ಅಪರಾಧ
FIR-ಡಿಕೆ ಶಿವಕುಮಾರ್ ವಿರುದ್ಧ ನಕಲಿ ವಿಡಿಯೊ: ಇನ್ಸ್ಟಾಗ್ರಾಂ ಖಾತೆಯೊಂದರ ವಿರುದ್ಧ FIR
ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ವ್ಯಕ್ತಿತ್ವಕ್ಕೆ ಧಕ್ಕೆ ತರುವ ಉದ್ದೇಶದಿಂದ, ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನವನ್ನು ಬಳಸಿ ನಕಲಿ ವಿಡಿಯೊ ಸೃಷ್ಟಿಸಿದ್ದ ಆರೋಪದ ಮೇಲೆ ‘ಕನ್ನಡ ಚಿತ್ರದುರ್ಗ’ ಎನ್ನುವ ಇನ್ಸ್ಟಾಗ್ರಾಂ ಖಾತೆಯ ವಿರುದ್ಧ ಇಲ್ಲಿನ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಶುಕ್ರವಾರ ಎಫ್ಐಆರ್ ದಾಖಲಾಗಿದೆ.
ಬೆಂಗಳೂರು: ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ವ್ಯಕ್ತಿತ್ವಕ್ಕೆ ಧಕ್ಕೆ ತರುವ ಉದ್ದೇಶದಿಂದ, ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನವನ್ನು ಬಳಸಿ ನಕಲಿ ವಿಡಿಯೊ ಸೃಷ್ಟಿಸಿದ್ದ ಆರೋಪದ ಮೇಲೆ ‘ಕನ್ನಡ ಚಿತ್ರದುರ್ಗ’ ಎನ್ನುವ ಇನ್ಸ್ಟಾಗ್ರಾಂ ಖಾತೆಯ ವಿರುದ್ಧ ಇಲ್ಲಿನ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಶುಕ್ರವಾರ ಎಫ್ಐಆರ್ ದಾಖಲಾಗಿದೆ.
ಸಿ.ಆರ್. ದೀಪು ಅವರು ನೀಡಿದ ದೂರಿನ ಮೇರೆಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಇನ್ಸ್ಟಾಗ್ರಾಂ ಖಾತೆದಾರರ ಪತ್ತೆ ಕಾರ್ಯ ನಡೆಸುತ್ತಿದ್ದಾರೆ.
ದೂರಿನಲ್ಲಿ, “ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ಅವರ ಬಗ್ಗೆ ಸಮಾಜದಲ್ಲಿ ಕೆಟ್ಟ ಅಭಿಪ್ರಾಯ ಮೂಡಿಸುವಂತೆ ವಿಡಿಯೊವನ್ನು ಎಡಿಟ್ ಮಾಡಿ, ಸಾಮಾಜಿಕ ಜಾಲತಾಣದಲ್ಲಿ ಪ್ರಸಾರ ಮಾಡಲಾಗಿದೆ. ಶಿವಕುಮಾರ್ ಅವರ ವ್ಯಕ್ತಿತ್ವಕ್ಕೆ ಧಕ್ಕೆ ತರುವ ಮತ್ತು ಸಮಾಜಕ್ಕೆ ಸುಳ್ಳು ಮಾಹಿತಿ ಬಿತ್ತಿರಿಸುವ ದುರುದ್ದೇಶದಿಂದ ಈ ಕೃತ್ಯ ಎಸಗಲಾಗಿದೆ. ಇದು ಸರ್ಕಾರಕ್ಕೂ ಮುಜುಗರ ಉಂಟು ಮಾಡಿದೆ” ಎಂದು ಉಲ್ಲೇಖಿಸಲಾಗಿದೆ.
ಅಪರಾಧ
Uppinangadi-ಬೈಕ್ ಅಡ್ಡಗಟ್ಟಿ ಚೂರಿ ತೋರಿಸಿ ಬೆದರಿಸಿ ನಗದು, ಮೊಬೈಲ್ ದರೋಡೆ; ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲು
ಬೈಕ್ನಲ್ಲಿ ತೆರಳುತ್ತಿದ್ದ ಯುವಕ ಹಾಗೂ ಮಹಿಳೆಯನ್ನು ಕಾರಿನಲ್ಲಿ ಬಂದ ದುಷ್ಕರ್ಮಿಗಳು ಅಡ್ಡಗಟ್ಟಿ, ಚೂರಿ ತೋರಿಸಿ ಬೆದರಿಸಿ ನಗದು ಮತ್ತು ಮೊಬೈಲ್ ಫೋನ್ಗಳನ್ನು ದೋಚಿದ ಆರೋಪದ ಮೇಲೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಡಬ ತಾಲೂಕಿನ ಕೋನಾಜೆ ಗ್ರಾಮದ ಸಿ.ಆರ್.ಸಿ. ಕಾಲೋನಿ ನಿವಾಸಿ ಮಿಥಿಲೇಶ್ (18) ಅವರು ನೀಡಿದ ದೂರಿನ ಪ್ರಕಾರ, ಅ.16ರಂದು ಬೆಳಗ್ಗೆ 11.45ರ ಸುಮಾರಿಗೆ ಈ ಘಟನೆ ನಡೆದಿದೆ.
ಉಪ್ಪಿನಂಗಡಿ: ಬೈಕ್ನಲ್ಲಿ ತೆರಳುತ್ತಿದ್ದ ಯುವಕ ಹಾಗೂ ಮಹಿಳೆಯನ್ನು ಕಾರಿನಲ್ಲಿ ಬಂದ ದುಷ್ಕರ್ಮಿಗಳು ಅಡ್ಡಗಟ್ಟಿ, ಚೂರಿ ತೋರಿಸಿ ಬೆದರಿಸಿ ನಗದು ಮತ್ತು ಮೊಬೈಲ್ ಫೋನ್ಗಳನ್ನು ದೋಚಿದ ಆರೋಪದ ಮೇಲೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಡಬ ತಾಲೂಕಿನ ಕೋನಾಜೆ ಗ್ರಾಮದ ಸಿ.ಆರ್.ಸಿ. ಕಾಲೋನಿ ನಿವಾಸಿ ಮಿಥಿಲೇಶ್ (18) ಅವರು ನೀಡಿದ ದೂರಿನ ಪ್ರಕಾರ, ಅ.16ರಂದು ಬೆಳಗ್ಗೆ 11.45ರ ಸುಮಾರಿಗೆ ಈ ಘಟನೆ ನಡೆದಿದೆ.
ಮಿಥಿಲೇಶ್ ಅವರು ತಮ್ಮ ಅತ್ತೆ ಮಹಾದೇವಿ ಅವರೊಂದಿಗೆ ಪಡಿತರ ಚೀಟಿಯ ಕೆವೈಸಿಗಾಗಿ ಹೆಬ್ಬೆಟ್ಟು ನೀಡಲು ಬೈಕ್ನಲ್ಲಿ ಬಳಂಜದಿಂದ ಕೋನಾಜೆಗೆ ತೆರಳುತ್ತಿದ್ದರು. ಬೆಳ್ತಂಗಡಿ ತಾಲೂಕಿನ ಉರುವಾಲು ಗ್ರಾಮದ ಹಲೇಜಿ ಎಂಬಲ್ಲಿ ಗುರುವಾಯನಕೆರೆ–ಉಪ್ಪಿನಂಗಡಿ ರಸ್ತೆಯಲ್ಲಿ ಸಂಚರಿಸುತ್ತಿದ್ದಾಗ ಕಾರಿನಲ್ಲಿ ಬಂದ ಆರೋಪಿಗಳು ಬೈಕ್ಗೆ ಅಡ್ಡಗಟ್ಟಿ ನಿಲ್ಲಿಸಿದ್ದಾರೆ ಎನ್ನಲಾಗಿದೆ.
ಈ ವೇಳೆ ತನ್ನೀಶ್ ಹಾಗೂ ಇತರ ಇಬ್ಬರು ಕಾರಿನಿಂದ ಇಳಿದು, ಹಣದ ವಿಚಾರವಾಗಿ ಪ್ರಶ್ನಿಸಿ ಬೆದರಿಕೆ ಹಾಕಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಅವರೊಂದಿಗೆ ಇದ್ದ ಮತ್ತೊಬ್ಬ ವ್ಯಕ್ತಿ ಚೂರಿ ತೋರಿಸಿ ಕೊಲೆ ಬೆದರಿಕೆ ಹಾಕಿದ್ದಾನೆ ಎನ್ನಲಾಗಿದೆ.
ಬಳಿಕ ಮಿಥಿಲೇಶ್ ಅವರ ಪ್ಯಾಂಟ್ ಕಿಸೆಯಲ್ಲಿದ್ದ ಜಿಯೋ ಸಿಮ್ ಹೊಂದಿದ್ದ ಸುಮಾರು 3,000 ರೂ. ಮೌಲ್ಯದ ಮೊಬೈಲ್ ಫೋನ್ ಹಾಗೂ ಅಂಗಿಯ ಕಿಸೆಯಲ್ಲಿದ್ದ 5,200 ರೂ. ನಗದನ್ನು ಬಲವಂತವಾಗಿ ಕಿತ್ತುಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ.
ಇದನ್ನು ಪ್ರಶ್ನಿಸಿದ ಮಿಥಿಲೇಶ್ ಅವರ ಅತ್ತೆಯ ಕೈಯಲ್ಲಿದ್ದ ಜಿಯೋ ಸಿಮ್ ಹೊಂದಿದ್ದ ಸುಮಾರು 2,000 ರೂ. ಮೌಲ್ಯದ ಮೊಬೈಲ್ ಫೋನ್ನ್ನೂ ಕಿತ್ತುಕೊಂಡು ಆರೋಪಿಗಳು ಪರಾರಿಯಾಗಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಈ ಸಂಬಂಧ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 134/2026ರ ಅಡಿಯಲ್ಲಿ ಭಾರತೀಯ ನ್ಯಾಯ ಸಂಹಿತೆ (ಬಿಎನ್ಎಸ್), 2023ರ ಕಲಂ 126(2), 308(5) ಹಾಗೂ 3(5)ರ ಪ್ರಕಾರ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ಸ್ಥಳೀಯ
Youth Congress-ನಾವೂರು ಪ್ರಕರಣ ಕಾಂಗ್ರೆಸ್ ಪಕ್ಷ ಹಾಗೂ ನಾಯಕರ ವಿರುದ್ಧ ಅಪಪ್ರಚಾರಕ್ಕೆ ಯುವ ಕಾಂಗ್ರೆಸ್ ನಿಂದ ಪೊಲೀಸ್ ಠಾಣೆಗೆ ದೂರು
ಬೆಳ್ತಂಗಡಿ ತಾಲೂಕಿನ ನಾವುರಿನಲ್ಲಿ ಇತ್ತೀಚೆಗೆ ನಡೆದ ಕ್ಲಿನಿಕ್ಗೆ ಬೆಂಕಿ ಹಚ್ಚಿದ ಅಹಿತಕರ ಘಟನೆಯನ್ನು ಬಂಡವಾಳ ಮಾಡಿಕೊಂಡು, ಕಾಂಗ್ರೆಸ್ ಪಕ್ಷ ಹಾಗೂ ಅದರ ನಾಯಕರ ವರ್ಚಸ್ಸಿಗೆ ಮಸಿ ಬಳಿಯಲು ವ್ಯವಸ್ಥಿತ ಸಂಚು ರೂಪಿಸಲಾಗಿದೆ ಎಂದು ಬೆಳ್ತಂಗಡಿ ಯುವ ಕಾಂಗ್ರೆಸ್ ತೀವ್ರ ಆಕ್ರೋಶ ವ್ಯಕ್ತಪಡಿಸಿ , ಸಾಮಾಜಿಕ ಜಾಲತಾಣಗಳಲ್ಲಿ ಅಪಪ್ರಚಾರ ನಡೆಸುವವರ ವಿರುದ್ಧ ಕಾನೂನು ಕ್ರಮಕ್ಕೆ ಒತ್ತಾಯಿಸಿ ಬೆಳ್ತಂಗಡಿ ಪೋಲಿಸ್ ಠಾಣೆಗೆ ದೂರು ನೀಡಲಾಗಿದೆ.
ಬೆಳ್ತಂಗಡಿ: ತಾಲೂಕಿನ ನಾವುರಿನಲ್ಲಿ ಇತ್ತೀಚೆಗೆ ನಡೆದ ಕ್ಲಿನಿಕ್ಗೆ ಬೆಂಕಿ ಹಚ್ಚಿದ ಅಹಿತಕರ ಘಟನೆಯನ್ನು ಬಂಡವಾಳ ಮಾಡಿಕೊಂಡು, ಕಾಂಗ್ರೆಸ್ ಪಕ್ಷ ಹಾಗೂ ಅದರ ನಾಯಕರ ವರ್ಚಸ್ಸಿಗೆ ಮಸಿ ಬಳಿಯಲು ವ್ಯವಸ್ಥಿತ ಸಂಚು ರೂಪಿಸಲಾಗಿದೆ ಎಂದು ಬೆಳ್ತಂಗಡಿ ಯುವ ಕಾಂಗ್ರೆಸ್ ತೀವ್ರ ಆಕ್ರೋಶ ವ್ಯಕ್ತಪಡಿಸಿ , ಸಾಮಾಜಿಕ ಜಾಲತಾಣಗಳಲ್ಲಿ ಅಪಪ್ರಚಾರ ನಡೆಸುವವರ ವಿರುದ್ಧ ಕಾನೂನು ಕ್ರಮಕ್ಕೆ ಒತ್ತಾಯಿಸಿ ಬೆಳ್ತಂಗಡಿ ಪೋಲಿಸ್ ಠಾಣೆಗೆ ದೂರು ನೀಡಲಾಗಿದೆ.
ಘಟನೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಪಕ್ಷ , ರಕ್ಷಿತ್ ಶಿವರಾಂ ರವರಿಗೆ ಸಂಬಂಧ ಕಲ್ಪಿಸಿ ಸಾಮಾಜಿಕ ಜಾಲತಾಣ ಫೇಸ್ಬುಕ್ , ವಾಟ್ಸಾಪ್ , ಇನ್ಸ್ಟಾಗ್ರಾಮ್ ಗಳಲ್ಲಿ ನಿರಂತರವಾಗಿ ಸುಳ್ಳು ಹಾಗೂ ಅವಹೇಳನಕಾರಿ ಸಂದೇಶಗಳನ್ನು ಹರಡುತ್ತಿರುವ ಕಿಡಿಗೇಡಿಗಳ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಗೆ ಯುವ ಕಾಂಗ್ರೆಸ್ ಬೆಳ್ತಂಗಡಿ ವತಿಯಿಂದ ದೂರು ನೀಡಲಾಗಿದೆ.
‘ಶ್ರೀ ಹರೀಶ್ ಪೂಂಜಾ ಅಭಿಮಾನಿ ಬಳಗ ಕರ್ನಾಟಕ’ ಹೆಸರಿನ ಫೇಸ್ಬುಕ್ ಪೇಜ್ ಹಾಗೂ ಇದೇ ಬಳಗದ ಹೆಸರಿನಲ್ಲಿರುವ ವಿವಿಧ ವಾಟ್ಸಾಪ್ ಗ್ರೂಪ್ಗಳು ಮತ್ತು ಇನ್ಸ್ಟಾಗ್ರಾಮ್ ಹ್ಯಾಂಡಲ್ಗಳ ಮೂಲಕ, ಹಾಗೂ ಬ್ರೇಕಿಂಗ್ ನ್ಯೂಸ್ ವಾಟ್ಸಪ್ ಗ್ರೂಪ್ ಗಳಲ್ಲಿ ನಾವೂರು ಪ್ರಕರಣಕ್ಕೂ ಕಾಂಗ್ರೆಸ್ ನಾಯಕರಿಗೂ ಇಲ್ಲದ ಸಲ್ಲದ ಲಿಂಕ್ ಕಲ್ಪಿಸಿ, ಉದ್ದೇಶಪೂರ್ವಕ ಅಪಪ್ರಚಾರ ನಡೆಸಲಾಗುತ್ತಿದೆ ಎಂದು ಯುವ ಕಾಂಗ್ರೆಸ್ ಮುಖಂಡರು ಆರೋಪಿಸಿದ್ದಾರೆ.
ಯಾವುದೇ ಸಾಕ್ಷಿ , ಆಧಾರಗಳಿಲ್ಲದೆ ಫೇಸ್ಬುಕ್, ವಾಟ್ಸಾಪ್ ಹಾಗೂ ಇನ್ಸ್ಟಾಗ್ರಾಮ್ನಂತಹ ಪ್ರಮುಖ ಸಾಮಾಜಿಕ ಜಾಲತಾಣಗಳಲ್ಲಿ ಕಾಂಗ್ರೆಸ್ ಪಕ್ಷ ಹಾಗೂ ನಾಯಕರ ವಿರುದ್ಧ ನಿರಂತರವಾಗಿ ಸುಳ್ಳು ಪೋಸ್ಟ್ ಹರಡಲಾಗುತ್ತಿದೆ. ಇದು ಶಾಸಕ ಹರೀಶ್ ಪೂಂಜಾ ಅವರ ಅಭಿಮಾನಿ ಬಳಗದ ಹೆಸರಿನಲ್ಲಿ ನಡೆಯುತ್ತಿರುವ ಅಗ್ಗದ ಹಾಗೂ ಕೀಳು ಮಟ್ಟದ ರಾಜಕೀಯ.
ಉದ್ದೇಶಪೂರ್ವಕವಾಗಿ ಕಾಂಗ್ರೆಸ್ ಪಕ್ಷದ ತೇಜೋವಧೆಗೆ ಯತ್ನಿಸುತ್ತಿರುವ ಹಾಗೂ ವಾಟ್ಸಾಪ್, ಇನ್ಸ್ಟಾಗ್ರಾಮ್ ಮತ್ತು ಫೇಸ್ಬುಕ್ ಮೂಲಕ ಸುಳ್ಳು ಸುದ್ದಿ ಹರಡುತ್ತಿರುವ ‘ಶ್ರೀ ಹರೀಶ್ ಪೂಂಜಾ ಅಭಿಮಾನಿ ಬಳಗ ಕರ್ನಾಟಕ’ ಹೆಸರಿನ ಎಲ್ಲ ಸೋಶಿಯಲ್ ಮೀಡಿಯಾ ಅಕೌಂಟ್ಗಳನ್ನು ತಕ್ಷಣವೇ ನಿರ್ಬಂಧಿಸಬೇಕು ಜತೆಗೆ, ಇವುಗಳನ್ನು ನಿರ್ವಹಿಸುತ್ತಿರುವ ಕಿಡಿಗೇಡಿಗಳನ್ನು ಪತ್ತೆ ಹಚ್ಚಿ ಅವರ ವಿರುದ್ಧ ಸೈಬರ್ ಕ್ರೈಮ್ ಕಾಯ್ದೆಯಡಿ ಸೂಕ್ತ ಹಾಗೂ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಯುವ ಕಾಂಗ್ರೆಸ್ ಬೆಳ್ತಂಗಡಿ ಘಟಕವು ಪೊಲೀಸರನ್ನು ಒತ್ತಾಯಿಸಿದೆ.
ಈ ಸಂದರ್ಭದಲ್ಲಿ ಬ್ಲಾಕ್ ಯುವ ಕಾಂಗ್ರೆಸ್ ನಗರ ಘಟಕದ ಅಧ್ಯಕ್ಷ ನವೀನ್ ಕುಮಾರ್ ಗೌಡ , ತಾಲೂಕು ಯುವ ಕಾಂಗ್ರೆಸ್ ಉಪಾಧ್ಯಕ್ಷ ಅರುಣ್ ಲೋಬೋ , ಯುವ ಕಾಂಗ್ರೆಸ್ ಮುಖಂಡರಾದ ಗಣೇಶ್ ಕಣಿಯೂರು , ಅರುಣ್ ಪಿಂಟೊ ಉಪಸ್ಥಿತರಿದ್ದರು.
ಅಪರಾಧ
Puttur-ಪುತ್ತೂರು: ಮಹಿಳೆಯ ಮೇಲೆ ಹಲ್ಲೆ, ಮಾನಭಂಗ ಪ್ರಕರಣ; ಮೂವರು ಆರೋಪಿಗಳಿಗೆ ಜೈಲು ಶಿಕ್ಷೆ
ಭೂ ವಿವಾದದ ಹಿನ್ನೆಲೆಯಲ್ಲಿ ಮಹಿಳೆಯ ಮೇಲೆ ಹಲ್ಲೆ ನಡೆಸಿ, ಮಾನಭಂಗ ಮಾಡಿದ ಪ್ರಕರಣದಲ್ಲಿ ಮೂವರು ಆರೋಪಿಗಳಿಗೆ ಪುತ್ತೂರಿನ ನ್ಯಾಯಾಲಯ ಶಿಕ್ಷೆ ವಿಧಿಸಿದೆ. 2022ರ ಡಿಸೆಂಬರ್ 27ರಂದು ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿತ್ತು.
ಪುತ್ತೂರು: ಭೂ ವಿವಾದದ ಹಿನ್ನೆಲೆಯಲ್ಲಿ ಮಹಿಳೆಯ ಮೇಲೆ ಹಲ್ಲೆ ನಡೆಸಿ, ಮಾನಭಂಗ ಮಾಡಿದ ಪ್ರಕರಣದಲ್ಲಿ ಮೂವರು ಆರೋಪಿಗಳಿಗೆ ಪುತ್ತೂರಿನ ನ್ಯಾಯಾಲಯ ಶಿಕ್ಷೆ ವಿಧಿಸಿದೆ.
2022ರ ಡಿಸೆಂಬರ್ 27ರಂದು ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿತ್ತು. ಈ ಸಂಬಂಧ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 113/2022ರ ಅಡಿಯಲ್ಲಿ ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 447, 504, 506, 323 ಹಾಗೂ 354ರೊಂದಿಗೆ ಸೆಕ್ಷನ್ 34ರ ಅನ್ವಯ ಪ್ರಕರಣ ದಾಖಲಾಗಿತ್ತು.
ಅಂದು ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಸುಬ್ರಹ್ಮಣ್ಯ ಎಚ್. ಅವರು ಪ್ರಕರಣದ ತನಿಖೆ ನಡೆಸಿ, ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಿ ಅರುಣ್ ಕುಮಾರ್, ವಿನಯ್ ಕುಮಾರ್ ಜಿ. ಹಾಗೂ ಸುಂದರ್ ಪಿ.ಎಂ. ವಿರುದ್ಧ ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದರು.
ಪ್ರಕರಣದ ವಿಚಾರಣೆಯನ್ನು ಪುತ್ತೂರಿನ ಹೆಚ್ಚುವರಿ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜೆಎಂಎಫ್ಸಿ ನ್ಯಾಯಾಲಯದ ನ್ಯಾಯಾಧೀಶ ದೇವರಾಜ್ ವೈ.ಎಚ್. ಅವರು ನಡೆಸಿದರು. ವಿಚಾರಣೆ ವೇಳೆ ಆರೋಪಗಳು ಸಾಬೀತಾದ ಹಿನ್ನೆಲೆಯಲ್ಲಿ ನ್ಯಾಯಾಲಯ ಶಿಕ್ಷೆ ಪ್ರಕಟಿಸಿದೆ.
ಮೊದಲ ಆರೋಪಿಗೆ ಎರಡು ವರ್ಷ ಜೈಲು ಶಿಕ್ಷೆ
ಐಪಿಸಿ ಸೆಕ್ಷನ್ 323ರ ಅಡಿಯಲ್ಲಿ ಮೊದಲ ಆರೋಪಿ ಅರುಣ್ ಕುಮಾರ್ಗೆ ಆರು ತಿಂಗಳ ಸರಳ ಜೈಲು ಶಿಕ್ಷೆ ವಿಧಿಸಲಾಗಿದೆ. ಸೆಕ್ಷನ್ 354ರ ಅಡಿಯಲ್ಲಿ ಎರಡು ವರ್ಷಗಳ ಸರಳ ಜೈಲು ಶಿಕ್ಷೆ ಹಾಗೂ 10,000 ರೂ. ದಂಡ ವಿಧಿಸಲಾಗಿದೆ. ದಂಡ ಪಾವತಿಸಲು ವಿಫಲವಾದಲ್ಲಿ ಹೆಚ್ಚುವರಿಯಾಗಿ ಮೂರು ತಿಂಗಳ ಸರಳ ಜೈಲು ಶಿಕ್ಷೆ ಅನುಭವಿಸಬೇಕಾಗುತ್ತದೆ.
ಮೂವರು ಆರೋಪಿಗಳಿಗೆ ತಲಾ ಒಂದು ವರ್ಷ ಜೈಲು
ಐಪಿಸಿ ಸೆಕ್ಷನ್ 506ರ ಅಡಿಯಲ್ಲಿ ಮೂವರು ಆರೋಪಿಗಳಿಗೂ ತಲಾ ಒಂದು ವರ್ಷದ ಸರಳ ಜೈಲು ಶಿಕ್ಷೆ ವಿಧಿಸಲಾಗಿದೆ. ಅಲ್ಲದೆ, ಪ್ರತಿಯೊಬ್ಬರಿಗೂ ತಲಾ 5,000 ರೂ. ದಂಡ ವಿಧಿಸಲಾಗಿದೆ. ದಂಡ ಪಾವತಿಸಲು ವಿಫಲವಾದರೆ ಹೆಚ್ಚುವರಿಯಾಗಿ ಮೂರು ತಿಂಗಳ ಸರಳ ಜೈಲು ಶಿಕ್ಷೆ ಅನುಭವಿಸಬೇಕಾಗುತ್ತದೆ.
ಪ್ರಕರಣದಲ್ಲಿ ಸಹಾಯಕ ಸರ್ಕಾರಿ ಅಭಿಯೋಜಕಿ ಚೇತನಾ ದೇವಿ ಅವರು ಸರ್ಕಾರದ ಪರವಾಗಿ ನ್ಯಾಯಾಲಯದಲ್ಲಿ ವಾದ ಮಂಡಿಸಿದ್ದರು.
-
ನಿಧನ ವಾರ್ತೆ19 hours agoPuttur-ಮುಕ್ರಂಪಾಡಿಯಲ್ಲಿ ಸ್ಕೂಟರ್–ರಿಕ್ಷಾ ಡಿಕ್ಕಿ: ಪುತ್ತೂರು ಅಂಚೆ ಇಲಾಖೆ ಮಹಿಳಾ ಸಿಬ್ಬಂದಿ ಮೃತ್ಯು
-
ಸ್ಥಳೀಯ19 hours agoKumara Parvata-ಅ.18ರಿಂದ ಕುಮಾರ ಪರ್ವತ ಚಾರಣಕ್ಕೆ ಅನುಮತಿ
-
ಅಪರಾಧ19 hours agoHigh Court-ಕೊಳತ್ತಮಜಲು ರಹ್ಮಾನ್ ಕೊಲೆ ಪ್ರಕರಣ: ಭರತ್ ಕುಮ್ಡೇಲ್ ಸೇರಿ 8 ಆರೋಪಿಗಳ ಜಾಮೀನಿಗೆ ಹೈಕೋರ್ಟ್ ತಡೆ
-
ಮೈಸೂರು13 hours agoMysuru-ಮೈಸೂರು ದಸರಾ ವೇಳೆ 10 ವರ್ಷದ ಬಾಲಕಿಯ ಅತ್ಯಾಚಾರ, ಕೊಲೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ
-
ಅಪರಾಧ12 hours agoPuttur-ಪುತ್ತೂರು: ಮಹಿಳೆಯ ಮೇಲೆ ಹಲ್ಲೆ, ಮಾನಭಂಗ ಪ್ರಕರಣ; ಮೂವರು ಆರೋಪಿಗಳಿಗೆ ಜೈಲು ಶಿಕ್ಷೆ
-
ಮಂಗಳೂರು13 hours agoMRPL explosion-Big Breaking: MRPL ಸ್ಫೋಟ : ತೀವ್ರ ಗಾಯಗೊಂಡಿದ್ದ ರಾಜೇಶ್ ನಿಧನ : ಮನೀಶ್ ಕರ್ಕಡ ಕುಟುಂಬಕ್ಕೆ ನೀಡಿದ ಪರಿಹಾರದಷ್ಟೇ ನೀಡುವಂತೆ ಒತ್ತಾಯ
-
ಅಪರಾಧ13 hours agoMangalore:-ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ; ಚರ್ಚ್ನ ಫಾದರ್ ವಿರುದ್ಧ ಪೋಕ್ಸೋ ಪ್ರಕರಣ
-
ಅಪರಾಧ11 hours agoUppinangadi-ಬೈಕ್ ಅಡ್ಡಗಟ್ಟಿ ಚೂರಿ ತೋರಿಸಿ ಬೆದರಿಸಿ ನಗದು, ಮೊಬೈಲ್ ದರೋಡೆ; ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲು


















