ಶಿಕ್ಷಣ
Vivekananda-ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿದ್ಯಾಭಾರತಿ ರಾಷ್ಟ್ರ ಮಟ್ಟದ ಕ್ರೀಡಾಕೂಟದ ವಿಜೇತರಿಗೆ ಸ್ವಾಗತ ಹಾಗೂ ಅಭಿನಂದನಾ ಕಾರ್ಯಕ್ರಮ
ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿದ್ಯಾಭಾರತಿ ರಾಷ್ಟ್ರೀಯ ಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಿದ ವಿಜೇತರಾದ ಕ್ರೀಡಾಳುಗಳನ್ನು ಸ್ವಾಗತಿಸಿ ಅಭಿನಂದಿಸುವ ಕಾರ್ಯಕ್ರಮ ದಿನಾಂಕ 5.11.2025 ರಂದು ಯಾದವಶ್ರೀ ಸಭಾಂಗಣದಲ್ಲಿ ಸಂಭ್ರಮದಿಂದ ಜರುಗಿತು.
ಪುತ್ತೂರು: ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿದ್ಯಾಭಾರತಿ ರಾಷ್ಟ್ರೀಯ ಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಿದ ವಿಜೇತರಾದ ಕ್ರೀಡಾಳುಗಳನ್ನು ಸ್ವಾಗತಿಸಿ ಅಭಿನಂದಿಸುವ ಕಾರ್ಯಕ್ರಮ ದಿನಾಂಕ 5.11.2025 ರಂದು ಯಾದವಶ್ರೀ ಸಭಾಂಗಣದಲ್ಲಿ ಸಂಭ್ರಮದಿಂದ ಜರುಗಿತು.
30 ಅಕ್ಟೋಬರ್ 2025 ರಿಂದ 3 ನವೆಂಬರ್ 2025 ವರೆಗೆ ಮಂಗಳೂರು ಪಬ್ಲಿಕ್ ಶಾಲೆ, ಹಾಸನದಲ್ಲಿ ನಡೆದ ವಿದ್ಯಾಭಾರತಿ ರಾಷ್ಟ್ರೀಯ ಮಟ್ಟದ ಕ್ರೀಡಾಕೂಟದಲ್ಲಿ ಸಂಸ್ಥೆಯ ವಿದ್ಯಾರ್ಥಿಗಳು ಅಭೂತಪೂರ್ವ ಸಾಧನೆಗೈದು ಸಂಸ್ಥೆಯ ಕೀರ್ತಿಯನ್ನು ಹತ್ತೂರಲ್ಲಿ ಬೆಳಗಿಸಿದ್ದಾರೆ. ಈ ವಿದ್ಯಾರ್ಥಿಗಳನ್ನು ಶಾಲಾ ವಿದ್ಯಾರ್ಥಿಗಳಿಂದ ವಾದ್ಯ ಘೋಷಗಳೊಂದಿಗೆ ಗಣ್ಯರ ಉಪಸ್ಥಿತಿಯಲ್ಲಿ ವೇದಿಕೆಗೆ ಕರೆತಂದು ಶಾಲಾ ಶಿಕ್ಷಕಿಯರಿಂದ ಸಾಂಪ್ರದಾಯಿಕವಾಗಿ ಆರತಿಯನ್ನು ಬೆಳಗಿ ವಿಶಿಷ್ಟ ರೀತಿಯಲ್ಲಿ ಶಾಲೆಗೆ ಸ್ವಾಗತಿಸಲಾಯಿತು.
ವಿದ್ಯಾರ್ಥಿಗಳಾದ ಕು. ದಿವಿಜ್ಞ(ಶಿವಪ್ರಸಾದ್.ಯು.ಎ ಮತ್ತು ಪವಿತ್ರ ದಂಪತಿ ಪುತ್ರಿ) ಕ್ರೀಡಾಕೂಟದಲ್ಲಿ 100 ಇನ್ನೂರು 400 ಮೀಟರ್ ಓಟದಲ್ಲಿ ಪ್ರಥಮ ಸ್ಥಾನದೊಂದಿಗೆ ಚಿನ್ನದ ಪದಕ ಗಳಿಸಿ ವೈಯುಕ್ತಿಕ ಚಾಂಪಿಯನ್ ಪಟ್ಟವನ್ನು ತನ್ನ ಮುಡಿಗೇರಿಸಿಕೊಂಡಿದ್ದಾರೆ.
ಇವರು ಇದೇ ಡಿಸೆಂಬರ್ 12ರಿಂದ 18ರವರೆಗೆ ಉತ್ತರ ಪ್ರದೇಶದ ಲಕ್ನೌನಲ್ಲಿ ನಡೆಯಲಿರುವ ಎಸ್.ಜಿ.ಎಫ್.ಐ ಕ್ರೀಡಾಕೂಟದಲ್ಲಿ ಭಾಗವಹಿಸಲು ಅರ್ಹತೆಯನ್ನು ಪಡೆದಿರುತ್ತಾರೆ.
ಕುಮಾರಿ ನಿಧಿಶ್ರೀ(ದೇರಣ್ಣ ಗೌಡ ಮತ್ತು ಹೇಮಲತ ದಂಪತಿ ಪುತ್ರಿ) 4×100 ಮೀಟರ್ ರಿಲೇ ಪಂದ್ಯದಲ್ಲಿ ಪ್ರಥಮ ಸ್ಥಾನವನ್ನು ಪಡೆದು ಚಿನ್ನದ ಪದಕದೊಂದಿಗೆ ಮುಂಬರುವ ಎಸ್.ಜಿ.ಎಫ್.ಐ ಕ್ರೀಡಾಕೂಟಕ್ಕೆ ಆಯ್ಕೆಯಾಗಿರುತ್ತಾರೆ.
ಕು. ಆತ್ಮಿ.ಕೆ ಎಲ್(ಲಕ್ಷ್ಮಣ ಗೌಡ ಮತ್ತು ಅಶ್ವಿನಿ ದಂಪತಿ ಪುತ್ರಿ) 100 ಮೀಟರ್ ಓಟದಲ್ಲಿ ದ್ವಿತೀಯ ಸ್ಥಾನವನ್ನು ಬೆಳ್ಳಿಯ ಪದಕದೊಂದಿಗೆ ಹಾಗೂ 200ಮೀಟರ್ ಓಟದಲ್ಲಿ ಕಂಚಿನ ಪದಕವನ್ನು ಗಳಿಸಿಕೊಂಡಿರುತ್ತಾರೆ. 4×100ಮೀಟರ್ ರಿಲೇಯಲ್ಲಿ ಬೆಳ್ಳಿಯ ಪದಕದೊಂದಿಗೆ ದ್ವಿತೀಯ ಸ್ಥಾನವನ್ನು, 200 ಮೀಟರ್ ಓಟದಲ್ಲಿ ಕಂಚಿನ ಪದಕವನ್ನು ಪಡೆದುಕೊಂಡಿರುತ್ತಾರೆ.
ಕು. ವಂಶಿತ.ಎನ್(ವಸಂತ ಕುಮಾರ್ ಮತ್ತು ಸುಜಾತ ದಂಪತಿ ಪುತ್ರಿ) ಇವರು ಉದ್ದಜಿಗಿತದಲ್ಲಿ ಕಂಚಿನ ಪದಕ ಮತ್ತು 4×100ಮೀಟರ್ ರಿಲೇಯಲ್ಲಿ ಬೆಳ್ಳಿಯ ಪದಕದೊಂದಿಗೆ ದ್ವಿತೀಯ ಸ್ಥಾನವನ್ನು ಪಡೆದಿರುತ್ತಾರೆ. 14ರ ವಯೋಮಾನದ ಬಾಲಕಿಯರ ವಿಭಾಗದಲ್ಲಿ ಕು. ಸಾನ್ವಿ ಆನಂದ್(ಆನಂದ್ ಮತ್ತು ವಾಣಿಶ್ರೀ ದಂಪತಿ ಪುತ್ರಿ) , ಕು. ದಿಶಾ.ಬಿ (ಪುರುಷೋತ್ತಮ ಮತ್ತು ಸವಿತಾ ದಂಪತಿ ಪುತ್ರಿ) ಇವರು 4×100ಮೀಟರ್ ರಿಲೇಯಲ್ಲಿ ಬೆಳ್ಳಿಯ ಪದಕದೊಂದಿಗೆ ದ್ವಿತೀಯ ಸ್ಥಾನವನ್ನು ಪಡೆದಿರುತ್ತಾರೆ.
17ರ ವಯೋಮಾನದ ಬಾಲಕಿಯರ ವಿಭಾಗದಲ್ಲಿ ಕು. ಕ್ಷಮಾ ಜೆ.ರೈ(ಜಗದೀಶ್ ರೈ ಮತ್ತುಶೋಭಾ ದಂಪತಿ ಪುತ್ರಿ), ಕು. ಶ್ರೀರಕ್ಷ.ಕೆ(ದೇವರಾಜ್ ಮತ್ತು ವಾಣಿಶ್ರೀ ದಂಪತಿ ಪುತ್ರಿ), ಕು. ಸಾನ್ವಿತಾ ನೆಕ್ಕರೆ(ಉಮೇಶ್ ನೆಕ್ಕರೆ ಮತ್ತು ಕವಿತಾ ದಂಪತಿ ಪುತ್ರಿ) ಇವರು 4×100ಮೀಟರ್ ರಿಲೇಯಲ್ಲಿ ಬೆಳ್ಳಿಯ ಪದಕದೊಂದಿಗೆ ದ್ವಿತೀಯ ಸ್ಥಾನವನ್ನು ಪಡೆದಿರುತ್ತಾರೆ. ಕು. ನಿಶ್ಮ(ಪ್ರದೀಪ್ ಮತ್ತು ಪ್ರಶಾಂತಿ ದಂಪತಿ ಪುತ್ರಿ) ಹಾಗೂ ಮಾ. ಶರ್ವಿನ್.ಸಿ (ಚಿತ್ರನಾಯಗಂ ಮತ್ತು ಪ್ರವೀಣ ಕುಮಾರಿ ದಂಪತಿ ಪುತ್ರ) ಇವರು ದಕ್ಷಿಣ ಮಧ್ಯಕ್ಷೇತ್ರವನ್ನು ಪ್ರತಿನಿಧಿಸಿದ್ದಾರೆ.
ಈ ಎಲ್ಲಾ ಕ್ರೀಡಾಳುಗಳನ್ನು ಮಣಿಪಾಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಇದರ ಸಿವಿಲ್ ವಿಭಾಗದ ನಿವೃತ್ತ ಮುಖ್ಯಸ್ಥರಾದ ಪ್ರೊಫೆಸರ್ ಹಾಗೂ ಮಂಗಳೂರು ವಿಭಾಗ ಮಾನ್ಯ ಸಂಘಚಾಲಕ್ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ನಾರಾಯಣ ಶೆಣೈ ಇವರು ಹಾಗೂ ವಿವೇಕಾನಂದ ವಿದ್ಯಾವರ್ಧಕ ಸಂಘದ ಸದಸ್ಯರಾದ ಸೇಡಿಯಾಪು ಜನಾರ್ಧನ್ ಭಟ್, ಶಾಲಾ ಸಂಚಾಲಕನಾದ ರವಿನಾರಾಯಣ ಎಂ ಆಡಳಿತ ಮಂಡಳಿಯ ಸದಸ್ಯರು ಕೃಷ್ಣ ಮೋಹನ್ ಡಾ.ಅಮೃತ ಪ್ರಸಾದ್ ಹಾಗೂ ಚಂದ್ರಶೇಖರ್ ಎಸ್ ಅಭಿನಂದಿಸಿದರು. ಶಾಲಾ ಗುರುಗಳಾದ ಸತೀಶ್ ಕುಮಾರ್ ಪ್ರಾಸ್ತಾವಿಕ ಮಾತುಗಳನ್ನಾಡಿ, ಸ್ವಾಗತಿಸಿ, ಪ್ರಾಥಮಿಕ ವಿಭಾಗದ ಮುಖ್ಯಸ್ಥೆ ಸಂಧ್ಯಾ ಇವರು ವಂದಿಸಿ, ಅನುರಾಧ ಮತ್ತು ಕವಿತಾ ಕೆ.ಜಿ ಇವರು ಕಾರ್ಯಕ್ರಮ ನಿರೂಪಿಸಿದರು.
ಶಿಕ್ಷಣ
Philomena-ನ 27 ಮತ್ತು 28 ರಂದು ಸಂತ ಪಿಲೋಮಿನಾ ಪದವಿ ಪೂರ್ವ ಕಾಲೇಜಿನ ವಾರ್ಷಿಕೋತ್ಸವ
ಸಂತ ಪಿಲೋಮಿನಾ ಪದವಿ ಪೂರ್ವ ಕಾಲೇಜಿನಲ್ಲಿ ಪ್ರತಿಭಾ ಪುರಸ್ಕಾರ ಮತ್ತು ವಾರ್ಷಿಕೋತ್ಸವವು ನ 27 ಹಾಗೂ 28 ರಂದು ಕಾಲೇಜಿನ ಪ್ರಾಂಗಣದಲ್ಲಿ ನಡೆಯಲಿದೆ.
ಪುತ್ತೂರು: ಸಂತ ಪಿಲೋಮಿನಾ ಪದವಿ ಪೂರ್ವ ಕಾಲೇಜಿನಲ್ಲಿ ಪ್ರತಿಭಾ ಪುರಸ್ಕಾರ ಮತ್ತು ವಾರ್ಷಿಕೋತ್ಸವವು ನ 27 ಹಾಗೂ 28 ರಂದು ಕಾಲೇಜಿನ ಪ್ರಾಂಗಣದಲ್ಲಿ ನಡೆಯಲಿದೆ.
ಡಿ 27 ರಂದು ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನಡೆಯಲಿದ್ದು, ಮುಖ್ಯ ಅತಿಥಿಗಳಾಗಿ ಕಡಬ ಸೈಂಟ್ ಆ್ಯನ್ಸ್ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯೋಪಾಧ್ಯಾಯರಾದ ರೆ. ಫಾ. ಸುನಿಲ್ ಪಿಂಟೋ ವಹಿಸಲಿದ್ದಾರೆ. ನ 28 ರಂದು ಕಾಲೇಜಿನ ವಾರ್ಷಿಕೋತ್ಸವವು ನಡೆಯಲಿದ್ದು, ಮುಖ್ಯ ಅತಿಥಿಗಳಾಗಿ ಮಂಗಳೂರು ಫಾದರ್ ಮುಲ್ಲರ್ಸ್ ವೈದ್ಯಕೀಯ ಕಾಲೇಜಿನ ಮಕ್ಕಳ ವಿಭಾಗ (ಪೀಡಿಯಾಟ್ರಿಕ್ಸ್) ನ
ಸಹಾಯಕ ಪ್ರಾಧ್ಯಾಪಕರಾದ ಡಾ. ಪ್ರೀತಮ್ ಫಿಲಿಪ್ ತಾವ್ರೋ ವಹಿಸಲಿದ್ದಾರೆ.

ಮಾಯಿದೆ ದೇವುಸ್ ಶಿಕ್ಷಣ ಸಂಸ್ಥೆಗಳ ಸಂಚಾಲಕರಾದ ರೆ. ಡಾ. ಜಾನ್ ಬ್ಯಾಪ್ಟಿಸ್ಟ್ ಸಲ್ದಾನ್ಹಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ.
ಗೌರವ ಅತಿಥಿಗಳಾಗಿ ಪದವಿ ಕಾಲೇಜಿನ ಪ್ರಾಂಶುಪಾಲರಾದ ರೆ. ಡಾ. ಆಂಟೋನಿ ಪ್ರಕಾಶ್ ಮೊಂತೇರೋ ಹಾಗೂ ಚರ್ಚ್ ಪಾಲನಾ ಸಮಿತಿಯ ಉಪಾಧ್ಯಕ್ಷರಾದ ರೋಷನ್ ಲಾಸ್ರಾದೋ, ರಕ್ಷಕ ಶಿಕ್ಷಕ ಸಂಘದ ಉಪಾಧ್ಯಕ್ಷರಾದ ಅ್ಯಂಟೋನಿ ಒಲಿವೆರಾ ಹಾಗೂ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಡಾ. ಶ್ರೀಪ್ರಕಾಶ್ ಬಿ, ವಹಿಸಲಿದ್ದಾರೆ ಎಂದು ಕಾಲೇಜಿನ ಪ್ರಾಂಶುಪಾಲರಾದ ರೆ. ಫಾ. ಅಶೋಕ್ ರಾಯನ್ ಕ್ರಾಸ್ತಾ, ವಿದ್ಯಾರ್ಥಿ ಸಂಘದ ನಿರ್ದೇಶಕರಾದ ಗೋವಿಂದ ಪ್ರಕಾಶ್ ಸಿ. ಎಚ್, ಕವಿತಾ ಕೆ ಹಾಗೂ ಪಿಲೋಮಿನಾ ಮೊಂತೇರೋ, ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ನಾಯಕ್ ಗುಣಿಕ ಗುರುಪ್ರಸಾದ್, ಕಾರ್ಯದರ್ಶಿ ಲಯ ತೇಜ ಎ, ಹಾಗೂ ಜೊತೆ ಕಾರ್ಯದರ್ಶಿ ಸಂದೇಶ್ ಗೌಡ ಎಸ್ ಕೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಶಿಕ್ಷಣ
Vivekananda-ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಎಂಡ್ ಟೆಕ್ನಾಲಜಿ: ವೃತ್ತಿವಾದ ಮತ್ತು ಆದರ್ಶವಾದ: ಸು.ರಾಮಣ್ಣ ಅವರಿಂದ ಉಪನ್ಯಾಸ ಕಾರ್ಯಕ್ರಮ
ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಸಾವರ್ಕರ್ ಸಬಾಭವನದಲ್ಲಿ ವೃತ್ತಿವಾದ ಮತ್ತು ಆದರ್ಶವಾದ ಎನ್ನುವ ವಿಷಯದ ಬಗ್ಗೆ ರಾಷ್ಟ್ರೀಯ ಸ್ವಯಂಸೇವಕ ಸಂಘದ ಜ್ಯೇಷ್ಟ ಪ್ರಚಾರಕ ಮಾನನೀಯ ಸು.ರಾಮಣ್ಣ ಮಾತಾಡಿದರು.
ಪುತ್ತೂರು: ಮನುಷ್ಯನ ಜೀವನದ ಗುರಿ ವ್ಯಕ್ತಿಗತವಾಗಿರಬಾರದು. ಸಮಾಜಕ್ಕೆ, ದೇಶಕ್ಕೆ ಏನಾದರೂ ಮಾಡಬೇಕೆನ್ನುವುದು ನಮ್ಮ ಗುರಿಯಾಗಬೇಕು. ಅದಕ್ಕೆ ವಿವಿಧ ಬಗೆಯ ಜನರ ನಡುವೆ ಕಾರ್ಯನಿರ್ವಹಿಸಬೇಕು. ಆಗ ನಿಜವಾದ ಆವಶ್ಯಕತೆ ಏನೆಂದು ಅರಿವಾಗುತ್ತದೆ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ ಜ್ಯೇಷ್ಟ ಪ್ರಚಾರಕ ಮಾನನೀಯ ಸು.ರಾಮಣ್ಣ ಹೇಳಿದರು.

ಅವರು ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಸಾವರ್ಕರ್ ಸಬಾಭವನದಲ್ಲಿ ವೃತ್ತಿವಾದ ಮತ್ತು ಆದರ್ಶವಾದ ಎನ್ನುವ ವಿಷಯದ ಬಗ್ಗೆ ಮಾತಾಡಿದರು. ಓದು, ಜ್ಞಾನಸಂಗ್ರಹ ನಮ್ಮ ಸಾಧನೆಯ ಮೊದಲನೇ ಘಟ್ಟ. ಇದು ಇಲ್ಲದಿದ್ದರೆ ನಾವು ಸಣ್ಣವರಾಗುತ್ತೇವೆ. ವಿದ್ಯಾರ್ಥಿ ದೆಸೆಯಲ್ಲಿಯೇ ದೀರ್ಘವಾದ ಗುರಿಯನ್ನು ಇಟ್ಟುಕೊಳ್ಳಲೇಬೇಕು ಎಂದರು. ಜೀವನದಲ್ಲಿ ಕನಸು ಕಾಣಬೇಕು. ದೇವರು ಕೊಟ್ಟ ಬುದ್ಧಿ ಶಕ್ತಿ ಮತ್ತು ವ್ಯಕ್ತಿತ್ವವನ್ನು ಬಳಸಿಕೊಂಡು ದೊಡ್ಡವರಾಗಿ ಎನ್ನುವ ಅಬ್ದುಲ್ ಕಲಾಂ ಅವರ ಮಾತುಗಳನ್ನು ನೆನಪಿಸಿದ ಅವರು ದೇಶದ ಜೀವಿತೋದ್ದೇಶವನ್ನು ಉನ್ನತೀಕರಿಸುವುದರ ಜತೆಯಲ್ಲಿ ಸೃಷ್ಟಿಯ ಹಿತಕ್ಕೋಸ್ಕರ ಬದುಕಬೇಕು ಎಂದರು. ದೇಶಕ್ಕಾಗಿ ತಮ್ಮ ಜೀವನವನ್ನೇ ಮುಡಿಪಾಗಿಟ್ಟ ಸ್ವಾಮಿ ವಿವೇಕಾನಂದರು, ಸಾವರ್ಕರ್, ಅಂಬೇಡ್ಕರ್ ಇವರ ಜೀವನವು ನಮಗೆ ದಾರಿದೀಪವಾಗಲಿ ಎಂದರು. ಮಾನವತೆಯನ್ನು ಉಳಿಸುವುದಕ್ಕಾಗಿ ಅತ್ಯಂತ ಘೋರ ಸಂಕಟದ ಸಮಯದಲ್ಲಿ ಸೂಕ್ತ ನಿರ್ಣಯವನ್ನು ತೆಗೆದುಕೊಂಡ ಪೈಲೆಟ್ ಕ್ಯಾಪ್ಟನ್ ಸ್ಮಿತ್ ಮಚ್ಚರ್ ನಿಜವಾದ ಸಾಧಕ ಎಂದು ಹೇಳಿದರು. ಕೋಟ್ಯಂತರ ರೂಪಾಯಿ ವೇತನ ಪಡೆಯುವ ತಂತ್ರಜ್ಞರಾಗುವುದಲ್ಲ ಬದಲಾಗಿ ಸರ್.ಎಂ.ವಿಶ್ವೇಶ್ವರಯ್ಯರಾಗಿ ಎಂದು ಹಿತ ನುಡಿದರು.

ಇಂಜಿನಿಯರಿಂಗ್ ಕಾಲೇಜು ಆಡಳಿತ ಮಂಡಳಿಯ ಅಧ್ಯಕ್ಷ ರವಿಕೃಷ್ಣ.ಡಿ.ಕಲ್ಲಾಜೆ ಮತ್ತು ಪ್ರಾಂಶುಪಾಲ ಡಾ.ಪುರುಷೋತ್ತಮ ಚಿಪ್ಪಾರ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಇಂಜಿನಿಯರಿಂಗ್ ಕಾಲೇಜು ಆಡಳಿತ ಮಂಡಳಿಯ ಸಂಚಾಲಕ ಪ್ರಸನ್ನ ದರ್ಬೆ, ನಿರ್ದೇಶಕರಾದ ಮನೋಜ್ ಕುಮಾರ, ಸುಜಿತ್ ಕುಮಾರ್, ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಅಧ್ಯಕ್ಷ ಅಚ್ಯುತ ನಾಯಕ್, ವಿವೇಕಾನಂದ ಸಿಬಿಎಸ್ಸಿ ಶಾಲೆಯ ಸಂಚಾಲಕ ರವಿನಾರಾಯಣ, ವಿವೇಕಾನಂದ ವಸತಿ ನಿಲಯಗಳ ನಿರ್ದೇಶಕ ರಾಜಗೋಪಾಲ್, ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯ ಸ್ವಯಂಸೇವಕ ಅ.ನಾ.ರವಿ ಸಮಾರಂಭದಲ್ಲಿ ಹಾಜರಿದ್ದರು.
ಶಿಕ್ಷಣ
Vivekananda-ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಖುಷಿ ಕೆ.ಎಂ. ರಾಷ್ಟ್ರ ಮಟ್ಟದಲ್ಲಿ ಸಾಧನೆ
ಮಧ್ಯಪ್ರದೇಶದ ದೇವಾಸ್ನ ಸರಸ್ವತಿ ವಿದ್ಯಾ ಮಂದಿರದಲ್ಲಿ ನಡೆದ ವಿದ್ಯಾಭಾರತಿ ರಾಷ್ಟ್ರ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಪ್ರಥಮ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಖುಷಿ ಕೆ. ಎಂ ಇವರು ತೃತೀಯ ಸ್ಥಾನ ಪಡೆದಿರುತ್ತಾರೆ.
ಮಧ್ಯಪ್ರದೇಶದ ದೇವಾಸ್ನ ಸರಸ್ವತಿ ವಿದ್ಯಾ ಮಂದಿರದಲ್ಲಿ ನಡೆದ ವಿದ್ಯಾಭಾರತಿ ರಾಷ್ಟ್ರ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಪ್ರಥಮ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಖುಷಿ ಕೆ. ಎಂ ಇವರು ತೃತೀಯ ಸ್ಥಾನ ಪಡೆದಿರುತ್ತಾರೆ.
ಇವರು ಬೆಳ್ಳಿಪಾಡಿ ಗ್ರಾಮದ ಶಂಕರನಾರಾಯಣ ನಿವಾಸಿ ಕೆ. ವಿ ಮಂಜುನಾಥ ಮತ್ತು ಭವ್ಯ ದಂಪತಿಯ ಪುತ್ರಿಯಾಗಿರುತ್ತಾರೆ.
ಇವರು ಕಾಲೇಜಿನ ಧೈಹಿಕ ಶಿಕ್ಷಣ ನಿರ್ದೇಶಕರಾದ ರವಿಶಂಕರ್ , ಡಾ. ಜ್ಯೋತಿ ಮತ್ತು ಯತೀಶ್ ಇವರ ನೇತೃತ್ವದಲ್ಲಿ ತರಬೇತಿಯನ್ನು ಪಡೆದಿರುತ್ತಾರೆ. ಇವರನ್ನು ಕಾಲೇಜಿನ ಆಡಳಿತ ಮಂಡಳಿ ಪ್ರಾಂಶುಪಾಲರು ಹಾಗೂ ಉಪನ್ಯಾಸಕ , ಉಪನ್ಯಾಸಕೇತರ ವೃಂದದವರು ಅಭಿನಂದಿಸಿರುತ್ತಾರೆ.
-
ಬಿಗ್ ನ್ಯೂಸ್23 hours agoRain-ಸುಳ್ಯ-ಪುತ್ತೂರು ಭಾಗಗಳಲ್ಲಿ ಹಲವೆಡೆ ಮಳೆ : ಎಷ್ಟು ದಿನ ಮಳೆಯಾಗಲಿದೆ ಗೊತ್ತೇ..?
-
ಅಪರಾಧ22 hours agoMangalore-ಚಿನ್ನ ಕಳ್ಳಸಾಗಣೆ ಜಾಲ: ಮಂಗಳೂರು ವಿಮಾನ ನಿಲ್ದಾಣದ ಇಬ್ಬರು ಸಿಬ್ಬಂದಿ ಸಹಿತ ಮೂವರು ಡಿಆರ್ಐ ವಶಕ್ಕೆ
-
ಸುಳ್ಯ17 hours agoSuresh Raina-ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಸುರೇಶ್ ರೈನಾ ಸುಳ್ಯದ ‘ರಸಪಾಕ ಗ್ರಾಂಡ್’ ಹೋಟೆಲ್ ಗೆ ಭೇಟಿ
-
ಅಂತರ ರಾಜ್ಯ20 hours agoCM post battle-ಉತ್ತರ ಪ್ರದೇಶ ಬಿಜೆಪಿಯಲ್ಲಿ ಸಿಎಂ ಕುರ್ಚಿ ಕದನ: ಚುನಾವಣೆಗೂ ಮುನ್ನವೇ ಭಿನ್ನಮತ?
-
ನಿಧನ ವಾರ್ತೆ22 hours agoAccident-ಯುಎಇಯಲ್ಲಿ ಭೀಕರ ಬಸ್–ಲಾರಿ ಅಪಘಾತ; ಕಾಸರಗೋಡಿನ ಅಶ್ರಫ್ ಸೇರಿ ನಾಲ್ವರು ಕೇರಳಿಗರು ಸಾವು
-
ಅಂತರ ರಾಜ್ಯ20 hours agoInsurance policy-ವಿಮೆ ಇಲ್ಲದ ವಾಹನಗಳಿಗೆ ಕಡಿವಾಣ: ಹೊಸ ನಿಯಮ ಜಾರಿಗೆ ಕೇಂದ್ರ ಚಿಂತನೆ; ಕಾರಿಗೆ 4 ವರ್ಷ, ಬೈಕ್ಗೆ 6 ವರ್ಷಗಳ ವಿಮೆ
-
ಸ್ಥಳೀಯ17 hours agoUppinangadi-ಉಪ್ಪಿನಂಗಡಿ: ಇಂದಿನಿಂದ ವಳಾಲು ಟೋಲ್ ಕಾರ್ಯಾರಂಭ; ಶೀಘ್ರದಲ್ಲೇ ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವು..!
-
ನಿಧನ ವಾರ್ತೆ22 hours agoಮಂಗಳೂರು: ಬೈಕ್ ಢಿಕ್ಕಿಯಿಂದ ಗಾಯಗೊಂಡಿದ್ದ ನರ್ಸಿಂಗ್ ವಿದ್ಯಾರ್ಥಿನಿ ಸಾವು















