ಶಿಕ್ಷಣ
Vivekananda-ಜ್ಞಾನಸೇತು 2025 ರಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಗೆ ಸಮಗ್ರ ಪ್ರಶಸ್ತಿ
ಜ್ಞಾನ ಸೇತು 2025 ಶಾಂತಿಗಾಗಿ ವಿಜ್ಞಾನ ಪರಿಕಲ್ಪನೆಯಡಿಯಲ್ಲಿ ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ವಿವಿಧ ವಿಜ್ಞಾನ ಸ್ಪರ್ಧೆಗಳನ್ನು ಸೇಂಟ್ ಜೋಸೆಫ್ ಇಂಜಿನಿಯರಿಂಗ್ ಕಾಲೇಜ್ ವಾಮಂಜೂರು ಮಂಗಳೂರು ಮತ್ತು ಈ ಕಾಲೇಜಿನ ಹಿರಿಯ ವಿದ್ಯಾರ್ಥಿ ಸಂಘದ ಸಹಯೋಗದೊಂದಿಗೆ ನವೆಂಬರ್ 7ನೇ ಶುಕ್ರವಾರದಂದು ಆಯೋಜಿಸಲಾಗಿತ್ತು. ಈ ಸ್ಪರ್ಧೆಗಳಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿಗಳು ಭಾಗವಹಿಸಿ ₹15000 ನಗದು ಸಹಿತ ಸಮಗ್ರ ಪ್ರಶಸ್ತಿಯನ್ನು ಶಾಲೆಯ ಮುಡಿಗೇರಿಸಿರುತ್ತಾರೆ.
ಪುತ್ತೂರು: ಜ್ಞಾನ ಸೇತು 2025 ಶಾಂತಿಗಾಗಿ ವಿಜ್ಞಾನ ಪರಿಕಲ್ಪನೆಯಡಿಯಲ್ಲಿ ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ವಿವಿಧ ವಿಜ್ಞಾನ ಸ್ಪರ್ಧೆಗಳನ್ನು ಸೇಂಟ್ ಜೋಸೆಫ್ ಇಂಜಿನಿಯರಿಂಗ್ ಕಾಲೇಜ್ ವಾಮಂಜೂರು ಮಂಗಳೂರು ಮತ್ತು ಈ ಕಾಲೇಜಿನ ಹಿರಿಯ ವಿದ್ಯಾರ್ಥಿ ಸಂಘದ ಸಹಯೋಗದೊಂದಿಗೆ ನವೆಂಬರ್ 7ನೇ ಶುಕ್ರವಾರದಂದು ಆಯೋಜಿಸಲಾಗಿತ್ತು. ಈ ಸ್ಪರ್ಧೆಗಳಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿಗಳು ಭಾಗವಹಿಸಿ ₹15000 ನಗದು ಸಹಿತ ಸಮಗ್ರ ಪ್ರಶಸ್ತಿಯನ್ನು ಶಾಲೆಯ ಮುಡಿಗೇರಿಸಿರುತ್ತಾರೆ.
ಸೃಜನಾತ್ಮಕ ವಿಜ್ಞಾನ ಮಾದರಿ ತಯಾರಿ ಸ್ಪರ್ಧೆಯಲ್ಲಿ 9ನೇ ತರಗತಿಯ ಕ್ಷಮೆತ್ ಜೈನ್( ಹನೀಶ್ ಕುಮಾರ ಮತ್ತು ಶ್ರುತಿ ಕುಮಾರಿ ದಂಪತಿ ಪುತ್ರ) ಮತ್ತು ಆಶಿಕ್(ಸತೀಶ್ ಕೆ ಮತ್ತು ದೀಕ್ಷಾ ಪಿ ಎನ್ ದಂಪತಿ ಪುತ್ರ) ವಿದ್ಯಾರ್ಥಿಗಳ ತಂಡ, Contraption ಸ್ಪರ್ಧೆಯಲ್ಲಿ ಎಂಟನೇ ತರಗತಿಯ ವಿದ್ಯಾರ್ಥಿನಿಯರಾದ ಆರಾಧ್ಯ( ಅಭಿಷೇಕ್ ಎಂ ಸಿ ಮತ್ತು ಸುರೇಖಾ ದಂಪತಿ ಪುತ್ರಿ) ಅನಘ (ಶ್ರೀಹರಿ ಪಿ ಮತ್ತು ಅಕ್ಷತಾ ಕುಮಾರಿ ಪಿ ದಂಪತಿ ಪುತ್ರ) ಮತ್ತು ಶರಧಿ ಚಣಿಲ ( ರಘುರಾಮಚಂದ್ರ ಚಣಿಲ ಮತ್ತು ಸಂಧ್ಯಾ ಪಿಎಂ ದಂಪತಿ ಪುತ್ರಿ) ಇವರ ತಂಡ, Load Up ಸ್ಪರ್ಧೆಯಲ್ಲಿ 9ನೇ ತರಗತಿಯ ವಿದ್ಯಾರ್ಥಿಗಳಾದ ಶುಭನ್( ಪದ್ಮನಾಭ ಕೆ ಮತ್ತು ರೇಖಾ ಪಿ ನಾಯ್ಕ್ ದಂಪತಿ ಪುತ್ರ) ಮತ್ತು ಪ್ರಣವ್ ಪ್ರಭು( ಪದ್ಮನಾಭ ಪ್ರಭು ಮತ್ತು ವಿದ್ಯಾ ಕುಮಾರಿ ದಂಪತಿ ಪುತ್ರ) ಇವರ ತಂಡ ದ್ವಿತೀಯ ಸ್ಥಾನವನ್ನು ತಮ್ಮದಾಗಿಸಿಕೊಂಡಿದ್ದಾರೆ ಎಂದು ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ಮುಖೋಪಾಧ್ಯಾಯರು ತಮ್ಮ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಶಿಕ್ಷಣ
Vivekananda-ತಾಲೂಕು ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ – ವಿವೇಕಾನಂದ ಪದವಿಪೂರ್ವ ಕಾಲೇಜಿನ ಬಾಲಕರ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ
ಶಾಲಾ ಶಿಕ್ಷಣ ಇಲಾಖೆ, ಪದವಿಪೂರ್ವ ವಿಭಾಗ ತಾಲೂಕು ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ ಸರಕಾರಿ ಪದವಿಪೂರ್ವ ಕಾಲೇಜು ಬೆಟ್ಟಂಪಾಡಿ ಇವರ ಸಹಯೋಗದಲ್ಲಿ ಕೊಂಬೆಟ್ಟು ಕ್ರೀಡಾಂಗಣ ದಲ್ಲಿ ನಡೆಯಿತು. ಬಾಲಕರ ತಂಡ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.
ಶಾಲಾ ಶಿಕ್ಷಣ ಇಲಾಖೆ, ಪದವಿಪೂರ್ವ ವಿಭಾಗ ತಾಲೂಕು ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ ಸರಕಾರಿ ಪದವಿಪೂರ್ವ ಕಾಲೇಜು ಬೆಟ್ಟಂಪಾಡಿ ಇವರ ಸಹಯೋಗದಲ್ಲಿ ಕೊಂಬೆಟ್ಟು ಕ್ರೀಡಾಂಗಣ ದಲ್ಲಿ ನಡೆಯಿತು. ಬಾಲಕರ ತಂಡ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.
ತಂಡದಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳಾದ ಧನುಷ್ ಎಸ್, ಯಶಸ್ ಎಚ್ . ಸಿ ದ್ವಿತೀಯ ಪಿಯುಸಿ ಗಗನ್ ಕೆ.ಎನ್, ತೇಜಸ್ ಟಿ. ಆರ್, ಜಶ್ವಂತ್ ಗೌಡ, ಧನುಷ್ ಕೆ . ಎಚ್, ಆಕಾಶ್ ಭಾಗವಹಿಸಿರುತ್ತಾರೆ.
ತಂಡವು ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ರವಿಶಂಕರ್ ,ಡಾ .ಜ್ಯೋತಿ ಮತ್ತು ಯತೀಶ್ ಇವರ ನೇತೃತ್ವದಲ್ಲಿ ತರಬೇತಿಯನ್ನು ಪಡೆದಿರುತ್ತಾರೆ .ಇವರನ್ನು ಕಾಲೇಜಿನ ಆಡಳಿತ ಮಂಡಳಿ ಪ್ರಾಂಶುಪಾಲರು ಹಾಗೂ ಉಪನ್ಯಾಸಕ, ಉಪನ್ಯಾಸಕೇತರ ವೃಂದದವರು ಅಭಿನಂದಿಸಿರುತ್ತಾರೆ.
ಶಿಕ್ಷಣ
Taekwondo Competition-ಟೇಕ್ವಾಂಡೋ ಸ್ಪರ್ಧೆ: ಸಂತ ಫಿಲೋಮಿನಾ ಪ ಪೂ ಕಾಲೇಜಿನ ಮೊಹಮ್ಮದ್ ಶಾಜ್ ಗೆ ಪ್ರಶಸ್ತಿ
ಸೆ 30 ರಂದು ಚಿಕ್ಕಮಗಳೂರು ಜಿಲ್ಲಾ ಶತಮಾನೋತ್ಸವ ಕ್ರೀಡಾಂಗಣ ಜ್ಯೋತಿನಗರದಲ್ಲಿ ನಡೆದ ‘ಮೈಸೂರು ವಿಭಾಗ ಮಟ್ಟದ ದಸರಾ ಕ್ರೀಡಾಕೂಟ 2026 – 27’ ಟೇಕ್ವಾಂಡೋ ಸ್ಪರ್ಧೆಯಲ್ಲಿ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಪ್ರಥಮ ವಿಜ್ಞಾನ ವಿಭಾಗದ ಮೊಹಮ್ಮದ್ ಶಾಜ್ ಕಂಚಿನ ಪದಕವನ್ನು ಪಡೆದುಕೊಂಡಿರುತ್ತಾರೆ.
ಪುತ್ತೂರು: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಚಿಕ್ಕಮಗಳೂರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಚಿಕ್ಕಮಗಳೂರು ಇದರ ಸಂಯುಕ್ತ ಆಶ್ರಯದಲ್ಲಿ ಸೆ 30 ರಂದು ಚಿಕ್ಕಮಗಳೂರು ಜಿಲ್ಲಾ ಶತಮಾನೋತ್ಸವ ಕ್ರೀಡಾಂಗಣ ಜ್ಯೋತಿನಗರದಲ್ಲಿ ನಡೆದ ‘ಮೈಸೂರು ವಿಭಾಗ ಮಟ್ಟದ ದಸರಾ ಕ್ರೀಡಾಕೂಟ 2026 – 27’ ಟೇಕ್ವಾಂಡೋ ಸ್ಪರ್ಧೆಯಲ್ಲಿ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಪ್ರಥಮ ವಿಜ್ಞಾನ ವಿಭಾಗದ ಮೊಹಮ್ಮದ್ ಶಾಜ್ ಕಂಚಿನ ಪದಕವನ್ನು ಪಡೆದುಕೊಂಡಿರುತ್ತಾರೆ.
ಇವರು ಉಪ್ಪಿನಂಗಡಿ ನಿವಾಸಿ ಮೊಹಮ್ಮದ್ ಮುಸ್ತಫಾ ಮತ್ತು ಸೌಧ ದಂಪತಿಗಳ ಪುತ್ರ.
ಇವರಿಗೆ ಶಿಹಾಬ್ ಟಿ ತರಬೇತಿ ನೀಡಿರುತ್ತಾರೆ.
ಕಾಲೇಜಿನ ಪ್ರಾಂಶುಪಾಲರಾದ ರೆ.ಫಾ. ಅಶೋಕ್ ರಾಯನ್ ಕ್ರಾಸ್ತಾ ವಿದ್ಯಾರ್ಥಿಗಳನ್ನು ಅಭಿನಂದಿಸಿದರು. ದೈಹಿಕ ಶಿಕ್ಷಣ ನಿರ್ದೇಶಕರಾದ ರಾಜೇಶ್ ಮೂಲ್ಯ ಉಪಸ್ಥಿತರಿದ್ದರು.
ಶಿಕ್ಷಣ
Vivekananda-ರಾಷ್ಟ್ರಮಟ್ಟದ ಭೌತಶಾಸ್ತ್ರ ಸ್ಪರ್ಧೆಯಲ್ಲಿ ವಿವೇಕಾನಂದ ಕಾಲೇಜಿನ ವಿದ್ಯಾರ್ಥಿಯ ಸಾಧನೆ..!
ಪುತ್ತೂರು: ವಿವೇಕಾನಂದ ಮಹಾವಿದ್ಯಾಲಯ (ಸ್ವಾಯತ್ತ) ಇದರ ದ್ವಿತೀಯ ವಿಜ್ಞಾನ ವಿಭಾಗದ ವಿದ್ಯಾರ್ಥಿ ಶ್ರೀಹರಿ ಶರ್ಮಾ ನೋಯ್ಡಾದ ಆಮಿಟಿ ಯುನಿವರ್ಸಿಟಿಯಲ್ಲಿ ಇಂಡಿಯನ್ ಅಸೋಸಿಯೇಷನ್ ಆಫ್ ಫಿಸಿಕ್ಸ್ ಟೀರ‍್ಸ್ (ಐಎಪಿಟಿ) ಸಂಸ್ಥೆಯ ಸಹಯೋಗದೊಂದಿಗೆ ನಡೆದ ರಾಷ್ಟ್ರಮಟ್ಟದ ಭೌತಶಾಸ್ತ್ರ ಸ್ಪರ್ಧೆ National Competition for Innovative Experiments in Physics (NCIEP)ನಲ್ಲಿ “Electromagnetic Shock-Absorber for the Real-Time Landing of Reusable Spacecraft” ಎಂಬ ಭೌತಶಾಸ್ತ್ರದ ಮಾದರಿಯನ್ನು ಸ್ಪರ್ಧೆಯಲ್ಲಿ ಪ್ರಸ್ತುತಪಡಿಸುವ ಮೂಲಕ ಗಮನಾರ್ಹ ಸಾಧನೆ ಮಾಡಿದ್ದಾರೆ.

ಅಕ್ಟೋಬರ್ 4ರಿಂದ 6ರವರೆಗೆ ನಡೆದ 40ನೇ IAPT Annual Conventionನಲ್ಲಿ ಇವರು ಪದವಿ ಮತ್ತು ಸ್ನಾತಕೋತ್ತರ ವಿಭಾಗದಲ್ಲಿ ಭಾಗವಹಿಸಿದ್ದರು. ದೇಶದ ವಿವಿಧ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳು, ಐಐಟಿಗಳು ಹಾಗೂ ವಿಶ್ವವಿದ್ಯಾಲಯಗಳ ಒಟ್ಟು 118 ಮಾದರಿಗಳ ಪೈಕಿ 12ಮಾದರಿಗಳು ಸ್ಪರ್ಧೆಗೆ ಆಯ್ಕೆಯಾಗಿದ್ದವು.
ಕರ್ನಾಟಕದಿಂದ ಪ್ರಸ್ತುತಪಡಿಸಲು ಆಯ್ಕೆಯಾದ ಏಕೈಕ ಮಾದರಿ ಇವರದ್ದಾಗಿತ್ತು. ಭೌತಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರೋ. ಶಿವಪ್ರಸಾದ್ ಕೆ.ಎಸ್. ಈ ಮಾದರಿ ತಯಾರಿಕೆಯಲ್ಲಿ ಮಾರ್ಗದರ್ಶನ ನೀಡಿರುದ್ದಾರೆ. ಈ ಸಾಧನೆಗೆ ಆಡಳಿತ ಮಂಡಳಿ, ಪ್ರಾಂಶುಪಾಲರು, ಶಿಕ್ಷಕ ಮತ್ತು ಶಿಕ್ಷಕೇತರ ವೃಂದ ಮತ್ತು ವಿದ್ಯಾರ್ಥಿಗಳು ಮೆಚ್ಚುಗೆ ವ್ಯಕ್ತ ಪಡಿಸಿದ್ದಾರೆ.
-
ನಿಧನ ವಾರ್ತೆ11 hours agoMumbai-ಪ್ರೀತಿಸಿ ಮದುವೆಯಾಗಿದ್ದ ಜೋಡಿಯ ದುರಂತ ಅಂತ್ಯ? ಸರಪಳಿಯಿಂದ ಕಾಲು ಕಟ್ಟಿದ ಸ್ಥಿತಿಯಲ್ಲಿ ಶವ ಪತ್ತೆ
-
ಮಂಗಳೂರು9 hours agoUjire-ಭಾರೀ ಜನಸ್ತೋಮದೊಂದಿಗೆ ಸೌಜನ್ಯ ನ್ಯಾಯದ ನಡಿಗೆ
-
ಅಂತರ ರಾಜ್ಯ11 hours agoArrested-ಕಾಸರಗೋಡು: ಮದುವೆಯ ನೆಪದಲ್ಲಿ ಹತ್ತಾರು ಯುವತಿಯರಿಗೆ ವಂಚನೆ: ಮದುವೆಯಾದ ಮೂರೇ ದಿನಕ್ಕೆ ಚಿನ್ನ, ಹಣದೊಂದಿಗೆ ಪರಾರಿ; ಆರೋಪಿ ಬಿಜು ಆಂಟನಿ ಬಂಧನ
-
ಮಂಗಳೂರು7 hours agoMulki-ಮೂಲ್ಕಿ: ಚಲಿಸುತ್ತಿದ್ದ ಮಂಗಳೂರು – ಕಾರ್ಕಳ ಎಕ್ಸ್ ಪ್ರೆಸ್ ಬಸ್ಗೆ ಬಡಿದ ಗಿಡುಗ: ಗಾಜು ಪುಡಿಪುಡಿ, ಪುತ್ತೂರು ಮೂಲದ ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ಭಾರಿ ಅವಘಡ
-
ರಾಜ್ಯ11 hours agoRobotic technology-ರೋಬೋಟಿಕ್ ತಂತ್ರಜ್ಞಾನದ ಅದ್ಭುತ: ಸ್ಪೇನ್ನಲ್ಲಿ ಕುಳಿತು ಕರ್ನಾಟಕದ ಮಹಿಳೆಗೆ ಹೃದಯ ಶಸ್ತ್ರಚಿಕಿತ್ಸೆ
-
ಅಂತರ ರಾಜ್ಯ10 hours agoJantar Mantar-ಸಿಜೆಪಿ ಪ್ರತಿಭಟನೆಗೆ ದೆಹಲಿಯಲ್ಲಿ ಬಿಗಿ ಭದ್ರತೆ – ಪಂಚರ್ ಆಗಲು ರಸ್ತೆಗಳಿಗೆ ತಡೆಬೇಲಿ..! ವಿಮಾನದಲ್ಲೇ ಅಭಿಜಿತ್ ದಿಪ್ಕೆ ಪೊಲೀಸ್ ವಶಕ್ಕೆ..! ಸಾವಿರಕ್ಕೂ ಮಿಕ್ಕಿ ಪ್ರತಿಭಟನಾಕಾರರೂ ವಶಕ್ಕೆ-ಸುಪ್ರೀಂ ಕೋರ್ಟ್ ವಕೀಲರಿಗೆ ತಡೆ..! ತೀವ್ರ ಅಡೆತಡೆಗಳ ನಡುವೆ ಜಂತರ್ ಮಂತರ್ ಗೆ ಹರಿದು ಬರುತ್ತಿರುವ ಜನಸಾಗರ
-
ಅಂತರ ರಾಜ್ಯ10 hours agoBy-election results-ಉಪಚುನಾವಣೆ ಫಲಿತಾಂಶ: ಪಶ್ಚಿಮ ಬಂಗಾಳ, ಅಸ್ಸಾಂನಲ್ಲಿ ಬಿಜೆಪಿಗೆ ಭರ್ಜರಿ ಮುನ್ನಡೆ, ತಮಿಳುನಾಡಿನಲ್ಲಿ ಟಿವಿಕೆ ಅಬ್ಬರ
-
ಅಂತರ ರಾಜ್ಯ12 hours agoDhruv Rati-BIG BREAKING: ದೆಹಲಿಯ ಜಂತರ್ ಮಂತರ್ ನಲ್ಲಿ ಸಿಜೆಪಿ ಪ್ರತಿಭಟನೆ ಹಿನ್ನಲೆ – ಯೂಟ್ಯೂಬರ್ ಧ್ರುವ್ ರಾಠಿ ಪೊಲೀಸ್ ವಶಕ್ಕೆ?




















