ದೆಹಲಿಯ ಕೆಂಪು ಕೋಟೆ […]" /> ದೆಹಲಿಯ ಕೆಂಪು ಕೋಟೆ […]"> Delhi Blast | ಕೆಂಪುಕೋಟೆ ಬಳಿ ಸ್ಫೋಟ 'ಭಯೋತ್ಪಾದಕ ಘಟನೆ' : ಮೋದಿ ಸರ್ಕಾರ ಘೋಷಣೆ : ಹುಂಡೈ ಐ20 ಕಾರು ಮಾರಾಟ ಮಾಡಿದ ಅಮಿತ್ ವಶಕ್ಕೆ : ಹಲವು ಸೆಕೆಂಡ್ ಹ್ಯಾಂಡ್ ಕಾರು ಮಾರಾಟಗಾರರ ಬಗ್ಗೆ ತೀವ್ರ ವಿಚಾರಣೆ - Nikhara News | Kannada News Website
Connect with us

ಬಿಗ್ ನ್ಯೂಸ್

Delhi Blast | ಕೆಂಪುಕೋಟೆ ಬಳಿ ಸ್ಫೋಟ ‘ಭಯೋತ್ಪಾದಕ ಘಟನೆ’ : ಮೋದಿ ಸರ್ಕಾರ ಘೋಷಣೆ : ಹುಂಡೈ ಐ20 ಕಾರು ಮಾರಾಟ ಮಾಡಿದ ಅಮಿತ್ ವಶಕ್ಕೆ : ಹಲವು ಸೆಕೆಂಡ್ ಹ್ಯಾಂಡ್ ಕಾರು ಮಾರಾಟಗಾರರ ಬಗ್ಗೆ ತೀವ್ರ ವಿಚಾರಣೆ

Published

on

Ad Widget

Ad Widget

Ad Widget

Ad Widget

ನವದೆಹಲಿ: ದೆಹಲಿಯ ಕೆಂಪುಕೋಟೆ ಬಳಿ ಸೋಮವಾರ ನಡೆದ ಕಾರು ಸ್ಫೋಟವನ್ನು (Delhi Blast) ‘ಭಯೋತ್ಪಾದಕ ಘಟನೆ’ ಎಂದು ಕರೆದಿರುವ ಕೇಂದ್ರ ಸರ್ಕಾರ, ಈ ಪ್ರಕರಣವನ್ನು ತನಿಖಾ ಸಂಸ್ಥೆಗಳು ಅತ್ಯಂತ ತ್ವರಿತ ಮತ್ತು ವೃತ್ತಿಪರತೆಯಿಂದ ನಿಭಾಯಿಸಬೇಕು ಹಾಗೂ ತಪ್ಪಿತಸ್ಥರ ವಿರುದ್ಧ ವಿಳಂಬವಿಲ್ಲದೆ ಕ್ರಮ ತೆಗೆದುಕೊಳ್ಳಬೇಕು ಎಂದು ನಿರ್ದೇಶಿಸಿದೆ.

Ad Widget

Ad Widget

Ad Widget

Ad Widget

ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಬುಧವಾರ ನಡೆದ ಸಂಪುಟ ಸಭೆಯಲ್ಲಿ, ಭಯೋತ್ಪಾದನೆ ವಿರುದ್ಧ ಶೂನ್ಯ ಸಹಿಷ್ಣು ನೀತಿಗೆ ಭಾರತ ಬದ್ಧವಾಗಿದೆ ಎಂದು ಪುನರುಚ್ಚರಿಸಲಾಯಿತು.

Ad Widget

Ad Widget alt="Ad Widget"/>

Ad Widget

ದೆಹಲಿಯ ಕೆಂಪು ಕೋಟೆ ಬಳಿ ನಡೆದ ಸ್ಫೋಟಕ್ಕೆ ಸಂಬಂಧಿಸಿದಂತೆ ಫರೀದಾಬಾದ್ ಮೂಲದ ಕಾರ್ ಡೀಲರ್ ಒಬ್ಬರನ್ನು ವಿಶೇಷ ದಳ ವಶಕ್ಕೆ ಪಡೆದಿದೆ. ಫರೀದಾಬಾದ್‌ ಪೊಲೀಸರ ನೆರವಿನೊಂದಿಗೆ ಅವರನ್ನು ಸೋಮವಾರ ರಾತ್ರಿ ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸ್ ಮೂಲಗಳು ಬುಧವಾರ ತಿಳಿಸಿವೆ.

Ad Widget

Ad Widget <> Ad Widget

ಫರೀದಾಬಾದ್ ಸೆಕ್ಟರ್ 37ರ ರೋಯಲ್ ಕಾರ್ ಪ್ಲಾಜಾದ ಮಾಲೀಕ ಅಮಿತ್ ಬಂಧಿತ ವ್ಯಕ್ತಿ. ಸೋಮವಾರ ಕೆಂಪು ಕೋಟೆಯ ಬಳಿ ನಡೆದ ಪ್ರಬಲ ಸ್ಪೋಟದಲ್ಲಿ ಬಳಕೆಯಾದ ಹುಂಡೈ ಐ20 ಕಾರನ್ನು ಮಾರಾಟ ಮಾಡಲು ಅಮಿತ್ ನೆರವಾಗಿದ್ದರು ಎಂದು ಆರೋಪಿಸಲಾಗಿದೆ.

‘ಅಮಿತ್ ಅವರನ್ನು ವಿಚಾರಣೆ ನಡೆಸಲಾಗುತ್ತಿದೆ. ಸ್ಪೋಟಕ್ಕೆ ಬಳಸಲಾದ ಹುಂಡೈ ಐ20 ಕಾರು ಶಂಕಿತರ ಕೈಗೆ ಹೇಗೆ ದೊರಕಿತು ಎಂಬ ಬಗ್ಗೆ ಮತ್ತು ಅದರ ಮಾಲೀಕರು ಯಾರಾಗಿದ್ದರು ಎಂದು ಪತ್ತೆಹಚ್ಚಲಾಗುತ್ತಿದೆ. ಶೋರೂಂಗೆ ಕಾರನ್ನು ಯಾರು ತಂದರು ಮತ್ತು ಡಾ. ಉಮ‌ರ್ ನಬಿ ಯಾರ ಮೂಲಕ ಅಮಿತ್ ಅವರನ್ನು ಸಂಪರ್ಕಿಸಿದರು ಎಂದನ್ನು ನಾವು ಪರಿಶೀಲಿಸುತ್ತಿದ್ದೇವೆ’ ಎಂದು ಮೂಲಗಳು ತಿಳಿಸಿವೆ.

Ad Widget

Ad Widget

ತನಿಖೆಯ ಭಾಗವಾಗಿ ದೆಹಲಿ ಮತ್ತು ಪಕ್ಕದ ರಾಜ್ಯಗಳ ಎಲ್ಲಾ ಸೆಕೆಂಡ್ ಹ್ಯಾಂಡ್ ಕಾರ್ ಡೀಲರ್‌ಗಳಿಗೆ, ಇತ್ತೀಚೆಗೆ ನಡೆಸಿದ ವಾಹನ ಮಾರಾಟದ ವಿವರಗಳನ್ನು ಪರಿಶೀಲಿಸಲು ಮತ್ತು ಮಾಹಿತಿ ಹಂಚಿಕೊಳ್ಳುವಂತೆ ನಿರ್ದೇಶನ ನೀಡಲಾಗಿದೆ ಎಂದು ಅಧಿಕಾರಿಗಳು ಬುಧವಾರ ಹೇಳಿದ್ದಾರೆ.

Ad Widget
Click to comment

Leave a Reply

ಬಿಗ್ ನ್ಯೂಸ್

Heavy rain-ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಅಬ್ಬರ: ಚಿಂತಾಮಣಿಯಲ್ಲಿ 54 ಮಿ.ಮೀ. ಮಳೆ ದಾಖಲು; ಕೋಲಾರ, ಬೆಂಗಳೂರು ಭಾಗದಲ್ಲೂ ವರ್ಷಧಾರೆ..!

Published

on

Ad Widget

Ad Widget

Ad Widget

Ad Widget

ರಾಜ್ಯದ ರಾಜಧಾನಿ ಬೆಂಗಳೂರು ಸೇರಿದಂತೆ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ದಕ್ಷಿಣ, ಕೋಲಾರ, ಚಿಕ್ಕಬಳ್ಳಾಪುರ ಹಾಗೂ ತುಮಕೂರು ಜಿಲ್ಲೆಗಳ ವಿವಿಧ ಭಾಗಗಳಲ್ಲಿ ಕಳೆದ 24 ಗಂಟೆಗಳಲ್ಲಿ ಉತ್ತಮ ಮಳೆಯಾಗಿದೆ. ಹಲವು ಕಡೆ 20ರಿಂದ 50 ಮಿ.ಮೀ.ಗೂ ಅಧಿಕ ಮಳೆ ದಾಖಲಾಗಿದ್ದು, ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲ್ಲೂಕಿನಲ್ಲಿ ಅತಿ ಹೆಚ್ಚು ಮಳೆಯಾಗಿದೆ.

Ad Widget

Ad Widget

Ad Widget

Ad Widget

ಬೆಂಗಳೂರು: ರಾಜ್ಯದ ರಾಜಧಾನಿ ಬೆಂಗಳೂರು ಸೇರಿದಂತೆ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ದಕ್ಷಿಣ, ಕೋಲಾರ, ಚಿಕ್ಕಬಳ್ಳಾಪುರ ಹಾಗೂ ತುಮಕೂರು ಜಿಲ್ಲೆಗಳ ವಿವಿಧ ಭಾಗಗಳಲ್ಲಿ ಕಳೆದ 24 ಗಂಟೆಗಳಲ್ಲಿ ಉತ್ತಮ ಮಳೆಯಾಗಿದೆ. ಹಲವು ಕಡೆ 20ರಿಂದ 50 ಮಿ.ಮೀ.ಗೂ ಅಧಿಕ ಮಳೆ ದಾಖಲಾಗಿದ್ದು, ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲ್ಲೂಕಿನಲ್ಲಿ ಅತಿ ಹೆಚ್ಚು ಮಳೆಯಾಗಿದೆ.

Ad Widget

Ad Widget alt="Ad Widget"/>

Ad Widget

ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಕೇಂದ್ರ ಬಿಡುಗಡೆ ಮಾಡಿರುವ ಅಂಕಿಅಂಶಗಳ ಪ್ರಕಾರ, ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲ್ಲೂಕಿನ ದೊಡ್ಡ ಗಂಜೂರಿನಲ್ಲಿ ಗರಿಷ್ಠ 54 ಮಿ.ಮೀ. ಮಳೆಯಾಗಿದೆ. ಕೋಲಾರ ಜಿಲ್ಲೆಯ ಶ್ರೀನಿವಾಸಪುರದಲ್ಲಿ 51 ಮಿ.ಮೀ. ಹಾಗೂ ಚಿಂತಾಮಣಿ ತಾಲ್ಲೂಕಿನ ಮುಂಗನಹಳ್ಳಿಯಲ್ಲಿ 47.5 ಮಿ.ಮೀ. ಮಳೆ ದಾಖಲಾಗಿದೆ.

Ad Widget

Ad Widget <> Ad Widget

ಬೆಂಗಳೂರು ದಕ್ಷಿಣ ಜಿಲ್ಲೆಯ ಮಾಗಡಿ ತಾಲ್ಲೂಕಿನ ಬಿಸ್ಕೂರಿನಲ್ಲಿ 47 ಮಿ.ಮೀ., ಹುಲ್ಲೇನಹಳ್ಳಿಯಲ್ಲಿ 46 ಮಿ.ಮೀ. ಹಾಗೂ ಅದರಂಗಿಯಲ್ಲಿ 42.5 ಮಿ.ಮೀ. ಮಳೆಯಾಗಿದೆ. ಬೆಂಗಳೂರು ಪಶ್ಚಿಮ ಭಾಗದ ಕೋನೇನ ಅಗ್ರಹಾರ ಮತ್ತು ಚಿಂತಾಮಣಿ ತಾಲ್ಲೂಕಿನ ಚಿನ್ನಸಂದ್ರದಲ್ಲಿ ತಲಾ 40 ಮಿ.ಮೀ. ಮಳೆ ಸುರಿದಿದೆ.

ಮಾಗಡಿ ತಾಲ್ಲೂಕಿನ ತಿಪ್ಪಸಂದ್ರ ಹಾಗೂ ಚಿಂತಾಮಣಿ ತಾಲ್ಲೂಕಿನ ಪೆರಮಂಚನಹಳ್ಳಿಯಲ್ಲಿ ತಲಾ 35.5 ಮಿ.ಮೀ., ಸಂಕಿಘಟ್ಟದಲ್ಲಿ 35 ಮಿ.ಮೀ. ಮಳೆಯಾಗಿದೆ. ಆನೇಕಲ್ ತಾಲ್ಲೂಕಿನ ನೇರಿಗದಲ್ಲಿ 33.5 ಮಿ.ಮೀ., ಚಿಂತಾಮಣಿ ತಾಲ್ಲೂಕಿನ ಕೈವಾರದಲ್ಲಿ 33 ಮಿ.ಮೀ. ಹಾಗೂ ಚಿಂತಾಮಣಿಯಲ್ಲಿ 32.8 ಮಿ.ಮೀ. ಮಳೆ ದಾಖಲಾಗಿದೆ.

Ad Widget

Ad Widget

ಬೆಂಗಳೂರು ನಗರದ ದಾಸನಪುರದಲ್ಲಿ 29 ಮಿ.ಮೀ., ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲ್ಲೂಕಿನ ಜೆ.ತಿಮ್ಮಸಂದ್ರದಲ್ಲಿ 28.5 ಮಿ.ಮೀ., ಅರಿಕುಂಟೆಯಲ್ಲಿ 27.5 ಮಿ.ಮೀ. ಹಾಗೂ ಮಾಗಡಿ ತಾಲ್ಲೂಕಿನ ಕುದೂರಿನಲ್ಲಿ 27.25 ಮಿ.ಮೀ. ಮಳೆಯಾಗಿದೆ.

ತುಮಕೂರು ಜಿಲ್ಲೆಯ ಪಾವಗಡ ತಾಲ್ಲೂಕಿನ ವಿರುಪಸಮುದ್ರದಲ್ಲಿ 26 ಮಿ.ಮೀ. ಹಾಗೂ ಮಧುಗಿರಿ ತಾಲ್ಲೂಕಿನ ಬೇಡತೂರಿನಲ್ಲಿ 25.5 ಮಿ.ಮೀ. ಮಳೆ ದಾಖಲಾಗಿದೆ. ಬೆಂಗಳೂರಿನ ದೊಮ್ಮಲೂರು ಮತ್ತು ಚಿಂತಾಮಣಿ ತಾಲ್ಲೂಕಿನ ಮಾಸ್ತೇನಹಳ್ಳಿಯಲ್ಲಿ ತಲಾ 24.5 ಮಿ.ಮೀ. ಮಳೆಯಾಗಿದೆ.

ಇನ್ನು ಚಿಂತಾಮಣಿ ತಾಲ್ಲೂಕಿನ ತಳಗವಾರದಲ್ಲಿ 23.5 ಮಿ.ಮೀ., ಮುರುಗಮಲೆಯಲ್ಲಿ 23.25 ಮಿ.ಮೀ. ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲ್ಲೂಕಿನ ವೆಂಕಟಾಪುರದಲ್ಲಿ 23 ಮಿ.ಮೀ. ಮಳೆಯಾಗಿದೆ.

ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲ್ಲೂಕಿನ ಪುಳಗುರುಕೋಟೆ ಹಾಗೂ ಗೌರಿಬಿದನೂರು ತಾಲ್ಲೂಕಿನ ಮೆಲ್ಯಾದಲ್ಲಿ ತಲಾ 22.75 ಮಿ.ಮೀ. ಮಳೆ ಸುರಿದಿದೆ. ಬೆಂಗಳೂರಿನ ಚಿಕ್ಕಬಾಣಾವರ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲ್ಲೂಕಿನ ಅರಿಶಿನಕುಂಟೆಯಲ್ಲಿ ತಲಾ 22.5 ಮಿ.ಮೀ. ಮಳೆಯಾಗಿದೆ.

ಶ್ರೀನಿವಾಸಪುರ ತಾಲ್ಲೂಕಿನ ನಂಬಿಹಳ್ಳಿ ಮತ್ತು ಶಿಡ್ಲಘಟ್ಟದಲ್ಲಿ ತಲಾ 22 ಮಿ.ಮೀ., ಬೆಂಗಳೂರಿನ ಲಕ್ಕಸಂದ್ರ, ವನ್ನಾರಪೇಟೆ ಹಾಗೂ ನೆಲಮಂಗಲ ತಾಲ್ಲೂಕಿನ ಶ್ರೀನಿವಾಸಪುರದಲ್ಲಿ ತಲಾ 21.5 ಮಿ.ಮೀ. ಮಳೆಯಾಗಿದೆ.

ಆನೇಕಲ್ ತಾಲ್ಲೂಕಿನ ಮುಗಳೂರು ಮತ್ತು ನೆಲಮಂಗಲ ತಾಲ್ಲೂಕಿನ ವಿಶ್ವೇಶ್ವರಪುರದಲ್ಲಿ ತಲಾ 21 ಮಿ.ಮೀ. ಮಳೆಯಾಗಿದ್ದರೆ, ಮಾಗಡಿ ತಾಲ್ಲೂಕಿನ ಲಕ್ಕೇನಹಳ್ಳಿಯಲ್ಲಿ 20.75 ಮಿ.ಮೀ. ಮಳೆ ದಾಖಲಾಗಿದೆ.

ನೆಲಮಂಗಲ ತಾಲ್ಲೂಕಿನ ಅರೆಬೊಮ್ಮನಹಳ್ಳಿ ಹಾಗೂ ಚಿಂತಾಮಣಿ ತಾಲ್ಲೂಕಿನ ಬುರುದಗುಂಟೆಯಲ್ಲಿ ತಲಾ 20.5 ಮಿ.ಮೀ., ಚಿಕ್ಕಬಳ್ಳಾಪುರ ತಾಲ್ಲೂಕಿನ ದೊಡ್ಡಪೈಲಗುರ್ಕಿಯಲ್ಲಿ 20 ಮಿ.ಮೀ. ಹಾಗೂ ಮಾಗಡಿ ತಾಲ್ಲೂಕಿನ ಬಾಣವಾಡಿಯಲ್ಲಿ 19.5 ಮಿ.ಮೀ. ಮಳೆಯಾಗಿದೆ.

Ad Widget
Continue Reading

ಅಂತರ ರಾಜ್ಯ

Sabarimala-ಶಬರಿಮಲೆ: ದೇವಸ್ಥಾನ ಹಾಗೂ ಅಂಗಡಿಗಳ ಮೇಲೆ ಅಧಿಕಾರಿಗಳ ದಿಢೀರ್ ದಾಳಿ; ಅಂಗಡಿಗಳಿಗೆ ₹1 ಲಕ್ಷ ದಂಡ

Published

on

Ad Widget

Ad Widget

Ad Widget

Ad Widget

ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಪ್ರಸಕ್ತ ವರ್ಷದ ಮಂಡಲ ತೀರ್ಥಯಾತ್ರೆ ಆರಂಭವಾಗುತ್ತಿದ್ದಂತೆ ಅಧಿಕಾರಿಗಳು ಕಟ್ಟುನಿಟ್ಟಿನ ತಪಾಸಣೆ ಕೈಗೊಂಡಿದ್ದಾರೆ. ಯಾತ್ರೆಯ ಮೊದಲ ವಾರದಲ್ಲೇ ದೇವಸ್ಥಾನ ಹಾಗೂ ಸುತ್ತಮುತ್ತಲಿನ ಅಂಗಡಿಗಳ ಮೇಲೆ ಜಂಟಿ ತಪಾಸಣಾ ತಂಡ ದಾಳಿ ನಡೆಸಿದ್ದು, ವಿವಿಧ ನಿಯಮ ಉಲ್ಲಂಘನೆಗಳಿಗೆ ಸಂಬಂಧಿಸಿದಂತೆ 29 ಪ್ರಕರಣ ದಾಖಲಿಸಿ ಒಟ್ಟು 1 ಲಕ್ಷ ರೂಪಾಯಿ ದಂಡ ವಿಧಿಸಿದೆ.

Ad Widget

Ad Widget

Ad Widget

Ad Widget

ಪತ್ತನಂತಿಟ್ಟ (ಕೇರಳ): ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಪ್ರಸಕ್ತ ವರ್ಷದ ಮಂಡಲ ತೀರ್ಥಯಾತ್ರೆ ಆರಂಭವಾಗುತ್ತಿದ್ದಂತೆ ಅಧಿಕಾರಿಗಳು ಕಟ್ಟುನಿಟ್ಟಿನ ತಪಾಸಣೆ ಕೈಗೊಂಡಿದ್ದಾರೆ. ಯಾತ್ರೆಯ ಮೊದಲ ವಾರದಲ್ಲೇ ದೇವಸ್ಥಾನ ಹಾಗೂ ಸುತ್ತಮುತ್ತಲಿನ ಅಂಗಡಿಗಳ ಮೇಲೆ ಜಂಟಿ ತಪಾಸಣಾ ತಂಡ ದಾಳಿ ನಡೆಸಿದ್ದು, ವಿವಿಧ ನಿಯಮ ಉಲ್ಲಂಘನೆಗಳಿಗೆ ಸಂಬಂಧಿಸಿದಂತೆ 29 ಪ್ರಕರಣ ದಾಖಲಿಸಿ ಒಟ್ಟು 1 ಲಕ್ಷ ರೂಪಾಯಿ ದಂಡ ವಿಧಿಸಿದೆ.

Ad Widget

Ad Widget alt="Ad Widget"/>

Ad Widget

ಸ್ಥಳೀಯ ಸ್ವಯಂ ಆಡಳಿತ, ಕಂದಾಯ, ಆರೋಗ್ಯ, ಆಹಾರ ಸುರಕ್ಷತೆ, ಕಾನೂನು ಮಾಪನಶಾಸ್ತ್ರ ಹಾಗೂ ನಾಗರಿಕ ಸರಬರಾಜು ಇಲಾಖೆಗಳ ಅಧಿಕಾರಿಗಳನ್ನು ಒಳಗೊಂಡ ಜಂಟಿ ತಂಡ ನಿರಂತರ ತಪಾಸಣೆ ನಡೆಸುತ್ತಿದೆ. ರಾತ್ರಿ ವೇಳೆಯೂ ಕಾರ್ಯಾಚರಣೆ ಮುಂದುವರಿಸಲಾಗುತ್ತಿದೆ.

Ad Widget

Ad Widget <> Ad Widget

ಹೋಟೆಲ್‌ಗಳು ಹಾಗೂ ಆಹಾರ ಮಳಿಗೆಗಳಲ್ಲಿ ಕಂಡುಬಂದ ಅಶುಚಿತ್ವ, ಸಿಬ್ಬಂದಿ ಕೈಗವಸು ಮತ್ತು ತಲೆಯ ಕವಚ ಧರಿಸದಿರುವುದು, ಅಡುಗೆಮನೆಗಳ ಸ್ವಚ್ಛತೆ ಕಾಪಾಡದಿರುವುದು ಸೇರಿದಂತೆ ಹಲವು ಉಲ್ಲಂಘನೆಗಳು ಪತ್ತೆಯಾಗಿವೆ. ಅಲ್ಲದೆ, ನಿಗದಿತ ದರಕ್ಕಿಂತ ಹೆಚ್ಚಿನ ಬೆಲೆಗೆ ವಸ್ತುಗಳನ್ನು ಮಾರಾಟ ಮಾಡುವುದು ಹಾಗೂ ತೂಕ ಮತ್ತು ಅಳತೆಯಲ್ಲಿ ವಂಚನೆ ಮಾಡುವ ಅಂಗಡಿಗಳ ವಿರುದ್ಧವೂ ಕ್ರಮ ಕೈಗೊಳ್ಳಲಾಗಿದೆ.

ಭಾನುವಾರ ಸನ್ನಿಧಾನದಲ್ಲಿರುವ ಹೋಟೆಲ್‌ವೊಂದರಲ್ಲಿ ಸಂಗ್ರಹಿಸಿಟ್ಟಿದ್ದ ಹಳಸಿದ ಆಹಾರವನ್ನು ಅಧಿಕಾರಿಗಳು ಪತ್ತೆಹಚ್ಚಿ ವಶಪಡಿಸಿಕೊಂಡು ನಾಶಪಡಿಸಿದ್ದಾರೆ. ಈ ಸಂಬಂಧ ಹೋಟೆಲ್‌ಗೆ ದಂಡವನ್ನೂ ವಿಧಿಸಲಾಗಿದೆ.

Ad Widget

Ad Widget

ಇದಲ್ಲದೆ, ಕೊಳೆತ ಹಣ್ಣುಗಳ ಕೆಟ್ಟ ಭಾಗವನ್ನು ಮಾತ್ರ ತೆಗೆದು ಉಳಿದ ಭಾಗದಿಂದ ಜ್ಯೂಸ್ ತಯಾರಿಸುವಂತಿಲ್ಲ. ಹಣ್ಣು ಕೊಳೆತಿದ್ದರೆ ಸಂಪೂರ್ಣ ಹಣ್ಣನ್ನೇ ವಿಲೇವಾರಿ ಮಾಡಬೇಕು ಎಂದು ಅಧಿಕಾರಿಗಳು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ಒಟ್ಟು ಮೂರು ತಂಡಗಳು ಕಾರ್ಯಾಚರಣೆಯಲ್ಲಿ ತೊಡಗಿದ್ದು, ಆಹಾರ ಮಳಿಗೆಗಳ ತಪಾಸಣೆಯ ಜತೆಗೆ ಅಯ್ಯಪ್ಪ ಭಕ್ತರನ್ನು ನೇರವಾಗಿ ಭೇಟಿಯಾಗಿ ಅವರ ಅಭಿಪ್ರಾಯ ಹಾಗೂ ದೂರುಗಳನ್ನು ಆಲಿಸುತ್ತಿವೆ. ದೂರುಗಳಿಗೆ ತಕ್ಷಣ ಸ್ಪಂದಿಸಿ ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮಂಡಲ ಮತ್ತು ಮಕರವಿಳಕ್ಕು ಯಾತ್ರೆಯ ವೇಳಾಪಟ್ಟಿ
ವಾರ್ಷಿಕ ಮಂಡಲ ತೀರ್ಥಯಾತ್ರೆ ಹಿನ್ನೆಲೆಯಲ್ಲಿ ನವೆಂಬರ್ 17ರಂದು ಶಬರಿಮಲೆ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಬಾಗಿಲು ತೆರೆಯಲಾಗಿದೆ. ಡಿಸೆಂಬರ್ 27ರಂದು ಮಂಡಲ ಪೂಜೆ ನಡೆಯಲಿದ್ದು, ಬಳಿಕ ಒಂದು ದಿನದ ಮಟ್ಟಿಗೆ ದೇವಸ್ಥಾನ ಮುಚ್ಚಲಿದೆ.

ನಂತರ ಮಕರವಿಳಕ್ಕು ತೀರ್ಥಯಾತ್ರೆಗಾಗಿ ಡಿಸೆಂಬರ್ 30ರಂದು ಸಂಜೆ 5 ಗಂಟೆಗೆ ಮತ್ತೆ ದೇವಸ್ಥಾನದ ಬಾಗಿಲು ತೆರೆಯಲಾಗುತ್ತದೆ. ಜನವರಿ 14ರಂದು ಮಕರವಿಳಕ್ಕು ಉತ್ಸವ ನಡೆಯಲಿದ್ದು, ಜನವರಿ 19ರವರೆಗೆ ಭಕ್ತರಿಗೆ ದರ್ಶನಕ್ಕೆ ಅವಕಾಶವಿರುತ್ತದೆ. ಜನವರಿ 20ರಂದು ದೇವಸ್ಥಾನದ ಬಾಗಿಲು ಮುಚ್ಚಲಿದೆ.

Ad Widget
Continue Reading

ಅಂತರ ರಾಜ್ಯ

RBI-ಡಿಜಿಟಲ್ ವಂಚನೆಗೆ ಆರ್‌ಬಿಐ ಬ್ರೇಕ್: ಖಾತೆಯ ಹಣ ವರ್ಗಾವಣೆ ತಕ್ಷಣವೇ ಸ್ಥಗಿತಗೊಳಿಸುವ ‘ಸ್ಟಾಪ್ ಸ್ವಿಚ್’ ಪ್ರಸ್ತಾಪ..!

Published

on

Ad Widget

Ad Widget

Ad Widget

Ad Widget

ದೇಶದಲ್ಲಿ ಹೆಚ್ಚುತ್ತಿರುವ ಡಿಜಿಟಲ್ ಬ್ಯಾಂಕಿಂಗ್ ವಂಚನೆಗಳಿಗೆ ಕಡಿವಾಣ ಹಾಕಲು ಹಾಗೂ ಗ್ರಾಹಕರಿಗೆ ತಮ್ಮ ಬ್ಯಾಂಕ್ ಖಾತೆಗಳ ಮೇಲೆ ಹೆಚ್ಚಿನ ನಿಯಂತ್ರಣ ಒದಗಿಸಲು ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ಹೊಸ ಸುರಕ್ಷತಾ ಕ್ರಮಗಳನ್ನು ಜಾರಿಗೆ ತರುವ ನಿಟ್ಟಿನಲ್ಲಿ ಕರಡು ನಿಯಮಾವಳಿಗಳನ್ನು ಪ್ರಸ್ತಾಪಿಸಿದೆ.

Ad Widget

Ad Widget

Ad Widget

Ad Widget

ಮುಂಬೈ: ದೇಶದಲ್ಲಿ ಹೆಚ್ಚುತ್ತಿರುವ ಡಿಜಿಟಲ್ ಬ್ಯಾಂಕಿಂಗ್ ವಂಚನೆಗಳಿಗೆ ಕಡಿವಾಣ ಹಾಕಲು ಹಾಗೂ ಗ್ರಾಹಕರಿಗೆ ತಮ್ಮ ಬ್ಯಾಂಕ್ ಖಾತೆಗಳ ಮೇಲೆ ಹೆಚ್ಚಿನ ನಿಯಂತ್ರಣ ಒದಗಿಸಲು ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ಹೊಸ ಸುರಕ್ಷತಾ ಕ್ರಮಗಳನ್ನು ಜಾರಿಗೆ ತರುವ ನಿಟ್ಟಿನಲ್ಲಿ ಕರಡು ನಿಯಮಾವಳಿಗಳನ್ನು ಪ್ರಸ್ತಾಪಿಸಿದೆ.

Ad Widget

Ad Widget alt="Ad Widget"/>

Ad Widget

ಈ ಪ್ರಸ್ತಾವನೆಯ ಪ್ರಮುಖ ಅಂಶವೆಂದರೆ, ಗ್ರಾಹಕರು ತಮ್ಮ ಬ್ಯಾಂಕ್ ಖಾತೆಯಿಂದ ನಡೆಯುವ ಎಲ್ಲಾ ಡೆಬಿಟ್ ವಹಿವಾಟುಗಳು ಹಾಗೂ ಹೊಸ ಪಾವತಿ ಆದೇಶಗಳನ್ನು ತಕ್ಷಣವೇ ಸ್ಥಗಿತಗೊಳಿಸಲು ಅನುಕೂಲವಾಗುವ ‘ಸ್ಟಾಪ್ ಸ್ವಿಚ್’ ವ್ಯವಸ್ಥೆ. ಇದರಿಂದ ಅನುಮಾನಾಸ್ಪದ ವಹಿವಾಟುಗಳು ಅಥವಾ ವಂಚನೆಯ ಪ್ರಯತ್ನಗಳು ಕಂಡುಬಂದಾಗ ಗ್ರಾಹಕರು ತಕ್ಷಣವೇ ಹಣ ವರ್ಗಾವಣೆಯನ್ನು ತಡೆಯಲು ಸಾಧ್ಯವಾಗಲಿದೆ.

Ad Widget

Ad Widget <> Ad Widget

ಇದಲ್ಲದೆ, ಹೊಸದಾಗಿ ತೆರೆಯುವ ಬ್ಯಾಂಕ್ ಖಾತೆಗಳಲ್ಲಿ ಡಿಜಿಟಲ್ ಪಾವತಿ ಸೌಲಭ್ಯಗಳು ಆರಂಭದಲ್ಲಿ ನಿಷ್ಕ್ರಿಯವಾಗಿರಲಿವೆ. ಗ್ರಾಹಕರ ಸ್ಪಷ್ಟ ಒಪ್ಪಿಗೆ ಪಡೆದ ಬಳಿಕವಷ್ಟೇ ಈ ಸೌಲಭ್ಯಗಳನ್ನು ಸಕ್ರಿಯಗೊಳಿಸುವ ವ್ಯವಸ್ಥೆಯನ್ನು ಆರ್‌ಬಿಐ ಪ್ರಸ್ತಾಪಿಸಿದೆ.

ಗ್ರಾಹಕರು ತಮ್ಮ ವೈಯಕ್ತಿಕ ವಹಿವಾಟುಗಳಿಗೆ ಮಿತಿಯನ್ನು ತಾವೇ ನಿಗದಿಪಡಿಸಿಕೊಳ್ಳುವ ಅವಕಾಶವನ್ನೂ ಕಲ್ಪಿಸಲು ಉದ್ದೇಶಿಸಲಾಗಿದೆ. ಜತೆಗೆ, ಹೆಚ್ಚಿನ ಮೊತ್ತದ ಹಣ ವರ್ಗಾವಣೆಗಳಿಗೆ 18 ವರ್ಷ ಮೇಲ್ಪಟ್ಟ ವಿಶ್ವಾಸಾರ್ಹ ವ್ಯಕ್ತಿಯೊಬ್ಬರನ್ನು ಅನುಮೋದಕರನ್ನಾಗಿ ನೋಂದಾಯಿಸಿಕೊಳ್ಳುವ ವ್ಯವಸ್ಥೆಯನ್ನೂ ಪ್ರಸ್ತಾಪಿಸಲಾಗಿದೆ.

Ad Widget

Ad Widget

ಈ ವ್ಯವಸ್ಥೆಯಡಿ, ಗ್ರಾಹಕರು ನಿಗದಿಪಡಿಸಿದ ಹೆಚ್ಚಿನ ಮೊತ್ತದ ವಹಿವಾಟಿಗೆ ವಿಶ್ವಾಸಾರ್ಹ ವ್ಯಕ್ತಿ ಒಂದು ಗಂಟೆಯೊಳಗೆ ಅನುಮೋದನೆ ನೀಡಿದರೆ ಮಾತ್ರ ಹಣ ವರ್ಗಾವಣೆ ಪೂರ್ಣಗೊಳ್ಳಲಿದೆ.

ಈ ಕರಡು ನಿಯಮಾವಳಿಗಳ ಕುರಿತು ಸಾರ್ವಜನಿಕರು ಹಾಗೂ ಸಂಬಂಧಪಟ್ಟ ವಲಯಗಳಿಂದ ಡಿಸೆಂಬರ್ 14ರವರೆಗೆ ಆರ್‌ಬಿಐ ಅಭಿಪ್ರಾಯಗಳನ್ನು ಆಹ್ವಾನಿಸಿದೆ. ಪ್ರಸ್ತಾವಿತ ಸುರಕ್ಷತಾ ಕ್ರಮಗಳು ಅಂತಿಮವಾಗಿ ಅನುಮೋದನೆ ಪಡೆದು ಜಾರಿಗೆ ಬಂದಲ್ಲಿ, 2027ರ ಜುಲೈ 1ರಿಂದ ಅನುಷ್ಠಾನಗೊಳ್ಳುವ ಸಾಧ್ಯತೆಯಿದೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!