ಬಿಗ್ ನ್ಯೂಸ್
Vijay Raghavendra-ತಂದೆ ಚಿನ್ನೇಗೌಡರ ಮರುಮದುವೆ ಒತ್ತಾಯಕ್ಕೆ ವಿಜಯ್ ರಾಘವೇಂದ್ರ ಮೌನ ನಿರಾಕರಣೆ
ವಿಜಯ್ ಅವರ ತಂದೆ, ಹಿರಿಯ ನಿರ್ಮಾಪಕ ಚಿನ್ನೇಗೌಡರು ‘ನೆಲಮುಗಿಲು ಟಿವಿ’ ಸಂದರ್ಶನದಲ್ಲಿ ತಮ್ಮ ಮನದ ಮಾತನ್ನು ಹಂಚಿಕೊಂಡಿದ್ದಾರೆ. “ವಿಜಯ್ ಬದುಕಿನಲ್ಲಿ ಸ್ಪಂದನಾ ನಿಧನ ಒಂದು ದೊಡ್ಡ ಕೆಟ್ಟ ಕನಸಿನಂತೆ. ಆಕೆ ನಿಧನರಾದ ಬಳಿಕ ನಾನು ಅವನಿಗೆ ಎರಡನೇ ಮದುವೆ ಆಗುವಂತೆ ತುಂಬಾ ಬಾರಿ ಹೇಳಿದ್ದೇನೆ. ಆದರೆ ಅವನು ಒಪ್ಪಿಕೊಳ್ಳುತ್ತಿಲ್ಲ” ಎಂದಿದ್ದಾರೆ.
ಬೆಂಗಳೂರು: ಪತ್ನಿ ಸ್ಪಂದನಾ ಅವರ ಅಕಾಲಿಕ ಮರಣದ ನೋವಿನಿಂದ ಹೊರಬರುತ್ತಿರುವ ‘ಚಿನ್ನಾರಿ ಮುತ್ತ’ ವಿಜಯ್ ರಾಘವೇಂದ್ರ ಅವರು ಮತ್ತೆ ಸಿನಿಮಾ ರಂಗದಲ್ಲಿ ಸಕ್ರಿಯರಾಗಿದ್ದಾರೆ. ‘ರಿಪ್ಪನ್ ಸ್ವಾಮಿ’ ಯಶಸ್ಸಿನ ನಂತರ, ಅವರ ಮುಂದಿನ ‘ಸೆಕೆಂಡ್ ಕೇಸ್ ಆಫ್ ಸೀತಾರಾಮ್’ ಚಿತ್ರವು ಬಿಡುಗಡೆಗೆ ಸಿದ್ಧವಾಗಿದೆ.
ಬ್ಯಾಂಕಾಕ್ ಪ್ರವಾಸದ ಸಮಯದಲ್ಲಿ ಹೃದಯಾಘಾತದಿಂದ ಸ್ಪಂದನಾ ನಿಧನರಾದ ನಂತರ, ವಿಜಯ್ ರಾಘವೇಂದ್ರ ತಮ್ಮ ವೃತ್ತಿಜೀವನದಲ್ಲಿ ಮುನ್ನಡೆಯಲು ಪ್ರಯತ್ನಿಸುತ್ತಿದ್ದರೂ, ಅವರ ವೈಯಕ್ತಿಕ ಜೀವನದ ಬಗ್ಗೆ, ವಿಶೇಷವಾಗಿ ಎರಡನೇ ಮದುವೆಯ ಕುರಿತು, ಆಗಾಗ ಚರ್ಚೆಗಳು ನಡೆಯುತ್ತಿವೆ. ಆದರೆ, ಈ ಬಗ್ಗೆ ವಿಜಯ್ ಯಾವಾಗಲೂ ಮೌನವಾಗಿಯೇ ಇದ್ದಾರೆ.
ಇದೀಗ, ವಿಜಯ್ ಅವರ ತಂದೆ, ಹಿರಿಯ ನಿರ್ಮಾಪಕ ಚಿನ್ನೇಗೌಡರು ‘ನೆಲಮುಗಿಲು ಟಿವಿ’ ಸಂದರ್ಶನದಲ್ಲಿ ಈ ಸೂಕ್ಷ್ಮ ವಿಷಯದ ಬಗ್ಗೆ ತಮ್ಮ ಮನದ ಮಾತನ್ನು ಹಂಚಿಕೊಂಡಿದ್ದಾರೆ. “ವಿಜಯ್ ಬದುಕಿನಲ್ಲಿ ಸ್ಪಂದನಾ ನಿಧನ ಒಂದು ದೊಡ್ಡ ಕೆಟ್ಟ ಕನಸಿನಂತೆ. ಆಕೆ ನಿಧನರಾದ ಬಳಿಕ ನಾನು ಅವನಿಗೆ ಎರಡನೇ ಮದುವೆ ಆಗುವಂತೆ ತುಂಬಾ ಬಾರಿ ಹೇಳಿದ್ದೇನೆ. ಆದರೆ ಅವನು ಒಪ್ಪಿಕೊಳ್ಳುತ್ತಿಲ್ಲ” ಎಂದಿದ್ದಾರೆ.
ಮಗನ ಬಗ್ಗೆ ಹೆಮ್ಮೆ ವ್ಯಕ್ತಪಡಿಸಿದ ಚಿನ್ನೇಗೌಡರು, “ಅವನ ಮಗ ಪಿಯುಸಿ ಓದುತ್ತಿದ್ದಾನೆ. ಈಗಲೂ ವಿಜಯ್ ತನ್ನ ಪಾಡಿಗೆ ತಾನಿದ್ದಾನೆ, ತನ್ನ ಕೆಲಸದಲ್ಲಿ ತೊಡಗಿಸಿಕೊಂಡಿದ್ದಾನೆ. ಅವನು ಯಾರ ತಂಟೆಗೂ ಹೋಗುವುದಿಲ್ಲ, ಯಾವ ಕೆಲಸ ಇದ್ದರೂ ನಿಯತ್ತಾಗಿ ಮಾಡುತ್ತಾನೆ. ಅದನ್ನು ನೋಡಿದರೆ ನನಗೆ ಖುಷಿ ಆಗುತ್ತದೆ. ಆದರೆ ಹೆತ್ತ ಕರುಳು ನೋಡುವಾಗ, ಹೀಗೆ ಆಯಿತಲ್ಲಾ ಎಂಬ ಸಂಕಟ ಕಾಡುತ್ತದೆ” ಎಂದು ನೋವನ್ನು ತೋಡಿಕೊಂಡಿದ್ದಾರೆ.
ವಿಜಯ್ ಅವರ ಮಾವ ಶಿವರಾಮ್ ಮತ್ತು ಅತ್ತೆ ಕೂಡ ಮರುಮದುವೆಗೆ ಮನವಿ ಮಾಡಿದ್ದಾರಂತೆ. ಆದರೆ ವಿಜಯ್, “ಆ ಜಾಗಕ್ಕೆ ಯಾರಿಂದಲೂ ಸ್ಥಾನ ತುಂಬಲು ಸಾಧ್ಯವಿಲ್ಲ” ಎಂದು ಹೇಳಿ, ಎರಡನೇ ಮದುವೆ ಬೇಡ ಎಂದು ಒಬ್ಬಂಟಿಯಾಗಿದ್ದಾರೆ ಎಂದು ಚಿನ್ನೇಗೌಡರು ತಿಳಿಸಿದ್ದಾರೆ.
ತಮ್ಮ ಮಕ್ಕಳಾದ ರಾಘು ಮತ್ತು ಮುರಳಿಯವರ ನಯ-ವಿನಯತೆ ಮತ್ತು ಸಂಸ್ಕೃತಿಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಚಿನ್ನೇಗೌಡರು, ಅಂತಹ ಮಕ್ಕಳನ್ನು ಪಡೆದಿದ್ದಕ್ಕೆ ತಾವೇ ಧನ್ಯರು ಎಂದಿದ್ದಾರೆ.
‘ಚಲಿಸುವ ಮೋಡಗಳು’ ಮೂಲಕ ಚಿತ್ರರಂಗಕ್ಕೆ ಕಾಲಿಟ್ಟ ವಿಜಯ್ ರಾಘವೇಂದ್ರ, ‘ಚಿನ್ನಾರಿ ಮುತ್ತ’ ಚಿತ್ರಕ್ಕೆ ರಾಜ್ಯ ಪ್ರಶಸ್ತಿ ಮತ್ತು ‘ಕೊಟ್ರೇಶಿ ಕನಸು’ ಚಿತ್ರಕ್ಕಾಗಿ ರಾಷ್ಟ್ರಪ್ರಶಸ್ತಿ ಪಡೆದಿದ್ದರು. ‘ನಿನಗಾಗಿ’ ಚಿತ್ರದಿಂದ ನಾಯಕ ನಟನಾಗಿ ಪ್ರೇಕ್ಷಕರ ಮನ ಗೆದ್ದಿದ್ದರು.
ಮಂಗಳೂರು
Mangalore-ರಿಕ್ಷಾದಲ್ಲಿ ಬಿಟ್ಟುಹೋದ 48 ಗ್ರಾಂ ಚಿನ್ನದ ನೆಕ್ಲೇಸ್ ವಾಪಸ್ ನೀಡಿ ಪ್ರಾಮಾಣಿಕತೆ ಮೆರೆದ ಚಾಲಕ
ಸುಲ್ತಾನ್ ಗೋಲ್ಡ್ ಶಾಪ್‌ನಲ್ಲಿ 48 ಗ್ರಾಂ ತೂಕದ ಚಿನ್ನದ ನೆಕ್ಲೇಸ್ ಸರ ಖರೀದಿಸಿ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಚಿನ್ನವಿದ್ದ ಬ್ಯಾಗನ್ನು ರಿಕ್ಷಾದಲ್ಲೇ ಮರೆತುಹೋದ ಮಹಿಳೆಗೆ, ರಿಕ್ಷಾ ಚಾಲಕರೊಬ್ಬರು ಅದನ್ನು ಸುರಕ್ಷಿತವಾಗಿ ವಾರಸುದಾರರಿಗೆ ಹಸ್ತಾಂತರಿಸುವ ಮೂಲಕ ಪ್ರಾಮಾಣಿಕತೆ ಮೆರೆದಿದ್ದಾರೆ.
ಮಂಗಳೂರು: ಸುಲ್ತಾನ್ ಗೋಲ್ಡ್ ಶಾಪ್‌ನಲ್ಲಿ 48 ಗ್ರಾಂ ತೂಕದ ಚಿನ್ನದ ನೆಕ್ಲೇಸ್ ಸರ ಖರೀದಿಸಿ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಚಿನ್ನವಿದ್ದ ಬ್ಯಾಗನ್ನು ರಿಕ್ಷಾದಲ್ಲೇ ಮರೆತುಹೋದ ಮಹಿಳೆಗೆ, ರಿಕ್ಷಾ ಚಾಲಕರೊಬ್ಬರು ಅದನ್ನು ಸುರಕ್ಷಿತವಾಗಿ ವಾರಸುದಾರರಿಗೆ ಹಸ್ತಾಂತರಿಸುವ ಮೂಲಕ ಪ್ರಾಮಾಣಿಕತೆ ಮೆರೆದಿದ್ದಾರೆ.
ಅಫ್ಜಿಲಾ ಎಂಬವರು ಸುಲ್ತಾನ್ ಗೋಲ್ಡ್ ಶಾಪ್‌ನಲ್ಲಿ 48 ಗ್ರಾಂ ತೂಕದ ಚಿನ್ನದ ನೆಕ್ಲೇಸ್ ಸರವನ್ನು ಖರೀದಿಸಿದ್ದರು. ಬಳಿಕ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಚಿನ್ನದ ಸರವಿದ್ದ ಬ್ಯಾಗನ್ನು ರಿಕ್ಷಾದಲ್ಲೇ ಬಿಟ್ಟು ಇಳಿದಿದ್ದರು.
ರಿಕ್ಷಾ ಚಾಲಕ ಬಸವರಾಜ ಅವರಿಗೆ ಬ್ಯಾಗ್ ಪತ್ತೆಯಾಗಿದ್ದು, ಅದರಲ್ಲಿ ಚಿನ್ನದ ನೆಕ್ಲೇಸ್ ಇರುವುದನ್ನು ಗಮನಿಸಿದ್ದಾರೆ. ಬಳಿಕ ಯಾವುದೇ ಆಸೆ, ಆಮಿಷಕ್ಕೆ ಒಳಗಾಗದೆ ಬ್ಯಾಗನ್ನು ಸುರಕ್ಷಿತವಾಗಿ ವಾರಸುದಾರರಿಗೆ ಮರಳಿಸಿದ್ದಾರೆ.
ಚಿನ್ನದ ಸರವನ್ನು ಮರಳಿ ಪಡೆದ ಅಫ್ಜಿಲಾ ಅವರು ರಿಕ್ಷಾ ಚಾಲಕ ಬಸವರಾಜ ಅವರ ಪ್ರಾಮಾಣಿಕತೆಗೆ ಕೃತಜ್ಞತೆ ಸಲ್ಲಿಸಿದ್ದಾರೆ. ಚಾಲಕನ ಈ ನಡೆ ಸಾರ್ವಜನಿಕ ವಲಯದಲ್ಲಿ ಮೆಚ್ಚುಗೆಗೆ ಪಾತ್ರವಾಗಿದೆ.
ಬಿಗ್ ನ್ಯೂಸ್
Half helmet-ಕರ್ನಾಟಕದಲ್ಲಿ ಹಾಫ್ ಹೆಲ್ಮೆಟ್ ಸಂಪೂರ್ಣ ನಿಷೇಧ
ರಸ್ತೆ ಅಪಘಾತಗಳನ್ನು ತಡೆಗಟ್ಟುವ ಹಾಗೂ ದ್ವಿಚಕ್ರ ವಾಹನ ಸವಾರರ ಸುರಕ್ಷತೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ಕ್ರಮ ಕೈಗೊಂಡಿದ್ದು, ರಾಜ್ಯಾದ್ಯಂತ ಹಾಫ್ ಹೆಲ್ಮೆಟ್‌ಗಳ ಬಳಕೆ, ತಯಾರಿಕೆ ಮತ್ತು ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ತಿಳಿಸಿದೆ.
ಬೆಂಗಳೂರು: ರಸ್ತೆ ಅಪಘಾತಗಳನ್ನು ತಡೆಗಟ್ಟುವ ಹಾಗೂ ದ್ವಿಚಕ್ರ ವಾಹನ ಸವಾರರ ಸುರಕ್ಷತೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ಕ್ರಮ ಕೈಗೊಂಡಿದ್ದು, ರಾಜ್ಯಾದ್ಯಂತ ಹಾಫ್ ಹೆಲ್ಮೆಟ್‌ಗಳ ಬಳಕೆ, ತಯಾರಿಕೆ ಮತ್ತು ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ತಿಳಿಸಿದೆ.
ದ್ವಿಚಕ್ರ ವಾಹನ ಸವಾರರು ಕಡ್ಡಾಯವಾಗಿ ಬ್ಯೂರೋ ಆಫ್ ಇಂಡಿಯನ್ ಸ್ಟ್ಯಾಂಡರ್ಡ್ಸ್ (BIS) ಅಥವಾ ಐಎಸ್‌ಐ ಗುಣಮಟ್ಟದ ಮಾನದಂಡ ಹೊಂದಿರುವ ಸುರಕ್ಷಿತ ಹೆಲ್ಮೆಟ್‌ಗಳನ್ನೇ ಧರಿಸಬೇಕು. ತಪಾಸಣೆಯಿಂದ ತಪ್ಪಿಸಿಕೊಳ್ಳುವ ಉದ್ದೇಶದಿಂದ ಕಳಪೆ ಗುಣಮಟ್ಟದ ಅಥವಾ ಹಾಫ್ ಹೆಲ್ಮೆಟ್‌ಗಳನ್ನು ಬಳಸುವುದರಿಂದ ಅಪಘಾತ ಸಂಭವಿಸಿದ ಸಂದರ್ಭದಲ್ಲಿ ಗಂಭೀರ ತಲೆಪೆಟ್ಟಾಗುವ ಅಪಾಯ ಹೆಚ್ಚಿರುವ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.
ಹಾಫ್ ಹೆಲ್ಮೆಟ್‌ಗಳನ್ನು ಬಳಸುವ ಸವಾರರ ವಿರುದ್ಧ ಮಾತ್ರವಲ್ಲದೆ, ಕಳಪೆ ಗುಣಮಟ್ಟದ ಹೆಲ್ಮೆಟ್‌ಗಳನ್ನು ತಯಾರಿಸುವ ಘಟಕಗಳು ಹಾಗೂ ಅವುಗಳನ್ನು ಮಾರಾಟ ಮಾಡುವ ಅಂಗಡಿಗಳ ವಿರುದ್ಧವೂ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ. ಅನಧಿಕೃತವಾಗಿ ಇಂತಹ ಹೆಲ್ಮೆಟ್‌ಗಳನ್ನು ಮಾರಾಟ ಮಾಡುವವರ ವಿರುದ್ಧ ವ್ಯಾಪಕ ಕಾರ್ಯಾಚರಣೆ ನಡೆಸಲು ಸಾರಿಗೆ ಇಲಾಖೆ ಸಿದ್ಧತೆ ನಡೆಸಿದೆ.
ಸರ್ಕಾರದ ನಿಯಮ ಉಲ್ಲಂಘಿಸಿ ಹಾಫ್ ಹೆಲ್ಮೆಟ್ ಧರಿಸಿ ವಾಹನ ಚಲಾಯಿಸುವ ಸವಾರರ ವಿರುದ್ಧ ಪೊಲೀಸರು ಹಾಗೂ ಸಾರಿಗೆ ಅಧಿಕಾರಿಗಳು ದಂಡ ಸೇರಿದಂತೆ ಕಾನೂನು ಕ್ರಮ ಕೈಗೊಳ್ಳಲಿದ್ದಾರೆ.
ಬಿಗ್ ನ್ಯೂಸ್
Puttur-ಪುತ್ತೂರು : ಕೋಟಿ- ಚೆನ್ನಯ KSRTC ಬಸ್ ನಿಲ್ದಾಣದ ನಿಲ್ದಾಣಾಧಿಕಾರಿಯಾಗಿ ಕೆ. ಭಾಸ್ಕರ ಶೆಟ್ಟಿ ಬಜನಿಗುತ್ತು ಪದೋನ್ನತಿ
ಸುಳ್ಯ ತಾಲೂಕಿನ ಬಾಳಿಲ ಗ್ರಾಮದ ಬಜನಿಗುತ್ತು ಕೆ.ಭಾಸ್ಕರ ಶೆಟ್ಟಿಯವರು ಸಹಾಯಕ ಸಂಚಾರ ನಿರೀಕ್ಷಕರಾಗಿ ಪದನ್ನೋತಿ ಹೊಂದಿ ಪುತ್ತೂರು ಕೋಟಿ- ಚೆನ್ನಯ KSRTC ಬಸ್ ನಿಲ್ದಾಣದ ನಿಲ್ದಾಣಾಧಿಕಾರಿಯಾಗಿ ನಿಯೋಜನೆಗೊಂಡಿದ್ದಾರೆ. 1992 ರಲ್ಲಿ ನಿರ್ವಾಹಕರಾಗಿ KSRTC ಮಂಗಳೂರು ವಿಭಾಗದಲ್ಲಿ ನೇಮಕಗೊಂಡರು.
ಪುತ್ತೂರು : ಸುಳ್ಯ ತಾಲೂಕಿನ ಬಾಳಿಲ ಗ್ರಾಮದ ಬಜನಿಗುತ್ತು ಕೆ.ಭಾಸ್ಕರ ಶೆಟ್ಟಿಯವರು ಸಹಾಯಕ ಸಂಚಾರ ನಿರೀಕ್ಷಕರಾಗಿ ಪದನ್ನೋತಿ ಹೊಂದಿ ಪುತ್ತೂರು ಕೋಟಿ- ಚೆನ್ನಯ KSRTC ಬಸ್ ನಿಲ್ದಾಣದ ನಿಲ್ದಾಣಾಧಿಕಾರಿಯಾಗಿ ನಿಯೋಜನೆಗೊಂಡಿದ್ದಾರೆ.
1992 ರಲ್ಲಿ ನಿರ್ವಾಹಕರಾಗಿ KSRTC ಮಂಗಳೂರು ವಿಭಾಗದಲ್ಲಿ ನೇಮಕಗೊಂಡರು.
2022ರಲ್ಲಿ ಸಂಚಾರ ನಿಯಂತ್ರಕರಾಗಿ ಕುಕ್ಕೆ ಸುಬ್ರಹ್ಮಣ್ಯ ಬಸ್ ನಿಲ್ದಾಣದಲ್ಲಿ ಸೇವೆ ಸಲ್ಲಿಸಿದ ಭಾಸ್ಕರ ಶೆಟ್ಟಿಯವರು 2024ರಿಂದ ಪುತ್ತೂರು ಬಸ್ ನಿಲ್ದಾಣದಲ್ಲಿ ಮುಂಗಡ ಟಿಕೆಟ್ ಕಾಯ್ದಿರಿಸುವ ಕೌಂಟರ್ ನಲ್ಲಿ ಕಾರ್ಯನಿರ್ವಹಿಸಿ, 2026 ಜೂನ್ ನಲ್ಲಿ ಬಸ್ ನಿಲ್ದಾಣದ ಸಹಾಯಕ ಸಂಚಾರ ನಿರೀಕ್ಷಕರಾಗಿ ಪದೋನ್ನತಿ ಹೊಂದಿದ್ದಾರೆ.
ಬಜನಿಯಲ್ಲಿ ಕೃಷಿಕರಾಗಿಯೂ ತಮ್ಮನ್ನು ತೊಡಗಿಸಿಕೊಂಡಿರುವ ಭಾಸ್ಕರ ಶೆಟ್ಟಿಯವರ ಪತ್ನಿ ಸೀಮಾ ಬಿ. ಶೆಟ್ಟಿ, ಹಿರಿಯ ಪುತ್ರಿ ಕು. ಸನ್ಮಿತಾ ಶೆಟ್ಟಿ ಬಿ.ಇ ಪದವೀಧರೆಯಾಗಿ ಬೆಂಗಳೂರಿನಲ್ಲಿ ಸಾಫ್ಟ್‌ವೇರ್ ಇಂಜಿನಿಯರ್ ಆಗಿ ಉದ್ಯೋಗದಲ್ಲಿದ್ದಾರೆ.
-
Uncategorized16 hours ago
ಪುತ್ತೂರು : ಬಾಡಿಗೆ ಮನೆಯಲ್ಲಿ ಮಲಗಿದ್ದ ಸ್ಥಿತಿಯಲ್ಲೇ ಯುವಕ ಸಾವು
-
Uncategorized18 hours ago
Puttur Court retaining wall collapse : ಹತ್ತು ತಿಂಗಳ ಹಿಂದಷ್ಟೇ ಉದ್ಘಾಟನೆ; ಪುತ್ತೂರು ಹೊಸ ನ್ಯಾಯಾಲಯದ ತಡೆಗೋಡೆ ಕುಸಿತ- ಕಾಮಗಾರಿಯ ಗುಣಮಟ್ಟದ ಬಗ್ಗೆ ಚರ್ಚೆ
-
ಮಂಗಳೂರು21 hours agoAuto passengers-ದಕ್ಷಿಣ ಕನ್ನಡದಲ್ಲಿ ಆಟೊ ಪ್ರಯಾಣಿಕರಿಗೆ ಮತ್ತೊಂದು ದರ ಏರಿಕೆ ಶಾಕ್: ಇಲ್ಲಿದೆ ಪರಿಷ್ಕೃತ ರೇಟ್ ಕಾರ್ಡ್
-
ಅಂತರ ರಾಜ್ಯ20 hours agoBlackmail-ದೋಸೆಯಲ್ಲಿ ಸತ್ತ ಇಲಿ ಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ದೂರು ನೀಡಿದ್ದ ಮಹಿಳೆಯಿಂದಲೇ ₹25 ಲಕ್ಷಕ್ಕೆ ಬ್ಲ್ಯಾಕ್ಮೇಲ್..!
-
ಉದ್ಯೋಗ22 hours agoPuttur-Salesನಿಂದ Technicianವರೆಗೆ; ಪುತ್ತೂರಿನ ಶ್ರೀ ತಿರುಮಲಾ TVSನಲ್ಲಿ ಭರ್ಜರಿ Job Opening
-
ಬಿಗ್ ನ್ಯೂಸ್21 hours agoPuttur-ಪುತ್ತೂರು : ಕೋಟಿ- ಚೆನ್ನಯ KSRTC ಬಸ್ ನಿಲ್ದಾಣದ ನಿಲ್ದಾಣಾಧಿಕಾರಿಯಾಗಿ ಕೆ. ಭಾಸ್ಕರ ಶೆಟ್ಟಿ ಬಜನಿಗುತ್ತು ಪದೋನ್ನತಿ
-
ಅಂತರ ರಾಜ್ಯ21 hours agoPremananda Ashram-ಪ್ರೇಮಾನಂದ ಆಶ್ರಮದ ಶಿಷ್ಯನ ಸಾವು ಪ್ರಕರಣಕ್ಕೆ ಟ್ವಿಸ್ಟ್: ರಕ್ತದ ಕಲೆ, ಸಿಸಿಟಿವಿ ದೃಶ್ಯಗಳ ಪರಿಶೀಲನೆ
-
ಬಿಗ್ ನ್ಯೂಸ್21 hours agoಏಷ್ಯನ್ ಮಾಸ್ಟರ್ಸ್ ಈಜು ಚಾಂಪಿಯನ್ಶಿಪ್ – 9 ರಾಷ್ಟ್ರಗಳ 1500 ಈಜುಪಟುಗಳು ಭಾಗಿ : ಪುತ್ತೂರಿನ ಪಾರ್ಥ ವಾರಣಾಸಿಗೆ ಚಿನ್ನ


















