ಶಿಕ್ಷಣ
Ambika Bappalige-ಅಂಬಿಕಾ ಬಪ್ಪಳಿಗೆ – ನೆಲ್ಲಿಕಟ್ಟೆ ಪದವಿ ಪೂರ್ವ ವಿದ್ಯಾಲಯಗಳ ವಾರ್ಷಿಕ ಕ್ರೀಡಾಕೂಟ; ವಿದ್ಯಾರ್ಥಿಗಳ ಸರ್ವಾಂಗೀಣ ಬೆಳವಣಿಗೆಗೆ ಕ್ರೀಡಾಕೂಟ: ಡಾ. ಸಚಿನ್ ಮನೋಹರ್ ಶೆಟ್ಟಿ ಅಭಿಮತ
ಪುತ್ತೂರಿನ ನಟ್ಟೋಜಾ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ನೆಲ್ಲಿಕಟ್ಟೆ ಅಂಬಿಕಾ ಪದವಿ ಪೂರ್ವ ವಿದ್ಯಾಲಯ ಹಾಗೂ ಬಪ್ಪಳಿಗೆ ವಸತಿಯುತ ಪದವಿ ಪೂರ್ವ ವಿದ್ಯಾಲಯಗಳ ಕ್ರೀಡಾಕೂಟವನ್ನು ಧ್ವಜಾರೋಹಣಗೈದು, ದೀಪ ಬೆಳಗಿಸಿ ಉದ್ಘಾಟಿಸಿ ಪುತ್ತೂರಿನ ಖ್ಯಾತ ಚರ್ಮ ರೋಗ ತಜ್ಞ ಡಾ. ಸಚಿನ್ ಮನೋಹರ್ ಶೆಟ್ಟಿ ಶುಭ ಹಾರೈಸಿದರು.
ಪುತ್ತೂರು: ಶಾರೀರಿಕ, ಮಾನಸಿಕ ಹಾಗೂ ವಿದ್ಯಾರ್ಥಿಗಳ ಸರ್ವಾಂಗೀಣ ಬೆಳವಣಿಗೆಗೆ ಆಟೋಟ, ವ್ಯಾಯಾಮ ಹಾಗೂ ಶಾರೀರಿಕ ಚಟುವಟಿಕೆಗಳು ಅತ್ಯಂತ ಅಗತ್ಯ. ಸ್ವಸ್ಥ ಶರೀರದಲ್ಲಿ ಸ್ವಸ್ಥ ಮನಸ್ಸಿರುತ್ತದೆ ಎಂದು ಪುತ್ತೂರಿನ ಖ್ಯಾತ ಚರ್ಮ ರೋಗ ತಜ್ಞ ಡಾ. ಸಚಿನ್ ಮನೋಹರ್ ಶೆಟ್ಟಿ ಹೇಳಿದರು.
ಅವರು ಪುತ್ತೂರಿನ ನಟ್ಟೋಜಾ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ನೆಲ್ಲಿಕಟ್ಟೆ ಅಂಬಿಕಾ ಪದವಿ ಪೂರ್ವ ವಿದ್ಯಾಲಯ ಹಾಗೂ ಬಪ್ಪಳಿಗೆ ವಸತಿಯುತ ಪದವಿ ಪೂರ್ವ ವಿದ್ಯಾಲಯಗಳ ಕ್ರೀಡಾಕೂಟವನ್ನು ಧ್ವಜಾರೋಹಣಗೈದು, ದೀಪ ಬೆಳಗಿಸಿ ಉದ್ಘಾಟಿಸಿ ಶುಭ ಹಾರೈಸಿದರು.
ವಿದ್ಯಾರ್ಥಿಗಳು ಐ.ಐ.ಟಿ., ಜೆ.ಇ.ಇ.ನಂತಹಾ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಾಗುವುದು ಅತ್ಯಗತ್ಯ. ಓದಿನ ಭರದಲ್ಲಿ ದೇಹಕ್ಕೆ ತಕ್ಕಷ್ಟು ವ್ಯಾಯಾಮ ನೀಡುವುದನ್ನು ಮರೆಯಬಾರದು. ಪ್ರತಿದಿನ ಕನಿಷ್ಠ ಹದಿನೈದು ನಿಮಿಷ ನಡಿಗೆ ಅಥವಾ ಆಟೋಟಗಳಲ್ಲಿ ತೊಡಗಿಕೊಳ್ಳುವುದು ಅಗತ್ಯ. ಕ್ರೀಡೆಗಳಲ್ಲಿ ಸೋಲು- ಗೆಲುವು ಮುಖ್ಯವಲ್ಲ, ಭಾಗವಹಿಸುವಿಕೆ ಮುಖ್ಯ. ಕಠಿಣ ಪರಿಶ್ರಮ, ಸಮರ್ಪಣಾ ಭಾವದಿಂದ ಯಾವುದೇ ಕೆಲಸ ನಿರ್ವಹಿಸಿದಾಗ ಯಶಸ್ಸು ಲಭಿಸುತ್ತದೆ ಎಂದು ಕಿವಿ ಮಾತು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಅಧ್ಯಕ್ಷ ಸುಬ್ರಮಣ್ಯ ನಟ್ಟೋಜ, ಎಲ್ಲರಲ್ಲೂ ರಾಷ್ಟ್ರ ಪ್ರಜ್ಞೆ ಜಾಗೃತವಾಗಿರುವುದು ಅವಶ್ಯ. ಸೈನಿಕರು ರಾಜಸ್ಥಾನದಂತಹ ಮರುಭೂಮಿಯಲ್ಲಿ, ಗಡಿ ಪ್ರದೇಶಗಳಲ್ಲಿ ಸಹಿಸಲೂ ಸಾಧ್ಯವಾಗದ ಉಷ್ಣತೆ ಹಾಗೂ ಚಳಿಯ ವಾತಾವರಣದಲ್ಲಿ ದೇಶಕ್ಕಾಗಿ ತಮ್ಮ ಜೀವನವನ್ನೇ ಸಮರ್ಪಿಸುತ್ತಾರೆ. ಬಿಸಿಲಿಗೆ ಹಿಂಜರಿಯದೆ ಆಟೋಟಗಳಲ್ಲಿ ಭಾಗವಹಿಸುವುದು ಅಗತ್ಯ ಎಂದರು.
ನಟ್ಟೋಜಾ ಫೌಂಡೇಶನ್ ಟ್ರಸ್ಟ್ನ ಕಾರ್ಯದರ್ಶಿ ಹಾಗೂ ಕೋಶಾಧಿಕಾರಿ ರಾಜಶ್ರೀ ಎಸ್. ನಟ್ಟೋಜಾ, ಆಡಳಿತ ಮಂಡಳಿಯ ಸದಸ್ಯ ಸುರೇಶ ಶೆಟ್ಟಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ನೆಲ್ಲಿಕಟ್ಟೆ ಅಂಬಿಕಾ ಪದವಿಪೂರ್ವ ವಿದ್ಯಾಲಯದ ಪ್ರಾಂಶುಪಾಲ ಸತ್ಯಜಿತ್ ಉಪಾಧ್ಯಾಯ ಕ್ರೀಡಾ ಪಟುಗಳಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು. ರಾಷ್ಟ್ರಮಟ್ಟದ ಕ್ರೀಡಾಪಟುಗಳಾದ ಪ್ರತೀಕ್ಷಾ ಶೆಣೈ, ಯುಕ್ತ ವರ್ಷಿಣಿ, ಉನ್ನತ ಶೆಣೈ, ಡಿ. ಆರ್. ಶ್ರೀಯಾ, ವರ್ಧಿನ್ ದೀಪಕ್ ರೈ, ಬಿ. ಆರ್. ಸೂರ್ಯ, ಜ್ಞಾನ ಬಿ. ಪಿ. ಕ್ರೀಡಾ ಜ್ಯೋತಿಯನ್ನು ತರುವ ಮೂಲಕ ಕ್ರೀಡಾಕೂಟಕ್ಕೆ ಚಾಲನೆ ನೀಡಿದರು.
ಭಾಸ್ಕರ, ಆರ್ಯಭಟ, ಕಾಂಚಿ, ಕೌಟಿಲ್ಯ, ಕಣಾದ, ಪಾಣಿನಿ, ಸುಶ್ರುತ, ಚರಕ, ಕಪಿಲ, ಪತಂಜಲಿ, ನಳಂದಾ, ತಕ್ಷಶಿಲಾ, ಗಾರ್ಗಿ, ಮೈತ್ರೇಯಿ, ಚಾಣಕ್ಯ, ವಿಕ್ರಮಶಿಲಾ ಮೊದಲಾದ ತಂಡಗಳು ಪಥ ಸಂಚಲನದ ಮೂಲಕ ಅತಿಥಿಗಳಿಗೆ ಗೌರವ ಸಲ್ಲಿಸಿದರು. ವಿದ್ಯಾರ್ಥಿನಿಯರಾದ ಅನನ್ಯಾ, ಸಮನ್ವಿಕಾ, ಶ್ರೀದೇವಿ, ಸೃಷ್ಠಿ ಮತ್ತು ನಿರೀಕ್ಷಾ ಪ್ರಾರ್ಥಿಸಿದರು. ಮುಖ್ಯ ಸಲಹೆಗಾರರಾದ ಸುಚಿತ್ರಾ ಪ್ರಭು ಸ್ವಾಗತಿಸಿ, ಬಪ್ಪಳಿಗೆ ವಸತಿಯುತ ಪದವಿಪೂರ್ವ ವಿದ್ಯಾಲಯದ ಪ್ರಾಂಶುಪಾಲ ಗಣೇಶ್ ಪ್ರಸಾದ್ ಡಿ.ಎಸ್. ವಂದಿಸಿದರು. ಉಪನ್ಯಾಸಕಿ ಸೌಮ್ಯಾ ಕೆ. ಎಸ್. ಅತಿಥಿಗಳ ಪರಿಚಯ ಮಾಡಿದರು. ಕನ್ನಡ ಉಪನ್ಯಾಸಕ ಸತೀಶ್ ಇರ್ದೆ ಕಾರ್ಯಕ್ರಮ ನಿರೂಪಿಸಿದರು.
ಶಿಕ್ಷಣ
Vivekananda-ತಾಲೂಕು ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ – ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕರ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ
ಶಾಲಾ ಶಿಕ್ಷಣ ಇಲಾಖೆ, ಪದವಿಪೂರ್ವ ವಿಭಾಗ ತಾಲೂಕು ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ ಸರಕಾರಿ ಪದವಿಪೂರ್ವ ಕಾಲೇಜು ಬೆಟ್ಟಂಪಾಡಿ ಇವರ ಸಹಯೋಗದಲ್ಲಿ ಕೊಂಬೆಟ್ಟು ಕ್ರೀಡಾಂಗಣ ದಲ್ಲಿ ನಡೆಯಿತು. ಬಾಲಕರ ತಂಡ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.
ಶಾಲಾ ಶಿಕ್ಷಣ ಇಲಾಖೆ, ಪದವಿಪೂರ್ವ ವಿಭಾಗ ತಾಲೂಕು ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ ಸರಕಾರಿ ಪದವಿಪೂರ್ವ ಕಾಲೇಜು ಬೆಟ್ಟಂಪಾಡಿ ಇವರ ಸಹಯೋಗದಲ್ಲಿ ಕೊಂಬೆಟ್ಟು ಕ್ರೀಡಾಂಗಣ ದಲ್ಲಿ ನಡೆಯಿತು. ಬಾಲಕರ ತಂಡ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.
ತಂಡದಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳಾದ ಧನುಷ್ ಎಸ್, ಯಶಸ್ ಎಚ್ . ಸಿ ದ್ವಿತೀಯ ಪಿಯುಸಿ ಗಗನ್ ಕೆ.ಎನ್, ತೇಜಸ್ ಟಿ. ಆರ್, ಜಶ್ವಂತ್ ಗೌಡ, ಧನುಷ್ ಕೆ . ಎಚ್, ಆಕಾಶ್ ಭಾಗವಹಿಸಿರುತ್ತಾರೆ.
ತಂಡವು ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ರವಿಶಂಕರ್ ,ಡಾ .ಜ್ಯೋತಿ ಮತ್ತು ಯತೀಶ್ ಇವರ ನೇತೃತ್ವದಲ್ಲಿ ತರಬೇತಿಯನ್ನು ಪಡೆದಿರುತ್ತಾರೆ .ಇವರನ್ನು ಕಾಲೇಜಿನ ಆಡಳಿತ ಮಂಡಳಿ ಪ್ರಾಂಶುಪಾಲರು ಹಾಗೂ ಉಪನ್ಯಾಸಕ, ಉಪನ್ಯಾಸಕೇತರ ವೃಂದದವರು ಅಭಿನಂದಿಸಿರುತ್ತಾರೆ.
ಶಿಕ್ಷಣ
Taekwondo Competition-ಟೇಕ್ವಾಂಡೋ ಸ್ಪರ್ಧೆ: ಸಂತ ಫಿಲೋಮಿನಾ ಪ ಪೂ ಕಾಲೇಜಿನ ಮೊಹಮ್ಮದ್ ಶಾಜ್ ಗೆ ಪ್ರಶಸ್ತಿ
ಸೆ 30 ರಂದು ಚಿಕ್ಕಮಗಳೂರು ಜಿಲ್ಲಾ ಶತಮಾನೋತ್ಸವ ಕ್ರೀಡಾಂಗಣ ಜ್ಯೋತಿನಗರದಲ್ಲಿ ನಡೆದ ‘ಮೈಸೂರು ವಿಭಾಗ ಮಟ್ಟದ ದಸರಾ ಕ್ರೀಡಾಕೂಟ 2026 – 27’ ಟೇಕ್ವಾಂಡೋ ಸ್ಪರ್ಧೆಯಲ್ಲಿ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಪ್ರಥಮ ವಿಜ್ಞಾನ ವಿಭಾಗದ ಮೊಹಮ್ಮದ್ ಶಾಜ್ ಕಂಚಿನ ಪದಕವನ್ನು ಪಡೆದುಕೊಂಡಿರುತ್ತಾರೆ.
ಪುತ್ತೂರು: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಚಿಕ್ಕಮಗಳೂರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಚಿಕ್ಕಮಗಳೂರು ಇದರ ಸಂಯುಕ್ತ ಆಶ್ರಯದಲ್ಲಿ ಸೆ 30 ರಂದು ಚಿಕ್ಕಮಗಳೂರು ಜಿಲ್ಲಾ ಶತಮಾನೋತ್ಸವ ಕ್ರೀಡಾಂಗಣ ಜ್ಯೋತಿನಗರದಲ್ಲಿ ನಡೆದ ‘ಮೈಸೂರು ವಿಭಾಗ ಮಟ್ಟದ ದಸರಾ ಕ್ರೀಡಾಕೂಟ 2026 – 27’ ಟೇಕ್ವಾಂಡೋ ಸ್ಪರ್ಧೆಯಲ್ಲಿ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಪ್ರಥಮ ವಿಜ್ಞಾನ ವಿಭಾಗದ ಮೊಹಮ್ಮದ್ ಶಾಜ್ ಕಂಚಿನ ಪದಕವನ್ನು ಪಡೆದುಕೊಂಡಿರುತ್ತಾರೆ.
ಇವರು ಉಪ್ಪಿನಂಗಡಿ ನಿವಾಸಿ ಮೊಹಮ್ಮದ್ ಮುಸ್ತಫಾ ಮತ್ತು ಸೌಧ ದಂಪತಿಗಳ ಪುತ್ರ.
ಇವರಿಗೆ ಶಿಹಾಬ್ ಟಿ ತರಬೇತಿ ನೀಡಿರುತ್ತಾರೆ.
ಕಾಲೇಜಿನ ಪ್ರಾಂಶುಪಾಲರಾದ ರೆ.ಫಾ. ಅಶೋಕ್ ರಾಯನ್ ಕ್ರಾಸ್ತಾ ವಿದ್ಯಾರ್ಥಿಗಳನ್ನು ಅಭಿನಂದಿಸಿದರು. ದೈಹಿಕ ಶಿಕ್ಷಣ ನಿರ್ದೇಶಕರಾದ ರಾಜೇಶ್ ಮೂಲ್ಯ ಉಪಸ್ಥಿತರಿದ್ದರು.
ಶಿಕ್ಷಣ
Vivekananda-ರಾಷ್ಟ್ರಮಟ್ಟದ ಭೌತಶಾಸ್ತ್ರ ಸ್ಪರ್ಧೆಯಲ್ಲಿ ವಿವೇಕಾನಂದ ಕಾಲೇಜಿನ ವಿದ್ಯಾರ್ಥಿಯ ಸಾಧನೆ..!
ಪುತ್ತೂರು: ವಿವೇಕಾನಂದ ಮಹಾವಿದ್ಯಾಲಯ (ಸ್ವಾಯತ್ತ) ಇದರ ದ್ವಿತೀಯ ವಿಜ್ಞಾನ ವಿಭಾಗದ ವಿದ್ಯಾರ್ಥಿ ಶ್ರೀಹರಿ ಶರ್ಮಾ ನೋಯ್ಡಾದ ಆಮಿಟಿ ಯುನಿವರ್ಸಿಟಿಯಲ್ಲಿ ಇಂಡಿಯನ್ ಅಸೋಸಿಯೇಷನ್ ಆಫ್ ಫಿಸಿಕ್ಸ್ ಟೀರ‍್ಸ್ (ಐಎಪಿಟಿ) ಸಂಸ್ಥೆಯ ಸಹಯೋಗದೊಂದಿಗೆ ನಡೆದ ರಾಷ್ಟ್ರಮಟ್ಟದ ಭೌತಶಾಸ್ತ್ರ ಸ್ಪರ್ಧೆ National Competition for Innovative Experiments in Physics (NCIEP)ನಲ್ಲಿ “Electromagnetic Shock-Absorber for the Real-Time Landing of Reusable Spacecraft” ಎಂಬ ಭೌತಶಾಸ್ತ್ರದ ಮಾದರಿಯನ್ನು ಸ್ಪರ್ಧೆಯಲ್ಲಿ ಪ್ರಸ್ತುತಪಡಿಸುವ ಮೂಲಕ ಗಮನಾರ್ಹ ಸಾಧನೆ ಮಾಡಿದ್ದಾರೆ.

ಅಕ್ಟೋಬರ್ 4ರಿಂದ 6ರವರೆಗೆ ನಡೆದ 40ನೇ IAPT Annual Conventionನಲ್ಲಿ ಇವರು ಪದವಿ ಮತ್ತು ಸ್ನಾತಕೋತ್ತರ ವಿಭಾಗದಲ್ಲಿ ಭಾಗವಹಿಸಿದ್ದರು. ದೇಶದ ವಿವಿಧ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳು, ಐಐಟಿಗಳು ಹಾಗೂ ವಿಶ್ವವಿದ್ಯಾಲಯಗಳ ಒಟ್ಟು 118 ಮಾದರಿಗಳ ಪೈಕಿ 12ಮಾದರಿಗಳು ಸ್ಪರ್ಧೆಗೆ ಆಯ್ಕೆಯಾಗಿದ್ದವು.
ಕರ್ನಾಟಕದಿಂದ ಪ್ರಸ್ತುತಪಡಿಸಲು ಆಯ್ಕೆಯಾದ ಏಕೈಕ ಮಾದರಿ ಇವರದ್ದಾಗಿತ್ತು. ಭೌತಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರೋ. ಶಿವಪ್ರಸಾದ್ ಕೆ.ಎಸ್. ಈ ಮಾದರಿ ತಯಾರಿಕೆಯಲ್ಲಿ ಮಾರ್ಗದರ್ಶನ ನೀಡಿರುದ್ದಾರೆ. ಈ ಸಾಧನೆಗೆ ಆಡಳಿತ ಮಂಡಳಿ, ಪ್ರಾಂಶುಪಾಲರು, ಶಿಕ್ಷಕ ಮತ್ತು ಶಿಕ್ಷಕೇತರ ವೃಂದ ಮತ್ತು ವಿದ್ಯಾರ್ಥಿಗಳು ಮೆಚ್ಚುಗೆ ವ್ಯಕ್ತ ಪಡಿಸಿದ್ದಾರೆ.
-
ನಿಧನ ವಾರ್ತೆ22 hours agoMumbai-ಪ್ರೀತಿಸಿ ಮದುವೆಯಾಗಿದ್ದ ಜೋಡಿಯ ದುರಂತ ಅಂತ್ಯ? ಸರಪಳಿಯಿಂದ ಕಾಲು ಕಟ್ಟಿದ ಸ್ಥಿತಿಯಲ್ಲಿ ಶವ ಪತ್ತೆ
-
ಮಂಗಳೂರು20 hours agoUjire-ಭಾರೀ ಜನಸ್ತೋಮದೊಂದಿಗೆ ಸೌಜನ್ಯ ನ್ಯಾಯದ ನಡಿಗೆ
-
ಮಂಗಳೂರು18 hours agoMulki-ಮೂಲ್ಕಿ: ಚಲಿಸುತ್ತಿದ್ದ ಮಂಗಳೂರು – ಕಾರ್ಕಳ ಎಕ್ಸ್ ಪ್ರೆಸ್ ಬಸ್ಗೆ ಬಡಿದ ಗಿಡುಗ: ಗಾಜು ಪುಡಿಪುಡಿ, ಪುತ್ತೂರು ಮೂಲದ ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ಭಾರಿ ಅವಘಡ
-
ರಾಜ್ಯ22 hours agoRobotic technology-ರೋಬೋಟಿಕ್ ತಂತ್ರಜ್ಞಾನದ ಅದ್ಭುತ: ಸ್ಪೇನ್ನಲ್ಲಿ ಕುಳಿತು ಕರ್ನಾಟಕದ ಮಹಿಳೆಗೆ ಹೃದಯ ಶಸ್ತ್ರಚಿಕಿತ್ಸೆ
-
ಅಂತರ ರಾಜ್ಯ22 hours agoArrested-ಕಾಸರಗೋಡು: ಮದುವೆಯ ನೆಪದಲ್ಲಿ ಹತ್ತಾರು ಯುವತಿಯರಿಗೆ ವಂಚನೆ: ಮದುವೆಯಾದ ಮೂರೇ ದಿನಕ್ಕೆ ಚಿನ್ನ, ಹಣದೊಂದಿಗೆ ಪರಾರಿ; ಆರೋಪಿ ಬಿಜು ಆಂಟನಿ ಬಂಧನ
-
ಅಂತರ ರಾಜ್ಯ21 hours agoJantar Mantar-ಸಿಜೆಪಿ ಪ್ರತಿಭಟನೆಗೆ ದೆಹಲಿಯಲ್ಲಿ ಬಿಗಿ ಭದ್ರತೆ – ಪಂಚರ್ ಆಗಲು ರಸ್ತೆಗಳಿಗೆ ತಡೆಬೇಲಿ..! ವಿಮಾನದಲ್ಲೇ ಅಭಿಜಿತ್ ದಿಪ್ಕೆ ಪೊಲೀಸ್ ವಶಕ್ಕೆ..! ಸಾವಿರಕ್ಕೂ ಮಿಕ್ಕಿ ಪ್ರತಿಭಟನಾಕಾರರೂ ವಶಕ್ಕೆ-ಸುಪ್ರೀಂ ಕೋರ್ಟ್ ವಕೀಲರಿಗೆ ತಡೆ..! ತೀವ್ರ ಅಡೆತಡೆಗಳ ನಡುವೆ ಜಂತರ್ ಮಂತರ್ ಗೆ ಹರಿದು ಬರುತ್ತಿರುವ ಜನಸಾಗರ
-
ಅಪರಾಧ17 hours agoBantwal-ಬಂಟ್ವಾಳ: 17 ವರ್ಷಗಳಿಂದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿದ್ದ ಆರೋಪಿ ಅರೆಸ್ಟ್..!
-
ಅಂತರ ರಾಜ್ಯ21 hours agoBy-election results-ಉಪಚುನಾವಣೆ ಫಲಿತಾಂಶ: ಪಶ್ಚಿಮ ಬಂಗಾಳ, ಅಸ್ಸಾಂನಲ್ಲಿ ಬಿಜೆಪಿಗೆ ಭರ್ಜರಿ ಮುನ್ನಡೆ, ತಮಿಳುನಾಡಿನಲ್ಲಿ ಟಿವಿಕೆ ಅಬ್ಬರ


















