ಮಂಗಳೂರು
Mangalore-ಬೆಂಗಳೂರು-ಮಂಗಳೂರು ಹೈಸ್ಪೀಡ್ ಕಾರಿಡಾರ್ಗೆ ತಜ್ಞರ ಜಂಟಿ ಸಮಿತಿ ರಚನೆ-ಕ್ಯಾ. ಬ್ರಿಜೇಶ್ ಚೌಟ ಮನವಿಗೆ ಕೇಂದ್ರದಿಂದ ಸ್ಪಂದನೆ
ಮಂಗಳೂರು ಮತ್ತು ಬೆಂಗಳೂರು ನಡುವಿನ ಹೈಸ್ಪೀಡ್ ಕಾರಿಡಾರ್ ಕನಸಿಗೆ ಈಗ ಹೊಸ ಚೈತನ್ಯ ಸಿಕ್ಕಿದೆ! ಶಿರಾಡಿ ಘಾಟ್ನಲ್ಲಿ ರೈಲ್ವೇ ಮತ್ತು ಹೆದ್ದಾರಿಗಳ ಸಮಗ್ರ ಅಭಿವೃದ್ಧಿ, ವಿಶೇಷವಾಗಿ ಸುರಂಗ ಮಾರ್ಗದ ಸಾಧ್ಯತೆಯನ್ನು ಅಧ್ಯಯನ ಮಾಡಲು ಕೇಂದ್ರ ಸರ್ಕಾರವು ತಜ್ಞರ ಜಂಟಿ ಕಾರ್ಯಕಾರಿ ಸಮಿತಿಯನ್ನು ರಚಿಸಿದೆ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ತಿಳಿಸಿದ್ದಾರೆ.
ಮಂಗಳೂರು: ಮಂಗಳೂರು ಮತ್ತು ಬೆಂಗಳೂರು ನಡುವಿನ ಹೈಸ್ಪೀಡ್ ಕಾರಿಡಾರ್ ಕನಸಿಗೆ ಈಗ ಹೊಸ ಚೈತನ್ಯ ಸಿಕ್ಕಿದೆ! ಶಿರಾಡಿ ಘಾಟ್ನಲ್ಲಿ ರೈಲ್ವೇ ಮತ್ತು ಹೆದ್ದಾರಿಗಳ ಸಮಗ್ರ ಅಭಿವೃದ್ಧಿ, ವಿಶೇಷವಾಗಿ ಸುರಂಗ ಮಾರ್ಗದ ಸಾಧ್ಯತೆಯನ್ನು ಅಧ್ಯಯನ ಮಾಡಲು ಕೇಂದ್ರ ಸರ್ಕಾರವು ತಜ್ಞರ ಜಂಟಿ ಕಾರ್ಯಕಾರಿ ಸಮಿತಿಯನ್ನು ರಚಿಸಿದೆ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ತಿಳಿಸಿದ್ದಾರೆ.
ಶಿರಾಡಿ ಘಾಟ್ನಲ್ಲಿ ಹೆದ್ದಾರಿ ಮತ್ತು ರೈಲ್ವೆ ಮಾರ್ಗದ ವಿಸ್ತೃತ ಯೋಜನಾ ವರದಿ (DPR) ಸಿದ್ಧಪಡಿಸುವ ನಿಟ್ಟಿನಲ್ಲಿ ಜಂಟಿ ಸಮೀಕ್ಷೆ ನಡೆಸಲು ತಜ್ಞರ ಸಮಿತಿ ರಚಿಸುವಂತೆ ಕ್ಯಾ. ಚೌಟ ಅವರು ಕೇಂದ್ರ ಹೆದ್ದಾರಿ ಸಚಿವಾಲಯಕ್ಕೆ ಮನವಿ ಮಾಡಿದ್ದರು. ಅವರ ಕೋರಿಕೆಗೆ ಸ್ಪಂದಿಸಿ, ಹೆದ್ದಾರಿ ಸಚಿವಾಲಯ, ರೈಲ್ವೆ ಸಚಿವಾಲಯ ಹಾಗೂ ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI)ದ ಅಧಿಕಾರಿಗಳನ್ನು ಒಳಗೊಂಡ ಈ ಸಮಿತಿಯನ್ನು ರಚಿಸಲಾಗಿದೆ.
ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು ಕ್ಯಾ. ಚೌಟ ಅವರಿಗೆ ಬರೆದ ಪತ್ರದಲ್ಲಿ, “ಈ ತಜ್ಞರ ಸಮಿತಿಯು ಶಿರಾಡಿ ಘಾಟ್ ಪ್ರದೇಶದಲ್ಲಿ ರೈಲು ಮತ್ತು ರಸ್ತೆ ಸಂಪರ್ಕಿತ ಸುರಂಗ ಮಾರ್ಗದ ಸಾಧ್ಯತೆ ಹಾಗೂ ಅದರ ಸಾಧಕ-ಬಾಧಕಗಳ ಬಗ್ಗೆ ಸಮಗ್ರ ಪರಿಶೀಲನೆ ನಡೆಸಲಿದೆ” ಎಂದು ದೃಢಪಡಿಸಿದ್ದಾರೆ.
ಹರ್ಷ ವ್ಯಕ್ತಪಡಿಸಿರುವ ಸಂಸದ ಕ್ಯಾ. ಚೌಟ
ತಜ್ಞರ ಜಂಟಿ ಸಮಿತಿ ರಚನೆಯ ಕುರಿತು ಹರ್ಷ ವ್ಯಕ್ತಪಡಿಸಿರುವ ಸಂಸದ ಕ್ಯಾ. ಬ್ರಿಜೇಶ್ ಚೌಟ, “ಇದು ಬೆಂಗಳೂರು-ಮಂಗಳೂರು ಹೈಸ್ಪೀಡ್ ಕಾರಿಡಾರ್ ಯೋಜನೆಯ ಸಂಬಂಧ ದಕ್ಷಿಣ ಕನ್ನಡ ಜನರ ಬಹುದಿನದ ಕನಸು ನನಸಾಗುವ ಮೊದಲ ಹೆಜ್ಜೆಯಾಗಿದೆ. ಶಿರಾಡಿ ಘಾಟಿ ಪ್ರದೇಶದ ಪರಿಸರ ಸೂಕ್ಷ್ಮತೆ ಮತ್ತು ಭೌಗೋಳಿಕ ಸಂಕೀರ್ಣತೆಯನ್ನು ಗಮನದಲ್ಲಿಟ್ಟುಕೊಂಡು, ರಸ್ತೆ ಹಾಗೂ ರೈಲು ಹಳಿಗಳ ಅಭಿವೃದ್ಧಿ ಕಾಮಗಾರಿಗೆ ಜಂಟಿ ಸಮೀಕ್ಷೆ ಮತ್ತು DPR ಮೇಲ್ವಿಚಾರಣೆಗೆ ತಜ್ಞರ ಸಮಿತಿ ನೇಮಿಸುವಂತೆ ಮನವಿ ಮಾಡಲಾಗಿತ್ತು. ನಮ್ಮ ಮನವಿಗೆ ತಕ್ಷಣ ಸ್ಪಂದಿಸಿದ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ಕೃತಜ್ಞತೆ ಸಲ್ಲಿಸುತ್ತೇನೆ” ಎಂದಿದ್ದಾರೆ.
ಈ ಸಮಿತಿಯು ರಸ್ತೆ ಮತ್ತು ರೈಲು ಸುರಂಗ ಮಾರ್ಗದ ಕಾರ್ಯಸಾಧ್ಯತೆಯನ್ನು ಪರಿಶೀಲಿಸಲಿದೆ, ಇದರೊಂದಿಗೆ ಬೆಂಗಳೂರು-ಮಂಗಳೂರು ಹೈಸ್ಪೀಡ್ ಕಾರಿಡಾರ್ DPR ಪ್ರಕ್ರಿಯೆ ಚುರುಕುಗೊಳ್ಳಲಿದೆ ಎಂದು ಕ್ಯಾ. ಚೌಟ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಕರಾವಳಿ ಮತ್ತು ಮಂಗಳೂರು ಬಂದರಿನ ಸಮಗ್ರ ಅಭಿವೃದ್ಧಿ ದೃಷ್ಟಿಯಿಂದ ಬೆಂಗಳೂರು-ಮಂಗಳೂರು ನಡುವೆ ಅತ್ಯಾಧುನಿಕ ರೈಲ್ವೇ ಮತ್ತು ಹೆದ್ದಾರಿ ಸಂಪರ್ಕ ಅಗತ್ಯವಿದೆ. ಈ ನಿಟ್ಟಿನಲ್ಲಿ, ಶಿರಾಡಿ ಘಾಟ್ನಲ್ಲಿ ಹೆಚ್ಚುವರಿ ದ್ವಿಪಥ ನಿರ್ಮಾಣಕ್ಕೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮತ್ತು ರೈಲ್ವೆ ಇಲಾಖೆ ಜಂಟಿಯಾಗಿ ವಿಸ್ತೃತ ಯೋಜನಾ ವರದಿ (DPR) ಸಿದ್ಧಪಡಿಸಲು ಸಮಿತಿ ರಚಿಸುವಂತೆ ಕ್ಯಾ. ಚೌಟ ಅವರು ಜುಲೈನಲ್ಲಿ ಹೆದ್ದಾರಿ ಇಲಾಖೆಗೆ ಪತ್ರ ಬರೆದು, ನಂತರ ನವದೆಹಲಿಯಲ್ಲಿ ನಿತಿನ್ ಗಡ್ಕರಿ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದರು. ಅವರ ಪ್ರಯತ್ನಕ್ಕೆ ಈಗ ಫಲ ಸಿಕ್ಕಿದೆ.
ಮಂಗಳೂರು
Bantwal rape case verdict ಮಂಗಳೂರು: ಮಹಿಳೆ ಮೇಲೆ ಹಲ್ಲೆ ನಡೆಸಿ ಅತ್ಯಾಚಾರ : ಆರೋಪಿಗೆ 10 ವರ್ಷ ಜೈಲು, ₹54 ಸಾವಿರ ದಂಡ

ಬಂಟ್ವಾಳ: ಮಹಿಳೆಗೆ ಹಲ್ಲೆ ನಡೆಸಿ ಅತ್ಯಾಚಾರವೆಸಗಿ , ಜೀವ ಬೆದರಿಕೆ ಹಾಕಿದ ಅಪರಾಧಿಗೆ 10 ವರ್ಷಗಳ ಜೈಲು ಶಿಕ್ಷೆ ಹಾಗೂ ₹54 ಸಾವಿರ ದಂಡ ವಿಧಿಸಿ ಮಂಗಳೂರಿನ 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಆದೇಶಿಸಿದೆ.
Bantwal rape case verdict: ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2021ರಲ್ಲಿ ಈ ಘಟನೆ ನಡೆದಿತ್ತು. ಸಂತ್ರಸ್ತ ಮಹಿಳೆಯ ಮನೆಯ ನೆರೆಮನೆಯ ನಿವಾಸಿಯಾಗಿದ್ದ ಅನಿಲ್ ಎಂಬಾತ ಮಹಿಳೆಯ ಮೇಲೆ ಹಲ್ಲೆ ನಡೆಸಿ ಅತ್ಯಾಚಾರವೆಸಗಿದ್ದಲ್ಲದೆ, ಜೀವ ಬೆದರಿಕೆಯನ್ನೂ ಹಾಕಿದ್ದ ಎಂದು ಆರೋಪಿಸಲಾಗಿತ್ತು. ಈ ಕುರಿತು ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅ.ಕ್ರ. 92/2021ರಂತೆ ಭಾರತೀಯ ದಂಡ ಸಂಹಿತೆಯ ಕಲಂ 376, 448, 323, 504 ಹಾಗೂ 506ರ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.
ಪ್ರಕರಣದ ತನಿಖೆ ಕೈಗೆತ್ತಿಕೊಂಡಿದ್ದ ಅಂದಿನ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕ ಪ್ರಸನ್ನ ಎಂ.ಎಸ್. ಅವರು ಆರೋಪಿಯನ್ನು ಪತ್ತೆಹಚ್ಚಿದ್ದರು. ಬಳಿಕ ಪ್ರಕರಣದ ತನಿಖಾಧಿಕಾರಿಗಳಾಗಿದ್ದ ಬಂಟ್ವಾಳ ವೃತ್ತ ನಿರೀಕ್ಷಕ ಟಿ.ಡಿ. ನಾಗರಾಜ್ ಅವರು ಅಗತ್ಯ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.
ಮಂಗಳೂರಿನ 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದಲ್ಲಿ ನಡೆದ ವಿಚಾರಣೆಯಲ್ಲಿ ಆರೋಪಿತನ ವಿರುದ್ಧದ ಆರೋಪಗಳು ಸಾಬೀತಾದ ಹಿನ್ನೆಲೆಯಲ್ಲಿ ನ್ಯಾಯಾಧೀಶರಾದ ರಾಜೇಶ ಮಾರುತಿ ಕಾಮಟೆ ಅವರು ಆರೋಪಿಗೆ 10 ವರ್ಷಗಳ ಜೈಲು ಶಿಕ್ಷೆ ಹಾಗೂ ₹54,000 ದಂಡ ವಿಧಿಸಿ ಆದೇಶ ಹೊರಡಿಸಿದ್ದಾರೆ.
ಪ್ರಕರಣದಲ್ಲಿ ಸರ್ಕಾರಿ ಅಭಿಯೋಜಕ ಮೋತಿಲಾಲ ಚೌಧರಿ ಅವರು ಸರ್ಕಾರದ ಪರವಾಗಿ ಸಮರ್ಥವಾಗಿ ವಾದ ಮಂಡಿಸಿದ್ದರು.
ಮಂಗಳೂರು
Mangalore-ಮಂಗಳೂರು ವಿದ್ಯಾರ್ಥಿನಿ ಅಪಹರಣ ಪ್ರಕರಣಕ್ಕೆ ಹೊಸ ತಿರುವು: ಮನೆಯವರ ಜೊತೆ ತೆರಳಲು ಯುವತಿ ನಕಾರ..!
ಮಂಗಳೂರಿನ ದೇರಳಕಟ್ಟೆಯ ಖಾಸಗಿ ವೈದ್ಯಕೀಯ ಕಾಲೇಜು ಆವರಣದಿಂದ ವೈದ್ಯಕೀಯ ವಿದ್ಯಾರ್ಥಿನಿಯನ್ನು ಮಹೀಂದ್ರಾ ಥಾರ್ ವಾಹನದಲ್ಲಿ ಬಲವಂತವಾಗಿ ಕರೆದೊಯ್ದಿದ್ದ ಪ್ರಕರಣ ಇದೀಗ ಹೊಸ ತಿರುವು ಪಡೆದುಕೊಂಡಿದೆ. ಕೇರಳಂನಲ್ಲಿ ವಿದ್ಯಾರ್ಥಿನಿಯನ್ನು ಪತ್ತೆಹಚ್ಚಿದ ಪೊಲೀಸರು ಆಕೆಯ ಹೇಳಿಕೆ ದಾಖಲಿಸಿದ್ದು, ಮನೆಯವರ ಜೊತೆ ತೆರಳಲು ತನಗೆ ಇಷ್ಟವಿಲ್ಲ ಎಂದು ಯುವತಿ ಸ್ಪಷ್ಟಪಡಿಸಿದ್ದಾಳೆ.
ಮಂಗಳೂರು: ಮಂಗಳೂರಿನ ದೇರಳಕಟ್ಟೆಯ ಖಾಸಗಿ ವೈದ್ಯಕೀಯ ಕಾಲೇಜು ಆವರಣದಿಂದ ವೈದ್ಯಕೀಯ ವಿದ್ಯಾರ್ಥಿನಿಯನ್ನು ಮಹೀಂದ್ರಾ ಥಾರ್ ವಾಹನದಲ್ಲಿ ಬಲವಂತವಾಗಿ ಕರೆದೊಯ್ದಿದ್ದ ಪ್ರಕರಣ ಇದೀಗ ಹೊಸ ತಿರುವು ಪಡೆದುಕೊಂಡಿದೆ. ಕೇರಳಂನಲ್ಲಿ ವಿದ್ಯಾರ್ಥಿನಿಯನ್ನು ಪತ್ತೆಹಚ್ಚಿದ ಪೊಲೀಸರು ಆಕೆಯ ಹೇಳಿಕೆ ದಾಖಲಿಸಿದ್ದು, ಮನೆಯವರ ಜೊತೆ ತೆರಳಲು ತನಗೆ ಇಷ್ಟವಿಲ್ಲ ಎಂದು ಯುವತಿ ಸ್ಪಷ್ಟಪಡಿಸಿದ್ದಾಳೆ.
ಏನಿದು ಪ್ರಕರಣ?
ನ.19ರ ಗುರುವಾರ ಸಂಜೆ ಕಾಲೇಜು ಆವರಣದಿಂದ ಕರೆದೊಯ್ಯಲ್ಪಟ್ಟ ಯುವತಿ ದಕ್ಷಿಣ ಕನ್ನಡ ಜಿಲ್ಲೆಯ ಪುಂಜಾಲಕಟ್ಟೆ ಮೂಲದವರಾಗಿದ್ದು, ದೇರಳಕಟ್ಟೆಯ ಕಣಚೂರು ವೈದ್ಯಕೀಯ ಕಾಲೇಜಿನಲ್ಲಿ ಪ್ರಥಮ ವರ್ಷದ ಎಂಬಿಬಿಎಸ್ ವ್ಯಾಸಂಗ ಮಾಡುತ್ತಿದ್ದಾರೆ ಎನ್ನಲಾಗಿದೆ.
ಯುವತಿ ಮಂಗಳೂರಿನ ಮತ್ತೊಂದು ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವ್ಯಾಸಂಗ ಮಾಡುತ್ತಿರುವ ಯುವಕನನ್ನು ಪ್ರೀತಿಸುತ್ತಿದ್ದಳು ಎನ್ನಲಾಗಿದೆ. ಈ ವಿಚಾರ ತಿಳಿದ ಯುವತಿಯ ಪೋಷಕರು ಹಾಗೂ ಸಂಬಂಧಿಕರು ಕಾಲೇಜು ಆವರಣಕ್ಕೆ ಆಗಮಿಸಿ, ಆಕೆಯ ಇಚ್ಛೆಗೆ ವಿರುದ್ಧವಾಗಿ ಬಲವಂತವಾಗಿ ಎಳೆದೊಯ್ದು ಮಹೀಂದ್ರಾ ಥಾರ್ ವಾಹನದಲ್ಲಿ ಕರೆದೊಯ್ದಿದ್ದರು. ಈ ಘಟನೆಗೆ ಸಂಬಂಧಿಸಿದ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದವು.
ಘಟನೆಯ ಬಳಿಕ ಕಾರ್ಯಾಚರಣೆ ನಡೆಸಿದ ಪೊಲೀಸರು, ಕೇರಳಂನ ಸಂಬಂಧಿಕರ ಮನೆಯಲ್ಲಿದ್ದ ವಿದ್ಯಾರ್ಥಿನಿಯನ್ನು ಪತ್ತೆಹಚ್ಚಿ ಸುರಕ್ಷಿತವಾಗಿ ಮಂಗಳೂರಿಗೆ ಕರೆತಂದಿದ್ದಾರೆ.
ಮನೆಯವರ ಜೊತೆ ಹೋಗಲು ನಿರಾಕರಣೆ
ಪೊಲೀಸರು ರಕ್ಷಿಸಿದ ಬಳಿಕ ಯುವತಿಯ ಹೇಳಿಕೆ ದಾಖಲಿಸಿದ್ದು, ತನ್ನ ಪೋಷಕರು ಅಥವಾ ಮನೆಯವರ ಜೊತೆ ಹೋಗಲು ಇಚ್ಛಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾಳೆ ಎನ್ನಲಾಗಿದೆ. ಯುವತಿ ವಯಸ್ಕಳಾಗಿರುವುದರಿಂದ ತಾನು ಎಲ್ಲಿ ವಾಸಿಸಬೇಕು ಎಂಬುದನ್ನು ನಿರ್ಧರಿಸುವ ಕಾನೂನುಬದ್ಧ ಹಕ್ಕು ಆಕೆಗಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.
ವೈದ್ಯಕೀಯ ತಪಾಸಣೆಯ ಬಳಿಕ ಯುವತಿಯ ಇಚ್ಛೆಯ ಸ್ಥಳಕ್ಕೆ ಅಥವಾ ಸಾಂತ್ವನ ಕೇಂದ್ರಕ್ಕೆ ಪೊಲೀಸ್ ರಕ್ಷಣೆಯಲ್ಲಿ ಕಳುಹಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ವರದಿಯಾಗಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆ (BNS) ಸೆಕ್ಷನ್ 140(3) ಮತ್ತು 126ರ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಇಬ್ಬರನ್ನು ವಿಚಾರಣೆಗೆ ಕರೆಸಲಾಗಿದೆ. ಏಳು ವರ್ಷಕ್ಕಿಂತ ಕಡಿಮೆ ಶಿಕ್ಷೆಯಿರುವ ಅಪರಾಧವಾಗಿರುವ ಹಿನ್ನೆಲೆಯಲ್ಲಿ ಬಿಎನ್ಎಸ್ಎಸ್ ಅಡಿಯಲ್ಲಿ ನೋಟಿಸ್ ಜಾರಿ ಮಾಡುವ ಪ್ರಕ್ರಿಯೆ ನಡೆಯುತ್ತಿದೆ ಎಂದು ವರದಿಯಾಗಿದೆ.
ನಿಧನ ವಾರ್ತೆ
Mudbidri-ಮಂಗಳೂರಿನಲ್ಲಿ ಮೇಲ್ಛಾವಣಿ ಕೆಲಸದ ವೇಳೆ ಅವಘಡ: ಮೂಡುಬಿದಿರೆ ತಾ.ಪಂ. ಮಾಜಿ ಉಪಾಧ್ಯಕ್ಷ ಸಾವು
ಮೂಡುಬಿದಿರೆ ತಾಲೂಕು ಪಂಚಾಯತ್ನ ಮಾಜಿ ಉಪಾಧ್ಯಕ್ಷ ಸಂತೋಷ್ ಅವರು ಮಂಗಳೂರಿನಲ್ಲಿ ಮನೆಯ ಮೇಲ್ಛಾವಣಿಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಆಯತಪ್ಪಿ ಕೆಳಗೆ ಬಿದ್ದು ಮೃತಪಟ್ಟಿದ್ದಾರೆ. ಗುರುವಾರ ಸಂಭವಿಸಿದ ಈ ದುರಂತ ಘಟನೆ ದುಃಖಕ್ಕೆ ಕಾರಣವಾಗಿದೆ.
ಮೂಡುಬಿದಿರೆ, ನ.20: ಮೂಡುಬಿದಿರೆ ತಾಲೂಕು ಪಂಚಾಯತ್ನ ಮಾಜಿ ಉಪಾಧ್ಯಕ್ಷ ಸಂತೋಷ್ ಅವರು ಮಂಗಳೂರಿನಲ್ಲಿ ಮನೆಯ ಮೇಲ್ಛಾವಣಿಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಆಯತಪ್ಪಿ ಕೆಳಗೆ ಬಿದ್ದು ಮೃತಪಟ್ಟಿದ್ದಾರೆ. ಗುರುವಾರ ಸಂಭವಿಸಿದ ಈ ದುರಂತ ಘಟನೆ ದುಃಖಕ್ಕೆ ಕಾರಣವಾಗಿದೆ.
ಮೂಡುಬಿದಿರೆ ತಾಲೂಕಿನ ಬೆಳುವಾಯಿ ನಿವಾಸಿಯಾಗಿದ್ದ ಸಂತೋಷ್ ಅವರು ಬೆಳುವಾಯಿ ಕ್ಷೇತ್ರದಿಂದ ತಾಲೂಕು ಪಂಚಾಯತ್ ಸದಸ್ಯರಾಗಿ ಆಯ್ಕೆಯಾಗಿದ್ದರು. ಹೊಸದಾಗಿ ರಚನೆಯಾಗಿದ್ದ ಮೂಡುಬಿದಿರೆ ತಾಲೂಕು ಪಂಚಾಯತ್ನ ಮೊದಲ ಅವಧಿಯಲ್ಲಿ ಉಪಾಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು.
ಸಂತೋಷ್ ಅವರು ಪ್ರತಿದಿನ ಕೆಲಸದ ನಿಮಿತ್ತ ಮಂಗಳೂರಿಗೆ ತೆರಳುತ್ತಿದ್ದರು. ಗುರುವಾರ ಬೇರೆ ಸ್ಥಳದಲ್ಲಿ ಬದಲಿ ಕೆಲಸಗಾರನಾಗಿ ಕೆಲಸಕ್ಕೆ ತೆರಳಿದ್ದ ಅವರು, ಮನೆಯೊಂದರ ಮೇಲ್ಛಾವಣಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ ಕೆಳಕ್ಕೆ ಬಿದ್ದಿದ್ದಾರೆ ಎನ್ನಲಾಗಿದೆ.
ಘಟನೆಯಲ್ಲಿ ಗಂಭೀರ ಗಾಯಗೊಂಡ ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ.
-
ಮಂಗಳೂರು8 hours agoMangalore-ಮಂಗಳೂರು ವಿದ್ಯಾರ್ಥಿನಿ ಅಪಹರಣ ಪ್ರಕರಣಕ್ಕೆ ಹೊಸ ತಿರುವು: ಮನೆಯವರ ಜೊತೆ ತೆರಳಲು ಯುವತಿ ನಕಾರ..!
-
ಬಿಗ್ ನ್ಯೂಸ್15 hours agoBail rejected-ಸಿದ್ದರಾಮಯ್ಯ ವಿರುದ್ಧದ ‘ಸ್ಟಿಂಗ್’ ಪ್ರಕರಣ: ಕೃಪಾ ಆಳ್ವಾ, ರಾಕೇಶ್ ಶೆಟ್ಟಿ ಸೇರಿ 6 ಮಂದಿಯ ಜಾಮೀನು ಅರ್ಜಿ ವಜಾ
-
ಅಂತರ ರಾಜ್ಯ13 hours agoFormer CBI officer-ಅಧಿಕಾರ, ಹಣ, ಐಷಾರಾಮಿ ಬದುಕಿಗೆ ಗುಡ್ಬೈ; ಗುಹೆಯಲ್ಲಿ ಧ್ಯಾನ ಮಾಡುತ್ತಿರುವ ಮಾಜಿ ಸಿಬಿಐ ಅಧಿಕಾರಿ..!
-
ಸಿನೆಮಾ13 hours agoDawood-‘ಧುರಂಧರ್ ‘ ನಲ್ಲಿ ದಾವೂದ್ ನ ತೋರಿಸಿದ ರೀತಿ ವಾಸ್ತವವಲ್ಲ…! ಮೋಸ್ಟ್ ವಾಂಟೆಡ್ ಪಾತಕಿ ಈಗ ಹೇಗಿದ್ದಾನೆ ಗೊತ್ತೇ..? ಮಾಜಿ FBI ಅಧಿಕಾರಿ ಹೇಳಿದ್ದೇನೂ..?
-
ನಿಧನ ವಾರ್ತೆ14 hours agoHeart attack-ಸಾಲಿಗ್ರಾಮ: ಕಚೇರಿಯಲ್ಲೇ ಹೃದಯಾಘಾತ; ಬಹುಮುಖ ಪ್ರತಿಭೆ ದಿನೇಶ್ ಹೊಳ್ಳ ನಿಧನ
-
ನಿಧನ ವಾರ್ತೆ14 hours agoMudbidri-ಮಂಗಳೂರಿನಲ್ಲಿ ಮೇಲ್ಛಾವಣಿ ಕೆಲಸದ ವೇಳೆ ಅವಘಡ: ಮೂಡುಬಿದಿರೆ ತಾ.ಪಂ. ಮಾಜಿ ಉಪಾಧ್ಯಕ್ಷ ಸಾವು
-
ಅಂತರ ರಾಜ್ಯ8 hours agoArrested-14ವರ್ಷಗಳ ಹಿಂದೆ ನಿಗೂಢವಾಗಿ ನಾಪತ್ತೆಯಾಗಿ ಅಪಹರಣಕಾರರ ಬೇಡಿಕೆಯಂತೆ 25ಲಕ್ಷ ರೂ ನೀಡಿದರೂ ಮರಳಿ ಬಾರದ ಶಿಕ್ಷಕನ ಪ್ರಕರಣಕ್ಕೆ ಮಹತ್ವದ ತಿರುವು..!
-
ನಿಧನ ವಾರ್ತೆ14 hours agoOne-sided love-ಇನ್ಸ್ಟಾಗ್ರಾಮ್ ಇನ್ಫ್ಲುಯೆನ್ಸರ್ ಮೇಲಿನ ಒನ್ಸೈಡೆಡ್ ಲವ್; ಹಲ್ಲೆಗೊಳಗಾದ ಯುವಕ ಸಾವು















