ನಿಧನ ವಾರ್ತೆ
Bhopal-ಭೋಪಾಲ್: ಮಾಡೆಲ್ ಅನುಮಾನಾಸ್ಪದ ಸಾವು: ಲಿವ್-ಇನ್ ಸಂಗಾತಿ ಪರಾರಿ; ಕುಟುಂಬದಿಂದ ಕೊಲೆ ಆರೋಪ
ರಾಜ್ಯ ರಾಜಧಾನಿ ಭೋಪಾಲ್‌ನಲ್ಲಿ ಮಾಡೆಲಿಂಗ್ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದ ‘ಡೈಮಂಡ್ ಗರ್ಲ್’ ಖುಷಿ ವರ್ಮಾ (27) ಅನುಮಾನಾಸ್ಪದ ಸ್ಥಿತಿಯಲ್ಲಿ ಸಾವನ್ನಪ್ಪಿದ್ದು, ಈ ಘಟನೆ ಹಲವಾರು ಅನುಮಾನಗಳನ್ನು ಸೃಷ್ಟಿಸಿದೆ. ಪೊಲೀಸರ ಪ್ರಕಾರ, ಮೃತ ಖುಷ್ಬೂ ಅಹಿರ್ವಾರ್ ಅಲಿಯಾಸ್ ಖುಷಿ ವರ್ಮಾ ಅವರು ತಮ್ಮ ಲಿವ್-ಇನ್ ಸಂಗಾತಿ ಖಾಸಿಂ ಎಂಬುವವರೊಂದಿಗೆ ವಾಸವಾಗಿದ್ದರು.
ಭೋಪಾಲ್: ರಾಜ್ಯ ರಾಜಧಾನಿ ಭೋಪಾಲ್‌ನಲ್ಲಿ ಮಾಡೆಲಿಂಗ್ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದ ‘ಡೈಮಂಡ್ ಗರ್ಲ್’ ಖುಷಿ ವರ್ಮಾ (27) ಅನುಮಾನಾಸ್ಪದ ಸ್ಥಿತಿಯಲ್ಲಿ ಸಾವನ್ನಪ್ಪಿದ್ದು, ಈ ಘಟನೆ ಹಲವಾರು ಅನುಮಾನಗಳನ್ನು ಸೃಷ್ಟಿಸಿದೆ. ಪೊಲೀಸರ ಪ್ರಕಾರ, ಮೃತ ಖುಷ್ಬೂ ಅಹಿರ್ವಾರ್ ಅಲಿಯಾಸ್ ಖುಷಿ ವರ್ಮಾ ಅವರು ತಮ್ಮ ಲಿವ್-ಇನ್ ಸಂಗಾತಿ ಖಾಸಿಂ ಎಂಬುವವರೊಂದಿಗೆ ವಾಸವಾಗಿದ್ದರು.
ಸೋಮವಾರ ಮುಂಜಾನೆ, ಖಾಸಿಂ ಖುಷಿ ವರ್ಮಾ ಅವರನ್ನು ಭೈನ್ಸಖೇಡಿಯಲ್ಲಿರುವ ಖಾಸಗಿ ಆಸ್ಪತ್ರೆಗೆ ಕರೆತಂದು ಪರಾರಿಯಾಗಿದ್ದಾನೆ. ಆಸ್ಪತ್ರೆಯ ವೈದ್ಯರು ಖುಷಿ ವರ್ಮಾ ಮೃತಪಟ್ಟಿರುವುದನ್ನು ದೃಢಪಡಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಖಜುರಿ ಸಡಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತೀವ್ರ ತನಿಖೆ ನಡೆಸುತ್ತಿದ್ದಾರೆ.
ಕಳೆದ ಮೂರು ವರ್ಷಗಳಿಂದ ಭೋಪಾಲ್‌ನಲ್ಲಿ ಮಾಡೆಲಿಂಗ್ ಮಾಡುತ್ತಿದ್ದ ಖುಷಿ ವರ್ಮಾ, ಬಿಎ ಅಧ್ಯಯನವನ್ನು ಅರ್ಧಕ್ಕೆ ನಿಲ್ಲಿಸಿ ಸ್ಥಳೀಯ ಬ್ರ್ಯಾಂಡ್‌ಗಳಿಗೆ ಮಾಡೆಲಿಂಗ್‌ನಲ್ಲಿ ತೊಡಗಿಸಿಕೊಂಡಿದ್ದರು. “ಡೈಮಂಡ್ ಗರ್ಲ್” ಎಂಬ ಅಡ್ಡಹೆಸರಿನಲ್ಲಿ ಸಾಮಾಜಿಕ ಮಾಧ್ಯಮದಲ್ಲಿ ಸಕ್ರಿಯರಾಗಿದ್ದ ಅವರು ಇನ್‌ಸ್ಟಾಗ್ರಾಮ್‌ನಲ್ಲಿ ಸುಮಾರು 12,000 ಫಾಲೋವರ್‌ಗಳನ್ನು ಹೊಂದಿದ್ದರು.
ಕುಟುಂಬದಿಂದ ಕೊಲೆ ಆರೋಪ
ಈ ಘಟನೆ ಕೊಲೆ ಎಂದು ಮೃತಳ ಕುಟುಂಬವು ಗಂಭೀರ ಆರೋಪ ಮಾಡಿದೆ. ಖುಷಿ ವರ್ಮಾ ಅವರ ತಾಯಿ ಲಕ್ಷ್ಮಿ ಅಹಿರ್ವಾರ್ ಅವರು, ತಮ್ಮ ಮಗಳ ದೇಹದ ಮೇಲೆ ಮುಖ, ಭುಜ ಮತ್ತು ಖಾಸಗಿ ಭಾಗಗಳಿಗೆ ಗಂಭೀರ ಗಾಯಗಳಾಗಿವೆ ಎಂದು ತಿಳಿಸಿದ್ದಾರೆ. “ಖುಷ್ಬೂ ಅವರನ್ನು ಕ್ರೂರವಾಗಿ ಥಳಿಸಿ ಕೊಲ್ಲಲಾಗಿದೆ” ಎಂದು ಆರೋಪಿಸಿ, ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ನೀಡಬೇಕೆಂದು ನ್ಯಾಯಕ್ಕಾಗಿ ಒತ್ತಾಯಿಸಿದ್ದಾರೆ. ಪೊಲೀಸರು ಈ ಕೊಲೆ ಆರೋಪದ ಬಗ್ಗೆಯೂ ಸುವಿಸ್ತೃತ ತನಿಖೆ ನಡೆಸುತ್ತಿದ್ದಾರೆ.
ನಿಧನ ವಾರ್ತೆ
Kadaba-ಕಡಬ : ಹೆದ್ದಾರಿಯಲ್ಲಿ ದಿಢೀರ್ ಪ್ರತ್ಯಕ್ಷವಾದ ಕಡವೆ; ಕಾರಿಗೆ ಡಿಕ್ಕಿ, ಸ್ಥಳದಲ್ಲೇ ಸಾವು
ಗುಂಡ್ಯ–ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯಲ್ಲಿ ಕಡವೆಯೊಂದು ಕಾರಿಗೆ ಡಿಕ್ಕಿಯಾಗಿ ಮೃತಪಟ್ಟ ಘಟನೆ ಕಡಬ ತಾಲೂಕಿನ ಅನಿಲ ಸಮೀಪ ಶುಕ್ರವಾರ ನಡೆದಿದೆ. ಡಿಕ್ಕಿಯ ರಭಸಕ್ಕೆ ಕಾರಿನ ಮುಂಭಾಗಕ್ಕೆ ಭಾರೀ ಹಾನಿಯಾಗಿದ್ದು, ಕಡವೆ ರಸ್ತೆಯ ಬದಿಗೆ ಎಸೆಯಲ್ಪಟ್ಟು ಮೃತಪಟ್ಟಿದೆ.
ಕಡಬ: ಗುಂಡ್ಯ–ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯಲ್ಲಿ ಕಡವೆಯೊಂದು ಕಾರಿಗೆ ಡಿಕ್ಕಿಯಾಗಿ ಮೃತಪಟ್ಟ ಘಟನೆ ಕಡಬ ತಾಲೂಕಿನ ಅನಿಲ ಸಮೀಪ ಶುಕ್ರವಾರ ನಡೆದಿದೆ.
ಹೆದ್ದಾರಿಯಲ್ಲಿ ಕಾರೊಂದು ಸಂಚರಿಸುತ್ತಿದ್ದ ವೇಳೆ ಏಕಾಏಕಿ ಅಡ್ಡ ಬಂದ ಕಡವೆಗೆ ಕಾರು ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ಕಾರಿನ ಮುಂಭಾಗಕ್ಕೆ ಭಾರೀ ಹಾನಿಯಾಗಿದ್ದು, ಕಡವೆ ರಸ್ತೆಯ ಬದಿಗೆ ಎಸೆಯಲ್ಪಟ್ಟು ಮೃತಪಟ್ಟಿದೆ.
ಈ ಭಾಗದಲ್ಲಿ ಕಾಡುಪ್ರಾಣಿಗಳ ಸಂಚಾರ ಸಾಮಾನ್ಯವಾಗಿರುವ ಹಿನ್ನೆಲೆಯಲ್ಲಿ ಘಟನೆ ವಾಹನ ಸವಾರರಲ್ಲಿ ಆತಂಕ ಮೂಡಿಸಿದೆ. ವಿಶೇಷವಾಗಿ ರಾತ್ರಿ ಹಾಗೂ ಮುಂಜಾನೆ ವೇಳೆ ಕಾಡುಪ್ರಾಣಿಗಳು ಹೆದ್ದಾರಿಗೆ ಬರುವ ಸಾಧ್ಯತೆ ಇರುವುದರಿಂದ ವಾಹನ ಸವಾರರು ಎಚ್ಚರಿಕೆಯಿಂದ ಸಂಚರಿಸಬೇಕಾದ ಅಗತ್ಯವಿದೆ.
ಈ ಹಿಂದೆಯೂ ಇದೇ ಪರಿಸರದಲ್ಲಿ ಕಾಡುಪ್ರಾಣಿಗಳಿಂದ ವಾಹನ ಸವಾರರಿಗೆ ಅಪಾಯ ಉಂಟಾದ ಘಟನೆಗಳು ನಡೆದಿವೆ ಎಂದು ಸ್ಥಳೀಯರು ತಿಳಿಸಿದ್ದಾರೆ.
ಕಾಡುಪ್ರಾಣಿಗಳ ಸಂಚಾರವಿರುವ ಪ್ರದೇಶಗಳಲ್ಲಿ ವಾಹನಗಳ ವೇಗ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳುವುದರ ಜತೆಗೆ, ರಸ್ತೆ ಬದಿಯ ಪೊದೆಗಳನ್ನು ತೆರವುಗೊಳಿಸಿ ವಾಹನ ಸವಾರರಿಗೆ ದೂರದಿಂದಲೇ ಪ್ರಾಣಿಗಳು ಕಾಣುವಂತೆ ಮಾಡುವ ಅಗತ್ಯವಿದೆ ಎಂದು ಸ್ಥಳೀಯರು ಅಭಿಪ್ರಾಯಪಟ್ಟಿದ್ದಾರೆ.
ಅರಣ್ಯ ಇಲಾಖೆ ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಈ ಭಾಗದಲ್ಲಿ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡು ಕಾಡುಪ್ರಾಣಿಗಳು ಹೆದ್ದಾರಿಗೆ ಬರುವುದರಿಂದ ಉಂಟಾಗುವ ಅಪಘಾತಗಳನ್ನು ತಡೆಯಲು ಕ್ರಮ ವಹಿಸಬೇಕು ಎಂಬ ಆಗ್ರಹ ಕೇಳಿಬಂದಿದೆ.
ನಿಧನ ವಾರ್ತೆ
Kasaragod-ಕಾಸರಗೋಡು: ಬೈಕ್-ಕಾರು ಮುಖಾಮುಖಿ ಡಿಕ್ಕಿ; ಸವಾರ ಸಾವು, ಪತ್ನಿ ಗಂಭೀರ
ಸೀತಾಂಗೋಳಿ–ಪೆರ್ಲ ರಸ್ತೆಯ ಪುತ್ತಿಗೆ ಮುಗುರೋಡ್ ಬಳಿ ಇಂದು ಮಧ್ಯಾಹ್ನ ಸಂಭವಿಸಿದ ಬೈಕ್-ಕಾರು ಮುಖಾಮುಖಿ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟಿದ್ದು, ಅವರ ಪತ್ನಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಮೃತರನ್ನು ಊಞಂಪದವು ನಿವಾಸಿ ಎಂ.ಟಿ. ಮುಹಮ್ಮದ್ ಅಶ್ರಫ್ (48) ಎಂದು ಗುರುತಿಸಲಾಗಿದೆ.
ಕಾಸರಗೋಡು: ಸೀತಾಂಗೋಳಿ–ಪೆರ್ಲ ರಸ್ತೆಯ ಪುತ್ತಿಗೆ ಮುಗುರೋಡ್ ಬಳಿ ಇಂದು ಮಧ್ಯಾಹ್ನ ಸಂಭವಿಸಿದ ಬೈಕ್-ಕಾರು ಮುಖಾಮುಖಿ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟಿದ್ದು, ಅವರ ಪತ್ನಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ಮೃತರನ್ನು ಊಞಂಪದವು ನಿವಾಸಿ ಎಂ.ಟಿ. ಮುಹಮ್ಮದ್ ಅಶ್ರಫ್ (48) ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿರುವ ಅವರ ಪತ್ನಿಯನ್ನು ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.
ಇಂದು ಮಧ್ಯಾಹ್ನ ಸುಮಾರು 12 ಗಂಟೆ ವೇಳೆಗೆ ಅಪಘಾತ ಸಂಭವಿಸಿದೆ. ಮುಹಮ್ಮದ್ ಅಶ್ರಫ್ ಅವರು ಚಲಾಯಿಸುತ್ತಿದ್ದ ಬೈಕ್‌ಗೆ ವಿರುದ್ಧ ದಿಕ್ಕಿನಿಂದ ಬಂದ ಕಾರು ಮುಖಾಮುಖಿಯಾಗಿ ಡಿಕ್ಕಿಯಾಗಿದೆ.
ಡಿಕ್ಕಿಯ ರಭಸಕ್ಕೆ ಅಶ್ರಫ್ ಗಂಭೀರವಾಗಿ ಗಾಯಗೊಂಡಿದ್ದು, ಕೂಡಲೇ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ನಿಧನ ವಾರ್ತೆ
Mangalore-ಮಂಗಳೂರು: ನ್ಯಾಯಾಧೀಶರ ಕಾರು, ಗೂಡ್ಸ್ ಆಟೋ, ಬೈಕ್ ನಡುವೆ ಸರಣಿ ಅಪಘಾತ; ಗೂಡ್ಸ್ ಆಟೋ ಚಾಲಕ ಮೃತ್ಯು
ಮಂಗಳೂರು ನಗರದ ಬಾವುಟಗುಡ್ಡೆಯ ಕೋರ್ಟ್ ಕ್ರಾಸ್ ರಸ್ತೆಯಲ್ಲಿ ಮಂಗಳವಾರ ಬೆಳಗ್ಗೆ ಕಾರು, ಗೂಡ್ಸ್ ಆಟೋ ರಿಕ್ಷಾ ಹಾಗೂ ದ್ವಿಚಕ್ರ ವಾಹನದ ನಡುವೆ ಸಂಭವಿಸಿದ ಸರಣಿ ಅಪಘಾತದಲ್ಲಿ ಗೂಡ್ಸ್ ಆಟೋ ರಿಕ್ಷಾ ಚಾಲಕ ಮೃತಪಟ್ಟಿದ್ದಾರೆ. ಮೃತರನ್ನು ಕಾಸರಗೋಡು ಮೊಗ್ರಾಲ್‌ನ ಪೊಟ್ಟೊರಿ ಪೇರಲ್ ನಿವಾಸಿ ಚಂದ್ರ ಕೆ. (67) ಎಂದು ಗುರುತಿಸಲಾಗಿದೆ.
ಮಂಗಳೂರು: ನಗರದ ಬಾವುಟಗುಡ್ಡೆಯ ಕೋರ್ಟ್ ಕ್ರಾಸ್ ರಸ್ತೆಯಲ್ಲಿ ಮಂಗಳವಾರ ಬೆಳಗ್ಗೆ ಕಾರು, ಗೂಡ್ಸ್ ಆಟೋ ರಿಕ್ಷಾ ಹಾಗೂ ದ್ವಿಚಕ್ರ ವಾಹನದ ನಡುವೆ ಸಂಭವಿಸಿದ ಸರಣಿ ಅಪಘಾತದಲ್ಲಿ ಗೂಡ್ಸ್ ಆಟೋ ರಿಕ್ಷಾ ಚಾಲಕ ಮೃತಪಟ್ಟಿದ್ದಾರೆ.
ಮೃತರನ್ನು ಕಾಸರಗೋಡು ಮೊಗ್ರಾಲ್‌ನ ಪೊಟ್ಟೊರಿ ಪೇರಲ್ ನಿವಾಸಿ ಚಂದ್ರ ಕೆ. (67) ಎಂದು ಗುರುತಿಸಲಾಗಿದೆ.
ದಕ್ಷಿಣ ಕನ್ನಡ ಜಿಲ್ಲಾ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ವಿನಯ್ ಡಿ. ಅವರು ಕಾರಿನಲ್ಲಿ (ಕೆಎ-05-ಎನ್‌ಕೆ-2504) ಬೆಳಗ್ಗೆ ನ್ಯಾಯಾಲಯದತ್ತ ತೆರಳುತ್ತಿದ್ದರು. ಕರಂಗಲ್ಪಾಡಿಯ ರಾಧಾ ಮೆಡಿಕಲ್ಸ್ ಎದುರಿನ ತಿರುವಿನಲ್ಲಿ ಸಾಗುತ್ತಿದ್ದಾಗ, ಗೂಡ್ಸ್ ಆಟೋ ರಿಕ್ಷಾ (ಕೆಎ-19-ಎಡಿ-4395) ನಿಯಂತ್ರಣ ತಪ್ಪಿ ನ್ಯಾಯಾಧೀಶರ ಕಾರಿಗೆ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ.
ಬಳಿಕ ಗೂಡ್ಸ್ ಆಟೋ ರಿಕ್ಷಾ ಅದೇ ರಸ್ತೆಯಲ್ಲಿ ಬರುತ್ತಿದ್ದ ದ್ವಿಚಕ್ರ ವಾಹನ (ಕೆಎ-19-ಎಚ್‌ವೈ-1664)ಕ್ಕೂ ಢಿಕ್ಕಿ ಹೊಡೆದು ಮಗುಚಿಬಿದ್ದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ಚಂದ್ರ ಕೆ. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಗೂಡ್ಸ್ ಆಟೋ ರಿಕ್ಷಾ ಢಿಕ್ಕಿಯಿಂದ ದ್ವಿಚಕ್ರ ವಾಹನ ಸವಾರ ಪ್ಲೆವಿಯನ್ ಮೆರ್ವಿನ್ ಅವರಿಗೂ ಗಾಯಗಳಾಗಿವೆ. ಅಪಘಾತದಲ್ಲಿ ಕಾರು, ಗೂಡ್ಸ್ ಆಟೋ ರಿಕ್ಷಾ ಹಾಗೂ ದ್ವಿಚಕ್ರ ವಾಹನ ಜಖಂಗೊಂಡಿವೆ.
ಅಪಘಾತದಲ್ಲಿ ನ್ಯಾಯಾಧೀಶ ವಿನಯ್ ಡಿ. ಅವರಿಗೂ ಸಣ್ಣಪುಟ್ಟ ಗಾಯಗಳಾಗಿದ್ದು, ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.
ನ್ಯಾಯಾಧೀಶ ವಿನಯ್ ಡಿ. ಅವರು ನೀಡಿದ ದೂರಿನ ಆಧಾರದ ಮೇಲೆ ಕದ್ರಿ ಟ್ರಾಫಿಕ್ ಈಸ್ಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.
-
ಪುತ್ತೂರು18 hours ago
ಮಾಣಿ : ಲೈನ್ ದುರಸ್ತಿ ವೇಳೆ ವಿದ್ಯುತ್ ಸ್ಪರ್ಶ: ಪವರ್ಮ್ಯಾನ್ ಮೃತ್ಯು
-
ಬಿಗ್ ನ್ಯೂಸ್21 hours agoArshia Khan-ನವರಾತ್ರಿಗೆ ‘ಅಷ್ಟಭುಜ ಧಾರಿಣಿ ದೇವಿ’ಯಾಗಿ ಮಿಂಚಲಿರುವ ವಿಟ್ಲದ ಅರ್ಷಿಯಾ ಖಾನ್
-
ಮಂಗಳೂರು20 hours agoCM-ಒಂದು ಅಭಿನಂದನೆಯೂ ಇಲ್ಲ ಎಂದು ಕ್ರೀಡಾಪಟುವಿನಿಂದ ಬೇಸರ ವ್ಯಕ್ತವಾದ ಕೂಡಲೇ ಪೂವಮ್ಮಗೆ ಕರೆ ಮಾಡಿದ ಸಿಎಂ..! ಏನೂ ಹೇಳಿದ್ರು ಗೊತ್ತೇ..?
-
ಅಂತರ ರಾಜ್ಯ24 hours agoECI-ಮುಖ್ಯ ಚುನಾವಣ ಆಯುಕ್ತ ವಿರುದ್ಧ ದೇಶಾದ್ಯಂತ ಹೋರಾಟ ತೀವ್ರಗೊಳ್ಳುತ್ತಿದ್ದಂತೆ ‘ಬಿಟ್ಟು ಹೋದವರ ಹೆಸರು ಸೇರ್ಪಡೆಗೆ ಅಭಿಯಾನ’…! 20 ರಾಜ್ಯಗಳಲ್ಲಿ ಕೈಬಿಟ್ಟ 13 ಕೋಟಿ ಮತದಾರರ ಮರುಸೇರ್ಪಡೆಗೆ ಆಯೋಗ ಅವಕಾಶ
-
ಬಿಗ್ ನ್ಯೂಸ್20 hours agoNagalakshmi Chowdary-ಬಂಗ್ಲೆಗುಡ್ಡೆ ಏನೂ ಸ್ಮಶಾನ ಅಲ್ಲ : ಅಲ್ಲಿ ಯಾಕೆ ಅಷ್ಟು ಅಸ್ಥಿಪಂಜರಗಳು ಸಿಕ್ಕಿದವು..? ಧರ್ಮಸ್ಥಳ ಎಸ್ಐಟಿಗೆ ಹೆಚ್ಚಿನ ಅಧಿಕಾರ ನೀಡಬೇಕು..! : ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌದರಿ
-
ಶಿಕ್ಷಣ20 hours agoSpecial classes: ಮಳೆ ರಜೆ ಹೊಂದಾಣಿಕೆ: ಅ.3ರಿಂದ ಅ.7ರವರೆಗೆ ದಸರಾ ರಜೆಯಲ್ಲೂ ವಿಶೇಷ ತರಗತಿ
-
ರಾಜ್ಯ23 hours agoTemperature-ಹಿಂಗಾರು ಮಳೆ ಇಳಿಮುಖ, ಬಿಸಿಲು ಏರುಮುಖ; ಕರ್ನಾಟಕಕ್ಕೆ ಹವಾಮಾನ ಎಚ್ಚರಿಕೆ..!
-
ಅಪರಾಧ19 hours agoMangalore-ಮಂಗಳೂರು: ಸರಣಿ ಮನೆಕಳ್ಳತನ: ದೆಹಲಿ ಮೂಲದ ಇಬ್ಬರು ಕುಖ್ಯಾತ ಕಳ್ಳರ ಬಂಧನ; ₹18 ಲಕ್ಷ ಮೌಲ್ಯದ ಸೊತ್ತು ವಶ


















