಿರುವುದು ಮತ್ತು ಅದರ ವಿರುದ್ಧ ಧ್ವನಿ ಎತ್ತಿದ ವಿದ್ಯಾರ್ಥಿಗಳ ಮೇಲೆ ಪೊಲೀಸ್ ಇಲಾಖೆ ನಡೆಸಿರುವ ಬಲಪ್ರಯೋಗ ಹಾಗೂ ದೌರ್ಜನ್ಯವು ಅತ್ಯಂತ ಖಂಡನೀಯ. ಶಾಂತಿಯುತ ಪ್ರತಿಭಟನೆ ಮತ್ತು ಕಾನೂನುಬದ್ಧ ಹೋರಾಟ ಮಾಡುವುದು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ವಿದ್ಯಾರ್ಥಿಗಳ ಹಕ್ಕು.

​ವಿದ್ಯಾರ್ಥಿಗಳ ಮೇಲೆ ಕೈ ಮಾಡಲು ಮತ್ತು ದೌರ್ಜನ್ಯ ಎಸಗಲು ಯಾರು ಆದೇಶ ನೀಡಿದರು ಎಂಬ ಪ್ರಶ್ನೆಗೆ ಸಂಬಂಧಪಟ್ಟ ಪೊಲೀಸ್ ಹಾಗೂ ಆಡಳಿತ ಯಂತ್ರದಿಂದ ಸ್ಪಷ್ಟನೆ ದೊರೆಯಬೇಕಿದೆ.

ಹಬ್ಬದ ವಾತಾವರಣದಲ್ಲಿ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗದಂತೆ ನೋಡಿಕೊಳ್ಳಬೇಕಿದ್ದ ಆಡಳಿತ ಮಂಡಳಿ ಮತ್ತು ಪರಿಸ್ಥಿತಿಯನ್ನು ಸಂಯಮದಿಂದ ನಿರ್ವಹಿಸಬೇಕಿದ್ದ ಪೊಲೀಸ್ ಇಲಾಖೆ ಎರಡೂ ಕಡೆಯಿಂದ ಈ ರೀತಿಯ ಘಟನೆ ನಡೆದಿರುವುದು ದುರದೃಷ್ಟಕರ.

​ತಕ್ಷಣವೇ ಜನಪ್ರತಿನಿಧಿಗಳು ಮತ್ತು ಉನ್ನತ ಅಧಿಕಾರಿಗಳು ಈ ವಿಚಾರದಲ್ಲಿ ಗಮನಹರಿಸಿ, ವಿದ್ಯಾರ್ಥಿಗಳ ಮೇಲಿನ ದೌರ್ಜನ್ಯಕ್ಕೆ ನ್ಯಾಯ ಒದಗಿಸಬೇಕು ಹಾಗೂ ವಿದ್ಯಾರ್ಥಿಗಳ ಹೋರಾಟಕ್ಕೆ ಸೂಕ್ತ ಸ್ಪಂದನೆ ಸಿಗಬೇಕು.

Ad Widget
Continue Reading

ಮಂಗಳೂರು

Mangalore-ಮಂಗಳೂರಿನ ಆಗ್ನೆಸ್ ಕಾಲೇಜಿನಲ್ಲಿ ದಸರಾ ರಜೆಯಲ್ಲೂ ಪರೀಕ್ಷೆ; ಎಬಿವಿಪಿ ಪ್ರತಿಭಟನೆ ವೇಳೆ ನೂಕಾಟ; ವಿದ್ಯಾರ್ಥಿನಿಯರನ್ನು ತಳ್ಳಿದ ಪೊಲೀಸರ ವಿರುದ್ಧ ಆಕ್ರೋಶ

Published

on

Ad Widget

Ad Widget

Ad Widget

Ad Widget

ದಸರಾ ರಜೆಯ ಸಂದರ್ಭದಲ್ಲಿ ಪರೀಕ್ಷೆ ನಡೆಸುತ್ತಿರುವುದನ್ನು ಖಂಡಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್‌ (ಎಬಿವಿಪಿ) ಕಾರ್ಯಕರ್ತರು ಮಂಗಳೂರಿನ ಆಗ್ನೆಸ್ ಕಾಲೇಜಿನ ಮುಂಭಾಗ ಪ್ರತಿಭಟನೆ ನಡೆಸಿದರು. ಈ ವೇಳೆ ಪ್ರತಿಭಟನಾಕಾರರನ್ನು ನಿಯಂತ್ರಿಸುವ ಸಂದರ್ಭದಲ್ಲಿ ವಿದ್ಯಾರ್ಥಿನಿಯರನ್ನು ಪುರುಷ ಪೊಲೀಸರು ಮುಟ್ಟಿದ್ದಾರೆ ಹಾಗೂ ತಳ್ಳಿದ್ದಾರೆ ಎಂಬ ಆರೋಪ ಕೇಳಿಬಂದಿದ್ದು, ವಿದ್ಯಾರ್ಥಿಗಳ ಆಕ್ರೋಶಕ್ಕೆ ಕಾರಣವಾಗಿದೆ.

Ad Widget

Ad Widget

Ad Widget

Ad Widget

ಮಂಗಳೂರು: ದಸರಾ ರಜೆಯ ಸಂದರ್ಭದಲ್ಲಿ ಪರೀಕ್ಷೆ ನಡೆಸುತ್ತಿರುವುದನ್ನು ಖಂಡಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್‌ (ಎಬಿವಿಪಿ) ಕಾರ್ಯಕರ್ತರು ಮಂಗಳೂರಿನ ಆಗ್ನೆಸ್ ಕಾಲೇಜಿನ ಮುಂಭಾಗ ಪ್ರತಿಭಟನೆ ನಡೆಸಿದರು. ಈ ವೇಳೆ ಪ್ರತಿಭಟನಾಕಾರರನ್ನು ನಿಯಂತ್ರಿಸುವ ಸಂದರ್ಭದಲ್ಲಿ ವಿದ್ಯಾರ್ಥಿನಿಯರನ್ನು ಪುರುಷ ಪೊಲೀಸರು ಮುಟ್ಟಿದ್ದಾರೆ ಹಾಗೂ ತಳ್ಳಿದ್ದಾರೆ ಎಂಬ ಆರೋಪ ಕೇಳಿಬಂದಿದ್ದು, ವಿದ್ಯಾರ್ಥಿಗಳ ಆಕ್ರೋಶಕ್ಕೆ ಕಾರಣವಾಗಿದೆ.

Ad Widget

Ad Widget

Ad Widget alt="Ad Widget"/>

Ad Widget

ದಸರಾ ಹಬ್ಬದ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ರಜೆ ನೀಡುವಂತೆ ಮನವಿ ಮಾಡಿದರೂ ಕಾಲೇಜು ಆಡಳಿತ ಮಂಡಳಿ ಪರೀಕ್ಷೆ ನಡೆಸಲು ಮುಂದಾಗಿದೆ ಎಂದು ಎಬಿವಿಪಿ ಕಾರ್ಯಕರ್ತರು ಆಕ್ಷೇಪ ವ್ಯಕ್ತಪಡಿಸಿದರು. ಈ ಕುರಿತು ಕಾಲೇಜು ಆಡಳಿತ ಮಂಡಳಿಯನ್ನು ಪ್ರಶ್ನಿಸಿದರೂ ಸಮರ್ಪಕ ಉತ್ತರ ನೀಡದೆ ನಿರ್ಲಕ್ಷ್ಯ ವಹಿಸಲಾಗಿದೆ ಎಂದು ಆರೋಪಿಸಿದರು.

Ad Widget

Ad Widget <> Ad Widget

ಕಾಲೇಜಿನ ಪ್ರಾಂಶುಪಾಲರು ಪ್ರತಿಭಟನಾಕಾರರಿಗೆ ಉತ್ತರ ನೀಡಬೇಕು ಎಂದು ಪಟ್ಟು ಹಿಡಿದ ಎಬಿವಿಪಿ ಕಾರ್ಯಕರ್ತರು ಕಾಲೇಜಿನ ಮುಂಭಾಗದ ಗೇಟ್ ಬಳಿ ಪ್ರತಿಭಟನೆ ನಡೆಸಿದರು.

Ad Widget

ವಿದ್ಯಾರ್ಥಿನಿಯರನ್ನು ತಳ್ಳಿದ ಆರೋಪ: ಆಕ್ರೋಶ
ಪ್ರತಿಭಟನೆ ಆರಂಭವಾದ ಸಂದರ್ಭದಲ್ಲಿ ಸ್ಥಳದಲ್ಲಿ ಮಹಿಳಾ ಪೊಲೀಸರ ಕೊರತೆ ಇತ್ತು ಎನ್ನಲಾಗಿದೆ. ವಿದ್ಯಾರ್ಥಿ ಮುಖಂಡರನ್ನು ವಶಕ್ಕೆ ಪಡೆಯುವ ಸಂದರ್ಭದಲ್ಲಿ ನೂಕಾಟ, ತಳ್ಳಾಟ ನಡೆದಿದೆ. ಈ ವೇಳೆ ಪೊಲೀಸರು ವಿದ್ಯಾರ್ಥಿನಿಯರನ್ನು ತಳ್ಳಿದ್ದಾರೆ ಹಾಗೂ ಪುರುಷ ಪೊಲೀಸರು ವಿದ್ಯಾರ್ಥಿನಿಯರ ಮೈ ಮುಟ್ಟಿದ್ದಾರೆ ಎಂದು ಪ್ರತಿಭಟನಾಕಾರರು ಆರೋಪಿಸಿದ್ದಾರೆ.

Ad Widget

Ad Widget

ಘಟನೆಯಿಂದ ಆಕ್ರೋಶಗೊಂಡ ವಿದ್ಯಾರ್ಥಿಗಳು ಪೊಲೀಸರ ವರ್ತನೆಗೆ ಆಕ್ಷೇಪ ವ್ಯಕ್ತಪಡಿಸಿದರು. ದಸರಾ ರಜೆಯ ಸಂದರ್ಭದಲ್ಲಿ ಪರೀಕ್ಷೆ ನಡೆಸಿದ ಕಾಲೇಜಿನ ಕ್ರಮ ಹಾಗೂ ಪ್ರತಿಭಟನೆಯ ವೇಳೆ ನಡೆದ ಪೊಲೀಸ್ ವರ್ತನೆ ಎರಡೂ ವಿಚಾರಗಳು ಸ್ಥಳದಲ್ಲಿ ಉದ್ವಿಗ್ನತೆಗೆ ಕಾರಣವಾದವು.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!

Discover more from Nikhara News | Kannada News Website

Subscribe now to keep reading and get access to the full archive.

Continue reading