ಉಡುಪಿ
Raghupratid Bhat-ಪಕ್ಷಕ್ಕೆ ಮೋದಿಗೆ ಬೈದವರಿಗೆ ಪುನಃ ಟಿಕೇಟ್ ನೀಡಲಾಗ್ತದೆ : ಸಂಯಮದ ಪಾಠ ಸಾಮಾನ್ಯ ಕಾರ್ಯಕರ್ತರಿಗೆ ಅಗತ್ಯ ಇಲ್ಲ ನಾಯಕರಿಗೆ ಮಾಡಿ – ಯಡಿಯೂರಪ್ಪ ಮನೆಯಿಂದ ಒಬ್ಬರಿಗೆ ಮಾತ್ರ ಟಿಕೇಟ್ ನೀಡಿ : ರಘುಪತಿ ಭಟ್
ನಗರಸಭೆ ವ್ಯಾಪ್ತಿಯ ಪ್ರಮುಖ ವೃತ್ತಗಳಲ್ಲಿ ಆಧುನಿಕ ತಂತ್ರಜ್ಞಾನ ಆಧಾರಿತ ಸಿಗ್ನಲ್ ಅಳವಡಿಕೆಗೆ ಟೆಂಡರ್ ಪ್ರಕ್ರಿಯೆ ನಡೆದಿರುವಾಗಲೇ, ದುಬಾರಿ ವೆಚ್ಚದಲ್ಲಿ ಸಾಮಾನ್ಯ ಸಿಗ್ನಲ್‌ಗಳನ್ನು ಅಳವಡಿಸುವ ಮೂಲಕ ನಗರಸಭೆಯ ಆರ್ಥಿಕ ನಷ್ಟಕ್ಕೆ ದಾರಿಯಾಗಿದೆ ಎಂದು ಮಾಜಿ ಶಾಸಕ ಕೆ. ರಘುಪತಿ ಭಟ್ ಆರೋಪಿಸಿದ್ದಾರೆ.
ಉಡುಪಿ: ನಗರಸಭೆ ವ್ಯಾಪ್ತಿಯ ಪ್ರಮುಖ ವೃತ್ತಗಳಲ್ಲಿ ಆಧುನಿಕ ತಂತ್ರಜ್ಞಾನ ಆಧಾರಿತ ಸಿಗ್ನಲ್ ಅಳವಡಿಕೆಗೆ ಟೆಂಡರ್ ಪ್ರಕ್ರಿಯೆ ನಡೆದಿರುವಾಗಲೇ, ದುಬಾರಿ ವೆಚ್ಚದಲ್ಲಿ ಸಾಮಾನ್ಯ ಸಿಗ್ನಲ್‌ಗಳನ್ನು ಅಳವಡಿಸುವ ಮೂಲಕ ನಗರಸಭೆಯ ಆರ್ಥಿಕ ನಷ್ಟಕ್ಕೆ ದಾರಿಯಾಗಿದೆ ಎಂದು ಮಾಜಿ ಶಾಸಕ ಕೆ. ರಘುಪತಿ ಭಟ್ ಆರೋಪಿಸಿದ್ದಾರೆ.
2020ರಲ್ಲಿ ಆಧುನಿಕ ಸಿಗ್ನಲ್ ಅಳವಡಿಕೆ ಕುರಿತು ಚರ್ಚೆಯಾಗಿ, ನಗರಸಭೆ ಸಾಮಾನ್ಯ ಸಭೆಯಲ್ಲಿ ತೀರ್ಮಾನವೂ ಆಗಿತ್ತು. ಮಣಿಪಾಲ ಮತ್ತು ಕಲ್ಸಂಕದಲ್ಲಿ ಟ್ರಾಫಿಕ್ ಪೋಲ್‌ಗಳನ್ನು ಅಳವಡಿಸಲಾಗಿತ್ತು. ಆದರೆ, ನಗರಸಭೆ ಕಾರಣವಿಲ್ಲದೆ ಕಾಮಗಾರಿ ಸ್ಥಗಿತಕ್ಕೆ ಸೂಚನೆ ನೀಡಿದೆ. ಶಾಸಕರ ಒತ್ತಡಕ್ಕೆ ಮಣಿದು ನಗರಸಭೆ ಈ ನಿರ್ಧಾರ ಕೈಗೊಂಡಿದೆ ಎಂದು ಭಟ್ ಮಂಗಳವಾರ ನಡೆದ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ನಗರಸಭೆಯಲ್ಲಿ ಈಗ ಜನಪ್ರತಿನಿಧಿಗಳ ಆಡಳಿತ ಇಲ್ಲದಿರುವುದರಿಂದ, ಅಧಿಕಾರಿಗಳು ಒಂದು ಟೆಂಡರ್ ಇರುವಾಗ ಹೊಸ ಟೆಂಡರ್ ಹೇಗೆ ಕರೆಯಲು ಸಾಧ್ಯ ಎಂದು ಭಟ್ ಪ್ರಶ್ನಿಸಿದರು. ಈ ಕುರಿತು ನಗರಸಭೆಯ ಆಡಳಿತಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ. ಅವರ ಗಮನಕ್ಕೆ ತರಲಾಗಿದೆ ಎಂದರು. ಟೆಂಡರ್ ಪ್ರಕ್ರಿಯೆಯಲ್ಲಿನ ಲೋಪದೋಷಗಳ ಕುರಿತು ಕಾನೂನು ಹೋರಾಟ, ಲೋಕಾಯುಕ್ತಕ್ಕೆ ದೂರು ಅಥವಾ ಮೇಲಾಧಿಕಾರಿಗಳಿಗೆ ದೂರು ನೀಡುವ ಕುರಿತು ನಿರ್ಧರಿಸಲಾಗುವುದು ಎಂದು ಭಟ್ ಹೇಳಿದರು.
ಹಲವು ಕೋಟಿ ರೂಪಾಯಿ ಹೂಡಿಕೆ ಮಾಡಿರುವ ಟೆಂಡರ್ ಪಡೆದ ಸಂಸ್ಥೆಗೆ ವಾರ್ಷಿಕ ಕೋಟ್ಯಂತರ ರೂಪಾಯಿ ಆದಾಯ ಬರುತ್ತಿತ್ತು. ಯಾವುದೇ ವೈಜ್ಞಾನಿಕ ಲೋಪ ದೋಷಗಳನ್ನು ತಿಳಿಸದೆ 33 ಲಕ್ಷ ರೂ.ಗಳ ಹೊಸ ಟೆಂಡರ್ ಕರೆದು ಕಾಮಗಾರಿ ನಡೆಸಲಾಗುತ್ತಿದೆ. ಸಿಗ್ನಲ್ ಅಳವಡಿಕೆಯಲ್ಲೂ ಯಾವುದೇ ಆಧುನಿಕ ತಂತ್ರಜ್ಞಾನ ಇಲ್ಲ ಎಂದು ಭಟ್ ದೂರಿದರು.
ಯಾಕೆ ವಿರೋಧ ಗೊತ್ತಿಲ್ಲ
ಆಧುನಿಕ ಸಿಗ್ನಲ್ ವ್ಯವಸ್ಥೆಯ ಬಗ್ಗೆ ಸ್ಥಳೀಯ ಶಾಸಕರಿಗೆ ಸಂಪೂರ್ಣ ಮಾಹಿತಿ ನೀಡಿದ್ದರೂ, ಅವರು ಯಾಕೆ ವಿರೋಧಿಸುತ್ತಿದ್ದಾರೆ ಎಂದು ಗೊತ್ತಿಲ್ಲ ಎಂದು ರಘುಪತಿ ಭಟ್ ಹೇಳಿದರು. ಜಿಲ್ಲಾಧಿಕಾರಿ, ಎಸ್‌ಪಿ ನೇತೃತ್ವದಲ್ಲಿ ಹಲವು ಸಭೆಗಳು ನಡೆದು ಎಲ್ಲ ರೀತಿಯ ಒಪ್ಪಿಗೆಯೂ ಸಿಕ್ಕಿದೆ. ಆದರೂ ನಗರಸಭೆ ಕಾಮಗಾರಿಗೆ ಅವಕಾಶ ನೀಡಿಲ್ಲ. ಗುತ್ತಿಗೆ ಪಡೆದ ಸಂಸ್ಥೆಯೂ ಕಾನೂನು ಹೋರಾಟ ಮಾಡುವ ಸಾಧ್ಯತೆಯಿದೆ ಎಂದು ಭಟ್ ತಿಳಿಸಿದರು. ಮಹೇಶ್ ಠಾಕೂರ್ ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.
ಬಿಜೆಪಿ ಪಕ್ಷ ನನ್ನನ್ನು ಮೂರು ಬಾರಿ ಶಾಸಕನನ್ನಾಗಿ ಮಾಡಿದೆ. ಪಕ್ಷದಿಂದಾಗಿ ನಾನು ಬೆಳೆದಿದ್ದೇನೆ ಹಾಗೂ ಪಕ್ಷವನ್ನು ನಾನು ಬೆಳೆಸಿದ್ದೇನೆ ಎಂದು ಮಾಜಿ ಶಾಸಕ ಕೆ. ರಘುಪತಿ ಭಟ್ ಹೇಳಿದರು. ಇತ್ತೀಚೆಗೆ ನಡೆದ ಬಿಜೆಪಿ ಜಿಲ್ಲಾ ಕಚೇರಿ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಬಿಜೆಪಿ ರಾಷ್ಟ್ರೀಯ ಮುಖಂಡರೊಬ್ಬರು ಬಿಜೆಪಿ ಕಾರ್ಯಕರ್ತರಿಗೆ ಸಂಯಮಬೇಕು ಎಂದು ಭಾಷಣ ಮಾಡಿದ್ದಾರೆ. ರಾಷ್ಟ್ರೀಯ ನಾಯಕರು ಉಡುಪಿಗೆ ಬಂದು ಸಂಯಮದ ಪಾಠ ಮಾಡುವ ಬದಲು, ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ವಿಪಕ್ಷ ನಾಯಕ ಆರ್. ಅಶೋಕ್ ಅವರಿಗೆ ಈ ಪಾಠ ಮಾಡಲಿ ಎಂದರು.
ಯಡಿಯೂರಪ್ಪ ಮನೆಯಿಂದ ಒಬ್ಬರಿಗೆ ಮಾತ್ರ ಟಿಕೇಟ್ ನೀಡಿ
ಬಿ.ಎಸ್. ಯಡಿಯೂರಪ್ಪ ಅವರಿಗೆ ಹೇಳಿ, ಮುಂದಿನ ಬಾರಿ ಮನೆಯಿಂದ ಒಬ್ಬರು ಮಾತ್ರ ಜನಪ್ರತಿನಿಧಿಯಾದರೆ ಸಾಕು ಎನ್ನಲಿ. ಒಬ್ಬ ಮಗ ಸಂಸದ, ಇನ್ನೊಬ್ಬ ಮಗ ಶಾಸಕನಾಗುವುದು ಬೇಡ. ಒಂದು ಸ್ಥಾನಕ್ಕೆ ಸಾಮಾನ್ಯ ಕಾರ್ಯಕರ್ತನಿಗೆ ಟಿಕೆಟ್ ನೀಡಲಿ. ಆರ್. ಅಶೋಕ್ ಅವರ ಬದಲಿಗೆ ಸಾಮಾನ್ಯ ಕಾರ್ಯಕರ್ತನೊಬ್ಬನಿಗೆ ಟಿಕೆಟ್ ನೀಡಲಿ. ಪಕ್ಷದ ವಿರುದ್ಧ, ಪ್ರಧಾನಿ ಮೋದಿ ವಿರುದ್ಧ ಕಟು ಟೀಕೆ ಮಾಡಿದವರನ್ನು ಪುನಃ ಪಕ್ಷಕ್ಕೆ ಕರೆದುಕೊಂಡು ಅವರನ್ನು ಸಂಸದರನ್ನಾಗಿಸಿ, ಕೇಂದ್ರ ಸಚಿವರನ್ನಾಗಿ ಮಾಡಿದೆ. ಹೀಗಾಗಿ ಸಾಮಾನ್ಯ ಕಾರ್ಯಕರ್ತರಿಗೆ ಸಂಯಮದ ಪಾಠ ಹೇಳುವುದು ಬೇಡ ಎಂಬ ಮನವಿಯನ್ನು ಸುದ್ದಿಗೋಷ್ಠಿಯಲ್ಲಿ ಮಾಡಿದರು.
ನಾನು ಬಿಜೆಪಿ ಸದಸ್ಯನಾಗಿದ್ದೇನೆ. ನನ್ನ ಮೇಲೆ ದ್ವೇಷ ಯಾಕೆ ಎಂದು ಗೊತ್ತಿಲ್ಲ. ಮುಂದಿನ ನಗರಸಭೆ ಚುನಾವಣೆ ಸಂದರ್ಭದಲ್ಲಿ ಹೇಗೆ ತೊಡಗಿಸಿಕೊಳ್ಳಬೇಕು ಎಂಬುದನ್ನು ಮುಂದೆ ನಿರ್ಧರಿಸಲಾಗುವುದು. ಚುನಾವಣೆ ಸಂದರ್ಭದಲ್ಲಿ ಪಕ್ಷದವರು ನನ್ನನ್ನು ಆಹ್ವಾನ ಮಾಡಬಹುದು. ಯಾವತ್ತೂ ನನ್ನ ಮೊದಲ ಆಯ್ಕೆ ಬಿಜೆಪಿಯೇ ಆಗಿರುತ್ತದೆ ಎಂದರು.
ಉಡುಪಿ
Udupi-ಉಡುಪಿ: ಹಳೆ ಕಾರಾಗೃಹದಲ್ಲಿ ಕೊಳೆತ ಸ್ಥಿತಿಯಲ್ಲಿ ಶವ ಪತ್ತೆ
ಉಡುಪಿ: ನಗರದ ಹಳೆ ತಾಲೂಕು ಕಚೇರಿ ಸಮೀಪದಲ್ಲಿರುವ ಹಳೆ ಕಾರಾಗೃಹದಲ್ಲಿ ಅಪರಿಚಿತ ವ್ಯಕ್ತಿಯೊಬ್ಬರ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಮಂಗಳವಾರ ಬೆಳಕಿಗೆ ಬಂದಿದೆ. ಸುಮಾರು 10 ದಿನಗಳ ಹಿಂದೆಯೇ ಸಾವು ಸಂಭವಿಸಿರಬಹುದು ಎಂದು ಅಂದಾಜಿಸಲಾಗಿದೆ.
ಉಡುಪಿ: ನಗರದ ಹಳೆ ತಾಲೂಕು ಕಚೇರಿ ಸಮೀಪದಲ್ಲಿರುವ ಹಳೆ ಕಾರಾಗೃಹದಲ್ಲಿ ಅಪರಿಚಿತ ವ್ಯಕ್ತಿಯೊಬ್ಬರ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಮಂಗಳವಾರ ಬೆಳಕಿಗೆ ಬಂದಿದೆ.
ಸುಮಾರು 10 ದಿನಗಳ ಹಿಂದೆಯೇ ಸಾವು ಸಂಭವಿಸಿರಬಹುದು ಎಂದು ಅಂದಾಜಿಸಲಾಗಿದೆ. ಯಾವುದೋ ಕಾಯಿಲೆಯಿಂದ ಮೃತಪಟ್ಟಿರುವ ಸಾಧ್ಯತೆಯ ಬಗ್ಗೆ ಶಂಕೆ ವ್ಯಕ್ತವಾಗಿದೆ. ಆದರೆ ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ. ಮೃತ ವ್ಯಕ್ತಿಯ ಹೆಸರು ಹಾಗೂ ವಿಳಾಸದ ಬಗ್ಗೆಯೂ ಯಾವುದೇ ಮಾಹಿತಿ ಲಭ್ಯವಾಗಿಲ್ಲ.
ಮೃತರ ವಾರಸುದಾರರು ಅಥವಾ ಪರಿಚಯಸ್ಥರು ಉಡುಪಿ ನಗರ ಪೊಲೀಸ್ ಠಾಣೆಯ ನಾಗರಿಕ ಸಹಾಯ ಕೇಂದ್ರವನ್ನು ಸಂಪರ್ಕಿಸುವಂತೆ ಪೊಲೀಸರು ತಿಳಿಸಿದ್ದಾರೆ.
ಸ್ಥಳದಲ್ಲಿ ತೀವ್ರ ದುರ್ವಾಸನೆ ಬೀರುತ್ತಿದ್ದ ಮೃತದೇಹವನ್ನು ಸಮಾಜಸೇವಕ ನಿತ್ಯಾನಂದ ಒಳಕಾಡು ಅವರು ತೆರವುಗೊಳಿಸಿ, ಅಜ್ಜರಕಾಡು ಜಿಲ್ಲಾಸ್ಪತ್ರೆಯ ಮರಣೋತ್ತರ ಪರೀಕ್ಷಾ ಕೇಂದ್ರಕ್ಕೆ ಸಾಗಿಸಲು ನೆರವಾದರು.
ಉಡುಪಿ
H.D.K.-ಕರಾವಳಿಯಲ್ಲಿ ಕೇಂದ್ರ ಸಚಿವ ಎಚ್.ಡಿ.ಕೆ. ಟೆಂಪಲ್ ರನ್: ಕುಟುಂಬ ಸಮೇತ ಕೊಲ್ಲೂರು ಮೂಕಾಂಬಿಕಾ ಸನ್ನಿಧಿಯಲ್ಲಿ ನವಚಂಡಿಕಾಯಾಗ
ಕೇಂದ್ರ ಸಚಿವ ಹಾಗೂ ಜೆಡಿಎಸ್ ನಾಯಕ ಎಚ್.ಡಿ. ಕುಮಾರಸ್ವಾಮಿ ಅವರು ಕುಟುಂಬ ಸಮೇತರಾಗಿ ಕರಾವಳಿಯ ಪ್ರಸಿದ್ಧ ಪುಣ್ಯಕ್ಷೇತ್ರ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿದ್ದು, ಇಂದು ದೇವಿಯ ಸನ್ನಿಧಿಯಲ್ಲಿ ವಿಶೇಷ ಧಾರ್ಮಿಕ ಕಾರ್ಯಕ್ರಮವಾದ ನವಚಂಡಿಕಾಯಾಗದಲ್ಲಿ ಪಾಲ್ಗೊಳ್ಳಲಿದ್ದಾರೆ.
ಉಡುಪಿ: ಕೇಂದ್ರ ಸಚಿವ ಹಾಗೂ ಜೆಡಿಎಸ್ ನಾಯಕ ಎಚ್.ಡಿ. ಕುಮಾರಸ್ವಾಮಿ ಅವರು ಕುಟುಂಬ ಸಮೇತರಾಗಿ ಕರಾವಳಿಯ ಪ್ರಸಿದ್ಧ ಪುಣ್ಯಕ್ಷೇತ್ರ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿದ್ದು, ಇಂದು ದೇವಿಯ ಸನ್ನಿಧಿಯಲ್ಲಿ ವಿಶೇಷ ಧಾರ್ಮಿಕ ಕಾರ್ಯಕ್ರಮವಾದ ನವಚಂಡಿಕಾಯಾಗದಲ್ಲಿ ಪಾಲ್ಗೊಳ್ಳಲಿದ್ದಾರೆ.
ಕುಟುಂಬದ ದೋಷ ಪರಿಹಾರ ಹಾಗೂ ಹರಕೆ ತೀರಿಸುವ ಉದ್ದೇಶದಿಂದ ಕುಮಾರಸ್ವಾಮಿ ಅವರು ನವಚಂಡಿಕಾಯಾಗ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ. ಕಳೆದ ನಾಲ್ಕು ವರ್ಷಗಳಿಂದ ಹರಕೆ ತೀರಿಸಲು ಸಾಧ್ಯವಾಗದ ಹಿನ್ನೆಲೆಯಲ್ಲಿ ಇದೀಗ ಯಾಗ ನೆರವೇರಿಸುತ್ತಿದ್ದಾರೆ ಎನ್ನಲಾಗಿದೆ.
ಅರ್ಚಕ ಶ್ರೀಕಾಂತ್ ಅಡಿಗ ಅವರ ನೇತೃತ್ವದಲ್ಲಿ ಮುಂಜಾನೆ 6 ಗಂಟೆಯಿಂದ 10 ಗಂಟೆಯವರೆಗೆ ನವಚಂಡಿಕಾಯಾಗ ನಡೆಯಲಿದ್ದು, ಬೆಳಗ್ಗೆ 10 ಗಂಟೆಗೆ ಪೂರ್ಣಾಹುತಿ ನೆರವೇರಲಿದೆ.
ಕುಮಾರಸ್ವಾಮಿ ಅವರು ಪತ್ನಿ, ಪುತ್ರ ಹಾಗೂ ಸೊಸೆಯೊಂದಿಗೆ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಹಾಗೂ ಯಾಗದಲ್ಲಿ ಭಾಗವಹಿಸಲಿದ್ದಾರೆ.
ಉಡುಪಿ
Udupi-ಉಡುಪಿ: ತಾಯಿ ಅಂತ್ಯಕ್ರಿಯೆಗೆ ಹಾಜರಾಗಲು ಭೂಗತ ಪಾತಕಿ ರವಿ ಪೂಜಾರಿಗೆ ಕೋರ್ಟ್ ಅನುಮತಿ
ತಾಯಿ ನಿಧನದ ಹಿನ್ನೆಲೆಯಲ್ಲಿ ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ಭೂಗತ ಪಾತಕಿ ರವಿ ಪೂಜಾರಿಗೆ ನ್ಯಾಯಾಲಯ ಅನುಮತಿ ನೀಡಿದೆ. ತಾಯಿಯ ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ಅವಕಾಶ ಕೋರಿ ಸಲ್ಲಿಸಿದ್ದ ಮನವಿಗೆ, ಪೊಲೀಸ್ ಭದ್ರತೆಯಲ್ಲಿ ಆರೋಪಿಯನ್ನು ಸ್ವಗ್ರಾಮಕ್ಕೆ ಕರೆದೊಯ್ದು, ಅಂತ್ಯಕ್ರಿಯೆ ಮುಗಿದ ಬಳಿಕ ಮರಳಿ ಕರೆದುಕೊಂಡು ಹೋಗುವಂತೆ ನ್ಯಾಯಾಲಯ ಸೂಚಿಸಿದೆ.
ಉಡುಪಿ: ತಾಯಿ ನಿಧನದ ಹಿನ್ನೆಲೆಯಲ್ಲಿ ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ಭೂಗತ ಪಾತಕಿ ರವಿ ಪೂಜಾರಿಗೆ ನ್ಯಾಯಾಲಯ ಅನುಮತಿ ನೀಡಿದೆ.
ರವಿ ಪೂಜಾರಿ ಅವರ ತಾಯಿ ಸುಶೀಲಾ ಪೂಜಾರಿ ಅವರು ನವೆಂಬರ್ 12ರ ರಾತ್ರಿ ನಿಧನರಾಗಿದ್ದಾರೆ. ತಾಯಿಯ ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ಅವಕಾಶ ಕೋರಿ ಸಲ್ಲಿಸಿದ್ದ ಮನವಿಗೆ ನ್ಯಾಯಾಲಯ ಅನುಮತಿ ನೀಡಿದ್ದು, ಪೊಲೀಸ್ ಭದ್ರತೆಯಲ್ಲಿ ಆರೋಪಿಯನ್ನು ಸ್ವಗ್ರಾಮಕ್ಕೆ ಕರೆದೊಯ್ದು, ಅಂತ್ಯಕ್ರಿಯೆ ಮುಗಿದ ಬಳಿಕ ಮರಳಿ ಕರೆದುಕೊಂಡು ಹೋಗುವಂತೆ ಸೂಚಿಸಿದೆ.
ಮಲ್ಪೆ ಸಮೀಪದ ನೆರ್ಗಿಯಲ್ಲಿರುವ ಕುಟುಂಬದ ಹಿರಿಯರ ಮನೆಯಲ್ಲಿ ಬೆಳಗ್ಗೆ ಅಂತ್ಯಕ್ರಿಯೆ ನಡೆಯಲಿದೆ. ಭದ್ರತೆಯ ಜವಾಬ್ದಾರಿಯನ್ನು ಬೆಂಗಳೂರು ಕಾರಾಗೃಹ ಸಿಬ್ಬಂದಿ ವಹಿಸಿಕೊಳ್ಳಲಿದ್ದು, ಹೆಚ್ಚುವರಿ ಭದ್ರತೆಯನ್ನು ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ಒದಗಿಸಲಿದೆ ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಂ ಶಂಕರ್ ತಿಳಿಸಿದ್ದಾರೆ.
ಸುಮಾರು 26 ವರ್ಷಗಳ ಕಾಲ ಭೂಗತ ಜಗತ್ತಿನಲ್ಲಿ ಪ್ರಭಾವ ಹೊಂದಿದ್ದ ರವಿ ಪೂಜಾರಿ 2019ರ ಜನವರಿ 19ರಂದು ಆಫ್ರಿಕಾದ ಸೆನೆಗಲ್‌ನಲ್ಲಿ ಬಂಧಿತನಾಗಿದ್ದ. ಬಳಿಕ ಕಾನೂನು ಪ್ರಕ್ರಿಯೆ ಪೂರ್ಣಗೊಳಿಸಿ ಬೆಂಗಳೂರಿಗೆ ಕರೆತರಲಾಗಿತ್ತು.
ಕರ್ನಾಟಕ ಮತ್ತು ಮುಂಬೈ ಸೇರಿದಂತೆ ವಿವಿಧೆಡೆ ರವಿ ಪೂಜಾರಿ ವಿರುದ್ಧ 120ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ. ಆಂಧ್ರಪ್ರದೇಶ, ಮಧ್ಯಪ್ರದೇಶ ಸೇರಿದಂತೆ ಹಲವು ರಾಜ್ಯಗಳಲ್ಲಿಯೂ ಈತನ ವಿರುದ್ಧ ಪ್ರಕರಣಗಳಿವೆ.
ಉಡುಪಿ ಜಿಲ್ಲೆಯ ಮಲ್ಪೆ ಸಮೀಪದ ಕಲ್ಮಾಡಿಯ ಬಪ್ಪು ತೋಟದ ನಿವಾಸಿಯಾಗಿರುವ ರವಿ ಪೂಜಾರಿ, ಚಿಕ್ಕ ವಯಸ್ಸಿನಲ್ಲೇ ತಂದೆಯೊಂದಿಗೆ ಮುಂಬೈಗೆ ತೆರಳಿದ್ದ. 1992ರಲ್ಲಿ ಬಂಧನಕ್ಕೊಳಗಾಗಿದ್ದ ಈತ ಬಳಿಕ ಅಲ್ಲಿಂದ ತಪ್ಪಿಸಿಕೊಂಡಿದ್ದ.
-
ಬಿಗ್ ನ್ಯೂಸ್10 hours agoPuttur-ಪುತ್ತೂರು: ದರ್ಬೆಯಲ್ಲಿ ಭೀಕರ ಕಾರು ಅಪಘಾತ: ಓರ್ವ ಮೃತ್ಯು, ಮತ್ತೊಬ್ಬರಿಗೆ ಗಂಭೀರ ಗಾಯ
-
Uncategorized9 hours agoPuttur-ಪುತ್ತೂರು: ಕೃಷ್ಣನಗರದಲ್ಲಿ ಮನೆ ಕಳ್ಳತನ- 2.19 ಲಕ್ಷ ರೂ. ಮೌಲ್ಯದ ಸೊತ್ತು ಕಳವು
-
ಬಿಗ್ ನ್ಯೂಸ್10 hours agoTransfer-ರಾಜ್ಯ ಪೊಲೀಸ್ ಇಲಾಖೆಯಲ್ಲಿ ಭಾರಿ ಬದಲಾವಣೆ: 32 ಐಪಿಎಸ್ ಅಧಿಕಾರಿಗಳ ವರ್ಗಾವಣೆ – ಪಶ್ಚಿಮ ವಲಯ ಐಜಿಪಿಯಾಗಿ ಶಶಿಕುಮಾರ್
-
ಮಂಗಳೂರು10 hours agoFarmers-ಕೋಳಿ ಫಾರಂಗಳಿಂದ ಹೆಚ್ಚುತ್ತಿರುವ ನೊಣಗಳು : ಕಂಪನಿಗಳ ವಿರುದ್ಧ ಹೋರಾಟಕ್ಕೆ ರೈತರು ಸಜ್ಜು
-
ಅಂತರ ರಾಜ್ಯ7 hours agoToll Plaza-ವಾಹನ ಸವಾರರೇ ಗಮನಿಸಿ; ಇನ್ಮುಂದೆ ಟೋಲ್ನಲ್ಲೇ ವಾಹನ ವಿಮೆ ಪರಿಶೀಲನೆ: ಅವಧಿ ಮುಗಿದಿದ್ದರೆ ಮೊಬೈಲ್ಗೆ SMS, 10 ಸಾವಿರ ರೂ.ವರೆಗೆ ದಂಡ..!
-
ರಾಜಕೀಯ8 hours agoPuttur-ಪುತ್ತೂರಿನಲ್ಲಿ ಎಲ್ಲಿ ನೋಡಿದರೂ ಭ್ರಷ್ಟಾಚಾರ ಮತ್ತು ದುಷ್ಟ ರಾಜಕೀಯವೇ ತಾಂಡವವಾಡುತ್ತಿದೆ: ಬೂಡಿಯಾರು; ಶಾಸಕರು ಬ್ಯಾನರ್ ಹಾಕಿ, ತೆಂಗಿನಕಾಯಿ ಒಡೆಯುವುದು ಮಾತ್ರ : ಸಾಜ
-
ಬಿಗ್ ನ್ಯೂಸ್8 hours agoPuttur-ಪುತ್ತೂರು: ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘಕ್ಕೆ ರಾಜ್ಯಮಟ್ಟದ ಉತ್ತಮ ಸಹಕಾರ ಸಂಘ ಪ್ರಶಸ್ತಿ
-
ಸುಳ್ಯ8 hours agoSullia-ಸುಳ್ಯ: ಜಾನುವಾರು ಕಳ್ಳತನಕ್ಕೆ ಯತ್ನ: ಇಬ್ಬರು ಪೊಲೀಸ್ ವಶಕ್ಕೆ















