ಬಿಗ್ ನ್ಯೂಸ್
Puttur-ದಶಕಗಳ ಬೇಡಿಕೆ ಈಡೇರುವ ಸಮಯ- ಪುತ್ತೂರಿನ ‘ಬ್ಲ್ಯಾಕ್ ಸ್ಪಾಟ್’ ಅರುಣಾ ಜಂಕ್ಷನ್ʼನ ಕಾಯಕಲ್ಪಕ್ಕೆ ಪುಡಾ ಹೆಜ್ಜೆ : ಸ್ಥಳ ಪರಿಶೀಲನೆ, ತಜ್ಞರಿಂದ ಸರ್ವೇ
ಸರಕಾರದಿಂದಲೇ ‘ಬ್ಲ್ಯಾಕ್ ಸ್ಪಾಟ್’ ಎಂದು ಗುರುತಿಸಲ್ಪಟ್ಟಿರುವ ಪುತ್ತೂರಿನ ಅರುಣಾ ಜಂಕ್ಷನ್ನಲ್ಲಿ ದಶಕಗಳಿಂದ ಕಾದಿರುವ ಸಮಸ್ಯೆ ಅಂತಿಮವಾಗಿ ಪರಿಹಾರ ಕಾಣುವತ್ತ ಮುಖ ಮಾಡಿದೆ. ಈ ಜಂಕ್ಷನ್ ಅಭಿವೃದ್ಧಿಗೆ ಪುತ್ತೂರು ನಗರ ಯೋಜನಾ ಪ್ರಾಧಿಕಾರ (ಪುಡಾ) ಮಹತ್ವದ ಹೆಜ್ಜೆ ಇರಿಸಿದೆ.
ಸರಕಾರದಿಂದಲೇ ‘ಬ್ಲ್ಯಾಕ್ ಸ್ಪಾಟ್’ ಎಂದು ಗುರುತಿಸಲ್ಪಟ್ಟಿರುವ ಪುತ್ತೂರಿನ ಅರುಣಾ ಜಂಕ್ಷನ್ನಲ್ಲಿ ದಶಕಗಳಿಂದ ಕಾದಿರುವ ಸಮಸ್ಯೆ ಅಂತಿಮವಾಗಿ ಪರಿಹಾರ ಕಾಣುವತ್ತ ಮುಖ ಮಾಡಿದೆ. ಈ ಜಂಕ್ಷನ್ ಅಭಿವೃದ್ಧಿಗೆ ಪುತ್ತೂರು ನಗರ ಯೋಜನಾ ಪ್ರಾಧಿಕಾರ (ಪುಡಾ) ಮಹತ್ವದ ಹೆಜ್ಜೆ ಇರಿಸಿದೆ.
ದಶಕಗಳ ಸಂಕಷ್ಟಕ್ಕೆ ಅಂತ್ಯ ಹಾಡಲು ಪುಡಾ ಸಜ್ಜು!
ಪುತ್ತೂರು ಬಸ್ ನಿಲ್ದಾಣದ ಎದುರಿನ ಗಾಂಧಿ ಕಟ್ಟೆ ಮುಂಭಾಗದ ಮುಖ್ಯರಸ್ತೆಯು ಎಪಿಎಂಸಿ ರಸ್ತೆಗೆ ಕವಲೊಡೆಯುವ ಜಂಕ್ಷನ್ ಅಸಮರ್ಪಕವಾಗಿ ನಿರ್ಮಿಸಲಾಗಿದ್ದು, ರಸ್ತೆ ಅಗಲ ಕಿರಿದಾಗಿರುವುದು ದೊಡ್ಡ ಸಮಸ್ಯೆಯಾಗಿದೆ. ಇದರಿಂದ ನಿರಂತರ ವಾಹನ ದಟ್ಟಣೆ ಉಂಟಾಗಿ ಟ್ರಾಫಿಕ್ ಜಾಮ್ ಆಗುತ್ತಿದೆ. ಅದರಲ್ಲೂ ಸೋಮವಾರ ಸಂತೆ ದಿನ ಮತ್ತು ಉಳಿದ ದಿನಗಳಲ್ಲಿ ಬೆಳಗಿನ ಹಾಗೂ ಸಂಜೆಯ ಪೀಕ್ ಅವರ್ಗಳಲ್ಲಿ ಇಲ್ಲಿ ವಾಹನ ಚಾಲನೆ ಮಾಡುವುದು ಚಾಲಕರಿಗೆ ‘ಹರಸಾಹಸ’. ದೊಡ್ಡ ವಾಹನಗಳ ಚಾಲಕರಿಗೆ “ದೇವರಿಗೆ ಪ್ರೀತಿ” ಎಂಬಂತಹ ಪರಿಸ್ಥಿತಿ ಇದೆ ಎಂದರೆ ಇದರ ಗಂಭೀರತೆ ಅರಿವಾಗುತ್ತದೆ.

ಪಾದಚಾರಿಗಳ ಪಾಡು ಹೇಳತೀರದು!
ರಸ್ತೆ ಕಿರಿದಾಗಿರುವುದರಿಂದ ಪಾದಚಾರಿ ಮಾರ್ಗವೂ ಇಲ್ಲ. ಟ್ರಾಫಿಕ್ ಜಾಮ್ ಆದಾಗ ವಾಹನಗಳು ಎಲ್ಲೆಂದರಲ್ಲಿ ನುಗ್ಗುವುದರಿಂದ ಪಾದಚಾರಿಗಳು ನಡೆದಾಡಲೂ ಸಾಧ್ಯವಾಗದಂತಹ ಪರಿಸ್ಥಿತಿ ಇದೆ. ಟ್ರಾಫಿಕ್ ದಟ್ಟನೆಯ ಸಂದರ್ಭ ವಾಹನಗಳ ಜತೆ ಪಾದಚಾರಿಗಳೂ ನಿಂತು ನೋಡುವ ಸ್ಥಿತಿ ಇಲ್ಲಿನದು.
ಜಂಕ್ಷನ್ ಸುತ್ತಮುತ್ತ ಒಂದಷ್ಟು ಜಮೀನನ್ನು ಖಾಸಗಿಯವರು ಒತ್ತುವರಿ ಮಾಡಿಕೊಂಡಿರುವುದು ಮತ್ತು ಇನ್ನೊಂದಷ್ಟು ಖಾಸಗಿ ಭೂಮಿ ಇರುವುದು ಈವರೆಗೂ ಜಂಕ್ಷನ್ ಅಭಿವೃದ್ಧಿಗೆ ಅಡ್ಡಿಯಾಗಿತ್ತು. ಹಿಂದೆಯೂ ಹಲವು ಇಲಾಖೆಗಳು ಪ್ರಯತ್ನಿಸಿದರೂ ಸ್ಥಳೀಯರಿಂದ ಸಹಕಾರ ಸಿಕ್ಕಿರಲಿಲ್ಲ. ಆದರೆ, ಇದೀಗ ಪುಡಾ ಅಧ್ಯಕ್ಷ ಅಮಳ ರಾಮಚಂದ್ರ ಅವರು ಈ ಸಮಸ್ಯೆಯನ್ನು ಮನಗಂಡು, ಪ್ರಾಧಿಕಾರದ ಜನರಲ್ ಫಂಡ್ನಿಂದ ಜಂಕ್ಷನ್ ಅಭಿವೃದ್ಧಿಪಡಿಸಲು ಮುಂದಾಗಿದ್ದಾರೆ.
ಸ್ಥಳ ಪರಿಶೀಲನೆ, ತಜ್ಞರ ಸರ್ವೇ – ಪುಡಾ ವೇಗವಾಗಿ ಕಾರ್ಯಪ್ರವೃತ್ತ!
ಈ ನಿಟ್ಟಿನಲ್ಲಿ, ಕಳೆದ ನವೆಂಬರ್ 7ರ ಶುಕ್ರವಾರದಂದು ಪುಡಾ ಅಧ್ಯಕ್ಷರು, ಸದಸ್ಯರು ಮತ್ತು ‘ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ಸ್’ ತಂಡವು ಜಂಕ್ಷನ್ಗೆ ಭೇಟಿ ನೀಡಿ, ಶಾಶ್ವತ ಪರಿಹಾರಕ್ಕಾಗಿ ಸ್ಥಳ ಪರಿಶೀಲನೆ ನಡೆಸಿತು. ಇಂದು (ಮಂಗಳವಾರ) ಅರುಣಾ ಜಂಕ್ಷನ್ ಅಭಿವೃದ್ಧಿಗೆ ಅಗತ್ಯವಿರುವ ಭೂಮಿ ಲಭ್ಯತೆಯ ಕುರಿತು ಅಧ್ಯಯನ ಮಾಡಲು ತಜ್ಞ ಭೂಮಾಪಕರಿಂದ ಭೂ ಸರ್ವೇ ಕಾರ್ಯವನ್ನೂ ನಡೆಸಲಾಗಿದೆ.
‘ಸುಗಮ ಸಂಚಾರವೇ ನಮ್ಮ ಮುಖ್ಯ ಗುರಿ’: ಪುಡಾ ಅಧ್ಯಕ್ಷ ಅಮಳ ರಾಮಚಂದ್ರ
“ವಾಹನ ಸಂಚಾರ ಸುಗಮಗೊಳಿಸುವ, ದಟ್ಟಣೆ ಕಡಿಮೆ ಮಾಡಿ ಸುರಕ್ಷತೆ ಹೆಚ್ಚಿಸುವ ಮತ್ತು ನಗರ ಸಂಪರ್ಕ ಸುಧಾರಿಸುವ ದೃಷ್ಟಿಯಿಂದ ಪುಡಾ ಸಾಮಾನ್ಯ ನಿಧಿಯನ್ನು ಬಳಸಿ ಅರುಣಾ ಜಂಕ್ಷನ್ ಅಭಿವೃದ್ಧಿ ಮಾಡುವ ಯೋಜನೆ ಹಾಕಿಕೊಳ್ಳಲಾಗಿದೆ. ಯೋಜನೆ ಪ್ರಾಥಮಿಕ ಹಂತದಲ್ಲಿದೆ. ಮುಂದಿನ ಹಂತದಲ್ಲಿ ಅಂದಾಜು ಪಟ್ಟಿ, ಅಭಿವೃದ್ಧಿಯ ನೀಲನಕ್ಷೆ, ಇಲಾಖಾ ಒಪ್ಪಿಗೆ, ಮಾತುಕತೆ, ಭೂ ಸ್ವಾಧೀನ ಪ್ರಕ್ರಿಯೆ ನಡೆಯಲಿದೆ. ಸರ್ಕಾರಿ ಭೂಮಿ ಖಾಸಗಿಯವರ ವಶದಲ್ಲಿದ್ದರೆ ಜಿಲ್ಲಾಡಳಿತ ಕ್ರಮ ಕೈಗೊಳ್ಳಲಿದೆ. ಖಾಸಗಿ ಜಾಗವಿದ್ದರೆ, ಸಾರ್ವಜನಿಕ ಹಿತದೃಷ್ಟಿಯಿಂದ ಮಾತುಕತೆಯ ಮೂಲಕ ಪರಿಹರಿಸುವ ಪ್ರಯತ್ನ ಮಾಡಲಾಗುವುದು. ಒಪ್ಪಿಗೆ ಸಿಗದಿದ್ದರೆ, ಕಾನೂನು ಪ್ರಕ್ರಿಯೆ ಮೂಲಕ ಭೂ ಸ್ವಾಧೀನಕ್ಕೆ ಪುಡಾ ಮುಂದಾಗಲಿದೆ” ಎಂದು ಪುಡಾ ಅಧ್ಯಕ್ಷ ಅಮಳ ರಾಮಚಂದ್ರ ಅವರು ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ಪುಡಾ ಅಧ್ಯಕ್ಷ ಅಮಳ ರಾಮಚಂದ್ರ, ಸದಸ್ಯರಾದ ನಿಹಾಲ್ ಶೆಟ್ಟಿ, ಲ್ಯಾನ್ಸಿ ಮಸ್ಕರೇನ್ಹಸ್, ಅನ್ವರ್ ಕಾಸಿಂ, ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ಸ್ನ ಕಾರ್ಯದರ್ಶಿ ವೆಂಕಟ್ರಾಜ, ಸದಸ್ಯರಾದ ಪ್ರಮೋದ್ ಕುಮಾರ್, ಆದರ್ಶ ಕದ್ರಿ, ಚೇತನ್, ಸರ್ವೇಯರ್ ರಾಜಶೇಖರ್, ನಗರಸಭಾ ಇಂಜಿನಿಯರ್ ಮನೋಜ್ ಕುಮಾರ್, ನಗರ ವಿನ್ಯಾಸಗಾರ ಅಜೇಯ ಕೃಷ್ಣ ಉಪ್ಪಂಗಳ ಹಾಜರಿದ್ದರು.
ದಶಕಗಳಿಂದ ಪುತ್ತೂರಿನ ಜನತೆಯನ್ನು ಕಾಡುತ್ತಿದ್ದ ಈ ‘ಬ್ಲ್ಯಾಕ್ ಸ್ಪಾಟ್’ಗೆ ಕೊನೆಗೂ ಮುಕ್ತಿ ಸಿಗುವ ಸಮಯ ಬಂದಿದೆ. ಪುಡಾ ತೆಗೆದುಕೊಂಡ ಈ ನಿರ್ಧಾರಕ್ಕೆ ಸಾರ್ವಜನಿಕ ವಲಯದಿಂದ ವ್ಯಾಪಕ ಶ್ಲಾಘನೆ ವ್ಯಕ್ತವಾಗಿದೆ.
ಬಿಗ್ ನ್ಯೂಸ್
Puttur-ಪುತ್ತೂರು : ಕೋಟಿ- ಚೆನ್ನಯ KSRTC ಬಸ್ ನಿಲ್ದಾಣದ ನಿಲ್ದಾಣಾಧಿಕಾರಿಯಾಗಿ ಕೆ. ಭಾಸ್ಕರ ಶೆಟ್ಟಿ ಬಜನಿಗುತ್ತು ಪದೋನ್ನತಿ
ಸುಳ್ಯ ತಾಲೂಕಿನ ಬಾಳಿಲ ಗ್ರಾಮದ ಬಜನಿಗುತ್ತು ಕೆ.ಭಾಸ್ಕರ ಶೆಟ್ಟಿಯವರು ಸಹಾಯಕ ಸಂಚಾರ ನಿರೀಕ್ಷಕರಾಗಿ ಪದನ್ನೋತಿ ಹೊಂದಿ ಪುತ್ತೂರು ಕೋಟಿ- ಚೆನ್ನಯ KSRTC ಬಸ್ ನಿಲ್ದಾಣದ ನಿಲ್ದಾಣಾಧಿಕಾರಿಯಾಗಿ ನಿಯೋಜನೆಗೊಂಡಿದ್ದಾರೆ. 1992 ರಲ್ಲಿ ನಿರ್ವಾಹಕರಾಗಿ KSRTC ಮಂಗಳೂರು ವಿಭಾಗದಲ್ಲಿ ನೇಮಕಗೊಂಡರು.
ಪುತ್ತೂರು : ಸುಳ್ಯ ತಾಲೂಕಿನ ಬಾಳಿಲ ಗ್ರಾಮದ ಬಜನಿಗುತ್ತು ಕೆ.ಭಾಸ್ಕರ ಶೆಟ್ಟಿಯವರು ಸಹಾಯಕ ಸಂಚಾರ ನಿರೀಕ್ಷಕರಾಗಿ ಪದನ್ನೋತಿ ಹೊಂದಿ ಪುತ್ತೂರು ಕೋಟಿ- ಚೆನ್ನಯ KSRTC ಬಸ್ ನಿಲ್ದಾಣದ ನಿಲ್ದಾಣಾಧಿಕಾರಿಯಾಗಿ ನಿಯೋಜನೆಗೊಂಡಿದ್ದಾರೆ.
1992 ರಲ್ಲಿ ನಿರ್ವಾಹಕರಾಗಿ KSRTC ಮಂಗಳೂರು ವಿಭಾಗದಲ್ಲಿ ನೇಮಕಗೊಂಡರು.
2022ರಲ್ಲಿ ಸಂಚಾರ ನಿಯಂತ್ರಕರಾಗಿ ಕುಕ್ಕೆ ಸುಬ್ರಹ್ಮಣ್ಯ ಬಸ್ ನಿಲ್ದಾಣದಲ್ಲಿ ಸೇವೆ ಸಲ್ಲಿಸಿದ ಭಾಸ್ಕರ ಶೆಟ್ಟಿಯವರು 2024ರಿಂದ ಪುತ್ತೂರು ಬಸ್ ನಿಲ್ದಾಣದಲ್ಲಿ ಮುಂಗಡ ಟಿಕೆಟ್ ಕಾಯ್ದಿರಿಸುವ ಕೌಂಟರ್ ನಲ್ಲಿ ಕಾರ್ಯನಿರ್ವಹಿಸಿ, 2026 ಜೂನ್ ನಲ್ಲಿ ಬಸ್ ನಿಲ್ದಾಣದ ಸಹಾಯಕ ಸಂಚಾರ ನಿರೀಕ್ಷಕರಾಗಿ ಪದೋನ್ನತಿ ಹೊಂದಿದ್ದಾರೆ.
ಬಜನಿಯಲ್ಲಿ ಕೃಷಿಕರಾಗಿಯೂ ತಮ್ಮನ್ನು ತೊಡಗಿಸಿಕೊಂಡಿರುವ ಭಾಸ್ಕರ ಶೆಟ್ಟಿಯವರ ಪತ್ನಿ ಸೀಮಾ ಬಿ. ಶೆಟ್ಟಿ, ಹಿರಿಯ ಪುತ್ರಿ ಕು. ಸನ್ಮಿತಾ ಶೆಟ್ಟಿ ಬಿ.ಇ ಪದವೀಧರೆಯಾಗಿ ಬೆಂಗಳೂರಿನಲ್ಲಿ ಸಾಫ್ಟ್‌ವೇರ್ ಇಂಜಿನಿಯರ್ ಆಗಿ ಉದ್ಯೋಗದಲ್ಲಿದ್ದಾರೆ.
ಮಂಗಳೂರು
Auto passengers-ದಕ್ಷಿಣ ಕನ್ನಡದಲ್ಲಿ ಆಟೊ ಪ್ರಯಾಣಿಕರಿಗೆ ಮತ್ತೊಂದು ದರ ಏರಿಕೆ ಶಾಕ್: ಇಲ್ಲಿದೆ ಪರಿಷ್ಕೃತ ರೇಟ್ ಕಾರ್ಡ್
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆಟೊರಿಕ್ಷಾ ಪ್ರಯಾಣ ದರವನ್ನು ಮತ್ತೊಮ್ಮೆ ಪರಿಷ್ಕರಿಸಲಾಗಿದ್ದು, ನವೆಂಬರ್ 1ರಿಂದ ಮೊದಲ 1.5 ಕಿ.ಮೀಗೆ ಕನಿಷ್ಠ ₹40 ಹಾಗೂ ಬಳಿಕ ಪ್ರತಿ ಕಿ.ಮೀಗೆ ₹23 ದರ ನಿಗದಿಪಡಿಸಲಾಗಿದೆ.
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆಟೊರಿಕ್ಷಾ ಪ್ರಯಾಣ ದರವನ್ನು ಮತ್ತೊಮ್ಮೆ ಪರಿಷ್ಕರಿಸಲಾಗಿದ್ದು, ನವೆಂಬರ್ 1ರಿಂದ ಮೊದಲ 1.5 ಕಿ.ಮೀಗೆ ಕನಿಷ್ಠ ₹40 ಹಾಗೂ ಬಳಿಕ ಪ್ರತಿ ಕಿ.ಮೀಗೆ ₹23 ದರ ನಿಗದಿಪಡಿಸಲಾಗಿದೆ.
ಆಗಸ್ಟ್ 28ರಂದು ಹೊರಡಿಸಿದ್ದ ಅಧಿಸೂಚನೆಯಲ್ಲಿ ಮೊದಲ 1.5 ಕಿ.ಮೀಗೆ ಕನಿಷ್ಠ ದರವನ್ನು ₹35ರಿಂದ ₹40ಕ್ಕೆ ಹೆಚ್ಚಿಸಲಾಗಿತ್ತು. ಆದರೆ, ಪ್ರತಿ ಕಿ.ಮೀಗೆ ₹20ರಂತೆ ಇದ್ದ ದರವನ್ನು ಅದೇ ರೀತಿ ಮುಂದುವರಿಸಲಾಗಿತ್ತು. 2022ರ ನವೆಂಬರ್ 23ರಂದು ಪ್ರಾದೇಶಿಕ ಸಾರಿಗೆ ಪ್ರಾಧಿಕಾರ (ಆರ್‌ಟಿಎ) ನಿಗದಿಪಡಿಸಿದ್ದ ಪ್ರತಿ ಕಿ.ಮೀಗೆ ₹20ರ ದರವನ್ನು ಆಗಸ್ಟ್ 28ರ ಅಧಿಸೂಚನೆಯಲ್ಲಿ ಪರಿಗಣಿಸಲಾಗಿರಲಿಲ್ಲ ಎಂದು ಅ.1ರಂದು ಹೊರಡಿಸಿರುವ ಪರಿಷ್ಕೃತ ಅಧಿಸೂಚನೆಯಲ್ಲಿ ಆರ್‌ಟಿಎ ಸದಸ್ಯ ಕಾರ್ಯದರ್ಶಿ ತಿಳಿಸಿದ್ದಾರೆ.
ಆಟೊ ಚಾಲಕರು ಹಾಗೂ ಮಾಲೀಕರ ಪ್ರತಿನಿಧಿಗಳು ಕನಿಷ್ಠ ದರವನ್ನು ₹35ರಿಂದ ₹50ಕ್ಕೆ ಹಾಗೂ ಪ್ರತಿ ಕಿ.ಮೀ. ದರವನ್ನು ₹30ಕ್ಕೆ ಹೆಚ್ಚಿಸುವಂತೆ ಮನವಿ ಮಾಡಿದ್ದರು. ಇಂಧನ, ಬಿಡಿಭಾಗ ಸೇರಿದಂತೆ ನಿರ್ವಹಣಾ ವೆಚ್ಚಗಳು ಗಣನೀಯವಾಗಿ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ದರ ಹೆಚ್ಚಳ ಅಗತ್ಯ ಎಂದು ಅವರು ಕೋರಿದ್ದರು.
ಆದರೆ, ₹50 ಕನಿಷ್ಠ ದರ ಹಾಗೂ ಕಿ.ಮೀಗೆ ₹30ಕ್ಕೆ ದರ ಏರಿಸಿದರೆ ಸಾರ್ವಜನಿಕರು ಆಟೊರಿಕ್ಷಾ ಬಳಕೆಯಿಂದ ದೂರ ಸರಿದು ಪರ್ಯಾಯ ಸಾರಿಗೆ ವ್ಯವಸ್ಥೆಗಳತ್ತ ಮುಖ ಮಾಡುವ ಸಾಧ್ಯತೆಯಿದೆ. ಇದರಿಂದ ಆಟೊರಿಕ್ಷಾ ಚಾಲಕರು ಮತ್ತು ಮಾಲೀಕರಿಗೂ ತೊಂದರೆಯಾಗಬಹುದು ಎಂದು ಆರ್‌ಟಿಎ ಅಭಿಪ್ರಾಯಪಟ್ಟಿದೆ.
ಹೊಸ ದರ ಹೀಗಿದೆ
ಗರಿಷ್ಠ ಮೂರು ಪ್ರಯಾಣಿಕರನ್ನು ಕರೆದೊಯ್ಯುವ ಆಟೊರಿಕ್ಷಾಗಳಿಗೆ ಮೊದಲ 1.5 ಕಿ.ಮೀಗೆ ₹40 ಹಾಗೂ ನಂತರ ಪ್ರತಿ ಕಿ.ಮೀಗೆ ₹23 ದರ ನಿಗದಿಯಾಗಿದೆ.
- ಮೊದಲ 10 ನಿಮಿಷ ಕಾಯುವಿಕೆಗೆ ಶುಲ್ಕವಿಲ್ಲ.
- ನಂತರದ 15 ನಿಮಿಷ ಅಥವಾ ಅದರ ಭಾಗಕ್ಕೆ ₹5 ಶುಲ್ಕ.
- 20 ಕೆ.ಜಿ.ವರೆಗೆ ಸಾಮಾನುಗಳಿಗೆ ಶುಲ್ಕವಿಲ್ಲ.
- ಮುಂದಿನ 20 ಕೆ.ಜಿ. ಅಥವಾ ಅದರ ಭಾಗಕ್ಕೆ ₹25 ಶುಲ್ಕ.
- ರಾತ್ರಿ 10ರಿಂದ ಬೆಳಗ್ಗೆ 5ರವರೆಗೆ ಸಾಮಾನ್ಯ ದರದ ಒಂದೂವರೆ ಪಟ್ಟು ಶುಲ್ಕ ವಿಧಿಸಬಹುದು.
ಪರಿಷ್ಕೃತ ದರದ ಪಟ್ಟಿಯನ್ನು ಪ್ರತಿಯೊಂದು ಆಟೊರಿಕ್ಷಾದಲ್ಲೂ ಕಡ್ಡಾಯವಾಗಿ ಪ್ರದರ್ಶಿಸುವಂತೆ ಆರ್‌ಟಿಎ ಸೂಚಿಸಿದೆ. ಅಲ್ಲದೆ, ಮೀಟರ್‌ಗಳನ್ನು ಪರಿಷ್ಕೃತ ದರಕ್ಕೆ ಮರುಹೊಂದಿಸಿ, ಶೀಘ್ರದಲ್ಲೇ ಸೀಲ್ ಮಾಡಿಸಿಕೊಳ್ಳುವಂತೆ ಸೂಚಿಸಲಾಗಿದೆ.
ಮೀಟರ್‌ಗಳ ಮರುಹೊಂದಿಕೆ ಪೂರ್ಣಗೊಳ್ಳುವವರೆಗೆ ಚಾಲಕರಿಗೆ ಪ್ರದರ್ಶಿಸಲು ಅಗತ್ಯವಿರುವ ಹೋಲಿಕೆ ದರಪಟ್ಟಿಯನ್ನು ಚಾಲಕರ ಸಂಘಗಳಿಗೆ ನೀಡಲಾಗುವುದು. ಸಂಘಗಳು ಅದನ್ನು ಚಾಲಕರಿಗೆ ವಿತರಿಸಲಿವೆ ಎಂದು ಆರ್‌ಟಿಎ ತಿಳಿಸಿದೆ.
ಬಿಗ್ ನ್ಯೂಸ್
ಏಷ್ಯನ್ ಮಾಸ್ಟರ್ಸ್ ಈಜು ಚಾಂಪಿಯನ್‌ಶಿಪ್ – 9 ರಾಷ್ಟ್ರಗಳ 1500 ಈಜುಪಟುಗಳು ಭಾಗಿ : ಪುತ್ತೂರಿನ ಪಾರ್ಥ ವಾರಣಾಸಿಗೆ ಚಿನ್ನ
ಬೆಂಗಳೂರಿನ ಪಡುಕೋಣೆ ದ್ರಾವಿಡ್ ಸೆಂಟರ್ ಫಾರ್ ಎಕ್ಸೆಲೆನ್ಸ್ (ಡಾಲ್ಫಿನ್ ಆಕ್ವಾಟಿಕ್ಸ್)ನಲ್ಲಿ ಅ.4ರಿಂದ 10ರ ತನಕ ನಡೆಯುತ್ತಿರುವ 2ನೇ ಏಷ್ಯನ್ ಮಾಸ್ಟರ್ಸ್ ಈಜು ಚಾಂಪಿಯನ್ ಶಿಪ್ 2026ರಲ್ಲಿ ಭಾಗವಹಿಸಿದ ಭಾರತದ ಪ್ರಮುಖ ಈಜು ಸ್ಪರ್ಧಿ ವಾರಣಾಸಿ ಸ್ವಿಮ್ಮಿಂಗ್ ಅಕಾಡೆಮಿ ಮತ್ತು ಪುತ್ತೂರು ಅಕ್ವಾಟಿಕ್ ಕ್ಲಬ್ ನ ಪ್ರಧಾನ ಕೋಚ್ ಪಾರ್ಥ ವಾರಣಾಸಿ 50 ಮೀ ಬಟರ್ ಫೈ ನಲ್ಲಿ ಪುಥಮ ಸ್ಥಾನದೊಂದಿಗೆ ಚಿನ್ನದ ಪದಕ ಪಡೆದಿದ್ದಾರೆ.

ಪುತ್ತೂರು:ಬೆಂಗಳೂರಿನ ಪಡುಕೋಣೆ ದ್ರಾವಿಡ್ ಸೆಂಟರ್ ಫಾರ್ ಎಕ್ಸೆಲೆನ್ಸ್ (ಡಾಲ್ಫಿನ್ ಆಕ್ವಾಟಿಕ್ಸ್)ನಲ್ಲಿ ಅ.4ರಿಂದ 10ರ ತನಕ ನಡೆಯುತ್ತಿರುವ 2ನೇ ಏಷ್ಯನ್ ಮಾಸ್ಟರ್ಸ್ ಈಜು ಚಾಂಪಿಯನ್ ಶಿಪ್ 2026ರಲ್ಲಿ ಭಾಗವಹಿಸಿದ ಭಾರತದ ಪ್ರಮುಖ ಈಜು ಸ್ಪರ್ಧಿ ವಾರಣಾಸಿ ಸ್ವಿಮ್ಮಿಂಗ್ ಅಕಾಡೆಮಿ ಸಂಸ್ಥಾಪಕ ಮತ್ತು ಪುತ್ತೂರು ಅಕ್ವಾಟಿಕ್ ಕ್ಲಬ್ ನ ಪ್ರಧಾನ ಕೋಚ್ ಪಾರ್ಥ ವಾರಣಾಸಿ 50 ಮೀ ಬಟರ್ ಫ್ಲೈ ನಲ್ಲಿ ಪ್ರಥಮ ಸ್ಥಾನದೊಂದಿಗೆ ಚಿನ್ನದ ಪದಕ ಪಡೆದಿದ್ದಾರೆ.
9 ರಾಷ್ಟ್ರಗಳ 1,500ಕ್ಕೂ ಹೆಚ್ಚು ಈಜುಗಾರರು ಭಾಗಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಈ ಪ್ರತಿಷ್ಠಿತ ಏಷ್ಯನ್ ಮಾಸ್ಟರ್ಸ್ ಈಜು ಚಾಂಪಿಯನ್‌ಶಿಪ್ ಆಯೋಜಿಸಲಾಗಿದೆ. ಏಷ್ಯಾ ಅಕ್ವಾಟಿಕ್ ಮಾರ್ಗದರ್ಶನದಲ್ಲಿ, ಭಾರತೀಯ ಈಜು ಒಕ್ಕೂಟದ ಅಧೀನದಲ್ಲಿ ಹಾಗೂ ಕರ್ನಾಟಕ ಈಜು ಸಂಸ್ಥೆಯ ಆಯೋಜನಾ ಪಾಲುದಾರಿಕೆಯಲ್ಲಿ ಚಾಂಪಿಯನ್‌ಶಿಪ್ ನಡೆಯುತ್ತಿದೆ.
ಭಾರತ ಸೇರಿದಂತೆ ಶ್ರೀಲಂಕಾ, ಇರಾನ್, ಥೈಲ್ಯಾಂಡ್, ಜಪಾನ್, ಚೀನಾ, ಓಮನ್, ಮಲೇಷ್ಯಾ ಸೇರಿದಂತೆ ಒಟ್ಟು 9 ರಾಷ್ಟ್ರಗಳ 1,500ಕ್ಕೂ ಅಧಿಕ ಈಜುಗಾರರು ಚಾಂಪಿಯನ್‌ಶಿಪ್‌ನಲ್ಲಿ ಭಾಗವಹಿಸುತ್ತಿದ್ದಾರೆ.
ಈ ಪ್ರತಿಷ್ಠಿತ ಅಂತಾರಾಷ್ಟ್ರೀಯ ಮಟ್ಟದ ಕೂಟದಲ್ಲಿ ಪಾರ್ಥ ವಾರಣಾಸಿ ಚಿನ್ನದ ಪದಕ ಗೆದ್ದಿರುವುದು ಪುತ್ತೂರಿನ ಕ್ರೀಡಾಭಿಮಾನಿಗಳಿಗೆ ಸಂತಸದ ವಿಷಯವಾಗಿದೆ.
-
ಮಂಗಳೂರು13 hours agoAuto passengers-ದಕ್ಷಿಣ ಕನ್ನಡದಲ್ಲಿ ಆಟೊ ಪ್ರಯಾಣಿಕರಿಗೆ ಮತ್ತೊಂದು ದರ ಏರಿಕೆ ಶಾಕ್: ಇಲ್ಲಿದೆ ಪರಿಷ್ಕೃತ ರೇಟ್ ಕಾರ್ಡ್
-
ಅಂತರ ರಾಜ್ಯ18 hours agoಕಾಸರಗೋಡು: ಆರ್ಎಸ್ಎಸ್ ವಕ್ತಾರರ ಭಾಗವಹಿಸುವಿಕೆ ವಿರೋಧಿಸಿ ಪ್ರತಿಭಟನೆ; ಘರ್ಷಣೆಯಲ್ಲಿ ಮೂವರು ವಿದ್ಯಾರ್ಥಿಗಳಿಗೆ ಗಾಯ
-
Uncategorized11 hours ago
Puttur Court retaining wall collapse : ಹತ್ತು ತಿಂಗಳ ಹಿಂದಷ್ಟೇ ಉದ್ಘಾಟನೆ; ಪುತ್ತೂರು ಹೊಸ ನ್ಯಾಯಾಲಯದ ತಡೆಗೋಡೆ ಕುಸಿತ- ಕಾಮಗಾರಿಯ ಗುಣಮಟ್ಟದ ಬಗ್ಗೆ ಚರ್ಚೆ
-
ಮಂಗಳೂರು20 hours agoChouta-ಫಾರಂ 7 ಕೊಟ್ಟ ಮಾತ್ರಕ್ಕೆ ಮತ ಡಿಲೀಟ್ ಆಗಲ್ಲ; ಅಕ್ರಮ ಡಿಲೀಷನ್ಗೆ ದಾಖಲೆ ತೋರಿಸಿ: ಕಾಂಗ್ರೆಸ್ಗೆ ಚೌಟ ಸವಾಲು
-
ಸ್ಥಳೀಯ18 hours agoBeltangadi-ಬೆಳ್ತಂಗಡಿ: ಚಾಲಕನ ಸಮಯಪ್ರಜ್ಞೆ; ಬಸ್ನಲ್ಲಿ ಅಸ್ವಸ್ಥಗೊಂಡ ಮಹಿಳೆ ಅಪಾಯದಿಂದ ಪಾರು
-
ಅಂತರ ರಾಜ್ಯ12 hours agoBlackmail-ದೋಸೆಯಲ್ಲಿ ಸತ್ತ ಇಲಿ ಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ದೂರು ನೀಡಿದ್ದ ಮಹಿಳೆಯಿಂದಲೇ ₹25 ಲಕ್ಷಕ್ಕೆ ಬ್ಲ್ಯಾಕ್ಮೇಲ್..!
-
ಉದ್ಯೋಗ14 hours agoPuttur-Salesನಿಂದ Technicianವರೆಗೆ; ಪುತ್ತೂರಿನ ಶ್ರೀ ತಿರುಮಲಾ TVSನಲ್ಲಿ ಭರ್ಜರಿ Job Opening
-
ರಾಜಕೀಯ19 hours agoAshok Rai-ಪಕ್ಷ ಸಂಘಟನೆಗೆ ಅಶೋಕ್ ರೈ ಹೊಸ ಹೆಜ್ಜೆ: ಪುತ್ತೂರು ಬ್ಲಾಕ್ ಕಾಂಗ್ರೆಸ್ಗೆ ಬೊಲೆರೋ


















