ಶಿಕ್ಷಣ
Vivekananda-ತೆಂಕಿಲ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಗೆ ಕನಸುಗಳು 2025 ಕಾರ್ಯಕ್ರಮದಲ್ಲಿ ಹಲವಾರು ಪ್ರಶಸ್ತಿ
ವಿವೇಕಾನಂದ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಕನಸುಗಳು 2025 ರಾಜ್ಯ ಮಟ್ಟದ ಸ್ಪರ್ಧೆಗಳಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿಗಳು ಎಲ್ಲಾ 15ವಿಭಾಗಗಳಲ್ಲಿ ಭಾಗವಹಿಸಿ 10 ವಿಭಾಗಗಳಲ್ಲಿ 11 ಬಹುಮಾನಗಳನ್ನು ಪಡೆದುಕೊಂಡಿರುತ್ತಾರೆ.
ಪುತ್ತೂರು: ವಿವೇಕಾನಂದ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಕನಸುಗಳು 2025 ರಾಜ್ಯ ಮಟ್ಟದ ಸ್ಪರ್ಧೆಗಳಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿಗಳು ಎಲ್ಲಾ 15ವಿಭಾಗಗಳಲ್ಲಿ ಭಾಗವಹಿಸಿ 10 ವಿಭಾಗಗಳಲ್ಲಿ 11 ಬಹುಮಾನಗಳನ್ನು ಪಡೆದುಕೊಂಡಿರುತ್ತಾರೆ.
ಯತಿನ್ ಬಿ . ಎಸ್ ಮತ್ತು ದಿಶಾಂತ್ (ಕ್ವಿಜ್ ದ್ವಿತೀಯ) ಸಾನ್ವಿ ಚನಿಲ (ಯಂಗ್ ಜರ್ನಲಿಸ್ಟ್ ದ್ವಿತೀಯ) ಕ್ಷಮಾ ಜೆ ರೈ ( ಯಕ್ಷಗಾನ ಭಾಗವತಿಗೆ ಪ್ರಥಮ) ಜೇಸ್ಟರಾಮ ( ಭಗವದ್ಗೀತೆ ಕಂಠಪಾಠ ಪ್ರಥಮ) ಗೌತಮ್ ಕೃಷ್ಣ ಮತ್ತು ನಿರೀಕ್ಷಿತ್ ಹೆಗ್ಡೆ (ಡಿಬೇಟ್ ತೃತೀಯ) ಶಮನ್ . ಎನ್ ಮತ್ತು ಸಮೃದ್ ಶೆಟ್ಟಿ ( ಸೈನ್ಸ್ ಮಾಡೆಲ್ ಪ್ರಥಮ) ಭುವನ್ ಪಿ . ಬಿ ಮತ್ತು ಸಂಜಯ್ ಎನ್. ಕೆ ( ಸೈನ್ಸ್ ಮಾಡೆಲ್ ದ್ವಿತೀಯ) ನಿಲಿಷ್ಕ ( ಪೈಂಟಿಂಗ್ ಪ್ರಥಮ) ಅಕ್ಷರ್. ಕೆ, ಭುವನ್, ಆರ್ಯನ್ ಸಿ. ಆರ್, ತುಷಾರ್ ಡಿ. ಕೊಲ್ಯ, ಮೋಕ್ಷಿತ್ . ಎಮ್ ( ಟ್ರೆಷರ್ ಹಂಟ್ ಪ್ರಥಮ) ಕೀರ್ತನ ವರ್ಮ, ಆದ್ಯ .ಕೆ, ಅನನ್ಯ ಪಿ . ವಿ, ಹಂಸಿಕಾ, ತಾತ್ವಿಕ, ಸಾನ್ವಿ ಸಿ. ಪಿ , ರಕ್ಷಾ. ಎಮ್, ದೀಕ್ಷಾ, ಸಮನ್ವಿ, ಸೃಷ್ಟಿ ಜಿ. ಎಸ್, ಎ. ಶ್ರೀದೇವಿ ಭಟ್, ಸಾನ್ವಿಕ. ಎಸ್, ಸೃಷ್ಟಿ, ನಿರೀಕ್ಷಾ ಜಿ, ಅಮೃತ ರಶ್ಮಿ, ಧನ್ಯಶ್ರೀ . ಪಿ. ರೈ, ಸಾನ್ವಿ .ಬಿ ( ಕಲರವ ಸಾಂಸ್ಕೃತಿಕ ವೈಭವ ದ್ವಿತೀಯ) ಸಾಯಿ ಘನಶ್ಯಾಮ ಮತ್ತು ಆರ್ಯ ಮಯ್ಯಾ (ವಿಡಿಯೋ ಎಡಿಟಿಂಗ್ ತೃತೀಯ) ಪ್ರಶಸ್ತಿಗಳನ್ನು ಹಾಗೂ ವಿಶೇಷ ಬಹುಮಾನವನ್ನು ಪಡೆದುಕೊಂಡಿರುತ್ತಾರೆ ಎಂದು ಮುಖ್ಯೋಪಾಧ್ಯಾಯರಾದ ಸತೀಶ್ ಕುಮಾರ್ ರೈ ಪ್ರಕಟನೆಯಲ್ಲಿ ತಿಳಿಸಿರುತ್ತಾರೆ.
ಶಿಕ್ಷಣ
Vivekananda-ತಾಲೂಕು ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ – ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕರ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ
ಶಾಲಾ ಶಿಕ್ಷಣ ಇಲಾಖೆ, ಪದವಿಪೂರ್ವ ವಿಭಾಗ ತಾಲೂಕು ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ ಸರಕಾರಿ ಪದವಿಪೂರ್ವ ಕಾಲೇಜು ಬೆಟ್ಟಂಪಾಡಿ ಇವರ ಸಹಯೋಗದಲ್ಲಿ ಕೊಂಬೆಟ್ಟು ಕ್ರೀಡಾಂಗಣ ದಲ್ಲಿ ನಡೆಯಿತು. ಬಾಲಕರ ತಂಡ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.
ಶಾಲಾ ಶಿಕ್ಷಣ ಇಲಾಖೆ, ಪದವಿಪೂರ್ವ ವಿಭಾಗ ತಾಲೂಕು ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ ಸರಕಾರಿ ಪದವಿಪೂರ್ವ ಕಾಲೇಜು ಬೆಟ್ಟಂಪಾಡಿ ಇವರ ಸಹಯೋಗದಲ್ಲಿ ಕೊಂಬೆಟ್ಟು ಕ್ರೀಡಾಂಗಣ ದಲ್ಲಿ ನಡೆಯಿತು. ಬಾಲಕರ ತಂಡ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.
ತಂಡದಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳಾದ ಧನುಷ್ ಎಸ್, ಯಶಸ್ ಎಚ್ . ಸಿ ದ್ವಿತೀಯ ಪಿಯುಸಿ ಗಗನ್ ಕೆ.ಎನ್, ತೇಜಸ್ ಟಿ. ಆರ್, ಜಶ್ವಂತ್ ಗೌಡ, ಧನುಷ್ ಕೆ . ಎಚ್, ಆಕಾಶ್ ಭಾಗವಹಿಸಿರುತ್ತಾರೆ.
ತಂಡವು ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ರವಿಶಂಕರ್ ,ಡಾ .ಜ್ಯೋತಿ ಮತ್ತು ಯತೀಶ್ ಇವರ ನೇತೃತ್ವದಲ್ಲಿ ತರಬೇತಿಯನ್ನು ಪಡೆದಿರುತ್ತಾರೆ .ಇವರನ್ನು ಕಾಲೇಜಿನ ಆಡಳಿತ ಮಂಡಳಿ ಪ್ರಾಂಶುಪಾಲರು ಹಾಗೂ ಉಪನ್ಯಾಸಕ, ಉಪನ್ಯಾಸಕೇತರ ವೃಂದದವರು ಅಭಿನಂದಿಸಿರುತ್ತಾರೆ.
ಶಿಕ್ಷಣ
Taekwondo Competition-ಟೇಕ್ವಾಂಡೋ ಸ್ಪರ್ಧೆ: ಸಂತ ಫಿಲೋಮಿನಾ ಪ ಪೂ ಕಾಲೇಜಿನ ಮೊಹಮ್ಮದ್ ಶಾಜ್ ಗೆ ಪ್ರಶಸ್ತಿ
ಸೆ 30 ರಂದು ಚಿಕ್ಕಮಗಳೂರು ಜಿಲ್ಲಾ ಶತಮಾನೋತ್ಸವ ಕ್ರೀಡಾಂಗಣ ಜ್ಯೋತಿನಗರದಲ್ಲಿ ನಡೆದ ‘ಮೈಸೂರು ವಿಭಾಗ ಮಟ್ಟದ ದಸರಾ ಕ್ರೀಡಾಕೂಟ 2026 – 27’ ಟೇಕ್ವಾಂಡೋ ಸ್ಪರ್ಧೆಯಲ್ಲಿ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಪ್ರಥಮ ವಿಜ್ಞಾನ ವಿಭಾಗದ ಮೊಹಮ್ಮದ್ ಶಾಜ್ ಕಂಚಿನ ಪದಕವನ್ನು ಪಡೆದುಕೊಂಡಿರುತ್ತಾರೆ.
ಪುತ್ತೂರು: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಚಿಕ್ಕಮಗಳೂರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಚಿಕ್ಕಮಗಳೂರು ಇದರ ಸಂಯುಕ್ತ ಆಶ್ರಯದಲ್ಲಿ ಸೆ 30 ರಂದು ಚಿಕ್ಕಮಗಳೂರು ಜಿಲ್ಲಾ ಶತಮಾನೋತ್ಸವ ಕ್ರೀಡಾಂಗಣ ಜ್ಯೋತಿನಗರದಲ್ಲಿ ನಡೆದ ‘ಮೈಸೂರು ವಿಭಾಗ ಮಟ್ಟದ ದಸರಾ ಕ್ರೀಡಾಕೂಟ 2026 – 27’ ಟೇಕ್ವಾಂಡೋ ಸ್ಪರ್ಧೆಯಲ್ಲಿ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಪ್ರಥಮ ವಿಜ್ಞಾನ ವಿಭಾಗದ ಮೊಹಮ್ಮದ್ ಶಾಜ್ ಕಂಚಿನ ಪದಕವನ್ನು ಪಡೆದುಕೊಂಡಿರುತ್ತಾರೆ.
ಇವರು ಉಪ್ಪಿನಂಗಡಿ ನಿವಾಸಿ ಮೊಹಮ್ಮದ್ ಮುಸ್ತಫಾ ಮತ್ತು ಸೌಧ ದಂಪತಿಗಳ ಪುತ್ರ.
ಇವರಿಗೆ ಶಿಹಾಬ್ ಟಿ ತರಬೇತಿ ನೀಡಿರುತ್ತಾರೆ.
ಕಾಲೇಜಿನ ಪ್ರಾಂಶುಪಾಲರಾದ ರೆ.ಫಾ. ಅಶೋಕ್ ರಾಯನ್ ಕ್ರಾಸ್ತಾ ವಿದ್ಯಾರ್ಥಿಗಳನ್ನು ಅಭಿನಂದಿಸಿದರು. ದೈಹಿಕ ಶಿಕ್ಷಣ ನಿರ್ದೇಶಕರಾದ ರಾಜೇಶ್ ಮೂಲ್ಯ ಉಪಸ್ಥಿತರಿದ್ದರು.
ಶಿಕ್ಷಣ
Vivekananda-ರಾಷ್ಟ್ರಮಟ್ಟದ ಭೌತಶಾಸ್ತ್ರ ಸ್ಪರ್ಧೆಯಲ್ಲಿ ವಿವೇಕಾನಂದ ಕಾಲೇಜಿನ ವಿದ್ಯಾರ್ಥಿಯ ಸಾಧನೆ..!
ಪುತ್ತೂರು: ವಿವೇಕಾನಂದ ಮಹಾವಿದ್ಯಾಲಯ (ಸ್ವಾಯತ್ತ) ಇದರ ದ್ವಿತೀಯ ವಿಜ್ಞಾನ ವಿಭಾಗದ ವಿದ್ಯಾರ್ಥಿ ಶ್ರೀಹರಿ ಶರ್ಮಾ ನೋಯ್ಡಾದ ಆಮಿಟಿ ಯುನಿವರ್ಸಿಟಿಯಲ್ಲಿ ಇಂಡಿಯನ್ ಅಸೋಸಿಯೇಷನ್ ಆಫ್ ಫಿಸಿಕ್ಸ್ ಟೀರ‍್ಸ್ (ಐಎಪಿಟಿ) ಸಂಸ್ಥೆಯ ಸಹಯೋಗದೊಂದಿಗೆ ನಡೆದ ರಾಷ್ಟ್ರಮಟ್ಟದ ಭೌತಶಾಸ್ತ್ರ ಸ್ಪರ್ಧೆ National Competition for Innovative Experiments in Physics (NCIEP)ನಲ್ಲಿ “Electromagnetic Shock-Absorber for the Real-Time Landing of Reusable Spacecraft” ಎಂಬ ಭೌತಶಾಸ್ತ್ರದ ಮಾದರಿಯನ್ನು ಸ್ಪರ್ಧೆಯಲ್ಲಿ ಪ್ರಸ್ತುತಪಡಿಸುವ ಮೂಲಕ ಗಮನಾರ್ಹ ಸಾಧನೆ ಮಾಡಿದ್ದಾರೆ.

ಅಕ್ಟೋಬರ್ 4ರಿಂದ 6ರವರೆಗೆ ನಡೆದ 40ನೇ IAPT Annual Conventionನಲ್ಲಿ ಇವರು ಪದವಿ ಮತ್ತು ಸ್ನಾತಕೋತ್ತರ ವಿಭಾಗದಲ್ಲಿ ಭಾಗವಹಿಸಿದ್ದರು. ದೇಶದ ವಿವಿಧ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳು, ಐಐಟಿಗಳು ಹಾಗೂ ವಿಶ್ವವಿದ್ಯಾಲಯಗಳ ಒಟ್ಟು 118 ಮಾದರಿಗಳ ಪೈಕಿ 12ಮಾದರಿಗಳು ಸ್ಪರ್ಧೆಗೆ ಆಯ್ಕೆಯಾಗಿದ್ದವು.
ಕರ್ನಾಟಕದಿಂದ ಪ್ರಸ್ತುತಪಡಿಸಲು ಆಯ್ಕೆಯಾದ ಏಕೈಕ ಮಾದರಿ ಇವರದ್ದಾಗಿತ್ತು. ಭೌತಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರೋ. ಶಿವಪ್ರಸಾದ್ ಕೆ.ಎಸ್. ಈ ಮಾದರಿ ತಯಾರಿಕೆಯಲ್ಲಿ ಮಾರ್ಗದರ್ಶನ ನೀಡಿರುದ್ದಾರೆ. ಈ ಸಾಧನೆಗೆ ಆಡಳಿತ ಮಂಡಳಿ, ಪ್ರಾಂಶುಪಾಲರು, ಶಿಕ್ಷಕ ಮತ್ತು ಶಿಕ್ಷಕೇತರ ವೃಂದ ಮತ್ತು ವಿದ್ಯಾರ್ಥಿಗಳು ಮೆಚ್ಚುಗೆ ವ್ಯಕ್ತ ಪಡಿಸಿದ್ದಾರೆ.
-
ನಿಧನ ವಾರ್ತೆ8 hours agoMumbai-ಪ್ರೀತಿಸಿ ಮದುವೆಯಾಗಿದ್ದ ಜೋಡಿಯ ದುರಂತ ಅಂತ್ಯ? ಸರಪಳಿಯಿಂದ ಕಾಲು ಕಟ್ಟಿದ ಸ್ಥಿತಿಯಲ್ಲಿ ಶವ ಪತ್ತೆ
-
ಮಂಗಳೂರು6 hours agoUjire-ಭಾರೀ ಜನಸ್ತೋಮದೊಂದಿಗೆ ಸೌಜನ್ಯ ನ್ಯಾಯದ ನಡಿಗೆ
-
ಅಂತರ ರಾಜ್ಯ7 hours agoArrested-ಕಾಸರಗೋಡು: ಮದುವೆಯ ನೆಪದಲ್ಲಿ ಹತ್ತಾರು ಯುವತಿಯರಿಗೆ ವಂಚನೆ: ಮದುವೆಯಾದ ಮೂರೇ ದಿನಕ್ಕೆ ಚಿನ್ನ, ಹಣದೊಂದಿಗೆ ಪರಾರಿ; ಆರೋಪಿ ಬಿಜು ಆಂಟನಿ ಬಂಧನ
-
ಅಂತರ ರಾಜ್ಯ7 hours agoJantar Mantar-ಸಿಜೆಪಿ ಪ್ರತಿಭಟನೆಗೆ ದೆಹಲಿಯಲ್ಲಿ ಬಿಗಿ ಭದ್ರತೆ – ಪಂಚರ್ ಆಗಲು ರಸ್ತೆಗಳಿಗೆ ತಡೆಬೇಲಿ..! ವಿಮಾನದಲ್ಲೇ ಅಭಿಜಿತ್ ದಿಪ್ಕೆ ಪೊಲೀಸ್ ವಶಕ್ಕೆ..! ಸಾವಿರಕ್ಕೂ ಮಿಕ್ಕಿ ಪ್ರತಿಭಟನಾಕಾರರೂ ವಶಕ್ಕೆ-ಸುಪ್ರೀಂ ಕೋರ್ಟ್ ವಕೀಲರಿಗೆ ತಡೆ..! ತೀವ್ರ ಅಡೆತಡೆಗಳ ನಡುವೆ ಜಂತರ್ ಮಂತರ್ ಗೆ ಹರಿದು ಬರುತ್ತಿರುವ ಜನಸಾಗರ
-
ರಾಜ್ಯ7 hours agoRobotic technology-ರೋಬೋಟಿಕ್ ತಂತ್ರಜ್ಞಾನದ ಅದ್ಭುತ: ಸ್ಪೇನ್ನಲ್ಲಿ ಕುಳಿತು ಕರ್ನಾಟಕದ ಮಹಿಳೆಗೆ ಹೃದಯ ಶಸ್ತ್ರಚಿಕಿತ್ಸೆ
-
ಅಂತರ ರಾಜ್ಯ8 hours agoDhruv Rati-BIG BREAKING: ದೆಹಲಿಯ ಜಂತರ್ ಮಂತರ್ ನಲ್ಲಿ ಸಿಜೆಪಿ ಪ್ರತಿಭಟನೆ ಹಿನ್ನಲೆ – ಯೂಟ್ಯೂಬರ್ ಧ್ರುವ್ ರಾಠಿ ಪೊಲೀಸ್ ವಶಕ್ಕೆ?
-
Uncategorized9 hours agoCJP protest-ಇಂದು CJP ಪ್ರತಿಭಟನೆ : ದೆಹಲಿಗೆ ಬರಬೇಕಾಗಿದ್ದ 250 ರೈಲು ರದ್ದು, ಹಲವು ರೈಲಿನ ವೇಳಾಪಟ್ಟಿ ಬದಲಾವಣೆ : ಮೆಟ್ರೋ ಸಂಚಾರ ಸ್ಥಗಿತ – ಇಂಟರ್ ನೆಟ್ ಬಂದ್..! ‘ಹೆದರಿದ್ರಾ ಮೋದಿಜೀ..?’ ಎಂದ CJP
-
ಅಂತರ ರಾಜ್ಯ7 hours agoBy-election results-ಉಪಚುನಾವಣೆ ಫಲಿತಾಂಶ: ಪಶ್ಚಿಮ ಬಂಗಾಳ, ಅಸ್ಸಾಂನಲ್ಲಿ ಬಿಜೆಪಿಗೆ ಭರ್ಜರಿ ಮುನ್ನಡೆ, ತಮಿಳುನಾಡಿನಲ್ಲಿ ಟಿವಿಕೆ ಅಬ್ಬರ




















