ಸ್ಥಳೀಯ
Nesara Dashapranti-ನೇಸರ ದಶಪ್ರಣತಿಯ ಕ್ರೀಡಾಕೂಟ ಸಮಾರೋಪ ಸಮಾರಂಭ; ಇತಿಹಾಸ ಸೃಷ್ಟಿಸಿದ ಕ್ರೀಡಾಕೂಟ : ದಾಖಲೆಯ ತಂಡಗಳ ಭಾಗಿ; ಮೂರು ಸ್ಪರ್ಧೆಗಳಲ್ಲಿ 65 ತಂಡ : ಮೂರು ಜಿಲ್ಲೆಗಳಿಂದ ಭಾಗವಹಿಸಿದ ತಂಡಗಳು : ಅಭೂತಪೂರ್ವ ಯಶಸ್ಸು
ನೇಸರ ಯುವಕ ಮಂಡಲ ಇದರ ದಶಪ್ರಣತಿ ಪ್ರಯುಕ್ತ ನ.9 ರಂದು ಮುಕ್ಕೂರು ಶಾಲಾ ವಠಾರದಲ್ಲಿ ನಡೆದ ಪುರುಷರ ವಿಭಾಗದ ಲೆವೆಲ್, ಸಿಂಗಲ್ ಗ್ರಿಪ್ ಮಾದರಿ, ಮಹಿಳಾ ವಿಭಾಗದ ಲೆವೆಲ್ ಮಾದರಿ ಹಗ್ಗಜಗ್ಗಾಟ ಹಾಗೂ ಗ್ರಾಮ ಗ್ರಾಮಗಳ ನಡುವಿನ ವಾಲಿಬಾಲ್ ಪಂದ್ಯಾಟಕೂಟದಲ್ಲಿ ದಕ್ಷಿಣ ಕನ್ನಡ, ಕೊಡಗು, ಉಡುಪಿ ಜಿಲ್ಲೆಗಳಿಂದ ಒಟ್ಟು 65 ತಂಡಗಳು ಆಗಮಿಸಿತ್ತು. ಈ ಮೂಲಕ ಪೆರುವಾಜೆ ಗ್ರಾಮದಲ್ಲೇ ಅತ್ಯಧಿಕ ತಂಡ ಭಾಗವಹಿಸಿ ಇತಿಹಾಸ ಸೃಷ್ಟಿಸಿತ್ತು.
ಮುಕ್ಕೂರು : ನೇಸರ ಯುವಕ ಮಂಡಲ ಇದರ ದಶಪ್ರಣತಿ ಪ್ರಯುಕ್ತ ನ.9 ರಂದು ಮುಕ್ಕೂರು ಶಾಲಾ ವಠಾರದಲ್ಲಿ ನಡೆದ ಪುರುಷರ ವಿಭಾಗದ ಲೆವೆಲ್, ಸಿಂಗಲ್ ಗ್ರಿಪ್ ಮಾದರಿ, ಮಹಿಳಾ ವಿಭಾಗದ ಲೆವೆಲ್ ಮಾದರಿ ಹಗ್ಗಜಗ್ಗಾಟ ಹಾಗೂ ಗ್ರಾಮ ಗ್ರಾಮಗಳ ನಡುವಿನ ವಾಲಿಬಾಲ್ ಪಂದ್ಯಾಟಕೂಟದಲ್ಲಿ ದಕ್ಷಿಣ ಕನ್ನಡ, ಕೊಡಗು, ಉಡುಪಿ ಜಿಲ್ಲೆಗಳಿಂದ ಒಟ್ಟು 65 ತಂಡಗಳು ಆಗಮಿಸಿತ್ತು. ಈ ಮೂಲಕ ಪೆರುವಾಜೆ ಗ್ರಾಮದಲ್ಲೇ ಅತ್ಯಧಿಕ ತಂಡ ಭಾಗವಹಿಸಿ ಇತಿಹಾಸ ಸೃಷ್ಟಿಸಿತ್ತು.

65 ತಂಡಗಳು
ಪುರುಷರ ವಿಭಾಗದ ಲೆವೆಲ್ ಮಾದರಿಯ ಹಗ್ಗಜಗ್ಗಾಟ ಸ್ಪರ್ಧೆಯಲ್ಲಿ 24 ತಂಡಗಳು, ಸಿಂಗಲ್ ಗ್ರಿಪ್ ಮಾದರಿಯ ಸ್ಪರ್ಧೆಯಲ್ಲಿ 18 ತಂಡಗಳು, ಗ್ರಾಮ ಗ್ರಾಮಗಳ ನಡುವಿನ ವಾಲಿಬಾಲ್ ಪಂದ್ಯಾಟದಲ್ಲಿ 19 ತಂಡಗಳು ಹಾಗೂ ಪೆರುವಾಜೆ ಗ್ರಾಮ ಮಟ್ಟದ ಮಹಿಳಾ ಹಗ್ಗಜಗ್ಗಾಟ ಸ್ಪರ್ಧೆಯಲ್ಲಿ 4 ತಂಡಗಳು ಭಾಗವಹಿಸಿತ್ತು.

ವಾಲಿಬಾಲ್ ಪಂದ್ಯಾಟ
ಗ್ರಾಮ ಗ್ರಾಮಗಳ ವಾಲಿಬಾಲ್ ಪಂದ್ಯಾಟಕೂಟದಲ್ಲಿ ಎಸ್ ಕೆಜಿಸಿ ಪಟ್ಟೆ ಪ್ರಥಮ ಸ್ಥಾನ ಪಡೆದು 5001 ರೂ. ನಗದು ಮತ್ತು ದಶಪ್ರಣತಿ ಟ್ರೋಫಿ, ಎಸ್ ಕೆಜಿಸಿ ಕೈರಂಗಳ ದ್ವಿತೀಯ ಸ್ಥಾನದೊಂದಿಗೆ 3001 ಮತ್ತು ದಶಪ್ರಣತಿ ಟ್ರೋಫಿ, ಡೈಮಂಡ್ ಬಾಯ್ಸ್ ಕಾರ್ಕಳ ತೃತೀಯ ಸ್ಥಾನದೊಂದಿಗೆ ದಶಪ್ರಣತಿ ಟ್ರೋಫಿ, ಪ್ರೆಂಡ್ಸ್ ಕುತ್ತಾರು ತಂಡ ಚತುರ್ಥ ಸ್ಥಾನದೊಂದಿಗೆ ದಶಪ್ರಣತಿ ಟ್ರೋಫಿಯನ್ನು ಮುಡಿಗೇರಿಸಿಕೊಂಡಿತ್ತು.

ಲೆವೆಲ್ ಮಾದರಿ ಹಗ್ಗಜಗ್ಗಾಟ
ಪುರುಷರ ವಿಭಾಗದ ಲೆವೆಲ್ ಮಾದರಿ ಹಗ್ಗಜಗ್ಗಾಟ ಸ್ಪರ್ಧೆಯಲ್ಲಿ ಜಠಾಯು ವಿಟ್ಲ ಪ್ರಥಮ ಸ್ಥಾನಿಯಾಗಿ 5001 ರೂ. ನಗದು ಮತ್ತು ದಶಪ್ರಣತಿ ಟ್ರೋಫಿ, ಮಿತ್ತಡ್ಕ ಕೇಸರಿ ಮಿತ್ರವೃಂದ ದ್ವಿತೀಯ ಸ್ಥಾನದೊಂದಿಗೆ 3001 ರೂ. ನಗದು ಮತ್ತು ದಶಪ್ರಣತಿ ಟ್ರೋಫಿ, ನ್ಯೂ ಫ್ರೆಂಡ್ಸ್ ಬೊಮ್ಮಾರು ತೃತೀಯ ಸ್ಥಾನದೊಂದಿಗೆ 2001 ರೂ. ನಗದು ಮತ್ತು ದಶಪ್ರಣತಿ ಟ್ರೋಫಿ, ಶಿವಾಜಿ ಫ್ರೆಂಡ್ಸ್ ದುಗಲಡ್ಕ ಚತುರ್ಥ ಸ್ಥಾನದೊಂದಿಗೆ 1001 ರೂ. ನಗದು ಮತ್ತು ದಶಪ್ರಣತಿ ಟ್ರೋಫಿ ಪಡೆಯಿತು.

ಸಿಂಗಲ್ ಗ್ರಿಫ್ ಮಾದರಿ
ಪುರುಷರ ವಿಭಾಗದ ಸಿಂಗಲ್ ಗ್ರಿಪ್ ಮಾದರಿ ಹಗ್ಗಜಗ್ಗಾಟ ಸ್ಪರ್ಧೆಯಲ್ಲಿ ಶ್ರೀ ವಿಷ್ಣು ಫ್ರೆಂಡ್ಸ್ ಕಾನಾವು ಪ್ರಥಮ ಸ್ಥಾನಿಯಾಗಿ 5001 ರೂ. ನಗದು ಮತ್ತು ದಶಪ್ರಣತಿ ಟ್ರೋಫಿ, ಕುಂಡಡ್ಕ ಶ್ರೀ ದುರ್ಗಾ ಫ್ರೆಂಡ್ಸ್
ದ್ವಿತೀಯ ಸ್ಥಾನದೊಂದಿಗೆ 3001 ರೂ. ನಗದು ಮತ್ತು ದಶಪ್ರಣತಿ ಟ್ರೋಫಿ, ಪರುಶರಾಮ ಉದನೆ ತೃತೀಯ ಸ್ಥಾನದೊಂದಿಗೆ 2001 ರೂ. ನಗದು ಮತ್ತು ದಶಪ್ರಣತಿ ಟ್ರೋಫಿ, ಶ್ರೀ ವಿಷ್ಣು ಬಳಗ ಸಂಪ್ಯ ಚತುರ್ಥ ಸ್ಥಾನದೊಂದಿಗೆ 1001 ರೂ. ನಗದು ಮತ್ತು ದಶಪ್ರಣತಿ ಟ್ರೋಫಿ ಗಿಟ್ಟಿಸಿತ್ತು.

ಮಹಿಳಾ ಹಗ್ಗಜಗ್ಗಾಟ ಸ್ಪರ್ಧೆ
ಪೆರುವಾಜೆ ಗ್ರಾಮದ ಮಹಿಳೆಯರಿಗೆ ನಡೆದ ಹಗ್ಗಜಗ್ಗಾಟ ಸ್ಪರ್ಧೆಯಲ್ಲಿ ರೂಪಾ ಮತ್ತು ತಂಡ 1501 ರೂ. ನಗದು ಮತ್ತು ದಶಪ್ರಣತಿ ಟ್ರೋಫಿ, ಉಷಾ ಕೂರೋಡಿ ಮತ್ತು ತಂಡ 1001 ರೂ. ನಗದು ಮತ್ತು ದಶಪ್ರಣತಿ ಟ್ರೋಫಿ ಪಡೆಯಿತು.

ಗಣ್ಯರಿಂದ ಪ್ರಶಸ್ತಿ ಪ್ರಧಾನ
ವಿವಿಧ ವಿಭಾಗದ ಸ್ಪರ್ಧೆಗಳಲ್ಲಿನ ವಿಜೇತರಿಗೆ ಗಣ್ಯರು ಪ್ರಶಸ್ತಿ ಪ್ರಧಾನ ಮಾಡಿದರು. ಪೆರುವೋಡಿ ಶ್ರೀ ವಿಷ್ಣುಮೂರ್ತಿ ದೇವಾಲಯದ ಆಡಳಿತ ಮೊಕ್ತೇಸರ ಉಮೇಶ್ ರಾವ್ ಕೊಂಡೆಪ್ಪಾಡಿ, ನೇಸರ ದಶಪ್ರಣತಿ ಸಮಿತಿ 2026 ರ ಅಧ್ಯಕ್ಷ ಡಾ|ನರಸಿಂಹ ಶರ್ಮ ಕಾನಾವು, ಪ್ರಧಾನ ಕಾರ್ಯದರ್ಶಿ ಜಗನ್ನಾಥ ಪೂಜಾರಿ ಮುಕ್ಕೂರು, ಸಂಚಾಲಕ ಕುಂಬ್ರ ದಯಾಕರ ಆಳ್ವ, ಪ್ರಗತಿಪರ ಕೃಷಿಕರಾದ ಸಂಪತ್ ಕುಮಾರ್ ರೈ ಪಾತಾಜೆ, ಗೋಪಾಲ ಸುವರ್ಣ, ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಾಲಯದ ವ್ಯವಸ್ಥಾಪನ ಸಮಿತಿ ಮಾಜಿ ಅಧ್ಯಕ್ಷ ಉಮೇಶ್ ಕೆಎಂಬಿ, ಬೆಳ್ಳಾರೆ ಜೇಸಿಐ ಮಾಜಿ ಅಧ್ಯಕ್ಷ ಜಗದೀಶ್ ರೈ ಪೆರುವಾಜೆ,
ನ್ಯಾಯವಾದಿ ಗಣಪತಿ ಭಟ್ ನೀರ್ಕಜೆ, ಪ್ರಗತಿಪರ ಕೃಷಿಕ ಸತ್ಯಪ್ರಸಾದ್ ಕಂಡಿಪ್ಪಾಡಿ, ಮುಕ್ಕೂರು ಹಾಲು ಉತ್ಪಾದಕರ ಸಹಕಾರ ಸಂಘದ ನಿರ್ದೇಶಕ ಸುಬ್ರಾಯ ಭಟ್ ನೀರ್ಕಜೆ, ಪ್ರಗತಿಪರ ಕೃಷಿಕರಾದ ಗುಡ್ಡಪ್ಪ ಗೌಡ ಅಡ್ಯತಕಂಡ, ಸುಬ್ರಹ್ಮಣ್ಯ ಗೌಡ ಒರುಂಕು, ಮುಕ್ಕೂರು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಮಾಜಿ ಅಧ್ಯಕ್ಷ ಯಶವಂತ ಜಾಲು, ನೇಸರ ಯುವಕ ಮಂಡಲದ ಅಧ್ಯಕ್ಷ ರಮೇಶ್ ಕಾನಾವು ಪ್ರಶಸ್ತಿ ವಿತರಿಸಿದರು.

ಈ ಸಂದರ್ಭದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾ.ಯೋ.ಅರಸಿಕೆರೆ ತಾಲೂಕಿನ ಮೇಲ್ವಿಚಾರಕ ಸೀತಾರಾಮ ಕಾನಾವು, ಪ್ರಗತಿಪರ ಕೃಷಿಕ ಗೋಪಾಲಕೃಷ್ಣ ಭಟ್ ಮನವಳಿಕೆ, ವೆಂಕಪ್ಪ ಗೌಡ ನಾರ್ಕೋಡು ಪೆರ್ಜಿ, ಶಿವಪ್ರಕಾಶ್ ಆಚಾರ್ಯ, ಗಣೇಶ್ ಅಡ್ಯತಕಂಡ, ಕಿಶನ್ ಅಡ್ಯತಕಂಡ ಮೊದಲಾದವರು ಉಪಸ್ಥಿತರಿದ್ದರು.

ತೀರ್ಪುಗಾರರರಾಗಿ ಸಹಕಾರ
ಕ್ರೀಡಾಕೂಟದಲ್ಲಿ ತೀರ್ಪುಗಾರರಾಗಿ ಎಣ್ಮೂರು ಸ.ಪ್ರೌ.ಶಾಲೆಯ ಶಿಕ್ಷಕ ಲಿಂಗಪ್ಪ ಗೌಡ, ದೈಹಿಕ ಶಿಕ್ಷಣ ನಿರ್ದೇಶಕರಾದ ಚಂದ್ರಶೇಖರ ಕೆ, ರಂಗನಾಥ್ ಸುಳ್ಯ, ರಫೀಕ್ ಟಾಸ್ಕೋ, ಅನ್ವರ್ ಬೀರಿ ಉಳ್ಳಾಲ, ಶರೀಫ್ ಮಾಡಾವು, ಶರೀಫ್ ಕುಂಡಡ್ಕ, ಝುಬೈರ್ ಸಹಕರಿಸಿದರು.ವೀಕ್ಷಕ ವಿವರಣೆಕಾರರಾಗಿ ಪುರುಷೋತ್ತಮ ಕುಂಡಡ್ಕ, ಪ್ರಜ್ವಲ್ ರೈ ಚೆನ್ನಾವರ ಸಹಕರಿಸಿದರು.
ಬಿಗ್ ನ್ಯೂಸ್
Puttur-ಎಸ್‌ಡಿಪಿಐ ನಿರಂತರ ಪ್ರಯತ್ನ: ಪುತ್ತೂರಿನ ಅಲ್ಪಸಂಖ್ಯಾತರ ಸೇವಾ ಕೇಂದ್ರ ಪುನರಾರಂಭ
ಕಳೆದ ಮೂರು ವರ್ಷಗಳಿಂದ ಕಾರ್ಯಾಚರಣೆ ಸ್ಥಗಿತಗೊಂಡಿದ್ದ ಪುತ್ತೂರು ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಇದೀಗ ಮತ್ತೆ ಸಾರ್ವಜನಿಕರ ಸೇವೆಗೆ ಲಭ್ಯವಾಗಿದೆ. ಕೇಂದ್ರವನ್ನು ಪುನರಾರಂಭಿಸುವಂತೆ ಎಸ್‌ಡಿಪಿಐ ಪುತ್ತೂರು ನಗರ ಸಮಿತಿಯು ಸಂಬಂಧಪಟ್ಟ ಅಧಿಕಾರಿಗಳ ಗಮನ ಸೆಳೆದು ನಿರಂತರ ಪ್ರಯತ್ನ ನಡೆಸಿತ್ತು.
ಪುತ್ತೂರು: ಕಳೆದ ಮೂರು ವರ್ಷಗಳಿಂದ ಕಾರ್ಯಾಚರಣೆ ಸ್ಥಗಿತಗೊಂಡಿದ್ದ ಪುತ್ತೂರು ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಇದೀಗ ಮತ್ತೆ ಸಾರ್ವಜನಿಕರ ಸೇವೆಗೆ ಲಭ್ಯವಾಗಿದೆ.
ಕೇಂದ್ರವನ್ನು ಪುನರಾರಂಭಿಸುವಂತೆ ಎಸ್‌ಡಿಪಿಐ ಪುತ್ತೂರು ನಗರ ಸಮಿತಿಯು ಸಂಬಂಧಪಟ್ಟ ಅಧಿಕಾರಿಗಳ ಗಮನ ಸೆಳೆದು ನಿರಂತರ ಪ್ರಯತ್ನ ನಡೆಸಿತ್ತು. ಸಾರ್ವಜನಿಕರಿಗೆ ಅನುಕೂಲವಾಗುವ ಈ ಸೇವಾ ಕೇಂದ್ರವನ್ನು ಮತ್ತೆ ಆರಂಭಿಸಬೇಕೆಂದು ಸಮಿತಿಯು ಒತ್ತಾಯಿಸಿತ್ತು.
ಈ ನಡುವೆ, ಕೇಂದ್ರಕ್ಕೆ ಸಂಬಂಧಿಸಿದ ಕಟ್ಟಡವನ್ನು ಹಾಸ್ಟೆಲ್ ಬಳಕೆಗೆ ಪರಿವರ್ತಿಸಲು ಪುತ್ತೂರು ಶಾಸಕರು ಪ್ರಯತ್ನಿಸಿದ್ದರು ಎಂಬ ವಿಚಾರ ವಿವಾದಕ್ಕೆ ಕಾರಣವಾಗಿತ್ತು.
ಇದೀಗ ಮೂರು ವರ್ಷಗಳ ಬಳಿಕ ಅಲ್ಪಸಂಖ್ಯಾತರ ಸಾಮಾನ್ಯ ಸೇವಾ ಕೇಂದ್ರ ಮತ್ತೆ ಕಾರ್ಯಾರಂಭ ಮಾಡಿದ್ದು, ಸಾರ್ವಜನಿಕರಿಗೆ ಸೇವೆ ಲಭ್ಯವಾಗಿರುವುದಾಗಿ ಎಸ್‌ಡಿಪಿಐ ಪುತ್ತೂರು ನಗರ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.
ಶಿಕ್ಷಣ
RTE-ಆರ್‌ಟಿಇ ಅಡಿ ಉಚಿತ ಶಿಕ್ಷಣಕ್ಕೆ ಆದಾಯ ಮಿತಿ ಹೆಚ್ಚಿಸಿದ ರಾಜ್ಯ ಸರಕಾರ: 3.5 ಲಕ್ಷ ರೂ.ನಿಂದ 8 ಲಕ್ಷ ರೂ.ಗೆ ಏರಿಕೆ
ಶಿಕ್ಷಣ ಹಕ್ಕು ಕಾಯ್ದೆ (ಆರ್‌ಟಿಇ) ಅಡಿಯಲ್ಲಿ ಖಾಸಗಿ ಶಾಲೆಗಳಲ್ಲಿ ಉಚಿತ ಪ್ರವೇಶ ಪಡೆಯಲು ಪೋಷಕರ ವಾರ್ಷಿಕ ಆದಾಯದ ಮಿತಿಯನ್ನು ರಾಜ್ಯ ಸರಕಾರ ಹೆಚ್ಚಿಸಿದೆ. ಈ ಹಿಂದೆ ಇದ್ದ 3.5 ಲಕ್ಷ ರೂ. ಆದಾಯ ಮಿತಿಯನ್ನು ಇದೀಗ 8 ಲಕ್ಷ ರೂ.ಗೆ ಏರಿಸಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಆದೇಶ ಹೊರಡಿಸಿದೆ.
ಬೆಂಗಳೂರು: ಶಿಕ್ಷಣ ಹಕ್ಕು ಕಾಯ್ದೆ (ಆರ್‌ಟಿಇ) ಅಡಿಯಲ್ಲಿ ಖಾಸಗಿ ಶಾಲೆಗಳಲ್ಲಿ ಉಚಿತ ಪ್ರವೇಶ ಪಡೆಯಲು ಪೋಷಕರ ವಾರ್ಷಿಕ ಆದಾಯದ ಮಿತಿಯನ್ನು ರಾಜ್ಯ ಸರಕಾರ ಹೆಚ್ಚಿಸಿದೆ. ಈ ಹಿಂದೆ ಇದ್ದ 3.5 ಲಕ್ಷ ರೂ. ಆದಾಯ ಮಿತಿಯನ್ನು ಇದೀಗ 8 ಲಕ್ಷ ರೂ.ಗೆ ಏರಿಸಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಆದೇಶ ಹೊರಡಿಸಿದೆ.
ಉಚಿತ ಮತ್ತು ಕಡ್ಡಾಯ ಶಿಕ್ಷಣ ಹಕ್ಕು ಕಾಯ್ದೆಯಡಿ ಆರ್ಥಿಕವಾಗಿ ದುರ್ಬಲ ಹಾಗೂ ಹಿಂದುಳಿದ ವರ್ಗಗಳ ಮಕ್ಕಳಿಗೆ ಖಾಸಗಿ ಶಾಲೆಗಳಲ್ಲಿ ಪ್ರವೇಶ ಪಡೆಯಲು ಅವಕಾಶ ಕಲ್ಪಿಸಲಾಗಿದೆ. ಆದರೆ, ಪೋಷಕರ ವಾರ್ಷಿಕ ಆದಾಯದ ಮಿತಿ 3.5 ಲಕ್ಷ ರೂ.ಗೆ ಸೀಮಿತವಾಗಿದ್ದ ಕಾರಣ ಹಲವು ಕುಟುಂಬಗಳು ಈ ಯೋಜನೆಯ ಪ್ರಯೋಜನದಿಂದ ವಂಚಿತರಾಗುತ್ತಿದ್ದರು.
ಈ ಹಿನ್ನೆಲೆಯಲ್ಲಿ ಹೆಚ್ಚಿನ ಕುಟುಂಬಗಳ ಮಕ್ಕಳಿಗೂ ಆರ್‌ಟಿಇ ಸೌಲಭ್ಯ ದೊರೆಯುವಂತೆ ಮಾಡಲು ಆದಾಯದ ಮಿತಿಯನ್ನು 8 ಲಕ್ಷ ರೂ.ಗೆ ಹೆಚ್ಚಿಸುವ ನಿರ್ಧಾರ ಕೈಗೊಳ್ಳಲಾಗಿದೆ. ಈ ಮೂಲಕ ಆರ್‌ಟಿಇ ಪ್ರವೇಶಕ್ಕೆ ದೇಶದಲ್ಲೇ ಅತ್ಯಧಿಕ ವಾರ್ಷಿಕ ಆದಾಯ ಮಿತಿಯನ್ನು ನಿಗದಿಪಡಿಸಿದ ರಾಜ್ಯವಾಗಿ ಕರ್ನಾಟಕ ಹೊರಹೊಮ್ಮಿದೆ.
ಆರ್‌ಟಿಇ ಕಾಯ್ದೆಯ ಪ್ರಕಾರ ಖಾಸಗಿ ಅನುದಾನರಹಿತ ಶಾಲೆಗಳಲ್ಲಿ ಶೇ.25ರಷ್ಟು ಸೀಟುಗಳನ್ನು ಆರ್ಥಿಕವಾಗಿ ದುರ್ಬಲ ಹಾಗೂ ಹಿಂದುಳಿದ ವರ್ಗಗಳ ಮಕ್ಕಳಿಗೆ ಮೀಸಲಿಡುವುದು ಕಡ್ಡಾಯವಾಗಿದೆ. ಈ ಮೀಸಲು ಸೀಟುಗಳಲ್ಲಿ ಪ್ರವೇಶ ಪಡೆಯುವ ಅರ್ಹ ಮಕ್ಕಳ ಶಿಕ್ಷಣದ ಶುಲ್ಕವನ್ನು ಸರಕಾರವೇ ಭರಿಸುತ್ತದೆ.
ಸುಳ್ಯ
Sullia-ಸುಳ್ಯ: ಜಾನುವಾರು ಕಳ್ಳತನಕ್ಕೆ ಯತ್ನ: ಇಬ್ಬರು ಪೊಲೀಸ್ ವಶಕ್ಕೆ
ಮಾಂಸ ಮಾಡಿ ಮಾರಾಟ ಮಾಡುವ ಉದ್ದೇಶದಿಂದ ಜಾನುವಾರುಗಳನ್ನು ಕಳ್ಳತನ ಮಾಡಲು ಯತ್ನಿಸಿದ ಇಬ್ಬರನ್ನು ಸುಳ್ಯ ಪೊಲೀಸರು ವಶಕ್ಕೆ ಪಡೆದ ಘಟನೆ ನ.18ರ ಮುಂಜಾನೆ ಸುಳ್ಯ ಕಸಬಾ ಗ್ರಾಮದ ಗಾಂಧಿನಗರ ಶಾಲಾ ಮೈದಾನದ ಬಳಿ ನಡೆದಿದೆ.
ಸುಳ್ಯ: ಮಾಂಸ ಮಾಡಿ ಮಾರಾಟ ಮಾಡುವ ಉದ್ದೇಶದಿಂದ ಜಾನುವಾರುಗಳನ್ನು ಕಳ್ಳತನ ಮಾಡಲು ಯತ್ನಿಸಿದ ಇಬ್ಬರನ್ನು ಸುಳ್ಯ ಪೊಲೀಸರು ವಶಕ್ಕೆ ಪಡೆದ ಘಟನೆ ನ.18ರ ಮುಂಜಾನೆ ಸುಳ್ಯ ಕಸಬಾ ಗ್ರಾಮದ ಗಾಂಧಿನಗರ ಶಾಲಾ ಮೈದಾನದ ಬಳಿ ನಡೆದಿದೆ.
ಜಾನುವಾರುಗಳನ್ನು ಕಳ್ಳತನ ಮಾಡಿ ಸಾಗಾಟ ಮಾಡಲು ಯತ್ನಿಸುತ್ತಿರುವ ಬಗ್ಗೆ ಸುಳ್ಯ ಪೊಲೀಸ್ ಠಾಣೆಯ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಪೊಲೀಸ್ ಉಪನಿರೀಕ್ಷಕ ಉದಯ ರವಿ ಅವರಿಗೆ ಮಾಹಿತಿ ಲಭಿಸಿತ್ತು. ತಕ್ಷಣ ಸಿಬ್ಬಂದಿಗಳೊಂದಿಗೆ ಸ್ಥಳಕ್ಕೆ ತೆರಳಿ ಪರಿಶೀಲಿಸಿದಾಗ, ಶಾಲಾ ಮೈದಾನದಲ್ಲಿದ್ದ ಕಂಬವೊಂದಕ್ಕೆ ಎರಡು ಜಾನುವಾರುಗಳನ್ನು ಹಗ್ಗದಿಂದ ಕಟ್ಟಿ ಹಾಕಿರುವುದು ಕಂಡುಬಂದಿದೆ.
ಸ್ಥಳದಲ್ಲಿದ್ದ ಇಬ್ಬರನ್ನು ವಶಕ್ಕೆ ಪಡೆದು ವಿಚಾರಿಸಿದಾಗ, ಅವರು ಸುಳ್ಯ ಆಲೆಟ್ಟಿ ನಿವಾಸಿಗಳಾದ ಹಾಶಿರ್ (28) ಮತ್ತು ಸಂಶುದ್ದೀನ್ (25) ಎಂದು ತಿಳಿದುಬಂದಿದೆ.
ಜಾನುವಾರುಗಳನ್ನು ಕಳ್ಳತನ ಮಾಡಿ ಮಾಂಸವನ್ನಾಗಿ ಮಾಡಿ ಮಾರಾಟ ಮಾಡುವ ಉದ್ದೇಶ ಹೊಂದಿದ್ದಾಗಿ ಆರೋಪಿಗಳು ವಿಚಾರಣೆ ವೇಳೆ ತಿಳಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಕೃತ್ಯಕ್ಕೆ ಬಳಸಲು ಸ್ಥಳಕ್ಕೆ ತಂದಿದ್ದ ದ್ವಿಚಕ್ರ ವಾಹನ ಹಾಗೂ ಎರಡು ಜಾನುವಾರುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಈ ಕುರಿತು ಸುಳ್ಯ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 161/2026ರಂತೆ ಭಾರತೀಯ ನ್ಯಾಯ ಸಂಹಿತೆ (BNS) 2023ರ ಕಲಂ 303(2) ಜೊತೆಗೆ 62 ಹಾಗೂ ಕರ್ನಾಟಕ ಗೋಹತ್ಯೆ ನಿಷೇಧ ಕಾಯ್ದೆಯ ಕಲಂ 7 ಮತ್ತು 15ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
-
ರಾಜಕೀಯ22 hours agoPuttur-Big Breaking: ನಾಳೆ ಪುತ್ತೂರಿಗೆ ಬಿಜೆಪಿ ಘಟಾನುಘಟಿ ನಾಯಕರ ದಂಡು; ವಿಜಯೇಂದ್ರ, ಆರ್. ಅಶೋಕ್ ಸಹಿತ ಹಲವು ಹಿರಿಯ ನಾಯಕರ ಭೇಟಿ
-
ಬಿಗ್ ನ್ಯೂಸ್6 hours agoPuttur-ಪುತ್ತೂರು: ದರ್ಬೆಯಲ್ಲಿ ಭೀಕರ ಕಾರು ಅಪಘಾತ: ಓರ್ವ ಮೃತ್ಯು, ಮತ್ತೊಬ್ಬರಿಗೆ ಗಂಭೀರ ಗಾಯ
-
ಸಿನೆಮಾ23 hours agoRamya Krishnan-ಪತಿಯಿಂದ ದೂರವಿದ್ದರೂ ದಾಂಪತ್ಯ ಗಟ್ಟಿಯಾಗಿದೆ..! ವಿಚ್ಛೇದನ ವದಂತಿಗೆ ರಮ್ಯಾ ಕೃಷ್ಣನ್ ಸ್ಪಷ್ಟನೆ
-
ಅಂತರ ರಾಜ್ಯ23 hours agoElection Commission-ಯುಪಿಯಲ್ಲಿ 1.27 ಕೋಟಿ ಹಿಂದೂ ಮತದಾರರು ನಾಪತ್ತೆ? ಆದಿತ್ಯನಾಥ್ ಆರೋಪಕ್ಕೆ ಚುನಾವಣಾ ಆಯೋಗದ ಸ್ಪಷ್ಟನೆ
-
Uncategorized5 hours agoPuttur-ಪುತ್ತೂರು: ಕೃಷ್ಣನಗರದಲ್ಲಿ ಮನೆ ಕಳ್ಳತನ- 2.19 ಲಕ್ಷ ರೂ. ಮೌಲ್ಯದ ಸೊತ್ತು ಕಳವು
-
ಕಾರ್ಯಕ್ರಮಗಳು23 hours agoPuttur-ಪುತ್ತೂರು: ವಿದ್ಯಾಭಾರತಿ ಅಖಿಲ ಭಾರತ ಶಿಕ್ಷಾ ಸಂಸ್ಥಾನ ಹಾಗೂ ವಿವೇಕಾನಂದ ಸೆಂಟ್ರಲ್ ಸ್ಕೂಲ್ ಸಹಯೋಗದಲ್ಲಿ ರಾಷ್ಟ್ರೀಯ ಈಜು ಚಾಂಪಿಯನ್ಶಿಪ್-2026
-
ಅಂತರ ರಾಜ್ಯ23 hours agoChinmaya Krishna Das-ಚಟ್ಟೋಗ್ರಾಮ್ನಿಂದ ಢಾಕಾ ಜೈಲಿಗೆ ಸ್ಥಳಾಂತರ: ಹಿಂದೂ ಸನ್ಯಾಸಿ ಚಿನ್ಮಯ ಕೃಷ್ಣ ದಾಸ್ ಆರೋಗ್ಯದ ಬಗ್ಗೆ ವಕೀಲರ ಕಳವಳ
-
ಮಂಗಳೂರು6 hours agoFarmers-ಕೋಳಿ ಫಾರಂಗಳಿಂದ ಹೆಚ್ಚುತ್ತಿರುವ ನೊಣಗಳು : ಕಂಪನಿಗಳ ವಿರುದ್ಧ ಹೋರಾಟಕ್ಕೆ ರೈತರು ಸಜ್ಜು















