ಕಾರ್ಯಕ್ರಮಗಳು
Puttur-ಪುತ್ತೂರು: ಭಕ್ತಕೋಡಿಯಲ್ಲಿ ಆಧುನಿಕ ಸೌಲಭ್ಯಗಳನ್ನೊಳಗೊಂಡ ‘ಆರಾಧ್ಯ ಸಂಕೀರ್ಣ’ ಶುಭಾರಂಭ
ಪುತ್ತೂರು ತಾಲೂಕಿನ ಸರ್ವೆ ಗ್ರಾಮದ ಭಕ್ತಕೋಡಿಯಲ್ಲಿ ನೂತನವಾಗಿ ನಿರ್ಮಿಸಲಾದ ‘ಆರಾಧ್ಯ ಸಂಕೀರ್ಣ’ವು ನವೆಂಬರ್ 8ರಂದು ಬೆಳಿಗ್ಗೆ ಪೂಜಾ ವಿಧಿವಿಧಾನಗಳೊಂದಿಗೆ ವಿಧ್ಯುಕ್ತವಾಗಿ ಶುಭಾರಂಭಗೊಂಡಿತು. ವೇ.ಮೂ. ಬ್ರಹ್ಮಶ್ರೀ ಅನಂತ ನಾರಾಯಣ ಭಟ್ ಪರಕ್ಕಜೆ ಹಾಗೂ ವೇ.ಮೂ. ಮಂಜುಳಗಿರಿ ವೆಂಕಟರಮಣ ಭಟ್ಟರವರ ನೇತೃತ್ವದಲ್ಲಿ ಧಾರ್ಮಿಕ ವಿಧಿಗಳನ್ನು ನೆರವೇರಿಸಲಾಯಿತು.
ಪುತ್ತೂರು ತಾಲೂಕಿನ ಸರ್ವೆ ಗ್ರಾಮದ ಭಕ್ತಕೋಡಿಯಲ್ಲಿ ನೂತನವಾಗಿ ನಿರ್ಮಿಸಲಾದ ‘ಆರಾಧ್ಯ ಸಂಕೀರ್ಣ’ವು ನವೆಂಬರ್ 8ರಂದು ಬೆಳಿಗ್ಗೆ ಪೂಜಾ ವಿಧಿವಿಧಾನಗಳೊಂದಿಗೆ ವಿಧ್ಯುಕ್ತವಾಗಿ ಶುಭಾರಂಭಗೊಂಡಿತು. ವೇ.ಮೂ. ಬ್ರಹ್ಮಶ್ರೀ ಅನಂತ ನಾರಾಯಣ ಭಟ್ ಪರಕ್ಕಜೆ ಹಾಗೂ ವೇ.ಮೂ. ಮಂಜುಳಗಿರಿ ವೆಂಕಟರಮಣ ಭಟ್ಟರವರ ನೇತೃತ್ವದಲ್ಲಿ ಧಾರ್ಮಿಕ ವಿಧಿಗಳನ್ನು ನೆರವೇರಿಸಲಾಯಿತು.
ಈ ಸಂದರ್ಭದಲ್ಲಿ ಹಲವಾರು ಗಣ್ಯರು ಉಪಸ್ಥಿತರಿದ್ದು, ನೂತನ ಸಂಕೀರ್ಣಕ್ಕೆ ಶುಭ ಹಾರೈಸಿದರು. ಆರಾಧ್ಯ ಸಂಕೀರ್ಣದ ಮಾಲೀಕರಾದ, ಭಾರತೀಯ ಜೀವ ವಿಮಾ ನಿಗಮದ ಪುತ್ತೂರು ಶಾಖೆಯ ಮುಖ್ಯ ಜೀವವಿಮಾ ಸಲಹೆಗಾರರಾದ ಜಿ.ಕೆ. ಪ್ರಸನ್ನ ಮತ್ತು ಅವರ ಪತ್ನಿ ದೇವಿಕಾ ದಂಪತಿಗಳು ಅತಿಥಿಗಳನ್ನು ಆತ್ಮೀಯವಾಗಿ ಸ್ವಾಗತಿಸಿ ಸತ್ಕರಿಸಿದರು.
ಶುಭಾರಂಭದ ಅಂಗವಾಗಿ ಸಂಜೆ ಭವ್ಯ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು. ಸಂಜೆ 4 ಗಂಟೆಯಿಂದ ಕುಮಾರಿ ತನ್ಮಯಿ ಉಪ್ಪಂಗಳ ಅವರಿಂದ ಮನಮೋಹಕ ವಯಲಿನ್ ವಾದನ ನಡೆಯಿತು. ನಂತರ ರಾಜೇಶ್ ಮಳಿ ಮತ್ತು ಶುಭಾ ರಾಜ್ ದಂಪತಿಗಳ ಅಪೂರ್ವ ಜಾದೂ ವಿಸ್ಮಯ ಪ್ರದರ್ಶನ ಎಲ್ಲರನ್ನೂ ರಂಜಿಸಿತು. ಅಂತಿಮವಾಗಿ, ಸ್ಟಾರ್ ಸುವರ್ಣ ಸಂಕಲ್ಪದ ನಿರೂಪಕಿ, ಕಲರ್ಸ್ ಕನ್ನಡದ ಕನ್ನಡ ಕೋಗಿಲೆ ಹಾಗೂ ಜೀ ಕನ್ನಡ ಸರಿಗಮಪ ಖ್ಯಾತಿಯ ಅಖಿಲಾ ಪಜಿಮಣ್ಣು ಮತ್ತು ಆಶ್ರೀತಾ ಸುಪ್ರಜ ಕಳಸರವರಿಂದ ಅದ್ಭುತ ಗಾನ ಸಂಭ್ರಮ ಕಾರ್ಯಕ್ರಮವು ನೆರೆದವರನ್ನು ಮಂತ್ರಮುಗ್ಧಗೊಳಿಸಿತು.
ಒಂದೇ ಸೂರಿನಡಿ ನೂರಾರು ಸೌಲಭ್ಯಗಳು:
ಆರಾಧ್ಯ ಸಂಕೀರ್ಣವು ಆಧುನಿಕ ಸೌಲಭ್ಯಗಳೊಂದಿಗೆ ಎಲ್ಲರಿಗೂ ಅನುಕೂಲವಾಗುವಂತೆ ವಿನ್ಯಾಸಗೊಳಿಸಲಾಗಿದೆ. ಇಲ್ಲಿ 400 ಆಸನಗಳ ಸಾಮರ್ಥ್ಯದ ಹವಾನಿಯಂತ್ರಿತ ಮದುವೆ ಹಾಲ್, ಹವಾನಿಯಂತ್ರಿತ ಕಾನ್ಫರೆನ್ಸ್ ಹಾಲ್, ಸ್ಮಾರ್ಟ್ ಅಪ್ ಕಂಪೆನಿಗಳಿಗಾಗಿ ಸುಸಜ್ಜಿತ ಕಚೇರಿ ಸಮುಚ್ಚಯ, 24 ಹವಾನಿಯಂತ್ರಿತ ವಸತಿ ಕೊಠಡಿಗಳು ಲಭ್ಯವಿವೆ. ಇದರೊಂದಿಗೆ ವಾಣಿಜ್ಯ ಮಳಿಗೆಗಳು, ಸುಸಜ್ಜಿತ ಈಜುಕೊಳ, ಜಿಮ್ ವ್ಯವಸ್ಥೆ, ವಿಶಾಲವಾದ ಪಾರ್ಕಿಂಗ್ ವ್ಯವಸ್ಥೆ, ವಾಕಿಂಗ್ ಪಾಥ್, ಮಕ್ಕಳ ಉದ್ಯಾನವನ ಮತ್ತು ವೈಫೈ ಸೌಲಭ್ಯಗಳನ್ನು ಸಹ ಒಳಗೊಂಡಿದೆ. ಇದು ಪುತ್ತೂರಿನಲ್ಲಿ ಬಹುಪಯೋಗಿ ಸೌಲಭ್ಯಗಳನ್ನು ಒದಗಿಸುವ ಸುಂದರ ತಾಣವಾಗಿ ರೂಪುಗೊಂಡಿದೆ.
ಸ್ಥಳೀಯ
Dharmasthala-ಅ. 11 ರಿಂದ 19 : ಧರ್ಮಸ್ಥಳದಲ್ಲಿ ನವರಾತ್ರಿ ವೈಭವ
ನವರಾತ್ರಿ ಪ್ರಯುಕ್ತ ಧರ್ಮಸ್ಥಳದಲ್ಲಿ ಇದೇ 11 ರಿಂದ 19 ರ ವರೆಗೆ ವಿಶೇಷ ಕಾರ್ಯಕ್ರಮಗಳು ನಡೆಯಲಿವೆ. ಪ್ರತಿ ದಿನ ರಾತ್ರಿ ಅಮ್ಮನವರ ಸನ್ನಿಧಿಯಲ್ಲಿ ವಿಶೇಷ ಪೂಜೆ ನಡೆಯುತ್ತದೆ.
ಉಜಿರೆ: ನವರಾತ್ರಿ ಪ್ರಯುಕ್ತ ಧರ್ಮಸ್ಥಳದಲ್ಲಿ ಇದೇ 11 ರಿಂದ 19 ರ ವರೆಗೆ ವಿಶೇಷ ಕಾರ್ಯಕ್ರಮಗಳು ನಡೆಯಲಿವೆ. ಪ್ರತಿ ದಿನ ರಾತ್ರಿ ಅಮ್ಮನವರ ಸನ್ನಿಧಿಯಲ್ಲಿ ವಿಶೇಷ ಪೂಜೆ ನಡೆಯುತ್ತದೆ.
ದೇವಸ್ಥಾನದ ಎದುರು ಇರುವ ಪ್ರವಚನಮಂಟಪದಲ್ಲಿ ಸಂಜೆ ಆರು ಗಂಟೆಯಿಂದ ಒಂಭತ್ತು ಗಂಟೆ ವರೆಗೆ ನಾಡಿನ ಖ್ಯಾತ ಕಲಾವಿದರಿಂದ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲಾಗಿದೆ.
ಅ. 11: ಭಾನುವಾರ: ಕುಮಾರಿ ಪ್ರಾಪ್ತಿ ಶೆಟ್ಟಿ, ಧರ್ಮಸ್ಥಳ ಮತ್ತು ಕುಮಾರಿ ಆದ್ವಿ, ನಿಡಿಗಲ್ (ಭಕ್ತಿಸಂಗೀತ), ಅ. 12: ಸೋಮವಾರ: ಪವಿತ್ರವಿನಯ್ ಮಯ್ಯ ಅರ್ಕುಳ, ಮಂಗಳೂರು (ಸುಗಮ ಸಂಗೀತ), ಅ. 13: ಮಂಗಳವಾರ: ಕುಮಾರಿ ಮಾನ್ಸಿ, ಮೈಸೂರು (ಭಕ್ತಿಸಂಗೀತ), ಅ. 14: ಬುಧವಾರ: ಮಾಸ್ಟರ್ ಆಗಮ, ಪೆರ್ಲ, ಮಂಗಳೂರು (ಕರ್ನಾಟಕ ಶಾಸ್ತ್ರೀಯ ಸಂಗೀತ), ಅ. 15: ಗುರುವಾರ: ಕುಮಾರಿ ಧೃತಿ ಬಿ. ಆತ್ರೇಯಾಸ್, ಕುಮಾರಿ ಧನ್ವಿ ಬಿ. ಆತ್ರೇಯಾಸ್ ಮತ್ತು ಮಾಸ್ಟರ್ ಅಸ್ರಮೇಯ ಗುರುಪ್ರಸಾದ್, ಬೆಂಗಳೂರು (ನೃತ್ಯ, ಗಾನಲಹರಿ), ಅ. 16: ಶುಕ್ರವಾರ: ಸನತ್‌ಕುಮಾರ್, ಬೆಂಗಳೂರು (ವಯಲಿನ್ ವಾದನ), ಅ. 17: ಶನಿವಾರ: ಕುಮಾರಿ ಮಯೂರಿ ಭಟ್ ಪೊಳಲಿ, ಬಂಟ್ವಾಳ (ಕರ್ನಾಟಕ ಶಾಸ್ತ್ರೀಯ ಸಂಗೀತ), ಅ. 18: ಆದಿತ್ಯವಾರ: ಕುಮಾರಿ ಐಶ್ವರ್ಯ ಜೋಗಿ ಮತ್ತು ತಂಡ, ಕುಂದಾಪುರ (ಸುಮಧುರ ಗಾನವೈಭವ), ಅ. 19: ಸೋಮವಾರ: ಕುಮಾರಿ ಅರ್ಚಿಷಾ ರಾವ್ ಮತ್ತು ಬಳಗ, ಬೆಂಗಳೂರು (ಸಂಜೆ ಗಂಟೆ 6.30 ರಿಂದ 8.30). ಮಲ್ಲಿಕಾಮಟ್ಟಿ ಮತ್ತು ಬಳಗ, ಪೊಳಲಿ (ರಾತ್ರಿ ಗಂಟೆ 9 ರಿಂದ 11.30) ಭಕ್ತಿ ಸಂಗೀತ.
ಸ್ಥಳೀಯ
Excel-ಎಕ್ಸೆಲ್ ಗುರು ನಮನ 2026: ಸಾಮರಸ್ಯವೇ ಸಮಾಜದ ಉನ್ನತಿಗೆ ತಳಪಾಯ: ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ
ಎಕ್ಸೆಲ್ ಗುರುವಾಯನ ಕೆರೆಯಲ್ಲಿ ನಡೆದ ಗುರು ನಮನ 2026 ಕಾರ್ಯಕ್ರಮದಲ್ಲಿ ಮಾಣಿಲ ಶ್ರೀ ದುರ್ಗಾ ಮಹಾಲಕ್ಷ್ಮೀ ಕ್ಷೇತ್ರದ ಪರಮ ಪೂಜ್ಯ ಶ್ರೀ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿಯವರು ಮಾತನಾಡಿದರು.
ಗುರುವಾಯನಕೆರೆ, ಅ.4 : “ಸಮಾಜದಲ್ಲಿ ಎಲ್ಲರಿಗೂ ಬದುಕುವ ಅವಕಾಶವಿದೆ. ಪ್ರತಿಯೊಂದು ವರ್ಗ, ಸಮುದಾಯಕ್ಕೂ ಈ ಸಮಾಜ ಆಶ್ರಯ ನೀಡಿದೆ. ಪ್ರತಿಯೊಬ್ಬರ ನಂಬಿಕೆ ಆಚರಣೆಗಳು ಬೇರೆ ಬೇರೆಯಾಗಿರುತ್ತವೆ. ಅವರವರ ನಂಬಿಕೆ ಮತ್ತು ಆಚರಣೆಗಳನ್ನು ತಿರಸ್ಕರಿಸಿದಾಗ ಸಮಾಜದಲ್ಲಿ ಘರ್ಷಣೆಗಳು ಏರ್ಪಡುತ್ತವೆ. ಪ್ರತಿಯೊಬ್ಬರನ್ನೂ ಸಾಮರಸ್ಯದಿಂದ ನೋಡುವ ಗುಣ ನಮ್ಮದಾಗಬೇಕು. ಸಾಮರಸ್ಯವೇ ಸಮಾಜದ ಉನ್ನತಿಗೆ ಅಡಿಪಾಯವಿದ್ದಂತೆ” ಎಂದು ಎಕ್ಸೆಲ್ ಗುರುವಾಯನ ಕೆರೆಯಲ್ಲಿ ನಡೆದ ಗುರು ನಮನ 2026 ಕಾರ್ಯಕ್ರಮದಲ್ಲಿ ಮಾಣಿಲ ಶ್ರೀ ದುರ್ಗಾ ಮಹಾಲಕ್ಷ್ಮೀ ಕ್ಷೇತ್ರದ ಪರಮ ಪೂಜ್ಯ ಶ್ರೀ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿಯವರು ಹೇಳಿದರು.
ಸ್ವಾಮೀಜಿಯವರು ಮಾತನಾಡುತ್ತಾ ಎಕ್ಸೆಲ್ ವಿದ್ಯಾಸಂಸ್ಥೆಯು ಸುಂದರ ಪರಿಸರದಲ್ಲಿ ನಿರ್ಮಾಣಗೊಂಡಿದೆ. ಈ ವಿದ್ಯಾಸಂಸ್ಥೆಯಿಂದ ವಿದ್ಯಾರ್ಥಿಗಳ ಭವಿಷ್ಯ ರೂಪಗೊಳ್ಳುತ್ತದೆ. ವಿದ್ಯಾರ್ಥಿಗಳು ಪರಸ್ಪರ ಗೌರವಿಸಿರಿ. ಈ ಸಮಾಜಕ್ಕೆ ಒಳ್ಳೆಯದನ್ನು ಬಯಸಿ. ನೀವು ಓದಿದ ವಿದ್ಯಾ ಸಂಸ್ಥೆಗೆ ಚಿರಋಣಿಯಾಗಿರಬೇಕೆಂದು, ಈ ಸಂಸ್ಥೆಯು ಸಾವಿರಾರು ಶಿಕ್ಷಕರನ್ನು ನಿರಂತರವಾಗಿ ಗೌರವಿಸುತ್ತಾ ಬಂದಿರುವುದು ನಿಜವಾಗಿಯೂ ಅತ್ಯುತ್ತಮ ಬೆಳವಣಿಗೆಯಾಗಿದೆ. ಇದು ಸುಮಂತ್ ಕುಮಾರ್ ಅವರ ಈ ನಿಸ್ವಾರ್ಥ ಸೇವೆಗೆ ಸಾಕ್ಷಿಯಾಗಿದೆ ಎಂದರು.
ಸುಬ್ರಮಣ್ಯದ ಶ್ರೀ ಕುಕ್ಕೆ ಸುಬ್ರಹ್ಮಣ್ಯ ಪದವಿಪೂರ್ವ ಕಾಲೇಜಿನ ಪ್ರಾಚಾರ್ಯರಾದ ಸೋಮಶೇಖರ್ ನಾಯಕ್ ಇವರು ಮಾತನಾಡುತ್ತಾ ” ವಿದ್ಯಾರ್ಥಿಗಳು ಕಷ್ಟಕರ ವಿಷಯಗಳ ಕಡೆಗೆ ಹೆಚ್ಚು ಗಮನ ಕೊಡಬೇಕು. ನೀವೆಲ್ಲ ಎಕ್ಸೆಲ್ ವಿದ್ಯಾಸಂಸ್ಥೆಯಲ್ಲಿ ಓದುತ್ತಿರುವುದು ನಿಮ್ಮೆಲ್ಲರ ಅದೃಷ್ಟವೇ ಸರಿ. ಈ ಸಂಸ್ಥೆಯ ಅಧ್ಯಕ್ಷರಾದ ನುಮಂತ್ ಕುಮಾರ್ ಜೈನ್ ಇವರು ಉದಾರ ವ್ಯಕ್ತಿತ್ವದ ವ್ಯಕ್ತಿ. ಅವರ ಸೇವಾ ಮನೋಭಾವದಿಂದಲೇ ಈ ಶಿಕ್ಷಣ ಸಂಸ್ಥೆಯು ಎತ್ತರಕ್ಕೆ ಬೆಳೆಯುತ್ತಿದೆ. ಜಿಲ್ಲೆಯ ಯಾವುದೇ ಶೈಕ್ಷಣಿಕ ಸಾಮಾಜಿಕ ಧಾರ್ಮಿಕ ಕಾರ್ಯಕ್ರಮಗಳಿಗೆ ಸುಮಂತ್ ಅವರ ಕೊಡುಗೆ ಅಪಾರವಾದದ್ದು. ಈ ಸಂಸ್ಥೆಗೆ ನನ್ನನ್ನು ಆಹ್ವಾನಿಸಿ ಸನ್ಮಾನಿಸಿದ್ದೀರಿ. ನನ್ನಲ್ಲಿ ಕೃತಾರ್ಥತೆ ಭಾವ ಮೂಡುತ್ತಿದೆ. ಎಕ್ಸೆಲ್ ವಿದ್ಯಾಸಂಸ್ಥೆಗೆ ನಾನು ಚಿರಋಣಿ” ಎಂದು ಸಂತಸ ವ್ಯಕ್ತಪಡಿಸಿದರು.
ಮೂಲ್ಕಿಯ ವಿಜಯ ಕಾಲೇಜಿನ ವಿಶ್ರಾಂತ ಪಾಚಾರ್ಯರಾದ ಡಾ .ನಾರಾಯಣ ಪೂಜಾರಿ ಮತ್ತು ಸಾಮಾಜಿಕ ಮತ್ತು ಧಾರ್ಮಿಕ ಮುಖಂಡರಾದ ಸಂತೋಷ್ ಕುಮಾರ್ ಕಾಪಿನಡ್ಕ ಇವರು ವಿದ್ಯಾರ್ಥಿಗಳ ಭವಿಷ್ಯಕ್ಕೆ ಶುಭ ಕೋರಿದರು.
ಎಕ್ಸೆಲ್ ವಿದ್ಯಾ ಸಂಸ್ಥೆಯ ಹಿತೈಷಿಗಳಾದ ರತ್ನರಾಜ್ ಜೈನ್ ಮತ್ತು ಪತ್ರಿಕೋದ್ಯಮಿಗಳಾದ ಸಂತೋಷ್ ಕೋಟ್ಯಾನ್ ಇವರು ಈ ಕಾರ್ಯಕ್ರಮದ ಭಾಗವಾಗಿ ಸನ್ಮಾನ ಸ್ವೀಕರಿಸಿದರು.
ಸಂಸ್ಥೆಯ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್ ಅವರು ಅಧ್ಯಕ್ಷೀಯ ಭಾಷಣವನ್ನು ಮಾಡುತ್ತಾ “ನಮ್ಮ ಎಕ್ಸೆಲ್ ಸಂಸ್ಥೆಯ ವಿದ್ಯಾರ್ಥಿಗಳು ದೇಶವಿದೇಶಗಳಲ್ಲಿ ಉನ್ನತ ಶಿಕ್ಷಣವನ್ನು ಮಾಡುತ್ತಿದ್ದಾರೆ . ಇಲ್ಲಿ ಓದಿದ ವಿದ್ಯಾರ್ಥಿಗಳು ಆದರ್ಶ ವ್ಯಕ್ತಿಗಳಾಗಿ ರೂಪಗೊಳ್ಳುತ್ತಿದ್ದಾರೆ. ಈ ಕಾರ್ಯಕ್ರಮದಲ್ಲಿ ಗುರುಗಳನ್ನು ಗೌರವಿಸುವ ಮೂಲಕ ನಮ್ಮಲ್ಲಿ ಧನ್ಯತಾಭಾವ ಮೂಡಿದೆ. ಶಿಕ್ಷಕರು ಜಗತ್ತಿನ ಪ್ರಥಮ ಪೂಜ್ಯರು . ಅಂತಹ ಶಿಕ್ಷಕರನ್ನು ಸನ್ಮಾನಿಸುವುದು ನಮ್ಮ ಸೌಭಾಗ್ಯ” ಎಂದು ಹೇಳಿದರು.
ಕಾಲೇಜಿನ ಬ್ರೋಚರ್ಸ್ ಅನ್ನು ಈ ಸಂದರ್ಭದಲ್ಲಿ ಲೋಕಾರ್ಪಣೆ ಮಾಡಲಾಯಿತು.ಕರ್ನಾಟಕ ರಾಜ್ಯದ ವಿವಿಧ ಜಿಲ್ಲೆ, ತಾಲೂಕು ಗ್ರಾಮಗಳಲ್ಲಿ ಶಿಕ್ಷಕ ವೃತ್ತಿಯನ್ನು ಮಾಡುತ್ತ ವಿದ್ಯಾರ್ಥಿಗಳ ಭವಿಷ್ಯವನ್ನು ರೂಪಿಸುತ್ತಿರುವ 300 ಹೆಚ್ಚು ಶಿಕ್ಷಕರನ್ನು ಗೌರವಿಸಿದ್ದು ಅತ್ಯಂತ ವಿರಳ ಮತ್ತು ಸೃಜನಾತ್ಮಕ ಕಾರ್ಯಕ್ರಮವಾಗಿತ್ತು. ಎಲ್ಲ ಶಿಕ್ಷಕರಿಗೆ ಹಾರ , ಶಾಲು, ಪೇಟ ಮತ್ತು ಸ್ಮರಣಿಕೆ, ಉಡುಗೊರೆಗಳನ್ನು ನೀಡಿ ಸನ್ಮಾನಿಸಲಾಯಿತು. ಪ್ರಾಂಶುಪಾಲರಾದ ಡಾ ನವೀನ್ ಕುಮಾರ್ ಮರಿಕೆ ಸ್ವಾಗತಿಸಿದರು. ಎಕ್ಸೆಲ್ ಟೆಕ್ನೋ ಸ್ಕೂಲ್ ವೇಣೂರಿನ ಮುಖ್ಯೋಪಾಧ್ಯಯರಾದ ಶಾಂತಿರಾಜ್ ಜೈನ್ ವಂದಿಸಿದರು.
ಉಪನ್ಯಾಸಕರಾದ ಪ್ರಸನ್ನ ಭೋಜ, ತಿಪ್ಪೇಸ್ವಾಮಿ, ಪ್ರಜ್ವಿತ್ ರೈ, ಅನನ್ಯ ಜೈನ್, ವೈಷ್ಣವಿಯವರು ಕಾರ್ಯಕ್ರಮವನ್ನು ನಿರೂಪಿಸಿದರು. ದ್ವಿತೀಯ ಪಿಯು ವಿದ್ಯಾರ್ಥಿಗಳು ಪ್ರಾರ್ಥನೆ ಹಾಡುವ ಮೂಲಕ ಈ ಕಾರ್ಯಕ್ರಮಕ್ಕೆ ಆರಂಭವನ್ನು ಒದಗಿಸಿದರು.
ಪ್ರಾಂಶುಪಾಲರಾದ ಡಾ. ನವೀನ್ ಕುಮಾರ್ ಮರಿಕೆ, ಡಾ. ಪ್ರಜ್ವಲ್, ಉಪ ಪ್ರಾಚಾರ್ಯರಾದ ರೋಹಿತ್, ಹರೀಶ್ ಕುಮಾರ್ ಗುರುವಾಯನಕೆರೆ ಟೆಕ್ನೋ ಸ್ಕೂಲಿನ ಮುಖ್ಯ ಶಿಕ್ಷಕಿ ಸುಮಿತ್ರ, ವೇಣೂರು ಶಾಲೆಯ ಮುಖ್ಯೋಪಾಧ್ಯಾಯರಾದ ಶಾಂತಿರಾಜ್ ಜೈನ್, ವಿದ್ಯಾರ್ಥಿಗಳು, ಪೋಷಕರು, ಬೋಧಕ ಬೋಧಕೇತರ ಸಿಬ್ಬಂದಿಯವರು ಭಾಗವಹಿಸಿದ್ದರು.
ಎಕ್ಸೆಲ್ ಸಿಬ್ಬಂದಿಯಿಂದ ಸಾಂಸ್ಕೃತಿಕ ವೈಭವ: ಗಿರಿಜಾ ಕಲ್ಯಾಣ ಹಾಗೂ ತಾರಕಾಸುರ ವಧೆ ಯಕ್ಷಗಾನ ಪ್ರದರ್ಶನ
ಗುರು ನಮನ ಕಾರ್ಯಕ್ರಮದ ಅಂಗವಾಗಿ ಎಕ್ಸೆಲ್ ಶಿಕ್ಷಣ ಸಂಸ್ಥೆಗಳ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಯವರಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಆಯೋಜನೆಗೊಂಡಿದ್ದವು. ಎಕ್ಸೆಲ್ ಪಿಯು ಕಾಲೇಜಿನ ಸಿಬ್ಬಂದಿಯ ಜೊತೆಗೆ ಎಕ್ಸೆಲ್ ಟೆಕ್ನೋ ಸ್ಕೂಲ್ ಗುರುವಾಯನಕೆರೆ ಮತ್ತು ವೇಣೂರು ಶಾಲೆಗಳ ಸಿಬ್ಬಂದಿಯವರು ಭಾಗವಹಿಸಿದ್ದರು.
ಈ ಕಾರ್ಯಕ್ರಮದಲ್ಲಿ ಸಿಬ್ಬಂದಿ ವರ್ಗದವರು ವಿವಿಧ ನೃತ್ಯ,ಹಾಡು, ರೂಪಕ, ಭರತನಾಟ್ಯ ವೈವಿಧ್ಯಮಯ ಕಾರ್ಯಕ್ರಮಗಳನ್ನು ನಡೆಸಿಕೊಡುವ ಮೂಲಕ ಸರ್ವರನ್ನು ರೋಮಾಂಚನಗೊಳಿಸಿದರು. ಗಿರಿಜಾ ಕಲ್ಯಾಣ ಮತ್ತು ತಾರಕಾಸುರ ವಧೆ ಎನ್ನುವ ಯಕ್ಷಗಾನ ಪ್ರಸಂಗವನ್ನು ಪ್ರದರ್ಶಿಸಿದರು.
ಸ್ಥಳೀಯ
Dharmasthala-ಧರ್ಮಸ್ಥಳದಲ್ಲಿ 28ನೇ ವರ್ಷದ ಭಜನಾ ಕಮ್ಮಟ; ಶಿಬಿರಾರ್ಥಿಗಳಿಗೆ ಭಜನಾ ತರಬೇತಿ
ಶ್ರೀ ಕ್ಷೇತ್ರ ಧರ್ಮಸ್ಥಳದ ಮಹೋತ್ಸವ ಸಭಾಭವನದಲ್ಲಿ ಅ.02, ಶುಕ್ರವಾರದಂದು, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ವತಿಯಿಂದ ಆಯೋಜಿಸಲಾದ 28ನೇ ವರ್ಷದ ಭಜನಾ ಕಮ್ಮಟ ದ ಐದನೇ ದಿನದ ಅಂಗವಾಗಿ ಶಿಬಿರದಲ್ಲಿ ಉಪ್ಪುಂದ ರಾಜೇಶ್ ಪಡಿಯಾರ್ ಗಾಯಕರು, ಮೈಸೂರು ಇವರು ಎಲ್ಲಾ ಶಿಬಿರಾರ್ಥಿಗಳಿಗೆ ಭಜನಾ ತರಬೇತಿಯನ್ನು ನೀಡಿದರು.
ಶ್ರೀ ಕ್ಷೇತ್ರ ಧರ್ಮಸ್ಥಳದ ಮಹೋತ್ಸವ ಸಭಾಭವನದಲ್ಲಿ ಅ.02, ಶುಕ್ರವಾರದಂದು, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ವತಿಯಿಂದ ಆಯೋಜಿಸಲಾದ 28ನೇ ವರ್ಷದ ಭಜನಾ ಕಮ್ಮಟ ದ ಐದನೇ ದಿನದ ಅಂಗವಾಗಿ ಶಿಬಿರದಲ್ಲಿ ಉಪ್ಪುಂದ ರಾಜೇಶ್ ಪಡಿಯಾರ್ ಗಾಯಕರು, ಮೈಸೂರು ಇವರು ಎಲ್ಲಾ ಶಿಬಿರಾರ್ಥಿಗಳಿಗೆ ಭಜನಾ ತರಬೇತಿಯನ್ನು ನೀಡಿದರು.
ದಾಸ ಸಾಹಿತ್ಯದ ‘ಇಟ್ಹಾಂಗೆ ಇರುವೆನೋ ಹರಿಯೇ’, ಏಸು ಕಾಯಂಗಳ ಕಳೆದು’ ಹಾಗೂ ಇನ್ನಿತರ ಭಜನಾ ಕೀರ್ತನೆಗಳನ್ನು ತರಬೇತುದಾರರು ಅಭ್ಯಾಸ ಮಾಡಿಸಿದರು.
ಈ ಸಂದರ್ಭದಲ್ಲಿ ಸುಪ್ರಿಯಾ ಹರ್ಷೇಂದ್ರ ಕುಮಾರ್, ಐಶ್ವರ್ಯ ನಿಶ್ಚಲ್ ಜೈನ್ ಹಾಗೂ ಭಜನಾ ಕಮ್ಮಟ ಪರಿಷತ್ ನ ಸಂಚಾಲಕ ಸುಬ್ರಹ್ಮಣ್ಯ ಪ್ರಸಾದ್ ಉಪಸ್ಥಿತರಿದ್ದರು.
-
Uncategorized19 hours ago
ಪುತ್ತೂರು : ಬಾಡಿಗೆ ಮನೆಯಲ್ಲಿ ಮಲಗಿದ್ದ ಸ್ಥಿತಿಯಲ್ಲೇ ಯುವಕ ಸಾವು
-
Uncategorized21 hours ago
Puttur Court retaining wall collapse : ಹತ್ತು ತಿಂಗಳ ಹಿಂದಷ್ಟೇ ಉದ್ಘಾಟನೆ; ಪುತ್ತೂರು ಹೊಸ ನ್ಯಾಯಾಲಯದ ತಡೆಗೋಡೆ ಕುಸಿತ- ಕಾಮಗಾರಿಯ ಗುಣಮಟ್ಟದ ಬಗ್ಗೆ ಚರ್ಚೆ
-
ಮಂಗಳೂರು24 hours agoAuto passengers-ದಕ್ಷಿಣ ಕನ್ನಡದಲ್ಲಿ ಆಟೊ ಪ್ರಯಾಣಿಕರಿಗೆ ಮತ್ತೊಂದು ದರ ಏರಿಕೆ ಶಾಕ್: ಇಲ್ಲಿದೆ ಪರಿಷ್ಕೃತ ರೇಟ್ ಕಾರ್ಡ್
-
ಅಂತರ ರಾಜ್ಯ23 hours agoBlackmail-ದೋಸೆಯಲ್ಲಿ ಸತ್ತ ಇಲಿ ಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ದೂರು ನೀಡಿದ್ದ ಮಹಿಳೆಯಿಂದಲೇ ₹25 ಲಕ್ಷಕ್ಕೆ ಬ್ಲ್ಯಾಕ್ಮೇಲ್..!
-
ಬಿಗ್ ನ್ಯೂಸ್23 hours agoPuttur-ಪುತ್ತೂರು : ಕೋಟಿ- ಚೆನ್ನಯ KSRTC ಬಸ್ ನಿಲ್ದಾಣದ ನಿಲ್ದಾಣಾಧಿಕಾರಿಯಾಗಿ ಕೆ. ಭಾಸ್ಕರ ಶೆಟ್ಟಿ ಬಜನಿಗುತ್ತು ಪದೋನ್ನತಿ
-
Uncategorized7 hours ago
Naana Paatekar No More : ವ್ಯವಸ್ಥೆಯ ವಿರುದ್ಧದ ಧ್ವನಿಗೆ ರೂಪ ನೀಡಿದ, ತನ್ನ ಡೈಲಾಗ್ ನಿಂದಲೇ ಅಸಂಖ್ಯಾತ ಅಭಿಮಾನಿಗಳನ್ನು ಗಳಿಸಿದ್ದ ಅಭಿಜಾತ ಕಲಾವಿದ ನಾನಾಪಾಟೇಕರ್ ಇನ್ನಿಲ್ಲ
-
ಅಂತರ ರಾಜ್ಯ24 hours agoPremananda Ashram-ಪ್ರೇಮಾನಂದ ಆಶ್ರಮದ ಶಿಷ್ಯನ ಸಾವು ಪ್ರಕರಣಕ್ಕೆ ಟ್ವಿಸ್ಟ್: ರಕ್ತದ ಕಲೆ, ಸಿಸಿಟಿವಿ ದೃಶ್ಯಗಳ ಪರಿಶೀಲನೆ
-
ಸ್ಥಳೀಯ23 hours agoKalaburagi-ಕಲಬುರಗಿ: ಪತ್ನಿಯ ಕತ್ತು ಹಿಸುಕಿ ಹತ್ಯೆ; ಆತ್ಮಹತ್ಯೆಯಂತೆ ಬಿಂಬಿಸಲು ಯತ್ನಿಸಿದ ಪತಿ ಬಂಧನ


















