Connect with us

ಸ್ಥಳೀಯ

Beltangadi-ಬೆಳ್ತಂಗಡಿಗೆ ಡಿವೈಎಸ್ಪಿ ಉಪವಿಭಾಗ ಅಗತ್ಯವಿಲ್ಲ – ಇದು ನಿತ್ಯದ ಶಾಂತಿಯುತ ಜೀವನಕ್ಕೆ ಅಡ್ಡಿಯಾಗುತ್ತದೆ..! ಸರಕಾರಕ್ಕೆ ತಟ್ಟೆ ಹಿಡಿದು ಭಿಕ್ಷೆ ಬೇಡಬಹುದಲ್ಲವೇ?  ಶಾಸಕ ಹರೀಶ್ ಪೂಂಜ

Published

on

Ad Widget

Ad Widget

Ad Widget

Ad Widget

ಬೆಳ್ತಂಗಡಿ ತಾಲೂಕಿಗೆ ಡಿವೈಎಸ್ಪಿ ಉಪವಿಭಾಗದ ಅಗತ್ಯವಿಲ್ಲ ಎಂದು ಶಾಸಕ ಹರೀಶ್ ಪೂಂಜ ಅವರು ಬಲವಾಗಿ ಪ್ರತಿಪಾದಿಸಿದ್ದಾರೆ. ಬುಧವಾರ ಉಜಿರೆಯ ಖಾಸಗಿ ಹೋಟೆಲ್‌ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ಏಕಾಏಕಿ ಈ ನಿರ್ಧಾರ ಕೈಗೊಂಡಿರುವುದನ್ನು ಖಂಡಿಸಿದರು.

Ad Widget

Ad Widget

Ad Widget

Ad Widget

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿಗೆ ಡಿವೈಎಸ್ಪಿ ಉಪವಿಭಾಗದ ಅಗತ್ಯವಿಲ್ಲ ಎಂದು ಶಾಸಕ ಹರೀಶ್ ಪೂಂಜ ಅವರು ಬಲವಾಗಿ ಪ್ರತಿಪಾದಿಸಿದ್ದಾರೆ. ಬುಧವಾರ ಉಜಿರೆಯ ಖಾಸಗಿ ಹೋಟೆಲ್‌ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ಏಕಾಏಕಿ ಈ ನಿರ್ಧಾರ ಕೈಗೊಂಡಿರುವುದನ್ನು ಖಂಡಿಸಿದರು.

Ad Widget

Ad Widget alt="Ad Widget"/>

Ad Widget

“ಹಿಂದೆ ಅನೇಕ ಉಪವಿಭಾಗಗಳನ್ನು ರಚಿಸುವಾಗಲೂ ಬೆಳ್ತಂಗಡಿಯಲ್ಲಿ ಪೊಲೀಸ್ ಉಪವಿಭಾಗ ಮಾಡಬಾರದು ಎಂದು ನಾನು ಮನವಿ ಸಲ್ಲಿಸಿದ್ದೆ. ಆದರೆ ಈಗ ಕಾಂಗ್ರೆಸ್ ಸರ್ಕಾರ ಜನಪ್ರತಿನಿಧಿಗಳು ಮತ್ತು ಜನಸಾಮಾನ್ಯರ ವಿಶ್ವಾಸಕ್ಕೆ ತೆಗೆದುಕೊಳ್ಳದೆ ಏಕಾಏಕಿ ಈ ನಿರ್ಧಾರ ತೆಗೆದುಕೊಂಡಿರುವುದು ಸರಿಯಲ್ಲ. ಬೆಳ್ತಂಗಡಿಯಲ್ಲಿ ಈಗಾಗಲೇ ನಗರ ಮತ್ತು ಗ್ರಾಮೀಣ ಸರ್ಕಲ್ ಇನ್ಸ್‌ಪೆಕ್ಟರ್‌ಗಳಿದ್ದಾರೆ. ಡಿವೈಎಸ್ಪಿ ಕಚೇರಿಯಿಂದ ಎಲ್ಲ ಆಗುಹೋಗುಗಳು ನಿಯಂತ್ರಿಸಲ್ಪಟ್ಟರೆ, ಜನಸಾಮಾನ್ಯರು ಪ್ರತಿ ಕೆಲಸಕ್ಕೂ ಅಲೆಯಬೇಕಾಗುತ್ತದೆ. ಇದು ನಿತ್ಯದ ಶಾಂತಿಯುತ ಜೀವನಕ್ಕೆ ಅಡ್ಡಿಯಾಗುತ್ತದೆ” ಎಂದು ಶಾಸಕರು ಆತಂಕ ವ್ಯಕ್ತಪಡಿಸಿದರು.

Ad Widget

Ad Widget <> Ad Widget

ಪೊಲೀಸರ ಮೂಲಕ ಜನರ ಸುಲಿಗೆ?
ಕಾಂಗ್ರೆಸ್ ಸರ್ಕಾರ ಪ್ರತಿ ಠಾಣೆಗೆ ದಿನಕ್ಕೆ ಇಷ್ಟು ಪ್ರಕರಣಗಳನ್ನು ದಾಖಲಿಸಬೇಕು ಎಂದು ಗುರಿ ನೀಡಿದೆ. ಇದರಿಂದಾಗಿ ಪೊಲೀಸರು ದಿನನಿತ್ಯ ದುಡಿಯುವ ಜನರಿಗೆ ದಂಡ ವಿಧಿಸುತ್ತಿದ್ದಾರೆ. ಪೊಲೀಸರನ್ನು ಕೇಳಿದರೆ, ಇದು ಸರ್ಕಾರದ ಸೂಚನೆ ಎನ್ನುತ್ತಾರೆ. “ಕಾಂಗ್ರೆಸ್ ಸರ್ಕಾರ ದಿವಾಳಿಯಾಗಿ ಪೊಲೀಸರ ಮೂಲಕ ಜನಸಾಮಾನ್ಯರನ್ನು ದೋಚುವ ಬದಲು, ತಟ್ಟೆ ಹಿಡಿದು ಭಿಕ್ಷೆ ಬೇಡಬಹುದಲ್ಲವೇ?” ಎಂದು ಶಾಸಕರು ಆಕ್ರೋಶ ವ್ಯಕ್ತಪಡಿಸಿದರು.

ರಸ್ತೆಗಳ ದುಸ್ಥಿತಿ ಮತ್ತು ಅನುದಾನ ಕೊರತೆ:
ಬೆಳ್ತಂಗಡಿ ತಾಲೂಕಿನ ಪ್ರಮುಖ ರಸ್ತೆಗಳು ಸಂಪೂರ್ಣ ಹಾಳಾಗಿವೆ ಎಂದು ಹರೀಶ್ ಪೂಂಜ ದೂರಿದರು. “ಬೆಳ್ತಂಗಡಿ-ಮೂಲ್ಕಿ ರಸ್ತೆಗೆ ಕೇವಲ 18 ಲಕ್ಷ ರೂ. ಮತ್ತು ಗೋಳಿತೊಟ್ಟು-ದಿಡುಪೆ 41 ಕಿ.ಮೀ. ರಸ್ತೆಗೆ 30 ಲಕ್ಷ ರೂ. ಅನುದಾನ ನಿಗದಿಪಡಿಸಲಾಗಿದೆ. ರಸ್ತೆಯ ಗುಂಡಿ ಮುಚ್ಚಲೂ ಮತ್ತು ನಿರ್ವಹಣೆಗೂ ಹಣ ನೀಡದಂತಹ ಪರಿಸ್ಥಿತಿ ಕಾಂಗ್ರೆಸ್ ಸರ್ಕಾರದ್ದಾಗಿದೆ” ಎಂದು ಅವರು ಆರೋಪಿಸಿದರು. ರಸ್ತೆ ಕಾಮಗಾರಿಗಳು ಸರಿಯಾಗಿ ನಡೆಯದಿದ್ದರೆ ನಾಗರಿಕರು ತಮ್ಮ ಗಮನಕ್ಕೆ ತರುವಂತೆ ಶಾಸಕರು ಮನವಿ ಮಾಡಿದರು.

Ad Widget

Ad Widget

ಅಭಿವೃದ್ಧಿ ಯೋಜನೆಗಳ ಪ್ರಗತಿ:
ಉಜಿರೆ-ಪೆರಿಯಶಾಂತಿ ಸ್ಟರ್ ರಸ್ತೆಗೆ 616 ಕೋಟಿ ರೂ. ಅನುದಾನ ಬಂದಿದ್ದು, ಸಂಸದರ ನೇತೃತ್ವದಲ್ಲಿ ಹತ್ತು ದಿನಗಳಲ್ಲಿ ಶಿಲಾನ್ಯಾಸ ನೆರವೇರಲಿದೆ. ಪುಂಜಾಲಕಟ್ಟೆ-ಚಾರ್ಮಾಡಿ ರಸ್ತೆ ಕಾಮಗಾರಿ ವೇಗವಾಗಿ ನಡೆಯುತ್ತಿದೆ. ಕಳೆಂಜದಲ್ಲಿ ಈ ಹಿಂದೆ 309 ಸರ್ವೇ ಸಂಖ್ಯೆಯನ್ನು ಕಂದಾಯ, ಅರಣ್ಯ ಇಲಾಖೆ, ಗ್ರಾಮಸ್ಥರು ಹಾಗೂ ಖಾಸಗಿ ಸರ್ವೇದಾರರ ಮೂಲಕ ಶೀಘ್ರವೇ ಸರ್ವೇ ಕಾರ್ಯ ನಡೆಯಲಿದೆ ಎಂದು ಶಾಸಕರು ಮಾಹಿತಿ ನೀಡಿದರು.

ಬೆಳ್ತಂಗಡಿ ಪ.ಪಂ.ಗೆ ಅನುದಾನ:
ಬೆಳ್ತಂಗಡಿ ಪಟ್ಟಣ ಪಂಚಾಯಿತಿಗೆ ಸಂಬಂಧಿಸಿದಂತೆ ಡಾ. ವೀರೇಂದ್ರ ಹೆಗ್ಗಡೆ ಅವರು ರಾಜ್ಯಸಭಾ ನಿಧಿಯಿಂದ ಹುಣ್ಣೆಕಟ್ಟೆ ಮಲ್ಲೊಟ್ಟು ರಸ್ತೆಗೆ 2 ಕೋಟಿ ರೂ. ಅನುದಾನ ನೀಡಿದ್ದು, ಈ ಮೂಲಕ ಅಭಿವೃದ್ಧಿ ನಡೆಸಲಾಗುವುದು ಎಂದರು.

ದಿಲ್ಲಿ ಭಯೋತ್ಪಾದಕ ದಾಳಿಗೆ ಖಂಡನೆ:
ದಿಲ್ಲಿಯಲ್ಲಿ ನಡೆದ ಭಯೋತ್ಪಾದಕ ದಾಳಿಯನ್ನು ಶಾಸಕರು ಖಂಡಿಸಿದರು. ಕೇಂದ್ರ ಸರ್ಕಾರ ಹಾಗೂ ದಿಲ್ಲಿ ಸರ್ಕಾರ ಜಂಟಿಯಾಗಿ ಭಯೋತ್ಪಾದಕ ಚಟುವಟಿಕೆಗಳಲ್ಲಿರುವವರನ್ನು ತಕ್ಷಣ ಬಂಧಿಸುವ ಕಾರ್ಯ ಮಾಡಿದೆ ಎಂದು ಶ್ಲಾಘಿಸಿದ ಅವರು, ಮೃತಪಟ್ಟ ಅಮಾಯಕರಿಗೆ ಶ್ರದ್ಧಾಂಜಲಿ ಸಲ್ಲಿಸಿದರು.

ಅರಣ್ಯ ಇಲಾಖೆ ದೌರ್ಜನ್ಯದ ಬಗ್ಗೆ ಆಕ್ಷೇಪ:
ಬೆಳ್ತಂಗಡಿ ತಾಲೂಕಿನಲ್ಲಿ ಅರಣ್ಯ ಇಲಾಖೆಯ ದೌರ್ಜನ್ಯ ಮತ್ತೆ ಹೆಚ್ಚಾಗಿದೆ ಎಂದು ಶಾಸಕ ಹರೀಶ್ ಪೂಂಜ ಕಳವಳ ವ್ಯಕ್ತಪಡಿಸಿದರು. “ಮಲವಂತಿಗೆ, ಶಿಬಾಜೆಯಲ್ಲಿ ಕೃಷಿಕರ ಬೆಳೆ ನಾಶ ಮಾಡಿ ಒಕ್ಕಲೆಬ್ಬಿಸುವ ಕೆಲಸ ಮಾಡಿಸಿದೆ. ಜಂಟಿ ಸರ್ವೇ ನಡೆಸಿದಾಗ ಸುಮಾರು 700 ಹೆಕ್ಟೇರ್ ಹೆಚ್ಚುವರಿ ಭೂಮಿ ಸಿಕ್ಕಿದೆ. ಅದನ್ನು ಕೃಷಿಕರಿಗೆ ನೀಡಬಹುದಾಗಿತ್ತು. ಆದರೆ ಇದನ್ನು ನೀಡಿಲ್ಲ. ಹಾಗಾಗಿ ಕೃಷಿಕರನ್ನು ಒಕ್ಕಲೆಬ್ಬಿಸುವ ಮೊದಲು ಈ ಕೆಲಸ ಮಾಡಬೇಕಿದೆ” ಎಂದು ಅವರು ಒತ್ತಾಯಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ಮಂಡಲ ಅಧ್ಯಕ್ಷ ಶ್ರೀನಿವಾಸ್ ರಾವ್, ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಪಾರೆಂಕಿ, ಉಜಿರೆ ಗ್ರಾ.ಪಂ. ಅಧ್ಯಕ್ಷೆ ಉಷಾಕಿರಣ ಕಾರಂತ್, ಉಪಾಧ್ಯಕ್ಷ ರವಿ ಬರಮೇಲು, ಪ.ಪಂ. ಅಧ್ಯಕ್ಷ ಜಯಾನಂದ ಗೌಡ ಉಪಸ್ಥಿತರಿದ್ದರು.

Ad Widget
Click to comment

Leave a Reply

ಸ್ಥಳೀಯ

Bail-ಬೆಳ್ತಂಗಡಿ: ಯತೀಶ್ ಗೌಡ ಕೊಲೆ ಪ್ರಕರಣದಲ್ಲಿ ಆರೋಪಿಗಳಿಗೆ ರಿಲೀಫ್; ಮತ್ತಿಬ್ಬರಿಗೆ ಜಾಮೀನು

Published

on

Ad Widget

Ad Widget

Ad Widget

Ad Widget

ಗುರುವಾಯನಕೆರೆಯ ಅಲಾದಿಕೊಟ್ಟಿಗೆಯಲ್ಲಿ ಕಳೆದ ಜೂನ್ 1ರಂದು ನಡೆದ ಪೆರ್ನೆ ಮೂಲದ ಯತೀಶ್ ಗೌಡ ಕೊಲೆ ಪ್ರಕರಣದಲ್ಲಿ ಬಂಧಿತರಾಗಿದ್ದ ಉಳಿದ ಇಬ್ಬರು ಆರೋಪಿಗಳಿಗೂ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಇದರೊಂದಿಗೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ಮೂವರು ಆರೋಪಿಗಳಿಗೂ ಜಾಮೀನು ದೊರೆತಂತಾಗಿದೆ.

Ad Widget

Ad Widget

Ad Widget

Ad Widget

ಬೆಳ್ತಂಗಡಿ: ಗುರುವಾಯನಕೆರೆಯ ಅಲಾದಿಕೊಟ್ಟಿಗೆಯಲ್ಲಿ ಕಳೆದ ಜೂನ್ 1ರಂದು ನಡೆದ ಪೆರ್ನೆ ಮೂಲದ ಯತೀಶ್ ಗೌಡ ಕೊಲೆ ಪ್ರಕರಣದಲ್ಲಿ ಬಂಧಿತರಾಗಿದ್ದ ಉಳಿದ ಇಬ್ಬರು ಆರೋಪಿಗಳಿಗೂ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಇದರೊಂದಿಗೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ಮೂವರು ಆರೋಪಿಗಳಿಗೂ ಜಾಮೀನು ದೊರೆತಂತಾಗಿದೆ.

Ad Widget

Ad Widget alt="Ad Widget"/>

Ad Widget

ಪ್ರಕರಣದ ಆರೋಪಿಗಳಾದ ಬೆಳ್ತಂಗಡಿ ತಾಲೂಕಿನ ಮಿತ್ತಬಾಗಿಲಿನ ಯಶೋಧರ ಹಾಗೂ ಕಡಬ ತಾಲೂಕಿನ ಚಾರ್ವಾಕದ ಮೋಹನ್ ಅವರಿಗೆ ಮಂಗಳೂರಿನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಜಾಮೀನು ನೀಡಿದೆ.

Ad Widget

Ad Widget <> Ad Widget

ಕೆಲ ದಿನಗಳ ಹಿಂದೆಯಷ್ಟೇ ಇದೇ ಪ್ರಕರಣದ ಮತ್ತೊಬ್ಬ ಆರೋಪಿ, ಬೆಳ್ತಂಗಡಿ ತಾಲೂಕಿನ ಪಡಂಗಡಿಯ ಇಬ್ರಾಹಿಂ ಅವರಿಗೂ ನ್ಯಾಯಾಲಯ ಜಾಮೀನು ಮಂಜೂರು ಮಾಡಿತ್ತು.

ಪ್ರಕರಣದ ಹಿನ್ನೆಲೆ:
ಜೂನ್ 1ರಂದು ಬೆಳಗ್ಗೆ ಬೆಳ್ತಂಗಡಿ ತಾಲೂಕಿನ ಗುರುವಾಯನಕೆರೆಯ ಅಲಾದಿಕೊಟ್ಟಿಗೆ ಎಂಬಲ್ಲಿ ಅಪರಿಚಿತ ಯುವಕನ ಮೃತದೇಹ ಪತ್ತೆಯಾಗಿತ್ತು. ಈ ಸಂಬಂಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅನುಮಾನಾಸ್ಪದ ಸಾವು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಲಾಗಿತ್ತು.

Ad Widget

Ad Widget

ಬಳಿಕ ಮೃತ ವ್ಯಕ್ತಿ ಪೆರ್ನೆ ಮೂಲದ ಯತೀಶ್ ಗೌಡ ಎಂಬುದು ಗುರುತಿಸಲ್ಪಟ್ಟಿತ್ತು. ಅವರ ಸಹೋದರ ನಿತಿನ್ ಹಾಗೂ ಸಂಬಂಧಿಕರು ಸ್ಥಳಕ್ಕೆ ಭೇಟಿ ನೀಡಿ ಮೃತದೇಹದ ಗುರುತು ಪತ್ತೆಹಚ್ಚಿದ್ದರು.

ಪ್ರಕರಣದ ತನಿಖೆ ನಡೆಸಿದ ಬೆಳ್ತಂಗಡಿ ಪೊಲೀಸರು ಕೊಲೆ ಆರೋಪದಡಿ ಯಶೋಧರ, ಮೋಹನ್ ಹಾಗೂ ಇಬ್ರಾಹಿಂ ಎಂಬ ಮೂವರನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದರು. ಇದೀಗ ಪ್ರಕರಣದ ಮೂವರು ಆರೋಪಿಗಳಿಗೂ ನ್ಯಾಯಾಲಯದಿಂದ ಜಾಮೀನು ದೊರೆತಿದೆ.

Ad Widget
Continue Reading

ನಿಧನ ವಾರ್ತೆ

Mudbidri-ಮಂಗಳೂರಿನಲ್ಲಿ ಮೇಲ್ಛಾವಣಿ ಕೆಲಸದ ವೇಳೆ ಅವಘಡ: ಮೂಡುಬಿದಿರೆ ತಾ.ಪಂ. ಮಾಜಿ ಉಪಾಧ್ಯಕ್ಷ ಸಾವು

Published

on

Ad Widget

Ad Widget

Ad Widget

Ad Widget

ಮೂಡುಬಿದಿರೆ ತಾಲೂಕು ಪಂಚಾಯತ್‌ನ ಮಾಜಿ ಉಪಾಧ್ಯಕ್ಷ ಸಂತೋಷ್ ಅವರು ಮಂಗಳೂರಿನಲ್ಲಿ ಮನೆಯ ಮೇಲ್ಛಾವಣಿಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಆಯತಪ್ಪಿ ಕೆಳಗೆ ಬಿದ್ದು ಮೃತಪಟ್ಟಿದ್ದಾರೆ. ಗುರುವಾರ ಸಂಭವಿಸಿದ ಈ ದುರಂತ ಘಟನೆ ದುಃಖಕ್ಕೆ ಕಾರಣವಾಗಿದೆ.

Ad Widget

Ad Widget

Ad Widget

Ad Widget

ಮೂಡುಬಿದಿರೆ, ನ.20: ಮೂಡುಬಿದಿರೆ ತಾಲೂಕು ಪಂಚಾಯತ್‌ನ ಮಾಜಿ ಉಪಾಧ್ಯಕ್ಷ ಸಂತೋಷ್ ಅವರು ಮಂಗಳೂರಿನಲ್ಲಿ ಮನೆಯ ಮೇಲ್ಛಾವಣಿಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಆಯತಪ್ಪಿ ಕೆಳಗೆ ಬಿದ್ದು ಮೃತಪಟ್ಟಿದ್ದಾರೆ. ಗುರುವಾರ ಸಂಭವಿಸಿದ ಈ ದುರಂತ ಘಟನೆ ದುಃಖಕ್ಕೆ ಕಾರಣವಾಗಿದೆ.

Ad Widget

Ad Widget alt="Ad Widget"/>

Ad Widget

ಮೂಡುಬಿದಿರೆ ತಾಲೂಕಿನ ಬೆಳುವಾಯಿ ನಿವಾಸಿಯಾಗಿದ್ದ ಸಂತೋಷ್ ಅವರು ಬೆಳುವಾಯಿ ಕ್ಷೇತ್ರದಿಂದ ತಾಲೂಕು ಪಂಚಾಯತ್ ಸದಸ್ಯರಾಗಿ ಆಯ್ಕೆಯಾಗಿದ್ದರು. ಹೊಸದಾಗಿ ರಚನೆಯಾಗಿದ್ದ ಮೂಡುಬಿದಿರೆ ತಾಲೂಕು ಪಂಚಾಯತ್‌ನ ಮೊದಲ ಅವಧಿಯಲ್ಲಿ ಉಪಾಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು.

Ad Widget

Ad Widget <> Ad Widget

ಸಂತೋಷ್ ಅವರು ಪ್ರತಿದಿನ ಕೆಲಸದ ನಿಮಿತ್ತ ಮಂಗಳೂರಿಗೆ ತೆರಳುತ್ತಿದ್ದರು. ಗುರುವಾರ ಬೇರೆ ಸ್ಥಳದಲ್ಲಿ ಬದಲಿ ಕೆಲಸಗಾರನಾಗಿ ಕೆಲಸಕ್ಕೆ ತೆರಳಿದ್ದ ಅವರು, ಮನೆಯೊಂದರ ಮೇಲ್ಛಾವಣಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ ಕೆಳಕ್ಕೆ ಬಿದ್ದಿದ್ದಾರೆ ಎನ್ನಲಾಗಿದೆ.

ಘಟನೆಯಲ್ಲಿ ಗಂಭೀರ ಗಾಯಗೊಂಡ ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ.

Ad Widget

Ad Widget

ಮೃತ ಸಂತೋಷ್ ಅವರು ಪತ್ನಿ ಹಾಗೂ ಪುಟ್ಟ ಮಗುವನ್ನು ಅಗಲಿದ್ದಾರೆ. ಜನಪ್ರತಿನಿಧಿಯಾಗಿ ಸೇವೆ ಸಲ್ಲಿಸಿದ್ದ ಅವರ ಅಕಾಲಿಕ ನಿಧನಕ್ಕೆ ಸ್ಥಳೀಯರು ಹಾಗೂ ಗಣ್ಯರು ಸಂತಾಪ ಸೂಚಿಸಿದ್ದಾರೆ.

Ad Widget
Continue Reading

ನಿಧನ ವಾರ್ತೆ

Heart attack-ಸಾಲಿಗ್ರಾಮ: ಕಚೇರಿಯಲ್ಲೇ ಹೃದಯಾಘಾತ; ಬಹುಮುಖ ಪ್ರತಿಭೆ ದಿನೇಶ್ ಹೊಳ್ಳ ನಿಧನ

Published

on

Ad Widget

Ad Widget

Ad Widget

Ad Widget

ಫೋಟೋಗ್ರಫಿ, ಕಂಪ್ಯೂಟರ್ ತಂತ್ರಜ್ಞಾನ, ವೆಬ್‌ಡಿಸೈನಿಂಗ್ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಪರಿಣತಿ ಹೊಂದಿದ್ದ ಸಾಲಿಗ್ರಾಮದ ಬಹುಮುಖ ಪ್ರತಿಭೆ ದಿನೇಶ್ ಹೊಳ್ಳ (52) ಅವರು ಗುರುವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ.

Ad Widget

Ad Widget

Ad Widget

Ad Widget

ಸಾಲಿಗ್ರಾಮ: ಫೋಟೋಗ್ರಫಿ, ಕಂಪ್ಯೂಟರ್ ತಂತ್ರಜ್ಞಾನ, ವೆಬ್‌ಡಿಸೈನಿಂಗ್ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಪರಿಣತಿ ಹೊಂದಿದ್ದ ಸಾಲಿಗ್ರಾಮದ ಬಹುಮುಖ ಪ್ರತಿಭೆ ದಿನೇಶ್ ಹೊಳ್ಳ (52) ಅವರು ಗುರುವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ.

Ad Widget

Ad Widget alt="Ad Widget"/>

Ad Widget

ಗುರುವಾರ ಬೆಳಿಗ್ಗೆ ಸಾಲಿಗ್ರಾಮದಲ್ಲಿರುವ ತಮ್ಮ ಕಚೇರಿಯಲ್ಲಿ ಕುಳಿತಿದ್ದ ವೇಳೆ ಅವರಿಗೆ ತೀವ್ರ ಹೃದಯಾಘಾತ ಸಂಭವಿಸಿದ್ದು, ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ. ಅವರ ಅಕಾಲಿಕ ನಿಧನದ ಸುದ್ದಿ ಬಂಧುಮಿತ್ರರು ಹಾಗೂ ಸ್ಥಳೀಯರಲ್ಲಿ ತೀವ್ರ ದುಃಖಕ್ಕೆ ಕಾರಣವಾಗಿದೆ.

Ad Widget

Ad Widget <> Ad Widget

ದಿನೇಶ್ ಹೊಳ್ಳ ಅವರು ಫೋಟೋಗ್ರಫಿ, ಕಂಪ್ಯೂಟರ್ ತಂತ್ರಜ್ಞಾನ, ವೆಬ್‌ಡಿಸೈನಿಂಗ್, ವ್ಯಂಗ್ಯಚಿತ್ರ ರಚನೆ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ತಮ್ಮ ಪ್ರತಿಭೆ ಹಾಗೂ ಪರಿಣತಿಯಿಂದ ಗುರುತಿಸಿಕೊಂಡಿದ್ದರು. ಇದರ ಜೊತೆಗೆ ಚಪ್ಪಲಿ ಉದ್ಯಮದಲ್ಲಿಯೂ ತೊಡಗಿಸಿಕೊಂಡು ಹಲವು ಕ್ಷೇತ್ರಗಳಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದರು.

ಬಹುಮುಖ ಪ್ರತಿಭೆ ಹಾಗೂ ವಿವಿಧ ಕ್ಷೇತ್ರಗಳ ಜ್ಞಾನ ಹೊಂದಿದ್ದ ಅವರು ಸ್ನೇಹಜೀವಿಯಾಗಿದ್ದು, ಎಲ್ಲರೊಂದಿಗೆ ಆತ್ಮೀಯ ಒಡನಾಟ ಹೊಂದಿದ್ದರು.

Ad Widget

Ad Widget

ಮೃತರು ತಾಯಿ, ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ.

Ad Widget
Continue Reading

ಇಂದಿನ ಟ್ರೆಂಡಿಂಗ್‌ ಸುದ್ದಿಗಳು

error: Content is protected !!