ಕೋಲಾರ ಕುರುಬರ ಸಂಘ ಆಯೋಜಿಸಿದ್ದ ಕನಕ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಕನಕದಾಸರ ಹೆಸರನ್ನು ನಾವು ಕರೆಯುವಾಗ ಇವರ ಜೊತೆಗೆ […]" /> ಕೋಲಾರ ಕುರುಬರ ಸಂಘ ಆಯೋಜಿಸಿದ್ದ ಕನಕ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಕನಕದಾಸರ ಹೆಸರನ್ನು ನಾವು ಕರೆಯುವಾಗ ಇವರ ಜೊತೆಗೆ […]"> K.V.P.-ಕನಕ ಎಂದರೆ ಒಬ್ಬ ವ್ಯಕ್ತಿ ಅಲ್ಲ,ಒಂದು ಪರಂಪರೆ- ಕೆ.ವಿ.ಪ್ರಭಾಕರ್; ಕನಕ ಜಯಂತಿಯಂದು ನಮ್ಮ ಪರಂಪರೆಯ ಬೇರುಗಳಿಗೆ ಚೈತನ್ಯ ತುಂಬುವಂತಾಗಬೇಕು: ಕೆ.ವಿ.ಪಿ ಕರೆ - Nikhara News | Kannada News Website
Connect with us

ಸ್ಥಳೀಯ

K.V.P.-ಕನಕ ಎಂದರೆ ಒಬ್ಬ ವ್ಯಕ್ತಿ ಅಲ್ಲ,ಒಂದು ಪರಂಪರೆ- ಕೆ.ವಿ.ಪ್ರಭಾಕರ್; ಕನಕ ಜಯಂತಿಯಂದು ನಮ್ಮ ಪರಂಪರೆಯ ಬೇರುಗಳಿಗೆ ಚೈತನ್ಯ ತುಂಬುವಂತಾಗಬೇಕು: ಕೆ.ವಿ.ಪಿ ಕರೆ

Published

on

Ad Widget

Ad Widget

Ad Widget

Ad Widget

ಕನಕದಾಸರು ಎಂದರೆ ಕೇವಲ ದಾಸಶ್ರೇಷ್ಠ ವ್ಯಕ್ತಿಯಲ್ಲ, ಒಂದು ಮಹೋನ್ನತ ಪರಂಪರೆ ಎನ್ನುವುದನ್ನು ನಾವು ಸ್ಮರಿಸಿಕೊಳ್ಳಬೇಕು ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅವರು ನುಡಿದರು.

Ad Widget

Ad Widget

Ad Widget

Ad Widget

ಕೋಲಾರ, ನ8: ಕನಕದಾಸರು ಎಂದರೆ ಕೇವಲ ದಾಸಶ್ರೇಷ್ಠ ವ್ಯಕ್ತಿಯಲ್ಲ, ಒಂದು ಮಹೋನ್ನತ ಪರಂಪರೆ ಎನ್ನುವುದನ್ನು ನಾವು ಸ್ಮರಿಸಿಕೊಳ್ಳಬೇಕು ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅವರು ನುಡಿದರು.

Ad Widget

Ad Widget alt="Ad Widget"/>

Ad Widget

ಕೋಲಾರ ಕುರುಬರ ಸಂಘ ಆಯೋಜಿಸಿದ್ದ ಕನಕ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

Ad Widget

Ad Widget <> Ad Widget

ಕನಕದಾಸರ ಹೆಸರನ್ನು ನಾವು ಕರೆಯುವಾಗ ಇವರ ಜೊತೆಗೆ ಬುದ್ದ, ಬಸವ, ಕನಕ ಎಂದು ಕರೆಯುತ್ತೇವೆ. ಅಂದರೆ ಬುದ್ದನಿಂದ ಶುರುವಾಗುವ ಮಹೋನ್ನತ ಪರಂಪರೆಯ ಭಾಗವಾಗಿ ಕನಕರನ್ನು ನಾವು ಆರಾಧಿಸುತ್ತೇವೆ. ಆದ್ದರಿಂದ ಕನಕ ಜಯಂತಿಯಂದು ನಾವು ನಮ್ಮ ಪರಂಪರೆಯ ಬೇರುಗಳಿಗೆ ಚೈತನ್ಯ ತುಂಬುವಂತಾಗಬೇಕು ಎಂದು ಕರೆ ನೀಡಿದರು.

ದಾಸಶ್ರೇಷ್ಠ ಕನಕರು ನಮ್ಮ ಪರಂಪರೆಯ ನೈತಿಕ ಮತ್ತು ಅಧ್ಮಾತ್ಮಿಕ ಶಕ್ತಿಯಾಗಿದ್ದಾರೆ. ಆದರೆ, ಬಹಳ ಮಂದಿ ಕನಕದಾಸರಿಂದ ನಮ್ಮ ಪರಂಪರೆ ಆರಂಭವಾಗಿದೆ ಎನ್ನುವ ತಪ್ಪು ಕಲ್ಪನೆಯಲ್ಲಿದ್ದಾರೆ. ಅಲೆಮಾರಿಯಾಗಿದ್ದ ಮನುಷ್ಯ ಜನಾಂಗ ಕೃಷಿಗಿಂತ ಮೊದಲೇ ಪಶುಪಾಲನೆ ಕಂಡುಕೊಂಡಿತ್ತು. ಹಸು, ಕುರಿ, ಮೇಕೆ, ಕುದುರೆ ಸಾಕುತ್ತಿದ್ದವರೆಲ್ಲಾ ಕುರುಬರೇ ಅನ್ನಿಸಿಕೊಂಡ ಚರಿತ್ರೆ ಇದೆ.

Ad Widget

Ad Widget

ನಾಣ್ಯ ಮತ್ತು ನೋಟುಗಳು ಬರುವ ಮೊದಲು ಕುರಿ ಮತ್ತು ಹಸುಗಳೇ ನಾಣ್ಯಗಳಾಗಿದ್ದವು. ಕುರಿ, ಹಸುಗಳನ್ನು ಕೊಟ್ಟು ಇತರೆ ವಸ್ತು, ಪದಾರ್ಥಗಳನ್ನು ಕೊಳ್ಳಲಾಗುತ್ತಿತ್ತು. ಅಂದರೆ, ಹೆಚ್ಚು ಕುರಿ, ಹಸು ಇರುವವನೇ ಹೆಚ್ಚು ಶ್ರೀಮಂತ, ಒಡೆಯನಾಗಿದ್ದ ಪರಂಪರೆ ನಮ್ಮದು. ಅಂದರೆ ಪ್ರಾಚೀನ ಭಾರತದ ಆರ್ಥಿಕತೆಯೇ ಕುರುಬರ, ಪಶುಪಾಲಕರ ಕೈಯಲ್ಲಿ ಇತ್ತು. ಇಡೀ ದೇಶದ ಆರ್ಥಿಕತೆಯನ್ನು ನಿಭಾಯಿಸುತ್ತಿದ್ದ ಪರಂಪರೆಯಿಂದ ಬಂದ ನಮ್ಮ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಪರಂಪರೆಯ ಮುಂದುವರಿಕೆಯಾಗಿ 16 ಬಜೆಟ್ ಗಳನ್ನು ಮಂಡಿಸಿ ದಾಖಲೆ ಮೆರೆದಿದ್ದಾರೆ ಎಂದು ಕೆ.ವಿ.ಪ್ರಭಾಕರ್ ಅವರು ಮೆಚ್ಚುಗೆ ಸೂಚಿಸಿದರು.

ನಮ್ಮ ಕುರುಬ ಪರಂಪರೆಗೆ ಧಾರ್ಮಿಕ‌ ಸಹಿಷ್ಣುತೆ ಮತ್ತು ಜಾತ್ಯತೀತತೆಯ ಚರಿತ್ರೆಯೂ ಇದೆ. ಕನಕ ದಾಸರು “ತಲ್ಲಣಿಸದಿರು ತಾಳು ಮನವೇ” ಎಂದು ಹಾಡುವಾಗ ಬೌದ್ಧ, ಇಸ್ಲಾಂ, ಕ್ರೈಸ್ತ ಧರ್ಮಗಳ ಜೊತೆಗಿನ ಒಡನಾಟವನ್ನೂ ಹೇಳುತ್ತಾರೆ. ಏಸುಕ್ರಿಸ್ತರ ಮಡಿಲಲ್ಲೂ ಕುರಿ ಇದೆ. ಪೈಗಂಬರರೂ ಕುರಿಸಾಕಾಣಿಕೆಯ ಪರಂಪರೆ ಜೊತೆಗಿದ್ದವರು ಎನ್ನುವುದನ್ನು ಅಧ್ಯಯನಗಳು ಹೇಳುತ್ತವೆ.

ಕುರುಬರ ಕುಲದೈವಗಳು, ದೇವತೆಗಳು, ಸಾಂಸ್ಕೃತಿಕ ನಾಯಕರು, ನಾಯಕಿಯರನ್ನೆಲ್ಲಾ ನೋಡಿದರೆ ಅಂತರ್ಜಾತಿ ವಿವಾಹ ಮತ್ತು ಜಾತ್ಯತೀತ ಪರಂಪರೆಯೂ ನಮಗೆ ಗೊತ್ತಾಗುತ್ತದೆ. ಹೇಮರೆಡ್ಡಿ ಮಲ್ಲಮ್ಮ ಅಂದರೆ ರೆಡ್ಡಿ ಜನಾಂಗದ ಜೊತೆಗಿನ ನಮ್ಮ ಒಡನಾಟವನ್ನೂ ಹೇಳುತ್ತದೆ. ಹೀಗೆ ಬಲಿಜ, ಗೊಲ್ಲ, ನಾಯಕ, ಒಕ್ಕಲಿಗ, ಲಿಂಗಾಯತ, ಬ್ರಾಹ್ಮಣ ಜಾತಿಗಳ ಜೊತೆಗೆ ನಮ್ಮ ದೈವಗಳು, ಸಾಂಸ್ಕೃತಿಕ‌ ಪುರುಷರು ಬೆರೆತು ಸಂಬಂಧಗಳನ್ನು ಏರ್ಪಡಿಸಿಕೊಂಡ ಜಾತ್ಯತೀತ ಪರಂಪರೆಯೂ ನಮ್ಮ ರಕ್ತದಲ್ಲೇ ಬಂದಿದೆ. ಇದನ್ನೆಲ್ಲಾ ಮುಂದೆ ಯಾವತ್ತಾದರೂ ವಿವರವಾಗಿ ಮಾತನಾಡುತ್ತೇನೆ ಎಂದರು‌.

ಹೀಗಾಗಿ ಕನಕದಾಸರ ಜಯಂತಿಯಂದು ನಾವು ನಮ್ಮ ಪರಂಪರೆಯ ಆಳ-ಅಗಲವನ್ನು ಅರಿಯುವ ಮೂಲಕ ನಮ್ಮ ಪರಂಪರೆಯ ಬೇರುಗಳನ್ನು ಗಟ್ಟಿಗೊಳಿಸಿಕೊಳ್ಳುವ ಕೆಲಸ ಮಾಡಬೇಕು ಎಂದು  ಕರೆ ನೀಡಿದರು.

Ad Widget
Click to comment

Leave a Reply

ಶಿಕ್ಷಣ

Narendra-ನರೇಂದ್ರ ಪ.ಪೂ. ಕಾಲೇಜಿನ ವಿದ್ಯಾರ್ಥಿನಿ ಇಚ್ಚಿಕ ಜೈನ್ ಇವರು ಕರಾಟೆ ಸ್ಪರ್ಧೆಯಲ್ಲಿ ಸ್ಕೂಲ್ ಗೇಮ್ಸ್ ಫೆಡರೇಶನ್ ಆಫ್ ಇಂಡಿಯಾ (SGFI)ಗೆ ಆಯ್ಕೆ

Published

on

Ad Widget

Ad Widget

Ad Widget

Ad Widget

ಮಧ್ಯಪ್ರದೇಶದಲ್ಲಿ ನಡೆದ ವಿದ್ಯಾಭಾರತಿ ಕರ್ನಾಟಕ ಇದರ ರಾಷ್ಟ್ರಮಟ್ಟದ ಕರಾಟೆ ಸ್ಪರ್ಧೆಯಲ್ಲಿ ನರೇಂದ್ರ ಪ. ಪೂ ಕಾಲೇಜಿನ ಪ್ರಥಮ ವಿಜ್ಞಾನ ವಿಭಾಗದ ಇಚ್ಚಿಕ ಜೈನ್ ಇವರು ಭಾಗವಹಿಸಿ, ಚಿನ್ನದ ಪದಕದೊಂದಿಗೆ ಪ್ರಥಮ ಸ್ಥಾನವನ್ನು ಪಡೆದು ಸ್ಕೂಲ್ ಗೇಮ್ಸ್ ಫೆಡರೇಶನ್ ಆಫ್ ಇಂಡಿಯಾ (SGFI) ಗೆ ಆಯ್ಕೆಯಾಗಿರುತ್ತಾರೆ.

Ad Widget

Ad Widget

Ad Widget

Ad Widget

ಮಧ್ಯಪ್ರದೇಶದಲ್ಲಿ ನಡೆದ ವಿದ್ಯಾಭಾರತಿ ಕರ್ನಾಟಕ ಇದರ ರಾಷ್ಟ್ರಮಟ್ಟದ ಕರಾಟೆ ಸ್ಪರ್ಧೆಯಲ್ಲಿ ನರೇಂದ್ರ ಪ. ಪೂ ಕಾಲೇಜಿನ ಪ್ರಥಮ ವಿಜ್ಞಾನ ವಿಭಾಗದ ಇಚ್ಚಿಕ ಜೈನ್ ಇವರು ಭಾಗವಹಿಸಿ, ಚಿನ್ನದ ಪದಕದೊಂದಿಗೆ ಪ್ರಥಮ ಸ್ಥಾನವನ್ನು ಪಡೆದು ಸ್ಕೂಲ್ ಗೇಮ್ಸ್ ಫೆಡರೇಶನ್ ಆಫ್ ಇಂಡಿಯಾ (SGFI) ಗೆ ಆಯ್ಕೆಯಾಗಿರುತ್ತಾರೆ.

Ad Widget

Ad Widget alt="Ad Widget"/>

Ad Widget

ಇವರು ಪುತ್ತೂರಿನ ನಿವಾಸಿಗಳಾದ ಪ್ರದೀಪ್ ಜೈನ್ ಮತ್ತು ಪ್ರೇಕ್ಷ ದಂಪತಿಗಳ ಪುತ್ರಿ.

Ad Widget

Ad Widget <> Ad Widget

ಇವರು ಜಪಾನ್ ಶೊಟೊಕಾನ್ ಕರಾಟೆ ಮತ್ತು ಮಾರ್ಷಲ್ ಆರ್ಟ್ ತರಬೇತಿ ಸಂಸ್ಥೆಯ ತರಬೇತುದಾರರಾದ ಶಿವಪ್ರಸಾದ್ ಡಿ. ಇವರ ನೇತೃತ್ವದಲ್ಲಿ ತರಬೇತಿಯನ್ನು ಪಡೆಯುತ್ತಿದ್ದಾರೆ.

ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ರಕ್ಷಕ-ಶಿಕ್ಷಕ ಸಂಘ, ಉಪನ್ಯಾಸಕರು ಮತ್ತು ಸಿಬ್ಬಂದಿವರ್ಗದವರು ಈ ವಿದ್ಯಾರ್ಥಿಯ ಉಜ್ವಲ ಭವಿಷ್ಯಕ್ಕೆ ಶುಭಹಾರೈಸಿದ್ದಾರೆ.

Continue Reading

ಶಿಕ್ಷಣ

Vivekananda-ದ.ಕ ಜಿಲ್ಲಾಮಟ್ಟದ ಶಾಂತಿವನ ಟ್ರಸ್ಟ್ ಸ್ಪರ್ಧೆಯಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಚಿಂತನ ಎಂ. ಚಿತ್ರಕಲೆಯಲ್ಲಿ ಪ್ರಥಮ

Published

on

Ad Widget

Ad Widget

Ad Widget

Ad Widget

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ಶಾಂತಿವನ ಟ್ರಸ್ಟ್ ಹಾಗೂ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ವತಿಯಿಂದ ಜ್ಞಾನಚಂದನ/ ಜ್ಞಾನನಂದನ ಎಂಬ ನೈತಿಕ ಮೌಲ್ಯಾಧಾರಿತ ಪುಸ್ತಕದ ಅಧ್ಯಯನ ಆಧಾರಿತ ಜಿಲ್ಲಾಮಟ್ಟದ ವಿವಿಧ ಸ್ಪರ್ಧೆಗಳು ಕೆ.ಪಿ.ಎಸ್, ಪುಂಜಾಲಕಟ್ಟೆಯಲ್ಲಿ ದಿನಾಂಕ ನ.23ರಂದು ನಡೆಯಿತು.

Ad Widget

Ad Widget

Ad Widget

Ad Widget

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ಶಾಂತಿವನ ಟ್ರಸ್ಟ್ ಹಾಗೂ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ವತಿಯಿಂದ ಜ್ಞಾನಚಂದನ/ ಜ್ಞಾನನಂದನ ಎಂಬ ನೈತಿಕ ಮೌಲ್ಯಾಧಾರಿತ ಪುಸ್ತಕದ ಅಧ್ಯಯನ ಆಧಾರಿತ ಜಿಲ್ಲಾಮಟ್ಟದ ವಿವಿಧ ಸ್ಪರ್ಧೆಗಳು ಕೆ.ಪಿ.ಎಸ್, ಪುಂಜಾಲಕಟ್ಟೆಯಲ್ಲಿ ದಿನಾಂಕ ನ.23ರಂದು ನಡೆಯಿತು.

Ad Widget

Ad Widget alt="Ad Widget"/>

Ad Widget

ಪೌಢ ಶಾಲಾ ವಿಭಾಗದಲ್ಲಿ ಚಿಂತನ. ಎಂ (ದಿ.ಸೀತಾರಾಮ ಮೇಲ್ಪಾಡಿ ಹಾಗೂ ಸರೋಜ ಮೇಲ್ಪಾಡಿಯವರ ಪುತ್ರಿ)ಚಿತ್ರಕಲೆಯಲ್ಲಿ ಪ್ರಥಮ ಸ್ಥಾನವನ್ನು ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

Ad Widget

Ad Widget <> Ad Widget

ರಾಜ್ಯಮಟ್ಟದ ಸ್ಪರ್ಧೆಗಳು ಮುಂಬರುವ ಜನವರಿ ತಿಂಗಳಿನಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ನಡೆಯಲಿದೆ.

Ad Widget
Continue Reading

ಶಿಕ್ಷಣ

Narendra-ನರೇಂದ್ರ ಪ.ಪೂ.ಕಾಲೇಜಿನಲ್ಲಿ ವಾರ್ಷಿಕ ಕ್ರೀಡಾಕೂಟ-ಉದ್ಘಾಟನೆ

Published

on

Ad Widget

Ad Widget

Ad Widget

Ad Widget

ನರೇಂದ್ರ ಪ.ಪೂ.ಕಾಲೇಜಿನಲ್ಲಿ ನಡೆದ 2026-27 ನೇ ಸಾಲಿನ ವಾರ್ಷಿಕ ಕ್ರೀಡಾಕೂಟವನ್ನು ಉದ್ಘಾಟಿಸಿ, ಸರಕಾರಿ ಪ್ರೌಢಶಾಲೆ ಇರ್ದೆ ಉಪ್ಪಳಿಗೆ ಇದರ ದೈಹಿಕ ಶಿಕ್ಷಣ ಶಿಕ್ಷಕರು ಗ್ರೇಡ್ 1 ಆದ ರಾಮಕೃಷ್ಣ ಪಡುಮಲೆ ಅವರು ಮಾತನಾಡಿದರು.

Ad Widget

Ad Widget

Ad Widget

Ad Widget

ಕ್ರೀಡೆಯು ಜೀವನದ ಒಂದು ಭಾಗವಾಗಿದ್ದು,ಮನುಷ್ಯನ ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ವೃದ್ಧಿಸುವುದರ ಜೊತೆಗೆ ಶಿಸ್ತು, ಆತ್ಮವಿಶ್ವಾಸ ಮತ್ತು ಸಾಮಾಜಿಕ ಕೌಶಲ್ಯಗಳನ್ನು ಬೆಳೆಸುತ್ತದೆ.ನಾಯಕತ್ವ, ತಾಳ್ಮೆ, ಪ್ರಾಮಾಣಿಕತೆ ಮತ್ತು ಕಠಿಣ ಪರಿಶ್ರಮದ ಮೌಲ್ಯಗಳನ್ನು ಕಲಿಸುತ್ತದೆ.ಮನಸ್ಸಿನ ಸ್ಥಿತಿಯನ್ನು ಸುಧಾರಿಸುತ್ತದೆ.ಸೋಲು ಮತ್ತು ಗೆಲುವುಗಳನ್ನು ಸಮಾನವಾಗಿ ಸ್ವೀಕರಿಸುವ ಮನೋಭಾವವನ್ನು ಬೆಳೆಸುತ್ತದೆ.ತಂಡದ ಕೆಲಸ, ಒಗ್ಗಟ್ಟು ಮತ್ತು ಪರಸ್ಪರ ಸಹಕಾರವನ್ನು ಹೆಚ್ಚಿಸುತ್ತದೆ.ಯಶಸ್ಸಿನ ಶಿಖರವನ್ನು ಸಾಧಿಸಲು ವರ್ಷಗಳ ಕಠಿಣ ತರಬೇತಿಯನ್ನು ನಿಗದಿಪಡಿಸುತ್ತದೆ ಎಂಬುದನ್ನು ಗುರುತಿಸುತ್ತದೆ ಎಂದು ಸರಕಾರಿ ಪ್ರೌಢಶಾಲೆ ಇರ್ದೆ ಉಪ್ಪಳಿಗೆ ಇದರ ದೈಹಿಕ ಶಿಕ್ಷಣ ಶಿಕ್ಷಕರು ಗ್ರೇಡ್ 1ಆದ ರಾಮಕೃಷ್ಣ ಪಡುಮಲೆ ಇವರು ಹೇಳಿದರು.

Ad Widget

Ad Widget alt="Ad Widget"/>

Ad Widget

ನರೇಂದ್ರ ಪ.ಪೂ.ಕಾಲೇಜಿನಲ್ಲಿ ನಡೆದ 2026-27 ನೇ ಸಾಲಿನ ವಾರ್ಷಿಕ ಕ್ರೀಡಾಕೂಟವನ್ನು ಉದ್ಘಾಟಿಸಿ, ಅವರು ಮಾತನಾಡಿದರು.

Ad Widget

Ad Widget <> Ad Widget

ಕ್ರೀಡಾಕೂಟದಲ್ಲಿ ಧ್ವಜಾರೋಹಣ ಮತ್ತು ಗೌರವ ವಂದನೆಯನ್ನು ಸ್ವೀಕರಿಸಿದ ಕಾಲೇಜಿನ ಆಡಳಿತ ಮಂಡಳಿಯ ಸದಸ್ಯರಾದ ಶ್ರೀಮತಿ ಶುಭಾ ಅಡಿಗ ಇವರು ಮಾತನಾಡುತ್ತಾ“ಇಂದಿನ ಯುವಜನತೆಯಲ್ಲಿ ಕ್ರೀಡಾಮನೋಭಾವ ಬೆಳೆದರೆ ಜೀವನದ ಪ್ರತಿಕೂಲ ಪರಿಸ್ಥಿತಿಯಲ್ಲೂ ಅವರು ಛಲಬಿಡದೆ ಸಾಧನೆ ಮಾಡಿ ಜೀವನವನ್ನು ರೂಪಿಸಿಕೊಳ್ಳುತ್ತಾರೆ.ಇಂತಹ ದೃಢ ಮನಸ್ಸಿನ ನಾಗರಿಕರೇ ಸ್ವಸ್ಥ ಸಮಾಜದ ರೂವಾರಿಗಳು.ಅದಕ್ಕಾಗಿ ಕ್ರೀಡೆಗಳು ಶಿಕ್ಷಣದ ಅವಿಭಾಜ್ಯ ಅಂಗವಾಗಿರಬೇಕು. “ಎಂದು ಹೇಳಿದರು.
ಕರ‍್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಕಾಲೇಜಿನ ಆಡಳಿತ ಮಂಡಳಿಯ ಸದಸ್ಯರಾದ ಸತ್ಯನಾರಾಯಣ ಬಿ. ಇವರು ಮಾತನಾಡುತ್ತಾ“ಕ್ರೀಡೆ ಸಹಶಿಕ್ಷಣದ ಒಂದು ಭಾಗ.ಮನಸ್ಸಿನ ಸಮತೋಲಿತ ಬೆಳವಣಿಗೆಗೆ ಮುಖ್ಯಕಾರಣ ಕ್ರೀಡೆ.ವಿದ್ಯಾರ್ಥಿಗಳು ಕ್ರೀಡೆಯಲ್ಲಿ ಭಾಗವಹಿಸಿ ಸೋಲು ಗೆಲುವಿನ ಅರ್ಥವನ್ನು ತಿಳಿದುಕೊಳ್ಳಬೇಕು.ಈ ಮೂಲಕ ಜಿವನದಲ್ಲಿ ಸಮಚಿತ್ತವನ್ನು ಸಾಧಿಸಿಕೊಳ್ಳಬಹುದು.ಉತ್ತಮ ಕ್ರೀಡಾಪಟು ಉತ್ತಮ ವಿದ್ಯಾರ್ಥಿಯಾಗುತ್ತಾನೆ.ಉತ್ತಮ ವಿದ್ಯಾರ್ಥಿಉತ್ತಮ ನಾಗರಿಕನಾಗುತ್ತಾನೆ.ನಮ್ಮ ಹಾದಿಯ ಪ್ರಗತಿಯನ್ನು ಖಾತ್ರಿಪಡಿಸಿಕೊಳ್ಳುವ ಮೂಲಕ ಯಶಸ್ವಿ ಜೀವನವನ್ನುರೂಪಿಸಲು ಕ್ರೀಡೆಯು ಸಹಾಯಮಾಡುತ್ತದೆ.” ಎಂದು ಹೇಳಿದರು.

ವಿದ್ಯಾರ್ಥಿಗಳ ವಿವಿಧ ತಂಡಗಳ ಶಿಸ್ತುಬದ್ಧ ಪಥಸಂಚಲನ ನಡೆಯಿತು.ಅತಿಥಿಗಳು ಗೌರವ ವಂದನೆ ಸ್ವೀಕರಿಸಿದರು.

Ad Widget

Ad Widget

ಜಿಲ್ಲಾ ,ರಾಜ್ಯ ಮತ್ತು ರಾಷ್ಟçಮಟ್ಟದ ವಿವಿಧಕ್ರೀಡಾ ಸ್ಪರ್ಧೆಗಳಲ್ಲಿ ಭಾಗವಹಿಸಿ ವಿಜೇತರಾದ ವಿದ್ಯಾರ್ಥಿಗಳು ಕ್ರೀಡಾ ಜ್ಯೋತಿಯನ್ನುತರುವುದರ ಮೂಲಕ ಕರ‍್ಯಕ್ರಮಕ್ಕೆ ಚಾಲನೆ ನೀಡಿದರು. ಕಾಲೇಜಿನ ವಿದ್ಯಾರ್ಥಿಗಳ ಆಕರ್ಷಕ ಬ್ಯಾಂಡ್ ಸೆಟ್ ಪಥಸಂಚಲನ ಕರ‍್ಯಕ್ರಮಕ್ಕೆ ವಿಶೇಷ ಮೆರುಗನ್ನು ನೀಡಿತು.

ಕಾಲೇಜಿನ ಪ್ರಾಂಶುಪಾಲರಾದ ಪ್ರಸಾದ್ ಶ್ಯಾನಭಾಗ್ ಸ್ವಾಗತಿಸಿ,ಮಾತನಾಡುತ್ತಾ“ಕ್ರೀಡೆಯು, ಆತ್ಮವಿಶ್ವಾಸ ಮತ್ತು ದೈಹಿಕ ಕ್ಷಮತೆಯನ್ನು ಹೆಚ್ಚಿಸಲು ಸಹಕಾರಿ.ದೈಹಿಕ ಮತ್ತು ಮಾನಸಿಕ ಅಭಿವೃದ್ಧಿಯ ಮೂಲವಾಗಿದೆ.ವ್ಯಾಯಾಮದ ಅತ್ಯುತ್ತಮ ಸಾಧನವೆಂದು ಪರಿಗಣಿಸಲಾಗಿದೆ.ಹಾಗಾಗಿ ಈ ಎಲ್ಲಾ ಅವಕಾಶಗಳನ್ನು ಬಳಸಿಕೊಂಡು ಸದೃಢ ಪ್ರಜೆಗಳಾಗಿ ಮುನ್ನಡೆಯಿರಿ ”ಎಂದು ಹೇಳಿದರು.
ವೇದಿಕೆಯಲ್ಲಿ ಕಾಲೇಜಿನ ಆಡಳಿತ ಮಂಡಳಿಯ ಕೋಶಾಧಿಕಾರಿಗಳಾದ ಅರುಣ್ ಬಿ.ಕೆ. ಇವರು ಉಪಸ್ಥಿತರಿದ್ದರು.

ಈ ಕ್ರೀಡಾಕೂಟದಲ್ಲಿ ತೆಂಕಿಲದ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕರಾದ ದಾಮೋದರ್, ನಮಿತಾ, ಮತ್ತು ಕಾಲೇಜಿನ ಕ್ರೀಡಾ ತರಬೇತುದಾರರಾದ ಮನೋಹರ್ ಎನ್. ರವರು ಸಹಕರಿಸಿದರು.

ಕಾರ್ಯಕ್ರಮದಲ್ಲಿ ದ್ವಿತೀಯ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿಯಾದ ಲೋಚನಾ ವಂದಿಸಿದರು. ಉಪನ್ಯಾಸಕರಾದ ಮಮತಾ ಮತ್ತು ಅಪೂರ್ವ ಕಾರ‍್ಯಕ್ರಮವನ್ನು ನಿರೂಪಿಸಿದರು.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!