ನಿಧನ ವಾರ್ತೆ
Uppinangadi-ಉಪ್ಪಿನಂಗಡಿ : ಕೀಟನಾಶಕ ಸೇವಿಸಿ ಅಸ್ವಸ್ಥಗೊಂಡಿದ್ದ ವಿದ್ಯಾರ್ಥಿನಿ ಸಾವು – ಕಡಬ ನಿವಾಸಿಯೊಂದಿಗೆ ಸಂಭಾಷಣೆ, ತಂದೆಯಿಂದ ಅನುಮಾನದ ದೂರು!
ಹೃದಯ ಕಲಕುವ ಘಟನೆ! ಕೀಟನಾಶಕ ಸೇವಿಸಿ ಅಸ್ವಸ್ಥಗೊಂಡಿದ್ದ ಪ್ರೌಢಶಾಲಾ ವಿದ್ಯಾರ್ಥಿನಿಯೊಬ್ಬಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾಳೆ. ಈ ಘಟನೆ ಉಪ್ಪಿನಂಗಡಿ ವ್ಯಾಪ್ತಿಯಲ್ಲಿ ವರದಿಯಾಗಿದ್ದು, ಮೃತ ವಿದ್ಯಾರ್ಥಿನಿಯ ತಂದೆ ಮಗಳ ಸಾವಿನ ಬಗ್ಗೆ ಗಂಭೀರ ಅನುಮಾನಗಳನ್ನು ವ್ಯಕ್ತಪಡಿಸಿ, ಕಡಬ ನಿವಾಸಿಯೊಬ್ಬರ ಮೇಲೆ ಆರೋಪದ ಬೆರಳು ತೋರಿಸಿದ್ದಾರೆ.
ಹೃದಯ ಕಲಕುವ ಘಟನೆ! ಕೀಟನಾಶಕ ಸೇವಿಸಿ ಅಸ್ವಸ್ಥಗೊಂಡಿದ್ದ ಪ್ರೌಢಶಾಲಾ ವಿದ್ಯಾರ್ಥಿನಿಯೊಬ್ಬಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾಳೆ. ಈ ಘಟನೆ ಉಪ್ಪಿನಂಗಡಿ ವ್ಯಾಪ್ತಿಯಲ್ಲಿ ವರದಿಯಾಗಿದ್ದು, ಮೃತ ವಿದ್ಯಾರ್ಥಿನಿಯ ತಂದೆ ಮಗಳ ಸಾವಿನ ಬಗ್ಗೆ ಗಂಭೀರ ಅನುಮಾನಗಳನ್ನು ವ್ಯಕ್ತಪಡಿಸಿ, ಕಡಬ ನಿವಾಸಿಯೊಬ್ಬರ ಮೇಲೆ ಆರೋಪದ ಬೆರಳು ತೋರಿಸಿದ್ದಾರೆ.
ಘಟನೆ ವಿವರ:
ಕಳೆದ ನವೆಂಬರ್ 4 ರಂದು ತಲೆನೋವಿನ ಕಾರಣ ಶಾಲೆಗೆ ಹೋಗದೆ ಮನೆಯಲ್ಲಿ ಉಳಿದುಕೊಂಡಿದ್ದ 15 ವರ್ಷದ ಬಾಲಕಿ ದಿಢೀರನೆ ಕೀಟನಾಶಕ ಸೇವಿಸಿ ಅಸ್ವಸ್ಥಗೊಂಡಿದ್ದಳು. ಕೂಲಿ ಕೆಲಸಕ್ಕೆ ತೆರಳಿದ್ದ ಆಕೆಯ ತಾಯಿ ವಿಷಯ ತಿಳಿದು ತಕ್ಷಣವೇ ಮನೆಗೆ ಧಾವಿಸಿ, ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಮಗಳನ್ನು ಪುತ್ತೂರಿನ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ, ಅಲ್ಲಿ ಚಿಕಿತ್ಸೆ ಸಾಧ್ಯವಾಗದ ಕಾರಣ, ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ದುರದೃಷ್ಟವಶಾತ್, ನವೆಂಬರ್ 12 ರಂದು ಬಾಲಕಿ ಚಿಕಿತ್ಸೆಗೆ ಸ್ಪಂದಿಸದೆ ಸಾವನ್ನಪ್ಪಿದ್ದಾಳೆ.
ಅನುಮಾನದ ಸುಳಿ: ಕಡಬ ನಿವಾಸಿ ಪಾತ್ರವೇನು?
ಮೃತ ಬಾಲಕಿಯ ತಂದೆ, ತಮ್ಮ ಮಗಳ ಸಾವಿನ ಬಗ್ಗೆ ಗಂಭೀರ ಆರೋಪ ಮಾಡಿದ್ದಾರೆ. ಮೃತ ಬಾಲಕಿ ಕಡಬ ನಿವಾಸಿಯೊಬ್ಬರೊಂದಿಗೆ ದೂರವಾಣಿ ಸಂಪರ್ಕ ಹೊಂದಿದ್ದಳು. ಆ ನಿಗೂಢ ವ್ಯಕ್ತಿಯೊಂದಿಗೆ ಬಾಲಕಿಯ ಸಾವು ಸಂಬಂಧ ಹೊಂದಿದೆ ಎಂದು ತಂದೆ ಬಲವಾಗಿ ನಂಬಿದ್ದಾರೆ. ಬಾಲಕಿಯ ಸಾವು ಆತ್ಮಹತ್ಯೆಯಲ್ಲ, ಇದೊಂದು ಅಸಹಜ ಸಾವು ಎಂದು ಅವರು ಆರೋಪಿಸಿದ್ದು, ಇದರ ಹಿಂದೆ ಆ ಕಡಬ ನಿವಾಸಿಯ ಕೈವಾಡವಿದೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ಪೊಲೀಸ್ ತನಿಖೆ ಆರಂಭ:
ಈ ಸಂಬಂಧ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಯುಡಿಆರ್ ನಂ: 56/2025 ಕಲಂ: 194 (3) (IV)BNSS ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಪೊಲೀಸರು ತನಿಖೆಯನ್ನು ತೀವ್ರಗೊಳಿಸಿದ್ದು, ಮೃತ ಬಾಲಕಿ ಮತ್ತು ಕಡಬ ನಿವಾಸಿ ನಡುವಿನ ಸಂಬಂಧದ ಬಗ್ಗೆ ಮಾಹಿತಿ ಕಲೆಹಾಕುತ್ತಿದ್ದಾರೆ. ಕಡಬ ನಿವಾಸಿಯನ್ನು ವಿಚಾರಣೆಗೊಳಪಡಿಸುವ ಸಾಧ್ಯತೆಗಳಿದ್ದು, ಸತ್ಯಾಂಶ ಶೀಘ್ರದಲ್ಲೇ ಹೊರಬರಲಿದೆ ಎಂದು ನಿರೀಕ್ಷಿಸಲಾಗಿದೆ.
ನಿಧನ ವಾರ್ತೆ
Kasaragod-ಕಾಸರಗೋಡು : ಬೇಟೆಯಾಡಲು ಸ್ಕೂಟರ್ ನಲ್ಲಿ ಸಂಚರಿಸುತ್ತಿದ್ದಾಗ ಗುಂಡು ಹಾರಿ ಯುವಕ ಸಾವು..!
ಬೇಟೆಯಾಡಲು ಸ್ಕೂಟರ್‌ನಲ್ಲಿ ತೆರಳುತ್ತಿದ್ದ ವೇಳೆ ಲೋಡ್ ಮಾಡಿದ್ದ ರೈಫಲ್ ಆಕಸ್ಮಿಕವಾಗಿ ಸಿಡಿದು 28 ವರ್ಷದ ಯುವಕನೊಬ್ಬ ಮೃತಪಟ್ಟ ದಾರುಣ ಘಟನೆ ಕಾಸರಗೋಡಿನ ಮುಳಿಯಾರ್ ಪಂಚಾಯತ್ ವ್ಯಾಪ್ತಿಯ ಕಟ್ಟಿಪ್ಪಳಂನಲ್ಲಿ ಭಾನುವಾರ ರಾತ್ರಿ ನಡೆದಿದೆ. ಕಟ್ಟಿಪ್ಪಳಂ ನಿವಾಸಿಗಳಾದ ಮೊಯ್ದು ಮತ್ತು ಜಮೀಲಾ ದಂಪತಿಯ ಪುತ್ರ ಹೈದರ್ ಅಲಿ (28) ಮೃತಪಟ್ಟವರು.
ಕಾಸರಗೋಡು, ನ.16: ಬೇಟೆಯಾಡಲು ಸ್ಕೂಟರ್‌ನಲ್ಲಿ ತೆರಳುತ್ತಿದ್ದ ವೇಳೆ ಲೋಡ್ ಮಾಡಿದ್ದ ರೈಫಲ್ ಆಕಸ್ಮಿಕವಾಗಿ ಸಿಡಿದು 28 ವರ್ಷದ ಯುವಕನೊಬ್ಬ ಮೃತಪಟ್ಟ ದಾರುಣ ಘಟನೆ ಕಾಸರಗೋಡಿನ ಮುಳಿಯಾರ್ ಪಂಚಾಯತ್ ವ್ಯಾಪ್ತಿಯ ಕಟ್ಟಿಪ್ಪಳಂನಲ್ಲಿ ಭಾನುವಾರ ರಾತ್ರಿ ನಡೆದಿದೆ.
ಕಟ್ಟಿಪ್ಪಳಂ ನಿವಾಸಿಗಳಾದ ಮೊಯ್ದು ಮತ್ತು ಜಮೀಲಾ ದಂಪತಿಯ ಪುತ್ರ ಹೈದರ್ ಅಲಿ (28) ಮೃತಪಟ್ಟವರು.
ಅಡೂರು ಪೊಲೀಸರು ನೀಡಿರುವ ಮಾಹಿತಿಯ ಪ್ರಕಾರ, ಹೈದರ್ ಅಲಿ ಭಾನುವಾರ ರಾತ್ರಿ ಬೇಟೆಯಾಡುವ ಉದ್ದೇಶದಿಂದ ಸ್ಕೂಟರ್‌ನಲ್ಲಿ ತೆರಳುತ್ತಿದ್ದರು. ಈ ವೇಳೆ ರೈಫಲ್ ಕೆಳಗೆ ಬೀಳದಂತೆ ಅದರ ಬಟ್ ಭಾಗವನ್ನು ಸ್ಕೂಟರ್‌ನ ಫುಟ್‌ಬೋರ್ಡ್‌ನಲ್ಲಿ ಕಾಲುಗಳ ನಡುವೆ ಇರಿಸಿಕೊಂಡು, ಮೇಲ್ಭಾಗವನ್ನು ಶರ್ಟ್‌ನ ಒಳಗೆ ಇಟ್ಟುಕೊಂಡಿದ್ದರು ಎನ್ನಲಾಗಿದೆ.
ಸ್ಕೂಟರ್ ಚಲಾಯಿಸುತ್ತಿದ್ದ ಸಂದರ್ಭದಲ್ಲಿ ಆಕಸ್ಮಿಕವಾಗಿ ರೈಫಲ್‌ನ ಟ್ರಿಗರ್ ಒತ್ತಲ್ಪಟ್ಟು ಗುಂಡು ಸಿಡಿದಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಗುಂಡು ಹೈದರ್ ಅಲಿ ಅವರ ಗಲ್ಲ ಮತ್ತು ತಲೆಯನ್ನು ಸೀಳಿಕೊಂಡು ಹೋಗಿದೆ ಎನ್ನಲಾಗಿದೆ.
ಕಟ್ಟಿಪ್ಪಳಂನ ಮೈದಾನವೊಂದರ ಬಳಿ ಸ್ಕೂಟರ್ ಹಾಗೂ ರೈಫಲ್ ಪಕ್ಕದಲ್ಲೇ ಹೈದರ್ ಅಲಿ ರಕ್ತದ ಮಡುವಿನಲ್ಲಿ ಬಿದ್ದಿರುವುದು ಪತ್ತೆಯಾಗಿದೆ. ತಕ್ಷಣ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಅದಾಗಲೇ ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದ್ದಾರೆ.
ಘಟನೆಗೆ ಬಳಸಲಾದ ರೈಫಲ್ ಪರವಾನಗಿ ಪಡೆದದ್ದೇ ಅಥವಾ ಅಕ್ರಮವಾಗಿ ತಯಾರಿಸಿದ ದೇಶೀಯ ಬಂದೂಕೇ ಎಂಬುದು ಇನ್ನೂ ಖಚಿತವಾಗಿಲ್ಲ. ತನಿಖೆಯ ಬಳಿಕವಷ್ಟೇ ಈ ಕುರಿತು ಸ್ಪಷ್ಟ ಮಾಹಿತಿ ಲಭ್ಯವಾಗಲಿದೆ ಎಂದು ಅಡೂರು ವೃತ್ತ ನಿರೀಕ್ಷಕರು ತಿಳಿಸಿದ್ದಾರೆ.
ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಕಾಸರಗೋಡು ಜನರಲ್ ಆಸ್ಪತ್ರೆಯ ಶವಾಗಾರಕ್ಕೆ ಸ್ಥಳಾಂತರಿಸಲಾಗಿದೆ. ಅಡೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.
ನಿಧನ ವಾರ್ತೆ
Car crash-ಮರಕ್ಕೆ ಅಪ್ಪಳಿಸಿದ ಕಾರು: ಇಬ್ಬರು ಎಂಜಿನಿಯರಿಂಗ್ ವಿದ್ಯಾರ್ಥಿನಿಯರ ಬದುಕು ಅಂತ್ಯ; ನಾಲ್ವರು ಆಸ್ಪತ್ರೆಗೆ ದಾಖಲು
ನಿಯಂತ್ರಣ ತಪ್ಪಿದ ಕಾರೊಂದು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಎಂಜಿನಿಯರಿಂಗ್ ವಿದ್ಯಾರ್ಥಿನಿಯರು ಮೃತಪಟ್ಟಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನೆಲಮಂಗಲದ ಗುಡೇಮಾರನಹಳ್ಳಿ ಬಳಿ ನಡೆದಿದೆ. ಜಾನ್ಹವಿ ಹಾಗೂ ವೈಷ್ಣವಿ ಮೃತಪಟ್ಟ ವಿದ್ಯಾರ್ಥಿನಿಯರು.
ಬೆಂಗಳೂರು: ನಿಯಂತ್ರಣ ತಪ್ಪಿದ ಕಾರೊಂದು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಎಂಜಿನಿಯರಿಂಗ್ ವಿದ್ಯಾರ್ಥಿನಿಯರು ಮೃತಪಟ್ಟಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನೆಲಮಂಗಲದ ಗುಡೇಮಾರನಹಳ್ಳಿ ಬಳಿ ನಡೆದಿದೆ.
ಮೃತರನ್ನು ಜಾನ್ಹವಿ (19) ಹಾಗೂ ವೈಷ್ಣವಿ (19) ಎಂದು ಗುರುತಿಸಲಾಗಿದೆ.
ಅಪಘಾತದಲ್ಲಿ ಗಗನ್, ಜಸ್ವಂತ್, ಹರ್ಷಿಣಿ ಎಸ್. ಹಾಗೂ ಹರ್ಷಿಣಿ ಜಿ. ಎಂಬ ನಾಲ್ವರು ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಮೃತರು ಹಾಗೂ ಗಾಯಾಳುಗಳು ತುಮಕೂರು ಮೂಲದವರಾಗಿದ್ದು, ಎಂಜಿನಿಯರಿಂಗ್ ಕಾಲೇಜಿನಲ್ಲಿ ದ್ವಿತೀಯ ವರ್ಷದ ವ್ಯಾಸಂಗ ಮಾಡುತ್ತಿದ್ದರು ಎನ್ನಲಾಗಿದೆ.
ಕಾರ್ಯಕ್ರಮವೊಂದರಲ್ಲಿ ಭಾಗವಹಿಸುವ ಉದ್ದೇಶದಿಂದ ವಿದ್ಯಾರ್ಥಿಗಳು ಕುಣಿಗಲ್ ಸಮೀಪದ ಹುತ್ರಿದುರ್ಗಕ್ಕೆ ಕಾರಿನಲ್ಲಿ ತೆರಳುತ್ತಿದ್ದರು. ಈ ವೇಳೆ ಗುಡೇಮಾರನಹಳ್ಳಿ ಬಳಿ ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆ ಬದಿಯ ಮರಕ್ಕೆ ಬಲವಾಗಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ತೀವ್ರತೆಗೆ ಇಬ್ಬರು ವಿದ್ಯಾರ್ಥಿನಿಯರು ಮೃತಪಟ್ಟಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಕುದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ನಿಧನ ವಾರ್ತೆ
Puttur-ಪುತ್ತೂರು: ಬೈಕ್ ಡಿಕ್ಕಿಯಾಗಿ ಹರಿಪ್ರಸಾದ್ ಹೋಟೆಲ್ ಸಪ್ಲೈಯರ್ ಸಾವು
ರಸ್ತೆ ದಾಟುತ್ತಿದ್ದ ವೇಳೆ ಬೈಕ್ ಡಿಕ್ಕಿಯಾಗಿ ಹೋಟೆಲ್ ಸಿಬ್ಬಂದಿಯೊಬ್ಬರು ಗಂಭೀರ ಗಾಯಗೊಂಡು ಮೃತಪಟ್ಟ ಘಟನೆ ನ.16ರಂದು ತಡರಾತ್ರಿ ನಡೆದಿದೆ. ಮೃತರನ್ನು ವಿಜಯಪುರ ಜಿಲ್ಲೆಯ ಬಾಗೇವಾಡಿ ನಿವಾಸಿ ಸಂಗನಗೌಡ ಅವರ ಪುತ್ರ ಚಂದ್ರಶೇಖರ ಸಂಗನಗೌಡ (32) ಎಂದು ಗುರುತಿಸಲಾಗಿದೆ.
ಪುತ್ತೂರು: ರಸ್ತೆ ದಾಟುತ್ತಿದ್ದ ವೇಳೆ ಬೈಕ್ ಡಿಕ್ಕಿಯಾಗಿ ಹೋಟೆಲ್ ಸಿಬ್ಬಂದಿಯೊಬ್ಬರು ಗಂಭೀರ ಗಾಯಗೊಂಡು ಮೃತಪಟ್ಟ ಘಟನೆ ನ.16ರಂದು ತಡರಾತ್ರಿ ನಡೆದಿದೆ.
ಮೃತರನ್ನು ವಿಜಯಪುರ ಜಿಲ್ಲೆಯ ಬಾಗೇವಾಡಿ ನಿವಾಸಿ ಸಂಗನಗೌಡ ಅವರ ಪುತ್ರ ಚಂದ್ರಶೇಖರ ಸಂಗನಗೌಡ (32) ಎಂದು ಗುರುತಿಸಲಾಗಿದೆ.
ಇವರು ಪುತ್ತೂರಿನ ಹರಿಪ್ರಸಾದ್ ಹೋಟೆಲ್‌ನಲ್ಲಿ ಸಪ್ಲೈಯರ್ ಆಗಿ ಕೆಲಸ ಮಾಡುತ್ತಿದ್ದರು.
ನ.16ರಂದು ರಾತ್ರಿ ಹೋಟೆಲ್ ಕೆಲಸ ಮುಗಿಸಿ ಹೊರಬಂದ ಚಂದ್ರಶೇಖರ ಅವರು ಹೋಟೆಲ್ ಸಮೀಪ ರಸ್ತೆ ದಾಟುತ್ತಿದ್ದ ವೇಳೆ ಬೈಕೊಂದು ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಗಂಭೀರವಾಗಿ ಗಾಯಗೊಂಡ ಅವರು ಮೃತಪಟ್ಟಿದ್ದಾರೆ ಎನ್ನಲಾಗಿದೆ.
-
ಬಿಗ್ ನ್ಯೂಸ್18 hours agoNeralakatte-Big Breaking: ನೇರಳಕಟ್ಟೆ : ಲಾರಿ ಡಿಕ್ಕಿಯಾಗಿ ರಸ್ತೆ ದಾಟುತ್ತಿದ್ದ 14ರ ಬಾಲಕಿ ದುರ್ಮರಣ
-
ಅಂತರ ರಾಜ್ಯ23 hours agoToll Plaza-ವಾಹನ ಸವಾರರೇ ಗಮನಿಸಿ; ಇನ್ಮುಂದೆ ಟೋಲ್ನಲ್ಲೇ ವಾಹನ ವಿಮೆ ಪರಿಶೀಲನೆ: ಅವಧಿ ಮುಗಿದಿದ್ದರೆ ಮೊಬೈಲ್ಗೆ SMS, 10 ಸಾವಿರ ರೂ.ವರೆಗೆ ದಂಡ..!
-
ರಾಜಕೀಯ24 hours agoPuttur-ಪುತ್ತೂರಿನಲ್ಲಿ ಎಲ್ಲಿ ನೋಡಿದರೂ ಭ್ರಷ್ಟಾಚಾರ ಮತ್ತು ದುಷ್ಟ ರಾಜಕೀಯವೇ ತಾಂಡವವಾಡುತ್ತಿದೆ: ಬೂಡಿಯಾರು; ಶಾಸಕರು ಬ್ಯಾನರ್ ಹಾಕಿ, ತೆಂಗಿನಕಾಯಿ ಒಡೆಯುವುದು ಮಾತ್ರ : ಸಾಜ
-
ಆರೋಗ್ಯ20 hours agoPuttur-ಪುತ್ತೂರು: ಸಿಟಿ ಆಸ್ಪತ್ರೆಯಲ್ಲಿ ಉಚಿತ ಮೂಳೆ ಖನಿಜ ಸಾಂದ್ರತೆ (BMD) ಚಿಕಿತ್ಸಾ ಶಿಬಿರ
-
ಸುಳ್ಯ23 hours agoSullia-ಸುಳ್ಯ: ಜಾನುವಾರು ಕಳ್ಳತನಕ್ಕೆ ಯತ್ನ: ಇಬ್ಬರು ಪೊಲೀಸ್ ವಶಕ್ಕೆ
-
ಶಿಕ್ಷಣ23 hours agoRTE-ಆರ್ಟಿಇ ಅಡಿ ಉಚಿತ ಶಿಕ್ಷಣಕ್ಕೆ ಆದಾಯ ಮಿತಿ ಹೆಚ್ಚಿಸಿದ ರಾಜ್ಯ ಸರಕಾರ: 3.5 ಲಕ್ಷ ರೂ.ನಿಂದ 8 ಲಕ್ಷ ರೂ.ಗೆ ಏರಿಕೆ
-
ಬಿಗ್ ನ್ಯೂಸ್23 hours agoPuttur-ಎಸ್ಡಿಪಿಐ ನಿರಂತರ ಪ್ರಯತ್ನ: ಪುತ್ತೂರಿನ ಅಲ್ಪಸಂಖ್ಯಾತರ ಸೇವಾ ಕೇಂದ್ರ ಪುನರಾರಂಭ
-
ಶಿಕ್ಷಣ2 hours agoVivekananda-ವಿವೇಕಾನಂದ ಪಾಲಿಟೆಕ್ನಿಕ್ – ನೂತನ ಆಡಳಿತ ಮಂಡಳಿಯ ರಚನೆ : ಅಧ್ಯಕ್ಷರಾಗಿ ಕೃಷ್ಣಕುಮಾರ್ ಅತ್ರಿಜಾಲು, ಸಂಚಾಲಕರಾಗಿ ನರಸಿಂಹ ಪೈ















