ಸ್ಥಳೀಯ
School Annual Day-ಶ್ರೀಕೃಷ್ಣ ವಿದ್ಯಾ ಸಂಸ್ಥೆಗಳು ಪಟ್ಟೆ ಶಾಲಾ ವಾರ್ಷಿಕೋತ್ಸವ 2025
ದ್ವಾರಕಾ ಪ್ರತಿಷ್ಠಾನ (ರಿ.) ಪುತ್ತೂರು. ಇದರ ವತಿಯಿಂದ ನಡೆಸಲ್ಪಡುವ ಶ್ರೀಕೃಷ್ಣ ವಿದ್ಯಾ ಸಂಸ್ಥೆಗಳಾದ ಶ್ರೀಕೃಷ್ಣ ಆಂಗ್ಲ ಮಾಧ್ಯಮ ಶಾಲೆ, ಶ್ರೀಕೃಷ್ಣ ಹಿರಿಯ ಪ್ರಾಥಮಿಕ ಶಾಲೆ, ಪ್ರತಿಭಾ ಪ್ರೌಢಶಾಲೆ ಪಟ್ಟೆ ಇವುಗಳ ವಾರ್ಷಿಕೋತ್ಸವ ಪಟ್ಟೆ ವಿದ್ಯಾ ಸಂಸ್ಥೆಯ ಆವರಣದಲ್ಲಿ ನ.08, ಶನಿವಾರದಂದು ಜರಗಿತು.
ಪಟ್ಟೆ ಬಡಗನ್ನೂರು: ದ್ವಾರಕಾ ಪ್ರತಿಷ್ಠಾನ (ರಿ.) ಪುತ್ತೂರು. ಇದರ ವತಿಯಿಂದ ನಡೆಸಲ್ಪಡುವ ಶ್ರೀಕೃಷ್ಣ ವಿದ್ಯಾ ಸಂಸ್ಥೆಗಳಾದ ಶ್ರೀಕೃಷ್ಣ ಆಂಗ್ಲ ಮಾಧ್ಯಮ ಶಾಲೆ, ಶ್ರೀಕೃಷ್ಣ ಹಿರಿಯ ಪ್ರಾಥಮಿಕ ಶಾಲೆ, ಪ್ರತಿಭಾ ಪ್ರೌಢಶಾಲೆ ಪಟ್ಟೆ ಇವುಗಳ ವಾರ್ಷಿಕೋತ್ಸವ ಪಟ್ಟೆ ವಿದ್ಯಾ ಸಂಸ್ಥೆಯ ಆವರಣದಲ್ಲಿ ನ.08, ಶನಿವಾರದಂದು ಜರಗಿತು.
ಶ್ರೀಕೃಷ್ಣ ವಿದ್ಯಾ ಸಂಸ್ಥೆಗಳ ಅಧ್ಯಕ್ಷರಾದ ಗೋಪಾಲಕೃಷ್ಣ ಭಟ್ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿ ದೀಪ ಪ್ರಜ್ಜಲನೆ ಮಾಡುವ ಮೂಲಕ ಸುಸಂಸ್ಕೃತವಾದಂತಹ ವಿದ್ಯೆಯನ್ನು ನೀಡಿ ದೇಶದ ಸತ್ಪ್ರಜೆಗಳಾಗಿ ಬಾಳಬೇಕೆಂದು ಹಾರೈಸಿದರು.
ಸಂಸ್ಥೆಯ ಸಂಚಾಲಕರು ವಿಘ್ನೇಶ್ ಹಿರಣ್ಯ ಇವರು ಪ್ರಾಸ್ತಾವಿಕ ಮಾತುಗಳನ್ನಾಡಿದರು. ಪ್ರತಿಭಾ ಪ್ರೌಢಶಾಲೆಯ ಮುಖ್ಯ ಗುರುಗಳಾದ ಸುಮನ ಮಾತಾಜಿ ಶಾಲಾ ವರದಿಯನ್ನು ವಾಚಿಸಿದರು. ಆಂಗ್ಲ ಮಾಧ್ಯಮ ಶಾಲಾ ಬಹುಮಾನ ಪಟ್ಟಿಯನ್ನು ಅಶ್ವಿನಿ ಮಾತಾಜಿ, ಪ್ರಾಥಮಿಕ ಶಾಲಾ ಬಹುಮಾನ ಪಟ್ಟಿಯನ್ನು ಚಿತ್ರ ಮಾತಾಜಿ, ಪ್ರೌಢಶಾಲಾ ಬಹುಮಾನ ಪಟ್ಟಿಯನ್ನು ಪ್ರೀತಿ ಕುಮಾರಿ ಮಾತಾಜಿ ವಾಚಿಸಿದರು.
2024 – 25 ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ವಿಶಿಷ್ಟ ದರ್ಜೆಯಲ್ಲಿ ಉತ್ತೀರ್ಣಾರಾದ ಕುಮಾರಿ ರಶ್ಮಿತಾ, ಕುಮಾರಿ ತನುಶ್ರೀ ರೈ, ಕುಮಾರಿ ದಿಶಾ ಜೆ ರೈ, ಫಾತಿಮಾ ಜಸಿಲ, ಕೀರ್ತನ್, ನವನೀತ, ವೀಕ್ಷಾ, ಕಾರ್ತಿಕ್, ಪವನ್ ಚಂದ್ರ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು. ಪಠ್ಯ ಪಠ್ಯೇತರ ಚಟುವಟಿಕೆಗಳಲ್ಲಿ ಬೆಸ್ಟ್ ಔಟ್ ಗೋಯಿಂಗ್ ಸ್ಟೂಡೆಂಟ್ ಎಂಬ ಬಹುಮಾನವನ್ನು ಕುಮಾರಿ ತನುಶ್ರೀ ರೈಗೆ ನೀಡಿ ಗೌರವಿಸಲಾಯಿತು.
ವೃತ್ತಿಯಿಂದ ನಿವೃತ್ತಿ ಆಗುತ್ತಿರುವ ದೈಹಿಕ ಶಿಕ್ಷಣ ಶಿಕ್ಷಕರಾದ ಮೋನಪ್ಪ ಎಂ ಮತ್ತು ಪ್ರಾಥಮಿಕ ಶಾಲಾ ಶಿಕ್ಷಕರಾದ ರಾಮಚಂದ್ರಪ್ಪನವರಿಗೆ ಸಮಾರಂಭದಲ್ಲಿ ಅಭಿನಂದನಾ ಕಾರ್ಯಕ್ರಮ ನಡೆಸಲಾಯಿತು. ಈ ಸಮಾರಂಭದ ಮುಖ್ಯ ಅತಿಥಿಗಳಾಗಿ ಷಣ್ಮುಖ ದೇವಾ ಪ್ರೌಢಶಾಲೆ ಪೆರ್ಲಂಪಾಡಿಯ ಸಂಚಾಲಕರಾದ ಶಿವರಾಮ್ ಭಟ್ ಬೀರ್ಣಕಜೆ, ಬಡಗನ್ನೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಪುಷ್ಪಲತಾ. ಡಿ, ಶ್ರೀಕೃಷ್ಣ ವಿದ್ಯಾ ಸಂಸ್ಥೆಗಳ ಸದಸ್ಯರಾದ ಗಣರಾಜ ಕುಂಬ್ಳೆ, ಜಿ. ಪರಮೇಶ್ವರ್ ಭಟ್, ಶ್ರೀಕೃಷ್ಣ ವಿದ್ಯಾಸಂಸ್ಥೆಗಳ ಸಂಚಾಲಕರಾದ ವಿಘ್ನೇಶ ಹಿರಣ್ಯ, ಪ್ರತಿಭಾ ಪ್ರೌಢಶಾಲೆಯ SDMC ಅಧ್ಯಕ್ಷರಾದ ಲಿಂಗಪ್ಪ ಗೌಡ ಮೋಡಿಕೆ, ಶ್ರೀಕೃಷ್ಣ ಹಿರಿಯ ಪ್ರಾಥಮಿಕ ಶಾಲೆಯ SDMC ಅಧ್ಯಕ್ಷರಾದ ಕೇಶವ ಪ್ರಸಾದ ನೀಲಗಿರಿ, ಶ್ರೀಕೃಷ್ಣ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕ -ರಕ್ಷಕ ಸಂಘದ ಅಧ್ಯಕ್ಷರಾದ ಸತೀಶ್ ಕೊಪ್ಪಳ, ಪ್ರತಿಭಾ ಪ್ರೌಢಶಾಲೆ ಮುಖ್ಯ ಗುರುಗಳಾದ ಸುಮನ ಮಾತಾಜಿ, ಶ್ರೀಕೃಷ್ಣ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯಗುರುಗಳಾದ ರಾಜಗೋಪಾಲ, ಯನ್ ಉಪಸ್ಥಿತರಿದ್ದರು.
ಭವಿತಾ ಮಾತಾಜಿ ಸ್ವಾಗತಿಸಿ, ಲತಾ ಮಾತಾಜಿ ವಂದಿಸಿದರು. ಶೈಲ ಶ್ರೀ ಮಾತಾಜಿ ಮತ್ತು ಪ್ರಜ್ಞಾ ಮಾತಾಜಿ ಕಾರ್ಯಕ್ರಮ ನಿರೂಪಿಸಿದರು.
ಮತ್ತೆ ಅದೇ ವೇದಿಕೆಯಲ್ಲಿ ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮ ಜರಗಿತು. ಭರತನಾಟ್ಯ, ಸಂಗೀತ, ಕರಾಟೆ, ಯೋಗ, ತುಳು ಜನಪದ ನೃತ್ಯಗಳು ಮತ್ತು ನರಕಾಸುರ ಮೋಕ್ಷ ಎಂಬ ಯಕ್ಷಗಾನ ಕಥಾ ಭಾಗವನ್ನು ಆಡಿ ತೋರಿಸಲಾಯಿತು.
ದಕ್ಷಿಣ ಕನ್ನಡ
ಡಿ. 8ರ ಪುತ್ತೂರು ದೀಪೋತ್ಸವಕ್ಕೆ ಸಿದ್ಧತೆ ಚುರುಕು: ಕಾರ್ಯಾಲಯ ಉದ್ಘಾಟನೆ -ಅದ್ದೂರಿ ದೀಪೋತ್ಸವಕ್ಕೆ ಭಕ್ತರ ಸಹಕಾರ ಅಗತ್ಯ: ಎಸ್. ರವೀಂದ್ರ ಶೆಟ್ಟಿ

ಪುತ್ತೂರು: ಪುತ್ತೂರು ದೀಪೋತ್ಸವ ಸಮಿತಿ ಹಾಗೂ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಹಯೋಗದಲ್ಲಿ ಡಿ. 8ರಂದು ದೇವಸ್ಥಾನದ ಮುಂಭಾಗದ ದೇವರಮಾರು ಗದ್ದೆಯಲ್ಲಿ ನಡೆಯಲಿರುವ ಪುತ್ತೂರು ದೀಪೋತ್ಸವದ ಸಿದ್ಧತೆಗಳು ಚುರುಕುಗೊಂಡಿದ್ದು, ಇದರ ಅಂಗವಾಗಿ ದೇವಸ್ಥಾನದ ಮುಂಭಾಗದಲ್ಲಿ ದೀಪೋತ್ಸವದ ಕಾರ್ಯಾಲಯ ಉದ್ಘಾಟನೆಗೊಂಡಿತು.
ಮಂಗಳೂರಿನ ಉದ್ಯಮಿ ಜನಾರ್ದನ ಪೂಜಾರಿ ಪದಡ್ಕ ಅವರು ಕಾರ್ಯಾಲಯವನ್ನು ಉದ್ಘಾಟಿಸಿ ಶುಭ ಹಾರೈಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ದೀಪೋತ್ಸವ ಸಮಿತಿಯ ಅಧ್ಯಕ್ಷ ಎಸ್. ರವೀಂದ್ರ ಶೆಟ್ಟಿ ನುಳಿಯಾಲು ಮಾತನಾಡಿ, ಪುತ್ತೂರಿನಲ್ಲಿ ಅದ್ದೂರಿ ಹಾಗೂ ವಿಶಿಷ್ಟ ದೀಪೋತ್ಸವಕ್ಕೆ ಸಾಕ್ಷಿಯಾಗಬೇಕು ಎಂಬ ಆಶಯದೊಂದಿಗೆ ಈ ಕಾರ್ಯಕ್ರಮವನ್ನು ಆಯೋಜಿಸಲಾಗುತ್ತಿದೆ. ದೀಪೋತ್ಸವದ ಯಶಸ್ಸಿಗೆ ಪ್ರತಿಯೊಬ್ಬರ ಸಹಕಾರ ಮತ್ತು ಪಾಲ್ಗೊಳ್ಳುವಿಕೆ ಅಗತ್ಯವಾಗಿದೆ. ಈ ನಿಟ್ಟಿನಲ್ಲಿ ಸಮಿತಿಯು ನಿರಂತರವಾಗಿ ಶ್ರಮಿಸುತ್ತಿದ್ದು, ಪುತ್ತೂರಿನ ಭಕ್ತರನ್ನು ಸಂಪರ್ಕಿಸಿ ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳುವ ಪ್ರಯತ್ನ ನಡೆಸುತ್ತಿದೆ. ದೀಪೋತ್ಸವಕ್ಕೆ ಸಂಬಂಧಿಸಿದ ಎಲ್ಲ ಸಿದ್ಧತೆಗಳು ವ್ಯವಸ್ಥಿತವಾಗಿ ನಡೆಯುತ್ತಿವೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಪುತ್ತೂರಿನ ಉದ್ಯಮಿಗಳಾದ ಪ್ರಕಾಶ್ ಕಾಮತ್, ಶಿವರಾಮ ಆಳ್ವ ಬಳ್ಳಮಜಲು, ವೇಣುಗೋಪಾಲ ಪಿ.ಎಲ್., ವಿಜಯ ಬ್ಯಾಂಕ್ನ ನಿವೃತ್ತ ಎಜಿಎಂ ಜಗಜೀವನದಾಸ್ ರೈ, ನಿವೃತ್ತ ಮ್ಯಾನೇಜರ್ ಜೈರಾಜ್ ಭಂಡಾರಿ ನೋಣಾಲು ಹಾಗೂ ಪುತ್ತೂರು ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಮಾಜಿ ಸದಸ್ಯ ರವೀಂದ್ರನಾಥ ರೈ ಬಳ್ಳಮಜಲು ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಸಮಿತಿಯ ಗೌರವ ಸಲಹೆಗಾರರಾದ ಹರಿಣಾಕ್ಷಿ ಜೆ. ಶೆಟ್ಟಿ ಉಪಸ್ಥಿತರಿದ್ದರು.
ಸ್ವಾಗತ ಸಮಿತಿಯ ಅಧ್ಯಕ್ಷ ಪದ್ಮನಾಭ ಶೆಟ್ಟಿ ಪ್ರಸ್ತಾವನೆಗೈದು, ದೀಪೋತ್ಸವದ ಕಾರ್ಯಕ್ರಮಗಳ ರೂಪುರೇಷೆ, ಸ್ವಯಂಸೇವಕರ ನಿಯೋಜನೆ ಹಾಗೂ ಕಾರ್ಯಕ್ರಮದ ಪೂರ್ವಭಾವಿಯಾಗಿ ಸಾಗಲಿರುವ ರಥದ ಕುರಿತು ಮಾಹಿತಿ ನೀಡಿದರು. ಕೋಶಾಧಿಕಾರಿ ಎಸ್. ದಾಮೋದರ ಪಾಟಾಳಿ ಕಾರ್ಯಕ್ರಮ ನಿರೂಪಿಸಿದರು. ಡಾ. ರಾಜೇಶ್ ಬೆಜ್ಜಂಗಳ ಹಾಗೂ ಸುಜೀರ್ ಕುಮಾರ್ ಶೆಟ್ಟಿ ನುಳಿಯಾಲು ಸಹಕರಿಸಿದರು.
ಮಂಗಳೂರು
Soujanya case: Big Breaking: ಸೌಜನ್ಯ ಪ್ರಕರಣದಲ್ಲಿ ಯೂಟ್ಯೂಬ್ ಚಾನೆಲ್ಗಳ ಮಸಾಲಾ ಸುದ್ದಿಗೆ ಖರ್ಗೆ ಗರಂ! ವೈಜ್ಞಾನಿಕ ದಾಖಲೆಗಳ ಆಧಾರದಲ್ಲೆ ತನಿಖೆ
ಸೌಜನ್ಯ ಪ್ರಕರಣ ಅತ್ಯಂತ ಸೂಕ್ಷ್ಮ ವಿಚಾರವಾಗಿದ್ದು, ಪ್ರಕರಣದ ಮರುತನಿಖೆ ಸೇರಿದಂತೆ ಯಾವುದೇ ಕ್ರಮ ಕೈಗೊಳ್ಳುವಾಗ ವೈಜ್ಞಾನಿಕ ದಾಖಲೆಗಳು ಹಾಗೂ ಸಾಕ್ಷ್ಯಗಳ ಆಧಾರದಲ್ಲೇ ಮುಂದುವರಿಯಬೇಕು. ಯಾರಿಗೂ ಅನ್ಯಾಯವಾಗಬಾರದು ಎಂಬುದು ಸರ್ಕಾರದ ಉದ್ದೇಶ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
ಮಂಗಳೂರು: ಸೌಜನ್ಯ ಪ್ರಕರಣ ಅತ್ಯಂತ ಸೂಕ್ಷ್ಮ ವಿಚಾರವಾಗಿದ್ದು, ಪ್ರಕರಣದ ಮರುತನಿಖೆ ಸೇರಿದಂತೆ ಯಾವುದೇ ಕ್ರಮ ಕೈಗೊಳ್ಳುವಾಗ ವೈಜ್ಞಾನಿಕ ದಾಖಲೆಗಳು ಹಾಗೂ ಸಾಕ್ಷ್ಯಗಳ ಆಧಾರದಲ್ಲೇ ಮುಂದುವರಿಯಬೇಕು. ಯಾರಿಗೂ ಅನ್ಯಾಯವಾಗಬಾರದು ಎಂಬುದು ಸರ್ಕಾರದ ಉದ್ದೇಶ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
ಮಂಗಳೂರಿನಲ್ಲಿ ಸೌಜನ್ಯ ಪ್ರಕರಣದ ಮರುತನಿಖೆಗೆ ಸಂಬಂಧಿಸಿದಂತೆ ಮಾತನಾಡಿದ ಅವರು, ಪ್ರಕರಣದ ಸೂಕ್ಷ್ಮತೆ ಹಾಗೂ ಸಾರ್ವಜನಿಕರ ಭಾವನೆಗಳನ್ನು ಗಮನದಲ್ಲಿಟ್ಟುಕೊಂಡು ತನಿಖಾಧಿಕಾರಿಗಳ ಬದಲಾವಣೆ ಮಾಡಲಾಗಿದೆ ಎಂದು ತಿಳಿಸಿದರು.
ಪ್ರಕರಣ ನಡೆದು ಸುಮಾರು 14 ವರ್ಷಗಳಾಗಿವೆ. ಇಂತಹ ಸಂದರ್ಭದಲ್ಲಿ ಸತ್ಯವನ್ನು ಹೊರತರುವುದಕ್ಕೆ ವೈಜ್ಞಾನಿಕ ದಾಖಲೆಗಳು ಹಾಗೂ ಸಾಕ್ಷ್ಯಗಳ ಆಧಾರ ಅಗತ್ಯವಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವು ಮಂದಿ ಪತ್ರ ಬರೆದು ಕೆಲವು ವಿಚಾರಗಳನ್ನು ನನ್ನ ಗಮನಕ್ಕೆ ತಂದಿದ್ದಾರೆ. ಆ ಮಾಹಿತಿಗಳನ್ನು ತನಿಖೆಗೆ ನೀಡಲಾಗಿದೆ ಎಂದು ಹೇಳಿದರು.
ಇದೇ ವೇಳೆ, ಕೆಲವು ಯೂಟ್ಯೂಬ್ ಚಾನೆಲ್ಗಳು ಪ್ರಕರಣದ ಕುರಿತು ತಾವೇ ತೀರ್ಮಾನಗಳನ್ನು ಪ್ರಕಟಿಸುತ್ತಿರುವಂತೆ ಕಾಣುತ್ತಿದೆ. ಅವರಿಗೆ ಮಾಹಿತಿ ಎಲ್ಲಿಂದ ಬರುತ್ತಿದೆ ಎಂಬುದು ತಿಳಿದಿಲ್ಲ. ಕೆಲವು ಚಾನೆಲ್ಗಳು ಸುದ್ದಿಗಳಿಗೆ ಮಿರ್ಚಿ ಮಸಾಲೆ ಸೇರಿಸಿ ಪ್ರಸಾರ ಮಾಡುತ್ತಿವೆ ಎಂದು ಅವರು ಟೀಕಿಸಿದರು.
ಶಿಕ್ಷಣ
Vivekananda-ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಎಂಡ್ ಟೆಕ್ನಾಲಜಿ: ವೃತ್ತಿವಾದ ಮತ್ತು ಆದರ್ಶವಾದ: ಸು.ರಾಮಣ್ಣ ಅವರಿಂದ ಉಪನ್ಯಾಸ ಕಾರ್ಯಕ್ರಮ
ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಸಾವರ್ಕರ್ ಸಬಾಭವನದಲ್ಲಿ ವೃತ್ತಿವಾದ ಮತ್ತು ಆದರ್ಶವಾದ ಎನ್ನುವ ವಿಷಯದ ಬಗ್ಗೆ ರಾಷ್ಟ್ರೀಯ ಸ್ವಯಂಸೇವಕ ಸಂಘದ ಜ್ಯೇಷ್ಟ ಪ್ರಚಾರಕ ಮಾನನೀಯ ಸು.ರಾಮಣ್ಣ ಮಾತಾಡಿದರು.
ಪುತ್ತೂರು: ಮನುಷ್ಯನ ಜೀವನದ ಗುರಿ ವ್ಯಕ್ತಿಗತವಾಗಿರಬಾರದು. ಸಮಾಜಕ್ಕೆ, ದೇಶಕ್ಕೆ ಏನಾದರೂ ಮಾಡಬೇಕೆನ್ನುವುದು ನಮ್ಮ ಗುರಿಯಾಗಬೇಕು. ಅದಕ್ಕೆ ವಿವಿಧ ಬಗೆಯ ಜನರ ನಡುವೆ ಕಾರ್ಯನಿರ್ವಹಿಸಬೇಕು. ಆಗ ನಿಜವಾದ ಆವಶ್ಯಕತೆ ಏನೆಂದು ಅರಿವಾಗುತ್ತದೆ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ ಜ್ಯೇಷ್ಟ ಪ್ರಚಾರಕ ಮಾನನೀಯ ಸು.ರಾಮಣ್ಣ ಹೇಳಿದರು.

ಅವರು ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಸಾವರ್ಕರ್ ಸಬಾಭವನದಲ್ಲಿ ವೃತ್ತಿವಾದ ಮತ್ತು ಆದರ್ಶವಾದ ಎನ್ನುವ ವಿಷಯದ ಬಗ್ಗೆ ಮಾತಾಡಿದರು. ಓದು, ಜ್ಞಾನಸಂಗ್ರಹ ನಮ್ಮ ಸಾಧನೆಯ ಮೊದಲನೇ ಘಟ್ಟ. ಇದು ಇಲ್ಲದಿದ್ದರೆ ನಾವು ಸಣ್ಣವರಾಗುತ್ತೇವೆ. ವಿದ್ಯಾರ್ಥಿ ದೆಸೆಯಲ್ಲಿಯೇ ದೀರ್ಘವಾದ ಗುರಿಯನ್ನು ಇಟ್ಟುಕೊಳ್ಳಲೇಬೇಕು ಎಂದರು. ಜೀವನದಲ್ಲಿ ಕನಸು ಕಾಣಬೇಕು. ದೇವರು ಕೊಟ್ಟ ಬುದ್ಧಿ ಶಕ್ತಿ ಮತ್ತು ವ್ಯಕ್ತಿತ್ವವನ್ನು ಬಳಸಿಕೊಂಡು ದೊಡ್ಡವರಾಗಿ ಎನ್ನುವ ಅಬ್ದುಲ್ ಕಲಾಂ ಅವರ ಮಾತುಗಳನ್ನು ನೆನಪಿಸಿದ ಅವರು ದೇಶದ ಜೀವಿತೋದ್ದೇಶವನ್ನು ಉನ್ನತೀಕರಿಸುವುದರ ಜತೆಯಲ್ಲಿ ಸೃಷ್ಟಿಯ ಹಿತಕ್ಕೋಸ್ಕರ ಬದುಕಬೇಕು ಎಂದರು. ದೇಶಕ್ಕಾಗಿ ತಮ್ಮ ಜೀವನವನ್ನೇ ಮುಡಿಪಾಗಿಟ್ಟ ಸ್ವಾಮಿ ವಿವೇಕಾನಂದರು, ಸಾವರ್ಕರ್, ಅಂಬೇಡ್ಕರ್ ಇವರ ಜೀವನವು ನಮಗೆ ದಾರಿದೀಪವಾಗಲಿ ಎಂದರು. ಮಾನವತೆಯನ್ನು ಉಳಿಸುವುದಕ್ಕಾಗಿ ಅತ್ಯಂತ ಘೋರ ಸಂಕಟದ ಸಮಯದಲ್ಲಿ ಸೂಕ್ತ ನಿರ್ಣಯವನ್ನು ತೆಗೆದುಕೊಂಡ ಪೈಲೆಟ್ ಕ್ಯಾಪ್ಟನ್ ಸ್ಮಿತ್ ಮಚ್ಚರ್ ನಿಜವಾದ ಸಾಧಕ ಎಂದು ಹೇಳಿದರು. ಕೋಟ್ಯಂತರ ರೂಪಾಯಿ ವೇತನ ಪಡೆಯುವ ತಂತ್ರಜ್ಞರಾಗುವುದಲ್ಲ ಬದಲಾಗಿ ಸರ್.ಎಂ.ವಿಶ್ವೇಶ್ವರಯ್ಯರಾಗಿ ಎಂದು ಹಿತ ನುಡಿದರು.

ಇಂಜಿನಿಯರಿಂಗ್ ಕಾಲೇಜು ಆಡಳಿತ ಮಂಡಳಿಯ ಅಧ್ಯಕ್ಷ ರವಿಕೃಷ್ಣ.ಡಿ.ಕಲ್ಲಾಜೆ ಮತ್ತು ಪ್ರಾಂಶುಪಾಲ ಡಾ.ಪುರುಷೋತ್ತಮ ಚಿಪ್ಪಾರ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಇಂಜಿನಿಯರಿಂಗ್ ಕಾಲೇಜು ಆಡಳಿತ ಮಂಡಳಿಯ ಸಂಚಾಲಕ ಪ್ರಸನ್ನ ದರ್ಬೆ, ನಿರ್ದೇಶಕರಾದ ಮನೋಜ್ ಕುಮಾರ, ಸುಜಿತ್ ಕುಮಾರ್, ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಅಧ್ಯಕ್ಷ ಅಚ್ಯುತ ನಾಯಕ್, ವಿವೇಕಾನಂದ ಸಿಬಿಎಸ್ಸಿ ಶಾಲೆಯ ಸಂಚಾಲಕ ರವಿನಾರಾಯಣ, ವಿವೇಕಾನಂದ ವಸತಿ ನಿಲಯಗಳ ನಿರ್ದೇಶಕ ರಾಜಗೋಪಾಲ್, ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯ ಸ್ವಯಂಸೇವಕ ಅ.ನಾ.ರವಿ ಸಮಾರಂಭದಲ್ಲಿ ಹಾಜರಿದ್ದರು.
-
ಕ್ರೈಂ23 hours agoMurder-ಕನ್ಯಾನ: ಚಿಕ್ಕಪ್ಪನ ಎದೆಗೆ ಕತ್ತಿಯಿಂದ ಇರಿದು ಹತ್ಯೆಗೈದ ಯುವತಿ ಅರೆಸ್ಟ್
-
ಸ್ಥಳೀಯ17 hours agoValaalu toll plaza-ವಳಾಲು ಟೋಲ್ ಪ್ಲಾಜಾ ಕಾಮಗಾರಿ ಪೂರ್ಣ; ವಾರದೊಳಗೆ ಅಧಿಕೃತ ಘೋಷಣೆ ಸಾಧ್ಯ; ಬ್ರಹ್ಮರಕೂಟ್ಲು ಟೋಲ್ನಿಂದ ‘ಡಬಲ್ ಟೋಲ್’ ಆತಂಕ..!
-
ನಿಧನ ವಾರ್ತೆ23 hours agoAccident-ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇನಲ್ಲಿ ಭೀಕರ ಅಪಘಾತ: 8 ವರ್ಷದ ಬಾಲಕಿ ಸೇರಿ ಇಬ್ಬರು ಸ್ಥಳದಲ್ಲೇ ಸಾವು; ನಾಲ್ವರ ಸ್ಥಿತಿ ಗಂಭೀರ
-
ಕಾರ್ಯಕ್ರಮಗಳು22 hours agoPuttur-ಪುತ್ತೂರು: ನ.27ರಂದು ಅತ್ಯಾಧುನಿಕ ಬಹುಮಹಡಿ ವಾಣಿಜ್ಯ ಸೌಧ ‘ದ್ವಾರಕಾ ಕಮರ್ಶಿಯಲ್ಸ್’ ಲೋಕಾರ್ಪಣೆ; ಒಂದೇ ಸೂರಿನಡಿ ಹೈಪರ್ ಮಾರ್ಕೆಟ್ ಸಹಿತ ಹಲವು ಸೇವೆಗಳು
-
ಅಪರಾಧ21 hours agoExcise raid-ಬಾಳ್ತಿಲ, ಮೆಲ್ಕಾರ್ನಲ್ಲಿ ಅಬಕಾರಿ ದಾಳಿ: ₹20.37 ಲಕ್ಷ ಮೌಲ್ಯದ ಗೋವಾ ಮದ್ಯ, 2 ಕಾರುಗಳು ವಶ
-
ಅಪರಾಧ17 hours agoRenukashwami murder case-ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತಿಬ್ಬರು ಸಾಕ್ಷಿಗಳು ಉಲ್ಟಾ; ಪ್ರತಿಕೂಲ ಸಾಕ್ಷಿಗಳೆಂದು ಘೋಷಿಸಿದ ನ್ಯಾಯಾಲಯ
-
ಬಿಗ್ ನ್ಯೂಸ್23 hours agoRakesh Shetty-ಸ್ಟಿಂಗ್ ಆಪರೇಷನ್ ಪ್ರಕರಣ: ಜಾಮೀನು ಅರ್ಜಿ ವಾಪಸ್ ಪಡೆದ ರಾಕೇಶ್ ಶೆಟ್ಟಿ
-
ಕ್ರೀಡೆ21 hours agoVaibhav Suryavamshi-52 ಎಸೆತಗಳಲ್ಲಿ ದ್ವಿಶತಕ, 28 ಸಿಕ್ಸರ್ಗಳ ಅಬ್ಬರ; ಒಂದೇ ಪಂದ್ಯದಲ್ಲಿ ಎರಡು ವಿಶ್ವದಾಖಲೆ ಬರೆದ ಭಾರತದ ಯುವ ಆಟಗಾರ ವೈಭವ್ ಸೂರ್ಯವಂಶಿ















